Connect with us

ಬಿಗ್ ನ್ಯೂಸ್

Diamond Fest-ಮುಳಿಯ ಬೆಂಗಳೂರಿನಲ್ಲಿ “ಡೈಮಂಡ್ ಫೆಸ್ಟ್” – ಅತ್ಯಾಕರ್ಷಕ ಉಡುಗೊರೆಗಳನ್ನು ಗೆಲ್ಲುವ ಅವಕಾಶ

Published

on



Ad Widget

Ad Widget

Ad Widget

Ad Widget

ಮಣಿಪಾಲ್ ಸೆಂಟರ್‌ನಲ್ಲಿರುವ ಪ್ರತಿಷ್ಠಿತ ಆಭರಣ ಮಳಿಗೆಯಾದ ಮುಳಿಯ ಗೋಲ್ಡ್ & ಡೈಮಂಡ್ಸ್‌ನಲ್ಲಿ ಇದೇ ಮೇ 28ರಿಂದ “ಡೈಮಂಡ್ ಫೆಸ್ಟ್” ಆರಂಭವಾಗಿದೆ. ʻThe New Diamond Destinationʼ ಎಂಬ ಘೋಷಣೆಯೊಂದಿಗೆ ನಡೆಯುತ್ತಿರುವ ಈ ಉತ್ಸವವು ವಜ್ರಾಭರಣ ಪ್ರಿಯರಿಗೆ ವಿಶಿಷ್ಟ ಖರೀದಿ ಅನುಭವವನ್ನು ಒದಗಿಸುತ್ತಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಮಣಿಪಾಲ್ ಸೆಂಟರ್‌ನಲ್ಲಿರುವ ಪ್ರತಿಷ್ಠಿತ ಆಭರಣ ಮಳಿಗೆಯಾದ ಮುಳಿಯ ಗೋಲ್ಡ್ & ಡೈಮಂಡ್ಸ್‌ನಲ್ಲಿ ಇದೇ ಮೇ 28ರಿಂದ “ಡೈಮಂಡ್ ಫೆಸ್ಟ್” ಆರಂಭವಾಗಿದೆ. ʻThe New Diamond Destinationʼ ಎಂಬ ಘೋಷಣೆಯೊಂದಿಗೆ ನಡೆಯುತ್ತಿರುವ ಈ ಉತ್ಸವವು ವಜ್ರಾಭರಣ ಪ್ರಿಯರಿಗೆ ವಿಶಿಷ್ಟ ಖರೀದಿ ಅನುಭವವನ್ನು ಒದಗಿಸುತ್ತಿದೆ.

Ad Widget

Ad Widget

Ad Widget alt="Ad Widget"/>

Ad Widget

ಉತ್ಸವದ ಅಂಗವಾಗಿ ಪ್ರತಿಯೊಂದು ಖರೀದಿಗೂ ಸೀರೆ, ಸ್ಕ್ರಾಚ್ ಕಾರ್ಡ್ ಸೇರಿದಂತೆ ವಿವಿಧ ಉಡುಗೊರೆಗಳನ್ನು ಗೆಲ್ಲುವ ಅವಕಾಶ ಕಲ್ಪಿಸಲಾಗಿದೆ. ಜೊತೆಗೆ, ಲಕ್ಕಿ ಡ್ರಾ ಮೂಲಕ ಬಂಪರ್ ಬಹುಮಾನವಾಗಿ ವಿದೇಶ ಪ್ರವಾಸ ಗೆಲ್ಲುವ ಅವಕಾಶವೂ ಲಭ್ಯವಿದೆ.

Ad Widget

Ad Widget <> Ad Widget

₹1,00,000 ಅಥವಾ ಅದಕ್ಕಿಂತ ಹೆಚ್ಚು ಮೌಲ್ಯದ ಖರೀದಿ ಮಾಡುವ ಗ್ರಾಹಕರಿಗೆ ಚಿನ್ನದ ನಾಣ್ಯವನ್ನು ಉಡುಗೊರೆಯಾಗಿ ನೀಡಲಾಗುತ್ತದೆ. ಹಳೆಯ ಚಿನ್ನವನ್ನು ಹೊಸ ಆಭರಣಗಳಿಗೆ ವಿನಿಮಯ ಮಾಡಿದಲ್ಲಿ ಪ್ರತಿ ಗ್ರಾಂಗೆ ₹100 ಹೆಚ್ಚುವರಿ ಮೌಲ್ಯ ನೀಡಲಾಗುವುದು.



Ad Widget

ಇದೇ ವೇಳೆ, ವಜ್ರಾಭರಣಗಳ ಮೇಲೆ 95% ಎಕ್ಸ್‌ಚೇಂಜ್ ಹಾಗೂ 90% ಬೈಬ್ಯಾಕ್ ಸೌಲಭ್ಯವನ್ನು ಸಂಸ್ಥೆ ನೀಡುತ್ತಿದ್ದು, ಹಳೆಯ ಆಭರಣಗಳನ್ನು ಹೊಸ ವಿನ್ಯಾಸಗಳಿಗೆ ಪರಿವರ್ತಿಸಿಕೊಳ್ಳಲು ಇದು ಉತ್ತಮ ಅವಕಾಶವಾಗಿದೆ.

Ad Widget

Ad Widget

ಮದುವೆ ಹಾಗೂ ಹಬ್ಬದ ಸೀಸನ್‌ಗಳನ್ನು ಗಮನದಲ್ಲಿಟ್ಟುಕೊಂಡು ವಿವಿಧ ವಿನ್ಯಾಸಗಳ ಹಾರಗಳು, ಕಿವಿಯೋಲೆಗಳು, ಉಂಗುರಗಳು ಸೇರಿದಂತೆ ಅನೇಕ ನವೀನ ಚಿನ್ನ ಮತ್ತು ವಜ್ರಾಭರಣಗಳ ವಿಶಾಲ ಸಂಗ್ರಹವನ್ನು ಮುಳಿಯ ಪರಿಚಯಿಸಿದೆ.

ಅಮೂಲ್ಯ ಡೈಮಂಡ್ಸ್ ಹಾಗೂ ಕಿಸ್ನ ಡೈಮಂಡ್ & ಗೋಲ್ಡ್ ಜ್ಯುವೆಲ್ಲರಿ ಬ್ರ್ಯಾಂಡ್‌ಗಳ ಸಹಭಾಗಿತ್ವದಲ್ಲಿ ನಡೆಯುತ್ತಿರುವ ಈ ಉತ್ಸವವು ಗುಣಮಟ್ಟ ಮತ್ತು ವೈವಿಧ್ಯಮಯ ವಿನ್ಯಾಸಗಳಿಗೆ ಹೆಸರುವಾಸಿಯಾಗಿದೆ.

ಕಾರ್ಯಕ್ರಮವನ್ನು ಖ್ಯಾತ ಸಾರೀ ಬ್ರಾಂಡ್ ರಾಧ್ವಿ ಸಾರೀಸ್ ಮಾಲೀಕರಾದ ಶ್ರೀಮತಿ ರಂಜಿತಾ ಸಿದ್ದೇಶ್ ಅವರು ಉದ್ಘಾಟಿಸಿ ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ ಮಾಸ್ಟರ್ ಶೆಫ್ ಖ್ಯಾತಿಯ ಶ್ರೀಮತಿ ಅವನಿ ಶರ್ಮ ಅವರನ್ನು ಸನ್ಮಾನಿಸಲಾಯಿತು.

ಉತ್ಸವದ ಕುರಿತು ಪ್ರತಿಕ್ರಿಯಿಸಿದ ಮುಳಿಯ ಚೇರ್ಮನ್ ಕೇಶವ ಪ್ರಸಾದ್ ಮುಳಿಯ ಅವರು ಮಾತನಾಡಿ, “ದಶಕಗಳಿಂದ ಮುಳಿಯ ಸಂಸ್ಥೆ ಚಿನ್ನಾಭರಣ ಖರೀದಿಗೆ ಗ್ರಾಹಕರ ಪ್ರಥಮ ಆಯ್ಕೆಯಾಗಿದೆ. ನಮ್ಮ ಗ್ರಾಹಕರು ಹೆಚ್ಚಿನ ಪ್ರಮಾಣದಲ್ಲಿ ಚಿನ್ನಾಭರಣಗಳನ್ನು ಖರೀದಿಸುತ್ತಿದ್ದರು. ಇದೀಗ ವಜ್ರಾಭರಣಗಳಿಗೂ ಮುಳಿಯ ಪ್ರಥಮ ಆಯ್ಕೆಯಾಗಬೇಕು ಎಂಬ ಉದ್ದೇಶದಿಂದ ‘The New Diamond Destination’ ಧ್ಯೇಯದೊಂದಿಗೆ ಬೆಂಗಳೂರಿನಲ್ಲಿ ನೂತನ ವಜ್ರಾಭರಣ ಸಂಗ್ರಹವನ್ನು ಪರಿಚಯಿಸುತ್ತಿದ್ದೇವೆ. ಹಾಗೂ ಗ್ರಾಹಕರಿಗೆ ಅತ್ಯುತ್ತಮ ಗುಣಮಟ್ಟದ ವಜ್ರಾಭರಣಗಳನ್ನು ಸ್ಪರ್ಧಾತ್ಮಕ ಬೆಲೆಯಲ್ಲೇ ಒದಗಿಸುವುದು ನಮ್ಮ ಪ್ರಮುಖ ಉದ್ದೇಶವಾಗಿದೆ. ಈ ಡೈಮಂಡ್ ಫೆಸ್ಟ್ ಮೂಲಕ ಗ್ರಾಹಕರಿಗೆ ವಿಶೇಷ ಖರೀದಿ ಅನುಭವ ನೀಡಲು ನಾವು ಸಜ್ಜಾಗಿದ್ದೇವೆ,” ಎಂದು ತಿಳಿಸಿದ್ದಾರೆ.

ಸಂಸ್ಥೆಯ ವ್ಯವಸ್ಥಾಪಕ ಎನ್. ಸುಬ್ರಹ್ಮಣ್ಯ ಭಟ್ ಕಾರ್ಯಕ್ರಮ ನಿರ್ವಹಿಸಿದರು. ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Ad Widget
Click to comment

Leave a Reply

ಮಂಗಳೂರು

Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ

Published

on



Ad Widget

Ad Widget

Ad Widget

Ad Widget

ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget alt="Ad Widget"/>

Ad Widget

ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.

Ad Widget

Ad Widget <> Ad Widget

ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.



Ad Widget

ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.

Continue Reading

ಮಂಗಳೂರು

Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ

Published

on



Ad Widget

Ad Widget

Ad Widget

Ad Widget

ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್‌ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.

Ad Widget

Ad Widget <> Ad Widget

ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.



Ad Widget
Ad Widget
Continue Reading

ಅಂತರ ರಾಜ್ಯ

Jantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ

Published

on



Ad Widget

Ad Widget

Ad Widget

Ad Widget

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕಾಕ್‌ರೋಚ್ ಜನತಾ ಪಾರ್ಟಿ (ಸಿಜೆಪಿ) ಕರೆ ನೀಡಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ನಗರದ ವಿವಿಧೆಡೆ ಹಾಗೂ ಗಡಿ ಪ್ರದೇಶಗಳಲ್ಲಿ ಈಗಾಗಲೇ ಸಾವಿರಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Ad Widget

Ad Widget

Ad Widget

Ad Widget

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕಾಕ್‌ರೋಚ್ ಜನತಾ ಪಾರ್ಟಿ (ಸಿಜೆಪಿ) ಕರೆ ನೀಡಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ನಗರದ ವಿವಿಧೆಡೆ ಹಾಗೂ ಗಡಿ ಪ್ರದೇಶಗಳಲ್ಲಿ ಈಗಾಗಲೇ ಸಾವಿರಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ದೆಹಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನದೊಳಗೆ ಪ್ರವೇಶಿಸಿದ ಪೊಲೀಸರು ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಂತರ್ ಮಂತರ್ ನಲ್ಲಿ ಕ್ಷಣ ಕ್ಷಣ ಪ್ರತಿಭಟಕಾರರ ಸಂಖ್ಯೆ ಭಾರಿ ಏರುತ್ತಿದೆ.

Ad Widget

Ad Widget <> Ad Widget

ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಂತರ್ ಮಂತರ್ ಗೆ ಆಗಮಿಸಿದ ನೂರಾರು ಸುಪ್ರೀಂ ಕೋರ್ಟಿನ ವಕೀಲರನ್ನು ಪೊಲೀಸರು ತಡೆಹಿಡಿದಿದ್ದಾರೆ ಎಂದು ವರದಿಯಾಗಿದೆ.



Ad Widget

ನೋಯ್ಡಾ–ದೆಹಲಿ ಗಡಿ ಸೇರಿದಂತೆ ನಗರದ ವಿವಿಧ ಭಾಗಗಳಲ್ಲಿ ಪ್ರತಿಭಟನಾಕಾರರನ್ನು ಬಸ್‌ಗಳಲ್ಲಿ ಕರೆದೊಯ್ದು ವಶಕ್ಕೆ ಪಡೆಯಲಾಗಿದೆ. ಇನ್ನೂ ಟಯರ್ ಪಂಚರ್ ಆಗುವ ಕಬ್ಬಿಣದ ಬೇಲಿಯನ್ನು ಪೊಲೀಸರು ರಸ್ತೆಗಳಲ್ಲಿ ಇಟ್ಟಿರುವ ಪ್ರತಿಭಟನಕಾರರು ಆರೋಪಿಸಿದ್ದಾರೆ. ಮತ್ತೂ ನಿರ್ದಿಷ್ಟ ಸ್ಥಳಗಳಲ್ಲಿ ಮೊಬೈಲ್ ನೆಟ್‌ವರ್ಕ್ ಗಳನ್ನು ಪೊಲೀಸರ ನಿರ್ದೇಶನದ ಮೇರೆಗೆ ಟೆಲಿಕಾಂ ಕಂಪೆನಿಗಳು ನಿಷ್ಕ್ರಿಯಗೊಳಿಸಿರುವ ಬಗ್ಗೆಯೂ ಆರೋಪಗಳು ವ್ಯಕ್ತವಾಗಿದೆ.

Ad Widget

Ad Widget

ಭದ್ರತಾ ವ್ಯವಸ್ಥೆಯ ಭಾಗವಾಗಿ 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ಹಾಗೂ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ 200ಕ್ಕೂ ಹೆಚ್ಚು ಕಂಪನಿಗಳನ್ನು ನಿಯೋಜಿಸಲಾಗಿದೆ. ವಿಶೇಷವಾಗಿ ಕೇಂದ್ರ ದೆಹಲಿ, ಕನ್ನಾಟ್ ಪ್ಲೇಸ್ ಹಾಗೂ ನಗರದ ಪ್ರವೇಶ ಗಡಿ ಭಾಗಗಳಲ್ಲಿ ಹೆಚ್ಚಿನ ನಿಗಾ ಇರಿಸಲಾಗಿದೆ.

ಕನ್ನಾಟ್ ಪ್ಲೇಸ್ ಪ್ರದೇಶವನ್ನು 20 ವಲಯಗಳಾಗಿ ವಿಂಗಡಿಸಲಾಗಿದ್ದು, ಪ್ರತಿ ವಲಯದ ಭದ್ರತಾ ಜವಾಬ್ದಾರಿಯನ್ನು ಡಿಸಿಪಿ ಅಥವಾ ಐಪಿಎಸ್ ಅಧಿಕಾರಿಗಳಿಗೆ ವಹಿಸಲಾಗಿದೆ. ಅಧಿಕಾರಿಗಳ ನೇತೃತ್ವದಲ್ಲಿ ವಿವಿಧೆಡೆ ಪಥಸಂಚಲನ ನಡೆಸಿ ಭದ್ರತಾ ಸಿದ್ಧತೆಗಳನ್ನು ಪರಿಶೀಲಿಸಲಾಗಿದೆ.

ಸಂದೇಹಾಸ್ಪದ ವಾಹನಗಳನ್ನು ತಡೆದು ಪರಿಶೀಲಿಸಲು ತುರ್ತು ಬಳಕೆಯ ಸ್ಪೈಕ್ ಸ್ಟ್ರಿಪ್‌ಗಳನ್ನು ಸಿದ್ಧವಾಗಿಡಲಾಗಿದೆ. ಭದ್ರತಾ ಕಾರ್ಯಾಚರಣೆಗಳಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಹೆಚ್ಚಿಸುವ ಉದ್ದೇಶದಿಂದ ಕಾನ್‌ಸ್ಟೆಬಲ್‌ಗಳು ಹಾಗೂ ಇನ್‌ಸ್ಪೆಕ್ಟರ್‌ಗಳಂತಹ ಕೆಳಹಂತದ ಪೊಲೀಸ್ ಸಿಬ್ಬಂದಿಗೂ ಬಾಡಿ ಕ್ಯಾಮೆರಾಗಳನ್ನು ಒದಗಿಸಲಾಗಿದೆ.

ಸಾರ್ವಜನಿಕರ ಸಾಮಾನ್ಯ ಸಂಚಾರಕ್ಕೆ ಯಾವುದೇ ನಿರ್ಬಂಧ ವಿಧಿಸಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಆದರೆ, ಅನುಮತಿಯಿಲ್ಲದ ಪ್ರತಿಭಟನೆಯಲ್ಲಿ ಭಾಗವಹಿಸಲು ಮುಂದಾಗುವವರನ್ನು ತಕ್ಷಣ ವಶಕ್ಕೆ ಪಡೆಯಲಾಗುವುದು ಹಾಗೂ ಕಾನೂನುಬದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading