ಶಿಕ್ಷಣ
Ambika-ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ತರಗತಿಗಳ ಉದ್ಘಾಟನೆ; ವ್ಯಕ್ತಿತ್ವಕ್ಕೆ ಗೌರವ ಸಿಗುವುದು ಬಟ್ಟೆಯಿಂದಲ್ಲ, ಸಂಸ್ಕಾರದಿಂದ – ಡಾ. ನರಸಿಂಹಮೂರ್ತಿ
ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ನಡೆದ ಪ್ರಥಮ ಪಿಯುಸಿ ತರಗತಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ದೆಹಲಿಯ ಜೆಎನ್ಯುವಿನ ಪ್ರಾಧ್ಯಾಪಕ ಡಾ.ನರಸಿಂಹ ಮೂರ್ತಿ ಮಾತನಾಡಿದರು.
ಪುತ್ತೂರು: ನಮ್ಮ ವ್ಯಕ್ತಿತ್ವಕ್ಕೆ ಗೌರವ ಸಿಗುವುದು ನಾವು ಧರಿಸಿದ ಬಟ್ಟೆಯಿಂದಲ್ಲ, ಬದಲಾಗಿ ಸಂಸ್ಕಾರಯುತ ನಡೆ ನುಡಿಯಿಂದ. ಆದ್ದರಿಂದ ಮೌಲ್ಯಯುತವಾದ ನಡೆ ನುಡಿಗಳನ್ನು ಅಳವಡಿಸಿಕೊಂಡು ಉತ್ತಮ ಸಂಸ್ಕಾರಯುತ ಜೀವನ ನಡೆಸಬೇಕು ಎಂದು ದೆಹಲಿಯ ಜೆಎನ್ಯುವಿನ ಪ್ರಾಧ್ಯಾಪಕ ಡಾ.ನರಸಿಂಹ ಮೂರ್ತಿ ಹೇಳಿದರು.
ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ನಡೆದ ಪ್ರಥಮ ಪಿಯುಸಿ ತರಗತಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಭಾನುವಾರ ಮಾತನಾಡಿದರು.
ವಿದ್ಯಾರ್ಥಿಗಳನ್ನು ಮೂರ್ಖರನ್ನಾಗಿಸುವ ವ್ಯವಸ್ಥೆಗಳು ಸುತ್ತಮುತ್ತ ರಾರಾಜಿಸುತ್ತಿರುತ್ತವೆ. ವಿವಿಧ ರೀತಿಯ ಆಕರ್ಷಣೀಯವಾದ ಪೋಸ್ಟರ್ ಮತ್ತು ಜಾಹೀರಾತುಗಳಿಗೆ ಮಾರುಹೋಗದೆ ನಮ್ಮ ವಿಮರ್ಶಾ ಶಕ್ತಿಯನ್ನು ಬಳಸಿಕೊಂಡು ನಮಗೆ ಸರಿಹೊಂದುವ ಕೋರ್ಸ್ಗಳನ್ನು ಆಯ್ಕೆ ಮಾಡಿಕೊಳ್ಳಬೇಕು. ವಿದ್ಯಾರ್ಥಿಗಳು ಕೇವಲ ದೊಡ್ಡ ಹುದ್ದೆಗಳನ್ನು ಅಲಂಕರಿಸುವುದು ಮಾತ್ರವಲ್ಲದೆ ತಾವು ಆತ್ಮ ತೃಪ್ತಿಯಿಂದ ಬದುಕುವ ಕಲೆಯನ್ನು ಕರಗತ ಮಾಡಿಕೊಳ್ಳಬೇಕು. ಮೆದುಳನ್ನು ಚುರುಕುಗೊಳಿಸುವುದು ಮಾತ್ರ ವಿದ್ಯಾರ್ಜನೆಯ ಉದ್ದೇಶವಲ್ಲ, ವ್ಯಕ್ತಿಯ ಹೃದಯವಂತಿಕೆಯನ್ನು ಅರಳಿಸುವುದೇ ಶಿಕ್ಷಣದ ಉದ್ದೇಶ ಎಂದರು.
