ಬಿಗ್ ನ್ಯೂಸ್
Joseph-ಒಂದೂ ದಿನ ಲೇಟಾಗಿ ಬಂದಿಲ್ಲ, ರಸ್ತೆಯಲ್ಲಿ ಯಾವತ್ತೂ Rash driving ಮಾಡಿಲ್ಲ; ಮಂಗಳೂರು -ಮುಂಬೈ ರೂಟಿನ ನಗುಮುಖದ ಚಾಲಕ ಜೋಸೆಫ್ ನಿವೃತ್ತಿ ಜೀವನಕ್ಕೆ ಕೆಎಸ್‌ಆರ್‌ಟಿಸಿ ಸಲಾಂ..!
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್‌ಆರ್‌ಟಿಸಿ) ವೊಲ್ವೊ ಬಸ್ ಚಾಲಕರಾಗಿ ಬರೋಬ್ಬರಿ 34 ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿದ ಜೋಸೆಫ್ ಮೊಚೆಡಾ ಅವರು ಮೇ 29ರಂದು ನಿವೃತ್ತರಾಗಿದ್ದಾರೆ. ಅವರ ಕರ್ತವ್ಯನಿಷ್ಠೆ ಮತ್ತು ನಗುಮುಖದ ಸೇವೆಯನ್ನು ಮೆಚ್ಚಿ ಕೆಎಸ್‌ಆರ್‌ಟಿಸಿ ಸಿಬ್ಬಂದಿ ಹಾಗೂ ಅಧಿಕಾರಿಗಳು ಅತ್ಯಂತ ಸಂಭ್ರಮದಿಂದ ಅವರನ್ನು ಬೀಳ್ಕೊಟ್ಟಿದ್ದು, ಈ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಮನಗೆದ್ದಿವೆ.
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್‌ಆರ್‌ಟಿಸಿ) ವೊಲ್ವೊ ಬಸ್ ಚಾಲಕರಾಗಿ ಬರೋಬ್ಬರಿ 34 ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿದ ಜೋಸೆಫ್ ಮೊಚೆಡಾ ಅವರು ಮೇ 29ರಂದು ನಿವೃತ್ತರಾಗಿದ್ದಾರೆ. ಅವರ ಕರ್ತವ್ಯನಿಷ್ಠೆ ಮತ್ತು ನಗುಮುಖದ ಸೇವೆಯನ್ನು ಮೆಚ್ಚಿ ಕೆಎಸ್‌ಆರ್‌ಟಿಸಿ ಸಿಬ್ಬಂದಿ ಹಾಗೂ ಅಧಿಕಾರಿಗಳು ಅತ್ಯಂತ ಸಂಭ್ರಮದಿಂದ ಅವರನ್ನು ಬೀಳ್ಕೊಟ್ಟಿದ್ದು, ಈ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಮನಗೆದ್ದಿವೆ.
ಪ್ರಯಾಣಿಕರ ನೆಚ್ಚಿನ ಚಾಲಕ:
ಜೋಸೆಫ್ ಮೊಚೆಡಾ ಅವರು ಮಂಗಳೂರು ಮತ್ತು ಮುಂಬೈ ನಡುವೆ ಸಂಚರಿಸುವ ಕೆಎಸ್‌ಆರ್‌ಟಿಸಿ ಬಸ್‌ನ ಕಾಯಂ ಪ್ರಯಾಣಿಕರಿಗೆ ಚಿರಪರಿಚಿತ ಮುಖ. ತಮ್ಮ ವೃತ್ತಿಜೀವನದುದ್ದಕ್ಕೂ ಅವರು ಪಾಲಿಸಿಕೊಂಡು ಬಂದ ಶಿಸ್ತು ಎಲ್ಲರಿಗೂ ಮಾದರಿಯಾದದ್ದು.
ಸಂಸ್ಥೆ ಮೆಚ್ಚಿದ ಶಿಸ್ತು:
ಜೋಸೆಫ್ ಅವರ ಬಗ್ಗೆ ಹೆಮ್ಮೆಯಿಂದ ಮಾತನಾಡುವ ಸಂಸ್ಥೆಯ ಅಧಿಕಾರಿಗಳು, “ಜೋಸೆಫ್ ಅವರು ತಮ್ಮ ಇಡೀ ವೃತ್ತಿ ಜೀವನದಲ್ಲಿ ಒಂದೇ ಒಂದು ದಿನವೂ ಕೆಲಸಕ್ಕೆ ತಡವಾಗಿ ಬಂದವರಲ್ಲ. ರಸ್ತೆಯಲ್ಲಿ ಯಾವತ್ತೂ ಅವಸರವಾಗಿ ಅಥವಾ ಅಜಾಗರೂಕತೆಯಿಂದ ಬಸ್ ಚಲಾಯಿಸಿದವರಲ್ಲ. ಸದಾ ನಗುಮುಖದಿಂದಲೇ ಪ್ರಯಾಣಿಕರನ್ನು ಸ್ವಾಗತಿಸುತ್ತಿದ್ದರು” ಎಂದು ಅವರ ಕೆಲಸದ ಶ್ರದ್ಧೆಯನ್ನು ಕೊಂಡಾಡಿದ್ದಾರೆ.
ವೈರಲ್ ಆದ ಬೀಳ್ಕೊಡುಗೆ:
ಮೇ 29ರಂದು ನಡೆದ ಸಮಾರಂಭದಲ್ಲಿ ಸ್ನೇಹಿತರು ಮತ್ತು ಸಹೋದ್ಯೋಗಿಗಳ ಸಮ್ಮುಖದಲ್ಲಿ ಜೋಸೆಫ್ ಕೇಕ್ ಕತ್ತರಿಸಿದರು. ಈ ವೇಳೆ ಅವರ ಅಭಿಮಾನಿಗಳು ಮತ್ತು ಆತ್ಮೀಯರು ಉಡುಗೊರೆಗಳನ್ನು ನೀಡಿ ಶುಭ ಹಾರೈಸಿದರು.
ನೆಟ್ಟಿಗರ ಮೆಚ್ಚುಗೆ:
ಸಾಮಾಜಿಕ ಜಾಲತಾಣಗಳಲ್ಲಿ ಜೋಸೆಫ್ ಅವರ ನಿವೃತ್ತಿಯ ವಿಡಿಯೊ ಹಂಚಿಕೊಂಡಿರುವ ನೆಟ್ಟಿಗರು, “ಒಬ್ಬ ಅತ್ಯುತ್ತಮ ಮತ್ತು ಸುರಕ್ಷಿತ ಚಾಲಕನನ್ನು ನಾವು ಮಿಸ್ ಮಾಡಿಕೊಳ್ಳುತ್ತೇವೆ. ನಿಮ್ಮ ನಗುಮುಖದ ಸಾರ್ಥಕ ಸೇವೆಗೆ ನಮ್ಮದೊಂದು ಸಲಾಂ” ಎಂದು ಕಮೆಂಟ್ ಮಾಡುತ್ತಿದ್ದಾರೆ. ಹಲವು ಪ್ರಯಾಣಿಕರು ತಮ್ಮ ಹಳೆಯ ಪ್ರಯಾಣದ ನೆನಪುಗಳನ್ನು ಹಂಚಿಕೊಳ್ಳುತ್ತಾ ಜೋಸೆಫ್ ಅವರ ನಿವೃತ್ತ ಜೀವನ ಸುಖಮಯವಾಗಿರಲಿ ಎಂದು ಹಾರೈಸಿದ್ದಾರೆ.
ಸ್ಥಳೀಯ
Beltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್‌ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು
ದಾವಣಗೆರೆಯಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಮಾರ್ಗಮಧ್ಯೆ ಏಕಾಏಕಿ ಅಸ್ವಸ್ಥಗೊಂಡು ಪ್ರಜ್ಞೆತಪ್ಪಿದ ಘಟನೆ ನಡೆದಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಬಸ್ ಚಾಲಕ ತಕ್ಷಣ ಬಸ್ಸನ್ನು ಕಕ್ಕಿಂಜೆಯ ಆಸ್ಪತ್ರೆಗೆ ಕೊಂಡೊಯ್ದು ಮಹಿಳೆಯನ್ನು ದಾಖಲಿಸುವ ಮೂಲಕ ಸಮಯಪ್ರಜ್ಞೆ ಮೆರೆದಿದ್ದಾರೆ.
