ಉಡುಪಿ
Private bus-ರಾಜ್ಯಾದ್ಯಂತ ಖಾಸಗಿ ಬಸ್ ದರ ಶೇ. 3 ರಿಂದ 8 ರಷ್ಟು ಏರಿಕೆ; ಎಲ್ಲೆಲ್ಲಿ ಎಷ್ಟು ಏರಿಕೆ?
ಪೆಟ್ರೋಲ್, ಡೀಸೆಲ್ ಮತ್ತು ಟೋಲ್ ದರ ಏರಿಕೆಯ ಬೆನ್ನಲ್ಲೇ ಈಗ ಜನಸಾಮಾನ್ಯರಿಗೆ ಮತ್ತೊಂದು ಆರ್ಥಿಕ ಹೊರೆ ಎದುರಾಗಿದೆ. ರಾಜ್ಯಾದ್ಯಂತ ಸಂಚರಿಸುವ ಖಾಸಗಿ ಬಸ್‌ಗಳ (ಸ್ಟೇಜ್ ಕ್ಯಾರಿಯರ್) ಪ್ರಯಾಣ ದರವನ್ನು ಶೇ. 3 ರಿಂದ ಶೇ. 8 ರಷ್ಟು ಏರಿಕೆ ಮಾಡಲಾಗಿದ್ದು, ಪರಿಷ್ಕೃತ ದರವು ಜೂನ್ 9ರಿಂದಲೇ ಜಾರಿಗೆ ಬರಲಿದೆ.
ಉಡುಪಿ: ಪೆಟ್ರೋಲ್, ಡೀಸೆಲ್ ಮತ್ತು ಟೋಲ್ ದರ ಏರಿಕೆಯ ಬೆನ್ನಲ್ಲೇ ಈಗ ಜನಸಾಮಾನ್ಯರಿಗೆ ಮತ್ತೊಂದು ಆರ್ಥಿಕ ಹೊರೆ ಎದುರಾಗಿದೆ. ರಾಜ್ಯಾದ್ಯಂತ ಸಂಚರಿಸುವ ಖಾಸಗಿ ಬಸ್‌ಗಳ (ಸ್ಟೇಜ್ ಕ್ಯಾರಿಯರ್) ಪ್ರಯಾಣ ದರವನ್ನು ಶೇ. 3 ರಿಂದ ಶೇ. 8 ರಷ್ಟು ಏರಿಕೆ ಮಾಡಲಾಗಿದ್ದು, ಪರಿಷ್ಕೃತ ದರವು ಜೂನ್ 9ರಿಂದಲೇ ಜಾರಿಗೆ ಬರಲಿದೆ.
ನಿರ್ವಹಣೆ ಸಾಧ್ಯವಾಗದೆ ದರ ಏರಿಕೆ:
ಉಡುಪಿಯಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ಮಜಲು ವಾಹನ ಬಸ್ ಮಾಲಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ದರ ಏರಿಕೆಯ ಅನಿವಾರ್ಯತೆಯನ್ನು ವಿವರಿಸಿದರು. ಇಂಧನ ಬೆಲೆ ಮಾತ್ರವಲ್ಲದೆ, ಬಸ್‌ಗಳ ಟೈರ್, ಬಿಡಿಭಾಗಗಳು ಹಾಗೂ ರಿಸೋಲಿಂಗ್ ವೆಚ್ಚಗಳು ಗಣನೀಯವಾಗಿ ಏರಿಕೆಯಾಗಿವೆ. ಇದರಿಂದಾಗಿ ಬಸ್ ಮಾಲೀಕರು ದೈನಂದಿನ ನಿರ್ವಹಣೆ ಮಾಡಲಾಗದೆ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರದ ನಿಯಮಗಳನ್ವಯವೇ ಈ ದರ ಪರಿಷ್ಕರಣೆ ಮಾಡಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.
