Connect with us

ಮಂಗಳೂರು

UT Khadar-“ಆಯುಷ್ಮಾನ್ ಹೆಸರಲ್ಲಿ ಬಡವರಿಂದ ಹಣ ವಸೂಲಿ ಮಾಡಿದರೆ ಖಾಸಗಿ ಆಸ್ಪತ್ರೆಗಳ ಲೈಸೆನ್ಸ್ ರದ್ದು”; ಮಂಗಳೂರಿನಲ್ಲಿ ಅಧಿಕಾರಿಗಳಿಗೆ ಯು.ಟಿ. ಖಾದರ್ ಖಡಕ್ ವಾರ್ನಿಂಗ್

Published

on



Ad Widget

Ad Widget

Ad Widget

Ad Widget

“ಆಯುಷ್ಮಾನ್ ಭಾರತ್ ಯೋಜನೆಯಡಿ ಚಿಕಿತ್ಸೆ ಪಡೆಯುವ ಬಿಪಿಎಲ್ ಕಾರ್ಡ್‌ದಾರರಿಂದ ಖಾಸಗಿ ಆಸ್ಪತ್ರೆಗಳು ಯಾವುದೇ ಕಾರಣಕ್ಕೂ ಹಣ ವಸೂಲಿ ಮಾಡಬಾರದು. ಒಂದು ವೇಳೆ ನಿಯಮ ಉಲ್ಲಂಘಿಸಿ ಹಣ ಪಡೆದರೆ ಅಂತಹ ಆಸ್ಪತ್ರೆಗಳ ಅನುಮತಿಯನ್ನು ರದ್ದುಪಡಿಸಲಾಗುವುದು” ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: “ಆಯುಷ್ಮಾನ್ ಭಾರತ್ ಯೋಜನೆಯಡಿ ಚಿಕಿತ್ಸೆ ಪಡೆಯುವ ಬಿಪಿಎಲ್ ಕಾರ್ಡ್‌ದಾರರಿಂದ ಖಾಸಗಿ ಆಸ್ಪತ್ರೆಗಳು ಯಾವುದೇ ಕಾರಣಕ್ಕೂ ಹಣ ವಸೂಲಿ ಮಾಡಬಾರದು. ಒಂದು ವೇಳೆ ನಿಯಮ ಉಲ್ಲಂಘಿಸಿ ಹಣ ಪಡೆದರೆ ಅಂತಹ ಆಸ್ಪತ್ರೆಗಳ ಅನುಮತಿಯನ್ನು ರದ್ದುಪಡಿಸಲಾಗುವುದು” ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಆರೋಗ್ಯ ಇಲಾಖೆಯ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

Ad Widget

Ad Widget <> Ad Widget

ಸಭೆಯ ಪ್ರಮುಖ ನಿರ್ಧಾರಗಳು ಮತ್ತು ಚರ್ಚೆಗಳು:



Ad Widget

ಆರೋಗ್ಯ ಮಿತ್ರರ ಜವಾಬ್ದಾರಿ:
ಖಾಸಗಿ ಆಸ್ಪತ್ರೆಗಳಲ್ಲಿರುವ ‘ಆರೋಗ್ಯ ಮಿತ್ರರು’ ಕೇವಲ ಫಲಕ ಹಾಕುವುದಕ್ಕೆ ಸೀಮಿತವಾಗಬಾರದು. ಬಡ ರೋಗಿಗಳ ಪರವಾಗಿ ನಿಂತು ಅವರಿಗೆ ಉಚಿತ ಚಿಕಿತ್ಸೆ ಸಿಗುವಂತೆ ನೋಡಿಕೊಳ್ಳಬೇಕು. ದೂರು ನೀಡಲು ಸಹಾಯವಾಣಿ ಸಂಖ್ಯೆಯನ್ನು ಪ್ರದರ್ಶಿಸಬೇಕು ಎಂದು ಸೂಚಿಸಿದರು.

