ಅಪರಾಧ
Bantwal-ಬಂಟ್ವಾಳ: ಅಕ್ರಮ ಜಾನುವಾರು ವಧೆ; 71 ಕೆಜಿ ಮಾಂಸ ಸಹಿತ ಇಬ್ಬರು ಆರೋಪಿಗಳು ಖಾಕಿ ವಶಕ್ಕೆ..!
ಬಂಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮದಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ವಧೆ ಮಾಡಿ ಮಾಂಸ ಮಾರಾಟ ಮಾಡುತ್ತಿದ್ದ ಅಡ್ಡೆಯ ಮೇಲೆ ನಗರ ಪೊಲೀಸರು ಬುಧವಾರ ಮಿಂಚಿನ ದಾಳಿ ನಡೆಸಿದ್ದಾರೆ. ಕಾರ್ಯಾಚರಣೆ ವೇಳೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ದೊಡ್ಡ ಪ್ರಮಾಣದ ಮಾಂಸ ಮತ್ತು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬಂಟ್ವಾಳ: ಬಂಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮದಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ವಧೆ ಮಾಡಿ ಮಾಂಸ ಮಾರಾಟ ಮಾಡುತ್ತಿದ್ದ ಅಡ್ಡೆಯ ಮೇಲೆ ನಗರ ಪೊಲೀಸರು ಬುಧವಾರ ಮಿಂಚಿನ ದಾಳಿ ನಡೆಸಿದ್ದಾರೆ. ಕಾರ್ಯಾಚರಣೆ ವೇಳೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ದೊಡ್ಡ ಪ್ರಮಾಣದ ಮಾಂಸ ಮತ್ತು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬಂಧಿತರು ಯಾರು?
ಅಕ್ರಮ ಮಾಂಸದ ದಂಧೆಯಲ್ಲಿ ತೊಡಗಿದ್ದ ಮುಸ್ತಾಫಾ (33) ಮತ್ತು ಮಹಮ್ಮದ್ ಸಾದೀಕ್ (30) ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.
ದಾಳಿಯ ವಿವರ:
ಸಜೀಪ ಮೂಡ ಗ್ರಾಮದ ಪಂಜಾಜೆ-ಕೊಳಕೆ ಪ್ರದೇಶದಲ್ಲಿರುವ ಮನೆಯೊಂದರ ಹಿಂಭಾಗದ ದನದ ಕೊಟ್ಟಿಗೆಯಲ್ಲಿ ಅಕ್ರಮವಾಗಿ ಜಾನುವಾರು ವಧೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಬಂಟ್ವಾಳ ನಗರ ಪೊಲೀಸ್ ಉಪನಿರೀಕ್ಷಕರ ನೇತೃತ್ವದ ತಂಡ ಕೂಡಲೇ ಸ್ಥಳಕ್ಕೆ ತೆರಳಿ ದಾಳಿ ನಡೆಸಿದಾಗ ಅಕ್ರಮ ಕೃತ್ಯ ಬಯಲಾಗಿದೆ.
ಜಪ್ತಿ ಮಾಡಿದ ಸ್ವತ್ತುಗಳು:
ದಾಳಿಯ ವೇಳೆ ಪೊಲೀಸರು ಹತ್ಯೆ ಮಾಡಲು ಇಟ್ಟಿದ್ದ ಐದು ಜಾನುವಾರುಗಳು ಮತ್ತು ಒಂದು ಕರುವನ್ನು ಪಾರು ಮಾಡಿ ರಕ್ಷಿಸಿದ್ದಾರೆ. ಇವುಗಳ ಜೊತೆಗೆ ಮಾರಾಟಕ್ಕೆ ಸಿದ್ಧಪಡಿಸಿದ್ದ ಸುಮಾರು 71 ಕೆ.ಜಿ. ಮಾಂಸವನ್ನು ಜಪ್ತಿ ಮಾಡಲಾಗಿದೆ. ಮಾಂಸ ಸಾಗಾಟಕ್ಕೆ ಬಳಸುತ್ತಿದ್ದ ಮಾರುತಿ ಸುಜುಕಿ ಇಕೋ ಕಾರು ಮತ್ತು ಮಾಂಸ ಕತ್ತರಿಸಲು ಬಳಸುತ್ತಿದ್ದ ಉಪಕರಣಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧಿತ ಆರೋಪಿಗಳ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಅಕ್ರಮ ದಂಧೆಯ ಹಿಂದೆ ಬೇರೆ ಯಾರಿದ್ದಾರೆ ಎಂಬ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಅಂತರ ರಾಜ್ಯ
Sreejit Ravi-ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ: ಮಲಯಾಳಂ ನಟ ಶ್ರೀಜಿತ್ ರವಿಗೆ 1 ವರ್ಷ ಜೈಲು
ಇಬ್ಬರು ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಮಲಯಾಳಂ ನಟ ಶ್ರೀಜಿತ್ ರವಿಗೆ ಒಂದು ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ತ್ರಿಶೂರ್ ನ್ಯಾಯಾಲಯ ತೀರ್ಪು ನೀಡಿದೆ.
ತ್ರಿಶೂರ್: ಇಬ್ಬರು ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಮಲಯಾಳಂ ನಟ ಶ್ರೀಜಿತ್ ರವಿಗೆ ಒಂದು ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ತ್ರಿಶೂರ್ ನ್ಯಾಯಾಲಯ ತೀರ್ಪು ನೀಡಿದೆ.
2022ರಲ್ಲಿ ನಡೆದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ರಿಶೂರ್ನ ಫಾಸ್ಟ್ಟ್ರ್ಯಾಕ್ ವಿಶೇಷ ನ್ಯಾಯಾಲಯ-11ರ ನ್ಯಾಯಾಧೀಶೆ ರಮ್ಯಾ ಮೆನನ್ ಅವರು, ಪೋಕ್ಸೋ ಕಾಯ್ದೆಯ ಸೆಕ್ಷನ್ 12 ಹಾಗೂ ಭಾರತೀಯ ದಂಡ ಸಂಹಿತೆ (IPC) 1860ರ ಸೆಕ್ಷನ್ 509ರ ಅಡಿಯಲ್ಲಿ ಶ್ರೀಜಿತ್ ರವಿ ಅವರನ್ನು ದೋಷಿ ಎಂದು ಘೋಷಿಸಿದ್ದಾರೆ.
2022ರ ಜುಲೈ 4ರಂದು ಇಬ್ಬರು ಅಪ್ರಾಪ್ತ ಬಾಲಕಿಯರು ಶಾಲೆಯಿಂದ ತ್ರಿಶೂರ್ನ ಅರನಟ್ಟುಕರದಲ್ಲಿರುವ ತಮ್ಮ ಅಪಾರ್ಟ್ಮೆಂಟ್ಗೆ ಮರಳುತ್ತಿದ್ದ ವೇಳೆ ಘಟನೆ ನಡೆದಿತ್ತು. ಪ್ರಾಸಿಕ್ಯೂಷನ್ ಪ್ರಕಾರ, ಶ್ರೀಜಿತ್ ರವಿ ಕಾರಿನಲ್ಲಿ ಬಾಲಕಿಯರನ್ನು ಹಿಂಬಾಲಿಸಿ, ಅಪಾರ್ಟ್ಮೆಂಟ್ನ ಕಾರು ನಿಲುಗಡೆ ಪ್ರದೇಶದಲ್ಲಿ ಅವರಿಗೆ ಲೈಂಗಿಕ ಕಿರುಕುಳ ನೀಡಿದ್ದರು.
ವಿಚಾರಣೆ ವೇಳೆ ಬಾಲಕಿಯರು ನ್ಯಾಯಾಲಯದಲ್ಲಿ ಶ್ರೀಜಿತ್ ರವಿಯನ್ನು ಗುರುತಿಸಿದ್ದರು. ಆದರೆ, ಚಲನಚಿತ್ರ ನಟನಾಗಿದ್ದರೂ ಬಾಲಕಿಯರು ಆತನ ಹೆಸರನ್ನು ಗುರುತಿಸಲು ವಿಫಲರಾಗಿದ್ದಾರೆ ಎಂಬ ಅಂಶವನ್ನು ಮುಂದಿಟ್ಟುಕೊಂಡು ನಟನ ಪರ ವಕೀಲರು ಗುರುತಿಸುವಿಕೆಯ ವಿಶ್ವಾಸಾರ್ಹತೆಯನ್ನು ಪ್ರಶ್ನಿಸಿದ್ದರು.
ಈ ವಾದವನ್ನು ತಳ್ಳಿಹಾಕಿದ ನ್ಯಾಯಾಲಯ, ಬಾಲಕಿಯರು ಆರೋಪಿಯನ್ನು ಗುರುತಿಸಿದ್ದು, ಅವರ ದೈಹಿಕ ಚಹರೆಯ ಬಗ್ಗೆಯೂ ಸ್ಪಷ್ಟವಾಗಿ ವಿವರಿಸಿದ್ದಾರೆ ಎಂದು ತಿಳಿಸಿದೆ.
ಪೊಲೀಸ್ ತನಿಖೆಯಲ್ಲಿನ ಕೆಲವು ಲೋಪಗಳ ಬಗ್ಗೆಯೂ ನ್ಯಾಯಾಲಯ ಗಮನ ಸೆಳೆದಿದೆ. ವಿಶೇಷವಾಗಿ, ಘಟನೆ ನಡೆದ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಸಂಗ್ರಹಿಸದಿರುವುದನ್ನು ಉಲ್ಲೇಖಿಸಿದೆ. ಆದರೆ, ತನಿಖೆಯಲ್ಲಿನ ಇಂತಹ ಲೋಪಗಳು ಬಾಲಕಿಯರು ನೀಡಿದ ಸಾಕ್ಷ್ಯಗಳ ವಿಶ್ವಾಸಾರ್ಹತೆಯನ್ನು ಕುಗ್ಗಿಸುವುದಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ಅಂತರ ರಾಜ್ಯ
FIR-ಮದುವೆಯಾಗುವ ಭರವಸೆ ನೀಡಿ ದೈಹಿಕ ಸಂಪರ್ಕ: ಬಿಗ್ ಬಾಸ್ ವಿಜೇತ ಮುತ್ತುಕುಮಾರನ್ ವಿರುದ್ಧ ಇನ್ಫ್ಲುಯೆನ್ಸರ್ ವಹಿದಾ ದೂರು – ಎಫ್ಐಆರ್ ದಾಖಲು..!
