ರಾಜಕೀಯ
Puttur-ಎಪಿಎಂಸಿ ತಿರುವಿನಲ್ಲೇ ನಮಗೆ ಪಾರ್ಕಿಂಗ್ ಬೇಕು: ರಿಕ್ಷಾ ಚಾಲಕರಿಂದ ಶಾಸಕರಿಗೆ ಮನವಿ; ನೀವು ಅಲ್ಲೇ ಪಾರ್ಕಿಂಗ್ ಮಾಡಿ, ಸ್ಥಳಾಂತರ ಮಾಡಬೇಕಾದರೆ ಬೇರೆ ಜಾಗ ಕೊಡಲಿ: ಶಾಸಕ ಅಶೋಕ್ ರೈ
ಪುತ್ತೂರು ನಗರದ ಎಪಿಎಂಸಿ ರಸ್ತೆಯ ತಿರುವಿನಲ್ಲಿ ಜಿಡೆಕಲ್ಲು, ಸಾಲ್ಮರ ಕಡೆ ತೆರಳುವ ರಿಕ್ಷಾ ಚಾಲಕರು ಪಾರ್ಕಿಂಗ್ ಮಾಡುತ್ತಿದ್ದು , ಇದೇ ಸ್ಥಳದಲ್ಲಿ ಖಾಸಗಿ ಕಟ್ಟಡವೊಂದರ ನಿರ್ಮಾಣವಾದ ಬಳಿಕ ಪಾರ್ಕಿಂಗ್ ಸ್ಥಳಾಂತರ ಮಾಡುವಂತೆ ಕಿರುಕುಳ ನೀಡುತ್ತಿದ್ದು ಈ ವಿಚಾರವಾಗಿ ಇಂದು ಆಟೋ ಚಾಲಕರು ಶಾಸಕರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.
ಪುತ್ತೂರು: ಪುತ್ತೂರು ನಗರದ ಎಪಿಎಂಸಿ ರಸ್ತೆಯ ತಿರುವಿನಲ್ಲಿ ಜಿಡೆಕಲ್ಲು, ಸಾಲ್ಮರ ಕಡೆ ತೆರಳುವ ರಿಕ್ಷಾ ಚಾಲಕರು ಪಾರ್ಕಿಂಗ್ ಮಾಡುತ್ತಿದ್ದು , ಇದೇ ಸ್ಥಳದಲ್ಲಿ ಖಾಸಗಿ ಕಟ್ಟಡವೊಂದರ ನಿರ್ಮಾಣವಾದ ಬಳಿಕ ಪಾರ್ಕಿಂಗ್ ಸ್ಥಳಾಂತರ ಮಾಡುವಂತೆ ಕಿರುಕುಳ ನೀಡುತ್ತಿದ್ದು ಈ ವಿಚಾರವಾಗಿ ಇಂದು ಆಟೋ ಚಾಲಕರು ಶಾಸಕರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.
ಈ ಬಗ್ಗೆ ಮನವಿ ಮಾಡಿದ ರಿಕ್ಷಾ ಚಾಲಕರು ʻʻನಾವು ಹಲವಾರು ವರ್ಷದಿಂದ ಅಲ್ಲೇ ಪಾರ್ಕಿಂಗ್ ಮಾಡುತ್ತಿದ್ದೇವೆ, 2025 ರಲ್ಲಿ ಜಿಲ್ಲಾಧಿಕಾರಿಗಳು ನಮಗೆ ಆ ಸ್ಥಳವನ್ನು ಗುರುತಿಸಿಕೊಟ್ಟಿದ್ದರು. ನಾವು ಸಾಲ್ಮರ , ಜಿಡೆಕಲ್ಲು ಕಡೆ ಬಾಡಿಗೆ ತೆರಳುವ ರಿಕ್ಷಾ ಚಾಲಕರು ಅಲ್ಲಿದ್ದು ಖಾಸಗಿ ಕಟ್ಟಡದ ಮಾಲೀಕರು ನಮ್ಮನ್ನು ಅಲ್ಲಿಂದ ಎಬ್ಬಿಸುವ ಯೋಜನೆ ಮಾಡಿದ್ದಾರೆ.
ನಮಗೆ ನಿತ್ಯ ಕಿರುಕುಳ ಕೊಡುವ ಮತ್ತು ಬೆದರಿಸುವ ಕೆಲಸವನ್ನು ಮಾಡುತ್ತಿದ್ದಾರೆ. ನಮಗೆ ಆ ಜಾಗ ಬಿಟ್ಟರೆ ಬೇರೆ ಜಾಗವಿಲ್ಲ, ನಾವು ಅಲ್ಲೇ ಪಾರ್ಕಿಂಗ್ ಮಾಡುತ್ತೇವೆ ಎಂದು ಶಾಸಕರಲ್ಲಿ ಹೇಳಿದರು. ಯಾವುದೋ ರಾಜಕೀಯ ಒತ್ತಡಕ್ಕೆ ಮಣಿದು ನಮ್ಮನ್ನು ಧಮನಿಸುವ ಕೆಲಸವನ್ನು ಕಟ್ಟಡದ ಮಾಲಿಕರು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಇದಕ್ಕೆ ಪ್ರತಿಕ್ರಿಯೆ ನೀಡಿದ ಶಾಸಕರು ನಿಮಗೆ ಜಿಲ್ಲಾಧಿಕಾರಿಗಳು ಪಾರ್ಕಿಂಗ್ ಸ್ಥಳವನ್ನು ಗುರುತಿಸಿದ್ದಾರೆ, ನಿಮಗೆ ಬೇರೆ ಜಾಗವನ್ನು ಯಾರು ತೋರಿಸುವ ಕೆಲಸ ಮಾಡಿಲ್ಲ ನೀವು ಈಗ ಎಲ್ಲಿ ಪಾರ್ಕಿಂಗ್ ಮಾಡುತ್ತಿದ್ದೀರೋ ಅಲ್ಲೇ ಮಾಡಿ , ಯಾವ ಶಕ್ತಿಗೂ ಹೆದರುವ ಅಗತ್ಯವಿಲ್ಲ, ಈ ವಿಚಾರದಲ್ಲಿ ಸ್ಥಳ ಪರಿಶೀಲನೆ ಮಾಡುವಂತೆ ಕಮಿಷನರ್ ಗೆ ಸೂಚಿಸುತ್ತೇನೆ. ಯಾರಾದರು ನಿಮ್ಮನ್ನು ಓಡಿಸಲು ಬಂದರೆ ನಮ್ಮನ್ನು ಶಾಸಕ ಅಶೋಕ್ ರೈ ಇಲ್ಲೇ ಪಾರ್ಕಿಂಗ್ ಮಾಡುವಂತೆ ಹೇಳಿದ್ದಾರೆ ಎಂದು ಹೇಳಿ ಎಂದು ತಿಳಿಸಿದರು.
ಮಂಗಳೂರು
D.K. Shivakumar-ಅ.15ರಂದು ಮಂಗಳೂರು, ಉಡುಪಿ ಜಿಲ್ಲೆಗೆ ಡಿ.ಕೆ. ಶಿವಕುಮಾರ್ ಭೇಟಿ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಕ್ಟೋಬರ್ 15ರ ಗುರುವಾರ ಮಂಗಳೂರು ಹಾಗೂ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಗುರುವಾರ ಮಧ್ಯಾಹ್ನ 4.10ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು, ಸಂಜೆ 4.40ಕ್ಕೆ ಕಾಪು ಉಚ್ಚಿಲದಲ್ಲಿ ನಡೆಯುವ ದಸರಾ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ, ಮಹಿಳಾ ದಸರಾವನ್ನು ಉದ್ಘಾಟಿಸಲಿದ್ದಾರೆ.
ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಕ್ಟೋಬರ್ 15ರ ಗುರುವಾರ ಮಂಗಳೂರು ಹಾಗೂ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಗುರುವಾರ ಮಧ್ಯಾಹ್ನ 4.10ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು, ಸಂಜೆ 4.40ಕ್ಕೆ ಕಾಪು ಉಚ್ಚಿಲದಲ್ಲಿ ನಡೆಯುವ ದಸರಾ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ, ಮಹಿಳಾ ದಸರಾವನ್ನು ಉದ್ಘಾಟಿಸಲಿದ್ದಾರೆ.
ಬಳಿಕ ಸಂಜೆ 6.30ಕ್ಕೆ ಮಂಗಳೂರಿನಲ್ಲಿ ನಡೆಯುವ ಮಂಗಳೂರು ದಸರಾ ನವರಾತ್ರಿ ಮಹೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ರಾತ್ರಿ 8 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಲಿರುವ ಅವರು, ಅಲ್ಲಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ತಿಳಿದುಬಂದಿದೆ.
ರಾಜಕೀಯ
Siddaramaiah-ಸ್ಟಿಂಗ್ ವಿಡಿಯೋ ಪ್ರಸಾರಕ್ಕೆ ಬ್ರೇಕ್ ಹಾಕಲು ಸಿದ್ದರಾಮಯ್ಯ ಕೋರ್ಟ್ ಮೊರೆ
ರಾಜ್ಯ ರಾಜಕೀಯದಲ್ಲಿ ಸ್ಟಿಂಗ್ ಆಪರೇಷನ್ ವಿಚಾರ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ, ಸ್ಟಿಂಗ್ ಆಪರೇಷನ್ಗೆ ಸಂಬಂಧಿಸಿದ ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ 18ನೇ ಸಿಸಿಎಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆ ನಾಳೆ ನಡೆಯಲಿದ್ದು, ನ್ಯಾಯಾಲಯದ ನಿರ್ಧಾರದ ಬಗ್ಗೆ ಕುತೂಹಲ ಮೂಡಿದೆ.
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸ್ಟಿಂಗ್ ಆಪರೇಷನ್ ವಿಚಾರ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ, ಸ್ಟಿಂಗ್ ಆಪರೇಷನ್ಗೆ ಸಂಬಂಧಿಸಿದ ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ 18ನೇ ಸಿಸಿಎಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆ ನಾಳೆ ನಡೆಯಲಿದ್ದು, ನ್ಯಾಯಾಲಯದ ನಿರ್ಧಾರದ ಬಗ್ಗೆ ಕುತೂಹಲ ಮೂಡಿದೆ.
ಸ್ಟಿಂಗ್ ಆಪರೇಷನ್ ವಿಡಿಯೋ ಪ್ರಸಾರಕ್ಕೆ ತಡೆಯಾಜ್ಞೆ ನೀಡುವಂತೆ ಕೋರಿರುವ ಅರ್ಜಿಯಲ್ಲಿ ಖಾಸಗಿ ಸುದ್ದಿ ವಾಹಿನಿಗಳು ಹಾಗೂ ಪತ್ರಿಕೆಗಳು ಸೇರಿದಂತೆ ಒಟ್ಟು 42 ಮಾಧ್ಯಮ ಸಂಸ್ಥೆಗಳನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ನಡೆದಿದೆ ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಸಿದ್ದರಾಮಯ್ಯ, ಸ್ಟಿಂಗ್ ಆಪರೇಷನ್ ನಡೆಯುತ್ತಿರುವುದು ನಿಜ. ಆದರೆ ಇದನ್ನು ಮಾಡಿಸುತ್ತಿರುವವರು ಯಾರು ಎಂಬುದು ಬಹಿರಂಗವಾಗಬೇಕು ಎಂದು ಹೇಳಿದ್ದರು.