Ad Widget

Ad Widget

ಎಪಿಎಲ್ ಸೌಲಭ್ಯದ ಮರುಪರಿಶೀಲನೆ:
ಹಿಂದೆ ಎಪಿಎಲ್ ಕಾರ್ಡ್‌ದಾರರಿಗೆ ಶೇ. 70ರಷ್ಟು ಉಚಿತ ಚಿಕಿತ್ಸೆ ಇತ್ತು, ಈಗ ಅದು ಶೇ. 30ಕ್ಕೆ ಇಳಿಕೆಯಾಗಿದೆ. ಇದನ್ನು ಮತ್ತೆ ಹೆಚ್ಚಿಸುವ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚಿಸುವುದಾಗಿ ಅವರು ತಿಳಿಸಿದರು.

ಸಿಬ್ಬಂದಿ ನೇಮಕಾತಿ:
ಜಿಲ್ಲೆಯ ಲೇಡಿಗೋಶನ್ ಆಸ್ಪತ್ರೆಗೆ 22 ಮತ್ತು ವೆನ್ಲಾಕ್ ಆಸ್ಪತ್ರೆಗೆ 10 ಸ್ಟಾಫ್ ನರ್ಸ್‌ಗಳನ್ನು ನೇರ ನೇಮಕಾತಿ ಮೂಲಕ ತಕ್ಷಣ ಭರ್ತಿ ಮಾಡಲಾಗುವುದು. ಜಿಲ್ಲೆಯಲ್ಲಿ ಖಾಲಿ ಇರುವ ಫಾರ್ಮಾಸಿಸ್ಟ್, ಲ್ಯಾಬ್ ಟೆಕ್ನಿಶಿಯನ್ ಹಾಗೂ ಆಶಾ ಕಾರ್ಯಕರ್ತೆಯರ ಹುದ್ದೆಗಳ ಬಗ್ಗೆಯೂ ಮಾಹಿತಿ ಪಡೆದರು.

ಜಿಲ್ಲೆಯಲ್ಲಿ 87 ಫಾರ್ಮಾಸಿಸ್ಟ್ ಬದಲಿಗೆ 31 ಮಂದಿ ಇದ್ದಾರೆ. 26 ಮಂದಿಯನ್ನು ಹೊರಗುತ್ತಿಯಲ್ಲಿ ನೇಮಿಸಿದ್ದು, ಬಾಕಿ ಖಾಲಿಯಾಗಿವೆ. ಮಂಜೂರಾದ 81 ಲ್ಯಾಬ್ ಟೆಕ್ನಿಶಿಯನ್ ಹುದ್ದೆಗಳಲ್ಲಿ 21 ಹುದ್ದೆ ಖಾಲಿ ಇವೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ। ತಿಮ್ಮಯ್ಯ ಮಾಹಿತಿ ನೀಡಿದರು.

1,000 ಜನಸಂಖ್ಯೆಗೆ ಒಬ್ಬರಂತೆ ಆಶಾ ಕಾರ್ಯಕರ್ತೆಯರ ನೇಮಕವಾಗಬೇಕಿದೆ. ಆದರೆ ಕೆಲವೆಡೆ 2,000ಕ್ಕೆ ಒಬ್ಬರಂತೆಯೂ ಇಲ್ಲ, ಹಲವು ಮಂದಿ ನಿವೃತ್ತರಾಗಿದ್ದು, ಅವರ ಸ್ಥಾನಕ್ಕೆ ನೇಮಕವಾಗಿಲ್ಲ ಎಂದೂ ವೈದ್ಯರು ಪ್ರಸ್ತಾವಿಸಿದರು.

ಯುವ ವೈದ್ಯರ ಸಮಸ್ಯೆ:
ಗುತ್ತಿಗೆ ವೈದ್ಯರ ವೇತನವನ್ನು 75 ಸಾವಿರದಿಂದ 60 ಸಾವಿರಕ್ಕೆ ಇಳಿಸಿರುವ ಕುರಿತು ಮತ್ತು ಪಿಜಿ ಪರೀಕ್ಷೆ ಸಿದ್ಧತೆಗೆ ರಜೆ ಸಿಗದಿರುವ ಬಗ್ಗೆ ಯುವ ವೈದ್ಯೆಯೊಬ್ಬರು ಅಳಲು ತೋಡಿಕೊಂಡರು. ಈ ಸಮಸ್ಯೆಯನ್ನು ಪರಿಶೀಲಿಸುವ ಭರವಸೆಯನ್ನು ಸಚಿವರು ನೀಡಿದರು.

ಐವಿ ದ್ರಾವಣದ ಕ್ಯಾರಂಟೈನ್!
ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಪ್ರಕರಣದ ಬಳಿಕ ಜಿಲ್ಲಾ ಆಸ್ಪತ್ರೆಗೆ ಪೂರೈಕೆಯಾಗುವ ಪ್ರಮುಖ ಔಷಧಗಳು, ಐವಿ ದ್ರಾವಣ ಇತ್ಯಾದಿಗಳನ್ನು ಮೊದಲು ಗುಣಮಟ್ಟ ಪರೀಕ್ಷೆಗಾಗಿ ಕಳುಹಿ ಸಲಾಗುತ್ತದೆ. ಹಾಗಾಗಿ ಅವು ಬರುವಾಗ 45 ದಿನ ತೆಗೆದುಕೊಳ್ಳುವುದರಿಂದ ಅಷ್ಟರವರೆಗೂ ಕಾಯುವ ಪರಿಸ್ಥಿತಿ ಇದೆ ಎಂದು ಅಧಿಕಾರಿಗಳು ಹೇಳಿದರು. ಈ ಬಗ್ಗೆ ಪರಿಶೀಲಿಸುವುದಾಗಿ ಸಚಿವರು ತಿಳಿಸಿದರು.

ಮಳೆಗಾಲದ ಮುನ್ನೆಚ್ಚರಿಕೆ:
ಜಿಲ್ಲೆಯಲ್ಲಿ ಡೆಂಗ್ಯೂ ಮತ್ತು ಮಲೇರಿಯಾ ಹರಡದಂತೆ ಸರ್ವೇಕ್ಷಣೆ ಚುರುಕುಗೊಳಿಸಲು ಸೂಚಿಸಿದರು. ಐವಿ ದ್ರಾವಣದ ಗುಣಮಟ್ಟ ಪರೀಕ್ಷೆಯಿಂದಾಗಿ ಆಗುತ್ತಿರುವ ವಿಳಂಬದ ಬಗ್ಗೆ ಅಧಿಕಾರಿಗಳ ಗಮನ ಸೆಳೆದರು.

ಎಂಜಿನಿಯರ್‌ಗಳಿಗೆ ಎಚ್ಚರಿಕೆ:
ಇದೇ ವೇಳೆ ಮಳೆಗಾಲದ ಸಿದ್ಧತೆಗಳ ಬಗ್ಗೆ ಮಾತನಾಡಿದ ಅವರು, “ರಸ್ತೆ ಹೊಂಡಗಳಿಂದಾಗಿ ಅಪಘಾತ ಸಂಭವಿಸಿ ಪ್ರಾಣಹಾನಿಯಾದರೆ ಸಂಬಂಧಪಟ್ಟ ಇಲಾಖೆಯ ಎಂಜಿನಿಯರ್‌ಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಲೋಕೋಪಯೋಗಿ ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡಬೇಕು” ಎಂದು ಗುಡುಗಿದರು.

ವಿದ್ಯುತ್ ಸಂಪರ್ಕ ವ್ಯತ್ಯಯವಾದರೆ ಕೂಡಲೇ ಸರಿಪಡಿಸಲು ಮೆಸ್ಕಾಂ ಅಧಿಕಾರಿಗಳಿಗೆ ಹೆಚ್ಚುವರಿ ಲೈನ್‌ಮನ್‌ಗಳನ್ನು ನಿಯೋಜಿಸಲು ಸೂಚನೆ ನೀಡಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ, ಅಪರ ಜಿಲ್ಲಾಧಿಕಾರಿ ರಾಜು ಸೇರಿದಂತೆ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು.

Ad Widget
Click to comment

Leave a Reply

ಮಂಗಳೂರು

Mangaluru-ಬೆಳೆ ವಿಮೆ ಅನ್ಯಾಯ ಆರೋಪ: ಅ.9ರಂದು ಮಂಗಳೂರಿನಲ್ಲಿ ರೈತರ ಬೃಹತ್ ಹಕ್ಕೊತ್ತಾಯ | ಸಹಕಾರ ಭಾರತಿ – ಬಿಜೆಪಿ ಬೆಂಬಲ

Published

on



Ad Widget

Ad Widget

Ad Widget

Ad Widget

ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ. ಬೆಳೆ ವಿಮೆ ಯೋಜನೆಯಡಿ ರೈತರಿಗೆ ಸೂಕ್ತ ಪರಿಹಾರ ದೊರೆಯದಿರುವುದು ಸೇರಿದಂತೆ ವಿಮೆ ಪಾವತಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಸಭೆಯಲ್ಲಿ ಧ್ವನಿ ಎತ್ತಲಾಗುತ್ತದೆ.

Ad Widget

Ad Widget <> Ad Widget

ಬೆಳೆ ವಿಮೆ ಯೋಜನೆಯಡಿ ರೈತರಿಗೆ ನ್ಯಾಯಯುತ ಪರಿಹಾರ ದೊರೆಯಬೇಕು ಹಾಗೂ ವಿಮೆ ಪಾವತಿಯಲ್ಲಿ ಉಂಟಾಗಿರುವ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ.



Ad Widget

ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಸದಸ್ಯರು ಸೇರಿದಂತೆ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಬೆಳೆ ವಿಮೆಯಲ್ಲಿ ಆಗಿರುವ ಅನ್ಯಾಯದ ವಿರುದ್ಧ ಒಗ್ಗಟ್ಟಿನಿಂದ ಹಕ್ಕೊತ್ತಾಯ ಮಂಡಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.

Continue Reading

ಅಪರಾಧ

Digital Arrest-‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ 75 ವರ್ಷದ ಮಹಿಳೆಗೆ ₹2 ಕೋಟಿ ವಂಚನೆ

Published

on



Ad Widget

Ad Widget

Ad Widget

Ad Widget

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ಬೆದರಿಕೆ ಹಾಕಿ 75 ವರ್ಷದ ಮಹಿಳೆಯೊಬ್ಬರಿಂದ ಸೈಬರ್‌ ಖದೀಮರು ಬರೋಬ್ಬರಿ ₹2 ಕೋಟಿ ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪೊಲೀಸ್‌ ಹಾಗೂ ಸಿಬಿಐ ಅಧಿಕಾರಿಗಳೆಂದು ಪರಿಚಯಿಸಿಕೊಂಡ ಅಪರಿಚಿತರು ಹಂತ ಹಂತವಾಗಿ ಹಣ ವರ್ಗಾಯಿಸಿಕೊಂಡಿದ್ದು, ಈ ಕುರಿತು ಸೈಬರ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ಬೆದರಿಕೆ ಹಾಕಿ 75 ವರ್ಷದ ಮಹಿಳೆಯೊಬ್ಬರಿಂದ ಸೈಬರ್‌ ಖದೀಮರು ಬರೋಬ್ಬರಿ ₹2 ಕೋಟಿ ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪೊಲೀಸ್‌ ಹಾಗೂ ಸಿಬಿಐ ಅಧಿಕಾರಿಗಳೆಂದು ಪರಿಚಯಿಸಿಕೊಂಡ ಅಪರಿಚಿತರು ಹಂತ ಹಂತವಾಗಿ ಹಣ ವರ್ಗಾಯಿಸಿಕೊಂಡಿದ್ದು, ಈ ಕುರಿತು ಸೈಬರ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಸೆ.25ರಂದು ಅಪರಿಚಿತ ವ್ಯಕ್ತಿಯೊಬ್ಬರು ಮಹಿಳೆಗೆ ಕರೆ ಮಾಡಿ ತಾನು ಮುಂಬೈನ ಕೊಲಾಬಾ ಪೊಲೀಸ್‌ ಅಧಿಕಾರಿ ಸಂದೀಪ್‌ ರಾವ್‌ ಎಂದು ಪರಿಚಯಿಸಿಕೊಂಡಿದ್ದಾನೆ. ಅಂತಾರಾಷ್ಟ್ರೀಯ ಹಣ ಅಕ್ರಮ ವರ್ಗಾವಣೆ ಪ್ರಕರಣದ ಆರೋಪಿ ನರೇಶ್‌ ಗೋಯಲ್‌ ಜತೆ ಹಣ ವರ್ಗಾವಣೆ, ಮಾದಕವಸ್ತು ವ್ಯವಹಾರ ಹಾಗೂ ಮಕ್ಕಳ ಕಳ್ಳಸಾಗಣೆ ಸೇರಿದಂತೆ ಹಲವು ಅಪರಾಧಗಳಲ್ಲಿ ನೀವು ಭಾಗಿಯಾಗಿದ್ದೀರಿ. ಈ ಸಂಬಂಧ ಮುಂಬೈ ಕೊಲಾಬಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೇಳಿ ಭಯ ಹುಟ್ಟಿಸಿದ್ದಾನೆ.

Ad Widget

Ad Widget <> Ad Widget

ಬಳಿಕ ಮತ್ತೊಂದು ಮೊಬೈಲ್‌ ಸಂಖ್ಯೆಯಿಂದ ವಾಟ್ಸ್‌ಆ್ಯಪ್‌ ವಿಡಿಯೊ ಕರೆ ಬಂದಿದ್ದು, ಕರೆ ಮಾಡಿದ ವ್ಯಕ್ತಿ ತಾನು ಸಿಬಿಐ ಅಧಿಕಾರಿ ಸಮಾಧಾನ್‌ ಪವಾರ್‌ ಎಂದು ಪರಿಚಯಿಸಿಕೊಂಡಿದ್ದಾನೆ. ಅಂತಾರಾಷ್ಟ್ರೀಯ ಮಟ್ಟದ ಅಪರಾಧದಲ್ಲಿ ನೀವು ಭಾಗಿಯಾಗಿದ್ದೀರಿ. ‘ನ್ಯಾಷನಲ್‌ ಸೀಕ್ರೆಸಿ ಆ್ಯಕ್ಟ್‌’ ಪಾಲಿಸಬೇಕು ಎಂದು ಹೇಳಿ ಮಹಿಳೆಯನ್ನು ಮತ್ತಷ್ಟು ಹೆದರಿಸಿದ್ದಾನೆ. ಅಲ್ಲದೆ, ತಾವು ಸರ್ವೇಲೈನ್ಸ್‌ನಲ್ಲಿರುವುದರಿಂದ ಈ ವಿಚಾರವನ್ನು ಯಾರಿಗೂ ತಿಳಿಸಬಾರದು ಎಂದು ಬೆದರಿಕೆ ಹಾಕಿದ್ದಾನೆ.



Ad Widget

ನಂತರ ಮಹಿಳೆಯ ಆಸ್ತಿ ಹಾಗೂ ಬ್ಯಾಂಕ್‌ ಖಾತೆಗಳನ್ನು ಪರಿಶೀಲಿಸಿ ಎರಡು ದಿನಗಳಲ್ಲಿ ಕ್ಲಿಯರೆನ್ಸ್ ನೀಡುವುದಾಗಿ ಆರೋಪಿಗಳು ನಂಬಿಸಿದ್ದಾರೆ. ಈ ನೆಪದಲ್ಲಿ ಬ್ಯಾಂಕ್‌ ಖಾತೆ ಹಾಗೂ ಆಸ್ತಿ ವಿವರಗಳನ್ನು ಪಡೆದುಕೊಂಡಿದ್ದಾರೆ. ಬಳಿಕ ತಮ್ಮ ಸೂಚನೆಯಂತೆ ನಿರ್ದಿಷ್ಟ ಬ್ಯಾಂಕ್‌ ಖಾತೆಗಳಿಗೆ ಹಣ ವರ್ಗಾಯಿಸುವಂತೆ ಸೂಚಿಸಿದ್ದಾರೆ.

Ad Widget

Ad Widget

ಆರೋಪಿಗಳ ಮಾತು ನಂಬಿದ ಮಹಿಳೆ, ಅವರ ಸೂಚನೆಯಂತೆ ₹60 ಲಕ್ಷವನ್ನು ಹಾಗೂ ಅ.3ರಂದು ₹1.40 ಕೋಟಿ ಹಣವನ್ನು ಆರ್‌ಟಿಜಿಎಸ್‌ ಮೂಲಕ ವರ್ಗಾಯಿಸಿದ್ದಾರೆ. ಸೆ.25ರಿಂದ ಅ.5ರವರೆಗೆ ಹಂತ ಹಂತವಾಗಿ ಒಟ್ಟು ₹2 ಕೋಟಿ ಹಣ ವರ್ಗಾಯಿಸಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.

