Connect with us

ಸ್ಥಳೀಯ

Shishila-ಮತ್ಸ್ಯತೀರ್ಥ ಶಿಶಿಲದಲ್ಲಿ ಸಾವಿರಾರು ಮೀನುಗಳ ಮಾರಣಹೋಮ- ಸಾರ್ವಜನಿಕರ ಆಕ್ರೋಶ

Published

on

Ad Widget

Ad Widget

Ad Widget

Ad Widget

ಮತ್ಸ್ಯತೀರ್ಥ ಕ್ಷೇತ್ರವೆಂದೇ ಪ್ರಖ್ಯಾತಿ ಪಡೆದಿರುವ ಶಿಶಿಲೇಶ್ವರ ದೇವಸ್ಥಾನದ ಸಮೀಪದ ನದಿಯಲ್ಲಿ ಕಿಡಿಗೇಡಿಗಳು ನಡೆಸಿದ ದುಷ್ಕೃತ್ಯಕ್ಕೆ ಸಾವಿರಾರು ಮೀನುಗಳು ಬಲಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಅಕ್ರಮವಾಗಿ ಮೀನು ಹಿಡಿಯುವ ಉದ್ದೇಶದಿಂದ ವಿಷಕಾರಿ ರಾಸಾಯನಿಕ ಬಳಸಿದ್ದೇ ಈ ದುರಂತಕ್ಕೆ ಕಾರಣವಾಗಿದೆ.

Ad Widget

Ad Widget

Ad Widget

Ad Widget

ಶಿಶಿಲ: ಮತ್ಸ್ಯತೀರ್ಥ ಕ್ಷೇತ್ರವೆಂದೇ ಪ್ರಖ್ಯಾತಿ ಪಡೆದಿರುವ ಶಿಶಿಲೇಶ್ವರ ದೇವಸ್ಥಾನದ ಸಮೀಪದ ನದಿಯಲ್ಲಿ ಕಿಡಿಗೇಡಿಗಳು ನಡೆಸಿದ ದುಷ್ಕೃತ್ಯಕ್ಕೆ ಸಾವಿರಾರು ಮೀನುಗಳು ಬಲಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಅಕ್ರಮವಾಗಿ ಮೀನು ಹಿಡಿಯುವ ಉದ್ದೇಶದಿಂದ ವಿಷಕಾರಿ ರಾಸಾಯನಿಕ ಬಳಸಿದ್ದೇ ಈ ದುರಂತಕ್ಕೆ ಕಾರಣವಾಗಿದೆ.

Ad Widget

Ad Widget alt="Ad Widget"/>

Ad Widget

ಘಟನೆಯ ವಿವರ:
ಶಿಶಿಲೇಶ್ವರ ದೇವಸ್ಥಾನದ ಸಮೀಪದ ಬರ್ಗುಳ ಕಿಂಡಿ ಆಣೆಕಟ್ಟು ಪ್ರದೇಶದಲ್ಲಿ ಶುಕ್ರವಾರ ರಾತ್ರಿ ಈ ಕೃತ್ಯ ನಡೆದಿದೆ ಎಂದು ಶಂಕಿಸಲಾಗಿದೆ. ಕಿಡಿಗೇಡಿಗಳು ಅಕ್ರಮವಾಗಿ ಮೀನು ಹಿಡಿಯಲು ನೀರಿನಲ್ಲಿ ಕಾಪರ್ ಸಲ್ಫೇಟ್ (ಮೈಲ್ ಸುತ್ತು) ಎಂಬ ವಿಷಕಾರಿ ರಾಸಾಯನಿಕವನ್ನು ಬೆರೆಸಿದ್ದಾರೆ. ಇದರ ತೀವ್ರತೆಗೆ ನದಿಯಲ್ಲಿದ್ದ ಅಪಾರ ಪ್ರಮಾಣದ ಸಣ್ಣಪುಟ್ಟ ಮೀನುಗಳು ಹಾಗೂ ಜಲಚರಗಳು ಉಸಿರುಗಟ್ಟಿ ಸಾವನ್ನಪ್ಪಿದ್ದು, ಶನಿವಾರದಂದು ಸ್ಥಳೀಯರು ನದಿ ತೀರದಲ್ಲಿ ಸಂಚರಿಸುವ ವೇಳೆ ನೀರಿನಲ್ಲಿ ಸತ್ತು ತೇಲುತ್ತಿದ್ದ ಹಾಗೂ ದಡದಲ್ಲಿ ಬಿದ್ದಿದ್ದ ಮೀನುಗಳನ್ನು ಕಂಡು ಬೆಚ್ಚಿಬಿದ್ದಿದ್ದಾರೆ.

