Connect with us

ಉದ್ಯೋಗ

3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್ – ಪೊಲೀಸ್ ಆಗುವ ನಿಮ್ಮ ಕನಸು ನನಸಾಗಬೇಕೆ..? ವಸತಿಯುತ ತರಬೇತಿ ಪ್ರಾರಂಭಿಸಿದ ಪ್ರತಿಷ್ಠಿತ ‘ವಿದ್ಯಾಮಾತಾ ಅಕಾಡೆಮಿ’ – ಜೂ.16 ರಿಂದ ನೇರ ಮತ್ತು ONLINE ತರಗತಿ ಆರಂಭ

Published

on

Ad Widget

Ad Widget

Ad Widget

Ad Widget

16.06.2026 ರಿಂದ ನೇರ ತರಗತಿ ಮತ್ತು ಆನ್ಲೈನ್ ತರಗತಿಗಳ ಮೂಲಕ ತರಬೇತಿ ನೀಡಲಿರುವ ಪ್ರತಿಷ್ಠಿತ ಸಂಸ್ಥೆ

Ad Widget

Ad Widget

Ad Widget

Ad Widget

ಕಳೆದ ಹಲವು ವರ್ಷಗಳ ಅವಧಿಯಲ್ಲಿ ಯುವ ಜನತೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರಕಾರಿ ಮತ್ತು ಸರಕಾರಿ ಸ್ವಾಮ್ಯದ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯನ್ನು ನೀಡುತ್ತಾ ಯಶಸ್ವಿಯಾಗಿ ಮುನ್ನಡೆಯುತ್ತಿರುವ ವಿದ್ಯಾಮಾತಾ ಅಕಾಡೆಮಿಯು ಈಗಾಗಲೇ ಪ್ರಾರಂಭವಾಗಿರುವ 2026ನೇ ಸಾಲಿನ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಕಾನ್ಸ್ಟೇಬಲ್ ನೇಮಕಾತಿಯ ಆಯ್ಕೆ ಪ್ರಕ್ರಿಯೆಗಳಿಗೆ ಪೂರಕವಾಗಿ ವಿದ್ಯಾಮಾತಾ ಅಕಾಡೆಮಿಯು ನೇರ ತರಗತಿ ಮತ್ತು ಆನ್ಲೈನ್ ತರಗತಿಗಳ ಮೂಲಕ ತರಬೇತಿಯನ್ನು ನೀಡಲಿದ್ದು, 16.06.2026 ರಿಂದ ತರಬೇತಿಗಳು ಪ್ರಾರಂಭವಾಗಲಿದೆ.
ಕರ್ನಾಟಕ ಪೊಲೀಸ್, ಭಾರತೀಯ ರಕ್ಷಣಾ ಪಡೆಗಳು ಸೇರಿದಂತೆ ವಿವಿಧ ಸಶಸ್ತ್ರ ಪಡೆಗಳ ನೇಮಕಾತಿಗಳಲ್ಲಿ ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದ 100ಕ್ಕೂ ಮಿಕ್ಕಿದ ಅಭ್ಯರ್ಥಿಗಳು ಆಯ್ಕೆಯಾಗಿ ಕರ್ತವ್ಯ ನಿರ್ವಹಿಸುತ್ತಿರುವುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು, ಈ ಯಶಸ್ಸನ್ನು ಮುಂದಿಟ್ಟುಕೊಂಡು ನಡೆಯುತ್ತಿರುವ ಈ ಅಹೋರಾತ್ರಿ ತರಬೇತಿಯ ಸದುಪಯೋಗವನ್ನು ಪಡೆದುಕೊಂಡು ಪೊಲೀಸ್ ನೌಕರಿಯನ್ನು ಪಡೆದುಕೊಳ್ಳಲು ಸುವರ್ಣಾವಕಾಶ ಯುವ ಜನತೆಗೆ ಅವಕಾಶ ಕಲ್ಪಿಸಲಾಗಿದೆ.

Ad Widget

Ad Widget alt="Ad Widget"/>

Ad Widget

ಈ ರೀತಿ ನಡೆಯಲಿದೆ ವಿದ್ಯಾಮಾತಾದ ತರಬೇತಿ

Ad Widget

Ad Widget <> Ad Widget

  • ಸದ್ಯ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ / ಉದ್ಯೋಗ ಮಾಡುತ್ತಿರುವವರಿಗೂ ತರಬೇತಿ ಪಡೆದುಕೊಳ್ಳಲು ಅವಕಾಶ.
  • ವಸತಿ ಸೌಲಭ್ಯದೊಂದಿಗೆ 24×7 ಮಾದರಿಯ ತರಬೇತಿ ನೀಡಲಿರುವ ವಿದ್ಯಾಮಾತಾ.
  • ನೇರ ತರಗತಿ ಮತ್ತು ಆನ್ಲೈನ್ ತರಗತಿಯ ಮೂಲಕ ನಡೆಯಲಿರುವ ತರಬೇತಿಯ ಜೊತೆಗೆ ಅಧ್ಯಯನ ಸಾಮಾಗ್ರಿ(Study Meterials) ಕೂಡ ಸಿಗಲಿದೆ.
  • 24×7 ಲೈಬ್ರರಿ ವ್ಯವಸ್ಥೆ ಕೂಡ ಲಭ್ಯವಿದೆ.
  • ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಪ್ರತ್ಯೇಕ ವಸತಿ ವ್ಯವಸ್ಥೆಗಳು ಇರುತ್ತದೆ.
  • ಸದ್ಯ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು/ಖಾಸಗಿ ಉದ್ಯೋಗಿಗಳು ಸಂಜೆ ಬಂದು ವಸತಿ ಸೌಲಭ್ಯವನ್ನು ಉಪಯೋಗಿಸಿಕೊಂಡು ರಾತ್ರಿ ತರಬೇತಿಯನ್ನು ಪಡೆದುಕೊಂಡು ಹೋಗಲು ಅವಕಾಶವಿದೆ.

ನೇಮಕಾತಿಗೆ ಅರ್ಜಿ ಸಲ್ಲಿಸಲು ಅರ್ಹತೆ

  • ಪಿ ಯು ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು
  • ವಯಸ್ಸಿನ ಮಿತಿ: ಕನಿಷ್ಠ: 18 ವರ್ಷ
    ಗರಿಷ್ಠ: 33(ಸಾಮಾನ್ಯ ಅಭ್ಯರ್ಥಿಗಳಿಗೆ), 35ವರ್ಷ(OBC, SC, ST)
  • ದೈಹಿಕ ಸಾಮರ್ಥ್ಯ: 168cm ಎತ್ತರ(ಪುರುಷ ಅಭ್ಯರ್ಥಿ), 157cm ಎತ್ತರ(ಮಹಿಳಾ ಅಭ್ಯರ್ಥಿ)
  • ಅರ್ಜಿ ಸಲ್ಲಿಸಲು ಅವಶ್ಯಕ ದಾಖಲೆಗಳು
    ಫೋಟೋ,ಅಂಕಪಟ್ಟಿಗಳು,ಆಧಾರ್ ಕಾರ್ಡ್, ಜಾತಿ ಪ್ರಮಾಣಪತ್ರ, ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರ, ಕನ್ನಡ ಮಾಧ್ಯಮ ಪ್ರಮಾಣ ಪತ್ರ.
  • ಅರ್ಜಿ ಸಲ್ಲಿಸಲು 03.07.2026 ಕೊನೆಯ ದಿನಾಂಕವಾಗಿರುತ್ತದೆ

ವಿದ್ಯಾಮಾತಾ ಅಕಾಡೆಮಿಯಲ್ಲಿ ದಾಖಲಾತಿ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದ್ದು, ತರಬೇತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಪುತ್ತೂರಿನ APMC ರಸ್ತೆಯಲ್ಲಿರುವ ವಿದ್ಯಾಮಾತಾ ಅಕಾಡೆಮಿಯನ್ನು ಸಂಪರ್ಕಿಸಲು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
PH: 9620468869 / 9148935808 /99451 82516 / 9448527606

Click to comment

Leave a Reply

ಸುಳ್ಯ

Puttur-ಸುಳ್ಯ ಮತ್ತು ಪುತ್ತೂರಿನಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ನೇರ ಸಂದರ್ಶನ

Published

on

Ad Widget

Ad Widget

Ad Widget

Ad Widget

ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕ್ಷೇತ್ರದಲ್ಲಿ ಪ್ರಸಿದ್ಧಿ ಪಡೆದಿರುವ ‘ವಿದ್ಯಾಮಾತಾ ಅಕಾಡೆಮಿ’ ಸಂಸ್ಥೆಯು ತನ್ನ ವಿವಿಧ ಶಾಖೆ ಮತ್ತು ವಿಭಾಗಗಳಿಗೆ ಅಗತ್ಯವಿರುವ ನೌಕರರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ನೇರ ಸಂದರ್ಶನವನ್ನು ಆಯೋಜಿಸಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕ್ಷೇತ್ರದಲ್ಲಿ ಪ್ರಸಿದ್ಧಿ ಪಡೆದಿರುವ ‘ವಿದ್ಯಾಮಾತಾ ಅಕಾಡೆಮಿ’ ಸಂಸ್ಥೆಯು ತನ್ನ ವಿವಿಧ ಶಾಖೆ ಮತ್ತು ವಿಭಾಗಗಳಿಗೆ ಅಗತ್ಯವಿರುವ ನೌಕರರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ನೇರ ಸಂದರ್ಶನವನ್ನು ಆಯೋಜಿಸಿದೆ.

Ad Widget

Ad Widget alt="Ad Widget"/>

Ad Widget

ಸಂಸ್ಥೆಯಲ್ಲಿ ಖಾಲಿ ಇರುವ ಕಂಪ್ಯೂಟರ್ ಶಿಕ್ಷಕಿ ಹಾಗೂ ಬಿಸಿನೆಸ್ ಡೆವಲಪ್‌ಮೆಂಟ್ ಆಫೀಸರ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತಿದ್ದು, ಆಸಕ್ತರು ಈ ಅವಕಾಶವನ್ನು ಪಡೆದುಕೊಳ್ಳಬಹುದಾಗಿದೆ.

Ad Widget

Ad Widget <> Ad Widget

ಸುಳ್ಯ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸಲು ಮಹಿಳಾ ಕಂಪ್ಯೂಟರ್ ಶಿಕ್ಷಕಿಯ ಹುದ್ದೆಗೆ ಅರ್ಹ ಅಭ್ಯರ್ಥಿಗಳ ಅಗತ್ಯವಿದೆ. ಅದೇ ರೀತಿ, ಪುತ್ತೂರು ಹಾಗೂ ಅದರ ಸುತ್ತಮುತ್ತಲಿನ ಭಾಗಗಳಲ್ಲಿ ಕಾರ್ಯನಿರ್ವಹಿಸಲು ಬಿಸಿನೆಸ್ ಡೆವಲಪ್‌ಮೆಂಟ್ ಆಫೀಸರ್ (Business Development Officer) ಹುದ್ದೆಗೆ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ತಮ್ಮ ವೃತ್ತಿಜೀವನವನ್ನು ಉತ್ತಮ ರೀತಿಯಲ್ಲಿ ರೂಪಿಸಿಕೊಳ್ಳಲು ಬಯಸುವ ಹಾಗೂ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುವ ಅಭ್ಯರ್ಥಿಗಳಿಗೆ ಇದು ಸೂಕ್ತ ವೇದಿಕೆಯಾಗಿದೆ.

ಈ ಹುದ್ದೆಗಳಿಗೆ ಸಂಬಂಧಿಸಿದಂತೆ ನೇರ ಸಂದರ್ಶನವು ದಿನಾಂಕ 26-10-2026 ರಂದು ಬೆಳಿಗ್ಗೆ 10ಕ್ಕೆ ನಡೆಯಲಿದೆ.

Ad Widget

Ad Widget

ಸಂದರ್ಶನವು ಪುತ್ತೂರಿನ ಎಪಿಎಂಸಿ ರಸ್ತೆಯಲ್ಲಿರುವ ‘ವಿದ್ಯಾಮಾತಾ ಅಕಾಡೆಮಿ’ಯ ಮುಖ್ಯ ಕಚೇರಿಯಲ್ಲಿ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು ತಮ್ಮ ಅಗತ್ಯ ದಾಖಲೆಗಳೊಂದಿಗೆ ನಿಗದಿತ ದಿನದಂದು ಸಂದರ್ಶನಕ್ಕೆ ಹಾಜರಾಗಬಹುದು. ಹುದ್ದೆಯ ವಿವರಗಳು ಹಾಗೂ ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 96204 68869 ಅನ್ನು ಸಂಪರ್ಕಿಸಬಹುದಾಗಿದೆ.

Ad Widget
Continue Reading

ಉದ್ಯೋಗ

Puttur-Sales‌ನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening

Published

on

Ad Widget

Ad Widget

Ad Widget

Ad Widget

ಉದ್ಯೋಗ ಹುಡುಕುತ್ತಿರುವ ಯುವಕ-ಯುವತಿಯರಿಗೆ ಇಲ್ಲಿದೆ ಉತ್ತಮ ಅವಕಾಶ. ದ್ವಿಚಕ್ರ ವಾಹನ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವವರಿಗೆ ಪುತ್ತೂರಿನ ಶ್ರೀ ತಿರುಮಲಾ TVS ಸಂಸ್ಥೆಯಲ್ಲಿ ಸೇಲ್ಸ್, ಸರ್ವೀಸ್, ಅಕೌಂಟ್ಸ್, ಫೈನಾನ್ಸ್, ಇನ್ಶೂರೆನ್ಸ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಹಲವು ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಉದ್ಯೋಗ ಹುಡುಕುತ್ತಿರುವ ಯುವಕ-ಯುವತಿಯರಿಗೆ ಇಲ್ಲಿದೆ ಉತ್ತಮ ಅವಕಾಶ. ದ್ವಿಚಕ್ರ ವಾಹನ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವವರಿಗೆ ಪುತ್ತೂರಿನ ಶ್ರೀ ತಿರುಮಲಾ TVS ಸಂಸ್ಥೆಯಲ್ಲಿ ಸೇಲ್ಸ್, ಸರ್ವೀಸ್, ಅಕೌಂಟ್ಸ್, ಫೈನಾನ್ಸ್, ಇನ್ಶೂರೆನ್ಸ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಹಲವು ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ.

Ad Widget

Ad Widget alt="Ad Widget"/>

Ad Widget

TVS ಸಂಸ್ಥೆಯ ಪ್ರೀಮಿಯಂ, EV ಹಾಗೂ IC ವಿಭಾಗಗಳಲ್ಲಿ ಉದ್ಯೋಗಾವಕಾಶ ಕಲ್ಪಿಸಲಾಗಿದ್ದು, ‘ಪುತ್ತೂರಿನ ಅತಿದೊಡ್ಡ 2-ವೀಲರ್ ಜಾಬ್ ಓಪನಿಂಗ್’ ಎಂಬ ಘೋಷಣೆಯೊಂದಿಗೆ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ.

Ad Widget

Ad Widget <> Ad Widget

ಸೇಲ್ಸ್ ವಿಭಾಗದಲ್ಲಿ ಹಲವು ಅವಕಾಶ

ಪುತ್ತೂರು ಸೇಲ್ಸ್ ವಿಭಾಗದಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್, ಸೇಲ್ಸ್ ಮ್ಯಾನೇಜರ್, ಎಕ್ಸ್‌ಚೇಂಜ್ ಕೋಆರ್ಡಿನೇಟರ್, ಸೇಲ್ಸ್ ಟೆಲಿಕಾಲಿಂಗ್ (CRE), ಅಕೌಂಟ್ಸ್ ಮ್ಯಾನೇಜರ್, ಫೈನಾನ್ಸ್ ಮ್ಯಾನೇಜರ್, ರಿಸೆಪ್ಷನಿಸ್ಟ್, RTO ಎಕ್ಸಿಕ್ಯೂಟಿವ್, ಇನ್‌ವಾಯ್ಸ್ ಎಕ್ಸಿಕ್ಯೂಟಿವ್, ಅಕೌಂಟ್ಸ್ ಎಕ್ಸಿಕ್ಯೂಟಿವ್, ಫೈನಾನ್ಸ್ ಕೋಆರ್ಡಿನೇಟರ್ ಹಾಗೂ ಇನ್ಶೂರೆನ್ಸ್ ಎಕ್ಸಿಕ್ಯೂಟಿವ್ ಸೇರಿದಂತೆ ಹಲವು ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

Ad Widget

Ad Widget

ಸರ್ವೀಸ್ ವಿಭಾಗದಲ್ಲೂ ಭರ್ಜರಿ ನೇಮಕಾತಿ

ಸರ್ವೀಸ್ ವಿಭಾಗದಲ್ಲಿ ಅಡ್ವೈಸರ್, ಫ್ಲೋರ್ ಸೂಪರ್‌ವೈಸರ್, ಟೆಕ್ನಿಷಿಯನ್, ಪಾರ್ಟ್ಸ್ ಪಿಕರ್, ಬಿಲ್ಲಿಂಗ್/ರಿಸೆಪ್ಷನಿಸ್ಟ್ ಎಕ್ಸಿಕ್ಯೂಟಿವ್, ಪಾರ್ಟ್ಸ್ ಮ್ಯಾನೇಜರ್, ವಾಷಿಂಗ್ ಸಿಬ್ಬಂದಿ, PDI ಟೆಕ್ನಿಷಿಯನ್, ಸರ್ವೀಸ್ ಮ್ಯಾನೇಜರ್, ನೆಟ್‌ವರ್ಕ್ ಕೋಆರ್ಡಿನೇಟರ್, ವಾರಂಟಿ ಇನ್‌ಚಾರ್ಜ್, ಅಕ್ಸಿಡೆಂಟ್ ಸೂಪರ್‌ವೈಸರ್, CRE ಟೆಲಿಕಾಲಿಂಗ್, CRM, PDI ಸೂಪರ್‌ವೈಸರ್ ಹಾಗೂ ಪೇಂಟರ್ ಮತ್ತು ಡೆಂಟಿಂಗ್ ಹುದ್ದೆಗಳಿಗೆ ಅವಕಾಶವಿದೆ.

ಬೆಳ್ಳಾರೆಯಲ್ಲೂ ಉದ್ಯೋಗದ ಬಾಗಿಲು ತೆರೆದಿದೆ

ಬೆಳ್ಳಾರೆ ಭಾಗದಲ್ಲಿಯೂ ಉದ್ಯೋಗಾವಕಾಶ ಕಲ್ಪಿಸಲಾಗಿದೆ. ಸರ್ವೀಸ್ ವಿಭಾಗದಲ್ಲಿ ಅಡ್ವೈಸರ್, ಪಾರ್ಟ್ಸ್ ಪಿಕರ್, ಬಿಲ್ಲಿಂಗ್/ರಿಸೆಪ್ಷನಿಸ್ಟ್ ಎಕ್ಸಿಕ್ಯೂಟಿವ್, ಫ್ಲೋರ್ ಸೂಪರ್‌ವೈಸರ್, ಟೆಕ್ನಿಷಿಯನ್ ಹಾಗೂ ವಾಷಿಂಗ್ ಸಿಬ್ಬಂದಿ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಸೇಲ್ಸ್ ವಿಭಾಗದಲ್ಲಿ 6 ಸೇಲ್ಸ್ ಎಕ್ಸಿಕ್ಯೂಟಿವ್ ಹಾಗೂ 2 ರಿಸೆಪ್ಷನಿಸ್ಟ್ ಹುದ್ದೆಗಳಿಗೂ ಅವಕಾಶವಿದೆ.

PF, ESI ಜೊತೆಗೆ ₹25 ಸಾವಿರದವರೆಗೆ ಗಳಿಕೆ!

ಆಯ್ಕೆಯಾಗುವ ಅಭ್ಯರ್ಥಿಗಳಿಗೆ PF, ESI, ಸ್ಪಾಟ್ ಇನ್ಸೆಂಟಿವ್, ಮಾಸಿಕ ಹಾಗೂ ತ್ರೈಮಾಸಿಕ ಇನ್ಸೆಂಟಿವ್ ಸೌಲಭ್ಯಗಳು ದೊರೆಯಲಿವೆ. 25 ಕಿ.ಮೀ.ಗಿಂತ ಹೆಚ್ಚಿನ ಪ್ರಯಾಣಕ್ಕೆ ಪೆಟ್ರೋಲ್ ವೋಚರ್ ನೀಡಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳಿಗೆ ತಿಂಗಳಿಗೆ ₹25,000 ವರೆಗೆ ಗಳಿಸುವ ಅವಕಾಶ ಇದೆ ಎಂದು ಸಂಸ್ಥೆ ತಿಳಿಸಿದೆ.

ದ್ವಿಚಕ್ರ ವಾಹನ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವವರು ಮಾತ್ರವಲ್ಲದೆ, ಸೇಲ್ಸ್, ಅಕೌಂಟ್ಸ್, ಫೈನಾನ್ಸ್, ಟೆಲಿಕಾಲಿಂಗ್, ಗ್ರಾಹಕ ಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗ ಹುಡುಕುತ್ತಿರುವವರೂ ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ.

ಉದ್ಯೋಗಾವಕಾಶ ಸೀಮಿತವಾಗಿರುವುದರಿಂದ ಆಸಕ್ತ ಅಭ್ಯರ್ಥಿಗಳು ಕೂಡಲೇ ಸಂಪರ್ಕಿಸಬಹುದು.

📞 ಸಂಪರ್ಕ: +91 82965 79206

📍 ವಿಳಾಸ: ಶ್ರೀ ತಿರುಮಲಾ TVS, ಬೈಪಾಸ್ ಜಂಕ್ಷನ್, ಮಂಜಲ್ಪಡ್ಡು, ಮೇನ್ ರೋಡ್, ಬೋಳ್ವಾರ್ ವೆಸ್ಟ್, ಪುತ್ತೂರು–574201.

Ad Widget
Continue Reading

ಉದ್ಯೋಗ

Constable recruitment: ಕಾನ್‌ಸ್ಟೆಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ; 3,991 ಹುದ್ದೆಗಳಿಗೆ 19,396 ಅಭ್ಯರ್ಥಿಗಳು

Published

on

Ad Widget

Ad Widget

Ad Widget

Ad Widget

ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ (ಆರ್‌ಪಿಸಿ ಮತ್ತು ಕೆಕೆ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ದೇಹದಾರ್ಢ್ಯ ಪರೀಕ್ಷೆ (ಪಿಎಸ್‌ಟಿ) ಹಾಗೂ ಸಹಿಷ್ಣುತೆ ಪರೀಕ್ಷೆ (ಇಟಿ) ಸೆ.28ರಿಂದ ಆರಂಭವಾಗಲಿದೆ. ಪೊಲೀಸ್ ನೇಮಕಾತಿ ವಿಭಾಗವು ವಲಯವಾರು ವೇಳಾಪಟ್ಟಿಯನ್ನು ಪ್ರಕಟಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು, ಸೆ.25: ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ (ಆರ್‌ಪಿಸಿ ಮತ್ತು ಕೆಕೆ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ದೇಹದಾರ್ಢ್ಯ ಪರೀಕ್ಷೆ (ಪಿಎಸ್‌ಟಿ) ಹಾಗೂ ಸಹಿಷ್ಣುತೆ ಪರೀಕ್ಷೆ (ಇಟಿ) ಸೆ.28ರಿಂದ ಆರಂಭವಾಗಲಿದೆ. ಪೊಲೀಸ್ ನೇಮಕಾತಿ ವಿಭಾಗವು ವಲಯವಾರು ವೇಳಾಪಟ್ಟಿಯನ್ನು ಪ್ರಕಟಿಸಿದೆ.

Ad Widget

Ad Widget alt="Ad Widget"/>

Ad Widget

ಈ ನೇಮಕಾತಿ ಪ್ರಕ್ರಿಯೆಯಡಿ ಒಟ್ಟು 3,991 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ರಾಜ್ಯಾದ್ಯಂತ 19,396 ಅಭ್ಯರ್ಥಿಗಳು ದೈಹಿಕ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ. ಉಳಿಕೆ ಮೂಲ ವೃಂದದ (ಆರ್‌ಪಿಸಿ) 3,395 ಹುದ್ದೆಗಳಿಗೆ 16,454 ಅಭ್ಯರ್ಥಿಗಳು ಹಾಗೂ ಕಲ್ಯಾಣ ಕರ್ನಾಟಕ (ಕೆಕೆ) ವೃಂದದ 596 ಹುದ್ದೆಗಳಿಗೆ 2,942 ಅಭ್ಯರ್ಥಿಗಳು ಪರೀಕ್ಷೆಗೆ ಆಯ್ಕೆಯಾಗಿದ್ದಾರೆ.

Ad Widget

Ad Widget <> Ad Widget

ಮಂಗಳೂರಿನಲ್ಲಿ 395 ಹುದ್ದೆಗಳಿಗೆ 1,803 ಅಭ್ಯರ್ಥಿಗಳು
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ (ಕಾರವಾರ), ಚಿಕ್ಕಮಗಳೂರು ಹಾಗೂ ಮಂಗಳೂರು ನಗರ ಘಟಕಗಳ ವ್ಯಾಪ್ತಿಯ 395 ಹುದ್ದೆಗಳಿಗೆ 1,803 ಅಭ್ಯರ್ಥಿಗಳು ದೈಹಿಕ ಪರೀಕ್ಷೆಯಲ್ಲಿ ಭಾಗವಹಿಸಲಿದ್ದಾರೆ. ಈ ಅಭ್ಯರ್ಥಿಗಳಿಗೆ ಸೆ.28ರಿಂದ ಅ.3ರವರೆಗೆ ಮಂಗಳೂರಿನ ಲಾಲ್‌ಬಾಗ್‌ನ ಮಂಗಳ ಕ್ರೀಡಾಂಗಣದಲ್ಲಿ ದೈಹಿಕ ಪರೀಕ್ಷೆ ನಡೆಯಲಿದೆ.

ಕರೆಪತ್ರ ಡೌನ್‌ಲೋಡ್‌ಗೆ ಸೂಚನೆ
ದೈಹಿಕ ಪರೀಕ್ಷೆಗೆ ಅರ್ಹತೆ ಪಡೆದ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಅಧಿಕೃತ ವೆಬ್‌ಸೈಟ್‌ನಿಂದ ತಮ್ಮ ಕರೆಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಅಭ್ಯರ್ಥಿಗಳು ಕರೆಪತ್ರದಲ್ಲಿ ನಮೂದಿಸಿರುವ ದಿನಾಂಕದಂದು ನಿಗದಿತ ಪರೀಕ್ಷಾ ಕೇಂದ್ರಕ್ಕೆ ಕಡ್ಡಾಯವಾಗಿ ಹಾಜರಾಗುವಂತೆ ಪೊಲೀಸ್ ನೇಮಕಾತಿ ವಿಭಾಗ ಸೂಚಿಸಿದೆ.

Ad Widget

Ad Widget

ಕಾನ್‌ಸ್ಟೆಬಲ್ ಲಿಖಿತ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಪ್ರಕಟ
ಇದೇ ವೇಳೆ, ಕೆಎಸ್‌ಆರ್‌ಪಿ, ಕೆಎಸ್‌ಐಎಸ್‌ಎಫ್ ಹಾಗೂ ಐಆರ್‌ಬಿ ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿಗಾಗಿ ಸೆ.20ರಂದು ನಡೆದ ಲಿಖಿತ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಕೇವಲ ಐದು ದಿನಗಳಲ್ಲಿ ಕೆಇಎ ಪ್ರಕಟಿಸಿದೆ.

ಪರೀಕ್ಷೆಯ ಫಲಿತಾಂಶಕ್ಕೆ ಆಕ್ಷೇಪಣೆಗಳಿದ್ದಲ್ಲಿ ಅಭ್ಯರ್ಥಿಗಳು ಸೆ.27ರೊಳಗೆ ನಿಗದಿತ ಲಿಂಕ್ ಮೂಲಕ ಸಲ್ಲಿಸಬಹುದು ಎಂದು ಕೆಇಎ ತಿಳಿಸಿದೆ.

ಉಳಿಕೆ ಮೂಲ ವೃಂದದ 1,13,390 ಹಾಗೂ ಕಲ್ಯಾಣ ಕರ್ನಾಟಕ ವೃಂದದ 33,061 ಅಭ್ಯರ್ಥಿಗಳು ಲಿಖಿತ ಪರೀಕ್ಷೆ ಬರೆದಿದ್ದರು. ಪರೀಕ್ಷೆ ನಡೆದ ದಿನವೇ ಎಲ್ಲ ಅಭ್ಯರ್ಥಿಗಳ ಒಎಂಆರ್ ಉತ್ತರ ಪತ್ರಿಕೆಗಳನ್ನು ಸ್ಕ್ಯಾನ್ ಮಾಡಿ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿತ್ತು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!