ಬೆಳ್ತಂಗಡಿ: ದಾವಣಗೆರೆಯಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಮಾರ್ಗಮಧ್ಯೆ ಏಕಾಏಕಿ ಅಸ್ವಸ್ಥಗೊಂಡು ಪ್ರಜ್ಞೆತಪ್ಪಿದ ಘಟನೆ ನಡೆದಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಬಸ್ ಚಾಲಕ ತಕ್ಷಣ ಬಸ್ಸನ್ನು ಕಕ್ಕಿಂಜೆಯ ಆಸ್ಪತ್ರೆಗೆ ಕೊಂಡೊಯ್ದು ಮಹಿಳೆಯನ್ನು ದಾಖಲಿಸುವ ಮೂಲಕ ಸಮಯಪ್ರಜ್ಞೆ ಮೆರೆದಿದ್ದಾರೆ.
ಬಾಳೆಹೊನ್ನೂರು ಮೂಲದ 26 ವರ್ಷದ ಮಹಿಳೆಯೊಬ್ಬರು ಮಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ವಾರ್ಡನ್ ಆಗಿ ಕೆಲಸ ಮಾಡುತ್ತಿದ್ದು, ಕರ್ತವ್ಯಕ್ಕೆ ತೆರಳುತ್ತಿದ್ದರು. ಪ್ರಯಾಣದ ವೇಳೆ ಏಕಾಏಕಿ ಅಸ್ವಸ್ಥಗೊಂಡ ಅವರು ಪ್ರಜ್ಞೆ ಕಳೆದುಕೊಂಡಿದ್ದು, ಮಾತನಾಡಲು ಹಾಗೂ ದೇಹವನ್ನು ಚಲಿಸಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿತ್ತು.
ಇದನ್ನು ಗಮನಿಸಿದ ಬಸ್ ಚಾಲಕ ಕಿರಣ್ ಅವರು ಯಾವುದೇ ಸಮಯ ವ್ಯರ್ಥ ಮಾಡದೆ ತಕ್ಷಣ ಬಸ್ಸನ್ನು ಕಕ್ಕಿಂಜೆಯ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಬಳಿಕ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ದೊರೆಯುವಂತೆ ನೋಡಿಕೊಂಡಿದ್ದಾರೆ.
ಸದ್ಯ ಮಹಿಳೆ ಅಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಅಂತರ ರಾಜ್ಯ
ಕಾಸರಗೋಡು: ಆರ್‌ಎಸ್‌ಎಸ್ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ
ವಂದೇ ಮಾತರಂನ 150ನೇ ವಾರ್ಷಿಕೋತ್ಸವದ ಅಂಗವಾಗಿ ಕೇರಳ ಕೇಂದ್ರ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಎರಡು ದಿನಗಳ ರಾಷ್ಟ್ರೀಯ ವಿಚಾರಸಂಕಿರಣದಲ್ಲಿ ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವಕ್ತಾರರು ಭಾಗವಹಿಸಿರುವುದನ್ನು ವಿರೋಧಿಸಿ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಈ ವೇಳೆ ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ನಡೆದ ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಕಾಸರಗೋಡು, ಅ.6: ವಂದೇ ಮಾತರಂನ 150ನೇ ವಾರ್ಷಿಕೋತ್ಸವದ ಅಂಗವಾಗಿ ಕೇರಳ ಕೇಂದ್ರ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಎರಡು ದಿನಗಳ ರಾಷ್ಟ್ರೀಯ ವಿಚಾರಸಂಕಿರಣದಲ್ಲಿ ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವಕ್ತಾರರು ಭಾಗವಹಿಸಿರುವುದನ್ನು ವಿರೋಧಿಸಿ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಈ ವೇಳೆ ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ನಡೆದ ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಸಾಹಿತ್ಯ ಅಕಾಡೆಮಿ, ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಹಾಗೂ ಕೇರಳ ಕೇಂದ್ರ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಈ ವಿಚಾರಸಂಕಿರಣ ಆಯೋಜಿಸಲಾಗಿದೆ. ಆರ್‌ಎಸ್‌ಎಸ್‌ನ ಬೌದ್ಧಿಕ ವಿಭಾಗವೆಂದು ಪರಿಗಣಿಸಲಾಗುವ ಪ್ರಜ್ಞಾ ಪ್ರವಾಹದ ರಾಷ್ಟ್ರೀಯ ಸಂಚಾಲಕ ಜೆ. ನಂದಕುಮಾರ್ ಅವರು ವಿಚಾರಸಂಕಿರಣದಲ್ಲಿ ಮುಖ್ಯ ಭಾಷಣ ಮಾಡುತ್ತಿರುವುದನ್ನು ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಕಾರ್ಯಕ್ರಮ ನಡೆಯುತ್ತಿದ್ದ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳು ಪ್ರವೇಶಿಸಲು ಯತ್ನಿಸಿದಾಗ ಪೊಲೀಸರು ಅವರನ್ನು ತಡೆದರು. ಈ ವೇಳೆ ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ಘರ್ಷಣೆ ಸಂಭವಿಸಿದೆ.
