Uncategorized
ತುಳುವ ಕುವರಿ ಮನಿಷಾ ಭಾರತೀಯ ಏರ್‌ಫೋರ್ಸ್ʼನ ಫ್ಲೈಯಿಂಗ್ ಬ್ರ್ಯಾಂಚ್‌ಗೆ ಆಯೆಯಾದ ರಾಜ್ಯದ ಏಕೈಕ ಯುವತಿ

ಮಂಗಳೂರು: ಇತ್ತೀಚೆಗೆ ನಡೆದ ನೇಮಕಾತಿಯಲ್ಲಿ ಬಾರತೀಯ ಏರ್‌ಫೋರ್ಸ್‌ನ ಫ್ಲೈಯಿಂಗ್ ಬ್ರ್ಯಾಂಚ್‌ಗೆ ಕರ್ನಾಟಕ ರಾಜ್ಯದಿಂದ ಏಕೈಕ ಯುವತಿ ಆಯ್ಕೆಯಾಗಿದ್ದು ಜು.9ರಂದು ತರಬೇತಿಗೆ ಹೈದರಾಬಾದ್‌ಗೆ ತೆರಳಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಅಶೋಕ ನಗರದ ನಿವಾಸಿ ಮನಿಶಾ ಈ ಮಹೋನ್ನತ ಸಾಧನೆ ಮಾಡಿದ ತುಳುನಾಡಿನ ಕುವರಿ.
ಮನಿಶಾ ಶೆಟ್ಟಿ ಅಶೋಕನಗರ ನಿವಾಸಿ ಭಾರತೀಯ ಸ್ಟೇಟ್‌ಬ್ಯಾಂಕ್‌ನ ನಿವೃತ್ತ ಅಧಿಕಾರಿ ಮನೋಹರ ಶೆಟ್ಟಿ ಮತ್ತು ಸರಕಾರಿ ಶಾಲೆ ಮುಖ್ಯೋಪಾಧ್ಯಾಯಿನಿ ಮಾಲತಿ ಶೆಟ್ಟಿ ದಂಪತಿಯ ಪುತ್ರಿ. ಮನಿಷಾ ಅವರ ತಂದೆ ಮನೋಹರ್ ಶೆಟ್ಟಿ ಈ ಹಿಂದೆ ವಾಯುಪಡೆಗೆ ಆಯ್ಕೆಯಾಗಿದ್ದರು . ಆದರೆ ಇವರ ಅಣ್ಣಾ ಏರ್‌ಫೋರ್ಸ್‌ನಲ್ಲಿದ್ದ ಕಾರಣ ತಂದೆ ಇವರಿಗೆ ಅನುಮತಿ ನೀಡಿರಲಿಲ್ಲ. ಹೀಗಾಗಿ ಅವರ ಪೈಲೆಟ್ ಆಗುವ ಆಸೆ ಅರ್ಧದಲ್ಲಿಯೇ ಕಮರಿ ಹೋಗಿತ್ತು. ಹೀಗಾಗಿ ತನ್ನ ಇಬ್ಬರು ಮಕ್ಕಳಲ್ಲಿ ಒಬ್ಬರನ್ನು ಪೈಲಟ್ ಮಾಡಬೇಕೆಂಬ ಮಹದಾಸೆಯನ್ನು ಅವರು ಹೊಂದಿದ್ದರು.
6ನೇ ತರಗತಿಯಲ್ಲಿ ಇರುವಾಗಲೇ ಮನಿಶಾ ತಂದೆಯ ಮನದಿಚ್ಚೆಯನ್ನು ಪೂರೈಸುವ ನಿಟ್ಟಿನಲ್ಲಿ ಪೈಲಟ್ ಆಗುವ ಕನಸು ಕಂಡವರು. ತಂದೆಯ ಕನಸ್ಸನ್ನು ನನಸು ಮಾಡಲೇ ಬೇಕೆಂಬ ಹಠದಿಂದ ನಿರಂತರ ಶ್ರಮಸಿದ ಈಕೆ ಕೊನೆಗೂ ಅದರಲ್ಲಿ ಸಫಲತೆಯನ್ನು ಸಾಧಿಸಿದ್ದಾರೆ. ಇವರು ವಿದ್ಯಾರ್ಥಿನಿಯಾಗಿದ್ದಾಗ ರಾಷ್ಟ್ರೀಯ ಬಾಸ್ಕೆಟ್‌ಬಾಲ್ ಆಟಗಾರ್ತಿಯಾಗಿ ಎನ್‌ಸಿಸಿಯಲ್ಲಿ ಗಣರಾಜ್ಯೋತ್ಸವ ಪರೇಡ್‌ಗೆ ಆಯ್ಕೆಯಾಗಿದ್ದರು.
ಪುತ್ತೂರು : ಚಲಿಸುತ್ತಿದ್ದ ಬಸ್ಸಿನಲ್ಲಿ ಕಾಣಿಸಿಕೊಂಡ ದಟ್ಟ ಹೊಗೆ, ಬೆಂಕಿ | ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಇತ್ತೀಚಿನ ಬಾರತೀಯ ಎರ್ ಪೋರ್ಸ್ ನ ನೇಮಕಾತಿ ಅಧಿ ಸೂಚನೆಯಲ್ಲಿ ಒಟ್ಟು 96 ಪೈಲಟ್ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಲಾಗಿತ್ತು. ಇದರ ಸೆಲೆಕ್ಷನ್ 5 ಕೇಂದ್ರದಲ್ಲಿ ನಡೆದಿದ್ದು ಮನಿಷಾ ಸೇರಿದಂತೆ 10ಮಂದಿ ಯುವತಿಯರು ತೇರ್ಗಡೆ ಹೊಂದಿದ್ದರು. ಹಾಗೂ 39ಮಂದಿ ಯುವಕರು ಈ ಹುದ್ದೆಗೆ ಆಯ್ಕೆಯಾಗಿದ್ದಾರೆ. ಉಳಿದವರು ನೇಮಕಕ್ಕೆ ಅರ್ಹರಾಗದ ಕಾರಣ 47ಹುದ್ದೆಗಳ ಖಾಲಿ ಉಳಿದಿದೆ.
ಏರ್‌ಫೋರ್ಸ್ ಆಯ್ಕೆ 6 ತಿಂಗಳ ಪ್ರಕ್ರಿಯೆಯಾಗಿದ್ದು, ಪ್ರಾರಂಭದಲ್ಲಿ ಏರ್‌ಫೋರ್ಸ್ ಕಾಮನ್ ಎಂಟ್ರೆಸ್ ಎಕ್ಸಾಂ ಬರೆಯಬೇಕು. ದೇಶದ 5 ಕೇಂದ್ರಗಳಲ್ಲಿ (ಮೈಸೂರು, ಗುಜರಾತ್, ಗುವಾಹಟಿ, ವಾರಣಾಸಿ, ಡೆಹ್ರಾಡೂನ್) ಪರೀಕ್ಷೆ ನಡೆದು, ಇದರಲ್ಲಿ ನಿಯಮಿತ ಅಂಕ ತೆಗೆಯಬೇಕು. ಇದರಲ್ಲಿ ಆಯ್ಕೆಯಾದವರಿಗೆ ಒಂದು ವಾರ ನಾನಾ ಪರೀಕ್ಷೆ ನಡೆಸಲಾಗುತ್ತದೆ. ಬಳಿಕ ಇವರ ನಡುವಿನಿಂದ ಆರ್ಹರನ್ನು ಆಯ್ಕೆ ಮಾಡಲಾಗುತ್ತದೆ. ಎರಡನೇ ಹಂತ ತೇರ್ಗಡೆಗೊಂಡವರಿಗೆ ಕಠಿಣ ದೈಹಿಕಾ ಕ್ಷಮತಾ ಪರೀಕ್ಷೆ (ಮೆಡಿಕಲ್ ಟೆಸ್ಟ್) ನಡೆಯುತ್ತದೆ. ಇವರಲ್ಲಿ ಪೈಲೆಟ್ ಆಯ್ಕೆ ನಡೆಯುತ್ತದೆ.
ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿಗೆ ಕ್ಲಾಸ್ ತೆಗೊಂಡು ಅಂಗಿ ಬಿಚ್ಚಿಸಿದ ಮಂಗಳೂರು ಕಮಿಷನರ್
ಪೈಲಟ್‌ಗೆ ಆಯ್ಕೆಯಾಗುವವರು 24 ವರ್ಷದೊಳಗಿರಬೇಕು ಮತ್ತು ಎಸ್‌ಎಸ್‌ಬಿ ಕ್ಲಿಯರ್ ಆದ ಮೇಲೆ ಸಿಪಿಎಸ್‌ಎಸ್ (ಕಂಪ್ಯೂಟರೈಸ್ಡ್ ಪೈಲಟ್ ಸೆಲೆಕ್ಷನ್ ಸಿಸ್ಟಂ) ಪರೀಕ್ಷೆಯನ್ನು ಒಂದೇ ಬಾರಿಗೆ ಪಾಸ್ ಮಾಡಬೇಕು. ಹೀಗಾದರೆ ಮಾತ್ರ ಪೈಲಟ್ ಆಗಲು ಅವಕಾಶ.
ಯೂಟ್ಯೂಬ್‌ನಲ್ಲೇ ಮಾಹಿತಿ ಸಂಗ್ರಹ
ಸಾಮಾನ್ಯವಾಗಿ ಏರ್‌ಪೋರ್ಸ್ ಆಯ್ಕೆಯಾಗಬೇಕಾದರೆ ಕೋಚಿಂಗ್ ಪಡೆಯುತ್ತಾರೆ. ಆದರೆ ಮನಿಷಾ ಯಾವುದೇ ತರಬೇತಿ ಪಡೆಯದೆ ತಂದೆಯ ಮಾರ್ಗದರ್ಶನ ಪಡೆದು ಯೂಟ್ಯೂಬ್‌ನಿಂದಲೇ ಮಾಹಿತಿ ಸಂಗ್ರಹಿಸಿ ಈ ಎಲ್ಲಾ ಪರೀಕ್ಷೆಗಳನ್ನು ಪಾಸ್ ಮಾಡಿದ್ದಾರೆ.
Uncategorized
Philomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ವಂದನ ಶಂಕರ್ ಮಾತನಾಡಿ, ಪಿ ಯು ಸಿ ನಂತರದ ಅವಕಾಶಗಳು, ಇಂಜಿನಿಯರಿಂಗ್ ವಿಭಾಗಗಳಲ್ಲಿ ಇರುವ ಉದ್ಯೋಗಾವಕಾಶಗಳ ಬಗ್ಗೆ ತಿಳಿಸಿದರು.
ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಚೇತನ್ ಮಾತನಾಡಿ, ಮಾದಕ ವಸ್ತುಗಳು ಹಾಗೂ ದೂಮಪಾನದ ವ್ಯಸನ ನಮ್ಮ ನೆನಪಿನ ಶಕ್ತಿಯನ್ನು ಕುಗ್ಗಿಸುತ್ತದೆ ಮತ್ತು ಕ್ಯಾನ್ಸರ್ ನಂತಹ ಮಾರಕ ರೋಗಗಳಿಗೆ ದಾರಿ ಮಾಡಿಕೊಡುತ್ತದೆ. ಹಾಗೆಯೇ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ನಮ್ಮ ಏಕಾಗ್ರತೆಯನ್ನು ಭಂಗ ಗೊಳಿಸುತ್ತದೆ ಎಂದು ಹೇಳಿದರು.

ವೃತ್ತಿ ಮಾರ್ಗದರ್ಶನ ವಿಭಾಗದ ನಿರ್ದೇಶಕರಾದ ರವಿಪ್ರಸಾದ್ ಬಿ. ಜಿ ನಿರಂಜನ್ ಜಿ. ಯು, ಕವಿತಾ ಕೆ ಹಾಗೂ ಕಾಲೇಜಿನ ಬೋಧಕ /ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
Uncategorized
ಹಿರಿಯ ಸಹಕಾರಿ ಧುರೀಣ ಕೆ.ಕೆ. ನಾರಾಯಣ ಚಳ್ಳಂಗಾರು ನಿಧನ

ಕಲ್ಮಡ್ಕ: ತಾಲೂಕಿನ ಹಿರಿಯ ಸಹಕಾರಿ ಧುರೀಣ, ಸಾಮಾಜಿಕ ಮುಖಂಡ, ಬಹುಮುಖ ಚಿಂತಕ ಕಲ್ಮಡ್ಕ ಗ್ರಾಮದ ಚಳ್ಳಂಗಾರು ಕೆ.ಕೆ. ನಾರಾಯಣ (88) ಅವರು ವಯೋಸಹಜ ಅನಾರೋಗ್ಯದಿಂದ ಗುರುವಾರ ಸಂಜೆ ನಿಧನರಾದರು.
ಮಂಡಲ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ತಮ್ಮ ಅವಧಿಯಲ್ಲಿ ಗ್ರಾಮದಲ್ಲಿ ಅಭಿವೃದ್ಧಿಯ ಹೊಸ ಶಕೆಗೆ ನಾಂದಿ ಹಾಡಿದ್ದರು. ಕಲ್ಮಡ್ಕ ಸಹಕಾರಿ ಸಂಘದ ನಿರ್ದೇಶಕರಾಗಿ ಸಂಸ್ಥೆಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದ ಅವರು, ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದರು. ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು.
ಕಲ್ಮಡ್ಕ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ವಿಶೇಷ ಶ್ರಮ ವಹಿಸಿದ್ದ ಅವರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಯಕ್ಷಗಾನದ ಅರ್ಥಧಾರಿಯಾಗಿ ಕಲಾ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದ ನಾರಾಯಣ ಅವರು, ಸಂಗಮ ಕಲಾ ಸಂಘದ ನಿರ್ದೇಶಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಉತ್ತಮ ಓದುಗ ಹಾಗೂ ವಿಮರ್ಶಕರಾಗಿದ್ದ ಅವರು ಸಾಹಿತ್ಯ, ಕಲೆ, ಸಹಕಾರ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.
ಮೃತರು ಪತ್ನಿ ಸುಬ್ಬಮ್ಮ, ಪುತ್ರಿಯರಾದ ವಿದ್ಯಾ, ಜಯಶ್ರೀ, ದೀಪಿಕಾ, ಪುತ್ರ, ಕ್ಯಾಂಪ್ಕೋ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ನ್ಯಾಯವಾದಿ ಮುರಳಿಕೃಷ್ಣ ಚಳ್ಳಂಗಾರು, ಸೊಸೆ ರಮ್ಯಾ ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
Uncategorized
ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ- ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಚಾಲನೆ

ಪುತ್ತೂರು: ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ನಡೆಯಲಿರುವ ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಧಾನಸಭೆಯ ವಿರೋಧಪಕ್ಷದ ನಾಯಕ ಆರ್.ಅಶೋಕ್ ಅವರು ಚಾಲನೆ ನೀಡಿದರು.
ನ.19ರಂದು ಪುತ್ತೂರಿನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ವೀರಾಂಜನೇಯ ಕ್ಷೇತ್ರದಲ್ಲಿ ನಡೆಯುವ ಪಂಚಮುಖಿ ಆಂಜನೇಯ ಹವನದ ಸ್ಟಿಕ್ಕರ್ ಅನ್ನು ಆಟೋ ರಿಕ್ಷಾಗಳಿಗೆ ಅಂಟಿಸುವ ಮೂಲಕ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಯಶಸ್ಸು ಕೋರಿದರು.
ಆಟೋ ರಿಕ್ಷಾಗಳ ಎದುರಿನ ಮತ್ತು ಹಿಂಬದಿಯ ಭಾಗಕ್ಕೆ ತಾವೆ ಸ್ವತಃ ಸ್ಟಿಕ್ಕರ್ ಅಂಟಿಸಿ ಎಲ್ಲರೂ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು, ಪಂಚಮುಖಿ ಆಂಜನೇಯ ಯಾಗ ಸಮಿತಿ ಪ್ರಧಾನ ಕಾರ್ಯದರ್ಶಿ ಮುರಳಿಕೃಷ್ಣ ಹಸಂತಡ್ಕ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಪ್ರಧಾನ ಕಾರ್ಯದರ್ಶಿ ಸುನಿಲ್ ದಡ್ಡು, ಯಾಗ ಸಮಿತಿಯ ಪ್ರಮುಖರಾದ ಶ್ಯಾಮ ಸುದರ್ಶನ್ ಹೊಸಮೂಲೆ, ಜಯಂತ ಶೆಟ್ಟಿ ಕಂಬಳತ್ತಡ್ಕ, ಶ್ರೀಧರ್ ತೆಂಕಿಲ ಸಹಿತ ಆಟೋ ರಿಕ್ಷಾ ಚಾಲಕರು ಮತ್ತು ಮಾಲಕರು ಉಪಸ್ಥಿತರಿದ್ದರು.















