Uncategorized
ಪೇಸ್ʼಬುಕ್ ನಲ್ಲಿ ಭಾರೀ ಪೋಸ್ಟ್ ಮಾಡುತ್ತೀಯಾ ? ಎಂದು ಪ್ರಶ್ನಿಸಿ ಮಚ್ಚು ಬೀಸಿ ಹಿಗ್ಗಾಮುಗ್ಗಾ ಥಳಿಸಿದರು – ಬಂಟ್ವಾಳದ ಬಿಜೆಪಿ ಮುಖಂಡನ ಮೇಲೆ ಮಾರಕಾಯುಧಗಳಿಂದ ಹಲ್ಲೆ ನಡೆಸಿದ ಆರೋಪಿಗಳ ವಿರುದ್ಧ ಕೊಲೆ ಯತ್ನ ಪ್ರಕರಣ
ಬಂಟ್ವಾಳ ತಾಲೂಕು ಬಡಗ ಬೆಳ್ಳೂರು ನಿವಾಸಿ ಬಿಜೆಪಿಯ ಅಮ್ಟಾಡಿ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿಯಾಗಿರುವ ಪ್ರಕಾಶ್ ಬೆಳ್ಳೂರು ರವರ ಮೇಲೆ ಅ 26 ರಂದು ಸಂಜೆ ತಲವಾರು ನಿಂದ ಹಲ್ಲೆ ನಡೆಸಿದ ಆರೋಪಿಗಳ ವಿರುದ್ದ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿತಿನ್, ನಿಶಾಂತ್ ಮತ್ತು 3 ಜನರು ಹಲ್ಲೆ ನಡೆಸಿರುವುದಾಗಿ ಪ್ರಕಾಶ್(31) ರವರು ದೂರಿನಲ್ಲಿ ತಿಳಿಸಿದ್ದು ಅದರಂತೆ ಆರೋಪಿಗಳ ವಿರುದ್ದ ಐಪಿಸಿ ಕಲಂ 448, 504 323 324 307 506 ಜೊತೆಗೆ 34 ಐಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.
ದೂರಿನಲ್ಲಿ ಏನಿದೆ ?
ಪ್ರಕಾಶ್ ಬೆಳ್ಳೂರು ರವರು ಪ್ರವಾಸಿ ಪ್ರಬಂದಕನಾಗಿ ಕೆಲಸ ಮಾಡಿಕೊಂಡು ಬರುತ್ತಿದ್ದು ಕೋವಿಡ್ 19 ರ ಹಿನ್ನಲೆಯಲ್ಲಿ ಸದ್ಯ ಮನೆಯಲ್ಲಿದ್ದಾರೆ. ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ನಡೆದ ಘಟನೆಯೊಂದರ ಬಗ್ಗೆ ಪ್ರಕಾಶ್ ರವರು ಆರೋಪಿ ನಿತಿನ್ ಪರವಾಗಿ ರೂ 25000 ಹಣ ಪಡೆದುಕೊಂಡು ಕೆಲಸ ಮಾಡಿದ್ದೇನೆ ಎಂದು ರತ್ನಾಕರ ಕೋಟ್ಯಾನ ರವರು ಅಪಪ್ರಚಾರ ಮಾಡಿದ್ದಾರೆ. ಈ ಬಗ್ಗೆ ದೇವಸ್ಥಾನವೊಂದಕ್ಕೆ ಸತ್ಯಾಸತ್ಯತೆ ಬಗ್ಗೆ ಬರುವಂತೆ ಪ್ರಕಾಶ್ ಫೇಸ್ ಬುಕ್ ನಲ್ಲಿ ಫೋಸ್ಟ್ ಹಾಕಿದ್ದರು. ಪೋಸ್ಟ್ ಹಾಕಿದರ ವಿರುದ್ದ ನಿತಿನ್, ನಿಶಾಂತ್ ಮತ್ತು ರತ್ನಾಕರ ಕೋಟ್ನಾನ್ ರವರು ಪ್ರಕಾಶ್ ರವರಿಗೆ ಕೊಲೆ ಬೆದರಿಕೆ ಹಾಕಿದ್ದರು. ಈ ಬಗ್ಗೆ ಅವರು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ನಿನ್ನೆ ಏನಾಯಿತು ?
