ಮಂಗಳೂರು
Mangalore-ಮಂಗಳೂರು: ಉದ್ಯಮಿಗೆ ಅಶ್ಲೀಲ ವಿಡಿಯೋ ತೋರಿಸಿ ಹನಿಟ್ರ್ಯಾಪ್; ನಕಲಿ ‘ಡೆತ್ ನೋಟ್’ ತೋರಿಸಿ 2.77 ಕೋಟಿ ರೂ ವಂಚನೆ; ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನಿಝಾಮ್, ಸಹಚರ ಜಿತೇಶ್ ಬಂಧನ..!
ಮಂಗಳೂರಿನ ಪ್ರಸಿದ್ಧ ಉದ್ಯಮಿಯೊಬ್ಬರಿಗೆ ಅಶ್ಲೀಲ ವಿಡಿಯೋ ತೋರಿಸಿ ಹನಿಟ್ರ್ಯಾಪ್ ಮಾಡಿ, ಬರೋಬ್ಬರಿ 2.77 ಕೋಟಿ ರೂಪಾಯಿ ದೋಚಿದ ಹೈಪ್ರೊಫೈಲ್ ಪ್ರಕರಣ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಮಂಗಳೂರು ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನಿಝಾಮ್ ಮತ್ತು ಆತನ ಸಹಚರ ಜಿತೇಶ್ ಎಂಬಾತನನ್ನು ಉರ್ವಾ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು: ಪ್ರಸಿದ್ಧ ಉದ್ಯಮಿಯೊಬ್ಬರಿಗೆ ಅಶ್ಲೀಲ ವಿಡಿಯೋ ತೋರಿಸಿ ಹನಿಟ್ರ್ಯಾಪ್ ಮಾಡಿ, ಬರೋಬ್ಬರಿ 2.77 ಕೋಟಿ ರೂಪಾಯಿ ದೋಚಿದ ಹೈಪ್ರೊಫೈಲ್ ಪ್ರಕರಣ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಮಂಗಳೂರು ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನಿಝಾಮ್ ಮತ್ತು ಆತನ ಸಹಚರ ಜಿತೇಶ್ ಎಂಬಾತನನ್ನು ಉರ್ವಾ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣದ ಹಿನ್ನೆಲೆ:
2024ರಲ್ಲಿ ಜಿತೇಶ್ ಎಂಬಾತ ಉದ್ಯಮಿಯೊಬ್ಬರ ಅಶ್ಲೀಲ ವಿಡಿಯೋ ಮತ್ತು ಫೋಟೋಗಳನ್ನು ಚಿತ್ರಿಸಿ ಬ್ಲ್ಯಾಕ್ಮೇಲ್ ಮಾಡಲು ಆರಂಭಿಸಿದ್ದ. “ಹಣ ನೀಡದಿದ್ದರೆ ನಿಮ್ಮ ಪತ್ನಿಗೆ ವಿಡಿಯೋ ತೋರಿಸುತ್ತೇನೆ” ಎಂದು ಬೆದರಿಸಿ ಆರಂಭದಲ್ಲಿ 35 ಲಕ್ಷ ರೂಪಾಯಿ ಕಿತ್ತಿದ್ದ. ಮರ್ಯಾದೆಗೆ ಹೆದರಿದ ಉದ್ಯಮಿ ಚೆಕ್ ಮೂಲಕ ಹಣ ನೀಡಿದ್ದರು. ಆದರೆ, ಜಿತೇಶ್ ಮತ್ತೆ ಮತ್ತೆ ಹಣಕ್ಕೆ ಬೇಡಿಕೆ ಇಟ್ಟಾಗ, ಸಹಾಯ ಕೋರಿ ಉದ್ಯಮಿ ಯುವ ಕಾಂಗ್ರೆಸ್ ಮುಖಂಡ ನಿಝಾಮ್ ಮೊರೆ ಹೋಗಿದ್ದರು.
ಸಹಾಯಕ್ಕೆ ಬಂದು ಸಂಚು ಹೂಡಿದ ಮುಖಂಡ:
ಸಹಾಯ ಮಾಡುವ ನೆಪದಲ್ಲಿ ಎಂಟ್ರಿ ಕೊಟ್ಟ ನಿಝಾಮ್, ಜಿತೇಶ್ ಜೊತೆ ಸೇರಿ ಉದ್ಯಮಿಗೆ ಇನ್ನೂ ದೊಡ್ಡ ಖೆಡ್ಡಾ ತೋಡಿದ್ದ. 2024ರ ಮೇ ತಿಂಗಳಲ್ಲಿ “ಜಿತೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ” ಎಂದು ನಿಝಾಮ್ ಉದ್ಯಮಿಯನ್ನು ನಂಬಿಸಿದ್ದ. ಅಷ್ಟೇ ಅಲ್ಲದೆ, “ಜಿತೇಶ್ ಬರೆದಿರುವ ಡೆತ್ ನೋಟ್ನಲ್ಲಿ ನಿಮ್ಮ ಹೆಸರಿದೆ, ಪೊಲೀಸರು ನಿಮ್ಮನ್ನು ಜೈಲಿಗೆ ಹಾಕುತ್ತಾರೆ” ಎಂದು ಬೆದರಿಸಿ ಕೋಟಿ ಕೋಟಿ ಹಣ ಪೀಕಲು ಶುರುಮಾಡಿದ್ದ.
ಸಿನೆಮಾ ಶೈಲಿಯ ವಂಚನೆ:
ವಂಚನೆಯನ್ನು ನಂಬಿಸಲು ನಿಝಾಮ್, ಜಿತೇಶ್ ನೇಣಿಗೆ ಶರಣಾಗಿರುವ ನಕಲಿ ಫೋಟೋಗಳು ಮತ್ತು ಅಂತ್ಯಕ್ರಿಯೆಯ ಚಿತ್ರಗಳನ್ನು ಉದ್ಯಮಿಗೆ ತೋರಿಸಿದ್ದ. “ಜೈಲಿಗೆ ಹೋಗುವುದನ್ನು ತಪ್ಪಿಸುತ್ತೇನೆ” ಎಂದು ಹೇಳಿ 2024 ರಿಂದ 2026ರ ಅವಧಿಯಲ್ಲಿ ಹಂತ ಹಂತವಾಗಿ ಸುಮಾರು 2 ಕೋಟಿ 77 ಲಕ್ಷ ರೂಪಾಯಿಗಳನ್ನು ದೋಚಿದ್ದ. ಉದ್ಯಮಿ ಕೂಡ ಭಯದಿಂದ ನಿಝಾಮ್ ಕೇಳಿದಷ್ಟು ಹಣ ನೀಡುತ್ತಾ ಬಂದಿದ್ದರು.
ಸಿಕ್ಕಿಬಿದ್ದಿದ್ದು ಹೇಗೆ?
ಸತ್ತಿದ್ದಾನೆ ಎನ್ನಲಾಗಿದ್ದ ಜಿತೇಶ್, 2026ರ ಜೂನ್ನಲ್ಲಿ ಮಂಗಳೂರಿನಲ್ಲಿ ಉದ್ಯಮಿಗೆ ಅಚಾನಕ್ ಆಗಿ ಜೀವಂತವಾಗಿ ಕಾಣಿಸಿಕೊಂಡಿದ್ದಾನೆ. ಇದರಿಂದ ಆಘಾತಕ್ಕೊಳಗಾದ ಉದ್ಯಮಿ, ತಾವು ಮೋಸ ಹೋಗಿರುವುದನ್ನು ಅರಿತು ತಕ್ಷಣ ಉರ್ವಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ದೂರಿನ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಪೊಲೀಸರು ಜಿತೇಶ್ ಮತ್ತು ನಿಝಾಮ್ ಇಬ್ಬರನ್ನೂ ಬಂಧಿಸಿದ್ದಾರೆ. ಆರೋಪಿ ನಿಝಾಮ್ ರಾಜ್ಯ ಹಾಗೂ ಜಿಲ್ಲಾ ಕಾಂಗ್ರೇಸ್ ನಾಯಕರ ಜತೆ ಫೋಟೊ ತೆಗೆಸಿಕೊಂಡಿದ್ದು ಪ್ರಕರಣ ಬೆಳಕಿಗೆ ಬರುತ್ತಲೇ ಅದು ವೈರಲ್ ಆಗಿದೆ. ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಮಂಗಳೂರು
Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ

ಬಂಟ್ವಾಳ: ಮಹಿಳೆಗೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿ , ಜೀವ ಬೆದರಿಕೆ ಹಾಕಿದ ಅಪರಾಧಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54 ಸಾವಿರ ದಂಡ ವಿಧಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.
Bantwal rape case verdict: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ಈ ಘಟನೆ ನಡೆದಿತ್ತು. ಸಂತ್ರಸ್ತ ಮಹಿಳೆಯ ಮನೆಯ ನೆರೆಮನೆಯ ನಿವಾಸಿಯಾಗಿದ್ದ ಅನಿಲ್ ಎಂಬಾತ ಮಹಿಳೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿದ್ದಲ್ಲದೆ, ಜೀವ ಬೆದರಿಕೆಯನ್ನೂ ಹಾಕಿದ್ದ ಎಂದು ಆರೋಪಿಸಲಾಗಿತ್ತು. ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 92/2021ರಂತೆ ಭಾರತೀಯ ದಂಡ ಸಂಹಿತೆಯ ಕಲಂ 376, 448, 323, 504 ಹಾಗೂ 506ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಅಂದಿನ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಪ್ರಸನ್ನ ಎಂ.ಎಸ್. ಅವರು ಆರೋಪಿಯನ್ನು ಪತ್ತೆಹಚ್ಚಿದ್ದರು. ಬಳಿಕ ಪ್ರಕರಣದ ತನಿಖಾಧಿಕಾರಿಗಳಾಗಿದ್ದ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್ ಅವರು ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ಆರೋಪಿತನ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ರಾಜೇಶ ಮಾರುತಿ ಕಾಮಟೆ ಅವರು ಆರೋಪಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54,000 ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.
ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಮೋತಿಲಾಲ ಚೌಧರಿ ಅವರು ಸರ್ಕಾರದ ಪರವಾಗಿ ಸಮರ್ಥವಾಗಿ ವಾದ ಮಂಡಿಸಿದ್ದರು.
ಮಂಗಳೂರು
Mangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.
ಮಂಗಳೂರು: ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.
ಏನಿದು ಪ್ರಕರಣ?
ನ.19ರ ಗುರುವಾರ ಸಂಜೆ ಕಾಲೇಜು ಆವರಣದಿಂದ ಕರೆದೊಯ್ಯಲ್ಪಟ್ಟ ಯುವತಿ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಮೂಲದವರಾಗಿದ್ದು, ದೇರಳಕಟ್ಟೆಯ ಕಣಚೂರು ವೈದ್ಯಕೀಯ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಾರೆ ಎನ್ನಲಾಗಿದೆ.
ಯುವತಿ ಮಂಗಳೂರಿನ ಮತ್ತೊಂದು ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವ್ಯಾಸಂಗ ಮಾಡುತ್ತಿರುವ ಯುವಕನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಈ ವಿಚಾರ ತಿಳಿದ ಯುವತಿಯ ಪೋಷಕರು ಹಾಗೂ ಸಂಬಂಧಿಕರು ಕಾಲೇಜು ಆವರಣಕ್ಕೆ ಆಗಮಿಸಿ, ಆಕೆಯ ಇಚ್ಛೆಗೆ ವಿರುದ್ಧವಾಗಿ ಬಲವಂತವಾಗಿ ಎಳೆದೊಯ್ದು ಮಹೀಂದ್ರಾ ಥಾರ್ ವಾಹನದಲ್ಲಿ ಕರೆದೊಯ್ದಿದ್ದರು. ಈ ಘಟನೆಗೆ ಸಂಬಂಧಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.
ಘಟನೆಯ ಬಳಿಕ ಕಾರ್ಯಾಚರಣೆ ನಡೆಸಿದ ಪೊಲೀಸರು, ಕೇರಳಂನ ಸಂಬಂಧಿಕರ ಮನೆಯಲ್ಲಿದ್ದ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿ ಸುರಕ್ಷಿತವಾಗಿ ಮಂಗಳೂರಿಗೆ ಕರೆತಂದಿದ್ದಾರೆ.
ಮನೆಯವರ ಜೊತೆ ಹೋಗಲು ನಿರಾಕರಣೆ
ಪೊಲೀಸರು ರಕ್ಷಿಸಿದ ಬಳಿಕ ಯುವತಿಯ ಹೇಳಿಕೆ ದಾಖಲಿಸಿದ್ದು, ತನ್ನ ಪೋಷಕರು ಅಥವಾ ಮನೆಯವರ ಜೊತೆ ಹೋಗಲು ಇಚ್ಛಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾಳೆ ಎನ್ನಲಾಗಿದೆ. ಯುವತಿ ವಯಸ್ಕಳಾಗಿರುವುದರಿಂದ ತಾನು ಎಲ್ಲಿ ವಾಸಿಸಬೇಕು ಎಂಬುದನ್ನು ನಿರ್ಧರಿಸುವ ಕಾನೂನುಬದ್ಧ ಹಕ್ಕು ಆಕೆಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ವೈದ್ಯಕೀಯ ತಪಾಸಣೆಯ ಬಳಿಕ ಯುವತಿಯ ಇಚ್ಛೆಯ ಸ್ಥಳಕ್ಕೆ ಅಥವಾ ಸಾಂತ್ವನ ಕೇಂದ್ರಕ್ಕೆ ಪೊಲೀಸ್ ರಕ್ಷಣೆಯಲ್ಲಿ ಕಳುಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವರದಿಯಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 140(3) ಮತ್ತು 126ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ವಿಚಾರಣೆಗೆ ಕರೆಸಲಾಗಿದೆ. ಏಳು ವರ್ಷಕ್ಕಿಂತ ಕಡಿಮೆ ಶಿಕ್ಷೆಯಿರುವ ಅಪರಾಧವಾಗಿರುವ ಹಿನ್ನೆಲೆಯಲ್ಲಿ ಬಿಎನ್ಎಸ್ಎಸ್ ಅಡಿಯಲ್ಲಿ ನೋಟಿಸ್ ಜಾರಿ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ವರದಿಯಾಗಿದೆ.
ನಿಧನ ವಾರ್ತೆ
Mudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು
ಮೂಡುಬಿದಿರೆ ತಾಲೂಕು ಪಂಚಾಯತ್ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.
ಮೂಡುಬಿದಿರೆ, ನ.20: ಮೂಡುಬಿದಿರೆ ತಾಲೂಕು ಪಂಚಾಯತ್ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.
ಮೂಡುಬಿದಿರೆ ತಾಲೂಕಿನ ಬೆಳುವಾಯಿ ನಿವಾಸಿಯಾಗಿದ್ದ ಸಂತೋಷ್ ಅವರು ಬೆಳುವಾಯಿ ಕ್ಷೇತ್ರದಿಂದ ತಾಲೂಕು ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಹೊಸದಾಗಿ ರಚನೆಯಾಗಿದ್ದ ಮೂಡುಬಿದಿರೆ ತಾಲೂಕು ಪಂಚಾಯತ್ನ ಮೊದಲ ಅವಧಿಯಲ್ಲಿ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಸಂತೋಷ್ ಅವರು ಪ್ರತಿದಿನ ಕೆಲಸದ ನಿಮಿತ್ತ ಮಂಗಳೂರಿಗೆ ತೆರಳುತ್ತಿದ್ದರು. ಗುರುವಾರ ಬೇರೆ ಸ್ಥಳದಲ್ಲಿ ಬದಲಿ ಕೆಲಸಗಾರನಾಗಿ ಕೆಲಸಕ್ಕೆ ತೆರಳಿದ್ದ ಅವರು, ಮನೆಯೊಂದರ ಮೇಲ್ಛಾವಣಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆಳಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ.
ಘಟನೆಯಲ್ಲಿ ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
-
ಬಿಗ್ ನ್ಯೂಸ್14 hours agoBail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ
-
ಅಂತರ ರಾಜ್ಯ12 hours agoFormer CBI officer-ಅಧಿಕಾರ, ಹಣ, ಐಷಾರಾಮಿ ಬದುಕಿಗೆ ಗುಡ್ಬೈ; ಗುಹೆಯಲ್ಲಿ ಧ್ಯಾನ ಮಾಡುತ್ತಿರುವ ಮಾಜಿ ಸಿಬಿಐ ಅಧಿಕಾರಿ..!
-
ಮಂಗಳೂರು8 hours agoMangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
-
ಸಿನೆಮಾ13 hours agoDawood-‘ಧುರಂಧರ್ ‘ ನಲ್ಲಿ ದಾವೂದ್ ನ ತೋರಿಸಿದ ರೀತಿ ವಾಸ್ತವವಲ್ಲ…! ಮೋಸ್ಟ್ ವಾಂಟೆಡ್ ಪಾತಕಿ ಈಗ ಹೇಗಿದ್ದಾನೆ ಗೊತ್ತೇ..? ಮಾಜಿ FBI ಅಧಿಕಾರಿ ಹೇಳಿದ್ದೇನೂ..?
-
ನಿಧನ ವಾರ್ತೆ14 hours agoHeart attack-ಸಾಲಿಗ್ರಾಮ: ಕಚೇರಿಯಲ್ಲೇ ಹೃದಯಾಘಾತ; ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ನಿಧನ
-
ನಿಧನ ವಾರ್ತೆ14 hours agoMudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು
-
ಅಂತರ ರಾಜ್ಯ7 hours agoArrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!
-
ನಿಧನ ವಾರ್ತೆ13 hours agoOne-sided love-ಇನ್ಸ್ಟಾಗ್ರಾಮ್ ಇನ್ಫ್ಲುಯೆನ್ಸರ್ ಮೇಲಿನ ಒನ್ಸೈಡೆಡ್ ಲವ್; ಹಲ್ಲೆಗೊಳಗಾದ ಯುವಕ ಸಾವು















