ಶಿರ್ವ ಪದವು […]" /> ಶಿರ್ವ ಪದವು […]"> Udupi-ಉಡುಪಿ: ಪಾಪನಾಶಿನಿ ಹೊಳೆಗೆ ಜಾನುವಾರು ಅವಶೇಷ ಎಸೆದಿದ್ದ ಆರೋಪಿ ಅರೆಸ್ಟ್ - Nikhara News | Kannada News Website
Connect with us

ಅಪರಾಧ

Udupi-ಉಡುಪಿ: ಪಾಪನಾಶಿನಿ ಹೊಳೆಗೆ ಜಾನುವಾರು ಅವಶೇಷ ಎಸೆದಿದ್ದ ಆರೋಪಿ ಅರೆಸ್ಟ್

Published

on

Ad Widget

Ad Widget

Ad Widget

Ad Widget

ಶಿರ್ವದ ಕಲ್ಲೊಟ್ಟು ಸೇತುವೆಯ ಕೆಳಗೆ ಹರಿಯುವ ಪಾಪನಾಶಿನಿ ಹೊಳೆಗೆ ಜಾನುವಾರೊಂದನ್ನು ಕೊಂದು ಅದರ ಅವಶೇಷಗಳನ್ನು ಎಸೆದಿದ್ದ ಪ್ರಕರಣವನ್ನು ಭೇದಿಸಿರುವ ಪೊಲೀಸರು, ಒಬ್ಬ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಿರ್ವ ಪದವು ಬಬ್ಬು ಸ್ವಾಮಿ ದೈವಸ್ಥಾನದ ಸಮೀಪದ ನಿವಾಸಿ ಅಶೋಕ ಕೊರಗ (52) ಬಂಧಿತ ವ್ಯಕ್ತಿ.

Ad Widget

Ad Widget

Ad Widget

Ad Widget

ಉಡುಪಿ: ಶಿರ್ವದ ಕಲ್ಲೊಟ್ಟು ಸೇತುವೆಯ ಕೆಳಗೆ ಹರಿಯುವ ಪಾಪನಾಶಿನಿ ಹೊಳೆಗೆ ಜಾನುವಾರೊಂದನ್ನು ಕೊಂದು ಅದರ ಅವಶೇಷಗಳನ್ನು ಎಸೆದಿದ್ದ ಪ್ರಕರಣವನ್ನು ಭೇದಿಸಿರುವ ಪೊಲೀಸರು, ಒಬ್ಬ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Ad Widget

Ad Widget alt="Ad Widget"/>

Ad Widget

ಶಿರ್ವ ಪದವು ಬಬ್ಬು ಸ್ವಾಮಿ ದೈವಸ್ಥಾನದ ಸಮೀಪದ ನಿವಾಸಿ ಅಶೋಕ ಕೊರಗ (52) ಬಂಧಿತ ವ್ಯಕ್ತಿ.

