Connect with us

ಕಾರ್ಯಕ್ರಮಗಳು

Puttur-ಪುತ್ತೂರು ಮಹಾಲಿಂಗೇಶ್ವರ ದೇವಳದಲ್ಲಿ ‘ಸಾಮೂಹಿಕ ಸರಸ್ವತಿ ವಂದನೆ’: 175 ವಿದ್ಯಾರ್ಥಿಗಳಿಂದ ವಿದ್ಯಾ ಸಂಕಲ್ಪ

Published

on



Ad Widget

Ad Widget

Ad Widget

Ad Widget

ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ‘ಸಾಮೂಹಿಕ ಸರಸ್ವತೀ ವಂದನೆ’ ಹಾಗೂ ‘ವಿದ್ಯಾ ಸಂಕಲ್ಪ’ ಕಾರ್ಯಕ್ರಮವು ಜೂನ್ 7 ರಂದು ಅತ್ಯಂತ ಭಕ್ತಿಭಾವದಿಂದ ಜರುಗಿತು. ದೇವಾಲಯ ಸಂವರ್ಧನಾ ಸಮಿತಿ ಕರ್ನಾಟಕ (ಪುತ್ತೂರು ತಾಲೂಕು ಮತ್ತು ಗ್ರಾಮಾಂತರ), ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಹಾಗೂ ಹಿಂದೂ ಧಾರ್ಮಿಕ ಶಿಕ್ಷಣ ಪ್ರಕಲ್ಪ ಕೇಂದ್ರಗಳ ಜಂಟಿ ಆಶ್ರಯದಲ್ಲಿ ಈ ವಿಶಿಷ್ಟ ಕಾರ್ಯಕ್ರಮ ಆಯೋಜಿಸಲಾಗಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಇಲ್ಲಿನ ಐತಿಹಾಸಿಕ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ‘ಸಾಮೂಹಿಕ ಸರಸ್ವತೀ ವಂದನೆ’ ಹಾಗೂ ‘ವಿದ್ಯಾ ಸಂಕಲ್ಪ’ ಕಾರ್ಯಕ್ರಮವು ಜೂನ್ 7 ರಂದು ಅತ್ಯಂತ ಭಕ್ತಿಭಾವದಿಂದ ಜರುಗಿತು. ದೇವಾಲಯ ಸಂವರ್ಧನಾ ಸಮಿತಿ ಕರ್ನಾಟಕ (ಪುತ್ತೂರು ತಾಲೂಕು ಮತ್ತು ಗ್ರಾಮಾಂತರ), ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಹಾಗೂ ಹಿಂದೂ ಧಾರ್ಮಿಕ ಶಿಕ್ಷಣ ಪ್ರಕಲ್ಪ ಕೇಂದ್ರಗಳ ಜಂಟಿ ಆಶ್ರಯದಲ್ಲಿ ಈ ವಿಶಿಷ್ಟ ಕಾರ್ಯಕ್ರಮ ಆಯೋಜಿಸಲಾಗಿತ್ತು.

Ad Widget

Ad Widget

Ad Widget alt="Ad Widget"/>

Ad Widget

ಧಾರ್ಮಿಕ ವಿಧಿವಿಧಾನಗಳು:
ಬೆಳಗ್ಗೆ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಮತ್ತು ಮಂಗಳೂರು ವಿಭಾಗದ ದೇವಾಲಯಗಳ ಸಂವರ್ಧನಾ ಸಮಿತಿ ಪ್ರಮುಖರಾದ ಕೇಶವಪ್ರಸಾದ್ ಮುಳಿಯ ಅವರು ಹವನದ ಸಂಕಲ್ಪ ನೆರವೇರಿಸಿದರು. ಜಯರಾಮ ಜೋಯಿಸ್ ಮತ್ತು ತಂಡದವರು ಸರಸ್ವತೀ ಸೂಕ್ತ ಹವನವನ್ನು ನಡೆಸಿಕೊಟ್ಟರು. ಮಂಜುಳಗಿರಿ ವೆಂಕಟರಮಣ ಭಟ್ ಅವರು ಮಕ್ಕಳಿಗೆ ಸರಸ್ವತಿ ಅಷ್ಟೋತ್ತರ ಮತ್ತು ಶ್ಲೋಕಗಳನ್ನು ಬೋಧಿಸಿದರು.

Ad Widget

Ad Widget <> Ad Widget

ವಿದ್ಯಾರ್ಥಿಗಳಿಂದ ವಿದ್ಯಾ ಸಂಕಲ್ಪ:
ಸುಮಾರು 175 ವಿದ್ಯಾರ್ಥಿಗಳು ಭಜನೆ ಮಾಡುತ್ತಾ, ಸರಸ್ವತಿ ಅಷ್ಟೋತ್ತರ ಪಠಿಸುತ್ತಾ ತಮ್ಮ ಪುಸ್ತಕಗಳಿಗೆ ಪುಷ್ಪಾರ್ಚನೆ ಮಾಡಿದರು. ಈ ಶೈಕ್ಷಣಿಕ ವರ್ಷದಲ್ಲಿ ಉತ್ತಮವಾಗಿ ಅಭ್ಯಾಸ ಮಾಡುವ ಕುರಿತು ಕೇಶವಪ್ರಸಾದ್ ಮುಳಿಯ ಅವರು ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ಪೂರ್ವಕ ‘ವಿದ್ಯಾ ಸಂಕಲ್ಪ’ ಬೋಧಿಸಿದರು. ಪೋಷಕರು ಮತ್ತು ಭಕ್ತಾದಿಗಳು ಸೇರಿದಂತೆ ಒಟ್ಟು 275ಕ್ಕೂ ಹೆಚ್ಚು ಮಂದಿ ಈ ಭಕ್ತಿ ಸಂಗಮದಲ್ಲಿ ಪಾಲ್ಗೊಂಡಿದ್ದರು.



Ad Widget

ಉದ್ದೇಶ ಮತ್ತು ಪ್ರಸಾದ ವಿತರಣೆ:
ವಿದ್ಯಾರ್ಥಿಗಳಲ್ಲಿ ವಿದ್ಯಾಭ್ಯಾಸದ ಬಗ್ಗೆ ಆಸಕ್ತಿ ಮೂಡಿಸುವುದು, ಸಂಸ್ಕಾರ ಹಾಗೂ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪಾಲ್ಗೊಂಡ ಎಲ್ಲಾ ವಿದ್ಯಾರ್ಥಿಗಳಿಗೆ ದೇವರ ಆಶೀರ್ವಾದದ ರೂಪದಲ್ಲಿ ಪುಸ್ತಕ ಹಾಗೂ ದೇವರ ನಾಮವಿರುವ ಪೆನ್ನನ್ನು ಪ್ರಸಾದವಾಗಿ ವಿತರಿಸಲಾಯಿತು.

Ad Widget

Ad Widget

ಸುಭಾಷ್ ರೈ ಬೆಳ್ಳಿಪ್ಪಾಡಿ, ವ್ಯವಸ್ಥಾಪನಾ ಸಮಿತಿ ಸದಸ್ಯರು, ದೇವಾಲಯ ಸಂವರ್ಧನಾ ಸಮಿತಿಯ ಪ್ರಮುಖರಾದ ರವೀಂದ್ರನಾಥ್ ರೈ, ರಾಮ್ ದಾಸ್ ಗೌಡ , ರಾಧಾಕೃಷ್ಣ ನಂದಿಲ, ಕೃಷ್ಣಕುಮಾರ್ ಅತ್ರಿಜಾಲು, ಸಂಪತ್ ಕುಮಾರ್, ಹಿಂದೂ ಧಾರ್ಮಿಕ ಶಿಕ್ಷಣ ಪ್ರಕಲ್ಪದ ಸಂಯೋಜಕರಾದ ಕೃಷ್ಣವೇಣಿ ಪ್ರಸಾದ್ ಮುಳಿಯ, ಧಾರ್ಮಿಕ ಶಿಕ್ಷಣ ಕೇಂದ್ರದ ಬೋಧಕರಾದ ವಿ.ಪ್ರಭಾವತಿ, ಸುಧಾ ಹೆಬ್ಬಾರ್, ಚಂದ್ರಪ್ರಭಾ,ಶಂಕರಿ ಶರ್ಮ, ವಿಜಯ ಸರಸ್ವತಿ,ಸುಮಂಗಲ, ಕವಿತಾ ಕೊಳತ್ತಾಯ, ವತ್ಸಲ ರಾಜ್ಞಿ, ವೀಣಾ ಬಿ. ಕೆ, ತೇಜಸ್ವಿ, ಪ್ರಶಾಂತ್ ದೊಡ್ಡಡ್ಕ ಹಾಗೂ ನಿತ್ಯಕರಸೇವಕರ ಅಧ್ಯಕ್ಷರಾದ ವಾದಿರಾಜ್ ಮತ್ತು ತಂಡದವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು

ಹಿಂದೂ ಧಾರ್ಮಿಕ ಶಿಕ್ಷಣ ಕೇಂದ್ರಗಳ ಮಾಹಿತಿ:
ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರು, ಶ್ರೀ ಮುಂಡ್ಯತ್ತಾಯ ದೈವಸ್ಥಾನ ಪಾಂಗಳಾಯಿ, ಮುಳಿಯ ದೇವರಕಟ್ಟೆ ಕೋರ್ಟ್ ರಸ್ತೆ , ಅಟಲ್ ಉದ್ಯಾನ ಕೊಂಬೆಟ್ಟು , ಮಾಸ್ಟರ್ ಪ್ಲಾನರಿ ಕಲ್ಲೇಗ , ಶ್ರೀ ಷಣ್ಮುಖ ಸುಬ್ರಹ್ಮಣ್ಯ – ಶ್ರೀ ಮಹಾ ವಿಷ್ಣು ದೇವಸ್ಥಾನ ಕೆಮ್ಮಿಂಜೆ, ಶ್ರೀ ರಾಘವೇಂದ್ರ ಮಠ ಕಲ್ಲಾರೆ ಕೇಂದ್ರಗಳಲ್ಲಿ ಹಿಂದೂ ಧಾರ್ಮಿಕ ಶಿಕ್ಷಣ ನಡೆಯುತ್ತಿದ್ದು ಆಸಕ್ತರು ಹೆಚ್ಚಿನ ಮಾಹಿತಿಗಾಗಿ 9035888916 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.

Ad Widget
Click to comment

Leave a Reply

ಮಂಗಳೂರು

Mangaluru-ಬೆಳೆ ವಿಮೆ ಅನ್ಯಾಯ ಆರೋಪ: ಅ.9ರಂದು ಮಂಗಳೂರಿನಲ್ಲಿ ರೈತರ ಬೃಹತ್ ಹಕ್ಕೊತ್ತಾಯ | ಸಹಕಾರ ಭಾರತಿ – ಬಿಜೆಪಿ ಬೆಂಬಲ

Published

on



Ad Widget

Ad Widget

Ad Widget

Ad Widget

ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ. ಬೆಳೆ ವಿಮೆ ಯೋಜನೆಯಡಿ ರೈತರಿಗೆ ಸೂಕ್ತ ಪರಿಹಾರ ದೊರೆಯದಿರುವುದು ಸೇರಿದಂತೆ ವಿಮೆ ಪಾವತಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಸಭೆಯಲ್ಲಿ ಧ್ವನಿ ಎತ್ತಲಾಗುತ್ತದೆ.

Ad Widget

Ad Widget <> Ad Widget

ಬೆಳೆ ವಿಮೆ ಯೋಜನೆಯಡಿ ರೈತರಿಗೆ ನ್ಯಾಯಯುತ ಪರಿಹಾರ ದೊರೆಯಬೇಕು ಹಾಗೂ ವಿಮೆ ಪಾವತಿಯಲ್ಲಿ ಉಂಟಾಗಿರುವ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ.



Ad Widget

ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಸದಸ್ಯರು ಸೇರಿದಂತೆ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಬೆಳೆ ವಿಮೆಯಲ್ಲಿ ಆಗಿರುವ ಅನ್ಯಾಯದ ವಿರುದ್ಧ ಒಗ್ಗಟ್ಟಿನಿಂದ ಹಕ್ಕೊತ್ತಾಯ ಮಂಡಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.

Continue Reading

ಸ್ಥಳೀಯ

Dharmasthala-ಅ. 11 ರಿಂದ 19 : ಧರ್ಮಸ್ಥಳದಲ್ಲಿ ನವರಾತ್ರಿ ವೈಭವ

Published

on



Ad Widget

Ad Widget

Ad Widget

Ad Widget

ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಇದೇ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ. ಪ್ರತಿ ದಿನ ರಾತ್ರಿ ಅಮ್ಮನವರ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯುತ್ತದೆ.

Ad Widget

Ad Widget

Ad Widget

Ad Widget

ಉಜಿರೆ: ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಇದೇ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ. ಪ್ರತಿ ದಿನ ರಾತ್ರಿ ಅಮ್ಮನವರ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯುತ್ತದೆ.

Ad Widget

Ad Widget

Ad Widget alt="Ad Widget"/>

Ad Widget

ದೇವಸ್ಥಾನದ ಎದುರು ಇರುವ ಪ್ರವಚನಮಂಟಪದಲ್ಲಿ ಸಂಜೆ ಆರು ಗಂಟೆಯಿಂದ ಒಂಭತ್ತು ಗಂಟೆ ವರೆಗೆ ನಾಡಿನ ಖ್ಯಾತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ.

Ad Widget

Ad Widget <> Ad Widget

ಅ. 11: ಭಾನುವಾರ: ಕುಮಾರಿ ಪ್ರಾಪ್ತಿ ಶೆಟ್ಟಿ, ಧರ್ಮಸ್ಥಳ ಮತ್ತು ಕುಮಾರಿ ಆದ್ವಿ, ನಿಡಿಗಲ್ (ಭಕ್ತಿಸಂಗೀತ), ಅ. 12: ಸೋಮವಾರ: ಪವಿತ್ರವಿನಯ್ ಮಯ್ಯ ಅರ್ಕುಳ, ಮಂಗಳೂರು (ಸುಗಮ ಸಂಗೀತ), ಅ. 13: ಮಂಗಳವಾರ: ಕುಮಾರಿ ಮಾನ್ಸಿ, ಮೈಸೂರು (ಭಕ್ತಿಸಂಗೀತ), ಅ. 14: ಬುಧವಾರ: ಮಾಸ್ಟರ್ ಆಗಮ, ಪೆರ್ಲ, ಮಂಗಳೂರು (ಕರ್ನಾಟಕ ಶಾಸ್ತ್ರೀಯ ಸಂಗೀತ), ಅ. 15: ಗುರುವಾರ: ಕುಮಾರಿ ಧೃತಿ ಬಿ. ಆತ್ರೇಯಾಸ್, ಕುಮಾರಿ ಧನ್ವಿ ಬಿ. ಆತ್ರೇಯಾಸ್ ಮತ್ತು ಮಾಸ್ಟರ್ ಅಸ್ರಮೇಯ ಗುರುಪ್ರಸಾದ್, ಬೆಂಗಳೂರು (ನೃತ್ಯ, ಗಾನಲಹರಿ), ಅ. 16: ಶುಕ್ರವಾರ: ಸನತ್‌ಕುಮಾರ್, ಬೆಂಗಳೂರು (ವಯಲಿನ್ ವಾದನ), ಅ. 17: ಶನಿವಾರ: ಕುಮಾರಿ ಮಯೂರಿ ಭಟ್ ಪೊಳಲಿ, ಬಂಟ್ವಾಳ (ಕರ್ನಾಟಕ ಶಾಸ್ತ್ರೀಯ ಸಂಗೀತ), ಅ. 18: ಆದಿತ್ಯವಾರ: ಕುಮಾರಿ ಐಶ್ವರ್ಯ ಜೋಗಿ ಮತ್ತು ತಂಡ, ಕುಂದಾಪುರ (ಸುಮಧುರ ಗಾನವೈಭವ), ಅ. 19: ಸೋಮವಾರ: ಕುಮಾರಿ ಅರ್ಚಿಷಾ ರಾವ್ ಮತ್ತು ಬಳಗ, ಬೆಂಗಳೂರು (ಸಂಜೆ ಗಂಟೆ 6.30 ರಿಂದ 8.30). ಮಲ್ಲಿಕಾಮಟ್ಟಿ ಮತ್ತು ಬಳಗ, ಪೊಳಲಿ (ರಾತ್ರಿ ಗಂಟೆ 9 ರಿಂದ 11.30) ಭಕ್ತಿ ಸಂಗೀತ.



Ad Widget
Ad Widget
Continue Reading

ಸ್ಥಳೀಯ

Excel-ಎಕ್ಸೆಲ್ ಗುರು ನಮನ 2026: ಸಾಮರಸ್ಯವೇ ಸಮಾಜದ ಉನ್ನತಿಗೆ ತಳಪಾಯ: ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ

Published

on



Ad Widget

Ad Widget

Ad Widget

Ad Widget

ಎಕ್ಸೆಲ್ ಗುರುವಾಯನ ಕೆರೆಯಲ್ಲಿ ನಡೆದ ಗುರು ನಮನ 2026 ಕಾರ್ಯಕ್ರಮದಲ್ಲಿ ಮಾಣಿಲ ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದ ಪರಮ ಪೂಜ್ಯ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಮಾತನಾಡಿದರು.

Ad Widget

Ad Widget

Ad Widget

Ad Widget

ಗುರುವಾಯನಕೆರೆ, ಅ.4 : “ಸಮಾಜದಲ್ಲಿ ಎಲ್ಲರಿಗೂ ಬದುಕುವ ಅವಕಾಶವಿದೆ. ಪ್ರತಿಯೊಂದು ವರ್ಗ, ಸಮುದಾಯಕ್ಕೂ ಈ ಸಮಾಜ ಆಶ್ರಯ ನೀಡಿದೆ. ಪ್ರತಿಯೊಬ್ಬರ ನಂಬಿಕೆ ಆಚರಣೆಗಳು ಬೇರೆ ಬೇರೆಯಾಗಿರುತ್ತವೆ. ಅವರವರ ನಂಬಿಕೆ ಮತ್ತು ಆಚರಣೆಗಳನ್ನು ತಿರಸ್ಕರಿಸಿದಾಗ ಸಮಾಜದಲ್ಲಿ ಘರ್ಷಣೆಗಳು ಏರ್ಪಡುತ್ತವೆ. ಪ್ರತಿಯೊಬ್ಬರನ್ನೂ ಸಾಮರಸ್ಯದಿಂದ ನೋಡುವ ಗುಣ ನಮ್ಮದಾಗಬೇಕು. ಸಾಮರಸ್ಯವೇ ಸಮಾಜದ ಉನ್ನತಿಗೆ ಅಡಿಪಾಯವಿದ್ದಂತೆ” ಎಂದು ಎಕ್ಸೆಲ್ ಗುರುವಾಯನ ಕೆರೆಯಲ್ಲಿ ನಡೆದ ಗುರು ನಮನ 2026 ಕಾರ್ಯಕ್ರಮದಲ್ಲಿ ಮಾಣಿಲ ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದ ಪರಮ ಪೂಜ್ಯ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಹೇಳಿದರು.

Ad Widget

Ad Widget

Ad Widget alt="Ad Widget"/>

Ad Widget

ಸ್ವಾಮೀಜಿಯವರು ಮಾತನಾಡುತ್ತಾ ಎಕ್ಸೆಲ್ ವಿದ್ಯಾಸಂಸ್ಥೆಯು ಸುಂದರ ಪರಿಸರದಲ್ಲಿ ನಿರ್ಮಾಣಗೊಂಡಿದೆ. ಈ ವಿದ್ಯಾಸಂಸ್ಥೆಯಿಂದ ವಿದ್ಯಾರ್ಥಿಗಳ ಭವಿಷ್ಯ ರೂಪಗೊಳ್ಳುತ್ತದೆ. ವಿದ್ಯಾರ್ಥಿಗಳು ಪರಸ್ಪರ ಗೌರವಿಸಿರಿ. ಈ ಸಮಾಜಕ್ಕೆ ಒಳ್ಳೆಯದನ್ನು ಬಯಸಿ. ನೀವು ಓದಿದ ವಿದ್ಯಾ ಸಂಸ್ಥೆಗೆ ಚಿರಋಣಿಯಾಗಿರಬೇಕೆಂದು, ಈ ಸಂಸ್ಥೆಯು ಸಾವಿರಾರು ಶಿಕ್ಷಕರನ್ನು ನಿರಂತರವಾಗಿ ಗೌರವಿಸುತ್ತಾ ಬಂದಿರುವುದು ನಿಜವಾಗಿಯೂ ಅತ್ಯುತ್ತಮ ಬೆಳವಣಿಗೆಯಾಗಿದೆ. ಇದು ಸುಮಂತ್ ಕುಮಾರ್ ಅವರ ಈ ನಿಸ್ವಾರ್ಥ ಸೇವೆಗೆ ಸಾಕ್ಷಿಯಾಗಿದೆ ಎಂದರು.

Ad Widget

Ad Widget <> Ad Widget

ಸುಬ್ರಮಣ್ಯದ ಶ್ರೀ ಕುಕ್ಕೆ ಸುಬ್ರಹ್ಮಣ್ಯ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರಾದ ಸೋಮಶೇಖರ್ ನಾಯಕ್ ಇವರು ಮಾತನಾಡುತ್ತಾ ” ವಿದ್ಯಾರ್ಥಿಗಳು ಕಷ್ಟಕರ ವಿಷಯಗಳ ಕಡೆಗೆ ಹೆಚ್ಚು ಗಮನ ಕೊಡಬೇಕು. ನೀವೆಲ್ಲ ಎಕ್ಸೆಲ್ ವಿದ್ಯಾಸಂಸ್ಥೆಯಲ್ಲಿ ಓದುತ್ತಿರುವುದು ನಿಮ್ಮೆಲ್ಲರ ಅದೃಷ್ಟವೇ ಸರಿ. ಈ ಸಂಸ್ಥೆಯ ಅಧ್ಯಕ್ಷರಾದ ನುಮಂತ್ ಕುಮಾರ್ ಜೈನ್ ಇವರು ಉದಾರ ವ್ಯಕ್ತಿತ್ವದ ವ್ಯಕ್ತಿ. ಅವರ ಸೇವಾ ಮನೋಭಾವದಿಂದಲೇ ಈ ಶಿಕ್ಷಣ ಸಂಸ್ಥೆಯು ಎತ್ತರಕ್ಕೆ ಬೆಳೆಯುತ್ತಿದೆ. ಜಿಲ್ಲೆಯ ಯಾವುದೇ ಶೈಕ್ಷಣಿಕ ಸಾಮಾಜಿಕ ಧಾರ್ಮಿಕ ಕಾರ್ಯಕ್ರಮಗಳಿಗೆ ಸುಮಂತ್ ಅವರ ಕೊಡುಗೆ ಅಪಾರವಾದದ್ದು. ಈ ಸಂಸ್ಥೆಗೆ ನನ್ನನ್ನು ಆಹ್ವಾನಿಸಿ ಸನ್ಮಾನಿಸಿದ್ದೀರಿ. ನನ್ನಲ್ಲಿ ಕೃತಾರ್ಥತೆ ಭಾವ ಮೂಡುತ್ತಿದೆ. ಎಕ್ಸೆಲ್ ವಿದ್ಯಾಸಂಸ್ಥೆಗೆ ನಾನು ಚಿರಋಣಿ” ಎಂದು ಸಂತಸ ವ್ಯಕ್ತಪಡಿಸಿದರು.



Ad Widget

ಮೂಲ್ಕಿಯ ವಿಜಯ ಕಾಲೇಜಿನ ವಿಶ್ರಾಂತ ಪಾಚಾರ್ಯರಾದ ಡಾ .ನಾರಾಯಣ ಪೂಜಾರಿ ಮತ್ತು ಸಾಮಾಜಿಕ ಮತ್ತು ಧಾರ್ಮಿಕ ಮುಖಂಡರಾದ ಸಂತೋಷ್ ಕುಮಾರ್ ಕಾಪಿನಡ್ಕ ಇವರು ವಿದ್ಯಾರ್ಥಿಗಳ ಭವಿಷ್ಯಕ್ಕೆ ಶುಭ ಕೋರಿದರು.

Ad Widget

Ad Widget

ಎಕ್ಸೆಲ್ ವಿದ್ಯಾ ಸಂಸ್ಥೆಯ ಹಿತೈಷಿಗಳಾದ ರತ್ನರಾಜ್ ಜೈನ್ ಮತ್ತು ಪತ್ರಿಕೋದ್ಯಮಿಗಳಾದ ಸಂತೋಷ್ ಕೋಟ್ಯಾನ್ ಇವರು ಈ ಕಾರ್ಯಕ್ರಮದ ಭಾಗವಾಗಿ ಸನ್ಮಾನ ಸ್ವೀಕರಿಸಿದರು.

ಸಂಸ್ಥೆಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು ಅಧ್ಯಕ್ಷೀಯ ಭಾಷಣವನ್ನು ಮಾಡುತ್ತಾ “ನಮ್ಮ ಎಕ್ಸೆಲ್ ಸಂಸ್ಥೆಯ ವಿದ್ಯಾರ್ಥಿಗಳು ದೇಶವಿದೇಶಗಳಲ್ಲಿ ಉನ್ನತ ಶಿಕ್ಷಣವನ್ನು ಮಾಡುತ್ತಿದ್ದಾರೆ . ಇಲ್ಲಿ ಓದಿದ ವಿದ್ಯಾರ್ಥಿಗಳು ಆದರ್ಶ ವ್ಯಕ್ತಿಗಳಾಗಿ ರೂಪಗೊಳ್ಳುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ ಗುರುಗಳನ್ನು ಗೌರವಿಸುವ ಮೂಲಕ ನಮ್ಮಲ್ಲಿ ಧನ್ಯತಾಭಾವ ಮೂಡಿದೆ. ಶಿಕ್ಷಕರು ಜಗತ್ತಿನ ಪ್ರಥಮ ಪೂಜ್ಯರು . ಅಂತಹ ಶಿಕ್ಷಕರನ್ನು ಸನ್ಮಾನಿಸುವುದು ನಮ್ಮ ಸೌಭಾಗ್ಯ” ಎಂದು ಹೇಳಿದರು.

ಕಾಲೇಜಿನ ಬ್ರೋಚರ್ಸ್ ಅನ್ನು ಈ ಸಂದರ್ಭದಲ್ಲಿ ಲೋಕಾರ್ಪಣೆ ಮಾಡಲಾಯಿತು.ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆ, ತಾಲೂಕು ಗ್ರಾಮಗಳಲ್ಲಿ ಶಿಕ್ಷಕ ವೃತ್ತಿಯನ್ನು ಮಾಡುತ್ತ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುತ್ತಿರುವ 300 ಹೆಚ್ಚು ಶಿಕ್ಷಕರನ್ನು ಗೌರವಿಸಿದ್ದು ಅತ್ಯಂತ ವಿರಳ ಮತ್ತು ಸೃಜನಾತ್ಮಕ ಕಾರ್ಯಕ್ರಮವಾಗಿತ್ತು. ಎಲ್ಲ ಶಿಕ್ಷಕರಿಗೆ ಹಾರ , ಶಾಲು, ಪೇಟ ಮತ್ತು ಸ್ಮರಣಿಕೆ, ಉಡುಗೊರೆಗಳನ್ನು ನೀಡಿ ಸನ್ಮಾನಿಸಲಾಯಿತು. ಪ್ರಾಂಶುಪಾಲರಾದ ಡಾ ನವೀನ್ ಕುಮಾರ್ ಮರಿಕೆ ಸ್ವಾಗತಿಸಿದರು. ಎಕ್ಸೆಲ್ ಟೆಕ್ನೋ ಸ್ಕೂಲ್ ವೇಣೂರಿನ ಮುಖ್ಯೋಪಾಧ್ಯಯರಾದ ಶಾಂತಿರಾಜ್ ಜೈನ್ ವಂದಿಸಿದರು.

ಉಪನ್ಯಾಸಕರಾದ ಪ್ರಸನ್ನ ಭೋಜ, ತಿಪ್ಪೇಸ್ವಾಮಿ, ಪ್ರಜ್ವಿತ್ ರೈ, ಅನನ್ಯ ಜೈನ್, ವೈಷ್ಣವಿಯವರು ಕಾರ್ಯಕ್ರಮವನ್ನು ನಿರೂಪಿಸಿದರು. ದ್ವಿತೀಯ ಪಿಯು ವಿದ್ಯಾರ್ಥಿಗಳು ಪ್ರಾರ್ಥನೆ ಹಾಡುವ ಮೂಲಕ ಈ ಕಾರ್ಯಕ್ರಮಕ್ಕೆ ಆರಂಭವನ್ನು ಒದಗಿಸಿದರು.

ಪ್ರಾಂಶುಪಾಲರಾದ ಡಾ. ನವೀನ್ ಕುಮಾರ್ ಮರಿಕೆ, ಡಾ. ಪ್ರಜ್ವಲ್, ಉಪ ಪ್ರಾಚಾರ್ಯರಾದ ರೋಹಿತ್, ಹರೀಶ್ ಕುಮಾರ್ ಗುರುವಾಯನಕೆರೆ ಟೆಕ್ನೋ ಸ್ಕೂಲಿನ ಮುಖ್ಯ ಶಿಕ್ಷಕಿ ಸುಮಿತ್ರ, ವೇಣೂರು ಶಾಲೆಯ ಮುಖ್ಯೋಪಾಧ್ಯಾಯರಾದ ಶಾಂತಿರಾಜ್ ಜೈನ್, ವಿದ್ಯಾರ್ಥಿಗಳು, ಪೋಷಕರು, ಬೋಧಕ ಬೋಧಕೇತರ ಸಿಬ್ಬಂದಿಯವರು ಭಾಗವಹಿಸಿದ್ದರು.

ಎಕ್ಸೆಲ್ ಸಿಬ್ಬಂದಿಯಿಂದ ಸಾಂಸ್ಕೃತಿಕ ವೈಭವ: ಗಿರಿಜಾ ಕಲ್ಯಾಣ ಹಾಗೂ ತಾರಕಾಸುರ ವಧೆ ಯಕ್ಷಗಾನ ಪ್ರದರ್ಶನ

ಗುರು ನಮನ ಕಾರ್ಯಕ್ರಮದ ಅಂಗವಾಗಿ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜನೆಗೊಂಡಿದ್ದವು. ಎಕ್ಸೆಲ್ ಪಿಯು ಕಾಲೇಜಿನ ಸಿಬ್ಬಂದಿಯ ಜೊತೆಗೆ ಎಕ್ಸೆಲ್ ಟೆಕ್ನೋ ಸ್ಕೂಲ್ ಗುರುವಾಯನಕೆರೆ ಮತ್ತು ವೇಣೂರು ಶಾಲೆಗಳ ಸಿಬ್ಬಂದಿಯವರು ಭಾಗವಹಿಸಿದ್ದರು.

ಈ ಕಾರ್ಯಕ್ರಮದಲ್ಲಿ ಸಿಬ್ಬಂದಿ ವರ್ಗದವರು ವಿವಿಧ ನೃತ್ಯ,ಹಾಡು, ರೂಪಕ, ಭರತನಾಟ್ಯ ವೈವಿಧ್ಯಮಯ ಕಾರ್ಯಕ್ರಮಗಳನ್ನು ನಡೆಸಿಕೊಡುವ ಮೂಲಕ ಸರ್ವರನ್ನು ರೋಮಾಂಚನಗೊಳಿಸಿದರು. ಗಿರಿಜಾ ಕಲ್ಯಾಣ ಮತ್ತು ತಾರಕಾಸುರ ವಧೆ ಎನ್ನುವ ಯಕ್ಷಗಾನ ಪ್ರಸಂಗವನ್ನು ಪ್ರದರ್ಶಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading