ಕಾರ್ಕಳ
Sunil Kumar-ಅರಸುರಂತೆ ಜನಪ್ರಿಯ ಓಬಿಸಿ ನಾಯಕ ಸಿದ್ದರಾಮಯ್ಯ ಪದಚ್ಯುತಿಗೊಳಿಸುವುದು ಐತಿಹಾಸಿಕ ದ್ರೋಹ – ಬಿಜೆಪಿ ನಾಯಕ ಸುನಿಲ್ ಕುಮಾರ್ : ‘ನಿಮ್ಮನೆಯಲ್ಲಿ ಹೆಗ್ಗಣ ಕೊಳೆಯುತ್ತಿದೆ’ ಕಾರ್ಯಕರ್ತರಿಂದ ಹಿಗ್ಗಾಮುಗ್ಗ ತರಾಟೆ..!
ಹಿಂದುಳಿದ ವರ್ಗದ (OBC) ನಾಯಕರಿಗೆ ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ಐತಿಹಾಸಿಕ ದ್ರೋಹ ಬಗೆದಿದೆ. ಅಂದು ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸು ಅವರನ್ನು ಹೀನಾಯವಾಗಿ ಪಟ್ಟದಿಂದ ಇಳಿಸಿದ ರೀತಿಯಲ್ಲೇ, ಇಂದು ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಪದಚ್ಯುತಗೊಳಿಸುವ ಮೂಲಕ ಓಬಿಸಿ ಸಮುದಾಯದ ರಾಜಕೀಯ ಉತ್ಕರ್ಷವನ್ನು ತಾನು ಸಹಿಸುವುದಿಲ್ಲ ಎಂಬುದನ್ನು ಕಾಂಗ್ರೆಸ್ ಹೈಕಮಾಂಡ್ ಮತ್ತೊಮ್ಮೆ ಸಾಬೀತು ಮಾಡಿದೆ ಎಂದು ಕಾರ್ಕಳ ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾರ್ಕಳ: ಹಿಂದುಳಿದ ವರ್ಗದ (OBC) ನಾಯಕರಿಗೆ ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ಐತಿಹಾಸಿಕ ದ್ರೋಹ ಬಗೆದಿದೆ. ಅಂದು ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸು ಅವರನ್ನು ಹೀನಾಯವಾಗಿ ಪಟ್ಟದಿಂದ ಇಳಿಸಿದ ರೀತಿಯಲ್ಲೇ, ಇಂದು ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಪದಚ್ಯುತಗೊಳಿಸುವ ಮೂಲಕ ಓಬಿಸಿ ಸಮುದಾಯದ ರಾಜಕೀಯ ಉತ್ಕರ್ಷವನ್ನು ತಾನು ಸಹಿಸುವುದಿಲ್ಲ ಎಂಬುದನ್ನು ಕಾಂಗ್ರೆಸ್ ಹೈಕಮಾಂಡ್ ಮತ್ತೊಮ್ಮೆ ಸಾಬೀತು ಮಾಡಿದೆ ಎಂದು ಕಾರ್ಕಳ ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ʻಉಳುವವನೇ ಹೊಲದೊಡೆಯ’ ಕಾಯ್ದೆ ಜಾರಿ ಸೇರಿದಂತೆ ಕರ್ನಾಟಕದಲ್ಲಿ ಕ್ರಾಂತಿಕಾರಿ ಆಡಳಿತ ನೀಡುವ ಮೂಲಕ ದೇವರಾಜ್ ಅರಸು ಅವರು ಜನಮನ್ನಣೆ ಗಳಿಸಿದ್ದರು. ಆದರೆ ಅವರ ಜನಪ್ರಿಯತೆಯನ್ನು ಸಹಿಸದ ಇಂದಿರಾ ಗಾಂಧಿಯವರು ಅರಸು ಅವರನ್ನು ಅಧಿಕಾರದಿಂದ ಕೆಳಗಿಳಿಸಿದರು. ಅರಸು ಅವರ ನಂತರ ಕರ್ನಾಟಕ ಹಾಗೂ ರಾಷ್ಟ್ರ ಮಟ್ಟದ ಜನಪ್ರಿಯ ಓಬಿಸಿ ನಾಯಕರಾಗಿದ್ದ ಸಿದ್ದರಾಮಯ್ಯ ಅವರನ್ನು ಈಗ ರಾಹುಲ್ ಗಾಂಧಿ ಪದಚ್ಯುತಿಗೊಳಿಸಿದ್ದಾರೆ. ನೂಲಿನಂತೆ ಸೀರೆ ಎಂಬಂತೆ, ಗಾಂಧಿ ಕುಟುಂಬದ ಡಿಎನ್‌ಎಯಲ್ಲೇ ಓಬಿಸಿ ನಾಯಕರ ಬಗ್ಗೆ ದ್ವೇಷ, ಈರ್ಷೆ ಹಾಗೂ ಅಸಹನೆ ಅಡಗಿದೆ” ಎಂದು ವಾಗ್ದಾಳಿ ನಡೆಸಿದ್ದಾರೆ.