ಘರ್ಷಣೆಯಲ್ಲಿ ಎಸ್‌ಎಫ್‌ಐ ಕೇರಳ ಕೇಂದ್ರ ವಿಶ್ವವಿದ್ಯಾಲಯ ಘಟಕದ ಕಾರ್ಯದರ್ಶಿ ಸೈಯದ್ ಅಲಿ, ಪ್ಲಾಂಟ್ ಸೈನ್ಸ್ ವಿಭಾಗದ ಅಭಿರಾಗ್ ಹಾಗೂ ಇಂಟರ್‌ನ್ಯಾಷನಲ್ ರಿಲೇಶನ್ಸ್ ವಿಭಾಗದ ಮುರಳೀಕೃಷ್ಣನ್ ಎಂಬ ಮೂವರು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಅಂತರ ರಾಜ್ಯ
Ashutosh Dixit-ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ
ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ಅವರನ್ನು ನೇಮಕ ಮಾಡಲಾಗಿದೆ ಎಂದು ಕೇಂದ್ರ ಸರಕಾರ ಮಂಗಳವಾರ ಪ್ರಕಟಿಸಿದೆ. ಅವರು ಅಕ್ಟೋಬರ್ 31ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಹೊಸದಿಲ್ಲಿ: ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ಅವರನ್ನು ನೇಮಕ ಮಾಡಲಾಗಿದೆ ಎಂದು ಕೇಂದ್ರ ಸರಕಾರ ಮಂಗಳವಾರ ಪ್ರಕಟಿಸಿದೆ. ಅವರು ಅಕ್ಟೋಬರ್ 31ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಹಾಲಿ ವಾಯುಪಡೆ ಮುಖ್ಯಸ್ಥರಾಗಿರುವ ಏರ್ ಚೀಫ್ ಮಾರ್ಷಲ್ ಎ.ಪಿ. ಸಿಂಗ್ ಅವರು ಅಕ್ಟೋಬರ್ 31ರಂದು ನಿವೃತ್ತರಾಗಲಿದ್ದು, ಅವರ ಸ್ಥಾನವನ್ನು ದೀಕ್ಷಿತ್ ಅಲಂಕರಿಸಲಿದ್ದಾರೆ.
ಪ್ರಸ್ತುತ ವಾಯುಪಡೆಯ ಉಪ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿರುವ 59 ವರ್ಷದ ಅಶುತೋಷ್ ದೀಕ್ಷಿತ್ ಅವರು 1986ರ ಡಿಸೆಂಬರ್‌ನಲ್ಲಿ ಭಾರತೀಯ ವಾಯುಪಡೆಯ ಫೈಟರ್ ಸ್ಟ್ರೀಮ್‌ಗೆ ನಿಯೋಜನೆಗೊಂಡಿದ್ದರು. ಅವರು 2028ರ ಡಿಸೆಂಬರ್ 31ರವರೆಗೆ ವಾಯುಪಡೆ ಮುಖ್ಯಸ್ಥರಾಗಿ ಸೇವೆ ಸಲ್ಲಿಸಲಿದ್ದಾರೆ.
ಅಶುತೋಷ್ ದೀಕ್ಷಿತ್ ಅವರು ಪ್ರಾಯೋಗಿಕ ಪರೀಕ್ಷಾರ್ಥ ಪೈಲಟ್ ಹಾಗೂ ಫ್ಲೈಟ್ ಇನ್‌ಸ್ಟ್ರಕ್ಟರ್ ಆಗಿಯೂ ಸೇವೆ ಸಲ್ಲಿಸಿದ್ದಾರೆ. ಮಿರಾಜ್-2000, ವಿವಿಧ ಮಾದರಿಯ ಮಿಗ್ ಯುದ್ಧ ವಿಮಾನಗಳು, ಜಾಗ್ವಾರ್ ಮತ್ತು ತೇಜಸ್ ಸೇರಿದಂತೆ ಹಲವು ಯುದ್ಧ ವಿಮಾನಗಳಲ್ಲಿ 3,500 ಗಂಟೆಗಳಿಗೂ ಹೆಚ್ಚು ಹಾರಾಟದ ಅನುಭವ ಹೊಂದಿದ್ದಾರೆ.
-
ದಕ್ಷಿಣ ಕನ್ನಡ23 hours ago
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರಯಾಣಿಸುತ್ತಿದ್ದ ಕಾರು ಅಪಘಾತ
-
ಅಪರಾಧ23 hours agoSomasekhar-ನಕಲಿ ದಾಖಲೆ ಸೃಷ್ಟಿಸಿ ಕೈದಿಯ ಬಿಡುಗಡೆ..! ಪ್ರತಿಯಾಗಿ ಆತನ ಪತ್ನಿಯನ್ನು ಲೈಂಗಿಕವಾಗಿ ಬಳಸಿಕೊಳ್ಳುವ ಒಪ್ಪಂದ ಮಾಡಿಕೊಂಡಿದ್ದ ಡಿಐಜಿ ಎಂ. ಸೋಮಶೇಖರ್
-
ನಿಧನ ವಾರ್ತೆ22 hours agoPuttur-ಪುತ್ತೂರು: ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಪಡೆಯುತ್ತಿದ್ದ ಸ್ಕೂಟರ್ ಸವಾರ ಮೃತ್ಯು
-
ಬಿಗ್ ನ್ಯೂಸ್17 hours agoಡಿಕೆಶಿ ಸರ್ಕಾರದಿಂದ ಜನತೆಗೆ ಬಿಗ್ ಶಾಕ್ – ರೈತರಿಗೆ ಬಂಪರ್ ಗಿಫ್ಟ್..! ಹಾಲಿನ ದರ 8 ರೂ. ಏರಿಕೆ : 6 ರೂ. ರೈತರಿಗೆ..! ನ.1 ರಿಂದ ಬಹುತೇಕ ಜಾರಿ
-
ಶಿಕ್ಷಣ21 hours agoPhilomena-ಸಂತ ಫಿಲೋಮಿನಾ ಕಾಲೇಜು : 35 ವರ್ಷಗಳ ಬಳಿಕ ಮತ್ತೆ ಒಂದಾದ 1991ರ ಬಿ.ಎಸ್ಸಿ. ಬ್ಯಾಚ್; ನೆನಪು, ನಂಟು ಮತ್ತು ಗುರು-ಗೌರವದ ಭಾವಪೂರ್ಣ ಸಂಗಮ
-
ನಿಧನ ವಾರ್ತೆ22 hours agoDead body-ಹುಲಿವೇಷ ತರಬೇತಿಗೆಂದು ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ಬಾಲಕ ಸಮುದ್ರ ಪಾಲು; ಮೃತದೇಹ ಪತ್ತೆ
-
ನಿಧನ ವಾರ್ತೆ21 hours agoKerala-ಕೇರಳ: ಸಿಡಿಲು ಬಡಿದು ಖ್ಯಾತ ‘ಪಲ್ಲಟ್ಟು ಬ್ರಹ್ಮದತ್ತನ್’ ಆನೆ ದಾರುಣ ಸಾವು
-
ಬಿಗ್ ನ್ಯೂಸ್22 hours agoPuttur-ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ: ‘ಭಕ್ತರನ್ನು ಕಡೆಗಣಿಸಿ ಜೀರ್ಣೋದ್ಧಾರ ಸಮಿತಿ ರಚನೆ’ – ವಿಹಿಂಪ ಆಕ್ಷೇಪ


