Ad Widget

Ad Widget <> Ad Widget

ಘಟನೆಯ ವಿವರ:
ಜೂನ್ 1 ರಂದು ಪಾಪನಾಶಿನಿ ಹೊಳೆಯಲ್ಲಿ ಜಾನುವಾರಿನ ಮಾಂಸದ ತುಂಡುಗಳು ಮತ್ತು ಇತರ ಅವಶೇಷಗಳು ತೇಲುತ್ತಿರುವುದು ಪತ್ತೆಯಾಗಿತ್ತು. ಇದನ್ನು ಗಮನಿಸಿದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ತಕ್ಷಣ ಸ್ಥಳಕ್ಕೆ ಆಗಮಿಸಿದ ಶಿರ್ವ ಪೊಲೀಸರು, ಪಶು ವೈದ್ಯಕೀಯ ಆಸ್ಪತ್ರೆಯ ಅಧಿಕಾರಿಗಳು ಹಾಗೂ ಅಪರಾಧ ಪರಿಶೀಲನಾ ತಂಡದೊಂದಿಗೆ ಸ್ಥಳ ಮಹಜರು ನಡೆಸಿದ್ದರು. ಈ ವೇಳೆ ಹೊಳೆಯಲ್ಲಿ ಜಾನುವಾರಿನ ಮೇಲ್ದವಡೆ, ಗೆರಸುಗಳು ಮತ್ತು ಹೊಟ್ಟೆಯ ಭಾಗಗಳು ಪತ್ತೆಯಾಗಿದ್ದವು. ಈ ಸಂಬಂಧ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರತಿಭಟನೆಯ ಎಚ್ಚರಿಕೆ:
ಪವಿತ್ರ ಹೊಳೆಗೆ ಪ್ರಾಣಿಯ ಅವಶೇಷಗಳನ್ನು ಎಸೆದ ಘಟನೆಯನ್ನು ಸಂಘ ಪರಿವಾರದ ವಿವಿಧ ಸಂಘಟನೆಗಳು ತೀವ್ರವಾಗಿ ಖಂಡಿಸಿದ್ದವು. ಆರೋಪಿಯನ್ನು ಕೂಡಲೇ ಬಂಧಿಸಬೇಕು, ಇಲ್ಲದಿದ್ದರೆ ಉಗ್ರ ಪ್ರತಿಭಟನೆ ನಡೆಸುವುದಾಗಿ ಪೊಲೀಸರಿಗೆ ಗಡುವು ನೀಡಲಾಗಿತ್ತು. ಇದರಿಂದಾಗಿ ಈ ಪ್ರಕರಣ ಜಿಲ್ಲಾದ್ಯಂತ ಭಾರಿ ಸಂಚಲನ ಮೂಡಿಸಿತ್ತು.

Ad Widget

Ad Widget

ಪೊಲೀಸರ ಮಿಂಚಿನ ಕಾರ್ಯಾಚರಣೆ:
ಪ್ರಕರಣದ ಗಂಭೀರತೆಯನ್ನು ಅರಿತ ಪೊಲೀಸರು ಚುರುಕಿನ ತನಿಖೆ ನಡೆಸಿ, ಜೂನ್ 5 ರಂದು ಶಿರ್ವ ಗ್ರಾಮದ ಪದವು ಎಂಬಲ್ಲಿ ಅಶೋಕನನ್ನು ಬಂಧಿಸಿದ್ದಾರೆ. ಬಂಧಿತನಿಂದ ಜಾನುವಾರಿನ ಚರ್ಮ ಹಾಗೂ ಹತ್ಯೆಗೆ ಬಳಸಿದ್ದ ಹರಿತವಾದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮುಂದಿನ ಕಾನೂನು ಕ್ರಮಗಳು ನಡೆಯುತ್ತಿವೆ.‌

Ad Widget
Click to comment

Leave a Reply

ಅಪರಾಧ

FIR-‘ಬಸವ ಮಂಟಪ’ ಕೃತಿ ವಿವಾದ: ಲೇಖಕ ರವಿ ಹಂಜ್, ಪ್ರಕಾಶಕ ವಿಶ್ವೇಶ್ವರ ಭಟ್ ವಿರುದ್ಧ ಎಫ್‌ಐಆರ್

Published

on

Ad Widget

Ad Widget

Ad Widget

Ad Widget

ಬಸವಣ್ಣನವರ ವಿಚಾರಧಾರೆ ಹಾಗೂ ತತ್ವಗಳಿಗೆ ಅಪಚಾರ ಎಸಗುವ ಮೂಲಕ ಲಿಂಗಾಯತ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂಬ ಆರೋಪದಡಿ ‘ಬಸವ ಮಂಟಪ’ ಎಂಬ ವಿವಾದಿತ ಕೃತಿಯ ಲೇಖಕ ರವಿ ಹಂಜ್ ಹಾಗೂ ಪ್ರಕಾಶಕ, ಪತ್ರಕರ್ತ ವಿಶ್ವೇಶ್ವರ ಭಟ್ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಬಸವಣ್ಣನವರ ವಿಚಾರಧಾರೆ ಹಾಗೂ ತತ್ವಗಳಿಗೆ ಅಪಚಾರ ಎಸಗುವ ಮೂಲಕ ಲಿಂಗಾಯತ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂಬ ಆರೋಪದಡಿ ‘ಬಸವ ಮಂಟಪ’ ಎಂಬ ವಿವಾದಿತ ಕೃತಿಯ ಲೇಖಕ ರವಿ ಹಂಜ್ ಹಾಗೂ ಪ್ರಕಾಶಕ, ಪತ್ರಕರ್ತ ವಿಶ್ವೇಶ್ವರ ಭಟ್ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

Ad Widget

Ad Widget alt="Ad Widget"/>

Ad Widget

ಕಲ್ಯಾಣದ ಭಂಡಾರಿಯಾಗಿದ್ದ ಬಸವಣ್ಣನವರ ಮೇಲೆ ಜಾತಿವಾದಿಗಳು ಮಾಡಿದ್ದ ಸುಳ್ಳು ಆರೋಪಗಳನ್ನು ‘ಕಳ್ಳತನ’ ಎಂದು ವ್ಯಾಖ್ಯಾನಿಸಿರುವುದು ಹಾಗೂ ಕಲ್ಯಾಣ ಕ್ರಾಂತಿಯ ಐತಿಹಾಸಿಕ ಸಂಘರ್ಷಗಳನ್ನು ತಿರುಚಿ ಬಸವಣ್ಣನವರ ಮೇಲೆ ಆರೋಪ ಹೊರಿಸಿರುವುದು ಇತಿಹಾಸಕ್ಕೆ ಮಾಡಿದ ಅಪಚಾರ ಎಂದು ಬಸವ ಸಮಿತಿ ದೂರಿನಲ್ಲಿ ಆಕ್ಷೇಪಿಸಿದೆ.

Ad Widget

Ad Widget <> Ad Widget

ರವಿ ಹಂಜ್ ಅವರು ಇಂತಹ ಪೂರ್ವಾಗ್ರಹಪೀಡಿತ ಬರಹಗಳಿಗೆ ಸಂಶೋಧನೆಯ ಮುಖವಾಡ ತೊಡಿಸಿ ಸಮಾಜದಲ್ಲಿ ವಿಷಬೀಜ ಬಿತ್ತುವ ಪ್ರಯತ್ನ ಮಾಡುತ್ತಿದ್ದರೆ, ಪ್ರಕಾಶಕ ವಿಶ್ವೇಶ್ವರ ಭಟ್ ಅವರು ಕೃತಿಗೆ ಪ್ರಚಾರ ನೀಡುತ್ತಿದ್ದಾರೆ ಎಂದು ಸಮಿತಿ ಆರೋಪಿಸಿದೆ.

ಇಂತಹ ವಿವಾದಾತ್ಮಕ ಕೃತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು. ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆಗೆ ಧಕ್ಕೆ ಉಂಟುಮಾಡುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಬಸವ ಸಮಿತಿ ಪೊಲೀಸರಿಗೆ ಸಲ್ಲಿಸಿರುವ ದೂರಿನಲ್ಲಿ ಒತ್ತಾಯಿಸಿತ್ತು.

Ad Widget

Ad Widget

ಈ ದೂರಿನ ಆಧಾರದ ಮೇಲೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಲೇಖಕ ರವಿ ಹಂಜ್ ಹಾಗೂ ಪ್ರಕಾಶಕ ವಿಶ್ವೇಶ್ವರ ಭಟ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Ad Widget
Continue Reading

ಅಪರಾಧ

Manipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು

Published

on

Ad Widget

Ad Widget

Ad Widget

Ad Widget

ದೀಪಾವಳಿ ಸಂದರ್ಭದಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸರ ವಿರುದ್ಧ ವಿದ್ಯಾರ್ಥಿಗಳು ಗಂಭೀರ ದೌರ್ಜನ್ಯದ ಆರೋಪ ಮಾಡಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ನಡೆದ ಕೃತ್ಯಕ್ಕೆ ಸಂಬಂಧವಿಲ್ಲದ ವಿದ್ಯಾರ್ಥಿಗಳ ಫ್ಲ್ಯಾಟ್‌ಗಳಿಗೆ ಪೊಲೀಸರು ನುಗ್ಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ಖಾಸಗಿ ವಿದ್ಯಾಸಂಸ್ಥೆಯ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿ ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ.

Ad Widget

Ad Widget

Ad Widget

Ad Widget

ಉಡುಪಿ, ನ.19: ದೀಪಾವಳಿ ಸಂದರ್ಭದಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸರ ವಿರುದ್ಧ ವಿದ್ಯಾರ್ಥಿಗಳು ಗಂಭೀರ ದೌರ್ಜನ್ಯದ ಆರೋಪ ಮಾಡಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ನಡೆದ ಕೃತ್ಯಕ್ಕೆ ಸಂಬಂಧವಿಲ್ಲದ ವಿದ್ಯಾರ್ಥಿಗಳ ಫ್ಲ್ಯಾಟ್‌ಗಳಿಗೆ ಪೊಲೀಸರು ನುಗ್ಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ಖಾಸಗಿ ವಿದ್ಯಾಸಂಸ್ಥೆಯ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿ ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ.

Ad Widget

Ad Widget alt="Ad Widget"/>

Ad Widget

ವಿದ್ಯಾರ್ಥಿಗಳ ದೂರಿನ ಪ್ರಕಾರ, ನವೆಂಬರ್ 10ರಂದು ಮಣಿಪಾಲದ ವಸತಿ ಸಮುಚ್ಚಯದಲ್ಲಿರುವ ಕೊಠಡಿಗಳಿಗೆ ಪೊಲೀಸ್ ಸಿಬ್ಬಂದಿ ನುಗ್ಗಿ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಘಟನೆ ವಸತಿ ಸಮುಚ್ಚಯದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

Ad Widget

Ad Widget <> Ad Widget

ಯಾವುದೇ ಸೂಕ್ತ ಕಾರಣ ನೀಡದೆ ವಿದ್ಯಾರ್ಥಿಗಳನ್ನು ಪೊಲೀಸ್ ಠಾಣೆಗೆ ಕರೆದೊಯ್ದು ಬೆಳಗ್ಗೆ 11ರಿಂದ ರಾತ್ರಿ 8ರವರೆಗೆ ಠಾಣೆಯಲ್ಲಿ ಕೂರಿಸಿ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಲಾಗಿದೆ. ಅಲ್ಲದೆ, ಮಣಿಪಾಲ ಠಾಣೆಯ ಪಿಎಸ್‌ಐ ಸುಳ್ಳು ವಿವರಗಳೊಂದಿಗೆ ಎಫ್‌ಐಆರ್ ದಾಖಲಿಸಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.

ನವೆಂಬರ್ 8ರಂದು ವಸತಿ ಸಮುಚ್ಚಯದ ಆವರಣದಲ್ಲಿ ಯಾರಿಗೂ ತೊಂದರೆಯಾಗದಂತೆ ಶಾಂತಿಯುತವಾಗಿ ದೀಪಾವಳಿ ಆಚರಿಸಿದ್ದೇವೆ. ಆದರೆ, ಬೇರೆಯವರು ಸಾರ್ವಜನಿಕ ರಸ್ತೆಯಲ್ಲಿ ಮಾಡಿದ ಕೃತ್ಯಕ್ಕೆ ನಮ್ಮನ್ನು ಹೊಣೆಗಾರರನ್ನಾಗಿ ಮಾಡಿ ಪ್ರಕರಣ ದಾಖಲಿಸಿರುವುದು ಪರೀಕ್ಷಾ ಸಮಯದಲ್ಲಿ ನಮ್ಮ ಭವಿಷ್ಯದ ಬಗ್ಗೆ ಆತಂಕ ಮೂಡಿಸಿದೆ ಎಂದು ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಸಲ್ಲಿಸಿರುವ ದೂರಿನಲ್ಲಿ ತಿಳಿಸಿದ್ದಾರೆ.

Ad Widget

Ad Widget

ಪೊಲೀಸ್ ಇಲಾಖೆ ಸ್ಪಷ್ಟನೆ
ವಿದ್ಯಾರ್ಥಿಗಳ ಆರೋಪಗಳಿಗೆ ಪ್ರತಿಕ್ರಿಯಿಸಿರುವ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್, ಪ್ರಕರಣಕ್ಕೆ ಅನ್ವಯವಾಗುವ ಕಾನೂನು ಸೆಕ್ಷನ್‌ಗಳ ಅಡಿಯಲ್ಲಿ ಪೊಲೀಸರು ನೇರವಾಗಿ ಎಫ್‌ಐಆರ್ ದಾಖಲಿಸಲು ಅವಕಾಶವಿಲ್ಲದ ಕಾರಣ ನ್ಯಾಯಾಲಯದ ಅನುಮತಿ ಪಡೆದು ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿ, ಮೊಬೈಲ್ ವಿಡಿಯೋ ದಾಖಲೆಗಳು ಹಾಗೂ ಸ್ಥಳೀಯರ ಹೇಳಿಕೆಗಳ ಆಧಾರದ ಮೇಲೆ ನಿಯಮ ಉಲ್ಲಂಘಿಸಿದ ಆರೋಪಿಗಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ. ಪ್ರಕರಣದಲ್ಲಿ ಈವರೆಗೆ ಯಾರ ವಿರುದ್ಧವೂ ದೋಷಾರೋಪ ಪಟ್ಟಿ ಸಲ್ಲಿಸಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ದೌರ್ಜನ್ಯ ಆರೋಪದ ತನಿಖೆ ಡಿವೈಎಸ್ಪಿಗೆ
ಪೊಲೀಸರ ಅತಿರೇಕದ ವರ್ತನೆ ಕುರಿತು ವಿದ್ಯಾರ್ಥಿಗಳು ಮೂರು ದಿನಗಳ ಹಿಂದೆಯೇ ದೂರು ಸಲ್ಲಿಸಿದ್ದು, ಈ ಆರೋಪಗಳ ತನಿಖೆಯನ್ನು ಉಡುಪಿ ಡಿವೈಎಸ್ಪಿಗೆ ವಹಿಸಲಾಗಿದೆ. ತನಿಖೆ ಪ್ರಗತಿಯಲ್ಲಿದೆ ಎಂದು ಎಸ್ಪಿ ತಿಳಿಸಿದ್ದಾರೆ.

ಮಣಿಪಾಲ ಠಾಣೆಯ ಪಿಎಸ್‌ಐ ತನಿಖಾಧಿಕಾರಿಯಾಗಿ ಮುಂದುವರಿಯುವುದಕ್ಕೆ ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ, ಅವರ ಮನವಿ ಸ್ವೀಕರಿಸಿದ ದಿನವೇ ಪ್ರಕರಣದ ತನಿಖೆಯನ್ನು ಮಣಿಪಾಲ ಪೊಲೀಸ್ ಇನ್‌ಸ್ಪೆಕ್ಟರ್‌ಗೆ ಹಸ್ತಾಂತರಿಸಲಾಗಿದೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.

Ad Widget
Continue Reading

ಸ್ಥಳೀಯ

Baindoor-ರೈಲಿನಲ್ಲಿ ಮೊಬೈಲ್ ಕಳವು, UPI ಮೂಲಕ ಹಣ ವರ್ಗಾವಣೆ: ಬೈಂದೂರು ಪೊಲೀಸರಿಂದ ಕುಖ್ಯಾತ ಆರೋಪಿ ಬಂಧನ

Published

on

Ad Widget

Ad Widget

Ad Widget

Ad Widget

ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಮೊಬೈಲ್ ಫೋನ್ ಕಳವು ಮಾಡಿ, ಅದರಲ್ಲಿದ್ದ UPI ಆ್ಯಪ್ ಬಳಸಿ ಹಣವನ್ನು ಅಕ್ರಮವಾಗಿ ವರ್ಗಾಯಿಸುತ್ತಿದ್ದ ಆರೋಪಿಯನ್ನು ಬೈಂದೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ಕಳವು ಮಾಡಲಾಗಿದ್ದ ಮೂರು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಸಾಸ್ತಾನ ಐರೋಡಿ ಗ್ರಾಮದ ಗೋಳಿಬೆಟ್ಟು ನಿವಾಸಿ ಪ್ರಹ್ಲಾದ್ (32) ಬಂಧಿತ ಆರೋಪಿ.

Ad Widget

Ad Widget

Ad Widget

Ad Widget

ಬೈಂದೂರು, ನ.19: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಮೊಬೈಲ್ ಫೋನ್ ಕಳವು ಮಾಡಿ, ಅದರಲ್ಲಿದ್ದ UPI ಆ್ಯಪ್ ಬಳಸಿ ಹಣವನ್ನು ಅಕ್ರಮವಾಗಿ ವರ್ಗಾಯಿಸುತ್ತಿದ್ದ ಆರೋಪಿಯನ್ನು ಬೈಂದೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ಕಳವು ಮಾಡಲಾಗಿದ್ದ ಮೂರು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

Ad Widget

Ad Widget alt="Ad Widget"/>

Ad Widget

ಸಾಸ್ತಾನ ಐರೋಡಿ ಗ್ರಾಮದ ಗೋಳಿಬೆಟ್ಟು ನಿವಾಸಿ ಪ್ರಹ್ಲಾದ್ (32) ಬಂಧಿತ ಆರೋಪಿ.

Ad Widget

Ad Widget <> Ad Widget

ಕಳೆದ ಆಗಸ್ಟ್ 2ರಂದು ರೊಬಿನ್ ಫೆರ್ನಾಂಡಿಸ್ ಅವರು ಮಂಗಳೂರಿನಿಂದ ಮಡಗಾಂವ್‌ಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದರು. ಬೆಳಗಿನ ಜಾವ ಸುಮಾರು 2 ಗಂಟೆಗೆ ರೈಲು ಬೈಂದೂರು ನಿಲ್ದಾಣದ ಬಳಿ ತಲುಪಿದ ಸಂದರ್ಭದಲ್ಲಿ ಅವರ 17 ಸಾವಿರ ರೂ. ಮೌಲ್ಯದ ಮೊಬೈಲ್ ಫೋನ್ ಕಳವಾಗಿತ್ತು. ಬಳಿಕ ಕಳವು ಮಾಡಿದ ಮೊಬೈಲ್‌ನಲ್ಲಿದ್ದ UPI ಆ್ಯಪ್ ಮೂಲಕ ಆರೋಪಿಯು 19,847 ರೂ. ಹಣವನ್ನು ತನ್ನ ಖಾತೆಗೆ ವರ್ಗಾಯಿಸಿಕೊಂಡಿದ್ದ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ಕೈಗೆತ್ತಿಕೊಂಡ ಬೈಂದೂರು ವೃತ್ತ ನಿರೀಕ್ಷಕ ಶಿವಕುಮಾರ್ ಬಿ. ನೇತೃತ್ವದ ಪೊಲೀಸ್ ತಂಡ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ವಿಚಾರಣೆ ವೇಳೆ ಪ್ರಹ್ಲಾದ್, ತನ್ನ ಸಹಚರ ಜೋಶಿ ನಾರಾಯಣ ನಾಯಕ್ ಜೊತೆ ಸೇರಿ ಬೈಂದೂರು ಸಮೀಪ ಆಗಸ್ಟ್ 2, ಅಕ್ಟೋಬರ್ 13 ಹಾಗೂ ಮಾರ್ಚ್ 6ರಂದು ರೈಲು ಪ್ರಯಾಣಿಕರ ಮೊಬೈಲ್ ಫೋನ್‌ಗಳನ್ನು ಕಳವು ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Ad Widget

Ad Widget

ಬಂಧಿತ ಪ್ರಹ್ಲಾದ್ ವಿರುದ್ಧ ಕಾರವಾರ ಗ್ರಾಮೀಣ, ಬಂಟ್ವಾಳ ನಗರ, ಉಡುಪಿ ನಗರ, ಬ್ರಹ್ಮಾವರ, ಕೋಟ ಹಾಗೂ ಕುಂದಾಪುರ ನಗರ ಪೊಲೀಸ್ ಠಾಣೆಗಳಲ್ಲಿ ಈಗಾಗಲೇ ವಿವಿಧ ಅಪರಾಧ ಪ್ರಕರಣಗಳು ದಾಖಲಾಗಿವೆ ಎನ್ನಲಾಗಿದೆ.

ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!