ಇತ್ತೀಚಿನ ದಿನಗಳಲ್ಲಿ ‘ಡಿಜಿಟಲ್ ಅರೆಸ್ಟ್’ ಸೇರಿದಂತೆ ವಿವಿಧ ರೀತಿಯ ಸೈಬರ್‌ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿವೆ. ಪೊಲೀಸ್‌ ಅಥವಾ ತನಿಖಾ ಸಂಸ್ಥೆಗಳ ಹೆಸರಿನಲ್ಲಿ ಬೆದರಿಸಿ, ಹಣ ವರ್ಗಾಯಿಸುವಂತೆ ಒತ್ತಡ ಹೇರುವುದು ವಂಚಕರ ಸಾಮಾನ್ಯ ತಂತ್ರವಾಗಿದೆ.

ಸೈಬರ್‌ ವಂಚನೆಗೆ ಒಳಗಾದರೆ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡುವುದು ಅತ್ಯಂತ ಮುಖ್ಯ. ವಂಚನೆಯಾದ ಕೂಡಲೇ ‘ಗೋಲ್ಡನ್ ಅವರ್’ನಲ್ಲಿ ದೂರು ನೀಡಿದರೆ ಹಣದ ವರ್ಗಾವಣೆಯನ್ನು ತಡೆಯಲು ಅಥವಾ ವಂಚಿತ ಹಣವನ್ನು ಫ್ರೀಜ್‌ ಮಾಡಲು ಪೊಲೀಸರು ಪ್ರಯತ್ನಿಸಬಹುದು. ದೂರು ನೀಡಲು ವಿಳಂಬವಾದಷ್ಟೂ ಹಣವನ್ನು ಮರಳಿ ಪಡೆಯುವುದು ಕಷ್ಟವಾಗುವ ಸಾಧ್ಯತೆ ಇದೆ.

Ad Widget
Continue Reading

ಮಂಗಳೂರು

Mangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್‌ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ

Published

on



Ad Widget

Ad Widget

Ad Widget

Ad Widget

ಸುಲ್ತಾನ್ ಗೋಲ್ಡ್‌ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್‌ ಸರ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಮರೆತುಹೋದ ಮಹಿಳೆಗೆ, ರಿಕ್ಷಾ ಚಾಲಕರೊಬ್ಬರು ಅದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಸುಲ್ತಾನ್ ಗೋಲ್ಡ್‌ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್‌ ಸರ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಮರೆತುಹೋದ ಮಹಿಳೆಗೆ, ರಿಕ್ಷಾ ಚಾಲಕರೊಬ್ಬರು ಅದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಅಫ್ಜಿಲಾ ಎಂಬವರು ಸುಲ್ತಾನ್ ಗೋಲ್ಡ್‌ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್‌ ಸರವನ್ನು ಖರೀದಿಸಿದ್ದರು. ಬಳಿಕ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನದ ಸರವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಬಿಟ್ಟು ಇಳಿದಿದ್ದರು.

Ad Widget

Ad Widget <> Ad Widget

ರಿಕ್ಷಾ ಚಾಲಕ ಬಸವರಾಜ ಅವರಿಗೆ ಬ್ಯಾಗ್ ಪತ್ತೆಯಾಗಿದ್ದು, ಅದರಲ್ಲಿ ಚಿನ್ನದ ನೆಕ್ಲೇಸ್‌ ಇರುವುದನ್ನು ಗಮನಿಸಿದ್ದಾರೆ. ಬಳಿಕ ಯಾವುದೇ ಆಸೆ, ಆಮಿಷಕ್ಕೆ ಒಳಗಾಗದೆ ಬ್ಯಾಗನ್ನು ಸುರಕ್ಷಿತವಾಗಿ ವಾರಸುದಾರರಿಗೆ ಮರಳಿಸಿದ್ದಾರೆ.



Ad Widget

ಚಿನ್ನದ ಸರವನ್ನು ಮರಳಿ ಪಡೆದ ಅಫ್ಜಿಲಾ ಅವರು ರಿಕ್ಷಾ ಚಾಲಕ ಬಸವರಾಜ ಅವರ ಪ್ರಾಮಾಣಿಕತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಚಾಲಕನ ಈ ನಡೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading