Connect with us

ಸ್ಥಳೀಯ

New railway route-ಶಿವಮೊಗ್ಗ-ಮಂಗಳೂರು ಹೊಸ ರೈಲು ಮಾರ್ಗ: 3,300 ಕೋಟಿ ರೂ. ಯೋಜನೆಯ ʻಸ್ಥಳ ಸಮೀಕ್ಷೆ’ಗೆ ಅನುಮೋದನೆ; ಶೀಘ್ರವೇ ಟೆಂಡರ್ ಪ್ರಕ್ರಿಯೆ ಆರಂಭ..!

Published

on

Ad Widget

Ad Widget

Ad Widget

Ad Widget

ಮಲೆನಾಡು ಮತ್ತು ಕರಾವಳಿ ಭಾಗದ ಜನರಿಗೆ ರೈಲ್ವೆ ಇಲಾಖೆಯಿಂದ ಸಿಹಿ ಸುದ್ದಿಯೊಂದು ಸಿಕ್ಕಿದೆ. ಬಹುಕಾಲದ ಬೇಡಿಕೆಯಾದ ಶಿವಮೊಗ್ಗ-ಶೃಂಗೇರಿ-ಮಂಗಳೂರು ಹೊಸ ರೈಲ್ವೆ ಮಾರ್ಗದ ‘ಅಂತಿಮ ಸ್ಥಳ ಸಮೀಕ್ಷೆ’ಗೆ (FLS) ಅನುಮೋದನೆ ದೊರೆತಿದ್ದು, ಶೀಘ್ರದಲ್ಲೇ ಟೆಂಡರ್ ಪ್ರಕ್ರಿಯೆ ಆರಂಭವಾಗಲಿದೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು: ಕರ್ನಾಟಕದ ಮಲೆನಾಡು ಮತ್ತು ಕರಾವಳಿ ಭಾಗದ ಜನರಿಗೆ ರೈಲ್ವೆ ಇಲಾಖೆಯಿಂದ ಸಿಹಿ ಸುದ್ದಿಯೊಂದು ಸಿಕ್ಕಿದೆ. ಬಹುಕಾಲದ ಬೇಡಿಕೆಯಾದ ಶಿವಮೊಗ್ಗ-ಶೃಂಗೇರಿ-ಮಂಗಳೂರು ಹೊಸ ರೈಲ್ವೆ ಮಾರ್ಗದ ‘ಅಂತಿಮ ಸ್ಥಳ ಸಮೀಕ್ಷೆ’ಗೆ (FLS) ಅನುಮೋದನೆ ದೊರೆತಿದ್ದು, ಶೀಘ್ರದಲ್ಲೇ ಟೆಂಡರ್ ಪ್ರಕ್ರಿಯೆ ಆರಂಭವಾಗಲಿದೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಶಿವಮೊಗ್ಗ- ಮಂಗಳೂರು ರೈಲು ಮಾರ್ಗ 332 ಕಿ.ಮೀ. ಇರಲಿದ್ದು, 3,300 ಕೋಟಿ ರೂ. ಯೋಜನಾ ವೆಚ್ಚ ಅಂದಾಜಿಸಲಾಗಿದೆ. ಈ ಮಾರ್ಗದ ಎಫ್‌ಎಲ್‌ಸಿ (ಫೈನಲ್‌ ಲೊಕೇಷನ್‌ ಸರ್ವೆ) ನಡೆದು ಅನುಮೋದನೆಗೊಂಡಿದ್ದು, ಶೀಘ್ರವೇ ಟೆಂಡರ್‌ ಕರೆಯಲಾಗುವುದು ಎಂದು ಸೋಮಣ್ಣ ತಿಳಿಸಿದ್ದಾರೆ.

Ad Widget

Ad Widget <> Ad Widget

ನಿರೀಕ್ಷಿತ ರೈಲು ನಿಲ್ದಾಣಗಳು:
ಈ ನೂತನ ಮಾರ್ಗವು ಪ್ರಮುಖವಾಗಿ 7 ನಿಲ್ದಾಣಗಳನ್ನು ಒಳಗೊಳ್ಳುವ ಸಾಧ್ಯತೆಯಿದೆ:
1.ಶಿವಮೊಗ್ಗ (ಆರಂಭ) 2. ಭದ್ರಾವತಿ 3. ಎನ್.ಆರ್. ಪುರ 4. ತೀರ್ಥಹಳ್ಳಿ 5. ಶೃಂಗೇರಿ 6. ಕಾರ್ಕಳ 7. ಮಂಗಳೂರು (ಅಂತಿಮ).

ಪ್ರವಾಸೋದ್ಯಮ ಮತ್ತು ವಾಣಿಜ್ಯಕ್ಕೆ ಆನೆಬಲ:
ಈ ರೈಲು ಮಾರ್ಗವು ಮಲೆನಾಡು (ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳು) ಹಾಗೂ ಕರಾವಳಿ (ದಕ್ಷಿಣ ಕನ್ನಡ) ಪ್ರದೇಶಗಳಿಗೆ ನೇರ ಮತ್ತು ಸುಲಭ ಸಂಪರ್ಕ ಕಲ್ಪಿಸುವುದು.
ಅಲ್ಲದೇ ಶೃಂಗೇರಿ ಶಾರದಾಂಬೆ ದೇವಸ್ಥಾನದಂತಹ ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡುವ ಭಕ್ತರಿಗೆ ವರದಾನವಾಗಲಿದೆ. ಜೊತೆಗೆ ಮಲೆನಾಡಿನ ಕೃಷಿ ಉತ್ಪನ್ನಗಳನ್ನು ಮಂಗಳೂರು ಬಂದರಿಗೆ ಸಾಗಿಸಲು ಸುಲಭವಾಗಲಿದ್ದು, ಈ ಭಾಗದ ವ್ಯಾಪಾರ-ವಹಿವಾಟು ವೃದ್ಧಿಸಲಿದೆ.

Ad Widget

Ad Widget

ಸವಾಲುಗಳೇನು?
ಈ ಮಾರ್ಗವು ಪಶ್ಚಿಮ ಘಟ್ಟಗಳ ದಟ್ಟ ಕಾಡುಗಳು ಮತ್ತು ಗುಡ್ಡಗಾಡು ಪ್ರದೇಶಗಳ ಮೂಲಕ ಹಾದುಹೋಗುವುದರಿಂದ, ಪರಿಸರ ಇಲಾಖೆಯ ಅನುಮತಿ ಮತ್ತು ಕಠಿಣ ಭೌಗೋಳಿಕ ಪರಿಸ್ಥಿತಿಯಲ್ಲಿ ಕಾಮಗಾರಿ ನಡೆಸುವುದು ರೈಲ್ವೆ ಇಲಾಖೆಗೆ ದೊಡ್ಡ ಸವಾಲಾಗಲಿದೆ.

ಕರಾವಳಿಗೆ ಹೈಸ್ಪೀಡ್ ರೈಲು ಹಳಿ:
”ಹಾಸನ – ಮಂಗಳೂರು ನಡುವೆ 247 ಕಿ.ಮೀ. ರೈಲು ಹಳಿಯನ್ನು 8,300 ಕೋಟಿ ರೂ.ಗಳಲ್ಲಿ ದ್ವಿಗುಣಗೊಳಿಸುವ ಕಾರ್ಯದ ಎಫ್‌ಎಲ್‌ಸಿ ಪರಿಶೀಲನಾ ಹಂತದಲ್ಲಿದೆ. ಶೋರ್ನೂರು- ಮಂಗಳೂರು ನಡುವೆ 306 ಕಿ.ಮೀ. ದೂರದ ರೈಲು ಹಳಿಯನ್ನು 3 ಮತ್ತು 4ನೇ ಹಳಿ ರಚಿಸುವ ಕಾರ್ಯವೂ ನಡೆಯಲಿದೆ. ಈ ಮಾರ್ಗವನ್ನು ಗಂಟೆಗೆ 160 ಕಿ.ಮೀ. ವೇಗದಲ್ಲಿರೈಲು ಸಂಚಾರಕ್ಕೆ ಸಿದ್ಧಗೊಳಿಸಲು ಕಾರ್ಯಸಾಧ್ಯತಾ ವರದಿ ಸಿದ್ಧಪಡಿಸಲಾಗುವುದು. ಮೊದಲ ಹಂತದಲ್ಲಿ3ನೇ ಹಳಿ ರಚನೆಯ ಕಾಮಗಾರಿಗೆ ಕ್ರಮ ಕೈಗೊಳ್ಳಲಾಗುವುದು,” ಎಂದು ಸಚಿವ ಸೋಮಣ್ಣ ಹೇಳಿದ್ದಾರೆ.

Ad Widget
Click to comment

Leave a Reply

ಸ್ಥಳೀಯ

Wedding-ಕ್ಯಾಸೆಟ್‌ಗಳ ಅಬ್ಬರವಿಲ್ಲ, ಡ್ಯಾನ್ಸ್‌ಗಳ ಹಂಗಿಲ್ಲ; ಅದ್ದೂರಿತನಕ್ಕೆ ಬ್ರೇಕ್ ಹಾಕಿ ಸರಳತೆಯಲ್ಲೇ ಮದುವೆ ಸಂಭ್ರಮ..!

Published

on

Ad Widget

Ad Widget

Ad Widget

Ad Widget

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಂಗಸಂಸ್ಥೆ “ಸಿರಿ” ಗ್ರಾಮೋದ್ಯೋಗ ಸಂಸ್ಥೆಯ ಸಿ.ಇ.ಒ. ಕೆ.ಎನ್. ಜನಾರ್ಧನ ಮತ್ತು ಉಷಾಜನಾರ್ಧನ ತಮ್ಮ ಎರಡನೆ ಪುತ್ರ ಕೆ.ಜೆ. ಸುದರ್ಶನ್ ಅವರ ಮದುವೆಯನ್ನು ದಿವ್ಯಾ ಜೊತೆ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆಸಿದ್ದು, ಸ್ಥಳೀಯ ಆಪ್ತರು, ಅಭಿಮಾನಿಗಳು ಹಾಗೂ ಸಿಬ್ಬಂದಿಯನ್ನು ಆದರದಿಂದ ಆಹ್ವಾನಿಸಿ ಬೆಳ್ತಂಗಡಿಯಲ್ಲಿರುವ ಮಂಜುನಾಥಸ್ವಾಮಿ ಕಲಾಭವನದಲ್ಲಿ ಭಾನುವಾರ ವಿವಾಹ ಸಂಭ್ರಮದ “ಸರಳ ಸ್ನೇಹಕೂಟ”ವನ್ನು ಅತ್ಯಂತ ಶಿಸ್ತುಬದ್ಧಾಗಿ ಆಯೋಜಿಸಿ ಎಲ್ಲರ ಮುಕ್ತ ಪ್ರಶಂಸೆಗೆ ಪಾತ್ರರಾದರು.

Ad Widget

Ad Widget

Ad Widget

Ad Widget

ಉಜಿರೆ: ಕ್ಯಾಸೆಟ್‌ಗಳ ಅಬ್ಬರ, ಮೈಕಾಸುರನ ಹಾವಳಿಯಿಂದ ಶಬ್ದ ಮಾಲಿನ್ಯವಿಲ್ಲ. ಸಿನೆಮಾ ಹಾಡು, ಬ್ರೇಕ್‌ಡ್ಯಾನ್ಸ್ ಉಪಟಳವಿಲ್ಲ. ಅತ್ಯಂತ ಸರಳವಾಗಿ, ಶಿಸ್ತುಬದ್ಧವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಂಗಸಂಸ್ಥೆ “ಸಿರಿ” ಗ್ರಾಮೋದ್ಯೋಗ ಸಂಸ್ಥೆಯ ಸಿ.ಇ.ಒ. ಕೆ.ಎನ್. ಜನಾರ್ಧನ ಮತ್ತು ಉಷಾಜನಾರ್ಧನ ತಮ್ಮ ಎರಡನೆ ಪುತ್ರ ಕೆ.ಜೆ. ಸುದರ್ಶನ್ ಅವರ ಮದುವೆಯನ್ನು ದಿವ್ಯಾ ಜೊತೆ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆಸಿದ್ದು, ಸ್ಥಳೀಯ ಆಪ್ತರು, ಅಭಿಮಾನಿಗಳು ಹಾಗೂ ಸಿಬ್ಬಂದಿಯನ್ನು ಆದರದಿಂದ ಆಹ್ವಾನಿಸಿ ಬೆಳ್ತಂಗಡಿಯಲ್ಲಿರುವ ಮಂಜುನಾಥಸ್ವಾಮಿ ಕಲಾಭವನದಲ್ಲಿ ಭಾನುವಾರ ವಿವಾಹ ಸಂಭ್ರಮದ “ಸರಳ ಸ್ನೇಹಕೂಟ”ವನ್ನು ಅತ್ಯಂತ ಶಿಸ್ತುಬದ್ಧಾಗಿ ಆಯೋಜಿಸಿ ಎಲ್ಲರ ಮುಕ್ತ ಪ್ರಶಂಸೆಗೆ ಪಾತ್ರರಾದರು.

Ad Widget

Ad Widget alt="Ad Widget"/>

Ad Widget

ಮದುಮಗ ಕೆ.ಜೆ. ಸುದರ್ಶನ್ ತಾಯಿ-ತಂದೆ ಬಗ್ಯೆ ಅಪಾರ ಗೌರವ, ಪ್ರೀತಿ-ವಿಶ್ವಾಸವನ್ನು ವ್ಯಕ್ತಪಡಿಸಿ ಅವರೇ ತನಗೆ ಪ್ರತ್ಯಕ್ಷ ದೇವರು ಎಂದು ಗೌರವ ಸಲ್ಲಿಸಿದರು.

Ad Widget

Ad Widget <> Ad Widget

ಕೆ.ಎನ್. ಜನಾರ್ಧನ ಮತ್ತು ಉಷಾಜನಾರ್ಧನ ಭಾವುಕರಾಗಿ ಆನಂದಭಾಷ್ಪ ಸುರಿಸಿದರು. ಇಂತಹ ಮಗನನ್ನು ಪಡೆದ ತಾವೇ ಭಾಗ್ಯವಂತರು ಎಂದು ಸಂತಸವ್ಯಕ್ತಪಡಿಸಿದರು.

ಉಷಾಜನಾರ್ಧನ ಗಣೇಶನ ಸ್ತುತಿಯನ್ನು ಸುಶ್ರಾವ್ಯವಾಗಿ ಹಾಡಿದರು. ಸೊಸೆಯನ್ನು ಕೂಡಾ ಮಗಳಂತೆ ಪ್ರೀತಿಯಿಂದ ನೋಡಿಕೊಳ್ಳುವುದಾಗಿ ತಿಳಿಸಿದರು.

Ad Widget

Ad Widget

ಹಿರಿಯ ದಂಪತಿ ಮತ್ತು ನವದಂಪತಿ ಎಲ್ಲರನ್ನೂ ಆತ್ಮೀಯವಾಗಿ ಸ್ವಾಗತಿಸಿ, ಸತ್ಕರಿಸಿ, ಗೌರವಿಸಿದರು. ಎಲ್ಲರಿಗೂ ಸರಳ, ಶುದ್ಧ ಹಾಗೂ ಶುಚಿ-ರುಚಿಯಾದ ಶಾಕಾಹಾರ ಭೋಜನ ನೀಡಿದರು.
ಉಜಿರೆ ಜನಾರ್ದನಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರ ಶರತ್‌ಕೃಷ್ಣ ಪಡ್ವೇಟ್ನಾಯ, ಶಾಸಕ ಕೆ. ಹರೀಶ್‌ ಪೂಂಜ, ಮಾಜಿ ವಿಧಾನಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್, ಮೂಡಬಿದ್ರೆಯ ಎಕ್ಸಲೆಂಟ್‌ ವಿದ್ಯಾಸಂಸ್ಥೆಗಳ ಅಧ್ಯಕ್ಷ ಯುವರಾಜ್‌ ಜೈನ್‌ ಮತ್ತು ರಶ್ಮಿತಾ ಜೈನ್‌ ನಾರಾವಿ ಸೇರಿದಂತೆ ಅನೇಕ ಗಣ್ಯರು, ಹಿರಿಯರು ಆಗಮಿಸಿ ನೂತನ ದಂಪತಿಗೆ ಶುಭ ಹಾರೈಸಿದರು.

Ad Widget
Continue Reading

ಶಿಕ್ಷಣ

Science Fair-ಪುತ್ತೂರಿನಲ್ಲಿ ಜಿಲ್ಲಾ ಮಟ್ಟದ ಕೋಡ್‌ಕ್ರಾಫ್ಟ್ ವಿಜ್ಞಾನ ಮೇಳ-2026: ಗ್ರಾಮೀಣ ವಿದ್ಯಾರ್ಥಿಗಳ ಪ್ರತಿಭಾ ಅನಾವರಣ

Published

on

Ad Widget

Ad Widget

Ad Widget

Ad Widget

ಆಕಾಂಕ್ಷಾ ಚಾರಿಟಬಲ್ ಟ್ರಸ್ಟ್ (ರಿ.), ಪುತ್ತೂರು ಹಾಗೂ ಕೋಡ್‌ಕ್ರಾಫ್ಟ್ ಟೆಕ್ನಾಲಜೀಸ್, ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಆಯೋಜಿಸಲಾದ ‘ಜಿಲ್ಲಾ ಮಟ್ಟದ ಕೋಡ್‌ಕ್ರಾಫ್ಟ್ ವಿಜ್ಞಾನ ಮೇಳ – 2026’ ಶನಿವಾರ, ನವೆಂಬರ್ 21ರಂದು ಪುತ್ತೂರಿನ ಶ್ರೀ ರಾಮಕೃಷ್ಣ ಪ್ರೌಢಶಾಲೆಯಲ್ಲಿ ಯಶಸ್ವಿಯಾಗಿ ಜರುಗಿತು.

Ad Widget

Ad Widget

Ad Widget

Ad Widget

ಪುತ್ತೂರು: ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ, ಕುತೂಹಲ ಹಾಗೂ ಪ್ರಾಯೋಗಿಕ ಕಲಿಕೆಯನ್ನು ಬೆಳೆಸುವ ಉದ್ದೇಶದಿಂದ ಆಕಾಂಕ್ಷಾ ಚಾರಿಟಬಲ್ ಟ್ರಸ್ಟ್ (ರಿ.), ಪುತ್ತೂರು ಹಾಗೂ ಕೋಡ್‌ಕ್ರಾಫ್ಟ್ ಟೆಕ್ನಾಲಜೀಸ್, ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಆಯೋಜಿಸಲಾದ ‘ಜಿಲ್ಲಾ ಮಟ್ಟದ ಕೋಡ್‌ಕ್ರಾಫ್ಟ್ ವಿಜ್ಞಾನ ಮೇಳ – 2026’ ಶನಿವಾರ, ನವೆಂಬರ್ 21ರಂದು ಪುತ್ತೂರಿನ ಶ್ರೀ ರಾಮಕೃಷ್ಣ ಪ್ರೌಢಶಾಲೆಯಲ್ಲಿ ಯಶಸ್ವಿಯಾಗಿ ಜರುಗಿತು.

Ad Widget

Ad Widget alt="Ad Widget"/>

Ad Widget

ಶಾಲಾ ಮಟ್ಟದಿಂದ ಜಿಲ್ಲಾ ಮಟ್ಟದವರೆಗಿನ ಯಶಸ್ವಿ ಪಯಣ:

Ad Widget

Ad Widget <> Ad Widget

“ಉತ್ತಮ ಜೀವನಕ್ಕಾಗಿ ವಿಜ್ಞಾನ” ಎಂಬ ಆಶಯದೊಂದಿಗೆ ಆರಂಭಗೊಂಡ ಈ ಅಭಿಯಾನದ ಮೊದಲ ಹಂತದಲ್ಲಿ ಜಿಲ್ಲೆಯ 41 ಗ್ರಾಮೀಣ ಶಾಲೆಗಳಲ್ಲಿ ಶಾಲಾ ಮಟ್ಟದ ವಿಜ್ಞಾನ ಮೇಳಗಳನ್ನು ಆಯೋಜಿಸಲಾಗಿತ್ತು. ಇದರಲ್ಲಿ 1,189 ವಿದ್ಯಾರ್ಥಿಗಳು ಭಾಗವಹಿಸಿ ಸುಮಾರು 650 ವಿನೂತನ ವಿಜ್ಞಾನ ಮಾದರಿಗಳನ್ನು ಪ್ರದರ್ಶಿಸಿದ್ದರು. ಶಾಲಾ ಮಟ್ಟದಲ್ಲಿ ವಿಜೇತರಾದ ತಂಡಗಳು ಜಿಲ್ಲಾ ಮಟ್ಟದ ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದವು.

ಜಿಲ್ಲಾ ಮಟ್ಟದ ಅಂತಿಮ ಸ್ಪರ್ಧೆಯಲ್ಲಿ ಹಿರಿಯ ಪ್ರಾಥಮಿಕ ವಿಭಾಗದ 66 ಹಾಗೂ ಪ್ರೌಢಶಾಲಾ ವಿಭಾಗದ 57 ತಂಡಗಳು ಸೇರಿದಂತೆ ಒಟ್ಟು 123 ತಂಡಗಳು ಭಾಗವಹಿಸಿದ್ದವು. ಇದೇ ಸಂದರ್ಭದಲ್ಲಿ ಬಂಟರ ಭವನದಲ್ಲಿ ಸಂಪನ್ಮೂಲ ವ್ಯಕ್ತಿ ಅನಿರುದ್ಧ್ ವಾಗ್ಳೆ ವಿದ್ಯಾರ್ಥಿಗಳಿಗೆ ವಿಶೇಷ ಪ್ರೇರಣಾದಾಯಕ ಅವಧಿ ನಡೆಸಿಕೊಟ್ಟರು. ಮಾರ್ಗದರ್ಶಿ ಶಿಕ್ಷಕರಿಗಾಗಿ ಶಾಲೆಯ ಅಟಲ್ ಟಿಂಕರಿಂಗ್ ಪ್ರಯೋಗಾಲಯದಲ್ಲಿ ಸಂವಾದ ಹಾಗೂ ಮಾರ್ಗದರ್ಶನ ಕಾರ್ಯಕ್ರಮ ನಡೆಯಿತು.