ಎಲ್ಲೆಲ್ಲಿ ಎಷ್ಟು ಏರಿಕೆ? (ಪ್ರಮುಖ ಮಾರ್ಗಗಳು):
ಪರಿಷ್ಕೃತ ದರದ ಅನ್ವಯ ಕರಾವಳಿಯ ಪ್ರಮುಖ ಮಾರ್ಗಗಳ ಹೊಸ ಟಿಕೆಟ್ ದರ ಹೀಗಿದೆ:
ಉಡುಪಿ – ಮಂಗಳೂರು: ಈ ಹಿಂದೆ ₹95 ಇದ್ದ ದರ ಈಗ ₹100 ಕ್ಕೆ ಏರಿಕೆಯಾಗಿದೆ.
ಕುಂದಾಪುರ – ಉಡುಪಿ: ₹60 ರಿಂದ ₹63 ಕ್ಕೆ ಹೆಚ್ಚಳವಾಗಿದೆ.
ಉಡುಪಿ – ಮಣಿಪಾಲ: ಕನಿಷ್ಠ ಪ್ರಯಾಣ ದರ ₹12 ರಿಂದ ₹15 ಕ್ಕೆ ಏರಿಕೆಯಾಗಿದೆ.
ಜೂನ್ 9ರಿಂದಲೇ ಅನ್ವಯ:
ಹೊಸ ದರ ಪಟ್ಟಿಯು ಮಂಗಳವಾರದಿಂದಲೇ (ಜೂನ್ 9) ಜಾರಿಗೆ ಬರಲಿದ್ದು, ಪ್ರಯಾಣಿಕರು ಸಹಕರಿಸಬೇಕು ಎಂದು ಮನವಿ ಮಾಡಲಾಗಿದೆ. ಪತ್ರಿಕಾಗೋಷ್ಠಿಯಲ್ಲಿ ಕೆನರಾ ಬಸ್ ಮಾಲಕರ ಸಂಘದ ಅಧ್ಯಕ್ಷ ರಾಜವರ್ಮ ಬಲ್ಲಾಳ್ ಹಾಗೂ ಪ್ರಮುಖರಾದ ಸದಾನಂದ ಚಾತ್ರ ಉಪಸ್ಥಿತರಿದ್ದರು.
ನಿಧನ ವಾರ್ತೆ
Heart attack-ಸಾಲಿಗ್ರಾಮ: ಕಚೇರಿಯಲ್ಲೇ ಹೃದಯಾಘಾತ; ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ನಿಧನ
ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್‌ಡಿಸೈನಿಂಗ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪರಿಣತಿ ಹೊಂದಿದ್ದ ಸಾಲಿಗ್ರಾಮದ ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ (52) ಅವರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಸಾಲಿಗ್ರಾಮ: ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್‌ಡಿಸೈನಿಂಗ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪರಿಣತಿ ಹೊಂದಿದ್ದ ಸಾಲಿಗ್ರಾಮದ ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ (52) ಅವರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಗುರುವಾರ ಬೆಳಿಗ್ಗೆ ಸಾಲಿಗ್ರಾಮದಲ್ಲಿರುವ ತಮ್ಮ ಕಚೇರಿಯಲ್ಲಿ ಕುಳಿತಿದ್ದ ವೇಳೆ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಅವರ ಅಕಾಲಿಕ ನಿಧನದ ಸುದ್ದಿ ಬಂಧುಮಿತ್ರರು ಹಾಗೂ ಸ್ಥಳೀಯರಲ್ಲಿ ತೀವ್ರ ದುಃಖಕ್ಕೆ ಕಾರಣವಾಗಿದೆ.
ದಿನೇಶ್ ಹೊಳ್ಳ ಅವರು ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್‌ಡಿಸೈನಿಂಗ್, ವ್ಯಂಗ್ಯಚಿತ್ರ ರಚನೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆ ಹಾಗೂ ಪರಿಣತಿಯಿಂದ ಗುರುತಿಸಿಕೊಂಡಿದ್ದರು. ಇದರ ಜೊತೆಗೆ ಚಪ್ಪಲಿ ಉದ್ಯಮದಲ್ಲಿಯೂ ತೊಡಗಿಸಿಕೊಂಡು ಹಲವು ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.
ಬಹುಮುಖ ಪ್ರತಿಭೆ ಹಾಗೂ ವಿವಿಧ ಕ್ಷೇತ್ರಗಳ ಜ್ಞಾನ ಹೊಂದಿದ್ದ ಅವರು ಸ್ನೇಹಜೀವಿಯಾಗಿದ್ದು, ಎಲ್ಲರೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದರು.
ಅಪರಾಧ
Manipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು
ದೀಪಾವಳಿ ಸಂದರ್ಭದಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸರ ವಿರುದ್ಧ ವಿದ್ಯಾರ್ಥಿಗಳು ಗಂಭೀರ ದೌರ್ಜನ್ಯದ ಆರೋಪ ಮಾಡಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ನಡೆದ ಕೃತ್ಯಕ್ಕೆ ಸಂಬಂಧವಿಲ್ಲದ ವಿದ್ಯಾರ್ಥಿಗಳ ಫ್ಲ್ಯಾಟ್‌ಗಳಿಗೆ ಪೊಲೀಸರು ನುಗ್ಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ಖಾಸಗಿ ವಿದ್ಯಾಸಂಸ್ಥೆಯ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿ ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ.
ಉಡುಪಿ, ನ.19: ದೀಪಾವಳಿ ಸಂದರ್ಭದಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸರ ವಿರುದ್ಧ ವಿದ್ಯಾರ್ಥಿಗಳು ಗಂಭೀರ ದೌರ್ಜನ್ಯದ ಆರೋಪ ಮಾಡಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ನಡೆದ ಕೃತ್ಯಕ್ಕೆ ಸಂಬಂಧವಿಲ್ಲದ ವಿದ್ಯಾರ್ಥಿಗಳ ಫ್ಲ್ಯಾಟ್‌ಗಳಿಗೆ ಪೊಲೀಸರು ನುಗ್ಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ಖಾಸಗಿ ವಿದ್ಯಾಸಂಸ್ಥೆಯ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿ ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ.
ವಿದ್ಯಾರ್ಥಿಗಳ ದೂರಿನ ಪ್ರಕಾರ, ನವೆಂಬರ್ 10ರಂದು ಮಣಿಪಾಲದ ವಸತಿ ಸಮುಚ್ಚಯದಲ್ಲಿರುವ ಕೊಠಡಿಗಳಿಗೆ ಪೊಲೀಸ್ ಸಿಬ್ಬಂದಿ ನುಗ್ಗಿ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಘಟನೆ ವಸತಿ ಸಮುಚ್ಚಯದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.
ಯಾವುದೇ ಸೂಕ್ತ ಕಾರಣ ನೀಡದೆ ವಿದ್ಯಾರ್ಥಿಗಳನ್ನು ಪೊಲೀಸ್ ಠಾಣೆಗೆ ಕರೆದೊಯ್ದು ಬೆಳಗ್ಗೆ 11ರಿಂದ ರಾತ್ರಿ 8ರವರೆಗೆ ಠಾಣೆಯಲ್ಲಿ ಕೂರಿಸಿ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಲಾಗಿದೆ. ಅಲ್ಲದೆ, ಮಣಿಪಾಲ ಠಾಣೆಯ ಪಿಎಸ್‌ಐ ಸುಳ್ಳು ವಿವರಗಳೊಂದಿಗೆ ಎಫ್‌ಐಆರ್ ದಾಖಲಿಸಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.
ನವೆಂಬರ್ 8ರಂದು ವಸತಿ ಸಮುಚ್ಚಯದ ಆವರಣದಲ್ಲಿ ಯಾರಿಗೂ ತೊಂದರೆಯಾಗದಂತೆ ಶಾಂತಿಯುತವಾಗಿ ದೀಪಾವಳಿ ಆಚರಿಸಿದ್ದೇವೆ. ಆದರೆ, ಬೇರೆಯವರು ಸಾರ್ವಜನಿಕ ರಸ್ತೆಯಲ್ಲಿ ಮಾಡಿದ ಕೃತ್ಯಕ್ಕೆ ನಮ್ಮನ್ನು ಹೊಣೆಗಾರರನ್ನಾಗಿ ಮಾಡಿ ಪ್ರಕರಣ ದಾಖಲಿಸಿರುವುದು ಪರೀಕ್ಷಾ ಸಮಯದಲ್ಲಿ ನಮ್ಮ ಭವಿಷ್ಯದ ಬಗ್ಗೆ ಆತಂಕ ಮೂಡಿಸಿದೆ ಎಂದು ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಸಲ್ಲಿಸಿರುವ ದೂರಿನಲ್ಲಿ ತಿಳಿಸಿದ್ದಾರೆ.
ಪೊಲೀಸ್ ಇಲಾಖೆ ಸ್ಪಷ್ಟನೆ
ವಿದ್ಯಾರ್ಥಿಗಳ ಆರೋಪಗಳಿಗೆ ಪ್ರತಿಕ್ರಿಯಿಸಿರುವ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್, ಪ್ರಕರಣಕ್ಕೆ ಅನ್ವಯವಾಗುವ ಕಾನೂನು ಸೆಕ್ಷನ್‌ಗಳ ಅಡಿಯಲ್ಲಿ ಪೊಲೀಸರು ನೇರವಾಗಿ ಎಫ್‌ಐಆರ್ ದಾಖಲಿಸಲು ಅವಕಾಶವಿಲ್ಲದ ಕಾರಣ ನ್ಯಾಯಾಲಯದ ಅನುಮತಿ ಪಡೆದು ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.
ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿ, ಮೊಬೈಲ್ ವಿಡಿಯೋ ದಾಖಲೆಗಳು ಹಾಗೂ ಸ್ಥಳೀಯರ ಹೇಳಿಕೆಗಳ ಆಧಾರದ ಮೇಲೆ ನಿಯಮ ಉಲ್ಲಂಘಿಸಿದ ಆರೋಪಿಗಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ. ಪ್ರಕರಣದಲ್ಲಿ ಈವರೆಗೆ ಯಾರ ವಿರುದ್ಧವೂ ದೋಷಾರೋಪ ಪಟ್ಟಿ ಸಲ್ಲಿಸಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ದೌರ್ಜನ್ಯ ಆರೋಪದ ತನಿಖೆ ಡಿವೈಎಸ್ಪಿಗೆ
ಪೊಲೀಸರ ಅತಿರೇಕದ ವರ್ತನೆ ಕುರಿತು ವಿದ್ಯಾರ್ಥಿಗಳು ಮೂರು ದಿನಗಳ ಹಿಂದೆಯೇ ದೂರು ಸಲ್ಲಿಸಿದ್ದು, ಈ ಆರೋಪಗಳ ತನಿಖೆಯನ್ನು ಉಡುಪಿ ಡಿವೈಎಸ್ಪಿಗೆ ವಹಿಸಲಾಗಿದೆ. ತನಿಖೆ ಪ್ರಗತಿಯಲ್ಲಿದೆ ಎಂದು ಎಸ್ಪಿ ತಿಳಿಸಿದ್ದಾರೆ.
ಮಣಿಪಾಲ ಠಾಣೆಯ ಪಿಎಸ್‌ಐ ತನಿಖಾಧಿಕಾರಿಯಾಗಿ ಮುಂದುವರಿಯುವುದಕ್ಕೆ ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ, ಅವರ ಮನವಿ ಸ್ವೀಕರಿಸಿದ ದಿನವೇ ಪ್ರಕರಣದ ತನಿಖೆಯನ್ನು ಮಣಿಪಾಲ ಪೊಲೀಸ್ ಇನ್‌ಸ್ಪೆಕ್ಟರ್‌ಗೆ ಹಸ್ತಾಂತರಿಸಲಾಗಿದೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.
ಉಡುಪಿ
Udupi-ಉಡುಪಿ: ಹಳೆ ಕಾರಾಗೃಹದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ
ಉಡುಪಿ: ನಗರದ ಹಳೆ ತಾಲೂಕು ಕಚೇರಿ ಸಮೀಪದಲ್ಲಿರುವ ಹಳೆ ಕಾರಾಗೃಹದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ಸುಮಾರು 10 ದಿನಗಳ ಹಿಂದೆಯೇ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.
ಉಡುಪಿ: ನಗರದ ಹಳೆ ತಾಲೂಕು ಕಚೇರಿ ಸಮೀಪದಲ್ಲಿರುವ ಹಳೆ ಕಾರಾಗೃಹದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.
ಸುಮಾರು 10 ದಿನಗಳ ಹಿಂದೆಯೇ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಯಾವುದೋ ಕಾಯಿಲೆಯಿಂದ ಮೃತಪಟ್ಟಿರುವ ಸಾಧ್ಯತೆಯ ಬಗ್ಗೆ ಶಂಕೆ ವ್ಯಕ್ತವಾಗಿದೆ. ಆದರೆ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತ ವ್ಯಕ್ತಿಯ ಹೆಸರು ಹಾಗೂ ವಿಳಾಸದ ಬಗ್ಗೆಯೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ಮೃತರ ವಾರಸುದಾರರು ಅಥವಾ ಪರಿಚಯಸ್ಥರು ಉಡುಪಿ ನಗರ ಪೊಲೀಸ್ ಠಾಣೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.
ಸ್ಥಳದಲ್ಲಿ ತೀವ್ರ ದುರ್ವಾಸನೆ ಬೀರುತ್ತಿದ್ದ ಮೃತದೇಹವನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ತೆರವುಗೊಳಿಸಿ, ಅಜ್ಜರಕಾಡು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ನೆರವಾದರು.
-
ಮಂಗಳೂರು14 hours agoMangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
-
ಬಿಗ್ ನ್ಯೂಸ್21 hours agoBail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ
-
ಅಂತರ ರಾಜ್ಯ19 hours agoFormer CBI officer-ಅಧಿಕಾರ, ಹಣ, ಐಷಾರಾಮಿ ಬದುಕಿಗೆ ಗುಡ್ಬೈ; ಗುಹೆಯಲ್ಲಿ ಧ್ಯಾನ ಮಾಡುತ್ತಿರುವ ಮಾಜಿ ಸಿಬಿಐ ಅಧಿಕಾರಿ..!
-
ನಿಧನ ವಾರ್ತೆ20 hours agoHeart attack-ಸಾಲಿಗ್ರಾಮ: ಕಚೇರಿಯಲ್ಲೇ ಹೃದಯಾಘಾತ; ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ನಿಧನ
-
ಸಿನೆಮಾ19 hours agoDawood-‘ಧುರಂಧರ್ ‘ ನಲ್ಲಿ ದಾವೂದ್ ನ ತೋರಿಸಿದ ರೀತಿ ವಾಸ್ತವವಲ್ಲ…! ಮೋಸ್ಟ್ ವಾಂಟೆಡ್ ಪಾತಕಿ ಈಗ ಹೇಗಿದ್ದಾನೆ ಗೊತ್ತೇ..? ಮಾಜಿ FBI ಅಧಿಕಾರಿ ಹೇಳಿದ್ದೇನೂ..?
-
ಅಂತರ ರಾಜ್ಯ13 hours agoArrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!
-
ನಿಧನ ವಾರ್ತೆ20 hours agoMudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು
-
ನಿಧನ ವಾರ್ತೆ20 hours agoOne-sided love-ಇನ್ಸ್ಟಾಗ್ರಾಮ್ ಇನ್ಫ್ಲುಯೆನ್ಸರ್ ಮೇಲಿನ ಒನ್ಸೈಡೆಡ್ ಲವ್; ಹಲ್ಲೆಗೊಳಗಾದ ಯುವಕ ಸಾವು















