Connect with us

ಅಂತರ ರಾಜ್ಯ

Kollam-ಕೊಲ್ಲಂ: ರಸ್ತೆ ಬದಿ ಲಾಟರಿ ಮಾರುತ್ತಿದ್ದವನಿಗೇ ಹೊಡೆಯಿತು 12 ಕೋಟಿಯ ಬಂಪರ್ ಜಾಕ್‌ಪಾಟ್..!

Published

on

Ad Widget

Ad Widget

Ad Widget

Ad Widget

ವರ್ಷಗಳಿಂದ ರಸ್ತೆ ಬದಿಯಲ್ಲಿ ಲಾಟರಿ ಟಿಕೆಟ್ ಮಾರುತ್ತಾ ಜೀವನದ ಬಂಡಿ ಸಾಗಿಸುತ್ತಿದ್ದ ಕೇರಳದ ಕೊಲ್ಲಂ ನಿವಾಸಿ ಪೊನ್ನನ್ ಅವರಿಗೆ, ಈ ಬಾರಿಯ ಪ್ರತಿಷ್ಠಿತ ‘ವಿಷು ಬಂಪರ್’ ಲಾಟರಿಯಲ್ಲಿ ಬರೋಬ್ಬರಿ 12 ಕೋಟಿ ರೂಪಾಯಿಗಳ ಬಂಪರ್ ಬಹುಮಾನ ಒಲಿದಿದೆ.

Ad Widget

Ad Widget

Ad Widget

Ad Widget

ಕೇರಳ: ಕಾಲಚಕ್ರ ಉರುಳಿದರೆ ಬಡವನೂ ಬಲ್ಲಿದನಾಗಬಹುದು ಎಂಬ ಮಾತಿಗೆ ಕೇರಳದ ಕೊಲ್ಲಂ ನಿವಾಸಿ, ಲಾಟರಿ ವ್ಯಾಪಾರಿ ಪೊನ್ನನ್ ಅವರೇ ಸಾಕ್ಷಿ. ವರ್ಷಗಳಿಂದ ರಸ್ತೆ ಬದಿಯಲ್ಲಿ ಲಾಟರಿ ಟಿಕೆಟ್ ಮಾರುತ್ತಾ ಜೀವನದ ಬಂಡಿ ಸಾಗಿಸುತ್ತಿದ್ದ ಪೊನ್ನನ್ ಅವರಿಗೆ, ಈ ಬಾರಿಯ ಪ್ರತಿಷ್ಠಿತ ‘ವಿಷು ಬಂಪರ್’ ಲಾಟರಿಯಲ್ಲಿ ಬರೋಬ್ಬರಿ 12 ಕೋಟಿ ರೂಪಾಯಿಗಳ ಬಂಪರ್ ಬಹುಮಾನ ಒಲಿದಿದೆ. ಶನಿವಾರ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಪೊನ್ನನ್ ಕುಟುಂಬದಲ್ಲಿ ಸಂಭ್ರಮದ ವಾತಾವರಣ ನೆಲೆಸಿದೆ.

Ad Widget

Ad Widget alt="Ad Widget"/>

Ad Widget

ಮಗನ ಮದುವೆ ಚಿಂತೆ ದೂರ, ಸಾಲದಿಂದ ಮುಕ್ತಿ:
ಲಕ್ಷಾಂತರ ರೂಪಾಯಿ ಸಾಲದ ಸುಳಿಯಲ್ಲಿ ಸಿಲುಕಿದ್ದ ಈ ಕುಟುಂಬಕ್ಕೆ ಈ ಬಹುಮಾನದ ಹಣ ಹೊಸ ಜೀವದಾನ ನೀಡಿದೆ. ತಮ್ಮ ಕಷ್ಟದ ದಿನಗಳನ್ನು ಸ್ಮರಿಸಿದ ಪೊನ್ನನ್, “ಬಡತನದ ಕಾರಣದಿಂದಾಗಿ ನನ್ನ ಮಗ ವಿನೋದ್‌ಗೆ ಸರಿಯಾದ ಕಂಕಣ ಕೂಡಿ ಬರುತ್ತಿರಲಿಲ್ಲ. ಬಡವ ಎಂಬ ಕಾರಣಕ್ಕೆ ಯಾರೂ ಹೆಣ್ಣು ಕೊಡಲು ಮುಂದಾಗುತ್ತಿರಲಿಲ್ಲ. ಆದರೆ ಈಗ ನಮ್ಮ ಬಳಿ ಕೋಟಿ ಕೋಟಿ ಹಣವಿದೆ, ಇನ್ಮುಂದೆಯಾದರೂ ಮಗನಿಗೆ ಒಳ್ಳೆಯ ಸಂಬಂಧ ಸಿಗಬಹುದು ಎಂಬ ನಂಬಿಕೆ ನನಗಿದೆ” ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