ನಾವು ಸೇವಿಸುವ ಆಹಾರ ನಮ್ಮ ವ್ಯಕ್ತಿತ್ವದ ಮೇಲೆ ಪ್ರಭಾವ ಬೀರುವುದರಿಂದ ವಿದ್ಯಾರ್ಥಿಗಳು ಸಾತ್ವಿಕ ಆಹಾರ ಕ್ರಮವನ್ನು ಅಳವಡಿಸಿಕೊಳ್ಳುವಂತೆ ಹೆತ್ತವರು ಮುತುವರ್ಜಿ ವಹಿಸಬೇಕು. ಆಕರ್ಷಣೆ ಮತ್ತು ಗೊಂದಲಗಳು ಯಶಸ್ಸಿಗೆ ಮುಳುವಾಗುತ್ತವೆ ಮತ್ತು ಬೆವರಿನ ಪರಿಶ್ರಮವೊಂದೇ ಯಶಸ್ಸಿಗೆ ಸೂತ್ರ ಎಂದು ತಿಳಿಸಿದರು.
ವಿರಾಜಪೇಟೆಯ ಪ್ರಗತಿ ವಿದ್ಯಾಕೇಂದ್ರದ ಆಡಳಿತಾಧಿಕಾರಿ, ೪೨ ಬಾರಿ ದೇಶವನ್ನು ಕ್ರೀಡಾ ವಿಭಾಗದಲ್ಲಿ ಪ್ರತಿನಿಧಿಸಿದ ಹೆಗ್ಗಳಿಕೆ ಹೊಂದಿರುವ ತಿಮ್ಮಯ್ಯ ಮಾದಂಡ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಯಶಸ್ಸಿಗೆ ಕಠಿಣ ಪರಿಶ್ರಮವೊಂದೇ ಪರಿಹಾರ. ದಿನದ 24 ಗಂಟೆಯನ್ನು ಬಹಳ ಜಾಣ್ಮೆಯಿಂದ ಸದುಪಯೋಗಪಡಿಸಿಕೊಂಡು ಯಶಸ್ಸಿನ ಮೆಟ್ಟಿಲನ್ನು ಏರಬೇಕು. ವಿದ್ಯಾರ್ಥಿಗಳು ತಮ್ಮ ಬಳಿ ಇರುವಂತಹ ಸೌಲಭ್ಯಗಳನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡರೆ ಸುಲಭವಾಗಿ ಗುರಿ ತಲುಪಬಹುದು ಹಾಗೂ ಗುರಿ ತಲುಪಲು ಸರಿಯಾದ ಯೋಜನೆಯು ತುಂಬಾ ಅಗತ್ಯ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಮಾತನಾಡಿ ದೇಶದ ಗೌರವವನ್ನು ಎತ್ತಿ ಹಿಡಿಯುವಂತಹ ವಿದ್ಯಾರ್ಥಿಗಳು ಪ್ರತಿ ವಿದ್ಯಾಸಂಸ್ಥೆಗಳಿಂದ ಹೊರಹೊಮ್ಮಬೇಕು. ಅದಕ್ಕಾಗಿ ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿ ಅಮೂಲಾಗ್ರ ಬದಲಾವಣೆ ಆಗಬೇಕಾದ ಅನಿವಾರ್ಯತೆ ಇದೆ. ಈ ನಿಟ್ಟಿನಲ್ಲಿ ಅಂಬಿಕಾ ವಿದ್ಯಾಲಯದಲ್ಲಿ ಪಠ್ಯಪುಸ್ತಕಗಳ ಬೋಧನೆಯ ಜೊತೆ ಜೊತೆಗೆ ವಿದ್ಯಾರ್ಥಿಯ ಸರ್ವಾಂಗೀಣ ಬೆಳವಣಿಗೆಗೆ ಪೂರಕವಾಗುವಂತಹ ಸೂರ್ಯ ನಮಸ್ಕಾರ, ಯೋಗ, ಧ್ಯಾನ, ಪ್ರಾಣಾಯಾಮಗಳಂತಹ ಮೌಲ್ಯಯುತ ಶಿಕ್ಷಣವನ್ನು ನೀಡಲಾಗುತ್ತಿದೆ ಎಂದರು.
