ಸ್ಥಳೀಯ
Eshwar B. Khandre-ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಕುಟುಂಬ ಸಮೇತ ಧರ್ಮಸ್ಥಳಕ್ಕೆ ಭೇಟಿ
ಕರ್ನಾಟಕ ಸರ್ಕಾರದ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರಾದ ಈಶ್ವರ ಬಿ. ಖಂಡ್ರೆ ಅವರು ಕುಟುಂಬ ಸಮೇತರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಧರ್ಮಸ್ಥಳ, ಮೇ 26: ಕರ್ನಾಟಕ ಸರ್ಕಾರದ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರಾದ ಈಶ್ವರ ಬಿ. ಖಂಡ್ರೆ ಅವರು ಕುಟುಂಬ ಸಮೇತರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಚಿವರು ಹಾಗೂ ಅವರ ಕುಟುಂಬದ ಸದಸ್ಯರು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ಅಪರಾಧ
Mangalore-Big Breaking:ಮಂಗಳೂರು: ಕದ್ರಿ ಯುದ್ಧ ಸ್ಮಾರಕದಲ್ಲಿರುವ ಟಿ-55 ಟ್ಯಾಂಕ್ ಮೇಲೆ ಹತ್ತಿ ಯುವಕರ ಹುಚ್ಚಾಟ; ವಿಡಿಯೋ ವೈರಲ್, ಸಾರ್ವಜನಿಕರ ಆಕ್ರೋಶ
ಮಂಗಳೂರು ನಗರದ ಕದ್ರಿ ಯುದ್ಧ ಸ್ಮಾರಕದ ಬಳಿ ಸಾರ್ವಜನಿಕರ ವೀಕ್ಷಣೆಗೆ ಇರಿಸಲಾಗಿರುವ ಯುದ್ಧ ಟ್ಯಾಂಕ್ ಮೇಲೆ ಹತ್ತಿ ಇಬ್ಬರು ಯುವಕರು ಅಸಭ್ಯವಾಗಿ ವರ್ತಿಸಿರುವ ಘಟನೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಮಂಗಳೂರು: ನಗರದ ಕದ್ರಿ ಯುದ್ಧ ಸ್ಮಾರಕದ ಬಳಿ ಸಾರ್ವಜನಿಕರ ವೀಕ್ಷಣೆಗೆ ಇರಿಸಲಾಗಿರುವ ಯುದ್ಧ ಟ್ಯಾಂಕ್ ಮೇಲೆ ಹತ್ತಿ ಇಬ್ಬರು ಯುವಕರು ಅಸಭ್ಯವಾಗಿ ವರ್ತಿಸಿರುವ ಘಟನೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಮಂಗಳೂರು ಸರ್ಕೀಟ್ ಹೌಸ್ ಮುಂಭಾಗದ ಕದ್ರಿ ಯುದ್ಧ ಸ್ಮಾರಕದ ಬಳಿ 1971ರಲ್ಲಿ ಪಾಕಿಸ್ತಾನದ ವಿರುದ್ಧದ ಯುದ್ಧದಲ್ಲಿ ಭಾಗವಹಿಸಿದ್ದ ಟಿ-55 ಯುದ್ಧ ಟ್ಯಾಂಕ್ನ್ನು ಸಾರ್ವಜನಿಕರ ವೀಕ್ಷಣೆಗಾಗಿ ಎತ್ತರದ ವೇದಿಕೆಯಲ್ಲಿ ಇರಿಸಲಾಗಿದೆ.
