Connect with us

ಸ್ಥಳೀಯ

CBSE-ಸಿಬಿಎಸ್‌ಇ 12ನೇ ತರಗತಿ ಮರುಮೌಲ್ಯಮಾಪನ ಪೋರ್ಟಲ್ ಓಪನ್: ಈಗಾಗಲೇ 40 ಸಾವಿರ ವಿದ್ಯಾರ್ಥಿಗಳಿಂದ ಅರ್ಜಿ ಸಲ್ಲಿಕೆ..!

Published

on



Ad Widget

Ad Widget

Ad Widget

Ad Widget

ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) 12ನೇ ತರಗತಿಯ ಉತ್ತರ ಪತ್ರಿಕೆಗಳ ಮರುಪರಿಶೀಲನೆ ಮತ್ತು ಮರುಮೌಲ್ಯಮಾಪನ ಪ್ರಕ್ರಿಯೆಗೆ ಚಾಲನೆ ನೀಡಿದೆ. ಜೂನ್ 2 ರಂದು ಪೋರ್ಟಲ್ ತೆರೆಯಲಾಗಿದ್ದು, ಕೇವಲ ಮೂರು ದಿನಗಳಲ್ಲಿ ಸುಮಾರು 40 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಯಶಸ್ವಿಯಾಗಿ ಅರ್ಜಿ ಸಲ್ಲಿಸಿದ್ದಾರೆ ಎಂದು ಮಂಡಳಿ ಮಾಹಿತಿ ನೀಡಿದೆ.

Ad Widget

Ad Widget

Ad Widget

Ad Widget

ನವದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) 12ನೇ ತರಗತಿಯ ಉತ್ತರ ಪತ್ರಿಕೆಗಳ ಮರುಪರಿಶೀಲನೆ ಮತ್ತು ಮರುಮೌಲ್ಯಮಾಪನ ಪ್ರಕ್ರಿಯೆಗೆ ಚಾಲನೆ ನೀಡಿದೆ. ಜೂನ್ 2 ರಂದು ಪೋರ್ಟಲ್ ತೆರೆಯಲಾಗಿದ್ದು, ಕೇವಲ ಮೂರು ದಿನಗಳಲ್ಲಿ ಸುಮಾರು 40 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಯಶಸ್ವಿಯಾಗಿ ಅರ್ಜಿ ಸಲ್ಲಿಸಿದ್ದಾರೆ ಎಂದು ಮಂಡಳಿ ಮಾಹಿತಿ ನೀಡಿದೆ.

Ad Widget

Ad Widget

Ad Widget alt="Ad Widget"/>

Ad Widget

ಅರ್ಜಿ ಸಲ್ಲಿಸಲು ಜೂನ್ 6 ಕೊನೆಯ ದಿನ:
ಪೋರ್ಟಲ್ ಜೂನ್ 6ರ ಮಧ್ಯರಾತ್ರಿಯವರೆಗೆ ಮಾತ್ರ ತೆರೆದಿರುತ್ತದೆ. ಮೌಲ್ಯಮಾಪನ ಮಾಡಲಾದ ತಮ್ಮ ಉತ್ತರ ಪತ್ರಿಕೆಗಳ ಸ್ಕ್ಯಾನ್ ಮಾಡಿದ ಪ್ರತಿಯನ್ನು (Scanned Copy) ಈಗಾಗಲೇ ಪಡೆದುಕೊಂಡಿರುವ ವಿದ್ಯಾರ್ಥಿಗಳು ಮಾತ್ರ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

Ad Widget

Ad Widget <> Ad Widget

ಸುಲಭ ಪಾವತಿ ವ್ಯವಸ್ಥೆ:
ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸ್ಟೇಟ್‌ ಬ್ಯಾಂಕ್ ಆಫ್ ಇಂದಿಯಾ, ಕೆನರಾ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ ಮತ್ತು ಇಂಡಿಯನ್ ಬ್ಯಾಂಕ್‌ಗಳ ಪೇಮೆಂಟ್ ಗೇಟ್‌ವೇಗಳನ್ನು ಒದಗಿಸಲಾಗಿದೆ. ಈ ಬ್ಯಾಂಕ್‌ಗಳಲ್ಲಿ ಖಾತೆ ಹೊಂದಿಲ್ಲದಿದ್ದರೂ ಸಹ ಯುಪಿಐ (UPI), ನೆಟ್ ಬ್ಯಾಂಕಿಂಗ್, ಕ್ರೆಡಿಟ್ ಅಥವಾ ಡೆಬಿಟ್ ಕಾರ್ಡ್‌ಗಳ ಮೂಲಕ ಸುಲಭವಾಗಿ ಹಣ ಪಾವತಿಸಬಹುದಾಗಿದೆ. ಯಾವುದೇ ಅಧಿಕೃತ ಮಾಹಿತಿಗಾಗಿ ಸಿಬಿಎಸ್‌ಇ ಪ್ರಕಟಣೆಗಳನ್ನು ಮಾತ್ರ ನಂಬುವಂತೆ ಮಂಡಳಿ ಮನವಿ ಮಾಡಿದೆ.



Ad Widget

ಹಿನ್ನೆಲೆ ಮತ್ತು ವಿವಾದ:
ಈ ವರ್ಷ ಜಾರಿಗೆ ತರಲಾದ ಆನ್-ಸ್ಟ್ರೀನ್ ಮಾರ್ಕಿಂಗ್ (OSM) ಅಥವಾ ಡಿಜಿಟಲ್ ಮೌಲ್ಯಮಾಪನ ವ್ಯವಸ್ಥೆಯಲ್ಲಿ ತಾಂತ್ರಿಕ ಅಡಚಣೆಗಳು ಮತ್ತು ಲೋಪಗಳು ಕಂಡುಬಂದಿದ್ದವು. ಇದರಿಂದ ಅನೇಕ ವಿದ್ಯಾರ್ಥಿಗಳ ಫಲಿತಾಂಶದಲ್ಲಿ ವ್ಯತ್ಯಾಸ ಉಂಟಾಗಿದೆ ಎಂದು ದೇಶಾದ್ಯಂತ ಪೋಷಕರು ಮತ್ತು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಗೊಂದಲಗಳಿಗೆ ಪರಿಹಾರ ನೀಡಲು ಮಂಡಳಿಯು ಈಗ ಮರುಮೌಲ್ಯಮಾಪನದ ಅವಕಾಶವನ್ನು ಕಲ್ಪಿಸಿದೆ.

Ad Widget

Ad Widget

ಮೇ 29 ರಂದೇ ಈ ಪ್ರಕ್ರಿಯೆ ಆರಂಭವಾಗಬೇಕಿತ್ತಾದರೂ, ತಾಂತ್ರಿಕ ಕಾರಣಗಳಿಂದ ಜೂನ್ 2 ರಂದು ವಿಳಂಬವಾಗಿ ಪೋರ್ಟಲ್ ಕಾರ್ಯಾರಂಭ ಮಾಡಿದೆ. ವಿದ್ಯಾರ್ಥಿಗಳು ತಮಗೆ ಒದಗಿಸಲಾದ ಸ್ಕ್ಯಾನ್ ಪ್ರತಿಯಲ್ಲಿರುವ ದೋಷಗಳನ್ನು ಪರಿಶೀಲಿಸಿ, ಅಂಕಗಳಲ್ಲಿ ವ್ಯತ್ಯಾಸವಿದ್ದರೆ ತಕ್ಷಣವೇ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.

ಈ ಪೋರ್ಟಲ್ ಜೂನ್ 2 ರಿಂದ ಜೂನ್ 6 ರ (ಮಧ್ಯರಾತ್ರಿ) ವರೆಗೆ ತೆರೆದಿರುತ್ತದೆ ಮತ್ತು ಗಡುವಿನ ನಂತರ ಸಲ್ಲಿಸುವ ಯಾವುದೇ ಆಫ್‌ಲೈನ್‌ ಅರ್ಜಿಗಳು ಅಥವಾ ವಿನಂತಿಗಳನ್ನು ಸ್ವೀಕರಿಸಲಾಗುವುದಿಲ್ಲ.

ವಿದ್ಯಾರ್ಥಿಗಳು ತಮ್ಮ ಆಧಾರ್ ಸಂಖ್ಯೆಯನ್ನು ಬಳಸಿ ಸಿಬಿಎಸ್‌ಇ ವೆಬ್‌ಸೈಟ್ ಮೂಲಕ ಲಾಗಿನ್ ಆಗಬೇಕು ಮತ್ತು ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಸಲ್ಲಿಸಬೇಕು. ಶುಲ್ಕ ಪಾವತಿ ಸೇರಿದಂತೆ ಸಂಪೂರ್ಣ ಪ್ರಕ್ರಿಯೆಯನ್ನು ಡಿಜಿಟಲ್ ರೂಪದಲ್ಲೇ ನಡೆಸಲಾಗುವುದು ಎಂದು ಮಂಡಳಿ ತಿಳಿಸಿದೆ.

ಒದಗಿಸಲಾದ ಉತ್ತರ ಪತ್ರಿಕೆಗಳ ಸ್ಕ್ಯಾನ್ ಮಾಡಿದ ಪ್ರತಿಗಳಲ್ಲಿ ಕಂಡುಬರುವ ದೋಷಗಳ ಪರಿಶೀಲನೆಗೆ ಪ್ರತಿ ಉತ್ತರ ಪತ್ರಿಕೆಗೆ ₹100 ಶುಲ್ಕವಿದ್ದರೆ, ಉತ್ತರಗಳ ಮರುಮೌಲ್ಯಮಾಪನಕ್ಕೆ ಪ್ರತಿ ಪ್ರಶ್ನೆಗೆ ₹25 ಶುಲ್ಕ ವಿಧಿಸಲಾಗುತ್ತದೆ ಎಂದು ಅದು ತಿಳಿಸಿದೆ.

ವಿದ್ಯಾರ್ಥಿಗಳು ದೋಷಗಳ ಪರಿಶೀಲನೆ ಅಥವಾ ಮರುಮೌಲ್ಯಮಾಪನಕ್ಕಾಗಿ ತಲಾ ಒಂದೇ ಒಂದು ಅರ್ಜಿಯನ್ನು ಸಲ್ಲಿಸಬಹುದು. ಆದ್ದರಿಂದ ಒಂದು ಅಥವಾ ಹಲವು ವಿಷಯಗಳಿಗೆ ಅರ್ಜಿ ಸಲ್ಲಿಸಬೇಕೇ ಎಂಬುದನ್ನು ಮೊದಲೇ ನಿರ್ಧರಿಸಲು ಅವರಿಗೆ ಸಲಹೆ ನೀಡಲಾಗುತ್ತದೆ ಎಂದು ಮಂಡಳಿ ಹೇಳಿದೆ.

ಒಮ್ಮೆ ‘ಫ್ರೀಜ್ ಮತ್ತು ಪ್ರೊಸೀಡ್ ಟು ಪೇಮೆಂಟ್’ (freeze and proceed to payment) ಬಟನ್ ಕ್ಲಿಕ್ ಮಾಡಿದರೆ, ವಿವರಗಳನ್ನು ಲಾಕ್ ಮಾಡಲಾಗುತ್ತದೆ ಮತ್ತು ಅವುಗಳನ್ನು ಎಡಿಟ್ ಮಾಡಲು ಸಾಧ್ಯವಿಲ್ಲ. ಆದ್ದರಿಂದ, ಎಲ್ಲಾ ವಿವರಗಳು ಸರಿಯಾಗಿವೆಯೇ ಎಂಬುದನ್ನು ವಿದ್ಯಾರ್ಥಿಗಳು ಖಚಿತಪಡಿಸಿಕೊಳ್ಳಬೇಕು ಎಂದು ಸಿಬಿಎಸ್‌ಇ ತಿಳಿಸಿದೆ.

ಆನ್‌ಲೈನ್‌ ಪಾವತಿ ಪೂರ್ಣಗೊಂಡ ನಂತರವೇ ಅರ್ಜಿಗಳನ್ನು ಯಶಸ್ವಿಯಾಗಿ ಸಲ್ಲಿಕೆಯಾಗಿದೆ ಎಂದು ಪರಿಗಣಿಸಲಾಗುವುದು. ದೋಷಗಳ ಪರಿಶೀಲನೆ ಮತ್ತು ಮರುಮೌಲ್ಯಮಾಪನಕ್ಕೆ ತಲಾ ಒಂದೇ ಅರ್ಜಿಗೆ ಮಾತ್ರ ಅವಕಾಶ ನೀಡಲಾಗುವುದು ಎಂದೂ ಅದು ಹೇಳಿದೆ.

ವಿದ್ಯಾರ್ಥಿಗಳು ಅಗತ್ಯವಿರುವ ವಿವರಗಳನ್ನು (ಪ್ರಶ್ನೆ ಸಂಖ್ಯೆ, ಪುಟ ಸಂಖ್ಯೆ ಇತ್ಯಾದಿ) ಒದಗಿಸುವ ಮೂಲಕ ಒಂದು ಅಥವಾ ಹೆಚ್ಚಿನ ವಿಷಯಗಳಲ್ಲಿನ ಒಂದು ಅಥವಾ ಹೆಚ್ಚಿನ ಪ್ರಶ್ನೆಗಳ ಮರುಮೌಲ್ಯಮಾಪನಕ್ಕಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಥಿಗಳು ನಿಗದಿತ ಸಮಯದೊಳಗೆ ಅರ್ಜಿ ಸಲ್ಲಿಸಬೇಕು. ವಿದ್ಯಾರ್ಥಿಗಳಿಗೆ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಹಾಯ ಮಾಡಲು ದೃಶ್ಯ ಮಾರ್ಗದರ್ಶಿ (visual guide) ಮತ್ತು ಟ್ಯುಟೋರಿಯಲ್ ವಿಡಿಯೊವನ್ನು ಸಹ ಲಭ್ಯಗೊಳಿಸಲಾಗಿದೆ ಎಂದೂ ಹೇಳಿದೆ.

Ad Widget

ಶಿಕ್ಷಣ

Philomena-ಸಂತ ಫಿಲೋಮಿನಾ ಕಾಲೇಜು : 35 ವರ್ಷಗಳ ಬಳಿಕ ಮತ್ತೆ ಒಂದಾದ 1991ರ ಬಿ.ಎಸ್ಸಿ. ಬ್ಯಾಚ್; ನೆನಪು, ನಂಟು ಮತ್ತು ಗುರು-ಗೌರವದ ಭಾವಪೂರ್ಣ ಸಂಗಮ

Published

on



Ad Widget

Ad Widget

Ad Widget

Ad Widget

ಕಾಲ ಐದು ದಶಕಗಳತ್ತ ಸಾಗಿದರೂ, ಕಾಲೇಜಿನ ಆವರಣದಲ್ಲಿ ಕಳೆದ ಯೌವನದ ದಿನಗಳ ನೆನಪುಗಳು ಮಾತ್ರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿಯುತ್ತವೆ. ಅಂತಹ ಸುವರ್ಣ ನೆನಪುಗಳನ್ನು ಮತ್ತೊಮ್ಮೆ ಜೀವಂತಗೊಳಿಸಿದ ಅಪೂರ್ವ ಕ್ಷಣಕ್ಕೆ ಸಂತ ಫಿಲೋಮಿನಾ ಕಾಲೇಜು ಸಾಕ್ಷಿಯಾಯಿತು. 1991ರ ಬಿ.ಎಸ್ಸಿ. ಬ್ಯಾಚ್‌ನ ಹಿರಿಯ ವಿದ್ಯಾರ್ಥಿಗಳು 35 ವರ್ಷಗಳ ಬಳಿಕ ತಮ್ಮ ಎರಡನೇ ಪುನರ್ಮಿಲನ ಹಾಗೂ ಗುರುವಂದನಾ ಕಾರ್ಯಕ್ರಮಕ್ಕಾಗಿ ರವಿವಾರ ಪಿಜಿ ಸೆಮಿನಾರ್ ಹಾಲ್‌ನಲ್ಲಿ ಸೇರಿ, ಹಳೆಯ ಸ್ನೇಹ, ಗೌರವ ಮತ್ತು ಆತ್ಮೀಯತೆಯನ್ನು ಮರುಕಳಿಸಿದರು.

Ad Widget

Ad Widget

Ad Widget

Ad Widget

ಪುತ್ತೂರು, ಅ.4: ಕಾಲ ಐದು ದಶಕಗಳತ್ತ ಸಾಗಿದರೂ, ಕಾಲೇಜಿನ ಆವರಣದಲ್ಲಿ ಕಳೆದ ಯೌವನದ ದಿನಗಳ ನೆನಪುಗಳು ಮಾತ್ರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿಯುತ್ತವೆ. ಅಂತಹ ಸುವರ್ಣ ನೆನಪುಗಳನ್ನು ಮತ್ತೊಮ್ಮೆ ಜೀವಂತಗೊಳಿಸಿದ ಅಪೂರ್ವ ಕ್ಷಣಕ್ಕೆ ಸಂತ ಫಿಲೋಮಿನಾ ಕಾಲೇಜು ಸಾಕ್ಷಿಯಾಯಿತು. 1991ರ ಬಿ.ಎಸ್ಸಿ. ಬ್ಯಾಚ್‌ನ ಹಿರಿಯ ವಿದ್ಯಾರ್ಥಿಗಳು 35 ವರ್ಷಗಳ ಬಳಿಕ ತಮ್ಮ ಎರಡನೇ ಪುನರ್ಮಿಲನ ಹಾಗೂ ಗುರುವಂದನಾ ಕಾರ್ಯಕ್ರಮಕ್ಕಾಗಿ ರವಿವಾರ ಪಿಜಿ ಸೆಮಿನಾರ್ ಹಾಲ್‌ನಲ್ಲಿ ಸೇರಿ, ಹಳೆಯ ಸ್ನೇಹ, ಗೌರವ ಮತ್ತು ಆತ್ಮೀಯತೆಯನ್ನು ಮರುಕಳಿಸಿದರು.

Ad Widget

Ad Widget

Ad Widget alt="Ad Widget"/>

Ad Widget

ಅತ್ಯಂತ ಸುಂದರ ಹಾಗೂ ಮನೋಜ್ಞವಾಗಿ ನಡೆದ ಈ ಪುನರ್ಮಿಲನ ಕಾರ್ಯಕ್ರಮದಲ್ಲಿ 1991ರ ಬ್ಯಾಚ್‌ನ ಹಳೆ ವಿದ್ಯಾರ್ಥಿಗಳು ತಮ್ಮ ಕಾಲೇಜು ದಿನಗಳ ನೆನಪುಗಳನ್ನು ಮೆಲುಕು ಹಾಕುತ್ತಾ, ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ವೃತ್ತಿ ಹಾಗೂ ಸಾಮಾಜಿಕ ಬದುಕಿನಲ್ಲಿ ವಿವಿಧ ಉನ್ನತ ಸ್ಥಾನಗಳನ್ನು ಅಲಂಕರಿಸಿರುವ ಅವರು, ಕಾಲೇಜಿನ ಆವರಣದಲ್ಲಿ ಮತ್ತೆ ವಿದ್ಯಾರ್ಥಿಗಳಂತೆಯೇ ಬೆರೆತು, ತಮ್ಮ ಸುವರ್ಣ ದಿನಗಳನ್ನು ನೆನಪಿಸಿಕೊಂಡರು.

Ad Widget

Ad Widget <> Ad Widget

ಕಾಲೇಜಿನ ಪ್ರಾಂಶುಪಾಲರಾದ ರೆ.ಡಾ. ಆಂಟನಿ ಪ್ರಕಾಶ್ ಮೊಂತೆರೋ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.



Ad Widget

ಅವರು ಮಾತನಾಡಿ, “ಕಾಲೇಜು ಬದುಕಿತ್ತು; ಬದುಕುತ್ತಿದೆ; ಮುಂದೆಯೂ ಬದುಕಲಿದೆ. ಆದರೆ ಅದಕ್ಕಿಂತ ಮುಖ್ಯವಾದುದು ಪ್ರೀತಿ, ಗೌರವ ಮತ್ತು ಸದ್ಭಾವನೆ. ನಿಮ್ಮಂತಹ ಹಿರಿಯ ವಿದ್ಯಾರ್ಥಿಗಳ ಹಾಗೂ ಸಾರ್ವಜನಿಕರ ಸದ್ಭಾವನೆಯಿಂದಲೇ ಕಾಲೇಜು ನಿರಂತರವಾಗಿ ಬೆಳೆಯುತ್ತಿದೆ,” ಎಂದು ಹೇಳಿ, ಹಿರಿಯ ವಿದ್ಯಾರ್ಥಿಗಳು ಕಾರ್ಯಕ್ರಮವನ್ನು ಅತ್ಯಂತ ಶಿಸ್ತಿನಿಂದ ಹಾಗೂ ಸಮಯಪಾಲನೆಯೊಂದಿಗೆ ಸಂಘಟಿಸಿರುವುದನ್ನು ಶ್ಲಾಘಿಸಿದ ಅವರು, ಅವರ ಶಿಸ್ತು ಮತ್ತು ಸಮಯ ನಿರ್ವಹಣೆಯ ಸೂಕ್ಷ್ಮತೆಯು ಯಾರಿಗಾದರೂ ಮಾದರಿಯಾಗಬಲ್ಲದು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

Ad Widget

Ad Widget

ಕಾಲೇಜಿನ ಅಭಿವೃದ್ಧಿಗೆ ₹2 ಲಕ್ಷ ಕೊಡುಗೆ- ನೆನಪಿನಿಂದ ನಂಟಿಗೆ, ನಂಟಿನಿಂದ ಕೊಡುಗೆಗೆ
ಪುನರ್ಮಿಲನವು ಕೇವಲ ಹಳೆಯ ನೆನಪುಗಳನ್ನು ಮೆಲುಕು ಹಾಕುವ ಕಾರ್ಯಕ್ರಮವಾಗಿ ಉಳಿಯದೆ, ತಾವು ಕಲಿತ ಸಂಸ್ಥೆಯ ಮೇಲಿನ ಋಣ ತೀರಿಸುವ ಸಾರ್ಥಕ ಸಂದರ್ಭವಾಗಿಯೂ ಪರಿಣಮಿಸಿತು.ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ 1991ರ ಬ್ಯಾಚ್‌ನ ಹಿರಿಯ ವಿದ್ಯಾರ್ಥಿಗಳು ಒಟ್ಟಾಗಿ ₹2 ಲಕ್ಷವನ್ನು ಕಾಲೇಜಿನ ಅಭಿವೃದ್ಧಿ ಕಾರ್ಯಗಳಿಗಾಗಿ ದೇಣಿಗೆಯಾಗಿ ನೀಡಿದರು.ತಾವು ವಿದ್ಯಾಭ್ಯಾಸ ಪಡೆದ ಸಂಸ್ಥೆಯ ಅಭಿವೃದ್ಧಿಗೆ ದಶಕಗಳ ಬಳಿಕವೂ ಕೈಜೋಡಿಸಿದ ಹಿರಿಯ ವಿದ್ಯಾರ್ಥಿಗಳ ಈ ಕೊಡುಗೆ ಕಾಲೇಜಿನ ಮೇಲಿನ ಅವರ ಪ್ರೀತಿ, ಕೃತಜ್ಞತೆ ಹಾಗೂ ಸದ್ಭಾವನೆಯ ಪ್ರತೀಕವಾಗಿ ಮೂಡಿಬಂತು.

ವೃತ್ತಿ ಸಾಧನೆಗೆ ಗೌರವ
ಹಿರಿಯ ವಿದ್ಯಾರ್ಥಿಗಳ ವೃತ್ತಿಪರ ಸಾಧನೆಗಳನ್ನೂ ಕಾರ್ಯಕ್ರಮದಲ್ಲಿ ಗುರುತಿಸಲಾಯಿತು. ಡಾ. ಗಿರೀಶ್ ಭಟ್ ಅಜಕ್ಕಳ ಹಾಗೂ ಶ್ರೀ ನವೀನ್ ಕುಮಾರ್ ಅವರನ್ನು ಅವರ ವೃತ್ತಿಪರ ಸಾಧನೆಗಳಿಗಾಗಿ ಗೌರವಿಸಲಾಯಿತು. ವೃತ್ತಿಜೀವನದಲ್ಲಿನ ಸಾಧನೆಗಳು ಹಾಗೂ ಪ್ರಗತಿಯನ್ನು ಗುರುತಿಸಿ ವಿವಿಧ ಗೌರವಗಳನ್ನು ನೀಡಿ ಅಭಿನಂದಿಸಲಾಯಿತು. ರೈಲ್ವೆ ಉದ್ಯೋಗದಲ್ಲಿನ ಪದೋನ್ನತಿಯೂ ಸೇರಿದಂತೆ ವೃತ್ತಿಪರ ಕ್ಷೇತ್ರದಲ್ಲಿ ಸಾಧನೆ ಮಾಡಿದ ಹಿರಿಯ ವಿದ್ಯಾರ್ಥಿಗಳ ಯಶಸ್ಸನ್ನು ಕಾರ್ಯಕ್ರಮದಲ್ಲಿ ಮೆಚ್ಚುಗೆಯಿಂದ ಸ್ಮರಿಸಲಾಯಿತು.

ಕಾರ್ಯಕ್ರಮದ ಆರಂಭದಲ್ಲಿ ವಾಣಿ ಹಾಗೂ ಡಾ. ಚಂದ್ರಶೇಖರ್ ಕೆ ಜಿ ಪ್ರಾರ್ಥನೆ ನೆರವೇರಿಸಿದರು. ಡಾ. ಕೃಷ್ಣಪ್ರಭಾ ಕಾರ್ಯಕ್ರಮ ನಿರ್ವಹಿಸಿದರು. ಶಿವಕುಮಾರ್ ಸ್ವಾಗತಿಸಿದರು. ಶಿವನಾಥ ರೈ ಮೆಗಿನಗುತ್ತು ಪ್ರಾಸ್ತಾವಿಕ ನುಡಿಗಳ ಮೂಲಕ ಕಾರ್ಯಕ್ರಮದ ಆಶಯವನ್ನು ವಿವರಿಸಿದರು.

ಡಾ. ಗಿರೀಶ್ ಭಟ್ ಅಜಕ್ಕಳ ವಂದಿಸಿದರು.

ನೆನಪುಗಳೊಂದಿಗೆ ಮತ್ತೆ ವಿದ್ಯಾರ್ಥಿಗಳಾದ ಹಿರಿಯ ವಿದ್ಯಾರ್ಥಿಗಳು
ಇತ್ತೀಚಿನ ವರ್ಷಗಳಲ್ಲಿ ಕಾಲೇಜಿನ ವಿವಿಧ ಬ್ಯಾಚ್‌ಗಳ ಹಿರಿಯ ವಿದ್ಯಾರ್ಥಿಗಳು ತಮ್ಮ ಸಹಪಾಠಿಗಳನ್ನು ಒಗ್ಗೂಡಿಸಿಕೊಂಡು ಕಾಲೇಜಿಗೆ ಭೇಟಿ ನೀಡುತ್ತಿರುವುದು ಗಮನಾರ್ಹವಾಗಿದೆ. ಇಂತಹ ಪುನರ್ಮಿಲನಗಳು ಕೇವಲ ಭೇಟಿಗೆ ಸೀಮಿತವಾಗದೆ, ಹಳೆಯ ಸುವರ್ಣ ನೆನಪುಗಳನ್ನು ಮರುಕಳಿಸುವ, ಸ್ನೇಹದ ನಂಟನ್ನು ಗಟ್ಟಿಗೊಳಿಸುವ ಹಾಗೂ ತಾವು ಬೆಳೆದ ಸಂಸ್ಥೆಯೊಂದಿಗೆ ಭಾವನಾತ್ಮಕ ಸಂಬಂಧವನ್ನು ಪುನಃ ಜೋಡಿಸುವ ವೇದಿಕೆಗಳಾಗಿವೆ.

ವೃತ್ತಿ ಮತ್ತು ಸಾಮಾಜಿಕ ಜೀವನದಲ್ಲಿ ಎಷ್ಟೇ ಉನ್ನತ ಸ್ಥಾನದಲ್ಲಿದ್ದರೂ, ಕಾಲೇಜಿನ ಆವರಣಕ್ಕೆ ಕಾಲಿಟ್ಟ ಕ್ಷಣ ಅವರು ತಮ್ಮ ಹುದ್ದೆ, ಸ್ಥಾನಮಾನಗಳನ್ನು ಮರೆತು ಮತ್ತೆ ತಮ್ಮ ಕಾಲೇಜು ದಿನಗಳ ವಿದ್ಯಾರ್ಥಿಗಳಾಗಿ, ಸ್ನೇಹಿತರಾಗಿ, ಸಹಪಾಠಿಗಳಾಗಿ ಬೆರೆತದ್ದು ಕಾರ್ಯಕ್ರಮದ ವಿಶೇಷತೆಯಾಗಿತ್ತು.

ಒಂದು ಋಣಸ್ಮರಣೆ; ಗುರುಗಳಿಗೆ ಭಾವಪೂರ್ಣ ಗುರುವಂದನೆ
ಪ್ರೊ. ಅಣ್ಣಾಜಿರಾವ್ | ಪ್ರೊ. ಹರಿನಾರಾಯಣ ಮಾಡಾವು | ಪ್ರೊ. ವಿಷ್ಣು ಭಟ್ | ಡಾ. ಎ.ಪಿ. ರಾಧಾಕೃಷ್ಣ | ಡಾ. ಕೃಷ್ಣಕುಮಾರ್ | ಪ್ರೊ. ಗಣೇಶ್ ಭಟ್ | ಪ್ರೊ. ಬಾಲಕೃಷ್ಣ | ಪ್ರೊ. ವಸಂತಿ | ಪ್ರೊ. ಇಟಾ ಡಿಸೋಜಾ
1991ರ ಬಿ.ಎಸ್ಸಿ. ಬ್ಯಾಚ್‌ನ ಹಳೆಯ ವಿದ್ಯಾರ್ಥಿಗಳು ತಮ್ಮ ಬದುಕಿಗೆ ಜ್ಞಾನ ಮತ್ತು ದಿಕ್ಕು ನೀಡಿದ ಈ ಗುರುಗಳನ್ನು ಏಲಕ್ಕಿ ಹಾರ, ಸರಸ್ವತಿ ವಿಗ್ರಹ, ಶಾಲು ಹಾಗೂ ಹಣ್ಣುಗಳನ್ನು ನೀಡಿ ಗುರುವಂದನೆಯೊಂದಿಗೆ ಸನ್ಮಾನಿಸಿದರು.

ಗುರುವಂದನೆ ಸ್ವೀಕರಿಸಲು ಅನಾರೋಗ್ಯ ಮತ್ತು ವಯೋಸಹಜ ಕಾರಣಗಳಿಗೆ ಸಮಾರಂಭಕ್ಕೆ ಬರಲಾಗದ ಪ್ರೊ. ಲಕ್ಷ್ಮಿನಾರಾಯಣ ಕಡಂಬಳಿತ್ತಾಯ, ಪ್ರೊ.ಕೇಶವ ಭಟ್,ಪ್ರೊ.ಕಾನ್ಸೆಪ್ಟ ಲೋಬೋ, ಪ್ರೊಸಿರಿಲ್ ಮಥಿಯಾಸ್ ಅವರ ನಿವಾಸಗಳಿಗೇ ಹುಡುಕಿಕೊಂಡು ಹೋದ ಹಿರಿಯ ವಿದ್ಯಾರ್ಥಿಗಳು ಅಲ್ಲಿಯೇ ಗುರುವಂದನೆ ಸಲ್ಲಿಸಿ ಕೃತಾರ್ಥರಾದದ್ದು ವಿಶೇಷವಾಗಿತ್ತು.

ಇದು ಕೇವಲ ಸನ್ಮಾನವಾಗಿರದೆ, ತಮ್ಮ ಬದುಕಿಗೆ ಜ್ಞಾನ, ಶಿಸ್ತು, ಮೌಲ್ಯ ಮತ್ತು ದಿಕ್ಕು ನೀಡಿದ ಗುರುಗಳೆಡೆಗೆ ಹಳೆಯ ವಿದ್ಯಾರ್ಥಿಗಳು ಸಲ್ಲಿಸಿದ ಕೃತಜ್ಞತೆಯ ಸಂಕೇತವಾಗಿತ್ತು. ಕಾಲೇಜು ದಿನಗಳಲ್ಲಿ ಶಿಕ್ಷಕರಿಂದ ಪಡೆದ ಮಾರ್ಗದರ್ಶನವನ್ನು ಹಲವು ದಶಕಗಳ ಬಳಿಕವೂ ಸ್ಮರಿಸಿ ಗೌರವ ಸಲ್ಲಿಸಿದ ಕ್ಷಣವು ಕಾರ್ಯಕ್ರಮಕ್ಕೆ ವಿಶೇಷ ಭಾವನಾತ್ಮಕ ಸ್ಪರ್ಶ ನೀಡಿತು.

ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಲ್ಲಿ ಡಾ ಕೃಷ್ಣಪ್ರಭಾ, ರಾಜ್ಯ ಮಾಹಿತಿ ಆಯುಕ್ತ ಬದ್ರುದ್ದೀನ್ ಮಾಣಿ, ಶಿವನಾಥ ರೈ ಮೆಗಿನಗುತ್ತು, ಲಕ್ಷ್ಮೀನಾರಾಯಣ ಕಡಂಬಳಿತ್ತಾಯ ಹಾಗೂ ವಾಲೇರಿಯನ್ ಡಿಸೋಜಾ ಪ್ರಮುಖ ಪಾತ್ರ ವಹಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಹಿರಿಯ ವಿದ್ಯಾರ್ಥಿ ಪೊನ್ನಪ್ಪ ಅಡ್ಲ್ಯಾಬ್ಸ್, ಕಾಲೇಜಿನ ಪಿಆರ್‌ಒ ಡಾ. ಭಾರತಿ ಎಸ್. ರೈ, ಉಪಕುಲಸಚಿವ (ಶೈಕ್ಷಣಿಕ) ವಿಪಿನ್ ನಾಯಕ್, ಎನ್‌ಸಿಸಿ ನೌಕಾ ವಿಭಾಗದ ಸಬ್ ಲೆಫ್ಟಿನೆಂಟ್ ತೇಜಸ್ವಿ ಭಟ್, ಉಪಕುಲಸಚಿವ (ಮೌಲ್ಯಮಾಪನ) ಅಭಿಷೇಕ್ ಸುವರ್ಣ ಹಾಗೂ ಸ್ನಾತಕೋತ್ತರ ವಾಣಿಜ್ಯ ವಿಭಾಗದ ಸಂಯೋಜಕ ಹರ್ಷಿತ್ ಕುಮಾರ್ ಉಪಸ್ಥಿತರಿದ್ದರು.

Ad Widget
Continue Reading

ಸ್ಥಳೀಯ

UT Khader-ಚನ್ನಪಟ್ಟಣ: ನಡುರಾತ್ರಿ 2 ಗಂಟೆಗೆ ಸರ್ಕಾರಿ ಆಸ್ಪತ್ರೆಗೆ ಯು.ಟಿ. ಖಾದರ್ ದಿಢೀರ್ ಭೇಟಿ: ಹೊರಗಡೆ ಔಷಧಿ ಬರೆಯುತ್ತಿದ್ದಕ್ಕೆ ಗರಂ

Published

on



Ad Widget

Ad Widget

Ad Widget

Ad Widget

ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ನಡುರಾತ್ರಿ 2 ಗಂಟೆ ಸುಮಾರಿಗೆ ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಖಾಸಗಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ತಡರಾತ್ರಿ ಚನ್ನಪಟ್ಟಣಕ್ಕೆ ಆಗಮಿಸಿದ್ದ ಸಚಿವರು, ಯಾವುದೇ ಮುನ್ಸೂಚನೆ ನೀಡದೆ ನೇರವಾಗಿ ಸರ್ಕಾರಿ ಆಸ್ಪತ್ರೆಗೆ ತೆರಳಿ ವ್ಯವಸ್ಥೆಗಳನ್ನು ಪರಿಶೀಲಿಸಿದರು.

Ad Widget

Ad Widget

Ad Widget

Ad Widget

ಚನ್ನಪಟ್ಟಣ, ಅ.6: ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ನಡುರಾತ್ರಿ 2 ಗಂಟೆ ಸುಮಾರಿಗೆ ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Ad Widget

Ad Widget

Ad Widget alt="Ad Widget"/>

Ad Widget

ಖಾಸಗಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ತಡರಾತ್ರಿ ಚನ್ನಪಟ್ಟಣಕ್ಕೆ ಆಗಮಿಸಿದ್ದ ಸಚಿವರು, ಯಾವುದೇ ಮುನ್ಸೂಚನೆ ನೀಡದೆ ನೇರವಾಗಿ ಸರ್ಕಾರಿ ಆಸ್ಪತ್ರೆಗೆ ತೆರಳಿ ವ್ಯವಸ್ಥೆಗಳನ್ನು ಪರಿಶೀಲಿಸಿದರು.

Ad Widget

Ad Widget <> Ad Widget

ಈ ವೇಳೆ ಆಸ್ಪತ್ರೆಯ ಜನರಲ್ ವಾರ್ಡ್, ಐಸಿಯು ಹಾಗೂ ಶೌಚಾಲಯಗಳ ನೈರ್ಮಲ್ಯವನ್ನು ವೀಕ್ಷಿಸಿದ ಸಚಿವರು, ಸಿಬ್ಬಂದಿಯ ಹಾಜರಾತಿ ಪುಸ್ತಕವನ್ನೂ ಪರಿಶೀಲಿಸಿದರು. ಕರ್ತವ್ಯದಲ್ಲಿದ್ದ ವೈದ್ಯರಿಂದ ಆಸ್ಪತ್ರೆಯಲ್ಲಿನ ಚಿಕಿತ್ಸಾ ವ್ಯವಸ್ಥೆ ಹಾಗೂ ರೋಗಿಗಳ ಕುರಿತಂತೆ ಮಾಹಿತಿ ಪಡೆದುಕೊಂಡರು.



Ad Widget

ಹೊರಗಡೆ ಔಷಧಿ ಬರೆಯುತ್ತಿದ್ದಕ್ಕೆ ಅಸಮಾಧಾನ
ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳಿಗೆ ಹೊರಗಿನ ಖಾಸಗಿ ಮೆಡಿಕಲ್ ಸ್ಟೋರ್‌ಗಳಿಂದ ಔಷಧಿ ಖರೀದಿಸುವಂತೆ ಚೀಟಿ ಬರೆದುಕೊಡುತ್ತಿರುವ ವಿಚಾರ ಸಚಿವರ ಗಮನಕ್ಕೆ ಬಂದಿದೆ. ಇದರಿಂದ ಅಸಮಾಧಾನಗೊಂಡ ಖಾದರ್ ಅವರು ವೈದ್ಯರು ಹಾಗೂ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು.

Ad Widget

Ad Widget

“ಸರ್ಕಾರಿ ಆಸ್ಪತ್ರೆಯಲ್ಲಿ ಅಗತ್ಯ ಸೌಲಭ್ಯಗಳು ಹಾಗೂ ಔಷಧಿಗಳಿದ್ದರೂ ರೋಗಿಗಳಿಗೆ ಹೊರಗಡೆ ಔಷಧಿ ಬರೆದುಕೊಡುವುದು ಏಕೆ?” ಎಂದು ಪ್ರಶ್ನಿಸಿದ ಸಚಿವರು, ಈ ಬಗ್ಗೆ ವೈದ್ಯರು ಹಾಗೂ ಸಿಬ್ಬಂದಿಯಿಂದ ಸ್ಪಷ್ಟನೆ ಪಡೆದರು.

ಸರ್ಕಾರಿ ಆಸ್ಪತ್ರೆಗೆ ಆಗಮಿಸುವ ಬಡ ಹಾಗೂ ಸಾಮಾನ್ಯ ಜನರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸೂಕ್ತ ಹಾಗೂ ಸಮಯೋಚಿತ ಚಿಕಿತ್ಸೆ ಒದಗಿಸಬೇಕು. ರೋಗಿಗಳ ಸೇವೆಯಲ್ಲಿ ಯಾವುದೇ ಲೋಪವಾಗದಂತೆ ಕರ್ತವ್ಯ ನಿರ್ವಹಿಸಬೇಕು ಎಂದು ಸಂಬಂಧಪಟ್ಟ ಸಿಬ್ಬಂದಿಗೆ ಸಚಿವ ಯು.ಟಿ. ಖಾದರ್ ಖಡಕ್ ಸೂಚನೆ ನೀಡಿದರು.

Ad Widget
Continue Reading

ನಿಧನ ವಾರ್ತೆ

Puttur-ಪುತ್ತೂರು: ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಪಡೆಯುತ್ತಿದ್ದ ಸ್ಕೂಟರ್ ಸವಾರ ಮೃತ್ಯು

Published

on



Ad Widget

Ad Widget

Ad Widget

Ad Widget

ಮಾಣಿ–ಮೈಸೂರು ರಾಷ್ಟ್ರೀಯ ಹೆದ್ದಾರಿಯ ಆರ್ಯಾಪು ಗ್ರಾಮದ ಕಾರ್ಪಾಡಿ ದೇವಸ್ಥಾನದ ದ್ವಾರದ ಬಳಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಸ್ಕೂಟರ್ ಸವಾರ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಕುರಿಯ ಮುಲಾರು ನಿವಾಸಿ, ಮರದ ಕೆಲಸ ನಿರ್ವಹಿಸುತ್ತಿದ್ದ ಸುಂದರ ಆಚಾರ್ಯ ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಮಾಣಿ–ಮೈಸೂರು ರಾಷ್ಟ್ರೀಯ ಹೆದ್ದಾರಿಯ ಆರ್ಯಾಪು ಗ್ರಾಮದ ಕಾರ್ಪಾಡಿ ದೇವಸ್ಥಾನದ ದ್ವಾರದ ಬಳಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಸ್ಕೂಟರ್ ಸವಾರ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ನಡೆದಿದೆ.

Ad Widget

Ad Widget

Ad Widget alt="Ad Widget"/>

Ad Widget

ಮೃತರನ್ನು ಕುರಿಯ ಮುಲಾರು ನಿವಾಸಿ, ಮರದ ಕೆಲಸ ನಿರ್ವಹಿಸುತ್ತಿದ್ದ ಸುಂದರ ಆಚಾರ್ಯ ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ಮೂರು ದಿನಗಳ ಹಿಂದೆ ಸುಂದರ ಆಚಾರ್ಯ ಅವರು ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ಕಾರ್ಪಾಡಿ ದೇವಸ್ಥಾನದ ದ್ವಾರದ ಬಳಿ ಅಪರಿಚಿತ ವಾಹನವೊಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ಬಳಿಕ ವಾಹನ ನಿಲ್ಲಿಸದೆ ಪರಾರಿಯಾಗಿತ್ತು.



Ad Widget

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸುಂದರ ಆಚಾರ್ಯ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಅ.6ರಂದು ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

Ad Widget

Ad Widget

ಮೃತರು ಪತ್ನಿ ಶಶಿಕಲಾ, ಪುತ್ರರಾದ ಹರ್ಷಿತ್ ಹಾಗೂ ರಕ್ಷಿತ್, ಸಹೋದರರು ಮತ್ತು ಸಹೋದರಿಯರನ್ನು ಅಗಲಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading