Connect with us

ಬಿಗ್ ನ್ಯೂಸ್

DYSP Pramod Kumar-“ಬಾಂಡ್ ಪಡೆಯುವುದು ಕಿರುಕುಳವಲ್ಲ, ಹಬ್ಬದ ಶಾಂತಿಗಾಗಿ ಮುನ್ನೆಚ್ಚರಿಕೆ ಕ್ರಮ”: ಪುತ್ತೂರು ಡಿವೈಎಸ್ಪಿ ಪ್ರಮೋದ್ ಕುಮಾರ್

Published

on

Ad Widget

Ad Widget

Ad Widget

Ad Widget

ಮುಂಬರುವ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ತಾಲ್ಲೂಕಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ ಆಯೋಜಿಸಲಾಗಿತ್ತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಪೊಲೀಸ್ ಉಪಾಧೀಕ್ಷಕ (ಡಿವೈಎಸ್ಪಿ) ಪ್ರಮೋದ್ ಕುಮಾರ್ ಅವರು ಸಾರ್ವಜನಿಕರ ಗೊಂದಲಗಳಿಗೆ ಸ್ಪಷ್ಟನೆ ನೀಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ಮುಂಬರುವ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ತಾಲ್ಲೂಕಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ ಆಯೋಜಿಸಲಾಗಿತ್ತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಪೊಲೀಸ್ ಉಪಾಧೀಕ್ಷಕ (ಡಿವೈಎಸ್ಪಿ) ಪ್ರಮೋದ್ ಕುಮಾರ್ ಅವರು ಸಾರ್ವಜನಿಕರ ಗೊಂದಲಗಳಿಗೆ ಸ್ಪಷ್ಟನೆ ನೀಡಿದರು.

Ad Widget

Ad Widget alt="Ad Widget"/>

Ad Widget

ಬಾಂಡ್ ಪ್ರಕ್ರಿಯೆ ಕಿರುಕುಳವಲ್ಲ:
ಹಳೆಯ ಪ್ರಕರಣಗಳಲ್ಲಿ ಭಾಗಿಯಾದವರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಬಾಂಡ್ ಪಡೆಯುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಕೇಳಿಬಂದ ಆಕ್ಷೇಪಗಳಿಗೆ ಉತ್ತರಿಸಿದ ಡಿವೈಎಸ್ಪಿ, “ಬಾಂಡ್ ಪಡೆಯುವುದು ಯಾರಿಗೂ ಕಿರುಕುಳ ನೀಡಲು ಅಲ್ಲ. ಹಳೆಯ ಆರೋಪಿಗಳು ಮತ್ತೆ ತಪ್ಪು ಮಾಡಬಾರದು ಎಂಬುದು ಇದರ ಉದ್ದೇಶ. ಕಾನೂನು ಪಾಲಿಸುವವರು ಬಾಂಡ್‌ಗಳಿಗೆ ಭಯಪಡುವ ಅಗತ್ಯವಿಲ್ಲ. ನಿರ್ದಿಷ್ಟ ಅವಧಿಯಲ್ಲಿ ಅಹಿತಕರ ಘಟನೆ ನಡೆದರೆ ಮಾತ್ರ ಬಾಂಡ್ ಮೊತ್ತವನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳುತ್ತದೆ,” ಎಂದು ಸ್ಪಷ್ಟಪಡಿಸಿದರು. ಅಲ್ಲದೆ, ಬಾಂಡ್ ಪ್ರಕ್ರಿಯೆಯನ್ನು ಸ್ಥಳೀಯ ಮಟ್ಟದಲ್ಲೇ ನಡೆಸುವ ಬೇಡಿಕೆಯನ್ನು ಹಿರಿಯ ಅಧಿಕಾರಿಗಳ ಗಮನಕ್ಕೆ ತರುವುದಾಗಿ ಭರವಸೆ ನೀಡಿದರು.

Ad Widget

Ad Widget <> Ad Widget

ಗಡಿ ಭಾಗದಲ್ಲಿ ಹದ್ದಿನ ಕಣ್ಣು:
ಹೊರ ರಾಜ್ಯಗಳಿಂದ ಬರುವ ವಾಹನಗಳ ಮೇಲೆ ನಿಗಾ ಇಡಲು ವಿವಿಧ ಕಡೆಗಳಲ್ಲಿ ಚೆಕ್ ಪೋಸ್ಟ್ ಅಳವಡಿಸಲಾಗಿದೆ. ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಅವರು ಎಚ್ಚರಿಸಿದರು. ನಗರದ ಸಂಚಾರ ದಟ್ಟಣೆ ನಿರ್ವಹಣೆ ಮತ್ತು ಭದ್ರತೆಯ ಬಗ್ಗೆ ವೃತ್ತ ನಿರೀಕ್ಷಕ ಜಾನ್ಸನ್ ಡಿಸೋಜ ಮಾಹಿತಿ ನೀಡಿದರು.

ಸಾರ್ವಜನಿಕರ ದೂರುಗಳ ಸುರಿಮಳೆ:
ಸಭೆಯಲ್ಲಿ ಭಾಗವಹಿಸಿದ್ದ ವಿವಿಧ ಸಮುದಾಯದ ಮುಖಂಡರು ಹಲವು ಸ್ಥಳೀಯ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದರು. ಲೈಸನ್ಸ್ ಇಲ್ಲದ ಹಲವು ಅಂಗಡಿಗಳಿದ್ದು, ಅಪಾಯ ಆಗುವ ಮೊದಲು ಎಚ್ಚರ ವಹಿಸಬೇಕು. ನಾಯಿಯಿಂದ ಸಣ್ಣ ಮಕ್ಕಳಿಗೆ ಬಹಳ ತೊಂದರೆಯಾಗುತ್ತಿದೆ. ನಗರ ಸಭೆ ಪಾರ್ಕಿಂಗ್ ವ್ಯವಸ್ಥೆಯಿಲ್ಲದೆ, ಕಟ್ಟಡ ಕಟ್ಟಲು ಅನುಮತಿ ನೀಡಿ ಸಮಸ್ಯೆಯಾಗಿದೆ. ಬೃಹತ್ ಕಟೌಟ್ ಗಳು ಗಾಳಿಗೆ ತಲೆಗೆ ಬೀಳುವಂತಿದ್ದು, ಇದರಲ್ಲಿ ಅನುಮತಿ ಇರುವುದಕ್ಕಿಂತ ಇಲ್ಲದಿರುವುದೇ ಅಧಿಕವಿದೆ ಎಂಬ ಅಭಿಪ್ರಾಯ ಕೇಳಿ ಬಂತು.

Ad Widget

Ad Widget

ಶಾಂತಿ ಸಭೆಗಳಲ್ಲಿ ಕೇವಲ ಪೊಲೀಸ್ ಇಲಾಖೆ ಮಾತ್ರವಲ್ಲದೆ ತಹಶೀಲ್ದಾರ್, ನಗರಸಭೆ, ಮೆಸ್ಕಾಂ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳು ಇರಬೇಕೆಂದು ಸಾರ್ವಜನಿಕರು ಒತ್ತಾಯಿಸಿದರು.

ಕಟ್ಟುನಿಟ್ಟಿನ ಕ್ರಮ:
ಗೋ ಸಾಗಾಟದಲ್ಲಿ ಹಿಂದೆ ಭಾಗಿಯಾದ ಹಲವು ಮಂದಿಗೆ ನೋಟೀಸ್ ಆಗಿದೆ. ಹೆಚ್ಟುವರಿ ಆಧೀಕ್ಷಕರ ಕಛೇರಿಗೆ ತೆರಳಿ ಬಾಂಡ್ ನೀಡಬೇಕೆಂಬುದು ಸರಿಯಲ್ಲ. ನ್ಯಾಯಾಲಯದಲ್ಲಿ ಪ್ರಕರಣ ಇರುವಾಗ ಅವರಿಗೆ ಕಿರುಕುಳ ನೀಡುವುದು ಸರಿಯಲ್ಲ. ಕೆಲವು ಮಂದಿಗೆ ನ್ಯಾಯಾಲಯದಲ್ಲಿ ಅಂತಿಮ ಆದೇಶವಾದರೂ, ಅವರಿಂದಲೂ ಬಾಂಡ್ ಪಡೆಯಲಾಗುತ್ತಿದೆ. ತಪ್ಪುಗಳಿಗೆ ಕಟ್ಟುನಿಟ್ಟಿನ ಕ್ರಮಗಳು ಆಗಬೇಕು. ಮಸೀದಿಗಳ ಮುಂದೆ ಸಿಬ್ಬಂದಿ ನೇಮಕ ಮಾಡಿದರೆ ಉತ್ತಮ ಎಂದು ಮುಖಂಡರು ಅಭಿಪ್ರಾಯ ವ್ಯಕ್ತಪಡಿಸಿದರು.

ಸಭೆಯಲ್ಲಿ ಉಪನಿರೀಕ್ಷಕರಾದ ಸುರೇಶ್, ಸುಹಾಸ್, ಸೇಸಮ್ಮ ಹಾಗೂ ಪ್ರಮುಖರಾದ ರಝಾಕ್, ದಿನೇಶ್, ಇಬ್ರಾಹಿಂ, ಬಶೀರ್, ರೋಶನ್, ಮೌರೀಸ್ ಮಸ್ಕರೇನಿಯಸ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Ad Widget
Click to comment

Leave a Reply

ಬಿಗ್ ನ್ಯೂಸ್

Muraleedhar Rai-ಮೆಸ್ಕಾಂ ನಿರ್ದೇಶಕರಾಗಿ ಮುರಳೀಧರ ರೈ ಮಠಂತಬೆಟ್ಟು ಸರ್ಕಾರದಿಂದ ನೇಮಕ

Published

on

Ad Widget

Ad Widget

Ad Widget

Ad Widget

ರಾಜ್ಯ ಸರಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ನಿಗಮಗಳು, ಮಂಡಳಿಗಳು ಹಾಗೂ ಪ್ರಾಧಿಕಾರಗಳಿಗೆ 81 ಮಂದಿಯನ್ನು ನಿರ್ದೇಶಕರು ಹಾಗೂ ಸದಸ್ಯರನ್ನಾಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.ಈ ಪೈಕಿ ಮೆಸ್ಕಾಂ ನಿರ್ದೇಶಕರಾಗಿ ಕಾಂಗ್ರೆಸ್ ಮುಖಂಡ ಮುರಳೀಧರ ರೈ ಮಠಂತಬೆಟ್ಟು ಅವರು ನೇಮಕಗೊಂಡಿದ್ದಾರೆ.

Ad Widget

Ad Widget

Ad Widget

Ad Widget

ಉಪ್ಪಿನಂಗಡಿ: ರಾಜ್ಯ ಸರಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ನಿಗಮಗಳು, ಮಂಡಳಿಗಳು ಹಾಗೂ ಪ್ರಾಧಿಕಾರಗಳಿಗೆ 81 ಮಂದಿಯನ್ನು ನಿರ್ದೇಶಕರು ಹಾಗೂ ಸದಸ್ಯರನ್ನಾಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.ಈ ಪೈಕಿ ಮೆಸ್ಕಾಂ ನಿರ್ದೇಶಕರಾಗಿ ಕಾಂಗ್ರೆಸ್ ಮುಖಂಡ ಮುರಳೀಧರ ರೈ ಮಠಂತಬೆಟ್ಟು ಅವರು ನೇಮಕಗೊಂಡಿದ್ದಾರೆ.

