ಶಿಕ್ಷಣ
Dr. K. Chandrashekhar-ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಡಾ. ಕೆ. ಚಂದ್ರಶೇಖರ್ ಪ್ರೊಫೆಸರ್ ಆಗಿ ಪದೋನ್ನತಿ
ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಕೆ. ಚಂದ್ರಶೇಖರ್ ಅವರು ಕರ್ನಾಟಕ ಸರ್ಕಾರದ ಕಾಲೇಜು ಶಿಕ್ಷಣ ಇಲಾಖೆಯಿಂದ ‘ಪ್ರೊಫೆಸರ್’ ಹುದ್ದೆಗೆ ಬಡ್ತಿ ಪಡೆದಿದ್ದಾರೆ. ಈ ಮೂಲಕ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನಲ್ಲಿ ಪ್ರೊಫೆಸರ್ ಹುದ್ದೆಗೇರಿದ ಪ್ರಥಮ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ.
ಪುತ್ತೂರು: ಇಲ್ಲಿನ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಕೆ. ಚಂದ್ರಶೇಖರ್ ಅವರು ಕರ್ನಾಟಕ ಸರ್ಕಾರದ ಕಾಲೇಜು ಶಿಕ್ಷಣ ಇಲಾಖೆಯಿಂದ ‘ಪ್ರೊಫೆಸರ್’ ಹುದ್ದೆಗೆ ಬಡ್ತಿ ಪಡೆದಿದ್ದಾರೆ. ಈ ಮೂಲಕ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನಲ್ಲಿ ಪ್ರೊಫೆಸರ್ ಹುದ್ದೆಗೇರಿದ ಪ್ರಥಮ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ. ಇವರು ತಮ್ಮ ಪಿಯುಸಿ ಹಾಗೂ ಬಿ.ಎಸ್ಸಿ ಪದವಿಯನ್ನು ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನಲ್ಲಿ ಪೂರೈಸಿ, ಮಂಗಳೂರು ವಿಶ್ವವಿದ್ಯಾಲಯದಿಂದ ಎಂ.ಎಸ್ಸಿ ಹಾಗೂ ಪಿಎಚ್.ಡಿ ಪದವಿ ಪಡೆದಿದ್ದಾರೆ.
ಉಪನ್ಯಾಸಕರ ಅರ್ಹತಾ ಪರೀಕ್ಷೆಯಲ್ಲಿ (SLET) ಉತ್ತೀರ್ಣರಾದ ಇವರು, 2000ನೇ ಇಸವಿಯಲ್ಲಿ ಸಂತ ಫಿಲೋಮಿನಾ ಕಾಲೇಜಿನಲ್ಲಿ ಉಪನ್ಯಾಸಕರಾಗಿ ತಮ್ಮ ವೃತ್ತಿಜೀವನವನ್ನು ಆರಂಭಿಸಿದರು. “Studies on Concentration of Radionuclides and Trace Elements in some Selected Medicinal Plants ” ಎಂಬ ಪ್ರಬಂಧಕ್ಕೆ ಇವರಿಗೆ ಪಿಎಚ್.ಡಿ ದೊರೆತಿದೆ. ಡಾ. ಚಂದ್ರಶೇಖರ್ ಅವರು ‘ಸ್ಕೋಪಸ್’ (Scopus) ಮತ್ತು ‘ವೆಬ್ ಆಫ್ ಸೈನ್ಸ್’ ನಂತಹ ಡೇಟಾಬೇಸ್‌ನಲ್ಲಿ ಅಡಕವಾಗಿರುವ ಪ್ರತಿಷ್ಠಿತ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ನಿಯತಕಾಲಿಕೆಗಳಲ್ಲಿ ಅನೇಕ ಸಂಶೋಧನಾ ಲೇಖನಗಳನ್ನು ಪ್ರಕಟಿಸಿದ್ದಾರೆ.
ವಿಜ್ಞಾನ ಮತ್ತು ಪರಿಸರ ಕ್ಷೇತ್ರಕ್ಕೆ ಸಂಬಂಧಿಸಿದ ಜರ್ನಲ್‌ಗಳಿಗೆ ರೆಫರಿಯಾಗಿ ಕಾರ್ಯನಿರ್ವಹಿಸುತ್ತಿರುವ ಇವರು, ಸಂಪನ್ಮೂಲ ವ್ಯಕ್ತಿಯಾಗಿ ವಿವಿಧ ವೇದಿಕೆಗಳಲ್ಲಿ ವೈಜ್ಞಾನಿಕ ಮತ್ತು ಇತರ ಉಪನ್ಯಾಸಗಳನ್ನು ನೀಡಿದ್ದಾರೆ. ಪ್ರಸ್ತುತ ಕಾಲೇಜಿನ ಎನ್.ಎಸ್.ಎಸ್ (NSS) ಯೋಜನಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಇವರು, ಇತ್ತೀಚೆಗೆ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ನಡೆದ ರಾಷ್ಟ್ರೀಯ ಭಾವೈಕ್ಯತಾ ಶಿಬಿರದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವನ್ನ ಪ್ರತಿನಿಧಿಸಿದ್ದರು.
ಇವರ ನಿಸ್ವಾರ್ಥ ಎನ್.ಎಸ್.ಎಸ್ ಚಟುವಟಿಕೆಗಳನ್ನು ಗುರುತಿಸಿ ಪುತ್ತೂರಿನ ಲಯನ್ಸ್ ಮತ್ತು ರೋಟರಿ ಕ್ಲಬ್ ಇತ್ತೀಚೆಗೆ ಇವರನ್ನು ಗೌರವಿಸಿದವು.ಇವರು ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ಶ್ರೀಮತಿ ಲಕ್ಷ್ಮಿ ಮತ್ತು ದಿವಂಗತ ಮಹಾಲಿಂಗ ಮೂಲ್ಯ ಅವರ ಪುತ್ರ. ಡಾ. ಕೆ. ಚಂದ್ರಶೇಖರ್ ಅವರ ಈ ಸಾಧನೆಗೆ ಕಾಲೇಜಿನ ಸಂಚಾಲಕರಾದ ಅತೀ ವಂದನೀಯ ಡಾ. ಜೆ. ಬಿ. ಸಲ್ದಾನ್ಹಾ, ಹಾಗೂ ಪ್ರಾಂಶುಪಾಲರಾದ ವಂದನೀಯ ಡಾ. ಆಂಟನಿ ಪ್ರಕಾಶ್ ಮೊಂತೇರೋ, ಸಹೋದ್ಯೋಗಿಗಳು ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ಶಿಕ್ಷಣ
Vivekananda-ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಧನುಷ್ ಎಸ್, ಯಶಸ್ ಎಚ್ . ಸಿ ದ್ವಿತೀಯ ಪಿಯುಸಿ ಗಗನ್ ಕೆ.ಎನ್, ತೇಜಸ್ ಟಿ. ಆರ್, ಜಶ್ವಂತ್ ಗೌಡ, ಧನುಷ್ ಕೆ . ಎಚ್, ಆಕಾಶ್ ಭಾಗವಹಿಸಿರುತ್ತಾರೆ.
ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
ಶಿಕ್ಷಣ
Taekwondo Competition-ಟೇಕ್ವಾಂಡೋ ಸ್ಪರ್ಧೆ: ಸಂತ ಫಿಲೋಮಿನಾ ಪ ಪೂ ಕಾಲೇಜಿನ ಮೊಹಮ್ಮದ್ ಶಾಜ್ ಗೆ ಪ್ರಶಸ್ತಿ
ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ಪುತ್ತೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಚಿಕ್ಕಮಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಿಕ್ಕಮಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ಇವರು ಉಪ್ಪಿನಂಗಡಿ ನಿವಾಸಿ ಮೊಹಮ್ಮದ್ ಮುಸ್ತಫಾ ಮತ್ತು ಸೌಧ ದಂಪತಿಗಳ ಪುತ್ರ.
ಇವರಿಗೆ ಶಿಹಾಬ್ ಟಿ ತರಬೇತಿ ನೀಡಿರುತ್ತಾರೆ.
ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.
ಶಿಕ್ಷಣ
Vivekananda-ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಯ ಸಾಧನೆ..!
ಪುತ್ತೂರು: ವಿವೇಕಾನಂದ ಮಹಾವಿದ್ಯಾಲಯ (ಸ್ವಾಯತ್ತ) ಇದರ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಶ್ರೀಹರಿ ಶರ್ಮಾ ನೋಯ್ಡಾದ ಆಮಿಟಿ ಯುನಿವರ್ಸಿಟಿಯಲ್ಲಿ ಇಂಡಿಯನ್ ಅಸೋಸಿಯೇಷನ್ ಆಫ್ ಫಿಸಿಕ್ಸ್ ಟೀರ‍್ಸ್ (ಐಎಪಿಟಿ) ಸಂಸ್ಥೆಯ ಸಹಯೋಗದೊಂದಿಗೆ ನಡೆದ ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆ National Competition for Innovative Experiments in Physics (NCIEP)ನಲ್ಲಿ “Electromagnetic Shock-Absorber for the Real-Time Landing of Reusable Spacecraft” ಎಂಬ ಭೌತಶಾಸ್ತ್ರದ ಮಾದರಿಯನ್ನು ಸ್ಪರ್ಧೆಯಲ್ಲಿ ಪ್ರಸ್ತುತಪಡಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.

ಅಕ್ಟೋಬರ್ 4ರಿಂದ 6ರವರೆಗೆ ನಡೆದ 40ನೇ IAPT Annual Conventionನಲ್ಲಿ ಇವರು ಪದವಿ ಮತ್ತು ಸ್ನಾತಕೋತ್ತರ ವಿಭಾಗದಲ್ಲಿ ಭಾಗವಹಿಸಿದ್ದರು. ದೇಶದ ವಿವಿಧ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು, ಐಐಟಿಗಳು ಹಾಗೂ ವಿಶ್ವವಿದ್ಯಾಲಯಗಳ ಒಟ್ಟು 118 ಮಾದರಿಗಳ ಪೈಕಿ 12ಮಾದರಿಗಳು ಸ್ಪರ್ಧೆಗೆ ಆಯ್ಕೆಯಾಗಿದ್ದವು.
ಕರ್ನಾಟಕದಿಂದ ಪ್ರಸ್ತುತಪಡಿಸಲು ಆಯ್ಕೆಯಾದ ಏಕೈಕ ಮಾದರಿ ಇವರದ್ದಾಗಿತ್ತು. ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೋ. ಶಿವಪ್ರಸಾದ್ ಕೆ.ಎಸ್. ಈ ಮಾದರಿ ತಯಾರಿಕೆಯಲ್ಲಿ ಮಾರ್ಗದರ್ಶನ ನೀಡಿರುದ್ದಾರೆ. ಈ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ ಮತ್ತು ಶಿಕ್ಷಕೇತರ ವೃಂದ ಮತ್ತು ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.
-
ನಿಧನ ವಾರ್ತೆ13 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
-
ಮಂಗಳೂರು11 hours agoUjire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
-
ಮಂಗಳೂರು8 hours agoMulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
-
ಅಂತರ ರಾಜ್ಯ12 hours agoArrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
-
ರಾಜ್ಯ12 hours agoRobotic technology-ರೋಬೋಟಿಕ್ ತಂತ್ರಜ್ಞಾನದ ಅದ್ಭುತ: ಸ್ಪೇನ್ನಲ್ಲಿ ಕುಳಿತು ಕರ್ನಾಟಕದ ಮಹಿಳೆಗೆ ಹೃದಯ ಶಸ್ತ್ರಚಿಕಿತ್ಸೆ
-
ಅಂತರ ರಾಜ್ಯ12 hours agoJantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
-
ಅಂತರ ರಾಜ್ಯ12 hours agoBy-election results-ಉಪಚುನಾವಣೆ ಫಲಿತಾಂಶ: ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ತಮಿಳುನಾಡಿನಲ್ಲಿ ಟಿವಿಕೆ ಅಬ್ಬರ
-
ಅಂತರ ರಾಜ್ಯ13 hours agoDhruv Rati-BIG BREAKING: ದೆಹಲಿಯ ಜಂತರ್ ಮಂತರ್ ನಲ್ಲಿ ಸಿಜೆಪಿ ಪ್ರತಿಭಟನೆ ಹಿನ್ನಲೆ – ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ?




