ಅ .26 ರಂದು ಸಂಜೆ 7 ಗಂಟೆ ಸುಮಾರಿಗೆ ಪ್ರಕಾಶ್ ರವರು ಮನೆಯಲ್ಲಿದ್ದ ವೇಳೆ ನಿತಿನ್ ನಿಶಾಂತ್ ಮತ್ತು 3 ಜನರು ಅವರ ಮನೆಗೆ ಅಕ್ರಮ ಪ್ರವೇಶ ಮಾಡಿದ್ದಾರೆ. ನಿತಿನ್ ಕೈಯಲ್ಲಿ ತಲವಾರು ಹಿಡಿದುಕೊಂಡು ಬಂದಿದ್ದು ಪ್ರಕಾಶ್ ರವರಿಗೆ ಅವಾಚ್ಯ ಶಬ್ದಗಳಿಂದ ಬೈದಿದ್ದಾರೆ. ನೀನು ನಮ್ಮ ಬಗ್ಗೆ ಫೇಸ್ ಬುಕ್ ನಲ್ಲಿ ಬಾರಿ ಫೋಸ್ಟ್ ಮಾಡುತ್ತೀಯಾ ? ಎಂದು ಪ್ರಶ್ನಿಸಿದ ನಿತಿನ್ ತನ್ನ ಕೈಯ್ಯಲ್ಲಿದ್ದ ತಲವಾರನ್ನು ಪ್ರಕಾಶ್ ಮೇಲೆ ಬೀಸಿದ್ದು, ಈ ವೇಳೇ ಅವರು ತಪ್ಪಿಸಿಕೊಳ್ಳಲು ಪ್ರಯತ್ನಿಸಿದಾಗ ಅದು ಅವರ ಎಡ ಕಿವಿಗೆ ತಾಗಿ ಗಾಯವಾಗಿದೆ.
ಆಗ ಉಳಿದೆವರೆಲ್ಲರು ʼಕಡಿ ಬಿಡಬೇಡʼ ಎಂದು ನಿತಿನನ್ನು ಪ್ರಚೋದಿಸಿದ್ದು ಮಾತ್ರವಲ್ಲದೇ ಪ್ರಕಾಶ್ ರವರ ಬೆನ್ನಿಗೆ ಬಲ ತೊಡೆಗೆ ಬಲ ಭುಜಕ್ಕೆ ತಲೆಗೆ ಹಿಗ್ಗಾ ಮುಗ್ಗ ಕೈಯಿಂದ ಹೊಡೆದಿದ್ದಾರೆ ಕಾಲಿನಿಂದ ತುಳಿದಿದ್ದಾರೆ ಎಂದು ಆರೋಪಿಸಲಾಗಿದೆ. ಈ ವೇಳೆ ಪ್ರಕಾಶ್ ಜೋರಾಗಿ ಬೊಬ್ಬೆ ಹೊಡೆದಿದ್ದು ಆಗ ಅವರ ಅಣ್ಣ ರವೀಂದ್ರ , ಲೀಲಾ ಮತ್ತು ಅತ್ತಿಗೆ ಗಲಾಟೆ ಬಿಡಿಸಲು ಬಂದಿದ್ದಾರೆ. ಆಗ ಆರೋಪಿಗಳು “ನೀವು ಹತ್ತಿರ ಬಂದರೆ ನಿಮ್ಮನ್ನು ಕೂಡ ಜೀವ ಸಹಿತ ಬಿಡುವುದಿಲ್ಲ” ಎಂದು ಬೆದರಿಕೆ ಹಾಕಿ ಓಡಿ ಹೋಗಿರುತ್ತಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ
ಇದನ್ನೂ ಓದಿ : ಬಂಟ್ವಾಳ : ಬಿಜೆಪಿ ಮುಖಂಡನ ಮೇಲೆ ತಲ್ವಾರ್ ದಾಳಿ – ಗಂಭೀರ ಗಾಯ | ಸಂಘಟನೆಯೊಂದರ ಕಾರ್ಯಕರ್ತರ ಕೃತ್ಯ ಶಂಕೆ
Uncategorized
Philomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ವಂದನ ಶಂಕರ್ ಮಾತನಾಡಿ, ಪಿ ಯು ಸಿ ನಂತರದ ಅವಕಾಶಗಳು, ಇಂಜಿನಿಯರಿಂಗ್ ವಿಭಾಗಗಳಲ್ಲಿ ಇರುವ ಉದ್ಯೋಗಾವಕಾಶಗಳ ಬಗ್ಗೆ ತಿಳಿಸಿದರು.
ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಚೇತನ್ ಮಾತನಾಡಿ, ಮಾದಕ ವಸ್ತುಗಳು ಹಾಗೂ ದೂಮಪಾನದ ವ್ಯಸನ ನಮ್ಮ ನೆನಪಿನ ಶಕ್ತಿಯನ್ನು ಕುಗ್ಗಿಸುತ್ತದೆ ಮತ್ತು ಕ್ಯಾನ್ಸರ್ ನಂತಹ ಮಾರಕ ರೋಗಗಳಿಗೆ ದಾರಿ ಮಾಡಿಕೊಡುತ್ತದೆ. ಹಾಗೆಯೇ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ನಮ್ಮ ಏಕಾಗ್ರತೆಯನ್ನು ಭಂಗ ಗೊಳಿಸುತ್ತದೆ ಎಂದು ಹೇಳಿದರು.

ವೃತ್ತಿ ಮಾರ್ಗದರ್ಶನ ವಿಭಾಗದ ನಿರ್ದೇಶಕರಾದ ರವಿಪ್ರಸಾದ್ ಬಿ. ಜಿ ನಿರಂಜನ್ ಜಿ. ಯು, ಕವಿತಾ ಕೆ ಹಾಗೂ ಕಾಲೇಜಿನ ಬೋಧಕ /ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
Uncategorized
ಹಿರಿಯ ಸಹಕಾರಿ ಧುರೀಣ ಕೆ.ಕೆ. ನಾರಾಯಣ ಚಳ್ಳಂಗಾರು ನಿಧನ

ಕಲ್ಮಡ್ಕ: ತಾಲೂಕಿನ ಹಿರಿಯ ಸಹಕಾರಿ ಧುರೀಣ, ಸಾಮಾಜಿಕ ಮುಖಂಡ, ಬಹುಮುಖ ಚಿಂತಕ ಕಲ್ಮಡ್ಕ ಗ್ರಾಮದ ಚಳ್ಳಂಗಾರು ಕೆ.ಕೆ. ನಾರಾಯಣ (88) ಅವರು ವಯೋಸಹಜ ಅನಾರೋಗ್ಯದಿಂದ ಗುರುವಾರ ಸಂಜೆ ನಿಧನರಾದರು.
ಮಂಡಲ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ತಮ್ಮ ಅವಧಿಯಲ್ಲಿ ಗ್ರಾಮದಲ್ಲಿ ಅಭಿವೃದ್ಧಿಯ ಹೊಸ ಶಕೆಗೆ ನಾಂದಿ ಹಾಡಿದ್ದರು. ಕಲ್ಮಡ್ಕ ಸಹಕಾರಿ ಸಂಘದ ನಿರ್ದೇಶಕರಾಗಿ ಸಂಸ್ಥೆಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದ ಅವರು, ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದರು. ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು.
ಕಲ್ಮಡ್ಕ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ವಿಶೇಷ ಶ್ರಮ ವಹಿಸಿದ್ದ ಅವರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಯಕ್ಷಗಾನದ ಅರ್ಥಧಾರಿಯಾಗಿ ಕಲಾ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದ ನಾರಾಯಣ ಅವರು, ಸಂಗಮ ಕಲಾ ಸಂಘದ ನಿರ್ದೇಶಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಉತ್ತಮ ಓದುಗ ಹಾಗೂ ವಿಮರ್ಶಕರಾಗಿದ್ದ ಅವರು ಸಾಹಿತ್ಯ, ಕಲೆ, ಸಹಕಾರ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.
ಮೃತರು ಪತ್ನಿ ಸುಬ್ಬಮ್ಮ, ಪುತ್ರಿಯರಾದ ವಿದ್ಯಾ, ಜಯಶ್ರೀ, ದೀಪಿಕಾ, ಪುತ್ರ, ಕ್ಯಾಂಪ್ಕೋ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ನ್ಯಾಯವಾದಿ ಮುರಳಿಕೃಷ್ಣ ಚಳ್ಳಂಗಾರು, ಸೊಸೆ ರಮ್ಯಾ ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
Uncategorized
ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ- ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಚಾಲನೆ

ಪುತ್ತೂರು: ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ನಡೆಯಲಿರುವ ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಧಾನಸಭೆಯ ವಿರೋಧಪಕ್ಷದ ನಾಯಕ ಆರ್.ಅಶೋಕ್ ಅವರು ಚಾಲನೆ ನೀಡಿದರು.
ನ.19ರಂದು ಪುತ್ತೂರಿನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ವೀರಾಂಜನೇಯ ಕ್ಷೇತ್ರದಲ್ಲಿ ನಡೆಯುವ ಪಂಚಮುಖಿ ಆಂಜನೇಯ ಹವನದ ಸ್ಟಿಕ್ಕರ್ ಅನ್ನು ಆಟೋ ರಿಕ್ಷಾಗಳಿಗೆ ಅಂಟಿಸುವ ಮೂಲಕ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಯಶಸ್ಸು ಕೋರಿದರು.
ಆಟೋ ರಿಕ್ಷಾಗಳ ಎದುರಿನ ಮತ್ತು ಹಿಂಬದಿಯ ಭಾಗಕ್ಕೆ ತಾವೆ ಸ್ವತಃ ಸ್ಟಿಕ್ಕರ್ ಅಂಟಿಸಿ ಎಲ್ಲರೂ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು, ಪಂಚಮುಖಿ ಆಂಜನೇಯ ಯಾಗ ಸಮಿತಿ ಪ್ರಧಾನ ಕಾರ್ಯದರ್ಶಿ ಮುರಳಿಕೃಷ್ಣ ಹಸಂತಡ್ಕ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಪ್ರಧಾನ ಕಾರ್ಯದರ್ಶಿ ಸುನಿಲ್ ದಡ್ಡು, ಯಾಗ ಸಮಿತಿಯ ಪ್ರಮುಖರಾದ ಶ್ಯಾಮ ಸುದರ್ಶನ್ ಹೊಸಮೂಲೆ, ಜಯಂತ ಶೆಟ್ಟಿ ಕಂಬಳತ್ತಡ್ಕ, ಶ್ರೀಧರ್ ತೆಂಕಿಲ ಸಹಿತ ಆಟೋ ರಿಕ್ಷಾ ಚಾಲಕರು ಮತ್ತು ಮಾಲಕರು ಉಪಸ್ಥಿತರಿದ್ದರು.















