ಬಂಧಿತರನ್ನು ಬಂಟ್ವಾಳ ತಾಲೂಕಿನ ಕೊಳ್ನಾಡು […]" /> ಬಂಧಿತರನ್ನು ಬಂಟ್ವಾಳ ತಾಲೂಕಿನ ಕೊಳ್ನಾಡು […]"> Belthangady-ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಇಬ್ಬರು ಅಂತರಾಜ್ಯ ಕಳ್ಳರ ಬಂಧನ; 23.67 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ವಶ - Nikhara News | Kannada News Website
Connect with us

ಸ್ಥಳೀಯ

Belthangady-ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಇಬ್ಬರು ಅಂತರಾಜ್ಯ ಕಳ್ಳರ ಬಂಧನ; 23.67 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ವಶ

Published

on

Ad Widget

Ad Widget

Ad Widget

Ad Widget

ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯಲ್ಲಿ ನಡೆದಿದ್ದ ಸರಣಿ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು, ಇಬ್ಬರು ಅಂತರಾಜ್ಯ ಕಳ್ಳರನ್ನು ಬಂಧಿಸಿ, ಸುಮಾರು 23,67,000/- ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

Ad Widget

Ad Widget

Ad Widget

Ad Widget

ಬೆಳ್ತಂಗಡಿ: ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯಲ್ಲಿ ನಡೆದಿದ್ದ ಸರಣಿ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು, ಇಬ್ಬರು ಅಂತರಾಜ್ಯ ಕಳ್ಳರನ್ನು ಬಂಧಿಸಿ, ಸುಮಾರು 23,67,000/- ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

Ad Widget

Ad Widget alt="Ad Widget"/>

Ad Widget

ಬಂಧಿತರನ್ನು ಬಂಟ್ವಾಳ ತಾಲೂಕಿನ ಕೊಳ್ನಾಡು ನಿವಾಸಿ (ಪ್ರಸ್ತುತ ಕಾಸರಗೋಡಿನಲ್ಲಿ ವಾಸವಿರುವ) ಹಮೀದ್ ಹಾಗೂ ಮತ್ತೋರ್ವ ಆರೋಪಿ ಜಾಬೀರ್ @ ಜಾಬಿ (38) ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ಏಪ್ರಿಲ್ 5, 2026ರಂದು ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ನಡೆದಿದ್ದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಂಡ ಪೊಲೀಸರು, ಮೇ 15ರಂದು ಹಮೀದ್‌ನನ್ನು ಬಂಧಿಸಿದ್ದರು. ಈ ವೇಳೆ ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಪಡಿಸಿಕೊಳ್ಳಲಾಗಿತ್ತು. ಹಮೀದ್ ನೀಡಿದ ಮಾಹಿತಿಯ ಆಧಾರದ ಮೇಲೆ ಜೂನ್ 7ರಂದು ಎರಡನೇ ಆರೋಪಿ ಜಾಬೀರ್‌ನನ್ನು ವಶಕ್ಕೆ ಪಡೆಯಲಾಯಿತು.

ವಶಪಡಿಸಿಕೊಂಡ ಸೊತ್ತುಗಳು:
ಪುಂಜಾಲಕಟ್ಟೆ ಪ್ರಕರಣ: 68.690 ಗ್ರಾಂ ಚಿನ್ನಾಭರಣ ಹಾಗೂ 2 ಲಕ್ಷ ರೂ. ನಗದು.
ಉಪ್ಪಿನಂಗಡಿ ಪ್ರಕರಣ: 21.810 ಗ್ರಾಂ ಚಿನ್ನಾಭರಣ.
ಕೃತ್ಯಕ್ಕೆ ಬಳಸಿದ ಎರಡು ಕಾರುಗಳು.

Ad Widget

Ad Widget

ಜಪ್ತಿ ಮಾಡಲಾದ ಒಟ್ಟು ಸೊತ್ತಿನ ಮೌಲ್ಯ ಸುಮಾರು 23,67,000/- ರೂ. ಎಂದು ಅಂದಾಜಿಸಲಾಗಿದೆ.

ಹಲವು ಪ್ರಕರಣಗಳಲ್ಲಿ ಭಾಗಿ:
ಬಂಧಿತ ಆರೋಪಿಗಳು ಕೇವಲ ಈ ಎರಡು ಪ್ರಕರಣಗಳಲ್ಲದೆ, ಉಪ್ಪಿನಂಗಡಿ, ಬಂಟ್ವಾಳ ನಗರ ಮತ್ತು ಬೆಳ್ತಂಗಡಿ ಠಾಣೆಗಳಲ್ಲೂ ತಲಾ ಒಂದು ಪ್ರಕರಣ ಸೇರಿದಂತೆ ಒಟ್ಟು 5ಕ್ಕೂ ಹೆಚ್ಚು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಸದ್ಯ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಬೆಳ್ತಂಗಡಿ ಉಪವಿಭಾಗಾಧೀಕ್ಷಕಿ (DySP) ಶ್ರೀಮತಿ ರೋಹಿಣಿ ಸಿ.ಕೆ. ಅವರ ನೇತೃತ್ವದಲ್ಲಿ, ಸಿ.ಪಿ.ಐಗಳಾದ ರವಿ ಬಿ.ಎಸ್, ನಾಗರಾಜ್ ಹೆಚ್.ಇ, ಪಿ.ಎಸ್.ಐ ರಾಜೇಶ್ ಕೆ.ವಿ ಮತ್ತು ಸಿಬ್ಬಂದಿಗಳಾದ ಬೆನ್ನಿಚ್ಚನ್, ಸುಂದರ ಶೆಟ್ಟಿ, ವಿಶ್ವನಾಥ್ ನಾಯ್ಕ್, ಪ್ರವೀಣ್ ಮೂರುಗೋಳಿ, ರಾಜೇಶ್ ಎನ್, ವಿಜಯ್ ಕುಮಾರ್ ರೈ, ರಾಹುಲ್ ರಾವ್, ಸಂತೋಷ್, ಬಸವರಾಜ್, ರಜಿತ್ ಹಾಗೂ ನಾಗರಾಜ್ ಅವರು ಈ ಪತ್ತೆ ಕಾರ್ಯದಲ್ಲಿ ಭಾಗಿಯಾಗಿದ್ದರು. ಜಿಲ್ಲಾ ತಾಂತ್ರಿಕ ವಿಭಾಗದ ದಿವಾಕರ್ ಮತ್ತು ಸಂಪತ್ ಅವರು ತಾಂತ್ರಿಕ ನೆರವು ನೀಡಿದ್ದರು.

Ad Widget
Click to comment

Leave a Reply

ಬಿಗ್ ನ್ಯೂಸ್

Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ

Published

on

Ad Widget

Ad Widget

Ad Widget

Ad Widget

ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading

ಆರೋಗ್ಯ

Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ

Published

on

Ad Widget

Ad Widget

Ad Widget

Ad Widget

ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget alt="Ad Widget"/>

Ad Widget

ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್‌ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.

Ad Widget

Ad Widget <> Ad Widget

ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.

ಇನ್ನರ್‌ ವೀಲ್‌ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಕಾರ್ಯದರ್ಶಿ ಶ್ರುತಿ ಎಸ್.‌ ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.

Continue Reading

ಬಿಗ್ ನ್ಯೂಸ್

Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ

Published

on

Ad Widget

Ad Widget

Ad Widget

Ad Widget

ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.

Ad Widget

Ad Widget alt="Ad Widget"/>

Ad Widget

ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.

Ad Widget

Ad Widget <> Ad Widget

ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.

ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!