Ad Widget

Ad Widget <> Ad Widget

ಇತ್ತ ಅವರ ಪತ್ನಿ ಕೂಡ ಸಂತಸ ಹಂಚಿಕೊಂಡಿದ್ದು, “ನನ್ನ ಪತಿ ಈಗ ಕೋಟ್ಯಾಧಿಪತಿಯಾಗಿದ್ದಾರೆ. ಮೊದಲು ನಮ್ಮ ತಲೆಯ ಮೇಲಿರುವ ಸಾಲದ ಹೊರೆಯನ್ನು ಇಳಿಸುತ್ತೇವೆ,” ಎಂದಿದ್ದಾರೆ.

ಬದುಕು ಬದಲಿಸಿದ ‘2’ ಅದೃಷ್ಟದ ಸಂಖ್ಯೆ:
ಕೋವಿಡ್ ಸಮಯದಲ್ಲಿ ಕೆಲಸವಿಲ್ಲದೆ ಕಷ್ಟಪಡುತ್ತಿದ್ದ ಈ ಕುಟುಂಬ, ಜೀವನೋಪಾಯಕ್ಕಾಗಿ ಲಾಟರಿ ಮಾರಾಟ ಮಾಡಲು ಆರಂಭಿಸಿತ್ತು. ಪೊನ್ನನ್ ಪ್ರತಿದಿನ ಗ್ರಾಹಕರಿಗೆ ಟಿಕೆಟ್ ಮಾರುವುದರ ಜೊತೆಗೆ, ತಮಗಾಗಿಯೂ ಒಂದು ಟಿಕೆಟ್ ಖರೀದಿಸುತ್ತಿದ್ದರು. ಈ ಬಾರಿ ಅವರಿಗೆ ಅದೃಷ್ಟ ತಂದಿದ್ದು ‘2’ ಎಂಬ ಸಂಖ್ಯೆ.

Ad Widget

Ad Widget

“ನನಗೆ ‘2’ ಅದೃಷ್ಟದ ಸಂಖ್ಯೆಯಾದ್ದರಿಂದ, ನಾನು ಮಾರಾಟ ಮಾಡಲು ತಂದಿದ್ದ ಕಟ್ಟುಗಳಲ್ಲಿ ಕೊನೆಯ ಅಂಕಿ ‘2’ ಹೊಂದಿದ್ದ ಒಂದು ಟಿಕೆಟ್ ಅನ್ನು ನನಗಾಗಿಯೇ ಇಟ್ಟುಕೊಂಡಿದ್ದೆ. ಅದೇ ಈಗ ನನ್ನ ಇಡೀ ಬದುಕನ್ನು ಬದಲಿಸಿದೆ. ಗೆದ್ದ ಸುದ್ದಿ ಕೇಳಿದಾಗ ನಂಬಲು ಸಾಧ್ಯವಾಗದೆ, ನಾಲೈದು ಬಾರಿ ನಂಬರ್ ಪರಿಶೀಲಿಸಿ ಖಚಿತಪಡಿಸಿಕೊಂಡೆ” ಎಂದು ಪೊನ್ನನ್ ತಮ್ಮ ಅದೃಷ್ಟದ ಕ್ಷಣವನ್ನು ವಿವರಿಸಿದ್ದಾರೆ.

