ಸ್ಥಳೀಯ
Vijayendra-‘ಸಿದ್ದರಾಮಯ್ಯ ಅಷ್ಟು ಸುಲಭದಲ್ಲಿ ರಾಜೀನಾಮೆ ಕೊಡುವವರಲ್ಲ’ ಯಾರೇ ಸಿಎಂ ಆದರೂ ಮಧ್ಯಂತರ ಚುನಾವಣೆ ಪಕ್ಕ : ವಿಜಯೇಂದ್ರ
ಕರ್ನಾಟಕದ ಕಾಂಗ್ರೆಸ್ ಸರ್ಕಾರದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ತಾರಕಕ್ಕೇರಿರುವ ನಡುವೆಯೇ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. “ಕಳೆದ ಮೂರು ವರ್ಷಗಳಲ್ಲಿ ಸಿದ್ದರಾಮಯ್ಯ ಅವರು ಆಡಳಿತ ನೀಡುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂಬ ನಿರ್ಧಾರಕ್ಕೆ ಕಾಂಗ್ರೆಸ್ ಹೈಕಮಾಂಡ್ ಬಂದಿದೆ. ಹೀಗಾಗಿ ಅವರ ಬದಲಾವಣೆ ಈಗ ಅನಿವಾರ್ಯವಾಗಿದೆ,” ಎಂದು ಅವರು ಬುಧವಾರ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ಶಿವಮೊಗ್ಗ: ಕರ್ನಾಟಕದ ಕಾಂಗ್ರೆಸ್ ಸರ್ಕಾರದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ತಾರಕಕ್ಕೇರಿರುವ ನಡುವೆಯೇ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. “ಕಳೆದ ಮೂರು ವರ್ಷಗಳಲ್ಲಿ ಸಿದ್ದರಾಮಯ್ಯ ಅವರು ಆಡಳಿತ ನೀಡುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂಬ ನಿರ್ಧಾರಕ್ಕೆ ಕಾಂಗ್ರೆಸ್ ಹೈಕಮಾಂಡ್ ಬಂದಿದೆ. ಹೀಗಾಗಿ ಅವರ ಬದಲಾವಣೆ ಈಗ ಅನಿವಾರ್ಯವಾಗಿದೆ,” ಎಂದು ಅವರು ಬುಧವಾರ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ಸಿದ್ದರಾಮಯ್ಯ ರಾಜೀನಾಮೆ ಅಂತಿಮ?
ದೆಹಲಿಯಲ್ಲಿ ನಡೆದ ಸುದೀರ್ಘ ಸಭೆಗಳ ಬಳಿಕ ಸಿದ್ದರಾಮಯ್ಯ ಅವರ ರಾಜೀನಾಮೆಯ ನಿರ್ಧಾರ ಅಂತಿಮಗೊಂಡಿದೆ ಎಂದು ವಿಜಯೇಂದ್ರ ಪ್ರತಿಪಾದಿಸಿದರು. “ಮುಂದಿನ ಮುಖ್ಯಮಂತ್ರಿ ಯಾರೇ ಆದರೂ ಅವರು ಪೂರ್ಣಾವಧಿ ಪೂರೈಸುವುದಿಲ್ಲ. ರಾಜ್ಯದಲ್ಲಿ ಅವಧಿಗೂ ಮುನ್ನವೇ ವಿಧಾನಸಭೆ ಚುನಾವಣೆ ನಡೆಯುವುದು ಖಚಿತ,” ಎಂದು ಅವರು ಭವಿಷ್ಯ ನುಡಿದರು.
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕಳೆದ ಮೂರು ವರ್ಷಗಳಲ್ಲಿ ಉತ್ತಮ ಆಡಳಿತ ನೀಡಲು ವಿಫಲವಾಗಿದೆ ಎಂಬುದನ್ನು ಕಾಂಗ್ರೆಸ್ ಹೈಕಮಾಂಡ್ ಇಂದು ಒಪ್ಪಿಕೊಂಡಿದೆ. ಆದ್ದರಿಂದ ಮುಖ್ಯಮಂತ್ರಿ ಬದಲಾವಣೆ ಮಾಡಲು ತೀರ್ಮಾನಿಸಿದೆ ಎಂದು ಅವರು ಶಿವಮೊಗ್ಗದಲ್ಲಿ ಸುದ್ದಿಗಾರರಿಗೆ ತಿಳಿಸಿದರು.
