Connect with us

ಬಿಗ್ ನ್ಯೂಸ್

Shekamale-ಅನಾರೋಗ್ಯ ಪೀಡಿತ ಡಾ. ವಿಘ್ನೇಶ್ವರ ಭಟ್‌ಗೆ ನೆರವಿನ ಹಸ್ತ; ಶೇಕಮಲೆ ಜಮಾತರಿಂದ ಮಾನವೀಯತೆಯ ಬಕ್ರೀದ್….!

Published

on

Ad Widget

Ad Widget

Ad Widget

Ad Widget

ಬಕ್ರೀದ್ ದಿನದಂದು ಒಳಮೊಗ್ರು ಗ್ರಾಮದ ಶೇಕಮಲೆ ಜಮಾತ್‌ನ ಮುಸ್ಲಿಂ ಭಾಂಧವರು ಈ ಬಾರಿ ಸಂಭ್ರಮಕ್ಕೆ ಹೆಚ್ಚು ಒತ್ತುಕೊಡಲಿಲ್ಲ ಇದಕ್ಕೆ ಕಾರಣ ಕುಂಬ್ರದ ಅಮೃತ ಕ್ಲಿನಿಕ್‌ನ ವೈದ್ಯರಾದ ವಿಘ್ನೇಶ್ವರ ಭಟ್ ಅವರ ಅನಾರೋಗ್ಯ. ಬ್ಲಡ್ ಕ್ಯಾನ್ಸರಿನಿಂದ ಬಳಲುತ್ತಿರುವ ಮತ್ತು ಚಿಕಿತ್ಸೆಗೆ ಹಣವಿಲ್ಲದೆ ಸಂಕಷ್ಟಪಡುತ್ತಿರುವ ವಿಘ್ನೇಶ್ವರ ಭಟ್ ರವರಿಗೆ ಹಣ ಸಂಗ್ರಹಿಸುವುದು ಮತ್ತು ವೈದ್ಯರಿಗಾಗಿ ಪ್ರಾರ್ಥನೆ ಮಾಡುವುದರಲ್ಲೇ ಬ್ಯುಸಿಯಾಗಿದ್ದರು.

Ad Widget

Ad Widget

Ad Widget

Ad Widget

ಪುತ್ತೂರು: ಬಕ್ರೀದ್ ಹಬ್ಬ ಮುಸ್ಲಿಮರಿಗೆ ದೊಡ್ಡ ಹಬ್ಬವಾಗಿದೆ, ಈ ದಿನದಂದು ಹೊಸ ಬಟ್ಟೆ ಧರಿಸಿ ಮಸೀದಿಗೆ ವಿಶೇಷ ಈದ್ ನಮಾಜಿನಲ್ಲಿ ಭಾಗವಹಿಸಿ, ಪರಸ್ಪರ ಆಲಿಂಗಿಸಿ ಸಿಹಿ ಹಂಚಿ ಸಂಭ್ರಮ ಪಡುತ್ತಾರೆ. ಆದರೆ ಬಕ್ರೀದ್ ದಿನದಂದು ಒಳಮೊಗ್ರು ಗ್ರಾಮದ ಶೇಕಮಲೆ ಜಮಾತ್‌ನ ಮುಸ್ಲಿಂ ಬಾಂಧವರು ಈ ಬಾರಿ ಸಂಭ್ರಮಕ್ಕೆ ಹೆಚ್ಚು ಒತ್ತುಕೊಡಲಿಲ್ಲ ಇದಕ್ಕೆ ಕಾರಣ ಕುಂಬ್ರದ ಅಮೃತ ಕ್ಲಿನಿಕ್‌ನ ವೈದ್ಯರಾದ ವಿಘ್ನೇಶ್ವರ ಭಟ್ ಅವರ ಅನಾರೋಗ್ಯ. ಬ್ಲಡ್ ಕ್ಯಾನ್ಸರಿನಿಂದ ಬಳಲುತ್ತಿರುವ ಮತ್ತು ಚಿಕಿತ್ಸೆಗೆ ಹಣವಿಲ್ಲದೆ ಸಂಕಷ್ಟಪಡುತ್ತಿರುವ ವಿಘ್ನೇಶ್ವರ ಭಟ್ ರವರಿಗೆ ಹಣ ಸಂಗ್ರಹಿಸುವುದು ಮತ್ತು ವೈದ್ಯರಿಗಾಗಿ ಪ್ರಾರ್ಥನೆ ಮಾಡುವುದರಲ್ಲೇ ಬ್ಯುಸಿಯಾಗಿದ್ದರು.

Ad Widget

Ad Widget alt="Ad Widget"/>

Ad Widget

ಏನಿದು ಘಟನೆ?
ಕುಂಬ್ರದಲ್ಲಿ ಕಳೆದ ಹಲವು ವರ್ಷಗಳಿಂದ ಅಮೃತ ಕ್ಲಿನಿಕ್ ನಡೆಸುತ್ತಿರುವ ವಿಘ್ನೇಶ್ವರ ಭಟ್‌ರವರಿಗೆ ಇದ್ದಕ್ಕಿದ್ದಂತೆ ಕ್ಯಾನ್ಸರ್ ಕಾಯಿಲೆ ಕಾಣಿಸಿಕೊಂಡಿದೆ. ವೈದ್ಯ ವೃತ್ತಿಯನ್ನೇ ನಂಬಿ ಜೀವನ ನಡೆಸುತ್ತಿದ್ದ ಅವರಿಗೆ ಕಾಯಿಲೆ ಬದುಕಿನ ಬಂಡಿಯನ್ನೇ ಬುಡಮೇಲು ಮಾಡಿದೆ. ಇದ್ದ ಹಣದಿಂದ ಚಿಕಿತ್ಸಾ ವೆಚ್ಚ ಭರಿಸಿದ್ದ ವೈದ್ಯರಿಗೆ ತನ್ನ ಬಳಿ ಇದ್ದ ಹಣ ಖಾಲಿಯಾದಾಗ ತಾವೇ ಸಾಮಾಜಿಕ ತಾಣದಲ್ಲಿ ಹಾಕಿ ಸಹಾಯಕ್ಕಾಗಿ ಕೈ ಚಾಚಿದ್ದರು. ನಮ್ಮೂರಿನ ವೈದ್ಯರು ಸಹಾಯಕ್ಕಾಗಿ ಕೈಚಾಚಿದಾಗ ಪಕ್ಕದಲ್ಲೇ ಇರುವ ಶೇಕಮಲೆ ಜಮಾತ್‌ಗೆ ಇದನ್ನು ಸಹಿಸಲು ಸಾಧ್ಯವಾಗಿಲ್ಲ. ಕಳೆದ ಶುಕ್ರವಾರ ವೈದ್ಯರ ವಿಚಾರವನ್ನು ಮಸೀದಿ ಕೂಗಿ ಹೇಳಲಾಯಿತು, ಆವತ್ತೆ ಹಣ ಸಂಗ್ರಹವನ್ನೂ ಮಾಡಲಾಯಿತು. ಸುಮಾರು 52 ಸಾವಿರದಷ್ಟು ಹಣ ಸಂಗ್ರಹವಾಗಿತ್ತು ಇದರಲ್ಲಿ ಕುಂಬ್ರದ ಮುಸ್ಲಿಂ ಬಂಧುಗಳೂ ಸೇರಿಕೊಂಡರು. ಚಿಕಿತ್ಸಾ ವೆಚ್ಚಕ್ಕಾಗಿ ತಮ್ಮಿಂದಾದ ಸಹಾಯ ನೀಡುತ್ತೇವೆ ಎಂದು ವೈದ್ಯರಿಗೆ ವಿಷಯ ತಿಳಿಸಲಾಯಿತು.

Ad Widget

Ad Widget <> Ad Widget

ಬಕ್ರೀದ್ ದಿನ ವಿಶೇಷ ಪ್ರಾರ್ಥನೆ
ಹಣ ಸಂಗ್ರಹ ಮಾಡಿದ್ದೂ ಮಾತ್ರವಲ್ಲದೆ ವೈಧ್ಯರ ರೋಗ ಶಮನಕ್ಕಾಗಿ ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆಯನ್ನೂ ನಡೆಸಲಾಯಿತು. ಮಸೀದಿಯಲ್ಲಿ ಮತ್ತೆ ಹಣ ಸಂಗ್ರಹಿಸಲಾಯಿರು ಎಲ್ಲವೂ ಒಟ್ಟು ಸೇರಿ 58,013 ರೂ ಸಂಗ್ರಹವಾಯಿತು. ಸಂಗ್ರಹವಾದ ಹಣವನ್ನು ಒಟ್ಟುಗೂಡಿಸಿದ ಶೇಕಮಲೆ ಜಮಾತ್ ಪ್ರಮುಖರು ನೇರವಾಗಿ ಸಂಪ್ಯದಲ್ಲಿರುವ ಡಾ. ವಿಘ್ನೇಶ್ವರ ಭಟ್ ಅವರ ಮನೆಗೆ ತೆರಳಿ ಹಸ್ತಾಂತರಿಸಲಾಯಿತು.

ಧರ್ಮಗಳ ಗಡಿಮೀರಿದ ಸೇವೆಯಾಗಿದೆ: ಎಸ್ ಪಿ ಬಶೀರ್
ನಮ್ಮೂರಿನ ವೈದ್ಯರಾದ ಡಾ. ವಿಘ್ನೇಶ್ವರ ಭಟ್ ರವರಿಗಾಗಿ ನಾವು ಶುಕ್ರವಾರ ಮತ್ತು ಬಕ್ರೀದ್ ದಿನ ವಿಶೇಷ ಪ್ರಾರ್ಥನೆಯನ್ನು ಮಾಡಿದ್ದೇವೆ. ಧರ್ಮ, ಜಾತಿ, ಮತ ಯಾವುದೇ ಆಗಿರಲಿ ನಾವು ವೈದ್ಯರನ್ನು ಮನುಷ್ಯರೆಂದಷ್ಟೇ ತಿಳಿಯುತ್ತೇವೆ. ಮನುಷ್ಯ ಸಂಕಷ್ಟದಲ್ಲಿದ್ದಾಗ ಮನುಷ್ಯರಾದ ನಾವು ನೀವು ಸಹಾಯ ಮಾಡಬೇಕಾಗಿದ್ದು ನಮ್ಮ ಧರ್ಮವಾಗಿದೆ, ಅದನ್ನೇ ನಾವು ಮಾಡಿದ್ದೇವೆ. ಬೇರೆಯವರು ಕೊಟ್ಟಿದ್ದಾರೋ ಇಲ್ಲವೋ ಎಂಬುದು ನಮಗೆ ಮುಖ್ಯವಾಗುವುದಿಲ್ಲ. ಹಲವಾರು ಮಂದಿಗೆ ಚಿಕಿತ್ಸೆ ನೀಡಿದ ವೈದ್ಯರು ಬದುಕಿ ಉಳಿಯಬೇಕು, ಅವರ ಕುಟುಂಬ ಸಂತೋಷದಿಂದ ಇರಬೇಕು ಎಂಬುದು ನಮ್ಮ ಉದ್ದೇಶವಾಗಿದೆ. ವೈದ್ಯರಿಗೆ ಮುಂದೆಯೂ ಸಹಾಯ ಮಾಡುವ ಭರವಸೆಯನ್ನು ನೀಡಿದ್ದೇವೆ. ರೋಗ ಶಮನಕ್ಕಾಗಿ ಸರ್ವರೂ ಪ್ರಾರ್ಥಿಸಿ ಯಾಕೆಂದ್ರೆ ಜೀವ ಹೋದ ಮೇಲೆ ನಾವು ದುಖ ಪಡುವುದಕ್ಕಿಂದ ಜೀವ ಇರುವಾಗಲೇ ಅವರಿಗೆ ನೆರವು ನೀಡುವ ಕೆಲಸ ಪ್ರತೀಯೊಬ್ಬರೂ ಮಾಡಿದರೆ ಒಂದು ಜೀವಕ್ಕೆ ಮರು ಜನ್ಮ ನೀಡಿದಂತಾಗುತ್ತದೆ ಎಂದು ಜಮಾತ್ ಕಾರ್ಯದರ್ಶಿ ಎಸ್ ಪಿ ಬಶೀರ್ ಹೇಳಿದರು.

Ad Widget

Ad Widget

ಎಲ್ಲರೂ ನಮ್ಮವರೇ: ಸುಲೈಮಾನ್ ಹಾಜಿ
ಶೇಕಮಲೆ ಜಮಾತ್ ಕಮಿಟಿ ಅಧ್ಯಕ್ಷ ಸುಲೈಮಾನ್ ಹಾಜಿ ಮಾತನಾಡಿ ಕಷ್ಟಗಳು, ರೋಗಗಳು ಮಾನವನ ದೇಹಕ್ಕೆ ಬರುತ್ತದೆ ವಿನಾ ರೋಗಗಳು ಜಾತಿ, ಧರ್ಮ ನೋಡಿ ಬರುವುದಲ್ಲ. ನಮ್ಮೂರ ವೈದ್ಯರಿಗೆ ಮಾರಕ ಕಾಯಿಲೆ ಬಂದಿದೆ ಅದು ಗುಣಮುಖವಾಗಲೆಂದು ನಾವು ಅಲ್ಲಾಹನಲ್ಲಿ ಪ್ರಾರ್ಥನೆ ಮಾಡಿದ್ದೇವೆ. ನಾವು ಮಾಡಿದ್ದು ಅಳಿಲ ಸೇವೆ ಅಷ್ಟೆ. ಸಮಾಜ ಭಾಂದವರು ಕೈ ಜೋಡಿಸಿ ಅವರ ಚಿಕಿತ್ಸೆಗೆ ಆರ್ಥಿಕ ನೆರವಾಗಬೇಕು ಎಂಬುದೇ ನಮ್ಮ ಆಶಯವಾಗಿದೆ ಎಂದು ಹೇಳಿದರು.

ಈ ವೇಳೆ ಜಮಾತ್ ಸದಸ್ಯರುಗಳಾದ ಎಸ್ ಎಂ ಮಹಮ್ಮದ್ ಕುಂಬ್ರ, ಸಲಾಮುದ್ದೀನ್ ಕುಂಬ್ರ, ನಾಸಿರ್ ಕುಂಬ್ರ, ಮಹಮ್ಮದ್ ಬೊಳ್ಳಾಡಿ, ಇಕ್ಬಾಲ್ ಹುಸೇನ್ ಕೌಡಿಚ್ಚಾರ್, ಬಶೀರ್ ಕೌಡಿಚ್ಚಾರ್, ರಿಝ್ವಾನ್ ಕೌಡಿಚ್ಚಾರ್, ಮೊಯಿದಿನ್ ಅಲಂಗೂರು, ಅಝರ್ ಕುಂಬ್ರ, ಹಮೀದ್ ಶೇಕಮಲೆ, ಅಮೀನ್ ಕುಂಬ್ರ, ಯೂಸುಫ್ ಮುಡಾಲ, ಹಾಫಿಲ್ ಮುಹಮ್ಮದ್ ಹಾಶಿರ್ ಉಪಸ್ಥಿತರಿದ್ದರು.

ಸಂಕಷ್ಟದಲ್ಲಿರುವ ನನ್ನ ನೋವನ್ನು ಕಂಡು ಸಹಾಯ ಮಾಡಿದ ನಿಮಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. ಅಳಿಲ ಸೇವೆ ಎಂದು ನೀವು ಹೇಳಿದರು ಈಗಿನ ಪರಿಸ್ಥಿತಿಯಲ್ಲಿ ನನಗಿದು ದೊಡ್ಡ ಶಕ್ತಿಯಾಗಿದೆ. ದೇವರು ನಿಮ್ಮನ್ನು ಖಂಡಿತವಾಗಿಯೂ ಆಶೀರ್ವದಿಸುತ್ತಾನೆ.

  • – ಡಾ. ವಿಘ್ನೇಶ್ವರ ಭಟ್
Ad Widget
Click to comment

Leave a Reply

ಬಿಗ್ ನ್ಯೂಸ್

Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ

Published

on

Ad Widget

Ad Widget

Ad Widget

Ad Widget

ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading

ಬಿಗ್ ನ್ಯೂಸ್

Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ

Published

on

Ad Widget

Ad Widget

Ad Widget

Ad Widget

ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.

Ad Widget

Ad Widget alt="Ad Widget"/>

Ad Widget

ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.

Ad Widget

Ad Widget <> Ad Widget

ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.

ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ಅಂತರ ರಾಜ್ಯ

Toll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್‌ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್‌ಗೆ SMS, 10 ಸಾವಿರ ರೂ.ವರೆಗೆ ದಂಡ..!

Published

on

Ad Widget

Ad Widget

Ad Widget

Ad Widget

ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.

Ad Widget

Ad Widget

Ad Widget

Ad Widget

ನವದೆಹಲಿ: ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.

Ad Widget

Ad Widget alt="Ad Widget"/>

Ad Widget

ಈ ವ್ಯವಸ್ಥೆಯ ಪ್ರಕಾರ, ಟೋಲ್ ಪ್ಲಾಜಾ ದಾಟುವ ವಾಹನದ ವಿಮೆ ಚಾಲ್ತಿಯಲ್ಲಿದೆಯೇ ಎಂಬುದನ್ನು ಸ್ವಯಂಚಾಲಿತವಾಗಿ ಪರಿಶೀಲಿಸಲಾಗುತ್ತದೆ. ಒಂದು ವೇಳೆ ವಿಮೆಯ ಅವಧಿ ಮುಗಿದಿದ್ದರೆ, ವಾಹನದ ಮಾಲೀಕರ ನೋಂದಾಯಿತ ಮೊಬೈಲ್ ಸಂಖ್ಯೆಗೆ ತಕ್ಷಣವೇ SMS ಮೂಲಕ ಎಚ್ಚರಿಕೆ ಸಂದೇಶ ಕಳುಹಿಸಲಾಗುತ್ತದೆ. ವಿಮೆ ಇಲ್ಲದೆ ವಾಹನ ಚಲಾಯಿಸುವವರಿಗೆ ನಿಯಮಾನುಸಾರ 10,000 ರೂ.ವರೆಗೆ ದಂಡ ವಿಧಿಸುವ ಅವಕಾಶವೂ ಇದೆ.

Ad Widget

Ad Widget <> Ad Widget

ಟೋಲ್ ಪ್ಲಾಜಾದಲ್ಲಿ ವಿಮೆ ಪರಿಶೀಲನೆ ಹೇಗೆ?
ಹೊಸ ವ್ಯವಸ್ಥೆಯು ರಾಷ್ಟ್ರೀಯ ಮಾಹಿತಿ ಕೇಂದ್ರ (NIC) ನಿರ್ವಹಿಸುವ ‘ವಾಹನ್’ (VAHAN) ಡೇಟಾಬೇಸ್‌ನಲ್ಲಿರುವ ವಾಹನಗಳ ನೋಂದಣಿ ಹಾಗೂ ವಿಮೆಯ ಮಾಹಿತಿಯನ್ನು ಆಧರಿಸಿ ಕಾರ್ಯನಿರ್ವಹಿಸಲಿದೆ.

ವಾಹನ ಟೋಲ್ ಪ್ಲಾಜಾ ದಾಟುವಾಗ ಅದರ ನೋಂದಣಿ ಸಂಖ್ಯೆಯನ್ನು ಗುರುತಿಸಿ, ಡೇಟಾಬೇಸ್‌ನಲ್ಲಿರುವ ವಿಮೆಯ ವಿವರಗಳೊಂದಿಗೆ ಹೋಲಿಕೆ ಮಾಡಲಾಗುತ್ತದೆ. ಈ ಮೂಲಕ ವಿಮೆ ಚಾಲ್ತಿಯಲ್ಲಿದೆಯೇ ಅಥವಾ ಅವಧಿ ಮುಗಿದಿದೆಯೇ ಎಂಬುದನ್ನು ತಂತ್ರಜ್ಞಾನದ ಸಹಾಯದಿಂದ ಪರಿಶೀಲಿಸಲಾಗುತ್ತದೆ.

Ad Widget

Ad Widget

ವಿಮೆಯ ಅವಧಿ ಮುಗಿದಿದ್ದರೆ ಕೆಲವೇ ನಿಮಿಷಗಳಲ್ಲಿ ವಾಹನ ಮಾಲೀಕರ ಮೊಬೈಲ್‌ಗೆ SMS ರವಾನೆಯಾಗಲಿದೆ.

SMSನಲ್ಲಿ ಯಾವ ಮಾಹಿತಿ ಇರಲಿದೆ?
ವಾಹನದ ವಿಮೆ ಅವಧಿ ಮುಗಿದಿದ್ದರೆ ಮಾಲೀಕರಿಗೆ ಕಳುಹಿಸುವ ಸಂದೇಶದಲ್ಲಿ ಈ ಕೆಳಗಿನ ವಿವರಗಳಿರಲಿವೆ:

  • ವಾಹನದ ನೋಂದಣಿ ಸಂಖ್ಯೆ.
  • ಟೋಲ್ ಪ್ಲಾಜಾ ದಾಟಿದ ದಿನಾಂಕ ಮತ್ತು ಸಮಯ.
  • ವಾಹನದ ವಿಮೆ ಅವಧಿ ಮುಗಿದ ದಿನಾಂಕ.
  • ವಿಮೆಯನ್ನು ನವೀಕರಿಸಿಕೊಳ್ಳುವಂತೆ ಸೂಚನೆ.
    ಈ ಮೂಲಕ ವಾಹನ ಮಾಲೀಕರು ವಿಮೆಯನ್ನು ತಕ್ಷಣ ನವೀಕರಿಸಿಕೊಳ್ಳಲು ಎಚ್ಚರಿಕೆ ನೀಡುವ ಉದ್ದೇಶ ಹೊಂದಲಾಗಿದೆ.
  • ವಿಮೆ ಇಲ್ಲದೆ ವಾಹನ ಚಲಾಯಿಸಿದರೆ ಎಷ್ಟು ದಂಡ?
  • ಮೋಟಾರು ವಾಹನ ಕಾಯ್ದೆಯ ಪ್ರಕಾರ ಸಾರ್ವಜನಿಕ ರಸ್ತೆಗಳಲ್ಲಿ ಸಂಚರಿಸುವ ಪ್ರತಿಯೊಂದು ವಾಹನಕ್ಕೂ ಮಾನ್ಯವಾದ ಥರ್ಡ್ ಪಾರ್ಟಿ ವಿಮೆ ಹೊಂದಿರುವುದು ಕಡ್ಡಾಯವಾಗಿದೆ. ಅಪಘಾತ ಸಂಭವಿಸಿದಾಗ ಮತ್ತೊಬ್ಬ ವ್ಯಕ್ತಿಗೆ ಗಾಯ, ಸಾವು ಅಥವಾ ಆಸ್ತಿಗೆ ಹಾನಿಯಾದರೆ ಪರಿಹಾರ ನೀಡಲು ಈ ವಿಮೆ ನೆರವಾಗುತ್ತದೆ.

ಮಾನ್ಯ ವಿಮೆ ಇಲ್ಲದೆ ವಾಹನ ಚಲಾಯಿಸುವುದು ಕಾನೂನು ಉಲ್ಲಂಘನೆಯಾಗಿದ್ದು, ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 196ರ ಅಡಿಯಲ್ಲಿ ಮೊದಲ ಬಾರಿಗೆ ತಪ್ಪು ಎಸಗಿದರೆ 2,000 ರೂ. ಹಾಗೂ ಮರುಕಳಿಸಿದರೆ 4,000 ರೂ. ದಂಡ ಅಥವಾ ಕಾಯ್ದೆಯಲ್ಲಿ ನಿಗದಿಪಡಿಸಿರುವ ಇತರ ಶಿಕ್ಷೆ ವಿಧಿಸಬಹುದು.

ಸದ್ಯ ಒಂದು ಟೋಲ್ ಪ್ಲಾಜಾದಲ್ಲಿ ಮಾತ್ರ ಪ್ರಾಯೋಗಿಕ ಪರೀಕ್ಷೆ
ಪ್ರಸ್ತುತ ದೆಹಲಿಯ ಅರ್ಬನ್ ಎಕ್ಸ್‌ಟೆನ್ಷನ್ ರಸ್ತೆ-2 (UER-II)ಯ ಮುಂಡ್ಯಾ ಟೋಲ್ ಪ್ಲಾಜಾದಲ್ಲಿ ಈ ವ್ಯವಸ್ಥೆಯ ಪ್ರಾಯೋಗಿಕ ಪರೀಕ್ಷೆ ನಡೆಯುತ್ತಿದೆ. ಪ್ರಯೋಗ ಯಶಸ್ವಿಯಾದರೆ ದೇಶದ ಇತರ ಟೋಲ್ ಪ್ಲಾಜಾಗಳಿಗೂ ವಿಸ್ತರಿಸುವ ಕುರಿತು NHAI ಚಿಂತನೆ ನಡೆಸಿದೆ.

ಆದರೆ ದೇಶಾದ್ಯಂತ ಈ ವ್ಯವಸ್ಥೆ ಯಾವಾಗ ಜಾರಿಗೆ ಬರಲಿದೆ ಎಂಬ ಬಗ್ಗೆ ಪ್ರಾಧಿಕಾರ ಇನ್ನೂ ಅಧಿಕೃತ ದಿನಾಂಕ ಪ್ರಕಟಿಸಿಲ್ಲ. ಪ್ರಾಯೋಗಿಕ ಪರೀಕ್ಷೆಯ ಫಲಿತಾಂಶಗಳ ಆಧಾರದ ಮೇಲೆ ಮುಂದಿನ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.

ವಾಹನ ಸವಾರರೇ ಎಚ್ಚರ: ನಿಮ್ಮ ವಾಹನದ ವಿಮೆಯ ಅವಧಿಯನ್ನು ಆಗಾಗ್ಗೆ ಪರಿಶೀಲಿಸಿ. ಅವಧಿ ಮುಗಿಯುವ ಮೊದಲೇ ವಿಮೆಯನ್ನು ನವೀಕರಿಸಿಕೊಳ್ಳಿ. ವಿಮೆ ಇಲ್ಲದೆ ವಾಹನ ಚಲಾಯಿಸುವುದು ಕಾನೂನುಬಾಹಿರವಾಗಿದ್ದು, ಅಪಘಾತ ಸಂಭವಿಸಿದ ಸಂದರ್ಭದಲ್ಲಿ ದೊಡ್ಡ ಆರ್ಥಿಕ ಹೊರೆ ಎದುರಿಸಬೇಕಾಗಬಹುದು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!