Ad Widget

Ad Widget

ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪುತ್ತೂರು ಶ್ರೀ ರಾಮಕೃಷ್ಣ ಪ್ರೌಢಶಾಲೆಯ ಸಂಚಾಲಕರಾದ ಕಾವು ಹೇಮನಾಥ ಶೆಟ್ಟಿ ಮಾತನಾಡಿ, “ವಿದ್ಯಾರ್ಥಿಗಳಲ್ಲಿ ಶಿಸ್ತು ಮತ್ತು ನಿರಂತರ ಪರಿಶ್ರಮವಿದ್ದಾಗ ಮಾತ್ರ ಹೊಸ ಆವಿಷ್ಕಾರಗಳು ಸಾಧ್ಯವಾಗುತ್ತವೆ. ನಿರಂತರ ಕಲಿಕೆಯಿಂದ ವಿದ್ಯಾರ್ಥಿಗಳು ವಿಜ್ಞಾನ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಬಹುದು” ಎಂದರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಕೋಡ್‌ಕ್ರಾಫ್ಟ್ ಟೆಕ್ನಾಲಜೀಸ್‌ನ ಸಹ-ಸಂಸ್ಥಾಪಕ ಶ್ರೀ ಪ್ರವೀಣ್ ಕ್ಯಾಸ್ಟಲಿನೋ, “ವಿದ್ಯಾರ್ಥಿಗಳಲ್ಲಿರುವ ಕುತೂಹಲವೇ ಹೊಸ ಆವಿಷ್ಕಾರಗಳಿಗೆ ದಾರಿ ಮಾಡಿಕೊಡುತ್ತದೆ. ಪ್ರಶ್ನಿಸುವ ಹಾಗೂ ಪ್ರಯೋಗ ಮಾಡುವ ಮನೋಭಾವ ಬೆಳೆಸಿಕೊಂಡಾಗ ಗ್ರಾಮೀಣ ಪ್ರತಿಭೆಗಳು ದೊಡ್ಡ ಮಟ್ಟದ ಸಾಧನೆ ಮಾಡಲು ಸಾಧ್ಯ” ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಕೋಡ್‌ಕ್ರಾಫ್ಟ್ ಟೆಕ್ನಾಲಜೀಸ್‌ನ ಆಪರೇಷನ್ಸ್ ಲೀಡ್ ಜೋಬಿನ್ ಜೋಸೆಫ್ ಹಾಗೂ ಆಕಾಂಕ್ಷಾ ಚಾರಿಟಬಲ್ ಟ್ರಸ್ಟ್‌ನ ವ್ಯವಸ್ಥಾಪಕ ಟ್ರಸ್ಟಿ ಡಾ. ಶ್ರೀಶ ಬೈಪದವು ಉಪಸ್ಥಿತರಿದ್ದರು. ಶ್ರೀ ರಾಮಕೃಷ್ಣ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಗಾಯತ್ರಿ ಎಸ್. ಸ್ವಾಗತಿಸಿದರು. ರಾಜೇಶ್ವರಿ ಎನ್. ನಿರೂಪಿಸಿ, ನೇತ್ರಾ ಡಿ. ರಾವ್ ವಂದಿಸಿದರು.

Ad Widget
Continue Reading

ಶಿಕ್ಷಣ

Philomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಐದು ದಿನಗಳ ಡಿಜಿಟಲ್ ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗ ಸಿದ್ಧತಾ ತರಬೇತಿ ಕಾರ್ಯಕ್ರಮ

Published

on

Ad Widget

Ad Widget

Ad Widget

Ad Widget

ಪುತ್ತೂರಿನ ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ಇದರ ತರಬೇತಿ ಮತ್ತು ಉದ್ಯೋಗ ನಿಯೋಜನಾ ಘಟಕದ ವತಿಯಿಂದ ಕಾಲೇಜಿನ ಎಲ್ಲಾ ಸ್ನಾತಕೋತ್ತರ ಪದವಿ ವಿಭಾಗಗಳ ವಿದ್ಯಾರ್ಥಿಗಳಿಗೆ ನವೆಂಬರ್ 16ರಿಂದ 20ರವರೆಗೆ ಐದು ದಿನಗಳ ಡಿಜಿಟಲ್ ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗ ಸಿದ್ಧತಾ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

Ad Widget

Ad Widget

Ad Widget

Ad Widget

ಪುತ್ತೂರು, ನ. 22: ಪುತ್ತೂರಿನ ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ಇದರ ತರಬೇತಿ ಮತ್ತು ಉದ್ಯೋಗ ನಿಯೋಜನಾ ಘಟಕದ ವತಿಯಿಂದ ಕಾಲೇಜಿನ ಎಲ್ಲಾ ಸ್ನಾತಕೋತ್ತರ ಪದವಿ ವಿಭಾಗಗಳ ವಿದ್ಯಾರ್ಥಿಗಳಿಗೆ ನವೆಂಬರ್ 16ರಿಂದ 20ರವರೆಗೆ ಐದು ದಿನಗಳ ಡಿಜಿಟಲ್ ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗ ಸಿದ್ಧತಾ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

Ad Widget

Ad Widget alt="Ad Widget"/>

Ad Widget

ಈ ತರಬೇತಿ ಕಾರ್ಯಕ್ರಮವು ಕಾಲೇಜಿನ ನಿರಂತರ ಉದ್ಯೋಗ ಸಿದ್ಧತಾ (Placement Readiness) ಉಪಕ್ರಮದ ಭಾಗವಾಗಿದ್ದು, ವಿದ್ಯಾರ್ಥಿಗಳನ್ನು ಕ್ಯಾಂಪಸ್ ಮತ್ತು ಆಫ್-ಕ್ಯಾಂಪಸ್ ಉದ್ಯೋಗ ನೇಮಕಾತಿ ಪ್ರಕ್ರಿಯೆಗಳಿಗೆ ಸಮರ್ಥವಾಗಿ ಸಿದ್ಧಗೊಳಿಸುವ ಉದ್ದೇಶವನ್ನು ಹೊಂದಿದೆ. ಉದ್ಯಮಗಳ ಪ್ರಸ್ತುತ ಅಗತ್ಯಗಳಿಗೆ ಅನುಗುಣವಾಗಿ ವಿದ್ಯಾರ್ಥಿಗಳ ಡಿಜಿಟಲ್ಕೌ ಶಲ್ಯ, ಉದ್ಯೋಗಾರ್ಹ ಸಾಮರ್ಥ್ಯ, ಸಂವಹನ ಕೌಶಲ್ಯ ಹಾಗೂ ವೃತ್ತಿಪರ ಆತ್ಮವಿಶ್ವಾಸವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಈ ತರಬೇತಿಯನ್ನು ರೂಪಿಸಲಾಗಿದೆ.

Ad Widget

Ad Widget <> Ad Widget

ಈ ಕಾರ್ಯಕ್ರಮದಲ್ಲಿ ಕೃತಕ ಬುದ್ಧಿಮತ್ತೆ (Artificial Intelligence – AI) ಮತ್ತು ಉದ್ಯೋಗಾರ್ಹತಾ ಕೌಶಲ್ಯಗಳು (Employability Skills – Lifelong Profession) ಎಂಬ ಪ್ರಮುಖ ವಿಷಯಗಳ ಕುರಿತು ತರಬೇತಿ ನೀಡಲಾಯಿತು.

ತರಬೇತುದಾರರಾದ ದೀಪಕ್ ಬಡಿಗೇರ್ ಮತ್ತು ಆಯೆಶತ್ ಹಫೀಝಾ ಅವರು ವಿವಿಧ ಪ್ರಾಯೋಗಿಕ ಚಟುವಟಿಕೆಗಳು ಹಾಗೂ ಸಂವಾದಾತ್ಮಕ ಅಧಿವೇಶನಗಳ ಮೂಲಕ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದರು. ಕೃತಕ ಬುದ್ಧಿಮತ್ತೆಯ ಮೂಲ ಪರಿಕಲ್ಪನೆಗಳು, ಉದಯೋನ್ಮುಖ ತಂತ್ರಜ್ಞಾನಗಳ ಬಳಕೆ, ಸಂವಹನ ಕೌಶಲ್ಯ, ಸಮಸ್ಯೆ ಪರಿಹರಿಸುವ ಸಾಮರ್ಥ್ಯ, ತಂಡದೊಂದಿಗೆ ಕಾರ್ಯನಿರ್ವಹಿಸುವ ಕೌಶಲ್ಯ ಹಾಗೂ ವೃತ್ತಿಪರ ಜೀವನಕ್ಕೆ ಅಗತ್ಯವಾದ ಸಾಮರ್ಥ್ಯಗಳ ಕುರಿತು ಮಾರ್ಗದರ್ಶನ ನೀಡಲಾಯಿತು.

Ad Widget

Ad Widget

ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗೆ IBM SkillsBuild ಡಿಜಿಟಲ್ ಕಲಿಕಾ ವೇದಿಕೆಯ ಪರಿಚಯ
ಮಾಡಿಕೊಡಲಾಯಿತು. ನಿಗದಿತ ಕಲಿಕಾ ಅವಶ್ಯಕತೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ IBM SkillsBuild ವತಿಯಿಂದ ಪ್ರಮಾಣಪತ್ರಗಳನ್ನು ನೀಡಲಾಯಿತು. ಈ ಪ್ರಮಾಣಪತ್ರಗಳು ವಿದ್ಯಾರ್ಥಿಗಳ ಶೈಕ್ಷಣಿಕ ಅರ್ಹತೆಯೊಂದಿಗೆ ಹೆಚ್ಚುವರಿ ವೃತ್ತಿಪರ ಕೌಶಲ್ಯಗಳನ್ನು ಗುರುತಿಸಲು ಸಹಕಾರಿಯಾಗಲಿವೆ.

ಶೈಕ್ಷಣಿಕ ಜ್ಞಾನ ಮತ್ತು ಉದ್ಯಮ ಕ್ಷೇತ್ರದ ನಿರೀಕ್ಷೆಗಳ ನಡುವಿನ ಅಂತರವನ್ನು ಕಡಿಮೆ ಮಾಡಿ, ವಿದ್ಯಾರ್ಥಿಗಳನ್ನು ಉದ್ಯೋಗಕ್ಕೆ ಸನ್ನದ್ಧರನ್ನಾಗಿಸುವ ನಿಟ್ಟಿನಲ್ಲಿ ಈ ಐದು ದಿನಗಳ ತರಬೇತಿ ಕಾರ್ಯಕ್ರಮ ಮಹತ್ವದ ಪಾತ್ರ ವಹಿಸಿತು.

ಉದ್ಯೋಗಮುಖಿ ಶಿಕ್ಷಣದೊಂದಿಗೆ ಉಜ್ವಲ ಭವಿಷ್ಯಕ್ಕೆ ಮುನ್ನುಡಿ!
ಸಂತ ಫಿಲೋಮಿನಾ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉದ್ಯಮ ಕ್ಷೇತ್ರದ ಅಗತ್ಯಗಳಿಗೆ ಪೂರಕವಾದ ಕೌಶಲ್ಯಗಳನ್ನು ಬೆಳೆಸಲು ವಿಶೇಷ ಆದ್ಯತೆ ನೀಡಲಾಗುತ್ತಿದೆ. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಪದವಿ ಮಾತ್ರವಲ್ಲದೆ, ಡಿಜಿಟಲ್ ಜ್ಞಾನ, ಕೃತಕ ಬುದ್ಧಿಮತ್ತೆಯ ಅರಿವು, ಸಂವಹನ ಕೌಶಲ್ಯ ಮತ್ತು ವೃತ್ತಿಪರ ಸಾಮರ್ಥ್ಯಗಳೂ ಅತ್ಯಂತ ಅವಶ್ಯಕವಾಗಿವೆ.

ಸ್ವಾಯತ್ತ ಶಿಕ್ಷಣ ವ್ಯವಸ್ಥೆಯಡಿ ನವೀನ ಕಲಿಕಾ ವಿಧಾನಗಳು, ಕೌಶಲ್ಯಾಧಾರಿತ ತರಬೇತಿ, ಉದ್ಯೋಗ ನಿಯೋಜನೆಗೆ ಪೂರಕ ಕಾರ್ಯಕ್ರಮಗಳು ಹಾಗೂ ಉದ್ಯಮ ಸಂಪರ್ಕದ ಮೂಲಕ ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಕಾಲೇಜು ಬದ್ಧವಾಗಿದೆ.

ನಿಮ್ಮ ಉನ್ನತ ಶಿಕ್ಷಣದ ಕನಸುಗಳಿಗೆ ಸಂತ ಫಿಲೋಮಿನಾ ಕಾಲೇಜು ಸೂಕ್ತ ವೇದಿಕೆ. ಜ್ಞಾನ, ಕೌಶಲ್ಯ ಮತ್ತು ಮೌಲ್ಯಗಳೊಂದಿಗೆ ನಿಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಇಂದೇ ನಮ್ಮ ಕಾಲೇಜನ್ನು ಆಯ್ಕೆಮಾಡಿ. ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರು – ನಿಮ್ಮ ಉಜ್ವಲ ಭವಿಷ್ಯದತ್ತ ಮೊದಲ ಹೆಜ್ಜೆ!
– ರೆವ್. ಡಾ. ಆಂಟನಿ ಪ್ರಕಾಶ್ ಮೊಂತೆರೋ
ಪ್ರಾಂಶುಪಾಲರು, ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರು

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!