ನಿನ್ನೆ ದೆಹಲಿಯಲ್ಲಿ ನಡೆದ ದೀರ್ಘ ಸಭೆಗಳ ಬಳಿಕ, ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು ಎಂಬ ನಿರ್ಧಾರ ಅಂತಿಮಗೊಂಡಿದೆ ಎಂದು ಅವರು ಹೇಳಿದರು. ಮುಂದಿನ ಮುಖ್ಯಮಂತ್ರಿ ಯಾರು ಎನ್ನುವುದು ಮುಖ್ಯವಲ್ಲ. ರಾಜ್ಯದ ಆಡಳಿತದ ಸ್ಥಿತಿ ಏನಾಗಿದೆ ಎನ್ನುವುದೇ ಮುಖ್ಯ ಎಂದು ವಿಜಯೇಂದ್ರ ಹೇಳಿದರು.
ರಾಜ್ಯ ಯಾವ ದಿಕ್ಕಿಗೆ ಸಾಗುತ್ತಿದೆ ಎಂಬುದರ ಬಗ್ಗೆ ಪ್ರತಿಯೊಬ್ಬರೂ ಯೋಚಿಸಬೇಕಾದ ಪರಿಸ್ಥಿತಿ ಬಂದಿದೆ. ಕಾಂಗ್ರೆಸ್ ನಲ್ಲಿ ಒಳಜಗಳಗಳಿಂದ ಆಡಳಿತ ಸಂಪೂರ್ಣ ಕುಸಿದಿದೆ ಎಂದು ಅವರು ಆರೋಪಿಸಿದರು.
ಅಕ್ರಮಗಳ ಕುರಿತು ಮಾತನಾಡಿದ ಅವರು, ಪ್ರಸ್ತುತ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಮತ್ತು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆ ಹಗರಣಗಳಂತಹ ಪ್ರಕರಣಗಳು ನಡೆದಿವೆ ಎಂದು ಹೇಳಿದರು.
2024ರ ಲೋಕಸಭಾ ಚುನಾವಣೆಯ ವೇಳೆ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ 87 ಕೋಟಿ ರೂಪಾಯಿ ಹಣದ ಅಕ್ರಮ ವರ್ಗಾವಣೆಯನ್ನು ಉಲ್ಲೇಖಿಸುತ್ತಿದ್ದರು. ಈ ಪ್ರಕರಣದಲ್ಲಿ ಲೆಕ್ಕಾಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರು ಬರೆದಿದ್ದರು ಎನ್ನಲಾದ ಡೆತ್ ನೋಟ್ ನಲ್ಲಿ ಹಗರಣವನ್ನು ಬಹಿರಂಗಪಡಿಸಿತ್ತು.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA) ಹಗರಣದಲ್ಲಿ ಸಿದ್ದರಾಮಯ್ಯ, ಅವರ ಪತ್ನಿ ಹಾಗೂ ಸಂಬಂಧಿಕರೊಬ್ಬರು ಆರೋಪಿಗಳಾಗಿದ್ದರು.
ಈ ಪ್ರಕರಣದ ತನಿಖೆ ನಡೆಸಿದ ಲೋಕಾಯುಕ್ತ ಪೊಲೀಸರು ತಮ್ಮ ವರದಿಯಲ್ಲಿ ಅವರಿಗೆ ಕ್ಲೀನ್‌ಚಿಟ್ ನೀಡಿದ್ದು, ನ್ಯಾಯಾಲಯ ಅದನ್ನು ಸ್ವೀಕರಿಸಿದೆ.
ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಾಲದ ಬಲೆಗೆ ಸಿಲುಕಿದೆ ಎಂದು ವಿಜಯೇಂದ್ರ ಆರೋಪಿಸಿದರು. ದಕ್ಷಿಣ ಭಾರತದ ಇತರೆ ರಾಜ್ಯಗಳೊಂದಿಗೆ ಹೋಲಿಸಿದರೆ, ಸಿದ್ದರಾಮಯ್ಯ ಅವರು ರಾಜ್ಯವನ್ನು ಸುಮಾರು 10 ಲಕ್ಷ ಕೋಟಿ ರೂಪಾಯಿ ಸಾಲದ ಹೊರೆಗೆ ತಳ್ಳಿದ್ದಾರೆ. ರಾಜ್ಯ ಯಾವ ಮಟ್ಟಿಗೆ ಸಾಲದ ಬಲೆಗೆ ಸಿಲುಕಿದೆ ಎಂಬುದನ್ನು ನಾವು ಅರ್ಥಮಾಡಿಕೊಳ್ಳಬೇಕು ಎಂದು ಶಿಕಾರಿಪುರ ಶಾಸಕರೂ ಆಗಿರುವ ವಿಜಯೇಂದ್ರ ಹೇಳಿದರು.
ರಾಜ್ಯದಲ್ಲಿ ಅವಧಿಗೂ ಮುನ್ನ ಚುನಾವಣೆ ನಡೆಯಲಿದೆ ಎಂದು ಭವಿಷ್ಯ ನುಡಿದ ಅವರು, ಸಿದ್ದರಾಮಯ್ಯ ರಾಜೀನಾಮೆ ನೀಡಿ ಯಾರು ಬಂದರೂ ಆಡಳಿತದಲ್ಲಿ ಗೊಂದಲ ಉಂಟಾಗುವುದನ್ನು ಜನರು ಕಾಣುತ್ತಾರೆ ಎಂದರು.
ಕರ್ನಾಟಕದಲ್ಲಿ ಮುಂಗಡ ಚುನಾವಣೆ ಖಚಿತವಾಗಿ ನಡೆಯಲಿದೆ. ಅದನ್ನು ಯಾರೂ ತಡೆಯಲು ಸಾಧ್ಯವಿಲ್ಲ ಎಂದು ವಿಜಯೇಂದ್ರ ಹೇಳಿದರು. ಕಾಂಗ್ರೆಸ್ ಪಕ್ಷದ ಒಳಭೇದಗಳು ಬಿಜೆಪಿಗೆ ಲಾಭ ತರುತ್ತವೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ವಿಜಯೇಂದ್ರ, ಬಿಜೆಪಿ ತನ್ನದೇ ಆದ ಕಾರ್ಯಸೂಚಿಯನ್ನು ಜನರ ಮುಂದೆ ಇಡುವುದರ ಮೇಲೆ ಗಮನಹರಿಸಲಿದೆ ಎಂದರು.
ಸರ್ಕಾರ ವಿರೋಧಿ ಅಲೆ ಎಂಬುದು ಕೇವಲ ಬೋನಸ್ ಮಾತ್ರ. ಮುಖ್ಯವಾದುದು ನಾವು ರಾಜ್ಯದ ಜನರಿಗೆ ಏನು ನೀಡುತ್ತೇವೆ ಎಂಬುದಾಗಿದೆ ಎಂದು ಅವರು ಹೇಳಿದರು.
ಇತ್ತೀಚೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬೀನ್ ಅವರ ಕರ್ನಾಟಕ ಭೇಟಿಯ ಬಗ್ಗೆ ಕೂಡ ವಿಜಯೇಂದ್ರ ಮಾತನಾಡಿದರು. ನಬೀನ್ ಅವರು ಬೆಂಗಳೂರಿನಲ್ಲಿ ಶಾಸಕರು, ಸಂಸದರು ಹಾಗೂ ಯುವ ಪ್ರತಿನಿಧಿಗಳೊಂದಿಗೆ ಕೋರ್ ಕಮಿಟಿ ಸಭೆ ನಡೆಸಿದರು. ಸಂಘಟನಾ ವಿಚಾರಗಳಲ್ಲಿ ನಿತಿನ್ ನಬಿನ್ ಅವರಿಗೆ ಅಪಾರ ಅನುಭವವಿದೆ. ಸಂಘಟನೆಯನ್ನು ಇನ್ನಷ್ಟು ಬಲಪಡಿಸುವ ದೃಢನಿಶ್ಚಯ ಮತ್ತು ಸಾಮರ್ಥ್ಯ ಅವರಿಗಿದೆ ಎಂದು ಹೇಳಿದರು.
ಪುತ್ತೂರು
ಮಾಣಿ : ಲೈನ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶ: ಪವರ್‌ಮ್ಯಾನ್ ಮೃತ್ಯು

ಪುತ್ತೂರು: ಕೆದಿಲ ಶಾಲೆಯ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಪವರ್‌ಮ್ಯಾನ್‌ವೊಬ್ಬರು ಮೃತಪಟ್ಟ ಘಟನೆ ಅ.3ರಂದು ನಡೆದಿದೆ.
ಮೃತರನ್ನು ಕೆಮ್ಮಾಯಿ ನಿವಾಸಿ ದಿ. ಗುಡ್ಡಪ್ಪ ಗೌಡರವರ ಪುತ್ರ ರವಿ ಗೌಡ ಎಂದು ಗುರುತಿಸಲಾಗಿದೆ. ಇವರು ಮೆಸ್ಕಾಂ ಬಂಟ್ವಾಳ ತಾಲೂಕಿನ ಮಾಣಿ ಸೆಕ್ಷನ್ ನಲ್ಲಿ ಪವರ್ ಮ್ಯಾನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಮೂಲಗಳ ಪ್ರಕಾರ, ಎಚ್‌ಟಿ (ಹೈಟೆನ್ಶನ್) ವಿದ್ಯುತ್ ಲೈನ್‌ನ ಜಿಒಎಸ್ (ಗ್ಯಾಂಗ್ ಆಪರೇಟಿಂಗ್ ಸ್ವಿಚ್) ತೆರೆಯುವ ಸಂದರ್ಭದಲ್ಲಿ ಅರ್ಥ್ ಆಗಿ ವಿದ್ಯುತ್ ಪ್ರವಹಿಸಿ ರವಿ ಗೌಡ ಅವರಿಗೆ ವಿದ್ಯುತ್ ಸ್ಪರ್ಶಿಸಿದೆ ಎನ್ನಲಾಗಿದೆ.
ಕೆದಿಲ ಪಾಟ್ರಕೋಡಿ, ಮಿತ್ತೂರು ಹಾಗೂ ಗಡಿಯಾರ ಭಾಗಗಳಲ್ಲಿ ಪವರ್‌ಮ್ಯಾನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ರವಿ ಗೌಡ ಅವರು, ತಮ್ಮ ಸೇವಾ ಮನೋಭಾವದಿಂದ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರರಾಗಿದ್ದರು. ಅವರ ಅಕಾಲಿಕ ನಿಧನ ಸ್ಥಳೀಯರಲ್ಲಿ ಆಘಾತ ಮೂಡಿಸಿದೆ.
ಅಪರಾಧ
Mangalore-ಮಂಗಳೂರು: ಸರಣಿ ಮನೆಕಳ್ಳತನ: ದೆಹಲಿ ಮೂಲದ ಇಬ್ಬರು ಕುಖ್ಯಾತ ಕಳ್ಳರ ಬಂಧನ; ₹18 ಲಕ್ಷ ಮೌಲ್ಯದ ಸೊತ್ತು ವಶ
ಮಂಗಳೂರು ನಗರದ ಬರ್ಕೆ ಹಾಗೂ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಕನ್ನ ಕಳವು ಪ್ರಕರಣಗಳಿಗೆ ಸಂಬಂಧಿಸಿ ದೆಹಲಿ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅರ್ಮಾನ್ ಖಾನ್ ಅಲಿಯಾಸ್ ಅಮನ್ ಸೋನಿ (34), ಸಂಜೀವ್ ಕುಮಾರ್ ಅಲಿಯಾಸ್ ಜಾನಿ (34) ಬಂಧಿತ ಆರೋಪಿಗಳು
ಮಂಗಳೂರು: ನಗರದ ಬರ್ಕೆ ಹಾಗೂ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಕನ್ನ ಕಳವು ಪ್ರಕರಣಗಳಿಗೆ ಸಂಬಂಧಿಸಿ ದೆಹಲಿ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಅರ್ಮಾನ್ ಖಾನ್ ಅಲಿಯಾಸ್ ಅಮನ್ ಸೋನಿ (34), ಸಂಜೀವ್ ಕುಮಾರ್ ಅಲಿಯಾಸ್ ಜಾನಿ (34) ಬಂಧಿತ ಆರೋಪಿಗಳು
ಸೆ.28ರಂದು ಅಳಕೆ ಕಂಬ್ಲ ಕ್ರಾಸ್ ರಸ್ತೆಯ ಸಹಯೋಗ ರೆಸಿಡೆನ್ಸಿ ಕಾಂಪ್ಲೆಕ್ಸ್‌ನ ಮನೆಯೊಂದರ ನಿವಾಸಿಗಳು ಮಧ್ಯಾಹ್ನ ಸುಮಾರು 3 ಗಂಟೆಗೆ ಮನೆಗೆ ಬೀಗ ಹಾಕಿಕೊಂಡು ಮಾರುಕಟ್ಟೆಗೆ ತೆರಳಿದ್ದರು. ಸಂಜೆ 5.10ರ ಸುಮಾರಿಗೆ ವಾಪಸ್ ಬಂದು ನೋಡಿದಾಗ ಮನೆಯ ಮುಂಭಾಗದ ಬಾಗಿಲಿನ ಕೊಂಡಿಯನ್ನು ಮುರಿದು ಕಳ್ಳರು ಒಳನುಗ್ಗಿರುವುದು ಕಂಡುಬಂದಿದೆ.
ಕಳ್ಳರು ಮನೆಯಲ್ಲಿದ್ದ ಸುಮಾರು ₹14 ಲಕ್ಷ ಮೌಲ್ಯದ ಚಿನ್ನಾಭರಣ, ನಗದು, ವಾಚ್ ಹಾಗೂ ಟ್ರಾಲಿ ಬ್ಯಾಗ್ ಸೇರಿದಂತೆ ಹಲವು ಸೊತ್ತುಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಈ ಕುರಿತು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದೇ ವೇಳೆ ಸೆ.27ರಂದು ಹಗಲು ವೇಳೆಯಲ್ಲಿ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಬೊಕ್ಕಪಟ್ಣ ರಸ್ತೆಯ ಮನೆಯೊಂದರಲ್ಲೂ ಕಳ್ಳತನ ನಡೆದಿತ್ತು. ಮನೆಯ ಲಾಕರ್‌ನ್ನು ಹೊಡೆದು ಕಳ್ಳತನಕ್ಕೆ ಯತ್ನಿಸಿದ್ದ ಆರೋಪಿಗಳು ಯಾವುದೇ ಬೆಲೆಬಾಳುವ ವಸ್ತು ಸಿಗದ ಹಿನ್ನೆಲೆಯಲ್ಲಿ ಚೆಕ್ ಪುಸ್ತಕಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಈ ಪ್ರಕರಣವೂ ಬರ್ಕೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.
ಎರಡೂ ಪ್ರಕರಣಗಳ ತನಿಖೆ ಕೈಗೊಂಡ ಪೊಲೀಸರು ಕೇಂದ್ರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಿ ಆರೋಪಿಗಳ ಚಲನವಲನದ ಬಗ್ಗೆ ಮಾಹಿತಿ ಸಂಗ್ರಹಿಸಿದರು. ಈ ವೇಳೆ ಆರೋಪಿಗಳು ಮನೆಕಳ್ಳತನ ನಡೆಸಿದ ಬಳಿಕ ರೈಲಿನಲ್ಲಿ ದೆಹಲಿ ಕಡೆಗೆ ಪ್ರಯಾಣಿಸುತ್ತಿರುವುದು ಪೊಲೀಸರಿಗೆ ತಿಳಿದುಬಂದಿದೆ.
ತಕ್ಷಣ ಗುಜರಾತ್‌ನ ವಡೋದರಾ ಪೊಲೀಸರ ಸಹಾಯ ಪಡೆದುಕೊಂಡ ಮಂಗಳೂರು ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಪ್ರಕರಣ ದಾಖಲಾಗಿದ್ದ 24 ಗಂಟೆಗಳೊಳಗಾಗಿ ಸೆ.29ರಂದು ವಡೋದರಾದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರಿಂದ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅವುಗಳ ಒಟ್ಟು ಮೌಲ್ಯ ಸುಮಾರು ₹18 ಲಕ್ಷ ಎಂದು ಅಂದಾಜಿಸಲಾಗಿದೆ.
ಬಂಧಿತ ಆರೋಪಿಗಳನ್ನು ವಡೋದರಾದಿಂದ ಮಂಗಳೂರಿಗೆ ಕರೆತಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಮುಂದಿನ ತನಿಖೆಗಾಗಿ ಆರೋಪಿಗಳನ್ನು ಪೊಲೀಸ್ ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿಗಳ ಪೈಕಿ ಅರ್ಮಾನ್ ಖಾನ್ ವಿರುದ್ಧ ದೆಹಲಿ, ಮುಂಬೈ, ಬೆಂಗಳೂರು, ಗೋವಾ ಹಾಗೂ ಹೈದರಾಬಾದ್ ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ 40ಕ್ಕೂ ಅಧಿಕ ಮನೆಕಳ್ಳತನ ಪ್ರಕರಣಗಳು ದಾಖಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ. ಆತನ ವಿರುದ್ಧ ವಾರಂಟ್ ಹಾಗೂ ಪ್ರೊಕ್ಲಮೇಶನ್ ಕೂಡ ಬಾಕಿ ಇದ್ದು, ಈ ಕುರಿತು ಸಂಬಂಧಪಟ್ಟ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡಲಾಗಿದೆ.
ಬಿಗ್ ನ್ಯೂಸ್
Nagalakshmi Chowdary-ಬಂಗ್ಲೆಗುಡ್ಡೆ ಏನೂ ಸ್ಮಶಾನ ಅಲ್ಲ : ಅಲ್ಲಿ ಯಾಕೆ ಅಷ್ಟು ಅಸ್ಥಿಪಂಜರಗಳು ಸಿಕ್ಕಿದವು..? ಧರ್ಮಸ್ಥಳ ಎಸ್ಐಟಿಗೆ ಹೆಚ್ಚಿನ ಅಧಿಕಾರ ನೀಡಬೇಕು..! : ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ
ಧರ್ಮಸ್ಥಳದಲ್ಲಿ ವರದಿಯಾಗಿರುವ ಅಸಹಜ ಸಾವುಗಳ ಕುರಿತು ನಡೆಯುತ್ತಿರುವ ತನಿಖೆಯಲ್ಲಿ ಹಲವು ದಾಖಲೆಗಳ ನಡುವೆ ವ್ಯತ್ಯಾಸ ಕಂಡುಬಂದಿರುವುದಾಗಿ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಸಲು ಪ್ರಸ್ತುತ ರಚಿಸಲಾಗಿರುವ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಸಂಪೂರ್ಣ ಅಧಿಕಾರ ನೀಡುವಂತೆ ಸರ್ಕಾರಕ್ಕೆ ಪತ್ರ ಬರೆದಿರುವುದಾಗಿ ಅವರು ಹೇಳಿದ್ದಾರೆ.
ಬೆಂಗಳೂರು: ಧರ್ಮಸ್ಥಳದಲ್ಲಿ ವರದಿಯಾಗಿರುವ ಅಸಹಜ ಸಾವುಗಳ ಕುರಿತು ನಡೆಯುತ್ತಿರುವ ತನಿಖೆಯಲ್ಲಿ ಹಲವು ದಾಖಲೆಗಳ ನಡುವೆ ವ್ಯತ್ಯಾಸ ಕಂಡುಬಂದಿರುವುದಾಗಿ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಸಲು ಪ್ರಸ್ತುತ ರಚಿಸಲಾಗಿರುವ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಸಂಪೂರ್ಣ ಅಧಿಕಾರ ನೀಡುವಂತೆ ಸರ್ಕಾರಕ್ಕೆ ಪತ್ರ ಬರೆದಿರುವುದಾಗಿ ಅವರು ಹೇಳಿದ್ದಾರೆ.
ಸಂವಾದವೊಂದರಲ್ಲಿ ಮಾತನಾಡಿದ ಚೌದರಿ , ಎಸ್‌ಐಟಿ ತನಿಖಾ ವರದಿಯಲ್ಲಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳ ಸಂಖ್ಯೆ ಹಾಗೂ ಗ್ರಾಮ ಪಂಚಾಯತ್‌ನಲ್ಲಿ ದಾಖಲಾಗಿರುವ ಸಾವುಗಳ ವಿವರಗಳಲ್ಲಿ ವ್ಯತ್ಯಾಸವಿದೆ. ಈ ಹಿನ್ನೆಲೆಯಲ್ಲಿ ಮತ್ತಷ್ಟು ಅಳವಾಗಿ ತನಿಖೆ ನಡೆಸಲು ಸರ್ಕಾರ ಅವಕಾಶ ನೀಡಬೇಕು ಎಂದು ಎಸ್‌ಐಟಿ ತಿಳಿಸಿದೆ ಎಂದು ನಾಗಲಕ್ಷ್ಮೀ ಚೌದರಿ ಹೇಳಿದ್ದಾರೆ.
ಬಂಗ್ಲೆ ಗುಡ್ಡೆಯಲ್ಲಿ ಹಲವಾರು ಅಸ್ತಿಪಂಜರಗಳು ಪತ್ತೆಯಾಗಿರುವ ಬಗ್ಗೆಯೂ ಅವರು ಪ್ರಶ್ನೆಗಳನ್ನು ಎತ್ತಿದ್ದಾರೆ. ಬಂಗ್ಲೆ ಗುಡ್ಡೆ ಸ್ಮಶಾನವಲ್ಲದಿದ್ದರೂ ಅಲ್ಲಿ ಇಷ್ಟೊಂದು ಎಲುಬುಗಳು ಮತ್ತು ಅಸ್ತಿಪಂಜರಗಳು ಪತ್ತೆಯಾಗಿರುವುದು ಹೇಗೆ ಎಂಬುದರ ಕುರಿತು ಉನ್ನತ ತನಿಖೆ ಅಗತ್ಯವಿದೆ ಎಂದು ತಿಳಿಸಿದ್ದಾರೆ.
ಪತ್ತೆಯಾದ ಕೆಲವು ಅಸ್ತಿಪಂಜರಗಳ ಪರೀಕ್ಷೆಯಲ್ಲಿ ಅವು ಪುರುಷರದ್ದು ಎಂಬ ಅಂಶ ಬೆಳಕಿಗೆ ಬಂದಿದೆ ಎಂದು ಅವರು ಹೇಳಿದ್ದಾರೆ. ಅಲ್ಲದೆ, ಒಂದು ಹುಡುಗಿಯ ಅಸ್ತಿಪಂಜರವನ್ನು ಆಸಿಡ್‌ನಿಂದ ಸುಟ್ಟಿರುವ ಸ್ಥಿತಿಯಲ್ಲಿ ಹೂತುಹಾಕಲಾಗಿದೆ ಎಂಬ ಮಾಹಿತಿ ನೀಡಲಾಗಿತ್ತು. ಆದರೆ, ಆ ವ್ಯಕ್ತಿ ಆಸಿಡ್‌ನಿಂದ ಮೃತಪಟ್ಟಿಲ್ಲ ಎಂಬುದು ಡಿಎನ್‌ಎ ವರದಿಯಲ್ಲಿ ತಿಳಿದುಬಂದಿದೆ ಎಂದು ನಾಗಲಕ್ಷ್ಮೀ ಚೌದರಿ ಹೇಳಿದ್ದಾರೆ.
ಈ ರೀತಿಯಾಗಿ ವಿವಿಧ ವರದಿಗಳ ನಡುವೆ ವ್ಯತ್ಯಾಸ ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಎಸ್‌ಐಟಿಗೆ ಪೂರಕ ತನಿಖೆ ನಡೆಸಲು ಸಂಪೂರ್ಣ ಅಧಿಕಾರ ನೀಡಬೇಕು ಎಂದು ಸರ್ಕಾರಕ್ಕೆ ಪತ್ರದ ಮೂಲಕ ಶಿಫಾರಸು ಮಾಡಿರುವುದಾಗಿ ಅವರು ತಿಳಿಸಿದ್ದಾರೆ.
ಪ್ರಸ್ತುತ ರಚನೆಯಾಗಿರುವ ಎಸ್‌ಐಟಿ ವ್ಯಾಪ್ತಿಗೆ ಈ ಹೊಸ ಮಾಹಿತಿಗಳು ಸ್ವಯಂಚಾಲಿತವಾಗಿ ಸೇರುತ್ತವೆಯೇ ಎಂಬ ಬಗ್ಗೆ ಕಾನೂನುಬದ್ಧ ಸ್ಪಷ್ಟತೆ ಅಗತ್ಯವಿದೆ. ಆದ್ದರಿಂದ ಸರ್ಕಾರ ಸ್ಪಷ್ಟ ಆದೇಶ ಹೊರಡಿಸಿ, ಈ ಎಲ್ಲ ವಿಷಯಗಳನ್ನು ಈಗಾಗಲೇ ರಚಿಸಿರುವ ಎಸ್‌ಐಟಿಗೆ ವಹಿಸಬೇಕು. ಅಗತ್ಯವಿದ್ದರೆ ಅದರ ‘ಟರ್ಮ್ಸ್ ಆಫ್ ರೆಫರೆನ್ಸ್’ (ತನಿಖೆಯ ವ್ಯಾಪ್ತಿ) ವಿಸ್ತರಿಸಬೇಕು ಎಂದು ಮಹಿಳಾ ಆಯೋಗ ಶಿಫಾರಸು ಮಾಡಿದೆ.
ಸರ್ಕಾರದ ಪ್ರತಿಕ್ರಿಯೆಗಾಗಿ ಇನ್ನೂ 15 ದಿನ ಕಾಯಲಾಗುವುದು. ಬಳಿಕ ಎರಡು ಬಾರಿ ಸರ್ಕಾರಕ್ಕೆ ನೆನಪಿನ ಪತ್ರ ಕಳುಹಿಸುವುದಾಗಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ತಿಳಿಸಿದ್ದಾರೆ.
-
ಪುತ್ತೂರು17 hours ago
ಮಾಣಿ : ಲೈನ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶ: ಪವರ್‌ಮ್ಯಾನ್ ಮೃತ್ಯು
-
ಬಿಗ್ ನ್ಯೂಸ್21 hours agoArshia Khan-ನವರಾತ್ರಿಗೆ ‘ಅಷ್ಟಭುಜ ಧಾರಿಣಿ ದೇವಿ’ಯಾಗಿ ಮಿಂಚಲಿರುವ ವಿಟ್ಲದ ಅರ್ಷಿಯಾ ಖಾನ್
-
ಮಂಗಳೂರು20 hours agoCM-ಒಂದು ಅಭಿನಂದನೆಯೂ ಇಲ್ಲ ಎಂದು ಕ್ರೀಡಾಪಟುವಿನಿಂದ ಬೇಸರ ವ್ಯಕ್ತವಾದ ಕೂಡಲೇ ಪೂವಮ್ಮಗೆ ಕರೆ ಮಾಡಿದ ಸಿಎಂ..! ಏನೂ ಹೇಳಿದ್ರು ಗೊತ್ತೇ..?
-
ಅಂತರ ರಾಜ್ಯ23 hours agoECI-ಮುಖ್ಯ ಚುನಾವಣ ಆಯುಕ್ತ ವಿರುದ್ಧ ದೇಶಾದ್ಯಂತ ಹೋರಾಟ ತೀವ್ರಗೊಳ್ಳುತ್ತಿದ್ದಂತೆ ‘ಬಿಟ್ಟು ಹೋದವರ ಹೆಸರು ಸೇರ್ಪಡೆಗೆ ಅಭಿಯಾನ’…! 20 ರಾಜ್ಯಗಳಲ್ಲಿ ಕೈಬಿಟ್ಟ 13 ಕೋಟಿ ಮತದಾರರ ಮರುಸೇರ್ಪಡೆಗೆ ಆಯೋಗ ಅವಕಾಶ
-
ಬಿಗ್ ನ್ಯೂಸ್19 hours agoNagalakshmi Chowdary-ಬಂಗ್ಲೆಗುಡ್ಡೆ ಏನೂ ಸ್ಮಶಾನ ಅಲ್ಲ : ಅಲ್ಲಿ ಯಾಕೆ ಅಷ್ಟು ಅಸ್ಥಿಪಂಜರಗಳು ಸಿಕ್ಕಿದವು..? ಧರ್ಮಸ್ಥಳ ಎಸ್ಐಟಿಗೆ ಹೆಚ್ಚಿನ ಅಧಿಕಾರ ನೀಡಬೇಕು..! : ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ
-
ಶಿಕ್ಷಣ20 hours agoSpecial classes: ಮಳೆ ರಜೆ ಹೊಂದಾಣಿಕೆ: ಅ.3ರಿಂದ ಅ.7ರವರೆಗೆ ದಸರಾ ರಜೆಯಲ್ಲೂ ವಿಶೇಷ ತರಗತಿ
-
ರಾಜ್ಯ23 hours agoTemperature-ಹಿಂಗಾರು ಮಳೆ ಇಳಿಮುಖ, ಬಿಸಿಲು ಏರುಮುಖ; ಕರ್ನಾಟಕಕ್ಕೆ ಹವಾಮಾನ ಎಚ್ಚರಿಕೆ..!
-
ಅಪರಾಧ19 hours agoMangalore-ಮಂಗಳೂರು: ಸರಣಿ ಮನೆಕಳ್ಳತನ: ದೆಹಲಿ ಮೂಲದ ಇಬ್ಬರು ಕುಖ್ಯಾತ ಕಳ್ಳರ ಬಂಧನ; ₹18 ಲಕ್ಷ ಮೌಲ್ಯದ ಸೊತ್ತು ವಶ


