ಲಾಟರಿ ಮಾರುವವನೇ ಬೃಹತ್ ಮೊತ್ತದ ಬಹುಮಾನ ಗೆದ್ದ ಈ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ಬಡ ಕುಟುಂಬದ ಅದೃಷ್ಟಕ್ಕೆ ಸಾರ್ವಜನಿಕರಿಂದ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ.

Ad Widget

ನಿಧನ ವಾರ್ತೆ

Savitri Devi-ಸಿಎಂ ಯೋಗಿ ಆದಿತ್ಯನಾಥ್ ತಾಯಿ ಸಾವಿತ್ರಿ ದೇವಿ ನಿಧನ

Published

on

Ad Widget

Ad Widget

Ad Widget

Ad Widget

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಾಯಿ ಸಾವಿತ್ರಿ ದೇವಿ (91) ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಉತ್ತರಾಖಂಡದ ಪೌರಿ ಜಿಲ್ಲೆಯ ಯಮಕೇಶ್ವರ ಬ್ಲಾಕ್‌ನ ಪಂಚೂರ್ ಗ್ರಾಮದಲ್ಲಿರುವ ತಮ್ಮ ನಿವಾಸದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.

Ad Widget

Ad Widget

Ad Widget

Ad Widget

ಡೆಹ್ರಾಡೂನ್: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಾಯಿ ಸಾವಿತ್ರಿ ದೇವಿ (91) ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಉತ್ತರಾಖಂಡದ ಪೌರಿ ಜಿಲ್ಲೆಯ ಯಮಕೇಶ್ವರ ಬ್ಲಾಕ್‌ನ ಪಂಚೂರ್ ಗ್ರಾಮದಲ್ಲಿರುವ ತಮ್ಮ ನಿವಾಸದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.

Ad Widget

Ad Widget alt="Ad Widget"/>

Ad Widget

ಸಾವಿತ್ರಿ ದೇವಿ ಅವರ ನಿಧನಕ್ಕೆ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಸುದ್ದಿ ಅತ್ಯಂತ ದುಃಖದಾಯಕ ಹಾಗೂ ಹೃದಯವಿದ್ರಾವಕವಾಗಿದೆ ಎಂದು ಅವರು ತಿಳಿಸಿದ್ದಾರೆ.

Ad Widget

Ad Widget <> Ad Widget

ತಾಯಿಯ ವಾತ್ಸಲ್ಯ, ಆಶೀರ್ವಾದ ಮತ್ತು ಪ್ರೀತಿ ಜೀವನದ ಅತ್ಯಮೂಲ್ಯ ಸಂಪತ್ತು. ಅವರ ಅಗಲಿಕೆ ಕುಟುಂಬಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಧಾಮಿ ಸಂತಾಪ ಸೂಚಿಸಿದ್ದಾರೆ.

ಅಗಲಿದ ಆತ್ಮಕ್ಕೆ ಭಗವಾನ್ ಕೇದಾರನಾಥರು ಶಾಂತಿ ಕರುಣಿಸಲಿ. ತಾಯಿ ಅಗಲಿಕೆಯ ದುಃಖವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ಅವರ ಕುಟುಂಬದವರಿಗೆ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

Ad Widget

Ad Widget

ಯೋಗಿ ಆದಿತ್ಯನಾಥ್ ಅವರು ತಾಯಿಯ ಅಂತಿಮ ದರ್ಶನಕ್ಕೆ ತೆರಳುವ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

Ad Widget
Continue Reading

ಸಿನೆಮಾ

Arjun Sarja-ಪುತ್ರಿ ಐಶ್ವರ್ಯಾ ವಿರುದ್ಧ ಅವಹೇಳನಕಾರಿ ವರದಿ: ಮಾಧ್ಯಮಗಳ ವಿರುದ್ಧ ಸಿಡಿದೆದ್ದ ಅರ್ಜುನ್ ಸರ್ಜಾ; ಅಧಿಕೃತ ದೂರು ದಾಖಲು

Published

on

Ad Widget

Ad Widget

Ad Widget

Ad Widget

ಹಿರಿಯ ಪುತ್ರಿ ಐಶ್ವರ್ಯಾ ಅವರ ವೈಯಕ್ತಿಕ ಜೀವನದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲವು ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಆಧಾರರಹಿತ ಮತ್ತು ಅವಹೇಳನಕಾರಿ ಆರೋಪಗಳ ವಿರುದ್ಧ ಬಹುಭಾಷಾ ನಟ, ನಿರ್ದೇಶಕ ಹಾಗೂ ನಿರ್ಮಾಪಕ ಅರ್ಜುನ್ ಸರ್ಜಾ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಸಂಬಂಧಪಟ್ಟ ಅಧಿಕಾರಿಗಳಿಗೆ ಈಗಾಗಲೇ ಅಧಿಕೃತ ದೂರು ಸಲ್ಲಿಸಿರುವುದಾಗಿ ಅವರು ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಚೆನ್ನೈ: ಹಿರಿಯ ಪುತ್ರಿ ಐಶ್ವರ್ಯಾ ಅವರ ವೈಯಕ್ತಿಕ ಜೀವನದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲವು ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಆಧಾರರಹಿತ ಮತ್ತು ಅವಹೇಳನಕಾರಿ ಆರೋಪಗಳ ವಿರುದ್ಧ ಬಹುಭಾಷಾ ನಟ, ನಿರ್ದೇಶಕ ಹಾಗೂ ನಿರ್ಮಾಪಕ ಅರ್ಜುನ್ ಸರ್ಜಾ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಸಂಬಂಧಪಟ್ಟ ಅಧಿಕಾರಿಗಳಿಗೆ ಈಗಾಗಲೇ ಅಧಿಕೃತ ದೂರು ಸಲ್ಲಿಸಿರುವುದಾಗಿ ಅವರು ತಿಳಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಇತ್ತೀಚೆಗೆ ಅರ್ಜುನ್ ಸರ್ಜಾ ಅವರ ಕಿರಿಯ ಪುತ್ರಿಯ ವಿವಾಹ ಸಮಾರಂಭದಲ್ಲಿ ಅಳಿಯ ಉಮಾಪತಿ ರಾಮಯ್ಯ ಅವರು ಹೆಚ್ಚಾಗಿ ಕಾಣಿಸಿಕೊಳ್ಳದ ಹಿನ್ನೆಲೆಯಲ್ಲಿ, ಐಶ್ವರ್ಯಾ ಮತ್ತು ಉಮಾಪತಿ ಅವರ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದೆ ಎಂಬ ಸುದ್ದಿಗಳು ಕೆಲವು ಆನ್‌ಲೈನ್ ಪೋರ್ಟಲ್‌ಗಳಲ್ಲಿ ಪ್ರಕಟವಾಗಿದ್ದವು. ಇದರ ಬೆನ್ನಲ್ಲೇ ಕೆಲವು ಮಾಧ್ಯಮಗಳು ಐಶ್ವರ್ಯಾ ಅವರನ್ನು ಮದ್ಯವ್ಯಸನಿ ಎಂದು ಬಿಂಬಿಸುವ ವರದಿಗಳನ್ನೂ ಪ್ರಸಾರ ಮಾಡಿದ್ದವು.

Ad Widget

Ad Widget <> Ad Widget

ಈ ವರದಿಗಳ ವಿರುದ್ಧ ಇನ್‌ಸ್ಟಾಗ್ರಾಮ್‌ನಲ್ಲಿ ಸುದೀರ್ಘ ಪೋಸ್ಟ್ ಹಂಚಿಕೊಂಡಿರುವ ಅರ್ಜುನ್ ಸರ್ಜಾ, ವ್ಯಕ್ತಿಯ ಗೌರವ ಮತ್ತು ಘನತೆಯ ವಿಚಾರದಲ್ಲಿ ಯಾವುದೇ ರಾಜಿ ಸಾಧ್ಯವಿಲ್ಲ ಎಂದು ಖಡಕ್ ಸಂದೇಶ ನೀಡಿದ್ದಾರೆ.

“ಕಲಾವಿದರ ಸಾರ್ವಜನಿಕ ಜೀವನದಲ್ಲಿ ಊಹಾಪೋಹಗಳು ಮತ್ತು ಟೀಕೆಗಳು ಸಹಜ. ಆದರೆ ಊಹಾಪೋಹಗಳಿಗೂ ಉದ್ದೇಶಪೂರ್ವಕವಾಗಿ ಆಧಾರರಹಿತ ಆರೋಪಗಳನ್ನು ಹರಡುವುದಕ್ಕೂ ಸಾಕಷ್ಟು ವ್ಯತ್ಯಾಸವಿದೆ. ಸಾರ್ವಜನಿಕ ವಿಮರ್ಶೆಯ ಹೆಸರಿನಲ್ಲಿ ಕಟ್ಟುಕಥೆಗಳನ್ನು ಸೃಷ್ಟಿಸಲು ಅಥವಾ ವ್ಯಕ್ತಿಯ ಚಾರಿತ್ರ್ಯವಧೆ ಮಾಡಲು ಯಾರಿಗೂ ಅಧಿಕಾರವಿಲ್ಲ. ಯಾವುದೇ ಆಧಾರವಿಲ್ಲದೆ ಮಹಿಳೆಯೊಬ್ಬರನ್ನು ಮದ್ಯವ್ಯಸನಿ ಎಂದು ಕರೆಯುವುದು ಅತ್ಯಂತ ಬೇಜವಾಬ್ದಾರಿಯುತ ಮತ್ತು ಸ್ವೀಕಾರಾರ್ಹವಲ್ಲದ ವರ್ತನೆ” ಎಂದು ಅವರು ಕಿಡಿಕಾರಿದ್ದಾರೆ.

Ad Widget

Ad Widget

ಮೌನವನ್ನು ಒಪ್ಪಿಗೆ ಎಂದು ಭಾವಿಸಬೇಡಿ
ತಂದೆಯಾಗಿ ಪುತ್ರಿಯ ವಿರುದ್ಧದ ಇಂತಹ ಆರೋಪಗಳನ್ನು ಸಹಿಸಿಕೊಂಡು ಮೌನವಾಗಿರಲು ಸಾಧ್ಯವಿಲ್ಲ ಎಂದು ಅರ್ಜುನ್ ಸರ್ಜಾ ಸ್ಪಷ್ಟಪಡಿಸಿದ್ದಾರೆ.

“ಮೌನವೇ ಅತ್ಯಂತ ಘನತೆಯ ಪ್ರತಿಕ್ರಿಯೆ ಎಂದು ನಾವು ನಂಬಿದ್ದೇವೆ. ಆದರೆ ನಮ್ಮ ಮೌನವನ್ನು ಒಪ್ಪಿಗೆ ಎಂದು ಭಾವಿಸಬಾರದು. ತಪ್ಪು ಮಾಹಿತಿಯನ್ನು ಪದೇಪದೆ ಹರಡಲು ಅವಕಾಶ ನೀಡಲೂ ಸಾಧ್ಯವಿಲ್ಲ. ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳಿಗೆ ಅಧಿಕೃತ ದೂರು ಸಲ್ಲಿಸಿ ಸೂಕ್ತ ಕ್ರಮಕ್ಕೆ ಮುಂದಾಗಿದ್ದೇವೆ” ಎಂದು ತಿಳಿಸಿದ್ದಾರೆ.

ಇದು ಕೇವಲ ತಮ್ಮ ಪುತ್ರಿಗೆ ಸಂಬಂಧಿಸಿದ ವಿಚಾರವಲ್ಲ. ಮಹಿಳೆಯರ ಘನತೆಗೆ ಧಕ್ಕೆ ಉಂಟಾದಾಗ ಹಾಗೂ ಅವರ ವೈಯಕ್ತಿಕ ಆಯ್ಕೆಗಳನ್ನು ಸಾರ್ವಜನಿಕವಾಗಿ ಪ್ರಶ್ನಿಸಿದಾಗ ಎದುರಾಗುವ ನೋವಿನ ವಿಚಾರವೂ ಹೌದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಕುಟುಂಬದ ಬೆಂಬಲವಿಲ್ಲದ ಮಹಿಳೆಯರಿಗೆ ಇಂತಹ ಆರೋಪಗಳು ಮತ್ತಷ್ಟು ನೋವುಂಟುಮಾಡಬಹುದು. ಯಾವುದೇ ಮಹಿಳೆ ಇಂತಹ ಪರಿಸ್ಥಿತಿಯನ್ನು ಏಕಾಂಗಿಯಾಗಿ ಎದುರಿಸುವಂತಾಗಬಾರದು ಅಥವಾ ತನ್ನ ಜೀವನಶೈಲಿಯನ್ನು ಸಮರ್ಥಿಸಿಕೊಳ್ಳಬೇಕಾದ ಅನಿವಾರ್ಯತೆ ಸೃಷ್ಟಿಯಾಗಬಾರದು ಎಂದು ಅರ್ಜುನ್ ಸರ್ಜಾ ತಮ್ಮ ಪೋಸ್ಟ್‌ನಲ್ಲಿ ಹೇಳಿದ್ದಾರೆ.

Ad Widget
Continue Reading

ಅಂತರ ರಾಜ್ಯ

Toll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್‌ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್‌ಗೆ SMS, 10 ಸಾವಿರ ರೂ.ವರೆಗೆ ದಂಡ..!

Published

on

Ad Widget

Ad Widget

Ad Widget

Ad Widget

ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.

Ad Widget

Ad Widget

Ad Widget

Ad Widget

ನವದೆಹಲಿ: ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.

Ad Widget

Ad Widget alt="Ad Widget"/>

Ad Widget

ಈ ವ್ಯವಸ್ಥೆಯ ಪ್ರಕಾರ, ಟೋಲ್ ಪ್ಲಾಜಾ ದಾಟುವ ವಾಹನದ ವಿಮೆ ಚಾಲ್ತಿಯಲ್ಲಿದೆಯೇ ಎಂಬುದನ್ನು ಸ್ವಯಂಚಾಲಿತವಾಗಿ ಪರಿಶೀಲಿಸಲಾಗುತ್ತದೆ. ಒಂದು ವೇಳೆ ವಿಮೆಯ ಅವಧಿ ಮುಗಿದಿದ್ದರೆ, ವಾಹನದ ಮಾಲೀಕರ ನೋಂದಾಯಿತ ಮೊಬೈಲ್ ಸಂಖ್ಯೆಗೆ ತಕ್ಷಣವೇ SMS ಮೂಲಕ ಎಚ್ಚರಿಕೆ ಸಂದೇಶ ಕಳುಹಿಸಲಾಗುತ್ತದೆ. ವಿಮೆ ಇಲ್ಲದೆ ವಾಹನ ಚಲಾಯಿಸುವವರಿಗೆ ನಿಯಮಾನುಸಾರ 10,000 ರೂ.ವರೆಗೆ ದಂಡ ವಿಧಿಸುವ ಅವಕಾಶವೂ ಇದೆ.

Ad Widget

Ad Widget <> Ad Widget

ಟೋಲ್ ಪ್ಲಾಜಾದಲ್ಲಿ ವಿಮೆ ಪರಿಶೀಲನೆ ಹೇಗೆ?
ಹೊಸ ವ್ಯವಸ್ಥೆಯು ರಾಷ್ಟ್ರೀಯ ಮಾಹಿತಿ ಕೇಂದ್ರ (NIC) ನಿರ್ವಹಿಸುವ ‘ವಾಹನ್’ (VAHAN) ಡೇಟಾಬೇಸ್‌ನಲ್ಲಿರುವ ವಾಹನಗಳ ನೋಂದಣಿ ಹಾಗೂ ವಿಮೆಯ ಮಾಹಿತಿಯನ್ನು ಆಧರಿಸಿ ಕಾರ್ಯನಿರ್ವಹಿಸಲಿದೆ.

ವಾಹನ ಟೋಲ್ ಪ್ಲಾಜಾ ದಾಟುವಾಗ ಅದರ ನೋಂದಣಿ ಸಂಖ್ಯೆಯನ್ನು ಗುರುತಿಸಿ, ಡೇಟಾಬೇಸ್‌ನಲ್ಲಿರುವ ವಿಮೆಯ ವಿವರಗಳೊಂದಿಗೆ ಹೋಲಿಕೆ ಮಾಡಲಾಗುತ್ತದೆ. ಈ ಮೂಲಕ ವಿಮೆ ಚಾಲ್ತಿಯಲ್ಲಿದೆಯೇ ಅಥವಾ ಅವಧಿ ಮುಗಿದಿದೆಯೇ ಎಂಬುದನ್ನು ತಂತ್ರಜ್ಞಾನದ ಸಹಾಯದಿಂದ ಪರಿಶೀಲಿಸಲಾಗುತ್ತದೆ.

Ad Widget

Ad Widget

ವಿಮೆಯ ಅವಧಿ ಮುಗಿದಿದ್ದರೆ ಕೆಲವೇ ನಿಮಿಷಗಳಲ್ಲಿ ವಾಹನ ಮಾಲೀಕರ ಮೊಬೈಲ್‌ಗೆ SMS ರವಾನೆಯಾಗಲಿದೆ.

SMSನಲ್ಲಿ ಯಾವ ಮಾಹಿತಿ ಇರಲಿದೆ?
ವಾಹನದ ವಿಮೆ ಅವಧಿ ಮುಗಿದಿದ್ದರೆ ಮಾಲೀಕರಿಗೆ ಕಳುಹಿಸುವ ಸಂದೇಶದಲ್ಲಿ ಈ ಕೆಳಗಿನ ವಿವರಗಳಿರಲಿವೆ:

  • ವಾಹನದ ನೋಂದಣಿ ಸಂಖ್ಯೆ.
  • ಟೋಲ್ ಪ್ಲಾಜಾ ದಾಟಿದ ದಿನಾಂಕ ಮತ್ತು ಸಮಯ.
  • ವಾಹನದ ವಿಮೆ ಅವಧಿ ಮುಗಿದ ದಿನಾಂಕ.
  • ವಿಮೆಯನ್ನು ನವೀಕರಿಸಿಕೊಳ್ಳುವಂತೆ ಸೂಚನೆ.
    ಈ ಮೂಲಕ ವಾಹನ ಮಾಲೀಕರು ವಿಮೆಯನ್ನು ತಕ್ಷಣ ನವೀಕರಿಸಿಕೊಳ್ಳಲು ಎಚ್ಚರಿಕೆ ನೀಡುವ ಉದ್ದೇಶ ಹೊಂದಲಾಗಿದೆ.
  • ವಿಮೆ ಇಲ್ಲದೆ ವಾಹನ ಚಲಾಯಿಸಿದರೆ ಎಷ್ಟು ದಂಡ?
  • ಮೋಟಾರು ವಾಹನ ಕಾಯ್ದೆಯ ಪ್ರಕಾರ ಸಾರ್ವಜನಿಕ ರಸ್ತೆಗಳಲ್ಲಿ ಸಂಚರಿಸುವ ಪ್ರತಿಯೊಂದು ವಾಹನಕ್ಕೂ ಮಾನ್ಯವಾದ ಥರ್ಡ್ ಪಾರ್ಟಿ ವಿಮೆ ಹೊಂದಿರುವುದು ಕಡ್ಡಾಯವಾಗಿದೆ. ಅಪಘಾತ ಸಂಭವಿಸಿದಾಗ ಮತ್ತೊಬ್ಬ ವ್ಯಕ್ತಿಗೆ ಗಾಯ, ಸಾವು ಅಥವಾ ಆಸ್ತಿಗೆ ಹಾನಿಯಾದರೆ ಪರಿಹಾರ ನೀಡಲು ಈ ವಿಮೆ ನೆರವಾಗುತ್ತದೆ.

ಮಾನ್ಯ ವಿಮೆ ಇಲ್ಲದೆ ವಾಹನ ಚಲಾಯಿಸುವುದು ಕಾನೂನು ಉಲ್ಲಂಘನೆಯಾಗಿದ್ದು, ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 196ರ ಅಡಿಯಲ್ಲಿ ಮೊದಲ ಬಾರಿಗೆ ತಪ್ಪು ಎಸಗಿದರೆ 2,000 ರೂ. ಹಾಗೂ ಮರುಕಳಿಸಿದರೆ 4,000 ರೂ. ದಂಡ ಅಥವಾ ಕಾಯ್ದೆಯಲ್ಲಿ ನಿಗದಿಪಡಿಸಿರುವ ಇತರ ಶಿಕ್ಷೆ ವಿಧಿಸಬಹುದು.

ಸದ್ಯ ಒಂದು ಟೋಲ್ ಪ್ಲಾಜಾದಲ್ಲಿ ಮಾತ್ರ ಪ್ರಾಯೋಗಿಕ ಪರೀಕ್ಷೆ
ಪ್ರಸ್ತುತ ದೆಹಲಿಯ ಅರ್ಬನ್ ಎಕ್ಸ್‌ಟೆನ್ಷನ್ ರಸ್ತೆ-2 (UER-II)ಯ ಮುಂಡ್ಯಾ ಟೋಲ್ ಪ್ಲಾಜಾದಲ್ಲಿ ಈ ವ್ಯವಸ್ಥೆಯ ಪ್ರಾಯೋಗಿಕ ಪರೀಕ್ಷೆ ನಡೆಯುತ್ತಿದೆ. ಪ್ರಯೋಗ ಯಶಸ್ವಿಯಾದರೆ ದೇಶದ ಇತರ ಟೋಲ್ ಪ್ಲಾಜಾಗಳಿಗೂ ವಿಸ್ತರಿಸುವ ಕುರಿತು NHAI ಚಿಂತನೆ ನಡೆಸಿದೆ.

ಆದರೆ ದೇಶಾದ್ಯಂತ ಈ ವ್ಯವಸ್ಥೆ ಯಾವಾಗ ಜಾರಿಗೆ ಬರಲಿದೆ ಎಂಬ ಬಗ್ಗೆ ಪ್ರಾಧಿಕಾರ ಇನ್ನೂ ಅಧಿಕೃತ ದಿನಾಂಕ ಪ್ರಕಟಿಸಿಲ್ಲ. ಪ್ರಾಯೋಗಿಕ ಪರೀಕ್ಷೆಯ ಫಲಿತಾಂಶಗಳ ಆಧಾರದ ಮೇಲೆ ಮುಂದಿನ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.

ವಾಹನ ಸವಾರರೇ ಎಚ್ಚರ: ನಿಮ್ಮ ವಾಹನದ ವಿಮೆಯ ಅವಧಿಯನ್ನು ಆಗಾಗ್ಗೆ ಪರಿಶೀಲಿಸಿ. ಅವಧಿ ಮುಗಿಯುವ ಮೊದಲೇ ವಿಮೆಯನ್ನು ನವೀಕರಿಸಿಕೊಳ್ಳಿ. ವಿಮೆ ಇಲ್ಲದೆ ವಾಹನ ಚಲಾಯಿಸುವುದು ಕಾನೂನುಬಾಹಿರವಾಗಿದ್ದು, ಅಪಘಾತ ಸಂಭವಿಸಿದ ಸಂದರ್ಭದಲ್ಲಿ ದೊಡ್ಡ ಆರ್ಥಿಕ ಹೊರೆ ಎದುರಿಸಬೇಕಾಗಬಹುದು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!