Ad Widget

Ad Widget alt="Ad Widget"/>

Ad Widget

ಕೋಡಿಂಬಾಡಿ ಮಠಂತಬೆಟ್ಟುವಿನ ಪ್ರತಿಷ್ಠಿತ ಬಂಟ ಕುಟುಂಬದ ಹಿರಿಯ ಕಾಂಗ್ರೆಸ್ ಮುಖಂಡ ಅನಂತ ರೈಯವರ ಪುತ್ರ ಮುರಳೀಧರ ರೈ ಮಠಂತಬೆಟ್ಟು ಅವರು ಹಿರಿಯರ ಕಾಲದಿಂದಲೇ ಕಾಂಗ್ರೆಸ್ ಕುಟುಂಬದಲ್ಲಿ ಬೆಳೆದು ಬಂದವರು.ಬೂತ್ ಮಟ್ಟದಿಂದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿ ಸುಮಾರು ವರ್ಷಗಳ ಕಾಲ ವಲಯ ಕಾಂಗ್ರೆಸ್ ಅಧ್ಯಕ್ಷನಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡವರು. ಕೋಡಿಂಬಾಡಿ ಗ್ರಾಮ ಪಂಚಾಯತ್ ಅಧ್ಯಕ್ಷನಾಗಿ ಜನ ಸೇವೆ ಆರಂಭಿದ ಇವರು ಉಪ್ಪಿನಂಗಡಿ-ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡವರು. ಪ್ರಸ್ತುತ ದ.ಕ.ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾಗಿಯೂ ಜವಾಬ್ದಾರಿ ನಿರ್ವಹಿಸುತ್ತಿರುವ ಮುರಳೀಧರ ರೈಯವರನ್ನು ಇದೀಗ ಕರ್ನಾಟಕ ಸರಕಾರ ಮೆಸ್ಕಾಂ ನಿರ್ದೇಶಕರಾಗಿ ನೇಮಕ ಮಾಡಿದೆ.

Ad Widget

Ad Widget <> Ad Widget

Ad Widget
Continue Reading

ಬಿಗ್ ನ್ಯೂಸ್

Shashikumar Bhat-ಶಶಿಕುಮಾರ್ ಭಟ್ ಪಡಾರು ಅವರಿಗೆ ಗಡಿನಾಡ ಕನ್ನಡಿಗ ಕೃಷಿ ಸೇವಾ ರತ್ನ ಪ್ರಶಸ್ತಿ

Published

on

Ad Widget

Ad Widget

Ad Widget

Ad Widget

ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ಕಾಳುಮೆಣಸು, ಅಡಿಕೆ ಹಾಗೂ ಕಾಫಿ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಶಶಿಕುಮಾರ್ ಭಟ್ ಪಡಾರು ಅವರು ಗೋವಾ ರಾಜ್ಯ ತೋಟಗಾರಿಕೆ ನಿಗಮ ಹಾಗೂ ಕನ್ನಡ ಪ್ರಸ್ತುತಿ ಸಾಂಸ್ಕೃತಿಕ ಕಲಾ ಪರಿಷತ್ತು ಗೋವಾ – ಕರ್ನಾಟಕ ಸಂಸ್ಥೆ ಕೊಡಮಾಡುವ ಗಡಿನಾಡ ಕನ್ನಡಿಗ ಕೃಷಿ ಸೇವಾ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ಕಾಳುಮೆಣಸು, ಅಡಿಕೆ ಹಾಗೂ ಕಾಫಿ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಶಶಿಕುಮಾರ್ ಭಟ್ ಪಡಾರು ಅವರು ಗೋವಾ ರಾಜ್ಯ
ತೋಟಗಾರಿಕೆ ನಿಗಮ ಹಾಗೂ ಕನ್ನಡ ಪ್ರಸ್ತುತಿ ಸಾಂಸ್ಕೃತಿಕ ಕಲಾ ಪರಿಷತ್ತು ಗೋವಾ – ಕರ್ನಾಟಕ ಸಂಸ್ಥೆ ಕೊಡಮಾಡುವ ಗಡಿನಾಡ ಕನ್ನಡಿಗ ಕೃಷಿ ಸೇವಾ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

Ad Widget

Ad Widget alt="Ad Widget"/>

Ad Widget

ಪುತ್ತೂರು ಕೇಂದ್ರಿತವಾಗಿ ಹಲವು ಕೃಷಿ ಸಂಬಂಧಿ ಸಮಾವೇಶಗಳನ್ನೂ ಆಯೋಜಿಸುತ್ತಿರುವ ಶಶಿಕುಮಾರ್ ಭಟ್ಪ ಡಾರು ಅವರು ಕೃಷಿ ಕ್ಷೇತ್ರಕ್ಕೆ ನೀಡುತ್ತಿರುವ ಕೊಡುಗೆ, ತರಬೇತಿ, ಸಲಹೆ – ಮಾರ್ಗದರ್ಶನಗಳನ್ನು ಗುರುತಿಸಿ ಈ ಪ್ರಶಸ್ತಿಯನ್ನು ಕೊಡಮಾಡಕಲಾಗುತ್ತಿದೆ. ಪ್ರಶಸ್ತಿ ಪ್ರದಾನ
ಸಮಾರಂಭ ನವೆಂಬರ್ 22ರಂದು ವಾಸ್ಕೋ ಗೋವಾದ ಬೈನಾದಲ್ಲಿನ ರವೀಂದ್ರ ಭವನದಲ್ಲಿ ನಡೆಯಲಿದೆ.

Ad Widget

Ad Widget <> Ad Widget

ಶಶಿಕುಮಾರ್ ಭಟ್ ಪಡಾರು ಅವರ ಸಾಧನೆಯ ಹಾದಿ:
ಕರಾವಳಿಯ ಜೀವನಾಡಿಯಾದ ಅಡಿಕೆ ಕೃಷಿ ಇಂದು ಹಳದಿ ಎಲೆ ರೋಗ, ಮಾರುಕಟ್ಟೆ ಅಸ್ಥಿರತೆ, ಹವಾಮಾನ ವೈಪರೀತ್ಯ, ಕೂಲಿ ಸಮಸ್ಯೆ ಮೊದಲಾದ ನಾನಾ ಸಂಕಷ್ಟಗಳಿಂದ ನಲುಗಿ ಹೋಗುತ್ತಿರುವ ಈ ಆಧುನಿಕ ದಿನಮಾನಗಳಲ್ಲಿ, ಕೃಷಿಕರಿಗೆ ಹೊಸ ದಾರಿ, ಹೊಸ ಸಾಧ್ಯತೆಯ ಬೆಳಕನ್ನು ತೋರಿಸಿದ ದೀಪಸ್ತಂಭ ಶಶಿಕುಮಾರ ಭಟ್ ಪಡಾರು.

ಕಾಳುಮೆಣಸಿನ ಕ್ರಾಂತಿಯ ಹರಿಕಾರ:
ಅಡಿಕೆಯೊಂದಿಗೆ ಕಾಳುಮೆಣಸು ಬೆಳೆದರೆ ರೈತನ ಆದಾಯ ದ್ವಿಗುಣವಾಗುತ್ತದೆ ಎಂಬ ಸತ್ಯವನ್ನು ಮನಗಂಡು, ಅದನ್ನು ಕೇವಲ ತಮ್ಮ ತೋಟಕ್ಕೆ ಸೀಮಿತಗೊಳಿಸದೆ ಸಾವಿರಾರು ರೈತರಿಗೆ
ಮನದಟ್ಟು ಮಾಡಿದವರು. ಕಾಳುಮೆಣಸು ಕೃಷಿಯ ಬಗ್ಗೆ ಮಾಹಿತಿ ವಿನಿಮಯಕ್ಕಾಗಿ ವಾಟ್ಸಾಪ್ ತಂಡಗಳನ್ನು ರಚಿಸಿ, ಸಾವಿರಾರು ಮಂದಿಯನ್ನು ಒಗ್ಗೂಡಿಸಿ, ಪ್ರತಿನಿತ್ಯ ತಳಿ ಆಯ್ಕೆ, ನಾಟಿ ವಿಧಾನ,
ರೋಗ ನಿರ್ವಹಣೆ, ಇಳುವರಿ ಹೆಚ್ಚಳದ ಬಗ್ಗೆ ಚರ್ಚಿಸಿ, ಅವರಲ್ಲಿ ಕಾಳುಮೆಣಸಿನ ಬಗೆಗೆ ಆಸಕ್ತಿ ಹಚ್ಚಿಸಿದ ಅಪರೂಪದ ಸಂಘಟಕರು. ಇಂದು ಕರಾವಳಿಯ ಸಾವಿರಾರು ಯುವ ರೈತರು ಅವರ ವಾಟ್ಸಾಪ್ ತಂಡಗಳಿಂದಲೇ ಕೃಷಿಗೆ ಮರಳಿದ್ದಾರೆ.

Ad Widget

Ad Widget

ಮನೆ ಬಾಗಿಲಿಗೆ ಕೃಷಿ ಸೇವೆ – ಕೇವಲ ಮಾರಾಟವಲ್ಲ ಬದ್ಧತೆ:
ಕೇವಲ ಪ್ರೇರಣೆ ನೀಡುವುದಕ್ಕೆ ಸೀಮಿತವಾಗದೆ, ಆಸಕ್ತ ಕೃಷಿಕರ ಮನೆ ಬಾಗಿಲಿಗೇ ಗುಣಮಟ್ಟದ, ರೋಗ ನಿರೋಧಕ ಶಕ್ತಿಯುಳ್ಳ ಕಾಳುಮೆಣಸಿನ ಗಿಡಗಳನ್ನು ತಲುಪಿಸುವುದು, ನಂತರ ತಜ್ಞರ ಮೂಲಕ ಬೆಳೆಸುವ ವೈಜ್ಞಾನಿಕ ವಿಧಾನವನ್ನು ತಿಳಿಸಿಕೊಡುವುದು ಮತ್ತು ಫಸಲು ಬರುವವರೆಗೂ ದೀರ್ಘಕಾಲಿಕ ಮಾರ್ಗದರ್ಶನ ನೀಡುವುದರ ಮೂಲಕ ಹೊಸಬರೂ ಧೈರ್ಯದಿಂದ ಕೃಷಿಗಿಳಿಯುವಂತೆ ಮಾಡಿದ್ದಾರೆ. ರೈತರು ಗಿಡಗಳಿಗೆ ಉಂಟಾದ ತೊಂದರೆಗೆ ಸಂಬಂಧಿಸಿದಂತೆ ಫೋಟೋ ಕಳುಹಿಸಿದರೆ ತಕ್ಷಣ ಪರಿಹಾರ ಸೂಚಿಸುವ ಅವರ ಕಾಳಜಿ ಅನನ್ಯ.

ದಾಖಲೆಯ ಸಾಧನೆ – ಮೂವತ್ತು ಲಕ್ಷದತ್ತ ಪಯಣ:
ಕಳೆದ ಬೆರಳೆಣಿಕೆಯ ವರ್ಷಗಳಲ್ಲಿ ಸರಿಸುಮಾರು ಇದುವರೆಗೆ ಮೂವತ್ತು ಲಕ್ಷಕ್ಕಿಂತಲೂ ಅಧಿಕ ಕಾಳುಮೆಣಸಿನ ಗಿಡಗಳನ್ನು ಕೃಷಿಕರ ತೋಟಗಳಿಗೆ ತಲುಪಿಸುವ ಮೂಲಕ ಕರಾವಳಿ
ಜಿಲ್ಲೆಗಳಲ್ಲಿ ಕಾಳುಮೆಣಸಿನ ಕ್ರಾಂತಿಗೆ ಮುನ್ನುಡಿ ಬರೆದಿದ್ದಾರೆ. ಇದು ಕೇವಲ ಸಂಖ್ಯೆಯಲ್ಲ, ಕರಾವಳಿಯ ಕೃಷಿ ಭೂಪಟವನ್ನೇ ಬದಲಾಯಿಸಿದ ಸಾಧನೆ.

