ಅಪರಾಧ
Puttur-ಪುತ್ತೂರು: ಡ್ರಗ್ಸ್ ನಶೆಯಲ್ಲಿ ಅಸಭ್ಯ ವರ್ತನೆ; ಯುವಕ ಪೊಲೀಸ್ ವಶ
ಮಾದಕ ವಸ್ತು ಸೇವಿಸಿ ಅಮಲಿನಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ಯುವಕನೊಬ್ಬನನ್ನು ಪುತ್ತೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಪಡ್ಡಾಯೂರು ನಿವಾಸಿ ಸನತ್ (26) ಎಂದು ಗುರುತಿಸಲಾಗಿದೆ.
ಪುತ್ತೂರು: ಮಾದಕ ವಸ್ತು ಸೇವಿಸಿ ಅಮಲಿನಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ಯುವಕನೊಬ್ಬನನ್ನು ಪುತ್ತೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪುತ್ತೂರು ನಗರದ ಕಿಲ್ಲೆ ಮೈದಾನದ ಬಳಿ ಪೊಲೀಸರು ರಾತ್ರಿ ವೇಳೆ ರೌಂಡ್ಸ್ ಕರ್ತವ್ಯದಲ್ಲಿದ್ದಾಗ, ಯುವಕನೋರ್ವ ಅಸ್ವಾಭಾವಿಕವಾಗಿ ಹಾಗೂ ಅನುಚಿತವಾಗಿ ವರ್ತಿಸುತ್ತಿರುವುದು ಕಂಡುಬಂದಿದೆ. ಆತನ ನಡವಳಿಕೆಯಿಂದ ಸಂಶಯಗೊಂಡ ಪೊಲೀಸರು ತಕ್ಷಣ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ವೈದ್ಯಕೀಯ ಪರೀಕ್ಷೆಯಲ್ಲಿ ದೃಢ:
ಆತ ಮಾದಕ ವಸ್ತು ಸೇವಿಸಿರುವ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ, ಪೊಲೀಸರು ಆತನನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ಪರೀಕ್ಷಾ ವರದಿಯಲ್ಲಿ ಆತ ಮಾದಕ ವಸ್ತು (Drugs) ಸೇವಿಸಿರುವುದು ದೃಢಪಟ್ಟಿದೆ.
ಆರೋಪಿಯನ್ನು ಪಡ್ಡಾಯೂರು ನಿವಾಸಿ ಸನತ್ (26) ಎಂದು ಗುರುತಿಸಲಾಗಿದೆ. ಆರೋಪಿ ವಿರುದ್ಧ ಮಾದಕ ದ್ರವ್ಯ ವಿರೋಧಿ ಕಾಯ್ದೆ (NDPS Act) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪರಾಧ
Mangalore-ಮಂಗಳೂರು: ನಕಲಿ ಪಾಸ್‌ಪೋರ್ಟ್ ಪ್ರಕರಣ; 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ನಕಲಿ ಪಾಸ್‌ಪೋರ್ಟ್ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಬಂಧಿಸಿದೆ. ಬಂಧಿತನನ್ನು ಕಾಸರಗೋಡು ಜಿಲ್ಲೆಯ ವೇಲಾಯುಧನ್ (54) ಎಂದು ಗುರುತಿಸಲಾಗಿದೆ.
ಮಂಗಳೂರು: ನಕಲಿ ಪಾಸ್‌ಪೋರ್ಟ್ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಬಂಧಿಸಿದೆ.
ಬಂಧಿತನನ್ನು ಕಾಸರಗೋಡು ಜಿಲ್ಲೆಯ ವೇಲಾಯುಧನ್ (54) ಎಂದು ಗುರುತಿಸಲಾಗಿದೆ.
2010ರ ಜೂನ್ 22ರಂದು ನಕಲಿ ಪಾಸ್‌ಪೋರ್ಟ್ ಪಡೆದು ಬಜಪೆ ವಿಮಾನ ನಿಲ್ದಾಣದ ಮೂಲಕ ವಿದೇಶಕ್ಕೆ ತೆರಳಲು ಯತ್ನಿಸುತ್ತಿದ್ದ ವೇಳೆ ಇಮಿಗ್ರೇಷನ್ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದು ಬಜಪೆ ಪೊಲೀಸರಿಗೆ ಒಪ್ಪಿಸಿದ್ದರು.
ಈ ಸಂಬಂಧ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 419, 420, 468 ಹಾಗೂ 34 ಮತ್ತು ಪಾಸ್‌ಪೋರ್ಟ್ ಕಾಯ್ದೆ-1967ರ ಕಲಂ 12(1)(b), (d), (e) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಸೇಷನ್ಸ್ ನ್ಯಾಯಾಲಯವು 2020ರ ಡಿಸೆಂಬರ್ 1ರಂದು ಆರೋಪಿಗೆ ಒಂದು ವರ್ಷ ಆರು ತಿಂಗಳ ಶಿಕ್ಷೆ ವಿಧಿಸಿತ್ತು.
ಇದನ್ನು ಪ್ರಶ್ನಿಸಿ ವೇಲಾಯುಧನ್ ಕರ್ನಾಟಕ ಹೈಕೋರ್ಟ್‌ನಲ್ಲಿ ಕ್ರಿಮಿನಲ್ ರಿವಿಷನ್ ಪಿಟಿಷನ್ ಸಂಖ್ಯೆ 104/2021 ಸಲ್ಲಿಸಿದ್ದ. ಆದರೆ ಹೈಕೋರ್ಟ್ ಆತನ ಅರ್ಜಿಯನ್ನು ತಿರಸ್ಕರಿಸಿತ್ತು. ಬಳಿಕ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಬಂಧನಕ್ಕೆ ಒಳಗಾಗದೆ ವೇಲಾಯುಧನ್ ತಲೆಮರೆಸಿಕೊಂಡಿದ್ದ.
ಸುಮಾರು ಆರು ವರ್ಷಗಳಿಂದ ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿದ್ದ ಆತನನ್ನು ಅಕ್ಟೋಬರ್ 8ರಂದು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ವಶಕ್ಕೆ ಪಡೆದುಕೊಂಡಿದೆ. ಬಳಿಕ ಮುಂದಿನ ಕಾನೂನು ಕ್ರಮಕ್ಕಾಗಿ ಆತನನ್ನು ಬಜಪೆ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.
ಅಪರಾಧ
Uppinangadi-ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹಣ ಪಡೆದು ನಾಪತ್ತೆ
ತೋಟದ ಕೆಲಸಕ್ಕೆ ಬರುತ್ತೇನೆಂದು ಹೇಳಿ ತೋಟದ ಮಾಲಕರೊಬ್ಬರಿಂದ ₹2 ಸಾವಿರ ಪಡೆದು ವ್ಯಕ್ತಿಯೊಬ್ಬ ನಾಪತ್ತೆಯಾಗಿರುವ ಘಟನೆ ಕೋಡಿಂಬಾಡಿ ಪರಿಸರದಲ್ಲಿ ನಡೆದಿದೆ.
ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹೇಳಿ ತೋಟದ ಮಾಲಕರೊಬ್ಬರಿಂದ ₹2 ಸಾವಿರ ಪಡೆದು ವ್ಯಕ್ತಿಯೊಬ್ಬ ನಾಪತ್ತೆಯಾಗಿರುವ ಘಟನೆ ಕೋಡಿಂಬಾಡಿ ಪರಿಸರದಲ್ಲಿ ನಡೆದಿದೆ.
ಕೋಡಿಂಬಾಡಿ ಪರಿಸರದ ಪ್ರಗತಿಪರ ಕೃಷಿಕರೊಬ್ಬರ ಮನೆಗೆ ನಾಲ್ಕು ದಿನಗಳ ಹಿಂದೆ ತೆರಳಿದ ಅಪರಿಚಿತ ವ್ಯಕ್ತಿ, ತಾನು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯವನು ಎಂದು ಪರಿಚಯಿಸಿಕೊಂಡಿದ್ದಾನೆ. ತೋಟದ ಕೆಲಸಕ್ಕೆ ಶಾಶ್ವತವಾಗಿ ಕಾರ್ಮಿಕರು ಬೇಕೇ ಎಂದು ವಿಚಾರಿಸಿದ್ದಾನೆ. ಕೆಲಸಗಾರರ ಅಗತ್ಯವಿದ್ದ ಹಿನ್ನೆಲೆಯಲ್ಲಿ ಕೃಷಿಕರು ಬೇಕು ಎಂದು ತಿಳಿಸಿದಾಗ, ತಾನು ಸದ್ಯ ಗೇರುಕಟ್ಟೆಯಲ್ಲಿ ಕೆಲಸ ಮಾಡುತ್ತಿದ್ದು, ಅಲ್ಲಿಂದ ತನ್ನ ಬಟ್ಟೆ-ಬರೆ ಹಾಗೂ ಇತರ ಸಾಮಗ್ರಿಗಳನ್ನು ತೆಗೆದುಕೊಂಡು, ಹೆಂಡತಿ-ಮಕ್ಕಳೊಂದಿಗೆ ಬರುವುದಾಗಿ ಹೇಳಿದ್ದಾನೆ.
ಆದರೆ ರಿಕ್ಷಾ ಮಾಡಿಕೊಂಡು ಬರಲು ತನ್ನ ಬಳಿ ಹಣವಿಲ್ಲ ಎಂದು ಹೇಳಿ ಮೊದಲಿಗೆ ₹1 ಸಾವಿರ ಕೇಳಿದ್ದಾನೆ. ಆತನ ಮಾತನ್ನು ನಂಬಿದ ತೋಟದ ಮಾಲಕರು ಹಣ ನೀಡಿದ್ದಾರೆ. ಬಳಿಕ ಅಂಗಡಿಯಲ್ಲಿ ಸ್ವಲ್ಪ ಸಾಲವಿದ್ದು, ಅದನ್ನು ತೀರಿಸಲು ಮತ್ತೊಂದು ₹1 ಸಾವಿರ ನೀಡುವಂತೆ ಕೇಳಿಕೊಂಡಿದ್ದಾನೆ. ಇದಕ್ಕೂ ಒಪ್ಪಿದ ಕೃಷಿಕರು ಒಟ್ಟು ₹2 ಸಾವಿರ ನೀಡಿದ್ದಾರೆ.
ಹಣ ಪಡೆದುಕೊಂಡು ತೆರಳಿದ ವ್ಯಕ್ತಿ ನಾಲ್ಕು ದಿನ ಕಳೆದರೂ ಮತ್ತೆ ಕೃಷಿಕರ ಮನೆಗೆ ಬಂದಿಲ್ಲ. ಆತನ ಮೊಬೈಲ್ ನಂಬರ್ ಕೇಳಿದಾಗ ತನ್ನ ಬಳಿ ಮೊಬೈಲ್ ಇಲ್ಲ ಎಂದು ಹೇಳಿದ್ದ ಎನ್ನಲಾಗಿದೆ.
ಅಂತರ ರಾಜ್ಯ
Blackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್‌ಮೇಲ್..!
ಮುಂಬೈನ ಬೊರಿವಲಿ ಪ್ರದೇಶದ ಹೋಟೆಲ್‌ವೊಂದರಲ್ಲಿ ಮೈಸೂರು ಮಸಾಲೆ ದೋಸೆಯಲ್ಲಿ ಸತ್ತ ಇಲಿ ಪತ್ತೆಯಾದ ಪ್ರಕರಣಕ್ಕೆ ಇದೀಗ ಅಚ್ಚರಿಯ ತಿರುವು ಸಿಕ್ಕಿದೆ. ಘಟನೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಮತ್ತಷ್ಟು ವೈರಲ್ ಮಾಡುವುದಾಗಿ ಬೆದರಿಸಿ ಹೋಟೆಲ್ ಮಾಲೀಕರಿಂದ ₹25 ಲಕ್ಷಕ್ಕೆ ಬೇಡಿಕೆ ಇಟ್ಟ ಆರೋಪದಲ್ಲಿ, ದೂರು ನೀಡಿದ್ದ ಮಹಿಳೆಯನ್ನೇ ಪೊಲೀಸರು ಬಂಧಿಸಿದ್ದಾರೆ.
ಮುಂಬೈ: ಮುಂಬೈನ ಬೊರಿವಲಿ ಪ್ರದೇಶದ ಹೋಟೆಲ್‌ವೊಂದರಲ್ಲಿ ಮೈಸೂರು ಮಸಾಲೆ ದೋಸೆಯಲ್ಲಿ ಸತ್ತ ಇಲಿ ಪತ್ತೆಯಾದ ಪ್ರಕರಣಕ್ಕೆ ಇದೀಗ ಅಚ್ಚರಿಯ ತಿರುವು ಸಿಕ್ಕಿದೆ. ಘಟನೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಮತ್ತಷ್ಟು ವೈರಲ್ ಮಾಡುವುದಾಗಿ ಬೆದರಿಸಿ ಹೋಟೆಲ್ ಮಾಲೀಕರಿಂದ ₹25 ಲಕ್ಷಕ್ಕೆ ಬೇಡಿಕೆ ಇಟ್ಟ ಆರೋಪದಲ್ಲಿ, ದೂರು ನೀಡಿದ್ದ ಮಹಿಳೆಯನ್ನೇ ಪೊಲೀಸರು ಬಂಧಿಸಿದ್ದಾರೆ.
ಸೆ.24ರಂದು ಮಾನ್ಸಿ ಎಂಬ ಮಹಿಳೆ ತನ್ನ ಮಗುವಿನೊಂದಿಗೆ ಇಬ್ಬರು ಪುರುಷರ ಜತೆ ಬೊರಿವಲಿಯ ಹೋಟೆಲ್‌ಗೆ ತೆರಳಿದ್ದರು. ಈ ವೇಳೆ ಮೈಸೂರು ಮಸಾಲೆ ದೋಸೆ ಆರ್ಡರ್ ಮಾಡಿದ್ದರು. ದೋಸೆ ತಿನ್ನುವ ಸಂದರ್ಭದಲ್ಲಿ ಅದರೊಳಗೆ ಸತ್ತ ಸಣ್ಣ ಇಲಿ ಪತ್ತೆಯಾಗಿದೆ ಎಂದು ಅವರು ಆರೋಪಿಸಿದ್ದರು.
ಮಾನ್ಸಿ ಅವರ ಹೇಳಿಕೆಯಂತೆ, ಅವರ ಸಹೋದರ ದೋಸೆಯ ಕೆಲವು ಭಾಗಗಳನ್ನು ಸೇವಿಸಿದ ಬಳಿಕ ಅದರೊಳಗೆ ಸತ್ತ ಇಲಿ ಇರುವುದನ್ನು ಗಮನಿಸಿದ್ದರು. ಇದರಿಂದ ಆಘಾತಗೊಂಡ ಅವರು ವಾಂತಿ ಮಾಡಿಕೊಂಡಿದ್ದರು. ಬಳಿಕ ಮಾನ್ಸಿ ಬೊರಿವಲಿ ಪೊಲೀಸ್ ಠಾಣೆಗೆ ಕರೆ ಮಾಡಿ ಘಟನೆ ಕುರಿತು ದೂರು ನೀಡಿದ್ದರು.
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ, ಆಹಾರ ಮತ್ತು ಔಷಧ ಆಡಳಿತ (FDA) ಇಲಾಖೆ ಸೆ.28ರಂದು ಹೋಟೆಲ್‌ನ ಪರವಾನಗಿಯನ್ನು ಅಮಾನತುಗೊಳಿಸಿತ್ತು. ಇದರಿಂದ ಹೋಟೆಲ್ ಮುಚ್ಚುವ ಪರಿಸ್ಥಿತಿ ಎದುರಾಗಿತ್ತು.
₹25 ಲಕ್ಷಕ್ಕೆ ಬ್ಲ್ಯಾಕ್‌ಮೇಲ್
ವಿಡಿಯೋ ವೈರಲ್ ಆದ ಬಳಿಕ ಹೋಟೆಲ್ ಮಾಲೀಕರಿಗೆ ಬೆದರಿಕೆ ಕರೆಗಳು ಬರಲಾರಂಭಿಸಿದ್ದವು. ವಿಡಿಯೋವನ್ನು ಮತ್ತಷ್ಟು ವೈರಲ್ ಮಾಡುವುದಾಗಿ ಹಾಗೂ ಸಂಬಂಧಿಕರಿಗೆ ಕಳುಹಿಸುವುದಾಗಿ ಬೆದರಿಸಿ ₹25 ಲಕ್ಷ ನೀಡುವಂತೆ ಒತ್ತಾಯಿಸಲಾಗಿತ್ತು ಎನ್ನಲಾಗಿದೆ.
ನಿರಂತರ ಬೆದರಿಕೆ ಮತ್ತು ಮಾನಸಿಕ ಕಿರುಕುಳದಿಂದಾಗಿ ಹೋಟೆಲ್ ಮಾಲೀಕರು ₹6 ಲಕ್ಷಕ್ಕೆ ಒಪ್ಪಂದ ಮಾಡಿಕೊಂಡಿದ್ದರು. ಅದರಂತೆ ₹1 ಲಕ್ಷವನ್ನು ಮುಂಗಡವಾಗಿ ನಗದು ರೂಪದಲ್ಲಿ ನೀಡಿದ್ದರು.
ಹಣ ಪಡೆಯುವ ವೇಳೆ ರೆಡ್‌ಹ್ಯಾಂಡ್ ಆಗಿ ಬಂಧನ
ಸೆ.29ರಂದು ಹೋಟೆಲ್ ಮಾಲೀಕರು ಬೊರಿವಲಿ ಪೊಲೀಸರಿಗೆ ದೂರು ನೀಡಿದ್ದರು. ಬಳಿಕ ಪೊಲೀಸರು ಬಲೆ ಬೀಸಿ, ಮತ್ತಷ್ಟು ಹಣ ಪಡೆಯಲು ಮಹಿಳೆಯನ್ನು ಕರೆಸಿಕೊಂಡಿದ್ದರು. ಹಣ ಸ್ವೀಕರಿಸುತ್ತಿದ್ದ ವೇಳೆ ಪೊಲೀಸರು ಆಕೆಯನ್ನು ರೆಡ್‌ಹ್ಯಾಂಡ್ ಆಗಿ ಬಂಧಿಸಿದ್ದಾರೆ.
ತನಿಖೆ ವೇಳೆ ಬಂಧಿತ ಮಹಿಳೆ ಬೇರೆ ಯಾರೂ ಅಲ್ಲ, ದೋಸೆಯಲ್ಲಿ ಸತ್ತ ಇಲಿ ಪತ್ತೆಯಾಗಿದೆ ಎಂದು ದೂರು ನೀಡಿದ್ದ ಮಾನ್ಸಿ ಅಮಿತ್ ಎಂಬುದು ಬೆಳಕಿಗೆ ಬಂದಿದೆ. ಅವರು ಬೊರಿವಲಿಯ ಗೋರೆಗಾಂವ್ ಪ್ರದೇಶದ ನಿವಾಸಿ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಕಾನೂನು ಕ್ರಮ ಕೈಗೊಂಡಿದ್ದು, ಬ್ಲ್ಯಾಕ್‌ಮೇಲ್‌ನಲ್ಲಿ ಭಾಗಿಯಾಗಿರುವ ಇತರ ಆರೋಪಿಗಳ ಪಾತ್ರದ ಬಗ್ಗೆಯೂ ತನಿಖೆ ಮುಂದುವರಿಸಿದ್ದಾರೆ.
-
ಮಂಗಳೂರು18 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
-
Uncategorized13 hours ago
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು
-
Uncategorized15 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
ಅಂತರ ರಾಜ್ಯ17 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್‌ಮೇಲ್..!
-
ಉದ್ಯೋಗ19 hours agoPuttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
-
ಬಿಗ್ ನ್ಯೂಸ್18 hours agoPuttur-ಪುತ್ತೂರು : ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ಕೆ. ಭಾಸ್ಕರ ಶೆಟ್ಟಿ ಬಜನಿಗುತ್ತು ಪದೋನ್ನತಿ
-
ಅಂತರ ರಾಜ್ಯ23 hours agoಕಾಸರಗೋಡು: ಆರ್ಎಸ್ಎಸ್ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ
-
ಸ್ಥಳೀಯ23 hours agoBeltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು


