ಮದುವೆಯಾಗುವುದಾಗಿ ಭರವಸೆ ನೀಡಿ ದೈಹಿಕ ಸಂಪರ್ಕ ಬೆಳೆಸಿ ಬಳಿಕ ಮದುವೆಯಾಗಲು ನಿರಾಕರಿಸಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ‘ಬಿಗ್ ಬಾಸ್ ತಮಿಳು ಸೀಸನ್-8’ರ ವಿಜೇತ ಮುತ್ತುಕುಮಾರನ್ ಜಗದೀಶನ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಚೆನ್ನೈ: ಮದುವೆಯಾಗುವುದಾಗಿ ಭರವಸೆ ನೀಡಿ ದೈಹಿಕ ಸಂಪರ್ಕ ಬೆಳೆಸಿ ಬಳಿಕ ಮದುವೆಯಾಗಲು ನಿರಾಕರಿಸಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ‘ಬಿಗ್ ಬಾಸ್ ತಮಿಳು ಸೀಸನ್-8’ರ ವಿಜೇತ ಮುತ್ತುಕುಮಾರನ್ ಜಗದೀಶನ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇನ್ಫ್ಲುಯೆನ್ಸರ್ ವಹಿದಾ ಅಖ್ದರ್ (Wahidha Akdhar) ನೀಡಿದ ದೂರಿನ ಆಧಾರದಲ್ಲಿ ಚೆನ್ನೈನ ವಿರುಗಂಬಾಕ್ಕಂ ಮಹಿಳಾ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 69ರ ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ. ಪ್ರಕರಣದ ತನಿಖೆ ಆರಂಭಿಸಿರುವ ಪೊಲೀಸರು, ವಿಚಾರಣೆಗೆ ಹಾಜರಾಗುವಂತೆ ಮುತ್ತುಕುಮಾರನ್ ಅವರಿಗೆ ಶೀಘ್ರದಲ್ಲೇ ಸಮನ್ಸ್ ಜಾರಿ ಮಾಡುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ಇದೇ ವೇಳೆ, ತಮ್ಮ ವಿರುದ್ಧ ದೂರು ನೀಡಿರುವ ವಹಿದಾ ವಿರುದ್ಧವೇ ಮುತ್ತುಕುಮಾರನ್ ಪ್ರತಿದೂರು ದಾಖಲಿಸಿದ್ದಾರೆ. ವಹಿದಾ ತಮ್ಮ ವಿರುದ್ಧ ಮಾನಹಾನಿಕರ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಏನಿದು ಪ್ರಕರಣ?
‘ದಿ ಟೈಮ್ಸ್ ಆಫ್ ಇಂಡಿಯಾ’ ವರದಿಯ ಪ್ರಕಾರ, ಇನ್ಸ್ಟಾಗ್ರಾಮ್ ಮೂಲಕ ಮುತ್ತುಕುಮಾರನ್ ಪರಿಚಯವಾಗಿದ್ದು, ಬಳಿಕ ಇಬ್ಬರ ನಡುವೆ ಸ್ನೇಹ ಬೆಳೆದು ಅದು ಪ್ರೀತಿಗೆ ತಿರುಗಿತ್ತು ಎಂದು ವಹಿದಾ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.
ದೈಹಿಕ ಸಂಪರ್ಕ ಬೆಳೆಸುವ ಮೊದಲು ಮುತ್ತುಕುಮಾರನ್ ಮದುವೆಯಾಗುವುದಾಗಿ ಭರವಸೆ ನೀಡಿದ್ದರು. ಆದರೆ, ನಂತರ ಮದುವೆಯಾಗಲು ನಿರಾಕರಿಸಿದ್ದಾರೆ ಎಂಬುದು ವಹಿದಾ ಅವರ ಆರೋಪವಾಗಿದೆ.
ಈ ಸಂಬಂಧ ವಹಿದಾ ಮೊದಲು ಚೆನ್ನೈ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು. ಬಳಿಕ ದೂರನ್ನು ವಿರುಗಂಬಾಕ್ಕಂ ಮಹಿಳಾ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದ್ದು, ಅಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಬಿಎನ್ಎಸ್ ಸೆಕ್ಷನ್ 69ರ ಅಡಿಯಲ್ಲಿ, ಅತ್ಯಾಚಾರದ ವ್ಯಾಪ್ತಿಗೆ ಬಾರದಿದ್ದರೂ ಮದುವೆಯಾಗುವ ಸುಳ್ಳು ಭರವಸೆ ಸೇರಿದಂತೆ ವಂಚನೆಯ ಮಾರ್ಗಗಳ ಮೂಲಕ ದೈಹಿಕ ಸಂಪರ್ಕ ಬೆಳೆಸುವುದಕ್ಕೆ ಸಂಬಂಧಿಸಿದ ಅಪರಾಧವನ್ನು ಪರಿಗಣಿಸಲಾಗುತ್ತದೆ.
ನವೆಂಬರ್ 9ರಂದು ವಹಿದಾ ಅವರು ಮುತ್ತುಕುಮಾರನ್ ಜೊತೆಗಿನ ಸಂಬಂಧದ ಕುರಿತು ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ಗಳನ್ನು ಹಂಚಿಕೊಂಡ ಬಳಿಕ ಈ ವಿಚಾರ ಬಹಿರಂಗವಾಗಿತ್ತು. ಇಬ್ಬರೂ ಜೊತೆಯಾಗಿರುವ ವಿಡಿಯೊವನ್ನು ಪ್ರಕಟಿಸಿದ್ದ ಅವರು, ಮುತ್ತುಕುಮಾರನ್ ನೀಡಿದ್ದ ಭರವಸೆಗಳ ಬಗ್ಗೆ ಪ್ರಶ್ನಿಸಿದ್ದರು. ತಮ್ಮ ಪೋಸ್ಟ್ನಲ್ಲಿ, “ನೀನು ಹೇಳಿದ್ದೆಲ್ಲವೂ ನಿನಗೆ ಕೇವಲ ತಮಾಷೆಯಾಗಿತ್ತು” ಎಂದು ಬರೆದುಕೊಂಡಿದ್ದರು.
ಇದರ ಬೆನ್ನಲ್ಲೇ ವಹಿದಾ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ವರದಿಗಳೂ ಪ್ರಕಟವಾಗಿದ್ದವು. ಈ ಪ್ರಕರಣದ ಕುರಿತು ಹಿರಿಯ ಗೀತರಚನೆಕಾರ ತಾಮರೈ ಕೂಡ ಫೇಸ್ಬುಕ್ನಲ್ಲಿ ಪ್ರತಿಕ್ರಿಯಿಸಿದ್ದು, ಮುತ್ತುಕುಮಾರನ್ ಅವರನ್ನು ಟೀಕಿಸಿ, ಆರೋಪಗಳ ಬಗ್ಗೆ ತಮ್ಮ ಕಡೆಯ ಸ್ಪಷ್ಟನೆ ನೀಡುವಂತೆ ಒತ್ತಾಯಿಸಿದ್ದಾರೆ.
ನಟ ವಿಜಯ್ ಸೇತುಪತಿ ನಿರೂಪಣೆಯ ‘ಬಿಗ್ ಬಾಸ್ ತಮಿಳು ಸೀಸನ್-8’ರಲ್ಲಿ ಸ್ಪರ್ಧಿಸುವ ಮೂಲಕ ಮುತ್ತುಕುಮಾರನ್ ಜನಪ್ರಿಯತೆ ಗಳಿಸಿದ್ದರು. 2025ರ ಜನವರಿ 19ರಂದು ನಡೆದ ಫಿನಾಲೆಯಲ್ಲಿ ಅವರು ಕಾರ್ಯಕ್ರಮದ ವಿಜೇತರಾಗಿ ಹೊರಹೊಮ್ಮಿದ್ದರು.
ನಟ ವಿಜಯ್ ಸೇತುಪತಿ ನಿರೂಪಣೆಯ ‘ಬಿಗ್ ಬಾಸ್ ತಮಿಳು ಸೀಸನ್ 8’ರಲ್ಲಿ ಭಾಗವಹಿಸುವ ಮೂಲಕ ಮುತ್ತುಕುಮಾರನ್ ಅಪಾರ ಜನಪ್ರಿಯತೆ ಗಳಿಸಿದ್ದರು. ಜನವರಿ 19, 2025ರಂದು ನಡೆದ ಫಿನಾಲೆಯಲ್ಲಿ ಅವರು ಶೋನ ವಿಜೇತರಾಗಿ ಹೊರಹೊಮ್ಮಿದ್ದರು.
ಅಪರಾಧ
Mangalore-Big Breaking:ಮಂಗಳೂರು: ಕದ್ರಿ ಯುದ್ಧ ಸ್ಮಾರಕದಲ್ಲಿರುವ ಟಿ-55 ಟ್ಯಾಂಕ್ ಮೇಲೆ ಹತ್ತಿ ಯುವಕರ ಹುಚ್ಚಾಟ; ವಿಡಿಯೋ ವೈರಲ್, ಸಾರ್ವಜನಿಕರ ಆಕ್ರೋಶ
ಮಂಗಳೂರು ನಗರದ ಕದ್ರಿ ಯುದ್ಧ ಸ್ಮಾರಕದ ಬಳಿ ಸಾರ್ವಜನಿಕರ ವೀಕ್ಷಣೆಗೆ ಇರಿಸಲಾಗಿರುವ ಯುದ್ಧ ಟ್ಯಾಂಕ್ ಮೇಲೆ ಹತ್ತಿ ಇಬ್ಬರು ಯುವಕರು ಅಸಭ್ಯವಾಗಿ ವರ್ತಿಸಿರುವ ಘಟನೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಮಂಗಳೂರು: ನಗರದ ಕದ್ರಿ ಯುದ್ಧ ಸ್ಮಾರಕದ ಬಳಿ ಸಾರ್ವಜನಿಕರ ವೀಕ್ಷಣೆಗೆ ಇರಿಸಲಾಗಿರುವ ಯುದ್ಧ ಟ್ಯಾಂಕ್ ಮೇಲೆ ಹತ್ತಿ ಇಬ್ಬರು ಯುವಕರು ಅಸಭ್ಯವಾಗಿ ವರ್ತಿಸಿರುವ ಘಟನೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಮಂಗಳೂರು ಸರ್ಕೀಟ್ ಹೌಸ್ ಮುಂಭಾಗದ ಕದ್ರಿ ಯುದ್ಧ ಸ್ಮಾರಕದ ಬಳಿ 1971ರಲ್ಲಿ ಪಾಕಿಸ್ತಾನದ ವಿರುದ್ಧದ ಯುದ್ಧದಲ್ಲಿ ಭಾಗವಹಿಸಿದ್ದ ಟಿ-55 ಯುದ್ಧ ಟ್ಯಾಂಕ್ನ್ನು ಸಾರ್ವಜನಿಕರ ವೀಕ್ಷಣೆಗಾಗಿ ಎತ್ತರದ ವೇದಿಕೆಯಲ್ಲಿ ಇರಿಸಲಾಗಿದೆ.
ರಾತ್ರಿ ವೇಳೆ ಇಬ್ಬರು ಯುವಕರು ಟ್ಯಾಂಕ್ ಮೇಲೆ ಹತ್ತಿ, ಅದರ ಹ್ಯಾಚ್ ತೆರೆದು ಒಳಗೆ ಪ್ರವೇಶಿಸಿ ಅಸಭ್ಯವಾಗಿ ವರ್ತಿಸಿದ್ದಾರೆ ಎನ್ನಲಾಗಿದೆ. ತಮ್ಮ ಕಿಡಿಗೇಡಿತನದ ವರ್ತನೆಯನ್ನು ವಿಡಿಯೋ ಮಾಡಿಕೊಂಡಿರುವ ಯುವಕರು, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದು, ವಿಡಿಯೋ ಇದೀಗ ವೈರಲ್ ಆಗಿದೆ.
ದೇಶದ ಯುದ್ಧ ಇತಿಹಾಸ ಹಾಗೂ ಸೈನಿಕರ ಶೌರ್ಯ, ತ್ಯಾಗದ ಸಂಕೇತವಾಗಿ ಇರಿಸಲಾಗಿರುವ ಟ್ಯಾಂಕ್ ಬಳಿ ಯುವಕರು ಇಂತಹ ವರ್ತನೆ ತೋರಿರುವುದಕ್ಕೆ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
-
ಬಿಗ್ ನ್ಯೂಸ್23 hours agoBantwal-ಬಂಟ್ವಾಳ: ತಂದೆ ಗದರಿಸಿದ್ದಕ್ಕೆ ಮನೆ ಬಿಟ್ಟ ಬ್ಯಾಂಕ್ ಉದ್ಯೋಗಿ ಯುವತಿ ನಾಪತ್ತೆ..!
-
Uncategorized14 hours ago
ಫುತ್ತೂರು : ಗುತ್ತಿಗೆದಾರರ ಸಹಾಯಕಿಗೆ ಲೈಂಗಿಕ ದೌರ್ಜನ್ಯ, ವಿಡಿಯೋ ಚಿತ್ರೀಕರಣ , ಕಾರು ಹತ್ತಿಸಲು ಯತ್ನ ಆರೋಪ; ಮೆಸ್ಕಾಂ ಸಿಬ್ಬಂದಿ ವಿರುದ್ಧ ಕೇಸ್
-
ಸ್ಥಳೀಯ23 hours agoBank-ಚಿನ್ನದ ಬೆಲೆ ಕುಸಿತದ ಎಫೆಕ್ಟ್: ಗೋಲ್ಡ್ ಲೋನ್ ಪಡೆದವರಿಗೆ ಬ್ಯಾಂಕ್ಗಳಿಂದ ಶಾಕ್; ಒಡವೆ ಹರಾಜಿನ ಎಚ್ಚರಿಕೆ..!
-
ಮಂಗಳೂರು24 hours agoPugasarum-ಅಡಕೆ, ವೀಳ್ಯದೆಲೆಯ ‘ಪೂಗಸಾರಂ’ನಿಂದ ಕ್ಯಾನ್ಸರ್ ಬೆಳವಣಿಗೆಗೆ ಕಡಿವಾಣ? ಮಂಗಳೂರಿನ ವಿಜ್ಞಾನಿಗಳ ಸಂಶೋಧನೆಯಲ್ಲಿ ಮಹತ್ವದ ಅಂಶ ಪತ್ತೆ..!
-
ನಿಧನ ವಾರ್ತೆ19 hours agoBabu Gowda-ಧರ್ಮಸ್ಥಳ: ದಿ. ಸೌಜನ್ಯ ಅಜ್ಜ ಪಾಂಗಳ ನಿವಾಸಿ ಬಾಬು ಗೌಡ ನಿಧನ
-
ಅಂತರ ರಾಜ್ಯ19 hours agoPunjab election-6 ವರ್ಷಗಳ ಬಳಿಕ ಮತ್ತೆ ಒಂದಾದ ಬಿಜೆಪಿ–ಅಕಾಲಿದಳ; 2027ರ ಪಂಜಾಬ್ ಚುನಾವಣೆಗೆ ಮೈತ್ರಿ ಘೋಷಣೆ
-
ಅಂತರ ರಾಜ್ಯ23 hours agoTrisha-ವಿಜಯ್ ಸಿಎಂ ಬೆನ್ನಲ್ಲೇ ತ್ರಿಷಾ ರಾಜಕೀಯ ಎಂಟ್ರಿಗೆ ಸಿದ್ಧತೆ? ‘ಜಯಲಲಿತಾ ಉತ್ತರಾಧಿಕಾರಿ’ ಎಂದ ಅಭಿಮಾನಿಗಳು..!
-
ರಾಜಕೀಯ19 hours agoRural election-ಗ್ರಾಮೀಣ ಚುನಾವಣೆ ಅಖಾಡ ಸಜ್ಜು: ಅಂತಿಮ ಮೀಸಲಾತಿ ಪಟ್ಟಿ ಪ್ರಕಟ; ಜನವರಿಯಲ್ಲಿ ಮತದಾನ ಸಾಧ್ಯತೆ..!