ಸಂಸ್ಥೆಯ ಕಾರ್ಯದರ್ಶಿ ರಾಜಶ್ರೀ ನಟ್ಟೋಜ ಮಾತನಾಡಿ ಮಕ್ಕಳು ತಮ್ಮ ವಿದ್ಯಾರ್ಜನೆಯ ಕಡೆಗೆ ಹೆಚ್ಚಿನ ಗಮನವನ್ನು ನೀಡಿ ತಮ್ಮ ಯಶಸ್ಸನ್ನು ಕಂಡುಕೊಳ್ಳಬೇಕೆಂದಲ್ಲದೆ ಸಂಸ್ಥೆಯ ನಿಯಮಗಳ ಬಗ್ಗೆ ಮಕ್ಕಳಿಗೆ ಸವಿವರವಾದ ಮಾಹಿತಿಯನ್ನು ನೀಡಿ ಶುಭ ಹಾರೈಸಿದರು.
ದ್ವಿತೀಯ ಪಿಯು ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ವೇದಿಕೆಯಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ, ವಿಶ್ರಾಂತ ಪ್ರಾಚಾರ್ಯ ಡಾ. ಎಚ್. ಮಾಧವ ಭಟ್ ಉಪಸ್ಥಿತರಿದ್ದರು. ಸಂಸ್ಥೆಯ ಪ್ರಾಚಾರ್ಯ ಗಣೇಶ್ ಪ್ರಸಾದ್ ಡಿ.ಎಸ್ ಪ್ರಸ್ತಾವನೆಗೈದು ಸ್ವಾಗತಿಸಿದರು. ಕನ್ನಡ ಉಪನ್ಯಾಸಕ ಸತೀಶ್ ಇರ್ದೆ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ವಿದ್ಯಾರ್ಥಿನಿ ಅವನಿ ನಾಯಕ್ ಪ್ರಾರ್ಥಿಸಿದರು.
ಶಿಕ್ಷಣ
Puttur-ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರ
ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಕಲ್ಕೂರ ಪ್ರತಿಷ್ಠಾನ(ರಿ) ಕನ್ನಡ ರಾಜ್ಯೋತ್ಸವದ ಅಂಗವಾಗಿ ನ 20 ರಂದು ಮಂಗಳೂರಿನ ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯ ಸಭಾಭವನದಲ್ಲಿ ನಡೆದ ರಾಜ್ಯೋತ್ಸವ ಸಂದೇಶ – ಗೌರವ ಪುರಸ್ಕಾರ ಕಾರ್ಯಕ್ರಮದಲ್ಲಿ ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.
ಪುತ್ತೂರು: ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಕಲ್ಕೂರ ಪ್ರತಿಷ್ಠಾನ(ರಿ) ಕನ್ನಡ ರಾಜ್ಯೋತ್ಸವದ ಅಂಗವಾಗಿ ನ 20 ರಂದು ಮಂಗಳೂರಿನ ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯ ಸಭಾಭವನದಲ್ಲಿ ನಡೆದ ರಾಜ್ಯೋತ್ಸವ ಸಂದೇಶ – ಗೌರವ ಪುರಸ್ಕಾರ ಕಾರ್ಯಕ್ರಮದಲ್ಲಿ ಪುತ್ತೂರಿನ ಸುಪ್ರಜಾ ರಾವ್ ಗೆ
ರಾಜ್ಯೋತ್ಸವ ಸಾಧಕ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.
ಇವರು ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜ್ ನ ಪ್ರಾಧ್ಯಾಪಕರಾದ ಡಾ.ಪ್ರಶಾಂತ್ ರಾವ್ ಹಾಗೂ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಸುಮನಾ ರಾವ್ ದಂಪತಿಗಳ ಪುತ್ರಿಯಾಗಿದ್ದು, ಪ್ರಸಕ್ತ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾರೆ.
ಶಿಕ್ಷಣ
Ambika-ಅಂಬಿಕಾ ಸಿಬಿಎಸ್ಇ ಸಂಸ್ಥೆಯ ವಿದ್ಯಾರ್ಥಿಗಳಿಗೆ ಬಹುಮಾನ
ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ವಿದ್ಯಾರ್ಥಿಗಳು ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ (ರಿ) ವತಿಯಿಂದ ‘ಜ್ಞಾನ ಚಂದನ’ ಹಾಗೂ ‘ಜ್ಞಾನ ನಂದನ’ ಪುಸ್ತಕಗಳ ಆಧಾರಿತವಾಗಿ ನಡೆದ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಬಹುಮಾನ ಗಳಿಸಿದ್ದಾರೆ.
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ವಿದ್ಯಾರ್ಥಿಗಳು ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ (ರಿ) ವತಿಯಿಂದ ‘ಜ್ಞಾನ ಚಂದನ’ ಹಾಗೂ ‘ಜ್ಞಾನ ನಂದನ’ ಪುಸ್ತಕಗಳ ಆಧಾರಿತವಾಗಿ ನಡೆದ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಬಹುಮಾನ ಗಳಿಸಿದ್ದಾರೆ.
ಹಿರಿಯ ಪ್ರಾಥಮಿಕ ವಿಭಾಗದ ಭಾಷಣ ಸ್ಪರ್ಧೆಯಲ್ಲಿ ನರಿಮೊಗರು ನಿವಾಸಿ ಎಮ್ ಅರ್ಜುನ್ ಕಾಮತ್ ಮತ್ತು ನೀತಾ ಕಾಮತ್ ಎನ್ ದಂಪತಿಯ ಪುತ್ರ 5ನೇ ತರಗತಿಯ ಎಮ್ ಅನ್ಶ್ ಕಾಮತ್ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.
ಹಿರಿಯ ಪ್ರಾಥಮಿಕ ವಿಭಾಗದ ಶ್ಲೋಕ ಕಂಠಪಾಠ ಸ್ಪರ್ಧೆಯಲ್ಲಿ ಕೆಮ್ಮಾಯಿ ನಿವಾಸಿ ಪ್ರಸನ್ನ ಹೆಚ್ ಎಸ್ ಮತ್ತು ಗೀತಾ ಡಿ ದಂಪತಿಯ ಪುತ್ರಿ 5ನೇ ತರಗತಿಯ ಅಕ್ಷರ ಹೆಚ್ ಪಿ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ.
ಇವರಿಬ್ಬರೂ ಮುಂದೆ ಪುಂಜಾಲಕಟ್ಟೆಯಲ್ಲಿ ನಡೆಯಲಿರುವ ಜಿಲ್ಲಾಮಟ್ಟದ ಭಾಷಣ ಹಾಗೂ ಶ್ಲೋಕ ಕಂಠಪಾಠ ಸ್ಪರ್ಧೆಗೆ ಆಯ್ಕೆಗೊಂಡಿರುತ್ತಾರೆ.
ಶಿಕ್ಷಣ
Philomena-ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆ
ನ.20 ರಂದು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಸಭಾಂಗಣದಲ್ಲಿ ನಡೆದ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿ ಸಮಾಜ ಸೇವಕರು ಮತ್ತು ಉದ್ಯಮಿಗಳಾದ ಮೈಕಲ್ ಡಿ’ ಸೋಜಾ ಮಾತನಾಡಿದರು.
ಪುತ್ತೂರು: ಸಂತ ಫಿಲೋಮಿನಾ ಕಾಲೇಜು ಸಾವಿರಾರು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು
ನೀಡಿದ್ದು, ದೇಶದ ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆಯಲ್ಲಿ ತನ್ನದೇ ಕೊಡುಗೆಯನ್ನು ನೀಡಿದೆ ಎಂದು ಸಮಾಜ ಸೇವಕರು ಮತ್ತು ಉದ್ಯಮಿಗಳಾದ ಮೈಕಲ್ ಡಿ’ ಸೋಜಾ ಹೇಳಿದರು.

ಅವರು ನವೆಂಬರ್ 20 ರಂದು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಸಭಾಂಗಣದಲ್ಲಿ ನಡೆದ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡುತ್ತ,
ರೆ. ಫಾ. ಪತ್ರವೋ ಇವರ ದೂರದರ್ಶಿ ಚಿಂತನೆಯ ಫಲವಾಗಿ ಈ ಕಾಲೇಜು ಜನ್ಮತಾಳಿದ್ದು, ಇಂದು ಮತ್ತಷ್ಟು ಮೂಲ ಸೌಕರ್ಯಗಳ ವಿಸ್ತರಣೆಯೊಂದಿಗೆ ಸಂಸ್ಥೆಯು ಇನ್ನಷ್ಟು ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನು ನೀಡಲು ಅಣಿಯಾಗಿದೆ. ಸುಸಜ್ಜಿತ ಮೂಲ ಸೌಕರ್ಯಗಳ ವಿಸ್ತರಣೆಗೆ ಕಾರಣೀಕರ್ತರಾದ ಎಲ್ಲರನ್ನೂ ಅಭಿನಂದಿಸಿ, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯಬೇಕೆಂದು ತಿಳಿಸಿದರು.

ಇನ್ನೋರ್ವ ಮುಖ್ಯ ಅತಿಥಿಗಳಾದ ಕ್ಯಾಥೋಲಿಕ್ ಬೋರ್ಡ್ ಆಫ್ ಎಜುಕೇಷನ್(CBE) ನ ಕಾರ್ಯದರ್ಶಿಗಳಾದ ರೆ. ಡಾ. ಪ್ರವೀಣ್ ಲಿಯೋ ಲಸ್ರದೋ ಮಾತನಾಡಿ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಕಳೆದ ಹಲವಾರು ದಶಕಗಳಿಂದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನು ನೀಡಿದೆ. ಇಂದು ಬದಲಾದ ಪರಿಸ್ಥಿತಿಯಲ್ಲಿ ಮೂಲ ಸೌಕರ್ಯಗಳ ವಿಸ್ತರಣೆಯನ್ನು ಮನಗಂಡು ದಾನಿಗಳ ಸಹಾಯದಿಂದ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರಿಗೆ ಉತ್ತಮ ಸೌಕರ್ಯಗಳನ್ನು ನಿರ್ಮಿಸಿದ್ದೇವೆ. ಎಲ್ಲರೂ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕ್ಯಾಥೋಲಿಕ್ ಬೋರ್ಡ್ ಆಫ್ ಎಜುಕೇಷನ್(CBE) ನ ಉಪಾಧ್ಯಕ್ಷರಾದ ಮೊನ್ಸಿಂಜೋರ್ ಮ್ಯಾಕ್ಸಿಮ್ ಎಲ್ ನೋರೋನ್ಹ ಮಾತನಾಡಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಬೆಳವಣಿಗೆಗಳು ತುಂಬಾ ಸಂತೋಷವನ್ನು ನೀಡುತ್ತಿದ್ದು, ಇಂದು ವಿದ್ಯಾರ್ಥಿಗಳಿಗೆ ನೀಡಿದ ಹೆಚ್ಚುವರಿ ಸೌಲಭ್ಯಗಳು ಸಂಸ್ಥೆಯ ಬೆಳವಣಿಗೆಗೆ ಹಿಡಿದ ಕನ್ನಡಿಯಾಗಿದೆ. ಕಾಲೇಜಿನ ಪ್ರಾಂಶುಪಾಲರು ಮತ್ತು ಆಡಳಿತ ಮಂಡಳಿಯನ್ನು ಅಭಿನಂದಿಸಿ, ಮುಂದಿನ ದಿನಗಳಲ್ಲೂ ಕಾಲೇಜು ಉತ್ತಮ ವಿದ್ಯಾರ್ಥಿಗಳನ್ನು ಸಮಾಜಕ್ಕೆ ನೀಡಲಿ ಎಂದು ಆಶಿಸಿದರು.
ಮಾಯಿದೆ ದೇವುಸ್ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ರೆ. ಡಾ. ಜಾನ್ ಬ್ಯಾಪ್ಟಿಸ್ಟ್ ಸಲ್ದಾನ್ಹಾ ಪ್ರಾಸ್ತಾವಿಕವಾಗಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಕಟ್ಟಡ ಕಾಮಗಾರಿಯ ಮೇಲ್ವಿಚಾರಣೆಯನ್ನು ನಿರ್ವಹಿಸಿದ ಓಸ್ವಾಡ್ಡ್ ಲೂಯಿಸ್ ಹಾಗೂ ಜೋಸೆಫ್ ಸೆರವೋರನ್ನು ಸನ್ಮಾನಿಸಲಾಯಿತು.
ಮಾಯಿದೆ ದೇವುಸ್ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ರೋಷನ್ ಲಾಸ್ರಾದೋ, ಕಾಲೇಜಿನ ರಕ್ಷಕ – ಶಿಕ್ಷಕ ಸಂಘದ ಉಪಾಧ್ಯಕ್ಷ ಅ್ಯಂಟೋನಿ ಒಲಿವೆರಾ, ಪ ಪೂ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಡಾ. ಶ್ರೀ ಪ್ರಕಾಶ್ ಬಿ, ಸಂತ ಫಿಲೋಮಿನಾ ಪ್ರೌಢ ಶಾಲೆಯ ಮುಖ್ಯೋಪಾಧ್ಯಯರಾದ ರೆ. ಫಾ. ಮ್ಯಾಕ್ಸಿಮ್ ಡಿ’ ಸೋಜಾ, ಮಾಯಿದೆ ದೇವುಸ್ ಚರ್ಚ್ ನ ಸಹಾಯಕ ಪ್ಯಾರಿಸ್ ಧರ್ಮ ಗುರುಗಳಾದ ರೆ.ಫಾ ಮಾರ್ವಿನ್ ಪ್ರವೀಣ್ ಲೋಬೋ ಹಾಗೂ ಚ್ಯಾರಿಟಿ ಟೀಮ್ ನ ಸದಸ್ಯರಾದ ಸ್ಟೀಫನ್ ಪಿಂಟೋ, ಓಸ್ವಾಲ್ಡ್ ರೋಡ್ರಿಗಸ್ ವೇದಿಕೆಯಲ್ಲಿ ಉಪಸ್ಥಿತರಿದ್ದು, ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ವಿವಿಧ ಸಂಸ್ಥೆಗಳ ಮುಖ್ಯಸ್ಥರು, ದಾನಿಗಳು, ಗಣ್ಯರು, ಬೋಧಕ ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಈ ನೂತನ ಕಟ್ಟಡದಲ್ಲಿ ವಿಸ್ತೃತ ಸಭಾಂಗಣ, ವಿಜ್ಞಾನ ಪ್ರಯೋಗಾಲಯಗಳು, ಉಪನ್ಯಾಸಕರ ಕೊಠಡಿಗಳು, ತರಗತಿ ಕೋಣೆಗಳು ಹಾಗೂ ಸುಸಜ್ಜಿತ ಶೌಚಾಲಯಗಳು ವಿಧ್ಯಾರ್ಥಿಗಳ ಉಪಯೋಗಕ್ಕೆ ಲಭ್ಯವಿದೆ.
ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಸ್ವಾಗತಿಸಿ, ಉಪನ್ಯಾಸಕರಾದ ಸುಮಾ ಡಿ ವಂದಿಸಿ, ಡಾ. ಆಶಾ ಸಾವಿತ್ರಿ ಕಾರ್ಯಕ್ರಮವನ್ನು ನಿರೂಪಿಸಿದರು.
-
ಮಂಗಳೂರು14 hours agoMangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
-
ಬಿಗ್ ನ್ಯೂಸ್21 hours agoBail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ
-
ಅಂತರ ರಾಜ್ಯ19 hours agoFormer CBI officer-ಅಧಿಕಾರ, ಹಣ, ಐಷಾರಾಮಿ ಬದುಕಿಗೆ ಗುಡ್ಬೈ; ಗುಹೆಯಲ್ಲಿ ಧ್ಯಾನ ಮಾಡುತ್ತಿರುವ ಮಾಜಿ ಸಿಬಿಐ ಅಧಿಕಾರಿ..!
-
ನಿಧನ ವಾರ್ತೆ20 hours agoHeart attack-ಸಾಲಿಗ್ರಾಮ: ಕಚೇರಿಯಲ್ಲೇ ಹೃದಯಾಘಾತ; ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ನಿಧನ
-
ಸಿನೆಮಾ19 hours agoDawood-‘ಧುರಂಧರ್ ‘ ನಲ್ಲಿ ದಾವೂದ್ ನ ತೋರಿಸಿದ ರೀತಿ ವಾಸ್ತವವಲ್ಲ…! ಮೋಸ್ಟ್ ವಾಂಟೆಡ್ ಪಾತಕಿ ಈಗ ಹೇಗಿದ್ದಾನೆ ಗೊತ್ತೇ..? ಮಾಜಿ FBI ಅಧಿಕಾರಿ ಹೇಳಿದ್ದೇನೂ..?
-
ಅಂತರ ರಾಜ್ಯ13 hours agoArrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!
-
ನಿಧನ ವಾರ್ತೆ20 hours agoMudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು
-
ನಿಧನ ವಾರ್ತೆ20 hours agoOne-sided love-ಇನ್ಸ್ಟಾಗ್ರಾಮ್ ಇನ್ಫ್ಲುಯೆನ್ಸರ್ ಮೇಲಿನ ಒನ್ಸೈಡೆಡ್ ಲವ್; ಹಲ್ಲೆಗೊಳಗಾದ ಯುವಕ ಸಾವು