ಇದೀಗ ಸ್ಟಿಂಗ್ ಆಪರೇಷನ್ಗೆ ಸಂಬಂಧಿಸಿದ ವಿಡಿಯೋ ಪ್ರಸಾರಕ್ಕೆ ತಡೆಯಾಜ್ಞೆ ಕೋರಿ ಸಿದ್ದರಾಮಯ್ಯ ನ್ಯಾಯಾಲಯದ ಮೊರೆ ಹೋಗಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
‘ಸುಳ್ಳು ಪ್ರಚಾರ ತಡೆಯಲು ತಡೆಯಾಜ್ಞೆ ಕೋರುತ್ತಿದ್ದೇವೆ’: ಸಿದ್ದರಾಮಯ್ಯ
ಸಾಮಾಜಿಕ ಜಾಲತಾಣಗಳಲ್ಲಿ ಸ್ಟಿಂಗ್ ಆಪರೇಷನ್ ಕುರಿತು ಸುಳ್ಳು ಪ್ರಚಾರ ಮಾಡಲಾಗುತ್ತಿದೆ. ಇದನ್ನು ತಡೆಯುವ ಉದ್ದೇಶದಿಂದ ನ್ಯಾಯಾಲಯದಿಂದ ತಡೆಯಾಜ್ಞೆ ಪಡೆಯಲು ಮುಂದಾಗಿದ್ದೇವೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಸೋಮವಾರ ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ನವದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಯಲ್ಲಿ ತಾವು ಭಾಗವಹಿಸಬೇಕಿತ್ತು, ಆದರೆ ಹೋಗಲು ಸಾಧ್ಯವಾಗಲಿಲ್ಲ ಎಂದು ಹೇಳಿದರು.
ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ವಿಚಾರಣೆ ಹಾಗೂ ಮುಂದಿನ ಆದೇಶದತ್ತ ಇದೀಗ ಎಲ್ಲರ ಗಮನ ನೆಟ್ಟಿದೆ.
ಮಂಗಳೂರು
Raghupti Bhat-2028ರ ಚುನಾವಣೆಯಲ್ಲಿ ಸ್ಪರ್ಧೆ ಖಚಿತ; ಕಾಂಗ್ರೆಸ್ ಸೇರ್ಪಡೆ ಬಗ್ಗೆ ಏನು ಹೇಳಿದ್ರು ರಘುಪತಿ ಭಟ್
ಕಾಂಗ್ರೆಸ್ ಸೇರ್ಪಡೆಯ ಕುರಿತು ಇನ್ನೂ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಆದರೆ 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಉಡುಪಿ ಮಾಜಿ ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ.
ಮಂಗಳೂರು: ಕಾಂಗ್ರೆಸ್ ಸೇರ್ಪಡೆಯ ಕುರಿತು ಇನ್ನೂ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಆದರೆ 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಉಡುಪಿ ಮಾಜಿ ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ನಿಂದ ಈಗಾಗಲೇ ಆಹ್ವಾನ ಬಂದಿರುವುದು ನಿಜ. ಈ ಬಗ್ಗೆ ಯೋಚನೆ ಮಾಡುತ್ತಿದ್ದೇನೆ. ನನ್ನ ಬೆಂಬಲಿಗರೊಂದಿಗೆ ಚರ್ಚಿಸಿ, ಅವರ ಅಭಿಪ್ರಾಯ ಪಡೆದುಕೊಂಡ ಬಳಿಕವೇ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಹೇಳಿದರು.
“ಬಿಜೆಪಿಯವರು ಕರೆಯುತ್ತಾರೆ ಎಂದು ಕಾಯುತ್ತಿದ್ದೇನೆ. ಬಿಜೆಪಿ ಸೇರುವ ಬಗ್ಗೆಯೂ ಯೋಚಿಸಬಹುದು. ಆದರೆ ಕಾಂಗ್ರೆಸ್ ಸೇರುವ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ” ಎಂದು ಸ್ಪಷ್ಟಪಡಿಸಿದರು.
ಬಾಲ್ಯದಿಂದಲೂ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತನಾಗಿ ಬೆಳೆದು, ಬಿಜೆಪಿಯಲ್ಲಿ ಯುವ ಮೋರ್ಚಾ ಜಿಲ್ಲಾ ಘಟಕ ಹಾಗೂ ಜಿಲ್ಲಾಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ಮೂರು ಬಾರಿ ಶಾಸಕನಾಗಿದ್ದೇನೆ. ಹೀಗಿರುವಾಗ ಏಕಾಏಕಿ ಪಕ್ಷ ಬದಲಿಸುವ ನಿರ್ಧಾರ ಕೈಗೊಳ್ಳಲು ನನ್ನ ಮನಸ್ಸು ಒಪ್ಪುತ್ತಿಲ್ಲ. ನನ್ನ ಬೆಂಬಲಿಗರ ವಿಶ್ವಾಸ ಪಡೆದುಕೊಂಡೇ ಮುಂದಿನ ಹೆಜ್ಜೆ ಇಡುತ್ತೇನೆ ಎಂದು ತಿಳಿಸಿದರು.
ಕಳೆದ ಚುನಾವಣೆಯ ಸಂದರ್ಭ ತಮಗೆ ಅನ್ಯಾಯವಾಗಿದೆ ಎಂಬ ಅಸಮಾಧಾನ ವ್ಯಕ್ತಪಡಿಸಿದ ರಘುಪತಿ ಭಟ್, ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ತಪ್ಪಿದ್ದಕ್ಕಿಂತಲೂ ವಿಧಾನ ಪರಿಷತ್ ಸ್ಥಾನ ನೀಡುವುದಾಗಿ ಹೇಳಿ, ಕೊನೆಗೆ ಅವಕಾಶ ನೀಡದಿರುವುದು ನೋವು ತಂದಿದೆ ಎಂದರು.
ತಮ್ಮದೇ ಪಕ್ಷದ ಕೆಲವು ಶಾಸಕರಿಂದ ವೈಯಕ್ತಿಕ ದಬ್ಬಾಳಿಕೆ ಎದುರಿಸಬೇಕಾಯಿತು ಎಂದು ಆರೋಪಿಸಿದ ಅವರು, ಈ ವಿಚಾರದಲ್ಲಿ ಸಂಘದ ಹಿರಿಯರು ಹಾಗೂ ಬಿಜೆಪಿಯ ನಾಯಕರು ತಮ್ಮೊಂದಿಗೆ ಮಾತನಾಡದಿರುವುದು ಬೇಸರ ತಂದಿದೆ ಎಂದು ಹೇಳಿದರು.
“ನನ್ನ ಹತ್ತಿರದ ಕ್ಷೇತ್ರಗಳ ಮಾಜಿ ಶಾಸಕರನ್ನು ಗೌರವದಿಂದ ಕಾಣಲಾಗುತ್ತದೆ. ನನಗೆ ವಿಶೇಷ ಗೌರವ ಬೇಡ. ಕನಿಷ್ಠ ಬಹುವಚನದಲ್ಲಿ ಮಾತನಾಡಿದ್ದರೂ ಸಾಕಿತ್ತು. ಈ ಎಲ್ಲ ಘಟನೆಗಳು ಮಾನಸಿಕವಾಗಿ ನೋವುಂಟುಮಾಡಿವೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.
2028ರ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಮಾತನಾಡಿದ ಅವರು, ಕ್ಷೇತ್ರದ ಜನರು ನನ್ನನ್ನು ಸೋಲಿಸಿಲ್ಲ. ಪಕ್ಷವೇ ನನಗೆ ಟಿಕೆಟ್ ತಪ್ಪಿಸಿದೆ ಎಂಬ ಭಾವನೆ ಜನರಲ್ಲಿದೆ. ಜನರು ಸ್ಪರ್ಧಿಸುವಂತೆ ಒತ್ತಾಯಿಸುತ್ತಿದ್ದಾರೆ. ಜನರು ಬೇಡ, ನೀವು ಚುನಾವಣೆಗೆ ನಿಲ್ಲಬೇಡಿ ಎಂದು ಹೇಳಿದರೆ ಮನೆಯಲ್ಲೇ ಕುಳಿತುಕೊಳ್ಳುತ್ತೇನೆ. ಜನರ ಕೆಲಸ ಮಾಡಲು ಜನಪ್ರತಿನಿಧಿಯಾಗಲೇಬೇಕೆಂದಿಲ್ಲ. ಚುನಾವಣಾ ರಾಜಕೀಯದಿಂದ ದೂರವಿದ್ದರೂ ಜನರಿಗೆ ಸಹಾಯ ಮಾಡಬಹುದು ಎಂದು ರಘುಪತಿ ಭಟ್ ಹೇಳಿದರು
-
ದಕ್ಷಿಣ ಕನ್ನಡ20 hours ago
ಕಳವು ಮಾಡಿ ಮನೆಗೆ ಬೆಂಕಿ ಹಚ್ಚಿದ ಶಂಕೆ: ಪುತ್ತೂರಿನಲ್ಲಿ ಪ್ರಕರಣ ದಾಖಲು
-
ಅಂತರ ರಾಜ್ಯ18 hours agoRestaurant-ನೀರಿನ ಬಾಟ್ಲಿಗೆ ₹2 ಹೆಚ್ಚುವರಿ ವಸೂಲಿ; ರೆಸ್ಟೋರೆಂಟ್ಗೆ ₹1 ಲಕ್ಷ ದಂಡ..!
-
ಕಾರ್ಯಕ್ರಮಗಳು12 hours agoPuttur-ಪುತ್ತೂರು: ಅ.16ರಂದು ಪ್ರವೀಣ್ ಕ್ಯಾಪಿಟಲ್ನ ನವೀಕೃತ ಪ್ರಧಾನ ಕಚೇರಿ ಉದ್ಘಾಟನೆ
-
ಸುಳ್ಯ19 hours ago
ಸಿಜೆಪಿ ಮುಖಂಡರಾದ ಸೌರವ್ ದಾಸ್, ಅಶುತೋಷ್ ರಾಂಕಾ ಮತ್ತು ಅಜಿಂಕ್ಯ ಶಿಂಧೆ ಬಂಧನ, ತಿಹಾರ್ ಜೈಲಿಗೆ ಶಿಫ್ಟ್ ಸಾಧ್ಯತೆ
-
Uncategorized18 hours agoKumaraswamy-ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯ ಮೌನವಾಗಿರಬಾರದು – ಸಿಬಿಐ ತನಿಖೆಗೆ ಕುಮಾರಸ್ವಾಮಿ ಆಗ್ರಹ
-
ನಿಧನ ವಾರ್ತೆ18 hours agoBoat Sink-ಹಾಜಿಪುರ: ಗಂಗಾ ನದಿಯಲ್ಲಿ ದೋಣಿ ಮುಳುಗಿ 11 ಮಂದಿ ಸಾವು
-
ಕಾರ್ಯಕ್ರಮಗಳು12 hours agoPuttur-ಪುತ್ತೂರು: ಅ.15ರಂದು ‘ಮೈ ಡ್ರೆಸ್ ಕೋಡ್’ ನೂತನ ಮಳಿಗೆ ಗ್ರಾಂಡ್ ರೀ-ಓಪನಿಂಗ್
-
ಬಿಗ್ ನ್ಯೂಸ್19 hours agoG.L. Acharya Jewellers-ವಿಜಯದಶಮಿ ಪ್ರಯುಕ್ತ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ನಿಂದ ವಿಶೇಷ ಕೊಡುಗೆ


