‘ಒಂದೆಡೆ ತಾನು ಓಬಿಸಿ ಸಮುದಾಯದ ಧ್ವನಿಯನ್ನು ಆಲಿಸುವುದಕ್ಕೆ ವಿಳಂಬ ಮಾಡಿದೆ, ಜಾತಿ ಗಣತಿ ನಡೆಸಿ ಓಬಿಸಿ ಸಮುದಾಯಕ್ಕೆ ನ್ಯಾಯ ಕೊಡುತ್ತೇನೆಂದು ವೇದಿಕೆಗಳಲ್ಲಿ ರಾಜಕೀಯ ಭಾಷಣ ಮಾಡುವ ರಾಹುಲ್ ಗಾಂಧಿ, ಇನ್ನೊಂದೆಡೆ ಅದೇ ಓಬಿಸಿ ಸಮುದಾಯದ ರಾಜಕೀಯ ನಾಯಕರನ್ನು ಅಧಿಕಾರದಿಂದ ಎಳೆದು ಕೆಡವುತ್ತಿದ್ದಾರೆ. ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಇದ್ದ ಒಬ್ಬನೇ ಒಬ್ಬ ಓಬಿಸಿ ಮುಖ್ಯಮಂತ್ರಿಯನ್ನು ಯಾಕೆ ಪದಚ್ಯುತಿಗೊಳಿಸಿದಿರಿ? ಎಂಬ ಪ್ರಶ್ನೆಗೆ ರಾಹುಲ್ ಗಾಂಧಿ ದೇಶದ ಜನತೆಗೆ ಉತ್ತರಿಸಬೇಕಾಗುತ್ತದೆ” ಎಂದು ಶಾಸಕ ವಿ. ಸುನಿಲ್ ಕುಮಾರ್ ಪ್ರಕಟಣೆಯಲ್ಲಿ ಪ್ರಶ್ನಿಸಿದ್ದಾರೆ.
ಕಾರ್ಯಕರ್ತರಿಂದ ತೀವ್ರ ತರಾಟೆ ..! ಸುನೀಲ್ ಕುಮಾರ್ ಸಿದ್ದರಾಮಯ್ಯ ಪರವಾದ ಫೇಸ್ಬುಕ್ ಪೋಸ್ಟ್ ಗೆ ಕಮೆಂಟ್ ಮೂಲಕ ಕಾರ್ಯಕರ್ತರು ತೀವ್ರ ತರಾಟೆಗೆತ್ತಿಕೊಂಡಿದ್ದಾರೆ.
ನಿಧನ ವಾರ್ತೆ
Karkala-ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು; ಸ್ನೇಹಿತನ ರಕ್ಷಣೆಗೆ ಧಾವಿಸಿ ಹರ್ಷನ್ ಸಾವು
ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರಿನ ಸುಳಿಗೆ ಸಿಲುಕಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಕಾನಂಗಿ ಸಮೀಪ ಸೆ.29ರಂದು ಮಧ್ಯಾಹ್ನ ನಡೆದಿದೆ. ಮೃತರನ್ನು ಹಿರ್ಗಾನ ಗ್ರಾಮದ ರಾಜೀವ ನಗರ ನಿವಾಸಿಗಳಾದ ಭರತ್ ಪೂಜಾರಿ (29) ಹಾಗೂ ಹರ್ಷನ್ ಆಚಾರ್ಯ (22) ಎಂದು ಗುರುತಿಸಲಾಗಿದೆ.

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರಿನ ಸುಳಿಗೆ ಸಿಲುಕಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಕಾನಂಗಿ ಸಮೀಪ ಸೆ.29ರಂದು ಮಧ್ಯಾಹ್ನ ನಡೆದಿದೆ.
ಮೃತರನ್ನು ಹಿರ್ಗಾನ ಗ್ರಾಮದ ರಾಜೀವ ನಗರ ನಿವಾಸಿಗಳಾದ ಭರತ್ ಪೂಜಾರಿ (29) ಹಾಗೂ ಹರ್ಷನ್ ಆಚಾರ್ಯ (22) ಎಂದು ಗುರುತಿಸಲಾಗಿದೆ.
ಭರತ್ ಅವರು ಪೇಂಟಿಂಗ್ ಹಾಗೂ ಕಟ್ಟಡ ನಿರ್ಮಾಣ ಕೆಲಸ ಮಾಡುತ್ತಿದ್ದು, ಹರ್ಷನ್ ಮಂಗಳೂರಿನಲ್ಲಿ ಎಟಿಎಂ ಪಿನ್ ಜನರೇಟರ್ ಸಂಬಂಧಿತ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಮಂಗಳವಾರ ಮಧ್ಯಾಹ್ನ ಸುಮಾರು 3 ಗಂಟೆಗೆ ಭರತ್, ಹರ್ಷನ್, ವಿತೇಶ್ ಶೆಟ್ಟಿ ರಂಜಿತ್ ನಾಯಕ್, ಕೇತನ್ ನಾಯಕ್ ನದಿಗೆ ಈಜಲು ತೆರಳಿದ್ದು ಈ ವೇಳೆ ಭರತ್ ನೀರಿನ ಸುಳಿಗೆ ಸಿಲುಕಿ ಹೊರಬರಲು ಒದ್ದಾಡುತ್ತಿರುವುದನ್ನು ಗಮನಿಸಿದ ಹರ್ಷನ್, ಆತನನ್ನು ರಕ್ಷಿಸಲು ಮುಂದಾಗಿದ್ದಾರೆ. ಆದರೆ ಈ ವೇಳೆ ಹರ್ಷನ್ ಕೂಡ ನೀರಿನ ಸುಳಿಗೆ ಸಿಲುಕಿ ಮುಳುಗಿದ್ದಾರೆ ಎನ್ನಲಾಗಿದೆ.
ವಿಷಯ ತಿಳಿದ ಬಳಿಕ ಹಿರ್ಗಾನ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸಂತೋಷ್ ಶೆಟ್ಟಿ ಅವರು ಕಾರ್ಕಳ ನಗರ ಪೊಲೀಸ್ ಠಾಣೆ ಹಾಗೂ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳೀಯರ ಸಹಕಾರದೊಂದಿಗೆ ಶೋಧ ಕಾರ್ಯ ಆರಂಭಿಸಿದರು.
ಘಟನಾ ಸ್ಥಳಕ್ಕೆ ವಾಹನಗಳು ತೆರಳಲು ಸೂಕ್ತ ರಸ್ತೆ ವ್ಯವಸ್ಥೆ ಇಲ್ಲದ ಕಾರಣ ಅಗ್ನಿಶಾಮಕ ಸಿಬ್ಬಂದಿ ಸುಮಾರು ಮೂರು ಕಿ.ಮೀ. ದೂರ ನಡೆದುಕೊಂಡೇ ಸ್ಥಳಕ್ಕೆ ತೆರಳಬೇಕಾಯಿತು. ಬಳಿಕ ಠಾಣಾಧಿಕಾರಿ ಚಂದ್ರಶೇಖರ್ ನೇತೃತ್ವದ ತಂಡ ಮೂರು ಗಂಟೆಗೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಿ ಸಂಜೆ 6 ಗಂಟೆ ಸುಮಾರಿಗೆ ಇಬ್ಬರ ಮೃತದೇಹಗಳನ್ನು ಪತ್ತೆಹಚ್ಚಿ ನದಿಯಿಂದ ಮೇಲಕ್ಕೆತ್ತಿತು.
ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಇಲಾಖೆಯ ಸಿಬ್ಬಂದಿಗಳಾದ ರೂಪೇಶ್, ಸುರೇಶ್, ದಿನೇಶ್, ನಿತ್ಯಾನಂದ, ಶಿವಾನಂದ ಹಾಗೂ ಸ್ಥಳೀಯರಾದ ರಂಜಿತ್ ಮತ್ತು ಕೇತನ್ ಭಾಗವಹಿಸಿದ್ದರು. ಎಎಸ್‌ಪಿ ಇಷಿತಾ ಗುಪ್ತ, ವೃತ್ತ ನಿರೀಕ್ಷಕ ರಾಘವೇಂದ್ರ ಹಾಗೂ ನಗರ ಠಾಣೆ ಎಸ್‌ಐ ಶಿವಕುಮಾರ್ ಘಟನಾ ಸ್ಥಳಕ್ಕೆ ಭೇಟಿ ನೀಡಿದರು.
ಬಡ ಕುಟುಂಬ
ಮೃತ ಭರತ್ ಪೂಜಾರಿ ಬಡ ಕುಟುಂಬದವರಾಗಿದ್ದು, ತಂದೆ-ತಾಯಿಯೊಂದಿಗೆ ವಾಸಿಸುತ್ತಿದ್ದರು. ಕುಟುಂಬದ ಜವಾಬ್ದಾರಿ ಅವರ ಮೇಲಿತ್ತು ಎನ್ನಲಾಗಿದೆ. ಅವರು ಹೊಸ ಮನೆ ನಿರ್ಮಿಸುತ್ತಿದ್ದು, ಕಾಮಗಾರಿ ಈಗಾಗಲೇ ಸ್ಲ್ಯಾಬ್ ಹಂತ ತಲುಪಿತ್ತು. ಹರ್ಷನ್ ಆಚಾರ್ಯ ಅವರ ತಂದೆ ನಿಧನರಾಗಿದ್ದು, ತಾಯಿ ಹಾಗೂ ಅಕ್ಕನೊಂದಿಗೆ ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ.
ಈ ಸಂಬಂಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಕಾರ್ಕಳ
Sunil Kumar-ಸ್ಥಳೀಯ ಕಂಬಳ ಕಡೆಗಣಿಸಿ ಮೈಸೂರು ಕಂಬಳಕ್ಕೆ 8 ಕೋಟಿ ಖರ್ಚು -ಸರ್ಕಾರದ ವಿರುದ್ಧ ಸುನಿಲ್ ಕುಮಾರ್ ಕಿಡಿ..! ಜಿಲ್ಲೆಯ ಕಂಬಳಕ್ಕೆ ತಲಾ 25 ಕೋಟಿ ಕೊಡಿ
ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ ಕ್ರೀಡೆಯನ್ನು ಪರಿಚಯಿಸುವ ಸರ್ಕಾರದ ನಿರ್ಧಾರದ ಬಗ್ಗೆ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸರ್ಕಾರ ಕೇವಲ ಹಠಕ್ಕೆ ಬೀಳದೆ, ತಜ್ಞರ ಮತ್ತು ಅನುಭವಸ್ಥರ ಅಭಿಪ್ರಾಯ ಪಡೆಯುವುದು ಅಗತ್ಯ ಎಂದು ಅವರು ಹೇಳಿದ್ದಾರೆ.
ಕಾರ್ಕಳ: ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ ಕ್ರೀಡೆಯನ್ನು ಪರಿಚಯಿಸುವ ಸರ್ಕಾರದ ನಿರ್ಧಾರದ ಬಗ್ಗೆ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸರ್ಕಾರ ಕೇವಲ ಹಠಕ್ಕೆ ಬೀಳದೆ, ತಜ್ಞರ ಮತ್ತು ಅನುಭವಸ್ಥರ ಅಭಿಪ್ರಾಯ ಪಡೆಯುವುದು ಅಗತ್ಯ ಎಂದು ಅವರು ಹೇಳಿದ್ದಾರೆ.
ಸಮಾಲೋಚನೆ ಅತ್ಯಗತ್ಯ:
ಕರಾವಳಿಯ ಸಾಂಪ್ರದಾಯಿಕ ಕ್ರೀಡೆಯನ್ನು ಮೈಸೂರಿಗೆ ‘ರಫ್ತು’ ಮಾಡುವಾಗ ಅದರಿಂದಾಗುವ ಸಾಧಕ-ಬಾಧಕಗಳನ್ನು ಕೂಲಂಕಷವಾಗಿ ಪರಿಶೀಲಿಸಬೇಕು. ಕಂಬಳವನ್ನು ಕೇವಲ ಪ್ರದರ್ಶನದ ವಸ್ತುವನ್ನಾಗಿ ನೋಡಬಾರದು. ಹೀಗಾಗಿ, ಈ ಬಗ್ಗೆ ಯಾವುದೇ ಅಂತಿಮ ತೀರ್ಮಾನ ತೆಗೆದುಕೊಳ್ಳುವ ಮೊದಲು ಕಂಬಳ ಆಯೋಜಕರು ಮತ್ತು ಕೋಣಗಳ ಮಾಲೀಕರ ಜೊತೆ ಸರ್ಕಾರ ವಿಸ್ತೃತವಾಗಿ ಚರ್ಚಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಅನುದಾನದ ತಾರತಮ್ಯಕ್ಕೆ ಆಕ್ರೋಶ:
ಮೈಸೂರು ಕಂಬಳಕ್ಕಾಗಿ ಸುಮಾರು 8 ಕೋಟಿ ರೂಪಾಯಿ ಖರ್ಚು ಮಾಡಲು ಚಿಂತಿಸುತ್ತಿರುವ ಸರ್ಕಾರ, ಕರಾವಳಿಯ ಮೂಲ ಕಂಬಳಗಳನ್ನು ಕಡೆಗಣಿಸುತ್ತಿದೆ ಎಂದು ಸುನಿಲ್ ಕುಮಾರ್ ದೂರಿದ್ದಾರೆ. “ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ವರ್ಷಾನುಗಟ್ಟಲೆ ನಡೆಯುತ್ತಿರುವ ಕಂಬಳಗಳಿಗೆ ತಲಾ 2.5 ಲಕ್ಷ ರೂಪಾಯಿ ನೀಡಲು ಈ ಸರ್ಕಾರ ಹಿಂದೇಟು ಹಾಕುತ್ತಿದೆ. ಮೈಸೂರಿನಲ್ಲಿ ಕೋಟ್ಯಂತರ ರೂಪಾಯಿ ವೆಚ್ಚ ಮಾಡುವ ಬದಲು, ಕರಾವಳಿಯ 20 ಪ್ರಮುಖ ಜಿಲ್ಲಾಮಟ್ಟದ ಕಂಬಳಗಳಿಗೆ ತಲಾ 25 ಲಕ್ಷ ರೂಪಾಯಿ ಅನುದಾನ ನೀಡಲಿ” ಎಂದು ಅವರು ಸವಾಲು ಹಾಕಿದ್ದಾರೆ.
ಈ ಬಗ್ಗೆ ಈಗಾಗಲೇ ಸದನದಲ್ಲಿ ಪಕ್ಷಾತೀತವಾಗಿ ಧ್ವನಿ ಎತ್ತಲಾಗಿದ್ದು, ಸರ್ಕಾರ ಮೊದಲು ಸ್ಥಳೀಯ ಕಂಬಳಗಳ ವೈಭವ ಮತ್ತು ಅಸ್ತಿತ್ವವನ್ನು ಉಳಿಸಲು ಆದ್ಯತೆ ನೀಡಬೇಕು ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದ್ದಾರೆ.
ಅಪರಾಧ
Karkala-ಕಾರ್ಕಳ : ಪತಿ-ಇಬ್ಬರು ಮಕ್ಕಳನ್ನು ತೊರೆದು ಪ್ರಿಯಕರನೊಂದಿಗೆ ಹೋದ ವಿವಾಹಿತೆ: ಪೊಲೀಸ್ ಠಾಣೆಯಲ್ಲಿ “ತಪ್ಪಿನ ಅರಿವಾಗಿ” ವಾಪಸ್ಸು ಪತಿ ಮನೆಗೆ ತೆರಳಿದ ಮಹಿಳೆ
ಪತಿ ಹಾಗೂ ಇಬ್ಬರು ಮಕ್ಕಳನ್ನು ತೊರೆದು ಪ್ರಿಯಕರನೊಂದಿಗೆ ಕಾರ್ಕಳಕ್ಕೆ ಬಂದಿದ್ದ ವಿವಾಹಿತೆಯ ಪ್ರಕರಣವೊಂದು, ಪೊಲೀಸರ ಸಕಾಲಿಕ ಮಧ್ಯಸ್ಥಿಕೆ ಮತ್ತು ಸಮಾಲೋಚನೆಯಿಂದಾಗಿ ಸುಖಾಂತ್ಯ ಕಂಡಿದೆ.
ಕಾರ್ಕಳ: ಪತಿ ಹಾಗೂ ಇಬ್ಬರು ಮಕ್ಕಳನ್ನು ತೊರೆದು ಪ್ರಿಯಕರನೊಂದಿಗೆ ಕಾರ್ಕಳಕ್ಕೆ ಬಂದಿದ್ದ ವಿವಾಹಿತೆಯ ಪ್ರಕರಣವೊಂದು, ಪೊಲೀಸರ ಸಕಾಲಿಕ ಮಧ್ಯಸ್ಥಿಕೆ ಮತ್ತು ಸಮಾಲೋಚನೆಯಿಂದಾಗಿ ಸುಖಾಂತ್ಯ ಕಂಡಿದೆ.
ಮಹಿಳೆಯೊಬ್ಬರು ತನ್ನ ಸಂಸಾರವನ್ನು ಬಿಟ್ಟು ಪ್ರಿಯಕರನೊಡನೆ ಕಾರ್ಕಳದಲ್ಲಿ ವಾಸವಿದ್ದರು. ಈ ವಿಷಯ ತಿಳಿದ ಪತಿ ಹಾಗೂ ಕುಟುಂಬಸ್ಥರು ತಕ್ಷಣ ಕಾರ್ಕಳ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ನೆರವು ಕೋರಿದ್ದರು. ಕುಟುಂಬಸ್ಥರ ದೂರಿನ ಮೇರೆಗೆ ಪೊಲೀಸರು ಮಹಿಳೆ ಹಾಗೂ ಆಕೆಯ ಪ್ರಿಯಕರನನ್ನು ಠಾಣೆಗೆ ಕರೆಸಿದರು.
ಈ ಸಂದರ್ಭದಲ್ಲಿ ಪೊಲೀಸರು ಮಹಿಳೆಗೆ ಸಂಸಾರದ ಮಹತ್ವ, ಮಕ್ಕಳ ಭವಿಷ್ಯ ಹಾಗೂ ಕುಟುಂಬದ ಜವಾಬ್ದಾರಿಗಳ ಕುರಿತು ಗಂಭೀರವಾಗಿ ಬುದ್ಧಿವಾದ ಹೇಳಿದರು. ಕುಟುಂಬಸ್ಥರು ಕೂಡ ಮಹಿಳೆಯನ್ನು ಮರಳಿ ಮನೆಗೆ ಬರುವಂತೆ ಮನವೊಲಿಸಿದರು. ಕೊನೆಗೆ ತನ್ನ ತಪ್ಪಿನ ಅರಿವಾದ ಮಹಿಳೆ, ಪ್ರಿಯಕರನ ಸಹವಾಸ ತೊರೆದು ಪತಿ ಮತ್ತು ಮಕ್ಕಳೊಂದಿಗೆ ಸಂಸಾರ ನಡೆಸಲು ಒಪ್ಪಿಕೊಂಡರು.
ಇಬ್ಬರ ನಡುವಿನ ಮನಸ್ತಾಪವು ಮಾತುಕತೆಯ ಮೂಲಕ ರಾಜಿಯಾಗಿ ಬಗೆಹರಿದ ಕಾರಣ, ಯಾವುದೇ ಕಾನೂನು ಕ್ರಮ ಅಥವಾ ಕೇಸು ದಾಖಲಾಗದೆ ಪ್ರಕರಣವು ಠಾಣೆಯಲ್ಲೇ ಇತ್ಯರ್ಥವಾಯಿತು. ಈ ಮೂಲಕ ವಿಭಜನೆಯ ಅಂಚಿನಲ್ಲಿದ್ದ ಕುಟುಂಬವೊಂದು ಮತ್ತೆ ಒಂದಾಗಿದೆ.
-
ಪುತ್ತೂರು17 hours ago
ಮಾಣಿ : ಲೈನ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶ: ಪವರ್ಮ್ಯಾನ್ ಮೃತ್ಯು
-
ಬಿಗ್ ನ್ಯೂಸ್20 hours agoArshia Khan-ನವರಾತ್ರಿಗೆ ‘ಅಷ್ಟಭುಜ ಧಾರಿಣಿ ದೇವಿ’ಯಾಗಿ ಮಿಂಚಲಿರುವ ವಿಟ್ಲದ ಅರ್ಷಿಯಾ ಖಾನ್
-
ಮಂಗಳೂರು20 hours agoCM-ಒಂದು ಅಭಿನಂದನೆಯೂ ಇಲ್ಲ ಎಂದು ಕ್ರೀಡಾಪಟುವಿನಿಂದ ಬೇಸರ ವ್ಯಕ್ತವಾದ ಕೂಡಲೇ ಪೂವಮ್ಮಗೆ ಕರೆ ಮಾಡಿದ ಸಿಎಂ..! ಏನೂ ಹೇಳಿದ್ರು ಗೊತ್ತೇ..?
-
ಅಂತರ ರಾಜ್ಯ23 hours agoECI-ಮುಖ್ಯ ಚುನಾವಣ ಆಯುಕ್ತ ವಿರುದ್ಧ ದೇಶಾದ್ಯಂತ ಹೋರಾಟ ತೀವ್ರಗೊಳ್ಳುತ್ತಿದ್ದಂತೆ ‘ಬಿಟ್ಟು ಹೋದವರ ಹೆಸರು ಸೇರ್ಪಡೆಗೆ ಅಭಿಯಾನ’…! 20 ರಾಜ್ಯಗಳಲ್ಲಿ ಕೈಬಿಟ್ಟ 13 ಕೋಟಿ ಮತದಾರರ ಮರುಸೇರ್ಪಡೆಗೆ ಆಯೋಗ ಅವಕಾಶ
-
ಬಿಗ್ ನ್ಯೂಸ್19 hours agoNagalakshmi Chowdary-ಬಂಗ್ಲೆಗುಡ್ಡೆ ಏನೂ ಸ್ಮಶಾನ ಅಲ್ಲ : ಅಲ್ಲಿ ಯಾಕೆ ಅಷ್ಟು ಅಸ್ಥಿಪಂಜರಗಳು ಸಿಕ್ಕಿದವು..? ಧರ್ಮಸ್ಥಳ ಎಸ್ಐಟಿಗೆ ಹೆಚ್ಚಿನ ಅಧಿಕಾರ ನೀಡಬೇಕು..! : ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ
-
ಶಿಕ್ಷಣ20 hours agoSpecial classes: ಮಳೆ ರಜೆ ಹೊಂದಾಣಿಕೆ: ಅ.3ರಿಂದ ಅ.7ರವರೆಗೆ ದಸರಾ ರಜೆಯಲ್ಲೂ ವಿಶೇಷ ತರಗತಿ
-
ರಾಜ್ಯ23 hours agoTemperature-ಹಿಂಗಾರು ಮಳೆ ಇಳಿಮುಖ, ಬಿಸಿಲು ಏರುಮುಖ; ಕರ್ನಾಟಕಕ್ಕೆ ಹವಾಮಾನ ಎಚ್ಚರಿಕೆ..!
-
ಅಪರಾಧ19 hours agoMangalore-ಮಂಗಳೂರು: ಸರಣಿ ಮನೆಕಳ್ಳತನ: ದೆಹಲಿ ಮೂಲದ ಇಬ್ಬರು ಕುಖ್ಯಾತ ಕಳ್ಳರ ಬಂಧನ; ₹18 ಲಕ್ಷ ಮೌಲ್ಯದ ಸೊತ್ತು ವಶ






