ಅಡಿಕೆಯೊಂದಿಗೆ ಸಮಗ್ರ ಸಹಬೆಳೆಗಳ ಕನಸು:
ಕಾಳುಮೆಣಸಿಗೆ ಮಾತ್ರ ಸೀಮಿತವಾಗದೆ, ಇವರು ಅಡಿಕೆಯ ಸಹಬೆಳೆಗಳಾಗಿ ಕಾಫಿ, ಏಲಕ್ಕಿ ಬೆಳೆಯುವುದಕ್ಕೂ ರೈತರನ್ನು ದೊಡ್ಡ ಮಟ್ಟದಲ್ಲಿ ಪ್ರೋತ್ಸಾಹಿಸುತ್ತಿದ್ದಾರೆ. ಅಡಿಕೆ ತೋಟದಲ್ಲಿ ಖಾಲಿ
ಇರುವ ಜಾಗದಲ್ಲಿ ಕಾಫಿ ಮತ್ತು ಏಲಕ್ಕಿ ಬೆಳೆದು ಹೆಚ್ಚುವರಿ ಆದಾಯ ಗಳಿಸುವ ವೈಜ್ಞಾನಿಕ ಮಾದರಿಯನ್ನು ಪರಿಚಯಿಸಿದ್ದಾರೆ. ಅದಕ್ಕಾಗಿ ಗುಣಮಟ್ಟದ ಕಾಫಿ ಮತ್ತು ಏಲಕ್ಕಿ ಗಿಡಗಳನ್ನೂ ರೈತರಿಗೆ
ಒದಗಿಸುತ್ತಿದ್ದಾರೆ.

ಸಮಗ್ರ ತೋಟಗಾರಿಕಾ ಸೇವೆ:

ಇದೀಗ ಸಮಾನ ಮನಸ್ಕ ಸ್ನೇಹಿತರನ್ನು ಕೂಡಿಕೊಂಡು, ಗುಣಮಟ್ಟದ ಕಾಫಿ, ಅಡಿಕೆ, ತೆಂಗು, ಅತ್ಯಧಿಕ ಇಳುವರಿಯ ಲಿಂಬೆ, ಏಪಲ್, ಏಲಕ್ಕಿ ಮುಂತಾದ ತೋಟಗಾರಿಕಾ ಬೆಳೆಗಳ ಗಿಡಗಳನ್ನು
ಒದಗಿಸುವ ಮಹತ್ಕಾರ್ಯದಲ್ಲೂ ನಿರತರಾಗಿದ್ದಾರೆ. ರೈತನಿಗೆ ಬೇಕಾದ ಎಲ್ಲಾ ಗಿಡಗಳು – ಮಾಹಿತಿಗಳನ್ನು ಒಂದೇ ಸೂರಿನಡಿ, ಒಂದೇ ವಿಶ್ವಾಸಾರ್ಹ ಮೂಲದಲ್ಲಿ ಸಿಗುವಂತಹ ವ್ಯವಸ್ಥೆಯನ್ನು
ಕಟ್ಟಿದ್ದಾರೆ.

Ad Widget
Continue Reading

ಬಿಗ್ ನ್ಯೂಸ್

Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ

Published

on

Ad Widget

Ad Widget

Ad Widget

Ad Widget

ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!