ರಾತ್ರಿ ವೇಳೆ ಇಬ್ಬರು ಯುವಕರು ಟ್ಯಾಂಕ್ ಮೇಲೆ ಹತ್ತಿ, ಅದರ ಹ್ಯಾಚ್ ತೆರೆದು ಒಳಗೆ ಪ್ರವೇಶಿಸಿ ಅಸಭ್ಯವಾಗಿ ವರ್ತಿಸಿದ್ದಾರೆ ಎನ್ನಲಾಗಿದೆ. ತಮ್ಮ ಕಿಡಿಗೇಡಿತನದ ವರ್ತನೆಯನ್ನು ವಿಡಿಯೋ ಮಾಡಿಕೊಂಡಿರುವ ಯುವಕರು, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದು, ವಿಡಿಯೋ ಇದೀಗ ವೈರಲ್ ಆಗಿದೆ.
ದೇಶದ ಯುದ್ಧ ಇತಿಹಾಸ ಹಾಗೂ ಸೈನಿಕರ ಶೌರ್ಯ, ತ್ಯಾಗದ ಸಂಕೇತವಾಗಿ ಇರಿಸಲಾಗಿರುವ ಟ್ಯಾಂಕ್ ಬಳಿ ಯುವಕರು ಇಂತಹ ವರ್ತನೆ ತೋರಿರುವುದಕ್ಕೆ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಶಿಕ್ಷಣ
Ambika-ಅಂಬಿಕಾ ವಿದ್ಯಾಲಯದಲ್ಲಿ ಆರ್ಟ್ ಆಫ್ ಲಿವಿಂಗ್ನ ಸಹಜ ಸಮಾಧಿ ಧ್ಯಾನ ಶಿಬಿರ
ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ಆರ್ಟ್ ಆಫ್ ಲಿವಿಂಗ್ ಪುತ್ತೂರು ಘಟಕದ ವತಿಯಿಂದ “ಸಹಜ ಸಮಾಧಿ ಧ್ಯಾನ ಯೋಗ” ಶಿಬಿರವನ್ನು ಹಮ್ಮಿಕೊಳ್ಳಲಾಯಿತು.
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ಆರ್ಟ್ ಆಫ್ ಲಿವಿಂಗ್ ಪುತ್ತೂರು ಘಟಕದ ವತಿಯಿಂದ “ಸಹಜ ಸಮಾಧಿ ಧ್ಯಾನ ಯೋಗ” ಶಿಬಿರವನ್ನು ಹಮ್ಮಿಕೊಳ್ಳಲಾಯಿತು.
ಅಷ್ಟಾಂಗ ಯೋಗದ ಪ್ರಕಾರ ಧ್ಯಾನದ ಅತ್ಯಂತ ಆಳವಾದ ಸ್ಥಿತಿಯಾದ ಸಮಾಧಿ ಸ್ಥಿತಿಯನ್ನು ಅನಾಯಾಸವಾಗಿ ಸರಳವಾಗಿ ನಿತ್ಯವೂ ಅನುಭವಿಸಲು ಸಹಕಾರಿಯಾದ ಈ ಯೋಗ ಶಿಬಿರವನ್ನು ಆರ್ಟ್ ಆಫ್ ಲಿವಿಂಗ್ನ ಅಂತರಾಷ್ಟ್ರೀಯ ಶಿಕ್ಷಕ ಯಾದವ ಜೀ ನಡೆಸಿಕೊಟ್ಟರು. ಶಿಬಿರದಲ್ಲಿ ೮೮ ಮಂದಿ ಭಾಗವಹಿಸಿ ಧ್ಯಾನ ಮಾಡುವ ಕ್ರಮವನ್ನು ಕಲಿತುಕೊಂಡರು.
ಸಹಾಯಕ ಶಿಕ್ಷಕರಾಗಿ ಮಂಗಳೂರಿನ ರಜನಿ ರೈ ಸಹಕರಿಸಿದರು. ಸಹಜ ಸಮಾಧಿ ಧ್ಯಾನವನ್ನು ಕಲಿಸುವುದಕ್ಕಾಗಿ ತರಬೇತಿಯನ್ನು ಪಡೆಯುತ್ತಿರುವ ಶರಾವತಿ ರವಿ ನಾರಾಯಣ, ಆರ್ಟ್ ಆಫ್ ಲಿವಿಂಗ್ ಪುತ್ತೂರಿನ ಮುಖ್ಯಸ್ಥರಾದ ಕುಮಾರ ಸುಬ್ರಹ್ಮಣ್ಯ ಭಟ್, ಸತ್ಯವತಿ ಕೆ ಎಸ್, ಸುಧಾ ಹೆಬ್ಬಾರ್, ಭಾರತಿ ಜಯರಾಮ್ ಹಾಗೂ ಸಂಸ್ಥೆಯ ಎಲ್ಲಾ ಸ್ವಯಂಸೇವಕರು ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಿದರು.
ಸಮಾರೋಪ ಸಮಾರಂಭದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಭಾಗವಹಿಸಿ, ಪ್ರೇರಣೆ ನೀಡಿದರು.
ಶಿಕ್ಷಣ
Vivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಲಹರಿ ಕನ್ನಡ ಸಂಘ, ರಾಷ್ಟ್ರೀಯ ಸೇವಾ ಯೊಜನಾ ಘಟಕ ಹಾಗೂ ಇಂಡಿಯನ್ ಸೊಸೈಟಿ ಫಾರ್ ಟೆಕ್ನಿಕಲ್ ಎಜುಕೇಶನ್ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನಡೆಸಲಾದ ಒಂದು ವಾರದ ಕನ್ನಡ ಕಾರ್ಯಕ್ರಮಗಳ ಆಚರಣೆಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಕೃಷಿಕ ಹಾಗೂ ಅಂಕಣಕಾರ ಮಹೇಶ್ ಪುಚ್ಚಪ್ಪಾಡಿ ಮಾತಾಡಿದರು.
ಪುತ್ತೂರು: ಇಂದಿನ ಕಾಲಘಟ್ಟದಲ್ಲಿ ಇಂಗ್ಲಿಷ್ ಭಾಷೆಯ ಅನಿವಾರ್ಯತೆ ಹೆಚ್ಚಾಗುತ್ತಿದೆ. ಇಂಗ್ಲಿಷ್ ಕೌಶಲ ಎಷ್ಟಿದ್ದರೂ ಕಡಿಮೆಯೇ ಎನ್ನುವ ಸ್ಪರ್ಧಾತ್ಮಕ ಜಗತ್ತು ನಮ್ಮ ಮುಂದಿರುವ ಇಂತಹ ಸಂದರ್ಭದಲ್ಲಿ ತಾಂತ್ರಿಕ ಶಿಕ್ಷಣ ಸಂಸ್ಥೆಯೊಂದರಲ್ಲಿ ಕನ್ನಡ ಸಂಘ ಇರುವುದು ಆಶಾದಾಯಕ. ಇದು ಕೇವಲ ಭಾಷಾ ಚಟುವಟಿಕೆಗಳಿಗೆ ಸೀಮಿತವಾಗದೆ ಹೊಸ ಸಾಧ್ಯತೆಗಳ ವೇದಿಕೆಯಾಗಲಿ ಎಂದು ಕೃಷಿಕ ಹಾಗೂ ಅಂಕಣಕಾರ ಮಹೇಶ್ ಪುಚ್ಚಪ್ಪಾಡಿ ಹೇಳಿದರು.
ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಲಹರಿ ಕನ್ನಡ ಸಂಘ, ರಾಷ್ಟ್ರೀಯ ಸೇವಾ ಯೊಜನಾ ಘಟಕ ಹಾಗೂ ಇಂಡಿಯನ್ ಸೊಸೈಟಿ ಫಾರ್ ಟೆಕ್ನಿಕಲ್ ಎಜುಕೇಶನ್ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನಡೆಸಲಾದ ಒಂದು ವಾರದ ಕನ್ನಡ ಕಾರ್ಯಕ್ರಮಗಳ ಆಚರಣೆಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತಾಡಿದರು.

ಕನ್ನಡ ನಮ್ಮ ಬೇರು, ತಂತ್ರಜ್ಞಾನ ನಮ್ಮ ರೆಕ್ಕೆ, ಜಗತ್ತಿನ ಯಾವುದೇ ತಂತ್ರಜ್ಞಾನವನ್ನು ಕಲಿಯಬಹುದು. ಆದರೆ ನಮ್ಮ ಬೇರುಗಳನ್ನು ಮರೆಯಬಾರದು. ಜಾಗತಿಕವಾಗಿ ಬೆಳೆಯಲು ಇಂಗ್ಲಿಷ್ ಬೇಕಾದರೆ ನಮ್ಮ ನೆಲದೊಂದಿಗೆ ಬೆಸೆಯಲು ಕನ್ನಡ ಬೇಕು ಎಂದರು. ಕೈಯಲ್ಲಿ ಮೊಬೈಲಿದೆ, ತಲೆಯಲ್ಲಿ ತಂತ್ರಜ್ಞಾನವಿದೆ, ಮುಂದೆ ವಿಶಾಲ ಜಗತ್ತಿದೆ ಈ ಮೂರರ ನಡುವೆ ಕನ್ನಡವನ್ನು ಕಳೆದುಕೊಳ್ಳಬೇಡಿ ಎಂದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕ ಮನೋಜ್ ಕುಮಾರ್ ಮಾತನಾಡಿ ಪ್ರತಿಯೊಬ್ಬನಿಗೂ ಮಾತೃ ಭಾಷೆಯ ಮೇಲೆ ಅಪಾರ ಅಭಿಮಾನವಿರಬೇಕು. ನಾವು ಎಲ್ಲಿ ಹೋದರು, ಎಷ್ಟೇ ದೊಡ್ಡ ಹುದ್ದೆಯನ್ನು ಅಲಂಕರಿಸಿದರೂ ನಮ್ಮತನವನ್ನು ಎಂದಿಗೂ ಕಳೆದುಕೊಳ್ಳಬಾರದು ಎಂದರು. ದೇಶ-ಭಾಷೆ, ನಾಡು-ನುಡಿ, ನೆಲ-ಜಲದ ವಿಷಯದಲ್ಲಿ ಎಲ್ಲರೂ ಒಂದಾಗಿ ಅದರ ಸಾರ್ವಭೌಮತೆಯನ್ನು ಎತ್ತಿಹಿಡಿಯಬೇಕು ಎಂದು ಹೇಳಿದರು.
ರಾಜ್ಯೋತ್ಸವ ದಿನಾಚರಣೆಯ ಪ್ರಯುಕ್ತ ನಡೆಸಲಾದ ವಾಗ್-ವೈಖರಿ, ಸಮ್ವಾದ, ಜಸ್ಟ್ಮಾತು, ಮೇಧಮಂಥನ, ಪಿಕ್ಸೆಲ್ಪುಟ, ಭಾವಕುಂಚ ಮತ್ತು ಅನ್ವೇಷಣಾ ಹೀಗೆ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಲಹರಿ ಕನ್ನಡ ಸಂಘದ ಸಂಯೋಜಕ ಪ್ರೊ.ನವೀನ್.ಸಿ ಮತ್ತು ವಿದ್ಯಾರ್ಥಿ ಸಂಯೋಜಕ ಆದಿತ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕನ್ನಡ ಗೀತೆಗಳ ಗಾಯನದಿಂದ ಕಾರ್ಯಕ್ರಮ ಪ್ರಾರಂಭವಾಯಿತು. ಪ್ರೊ.ನವೀನ್.ಸಿ ಸ್ವಾಗತಿಸಿ, ಪ್ರಸ್ತಾವನೆಗೈದರು. ಆದಿತ್ಯ ವಂದಿಸಿದರು. ಅನಿತಾ ಕಾರ್ಯಕ್ರಮ ನಿರ್ವಹಿಸಿದರು.
-
ಸ್ಥಳೀಯ23 hours agoWedding-ಕ್ಯಾಸೆಟ್ಗಳ ಅಬ್ಬರವಿಲ್ಲ, ಡ್ಯಾನ್ಸ್ಗಳ ಹಂಗಿಲ್ಲ; ಅದ್ದೂರಿತನಕ್ಕೆ ಬ್ರೇಕ್ ಹಾಕಿ ಸರಳತೆಯಲ್ಲೇ ಮದುವೆ ಸಂಭ್ರಮ..!
-
ಶಿಕ್ಷಣ16 hours agoVidyamata Academy-ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆಯಲ್ಲೂ ಅಮೋಘ ಸಾಧನೆ ಮುಂದುವರಿಸಿದ ವಿದ್ಯಾಮಾತಾ ಅಕಾಡೆಮಿ
-
ಮಂಗಳೂರು16 hours agoGirish Mattannavar-ಸೌಜನ್ಯ ಪ್ರಕರಣ: ಎಸ್ಐಟಿಗೆ ದಾಖಲೆಗಳ ʼಬ್ಯಾಗ್ʼ ಸಲ್ಲಿಸಿದ ಗಿರೀಶ್ ಮಟ್ಟಣ್ಣನವರ್; ಸೌಜನ್ಯ ಪ್ರಕರಣದಲ್ಲಿ ಆರ್. ಅಶೋಕ್ ಪಾತ್ರದ ಕುರಿತು ಸ್ಪೋಟಕ ಹೇಳಿಕೆ..!
-
ಬಿಗ್ ನ್ಯೂಸ್22 hours agoRailway-ರೈಲ್ವೆ ಗುಂಪು ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಬರ್ತ್ಗಳ ಸಂಖ್ಯೆಗೆ ಮಿತಿ ರದ್ದು, ಬೆಳಗ್ಗೆ 9ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ..!
-
ಬಿಗ್ ನ್ಯೂಸ್18 hours agoRakesh Shetty-ಸ್ಟಿಂಗ್ ಹೆಸರಿನಲ್ಲಿ ಜನಪ್ರತಿನಿಧಿಗಳ ಬ್ಲ್ಯಾಕ್ಮೇಲ್ ಆರೋಪ: ರಾಕೇಶ್ ಶೆಟ್ಟಿ ವಿರುದ್ಧ ಕ್ರಮಕ್ಕೆ ಒಳಾಡಳಿತ ಇಲಾಖೆಯಿಂದ ಡಿಜಿಪಿಗೆ ಪತ್ರ
-
ಕಾರ್ಯಕ್ರಮಗಳು18 hours agoVitla-ವಿಟ್ಲ: ನ.25ರಂದು ಮೈತ್ರೇಯಿ ಆಯುರ್ವೇದ ಗುರುಕುಲಂ ಮತ್ತು ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭ; 20 ಹಾಸಿಗೆಗಳ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ಉದ್ಘಾಟನಾ ಸಮಾರಂಭ; ಆಯುರ್ವೇದದ ಅಮೂಲ್ಯವಾದ ಸನಾತನ ಜ್ಞಾನವನ್ನು ಸಂರಕ್ಷಿಸಿ, ಬೆಳೆಸಿ, ಮುಂದಿನ ಪೀಳಿಗೆಗೆ ತಲುಪಿಸುವುದು ಅಜೇಯ ಟ್ರಸ್ಟ್ನ ಪ್ರಮುಖ ಉದ್ದೇಶವಾಗಿದೆ- ಡಾ. ಸುಧಾರಾವ್
-
ಅಪರಾಧ17 hours agoArrest-ಸಾಲದ ಇಎಂಐ ಕಟ್ಟಲು ಸ್ನೇಹಿತನನ್ನೇ ಕೊಂದು ₹63 ಸಾವಿರ ದೋಚಿದ ಆರೋಪ: ಉತ್ತರ ಪ್ರದೇಶದಲ್ಲಿ ಆರೋಪಿ ಬಂಧನ
-
ಶಿಕ್ಷಣ16 hours agoVivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ















