ಚಿನ್ನ-ಬೆಳ್ಳಿ ದರ
Gold Rate Today -ಆಭರಣ ಪ್ರಿಯರಿಗೆ ಬಂಪರ್ ಗುಡ್ ನ್ಯೂಸ್: ಒಂದೇ ದಿನ ಸಾವಿರ ರೂಪಾಯಿ ಇಳಿಕೆ ಕಂಡ ಚಿನ್ನದ ಬೆಲೆ..!
ವಾರದ ಮೊದಲ ದಿನವಾದ ಸೋಮವಾರ ಆಭರಣ ಖರೀದಿದಾರರಿಗೆ ದೊಡ್ಡ ಸಿಹಿ ಸುದ್ದಿ ಸಿಕ್ಕಿದೆ. ಜೂನ್ ತಿಂಗಳ ಆರಂಭದಿಂದಲೇ ಇಳಿಕೆಯ ಹಾದಿ ಹಿಡಿದಿರುವ ಚಿನ್ನದ ಬೆಲೆ, ಇಂದು ಮತ್ತಷ್ಟು ಕುಸಿತ ಕಾಣುವ ಮೂಲಕ ಗ್ರಾಹಕರ ಮುಖದಲ್ಲಿ ಮಂದಹಾಸ ಮೂಡಿಸಿದೆ.
ಬೆಂಗಳೂರು: ವಾರದ ಮೊದಲ ದಿನವಾದ ಸೋಮವಾರ ಆಭರಣ ಖರೀದಿದಾರರಿಗೆ ದೊಡ್ಡ ಸಿಹಿ ಸುದ್ದಿ ಸಿಕ್ಕಿದೆ. ಜೂನ್ ತಿಂಗಳ ಆರಂಭದಿಂದಲೇ ಇಳಿಕೆಯ ಹಾದಿ ಹಿಡಿದಿರುವ ಚಿನ್ನದ ಬೆಲೆ, ಇಂದು ಮತ್ತಷ್ಟು ಕುಸಿತ ಕಾಣುವ ಮೂಲಕ ಗ್ರಾಹಕರ ಮುಖದಲ್ಲಿ ಮಂದಹಾಸ ಮೂಡಿಸಿದೆ.
ಬೆಲೆ ಇಳಿಕೆಗೆ ಕಾರಣಗಳೇನು?
ಜಾಗತಿಕ ಮಾರುಕಟ್ಟೆಯಲ್ಲಿನ ಏರುಪೇರುಗಳು ಚಿನ್ನದ ಬೆಲೆಯ ಮೇಲೆ ನೇರ ಪರಿಣಾಮ ಬೀರಿವೆ. ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಭೀತಿ, ಕಚ್ಚಾ ತೈಲ ಬೆಲೆಯಲ್ಲಿನ ಏರಿಕೆ ಹಾಗೂ ಹಣದುಬ್ಬರದ ಅಪಾಯಗಳ ನಡುವೆಯೂ ಹೂಡಿಕೆದಾರರು ಹೆಚ್ಚಿನ ಬಡ್ಡಿದರ ಸಿಗುವ ಸುರಕ್ಷಿತ ಕಡೆಗಳಲ್ಲಿ ಹೂಡಿಕೆ ಮಾಡುತ್ತಿದ್ದಾರೆ. ಈ ಕಾರಣದಿಂದಾಗಿ ಚಿನ್ನದ ಮೇಲಿನ ಬೇಡಿಕೆ ಕುಸಿದು ಬೆಲೆಯಲ್ಲಿ ಇಳಿಕೆಯಾಗಿದೆ ಎಂದು ವರದಿಯಾಗಿದೆ.
ಇಂದಿನ ಚಿನ್ನದ ಬೆಲೆ ವಿವರ (ಜೂನ್ 8):
24 ಕ್ಯಾರೆಟ್ ಚಿನ್ನ (ಅಪರಂಜಿ): ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 1,040 ರೂಪಾಯಿ ಭಾರಿ ಇಳಿಕೆಯಾಗಿದೆ. ಇದರಿಂದಾಗಿ ಒಂದು ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 15,169 ರೂಪಾಯಿಗೆ ತಲುಪಿದೆ.
22 ಕ್ಯಾರೆಟ್ ಚಿನ್ನ (ಆಭರಣ ಚಿನ್ನ): ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 950 ರೂಪಾಯಿ ಕುಸಿತ ಕಂಡಿದೆ. ಇದರೊಂದಿಗೆ ಒಂದು ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 13,905 ರೂಪಾಯಿಯಾಗಿದೆ.
ಕಳೆದ 10 ದಿನಗಳ ಟ್ರೆಂಡ್:
ಕಳೆದ ಹತ್ತು ದಿನಗಳಿಂದ ಚಿನ್ನದ ಬೆಲೆ ನಿರಂತರವಾಗಿ ಇಳಿಯುತ್ತಲೇ ಸಾಗಿದೆ. ಕಳೆದ 10 ದಿನಗಳಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಮೇಲೆ ಬರೋಬ್ಬರಿ 5,350 ರೂಪಾಯಿ ಹಾಗೂ 22 ಕ್ಯಾರೆಟ್ ಚಿನ್ನದ ಮೇಲೆ 4,900 ರೂಪಾಯಿ ಇಳಿಕೆಯಾಗಿರುವುದು ಮಧ್ಯಮ ವರ್ಗದ ಜನರಿಗೆ ನಿಟ್ಟುಸಿರು ಬಿಡುವಂತೆ ಮಾಡಿದೆ.
ಚಿನ್ನ-ಬೆಳ್ಳಿ ದರ
Gold Rate Today -ಅಮೆರಿಕ-ಇರಾನ್ ಸಂಘರ್ಷದ ಎಫೆಕ್ಟ್: 10 ಗ್ರಾಂ ಚಿನ್ನಕ್ಕೆ ಬರೋಬ್ಬರಿ ₹1.48 ಲಕ್ಷ; ಬೆಳ್ಳಿಯೂ ದುಬಾರಿ
ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 2,940 ರೂ. ಏರಿಕೆಯಾಗಿದ್ದು, ಒಟ್ಟು ದರ 1,48,580 ರೂ. ತಲುಪಿದೆ. ಪ್ರತಿ ಗ್ರಾಂಗೆ 294 ರೂ. ಹೆಚ್ಚಳವಾಗಿದ್ದು, 14,858 ರೂ. ದಾಖಲಾಗಿದೆ. ಬೆಳ್ಳಿಯ ದರದಲ್ಲಿ ಇಂದು ಒಂದೇ ದಿನ 10,000 ರೂ. ಏರಿಕೆಯಾಗಿದ್ದು, ಕೆಜಿ ಬೆಳ್ಳಿಯ ಬೆಲೆ 2,60,000 ರೂ. ನೊಂದಿಗೆ ಹೊಸ ದಾಖಲೆ ಬರೆದಿದೆ.
ಬೆಂಗಳೂರು: ಜಾಗತಿಕ ರಾಜಕೀಯ ಬೆಳವಣಿಗೆಗಳು ಅಂತರಾಷ್ಟ್ರೀಯ ಮಾರುಕಟ್ಟೆಯ ಮೇಲೆ ಭಾರಿ ಪ್ರಭಾವ ಬೀರಿದ್ದು, ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಭಾರಿ ಏರಿಕೆ ಕಂಡುಬಂದಿದೆ. ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನ ಪರಿಸ್ಥಿತಿ ಹಾಗೂ ಮಧ್ಯಪ್ರಾಚ್ಯದ ಸಂಘರ್ಷದ ಹಿನ್ನೆಲೆಯಲ್ಲಿ ಹೂಡಿಕೆದಾರರು ಚಿನ್ನದತ್ತ ಮುಖ ಮಾಡಿರುವುದು ಈ ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಿದೆ.
ಇಂದಿನ ಚಿನ್ನದ ದರ ವಿವರ (ಜೂನ್ 12, 2026):
24 ಕ್ಯಾರೆಟ್ ಚಿನ್ನ (ಶುದ್ಧ ಚಿನ್ನ):
ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 2,940 ರೂ. ಏರಿಕೆಯಾಗಿದ್ದು, ಒಟ್ಟು ದರ 1,48,580 ರೂ. ತಲುಪಿದೆ. ಪ್ರತಿ ಗ್ರಾಂಗೆ 294 ರೂ. ಹೆಚ್ಚಳವಾಗಿದ್ದು, 14,858 ರೂ. ದಾಖಲಾಗಿದೆ.
22 ಕ್ಯಾರೆಟ್ ಚಿನ್ನ (ಆಭರಣ ಚಿನ್ನ):
ಆಭರಣ ಚಿನ್ನದ ಬೆಲೆಯೂ ಏರಿಕೆಯ ಹಾದಿಯಲ್ಲಿದ್ದು, 10 ಗ್ರಾಂಗೆ 2,700 ರೂ. ಹೆಚ್ಚಳವಾಗಿದೆ. ಇದರೊಂದಿಗೆ 22 ಕ್ಯಾರೆಟ್ ಚಿನ್ನದ ಬೆಲೆ 1,36,200 ರೂ. ಗೆ ತಲುಪಿದೆ.
ಬೆಳ್ಳಿ ಬೆಲೆಯಲ್ಲಿ ಭಾರಿ ಜಿಗಿತ:
ಬೆಳ್ಳಿಯ ದರದಲ್ಲಿ ಇಂದು ಒಂದೇ ದಿನ 10,000 ರೂ. ಏರಿಕೆಯಾಗಿದ್ದು, ಕೆಜಿ ಬೆಳ್ಳಿಯ ಬೆಲೆ 2,60,000 ರೂ. ನೊಂದಿಗೆ ಹೊಸ ದಾಖಲೆ ಬರೆದಿದೆ.
ಬೆಲೆ ಏರಿಕೆಗೆ ಕಾರಣವೇನು?
ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ತಾರಕಕ್ಕೇರಿರುವುದು ಜಾಗತಿಕ ಮಾರುಕಟ್ಟೆಯಲ್ಲಿ ಆತಂಕ ಮೂಡಿಸಿದೆ. ಇರಾನ್ ಪಡೆಗಳು ಗಲ್ಫ್ ರಾಷ್ಟ್ರಗಳಲ್ಲಿನ ಅಮೆರಿಕದ ಸೇನಾ ನೆಲೆಗಳ ಮೇಲೆ ದಾಳಿ ನಡೆಸಿರುವುದು ಮತ್ತು ಹಾರ್ಮುಜ್ ಜಲಸಂಧಿಯನ್ನು ಬಂದ್ ಮಾಡಿರುವುದು ತೈಲ ಬೆಲೆ ಏರಿಕೆಗೆ ದಾರಿ ಮಾಡಿಕೊಟ್ಟಿದೆ. ಇದರ ಜೊತೆಗೆ ಒಮಾನ್ ಕರಾವಳಿಯಲ್ಲಿ ಭಾರತದ ಹಡಗುಗಳ ಮೇಲೆ ಸರಣಿ ದಾಳಿಗಳು ನಡೆದಿರುವುದು ಮಾರುಕಟ್ಟೆಯ ಏರುಪೇರಿಗೆ ಕಾರಣವಾಗಿದೆ.
ಆದರೆ, ಅಂತಿಮವಾಗಿ ಅಮೆರಿಕ ಅಧ್ಯಕ್ಷ ಟ್ರಂಪ್ ಅವರು ಇರಾನ್ ಮೇಲಿನ ಯೋಜಿತ ದಾಳಿಯನ್ನು ರದ್ದುಗೊಳಿಸಿ, ಶಾಂತಿ ಸಂಧಾನಕ್ಕೆ ಮುಂದಾಗುವುದಾಗಿ ಹೇಳಿರುವುದು ಮಾರುಕಟ್ಟೆಯಲ್ಲಿ ಸಕಾರಾತ್ಮಕ ಸಂಚಲನ ಮೂಡಿಸಿದೆ. ಸುರಕ್ಷಿತ ಹೂಡಿಕೆಯ ದೃಷ್ಟಿಯಿಂದ ಚಿನ್ನ ಮತ್ತು ಬೆಳ್ಳಿಗೆ ಬೇಡಿಕೆ ಹೆಚ್ಚಾಗಿರುವುದು ಬೆಲೆ ಏರಿಕೆಗೆ ಪುಷ್ಟಿ ನೀಡಿದೆ.
ಚಿನ್ನ-ಬೆಳ್ಳಿ ದರ
Gold Rate Today -ಕದನ ವಿರಾಮದ ಬೆನ್ನಲ್ಲೇ ಭಾರಿ ಏರಿಕೆ ಕಂಡ ಚಿನ್ನ ಮತ್ತು ಬೆಳ್ಳಿ ದರ..! ಒಂದೇ ದಿನ ಕೆ.ಜಿ ಬೆಳ್ಳಿಗೆ ₹11,000 ಹೆಚ್ಚಳ..!
ಜಾಗತಿಕ ಮಾರುಕಟ್ಟೆಯಲ್ಲಿ ಎರಡು ವಾರಗಳ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ, ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ದರಗಳು ಭಾರಿ ಏರಿಕೆ ಕಂಡಿವೆ. ಅಖಿಲ ಭಾರತ ಸರಾಫ್ ಅಸೋಸಿಯೇಷನ್ ನೀಡಿರುವ ಮಾಹಿತಿಯಂತೆ, ಬುಧವಾರ ಚಿನಿವಾರ ಪೇಟೆಯಲ್ಲಿ ಈ ಬೆಲೆಬಾಳುವ ಲೋಹಗಳ ಬೆಲೆ ಹೊಸ ದಾಖಲೆ ಬರೆದಿದೆ.
ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಎರಡು ವಾರಗಳ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ, ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ದರಗಳು ಭಾರಿ ಏರಿಕೆ ಕಂಡಿವೆ. ಅಖಿಲ ಭಾರತ ಸರಾಫ್ ಅಸೋಸಿಯೇಷನ್ ನೀಡಿರುವ ಮಾಹಿತಿಯಂತೆ, ಬುಧವಾರ ಚಿನಿವಾರ ಪೇಟೆಯಲ್ಲಿ ಈ ಬೆಲೆಬಾಳುವ ಲೋಹಗಳ ಬೆಲೆ ಹೊಸ ದಾಖಲೆ ಬರೆದಿದೆ.
ಬೆಳ್ಳಿಯ ದರದಲ್ಲಿ ಭಾರಿ ಜಿಗಿತ:
ಬೆಳ್ಳಿಯ ದರವು ಪ್ರತಿ ಕೆ.ಜಿಗೆ ಬರೋಬ್ಬರಿ ₹11,000 ರಷ್ಟು ಏರಿಕೆಯಾಗಿದೆ. ಇದರಿಂದಾಗಿ ದೇಶದಲ್ಲಿ ಬೆಳ್ಳಿಯ ಬೆಲೆ ಈಗ ₹2.51 ಲಕ್ಷದ ಗಡಿ ತಲುಪಿದೆ.
ಚಿನ್ನದ ಬೆಲೆ ಎಷ್ಟು ಹೆಚ್ಚಳ?:
ಚಿನ್ನದ ದರದಲ್ಲೂ ದೊಡ್ಡ ಮಟ್ಟದ ಏರಿಕೆ ಕಂಡುಬಂದಿದ್ದು, 10 ಗ್ರಾಂ (ಶೇ 99.9ರಷ್ಟು ಪರಿಶುದ್ಧತೆ) ಚಿನ್ನದ ಬೆಲೆಯಲ್ಲಿ ₹3,200 ಹೆಚ್ಚಳವಾಗಿದೆ. ಇದರೊಂದಿಗೆ 10 ಗ್ರಾಂ ಚಿನ್ನದ ಮಾರುಕಟ್ಟೆ ದರವು ₹1,56,400ಕ್ಕೆ ತಲುಪಿದೆ.
ಜಾಗತಿಕ ಮಾರುಕಟ್ಟೆಯಲ್ಲಿನ ಹಠಾತ್ ಬೆಳವಣಿಗೆಗಳು ಮತ್ತು ಹೂಡಿಕೆದಾರರ ಒಲವು ದೇಶದ ಮಾರುಕಟ್ಟೆಯ ಮೇಲೆ ನೇರ ಪರಿಣಾಮ ಬೀರಿದ್ದು, ಆಭರಣ ಖರೀದಿದಾರರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ.
ಚಿನ್ನ-ಬೆಳ್ಳಿ ದರ
Gold Rate Today-ಯುದ್ಧ ಮುಗಿದ ಕೊಡಲೇ ಗಗನಕ್ಕೇರಿದ ಚಿನ್ನದ ದರ
ಜಾಗತಿಕ ಮಾರುಕಟ್ಟೆಯಲ್ಲಿನ ಬೆಳವಣಿಗೆಗಳ ಪರಿಣಾಮವಾಗಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ (Gold and Silver Price) ಹಿಂದೆಂದೂ ಕಾಣದ ರೀತಿಯಲ್ಲಿ ಭಾರಿ ಏರಿಕೆ ಕಂಡುಬಂದಿದೆ. ಸತತ ಮೂರು ವಾರಗಳ ಸ್ಥಿರತೆಯ ನಂತರ, ಏಪ್ರಿಲ್ 8ರಂದು ದರಗಳು ಗಗನಕ್ಕೇರಿವೆ.
ಬೆಂಗಳೂರು: ಜಾಗತಿಕ ಮಾರುಕಟ್ಟೆಯಲ್ಲಿನ ಬೆಳವಣಿಗೆಗಳ ಪರಿಣಾಮವಾಗಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ (Gold and Silver Price) ಹಿಂದೆಂದೂ ಕಾಣದ ರೀತಿಯಲ್ಲಿ ಭಾರಿ ಏರಿಕೆ ಕಂಡುಬಂದಿದೆ. ಸತತ ಮೂರು ವಾರಗಳ ಸ್ಥಿರತೆಯ ನಂತರ, ಏಪ್ರಿಲ್ 8ರಂದು ದರಗಳು ಗಗನಕ್ಕೇರಿವೆ.
ಬೆಲೆ ಏರಿಕೆಗೆ ಕಾರಣವೇನು?:
ಇರಾನ್-ಇಸ್ರೇಲ್ ಮತ್ತು ಅಮೆರಿಕ ನಡುವಿನ ಯುದ್ಧದ ಭೀತಿ ಕಡಿಮೆಯಾಗಿ, ಎರಡು ಕಡೆಗಳಿಂದ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ಈ ಬದಲಾವಣೆ ಕಂಡುಬಂದಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಭಾರಿ ಕುಸಿತ ಕಂಡಿದ್ದರೂ, ಹೂಡಿಕೆದಾರರ ಒಲವು ಚಿನ್ನದ ಕಡೆಗೆ ತಿರುಗಿರುವುದರಿಂದ ಬೆಲೆಗಳಲ್ಲಿ ಅನಿರೀಕ್ಷಿತ ಏರಿಕೆಯಾಗಿದೆ.
ಇಂದಿನ ಚಿನ್ನದ ದರ ವಿವರ (10 ಗ್ರಾಂಗೆ):
24 ಕ್ಯಾರೆಟ್ ಚಿನ್ನ: ಅತ್ಯಂತ ಶುದ್ಧವಾದ 10 ಗ್ರಾಂ ಚಿನ್ನದ ಬೆಲೆ ಈಗ 1,53,820 ರೂ. ಆಗಿದೆ. ನಿನ್ನೆಗೆ (ಏಪ್ರಿಲ್ 7) ಹೋಲಿಸಿದರೆ ಇಂದು ಒಂದೇ ದಿನದಲ್ಲಿ 3,980 ರೂ. ಏರಿಕೆಯಾಗಿದೆ.
22 ಕ್ಯಾರೆಟ್ ಚಿನ್ನ: ಆಭರಣ ಚಿನ್ನದ ಬೆಲೆ 10 ಗ್ರಾಂಗೆ 1,41,000 ರೂ. ತಲುಪಿದೆ. ಇದು ನಿನ್ನೆಯ ದರಕ್ಕಿಂತ 3,650 ರೂ. ಹೆಚ್ಚಳವಾಗಿದೆ.
18 ಕ್ಯಾರೆಟ್ ಚಿನ್ನ: 10 ಗ್ರಾಂ ಚಿನ್ನದ ಬೆಲೆ 1,15,370 ರೂ. ಆಗಿದ್ದು, 2,990 ರೂ. ಏರಿಕೆ ಕಂಡಿದೆ.
ಬೆಳ್ಳಿಯಲ್ಲೂ ಭಾರಿ ಜಿಗಿತ:
ಚಿನ್ನದ ಹಾದಿಯನ್ನೇ ಹಿಡಿದಿರುವ ಬೆಳ್ಳಿಯ ಬೆಲೆಯೂ ದಾಖಲೆ ಬರೆದಿದೆ. ಒಂದು ಕೆಜಿ ಬೆಳ್ಳಿಯ ದರವು ಬರೋಬ್ಬರಿ 10,000 ರೂ. ಏರಿಕೆಯಾಗುವ ಮೂಲಕ 2,60,000 ರೂ. (2.60 ಲಕ್ಷ) ತಲುಪಿದೆ. ನಿನ್ನೆ ಇದು 2.50 ಲಕ್ಷ ರೂಪಾಯಿ ಇತ್ತು.
-
Uncategorized23 hours ago
ಪುತ್ತೂರು : ವಿಚಾರಣೆ ವೇಳೆ ನ್ಯಾಯಾಲಯದಿಂದ ಪರಾರಿಯಾಗಲು ಯತ್ನಿಸಿದ್ದ ಆರೋಪಿಗೆ 2 ವರ್ಷ ಜೈಲು
-
Uncategorized11 hours ago
ಬೆಳೆ ವಿಮೆ ಪರಿಹಾರ ಕಡಿತ: ಸರ್ಕಾರದ ಮುಂದೆ ಅರುಣ್ ಪುತ್ತಿಲ ಆಕ್ರೋಶ – ಪ್ರಶ್ನೆಗಳ ಸುರಿಮಳೆ
-
ಸಿನೆಮಾ12 hours agoPrema Da Ooralli-ಅಮ್ಮನ ಮಂಗಳಸೂತ್ರವನ್ನೇ ಗಿರವಿಡಲು ಮುಂದಾಗಿದ್ದ ನಿರ್ದೇಶಕ; ಇಂದು ₹17 ಕೋಟಿಯತ್ತ ಸಿನಿಮಾ! ‘ಪ್ರೇಮದ ಊರಲ್ಲಿ’ ಸೃಷ್ಟಿಸಿದ ಬಾಕ್ಸ್ ಆಫೀಸ್ ಅಚ್ಚರಿ
-
ದಕ್ಷಿಣ ಕನ್ನಡ5 hours ago
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರಯಾಣಿಸುತ್ತಿದ್ದ ಕಾರು ಅಪಘಾತ
-
ದಕ್ಷಿಣ ಕನ್ನಡ12 hours ago
ವಿಟ್ಲ :ಬ್ಯಾಂಕ್ ಉದ್ಯೋಗದ ಆಸೆ ತೋರಿಸಿ ಹಣ ವಂಚನೆ: 15 ವರ್ಷಗಳ ಬಳಿಕ ವಾರೆಂಟ್ ಆರೋಪಿ ಬಂಧನ
-
ಅಪರಾಧ12 hours agoMangalore-ಮಂಗಳೂರು: ಜೈಲಿನಲ್ಲೇ ವಾರ್ಡನ್ ಮೇಲೆ ಹಲ್ಲೆ ಪ್ರಕರಣ : ಆರೋಪಿಗೆ 5 ವರ್ಷ ಜೈಲು, 40,000 ರೂ. ದಂಡ
-
ಬಿಗ್ ನ್ಯೂಸ್11 hours agoPuttur-ಪುತ್ತೂರಿನಲ್ಲಿ ಆಸರೆ ಇಲ್ಲದೆ ಭಿಕ್ಷಾಟನೆ ಮಾಡುತ್ತಿದ್ದ 60ರ ವ್ಯಕ್ತಿಗೆ ನೆರವು; ಪಚ್ಚನಾಡಿ ಪುನರ್ವಸತಿ ಕೇಂದ್ರಕ್ಕೆ ದಾಖಲು
-
ಮಂಗಳೂರು12 hours agoPandamburu-ಪಣಂಬೂರು ಬೀಚ್ನಲ್ಲಿ ಹುಲಿವೇಷ ತರಬೇತಿಗೆ ಬಂದಿದ್ದ ಬಾಲಕ ನೀರುಪಾಲು


