Ad Widget

Ad Widget <> Ad Widget

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಸ್ಥಳೀಯ ಪ್ರಮುಖರಾದ ಕರುಣಾಕರ ಶಿಶಿಲ, ಮನೋಜ್, ಉಮೇಶ್, ಲೋಕೇಶ್ ಅಡ್ಡಹಳ್ಳ ಹಾಗೂ ಪುರುಷೋತ್ತಮ್ ಅಡ್ಡಹಳ್ಳ ಅವರು ಪರಿಸ್ಥಿತಿಯನ್ನು ಪರಿಶೀಲಿಸಿದರು. ಘಟನೆಯ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಿದ ಅವರು, ಶಿಶಿಲೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಮೀನುಗಾರಿಕಾ ಇಲಾಖೆಗೆ ಮಾಹಿತಿ ನೀಡಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗುವುದು ಎಂದು ತಿಳಿಸಿದ್ದಾರೆ.

ಶಿಶಿಲೇಶ್ವರ ದೇವಸ್ಥಾನದ ಸುತ್ತಮುತ್ತ ಸುಮಾರು ಎರಡು ಕಿಲೋಮೀಟರ್ ವ್ಯಾಪ್ತಿಯನ್ನು ಮೀನುಗಳ ಸಂರಕ್ಷಿತ ವಲಯವೆಂದು ಪರಿಗಣಿಸಲಾಗಿದ್ದು, ಈ ಪ್ರದೇಶದಲ್ಲಿ ಯಾವುದೇ ರೀತಿಯ ಮೀನುಗಾರಿಕೆಗೆ ಅವಕಾಶವಿಲ್ಲ. ಧಾರ್ಮಿಕ ಹಾಗೂ ಪರಿಸರದ ದೃಷ್ಟಿಯಿಂದ ಮಹತ್ವ ಹೊಂದಿರುವ ಈ ಭಾಗದಲ್ಲಿ ಮೀನುಗಳಿಗೆ ವಿಶೇಷ ರಕ್ಷಣೆ ನೀಡಲಾಗುತ್ತಿದೆ. ಆದಾಗ್ಯೂ, ಕಾನೂನು ಮತ್ತು ಪರಿಸರ ನಿಯಮಗಳನ್ನು ಧಿಕ್ಕರಿಸಿ ಕೆಲ ಕಿಡಿಗೇಡಿಗಳು ವಿಷಕಾರಿ ರಾಸಾಯನಿಕ ಬಳಸಿ ಮೀನುಗಳನ್ನು ಕೊಲ್ಲುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

Ad Widget

Ad Widget

ಈ ಹಿಂದೆ ಇದೇ ಪ್ರದೇಶದಲ್ಲಿ ನಡೆದಿದ್ದ ಮೀನುಗಳ ಸಾಮೂಹಿಕ ಸಾವಿನ ಘಟನೆ ಇನ್ನೂ ಜನರ ನೆನಪಿನಿಂದ ಮಾಸುವ ಮುನ್ನವೇ ಮತ್ತೊಮ್ಮೆ ಇಂತಹ ಅಮಾನವೀಯ ಕೃತ್ಯ ನಡೆದಿರುವುದು ಪರಿಸರ ಪ್ರೇಮಿಗಳು ಹಾಗೂ ಭಕ್ತರಲ್ಲಿ ತೀವ್ರ ಕಳವಳ ಉಂಟುಮಾಡಿದೆ. ಕಾಪರ್ ಸಲ್ಫೇಟ್‌ನಂತಹ ವಿಷಕಾರಿ ಪದಾರ್ಥಗಳನ್ನು ನೀರಿಗೆ ಬೆರೆಸುವುದರಿಂದ ಕೇವಲ ಮೀನುಗಳಷ್ಟೇ ಅಲ್ಲದೆ ಇಡೀ ಜಲಚರ ಜೀವಸಂಕುಲ, ನೀರಿನ ಗುಣಮಟ್ಟ ಹಾಗೂ ಪರಿಸರ ಸಮತೋಲನಕ್ಕೂ ಭಾರೀ ಹಾನಿಯಾಗುತ್ತದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಸಂಬಂಧಪಟ್ಟ ಇಲಾಖೆ ತಕ್ಷಣ ಸ್ಥಳ ಪರಿಶೀಲನೆ ನಡೆಸಿ ನೀರಿನ ಮಾದರಿಗಳನ್ನು ಸಂಗ್ರಹಿಸಿ ವೈಜ್ಞಾನಿಕ ತನಿಖೆ ಕೈಗೊಳ್ಳಬೇಕು. ಅಲ್ಲದೆ, ಇಂತಹ ಕೃತ್ಯ ಎಸಗಿದ ದುಷ್ಕರ್ಮಿಗಳನ್ನು ಪತ್ತೆಹಚ್ಚಿ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಮತ್ಸ್ಯತೀರ್ಥವೆಂಬ ಹೆಗ್ಗಳಿಕೆಗೆ ಧಕ್ಕೆ ತರುವ ಇಂತಹ ಕೃತ್ಯಗಳನ್ನು ತಡೆಯಲು ನಿರಂತರ ನಿಗಾ, ಕಟ್ಟುನಿಟ್ಟಿನ ಮೇಲ್ವಿಚಾರಣೆ ಹಾಗೂ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಅನಿವಾರ್ಯವಾಗಿದೆ ಎಂಬುದು ಸ್ಥಳೀಯರ ಆಗ್ರಹವಾಗಿದೆ.

Ad Widget
Click to comment

Leave a Reply

ನಿಧನ ವಾರ್ತೆ

Accident-ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ: 8 ವರ್ಷದ ಬಾಲಕಿ ಸೇರಿ ಇಬ್ಬರು ಸ್ಥಳದಲ್ಲೇ ಸಾವು; ನಾಲ್ವರ ಸ್ಥಿತಿ ಗಂಭೀರ

Published

on

Ad Widget

Ad Widget

Ad Widget

Ad Widget

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಎಂಟು ವರ್ಷದ ಬಾಲಕಿ ಸೇರಿದಂತೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನಗುವಿನಹಳ್ಳಿ ಗೇಟ್ ಬಳಿ ನಡೆದಿದೆ.

Ad Widget

Ad Widget

Ad Widget

Ad Widget

ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಎಂಟು ವರ್ಷದ ಬಾಲಕಿ ಸೇರಿದಂತೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನಗುವಿನಹಳ್ಳಿ ಗೇಟ್ ಬಳಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಮಂಡ್ಯದ ಗುತ್ತಲು ಬಡಾವಣೆಯ ಮಹದೇವು ಹಾಗೂ ತೈಲೂರು ಗ್ರಾಮದ ಎಂಟು ವರ್ಷದ ಬಾಲಕಿ ರಿತ್ವಿಕಾ ಮೃತಪಟ್ಟವರು. ಕುಟುಂಬದ ಸದಸ್ಯರು ಕಾರಿನಲ್ಲಿ ನಂಜನಗೂಡಿನ ದೇವಸ್ಥಾನಕ್ಕೆ ತೆರಳಿ ವಾಪಸಾಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

Ad Widget

Ad Widget <> Ad Widget

ನಗುವಿನಹಳ್ಳಿ ಗೇಟ್ ಬಳಿಯ ಫ್ಲೈಓವರ್ ಮೇಲೆ ಚಲಿಸುತ್ತಿದ್ದ ಸರಕು ಸಾಗಣೆ ಲಾರಿಗೆ ಹಿಂದಿನಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮಹದೇವು ಹಾಗೂ ಬಾಲಕಿ ರಿತ್ವಿಕಾ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಅಪಘಾತದಲ್ಲಿ ಗೌರಿ, ಲತಾ, ಶಿವರಾಜು ಹಾಗೂ ಪ್ರಾರ್ಥನಾ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.

Ad Widget

Ad Widget

ಕುಟುಂಬದ ಸದಸ್ಯರು ನಂಜನಗೂಡಿನ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದ ಬಳಿಕ ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಆದರೆ, ದೇವರ ದರ್ಶನ ಪಡೆದು ಮನೆಗೆ ಮರಳುತ್ತಿದ್ದ ಕುಟುಂಬದ ಪ್ರಯಾಣ ಕೆಲವೇ ಸಮಯದಲ್ಲಿ ಭೀಕರ ದುರಂತದಲ್ಲಿ ಅಂತ್ಯಗೊಂಡಿರುವುದು ಸಂಬಂಧಿಕರು ಹಾಗೂ ಸ್ಥಳೀಯರಲ್ಲಿ ತೀವ್ರ ದುಃಖವನ್ನುಂಟುಮಾಡಿದೆ.

Ad Widget
Continue Reading

ಬಿಗ್ ನ್ಯೂಸ್

Rakesh Shetty-ಸ್ಟಿಂಗ್ ಆಪರೇಷನ್ ಪ್ರಕರಣ: ಜಾಮೀನು ಅರ್ಜಿ ವಾಪಸ್ ಪಡೆದ ರಾಕೇಶ್ ಶೆಟ್ಟಿ

Published

on

Ad Widget

Ad Widget

Ad Widget

Ad Widget

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ ಖಾಸಗಿ ಸುದ್ದಿವಾಹಿನಿಯ ಮುಖ್ಯಸ್ಥ ರಾಕೇಶ್ ಶೆಟ್ಟಿ, ಇದೀಗ ತಮ್ಮ ಅರ್ಜಿಯನ್ನು ಹಿಂಪಡೆದುಕೊಂಡಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ ಖಾಸಗಿ ಸುದ್ದಿವಾಹಿನಿಯ ಮುಖ್ಯಸ್ಥ ರಾಕೇಶ್ ಶೆಟ್ಟಿ, ಇದೀಗ ತಮ್ಮ ಅರ್ಜಿಯನ್ನು ಹಿಂಪಡೆದುಕೊಂಡಿದ್ದಾರೆ.

Ad Widget

Ad Widget alt="Ad Widget"/>

Ad Widget

ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ರಾಕೇಶ್ ಶೆಟ್ಟಿ ಸಲ್ಲಿಸಿದ್ದ ಅರ್ಜಿಯನ್ನು ನವೆಂಬರ್ 20ರಂದು ಬೆಂಗಳೂರಿನ 66ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ವಜಾಗೊಳಿಸಿತ್ತು. ಇದರಿಂದ ಅವರು ಹೈಕೋರ್ಟ್ ಮೊರೆ ಹೋಗಿದ್ದರು.

Ad Widget

Ad Widget <> Ad Widget

ಮಂಗಳವಾರ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅರ್ಜಿದಾರರ ವಿರುದ್ಧ ದಾಖಲಾಗಿರುವುದು ಜಾಮೀನು ಪಡೆಯಬಹುದಾದ ಅಪರಾಧಗಳಾಗಿವೆ. ಒಂದು ವೇಳೆ ಬಂಧನಕ್ಕೊಳಗಾದರೂ ವಿಚಾರಣಾ ನ್ಯಾಯಾಲಯದಲ್ಲಿಯೇ ಜಾಮೀನು ಪಡೆಯಲು ಅವಕಾಶವಿದೆ. ಹೀಗಾಗಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ಊರ್ಜಿತವಲ್ಲ ಎಂದು ಅಭಿಪ್ರಾಯಪಟ್ಟಿತು.

ಇದಕ್ಕೂ ಮುನ್ನ ರಾಕೇಶ್ ಶೆಟ್ಟಿ ಪರ ವಕೀಲರು ವಾದ ಮಂಡಿಸಿ, ಪ್ರಕರಣದಲ್ಲಿ ಅರ್ಜಿದಾರರ ವಿರುದ್ಧ 10 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದಾದ ಅಪರಾಧಗಳ ಆರೋಪ ಹೊರಿಸಲಾಗಿದೆ. ಆದ್ದರಿಂದ ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಬೇಕು ಎಂದು ನ್ಯಾಯಪೀಠವನ್ನು ಕೋರಿದ್ದರು.

Ad Widget

Ad Widget

ಆದರೆ, ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ರಾಜ್ಯ ಸರ್ಕಾರಿ ಅಭಿಯೋಜಕ ಬಿ.ಎನ್. ಜಗದೀಶ್, ಪ್ರಕರಣದಲ್ಲಿ ಜಾಮೀನು ಪಡೆಯಬಹುದಾದ ಅಪರಾಧಗಳು ದಾಖಲಾಗಿರುವುದರಿಂದ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸುವುದು ಕಾನೂನುಬದ್ಧವಾಗಿ ಊರ್ಜಿತವಲ್ಲ ಎಂದು ವಾದಿಸಿದರು.

ನ್ಯಾಯಪೀಠದ ಅಭಿಪ್ರಾಯದ ಬೆನ್ನಲ್ಲೇ ರಾಕೇಶ್ ಶೆಟ್ಟಿ ಪರ ವಕೀಲರು ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹಿಂಪಡೆದುಕೊಂಡರು.

Ad Widget
Continue Reading

ಕ್ರೈಂ

Murder-ಕನ್ಯಾನ: ಚಿಕ್ಕಪ್ಪನ ಎದೆಗೆ ಕತ್ತಿಯಿಂದ ಇರಿದು ಹತ್ಯೆಗೈದ ಯುವತಿ ಅರೆಸ್ಟ್

Published

on

Ad Widget

Ad Widget

Ad Widget

Ad Widget

ಸಹೋದರನ ಮಗಳೇ ಚಿಕ್ಕಪ್ಪನನ್ನು ಹರಿತವಾದ ಆಯುಧದಿಂದ ಚುಚ್ಚಿ ಕೊಲೆ ಮಾಡಿರುವ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕನ್ಯಾನ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಚೆನ್ನಯ್ಯ ಪೂಜಾರಿ (52) ಮೃತಪಟ್ಟಿದ್ದಾರೆ. ಅವರ ಸಹೋದರ ಕೋಟಿ ಪೂಜಾರಿಯವರ ಪುತ್ರಿ ಕೃತ್ತಿಕಾ (26) ಕೊಲೆ ಆರೋಪಿತೆಯಾಗಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ಸಹೋದರನ ಮಗಳೇ ಚಿಕ್ಕಪ್ಪನನ್ನು ಹರಿತವಾದ ಆಯುಧದಿಂದ ಚುಚ್ಚಿ ಕೊಲೆ ಮಾಡಿರುವ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕನ್ಯಾನ ಗ್ರಾಮದಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಕನ್ಯಾನ ಗ್ರಾಮದ ಶಿರಂಕಲ್ಲು ನಂದರಬೆಟ್ಟು ಎಂಬಲ್ಲಿ ನ.24ರ ರಾತ್ರಿ ನಡೆದ ಘಟನೆಯಲ್ಲಿ ಚೆನ್ನಯ್ಯ ಪೂಜಾರಿ (52) ಮೃತಪಟ್ಟಿದ್ದಾರೆ. ಅವರ ಸಹೋದರ ಕೋಟಿ ಪೂಜಾರಿಯವರ ಪುತ್ರಿ ಕೃತ್ತಿಕಾ (26) ಕೊಲೆ ಮಾಡಿರುವ ಆರೋಪ ಎದುರಿಸುತ್ತಿದ್ದು, ಪೊಲೀಸರು ಆಕೆಯನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.

Ad Widget

Ad Widget <> Ad Widget

ಘಟನೆಯ ವಿವರ
ಶಿರಂಕಲ್ಲು ನಂದರಬೆಟ್ಟು ದಾಸರಕೋಡಿ ಎಂಬಲ್ಲಿ ಕೋಟಿ ಪೂಜಾರಿ ಹಾಗೂ ಚೆನ್ನಯ್ಯ ಪೂಜಾರಿ ಎಂಬ ಅವಳಿ ಸಹೋದರರು ವಾಸವಾಗಿದ್ದರು. ಕೋಟಿ ಪೂಜಾರಿಯವರ ವಿವಾಹಿತ ಪುತ್ರಿ ಕೃತ್ತಿಕಾ ಇತ್ತೀಚೆಗೆ ತವರು ಮನೆಗೆ ಬಂದಿದ್ದರು.

ನ.24ರಂದು ರಾತ್ರಿ ಸುಮಾರು 7 ಗಂಟೆಯ ವೇಳೆಗೆ ಚೆನ್ನಯ್ಯ ಪೂಜಾರಿ ಅವರು ಕೃತ್ತಿಕಾ ವಾಸವಿದ್ದ ಮನೆಯ ಬಳಿ ಗಲಾಟೆ ನಡೆಸಿದ್ದು, ಈ ವೇಳೆ ಇಬ್ಬರ ನಡುವೆ ಯಾವುದೋ ವಿಚಾರಕ್ಕೆ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ. ಮಾತಿನ ಚಕಮಕಿ ತೀವ್ರಗೊಂಡಾಗ ಆಕ್ರೋಶಗೊಂಡ ಕೃತ್ತಿಕಾ ಮನೆಯಲ್ಲಿದ್ದ ಹರಿತವಾದ ಕತ್ತಿಯಿಂದ ತನ್ನ ಚಿಕ್ಕಪ್ಪ ಚೆನ್ನಯ್ಯ ಪೂಜಾರಿ ಅವರ ಎದೆಗೆ ಬಲವಾಗಿ ಚುಚ್ಚಿದ್ದಾರೆ ಎಂದು ಆರೋಪಿಸಲಾಗಿದೆ.

Ad Widget

Ad Widget

ಕತ್ತಿಯೇಟಿನಿಂದ ಎದೆಗೆ ಗಂಭೀರ ಗಾಯಗೊಂಡ ಚೆನ್ನಯ್ಯ ಪೂಜಾರಿ ರಕ್ತದ ಮಡುವಿನಲ್ಲಿ ಬಿದ್ದು ನರಳಾಡುತ್ತಿದ್ದ ಅವರನ್ನು ಸ್ಥಳೀಯರು ತಕ್ಷಣ ವಿಟ್ಲ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವಂತೆ ಸೂಚಿಸಿದ್ದರು. ಆದರೆ, ಪುತ್ತೂರಿಗೆ ಕರೆತರುತ್ತಿದ್ದ ವೇಳೆ ತೀವ್ರ ರಕ್ತಸ್ರಾವದಿಂದ ಚೆನ್ನಯ್ಯ ಪೂಜಾರಿ ಅವರು ದಾರಿ ಮಧ್ಯೆ ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸ್ ಇನ್‌ಸ್ಪೆಕ್ಟರ್ ಪ್ರಕಾಶ್ ದೇವಾಡಿಗ, ಉಪನಿರೀಕ್ಷಕರು ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಕೃತ್ತಿಕಾಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!