Connect with us

ಕಾರ್ಯಕ್ರಮಗಳು

Savannur Seetharama Rai-ಸವಣೂರು ಸೀತಾರಾಮ ರೈಯವರ 79ನೇ ಹುಟ್ಟುಹಬ್ಬ ಆಚರಣೆ; ಶಾಲಾ ಪ್ರಾರಂಭೋತ್ಸವ, ಅಬಾಕಸ್ ತರಗತಿ ಉದ್ಘಾಟನೆ; ಸೀತಾರಾಮ ರೈ ನೂರಾರು ವರ್ಷ ಸಮಾಜ ಸೇವೆ ಮಾಡಿಕೊಂಡು ಬರಲಿ-ಗಣರಾಜ್ ಕುಂಬ್ಲೆ; ವಿದ್ಯಾರಶ್ಮಿಯಲ್ಲಿ ಉತ್ತಮ ಶಿಕ್ಷಣ -ಸವಣೂರು ಸೀತಾರಾಮ ರೈ

Published

on



Ad Widget

Ad Widget

Ad Widget

Ad Widget

ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕ `ಸಹಕಾರರತ್ನ’ ಸವಣೂರು ಸೀತಾರಾಮ ರೈಯವರ 79ನೇ ಹುಟ್ಟು ಹಬ್ಬ ಆಚರಣೆ, ಶಾಲಾ ಪ್ರಾರಂಭೋತ್ಸವ ಹಾಗೂ ಅಬಾಕಸ್ ತರಗತಿ ಉದ್ಘಾಟನೆ ಸಂಸ್ಥೆಯ ವಿದ್ಯಾಚೇತನ ಸಭಾಂಗಣದಲ್ಲಿ ನಡೆಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕ `ಸಹಕಾರರತ್ನ’ ಸವಣೂರು ಸೀತಾರಾಮ ರೈಯವರ 79ನೇ ಹುಟ್ಟು ಹಬ್ಬ ಆಚರಣೆ, ಶಾಲಾ ಪ್ರಾರಂಭೋತ್ಸವ ಹಾಗೂ ಅಬಾಕಸ್ ತರಗತಿ ಉದ್ಘಾಟನೆ ಸಂಸ್ಥೆಯ ವಿದ್ಯಾಚೇತನ ಸಭಾಂಗಣದಲ್ಲಿ ನಡೆಯಿತು.

Ad Widget

Ad Widget

Ad Widget alt="Ad Widget"/>

Ad Widget

ಸೀತಾರಾಮ ರೈ ನೂರಾರು ವರ್ಷ ಸಮಾಜ ಸೇವೆಯನ್ನು ಮಾಡಿಕೊಂಡು ಬರಲಿ-ಗಣರಾಜ್ ಕುಂಬ್ಲೆ:
ರಾಮಕುಂಜ ಶ್ರೀ ರಾಮಕುಂಜೇಶ್ವರ ಮಹಾವಿದ್ಯಾಲಯದ ನಿವೃತ್ತ ಪ್ರಾಂಶುಪಾಲ ಗಣರಾಜ್ ಕುಂಬ್ಲೆರವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಸವಣೂರಿನಲ್ಲಿ 30 ವರ್ಷಗಳ ಹಿಂದೆ ಎರಡು-ಮೂರು ಅಂಗಡಿಗಳು, ಸೊಸೈಟಿ-ಬ್ಯಾಂಕ್ ಬಿಟ್ಟರೆ ಬೇರೇನೂ ಸೌಲಭ್ಯ ಇರದ ಸಂದರ್ಭದಲ್ಲಿ ಸವಣೂರು ಸೀತಾರಾಮ ರೈಯವರು ಸವಣೂರಿನಲ್ಲಿ ವಾಣಿಜ್ಯ ಸಂಕೀರ್ಣ ನಿರ್ಮಿಸಿದರು. ಜೊತೆಗೆ ಸುಮಾರು 20 ಎಕ್ರೆ ವಿಸ್ತೀರ್ಣದ ಬೋರುಗುಡ್ಡ ಪ್ರದೇಶವಾಗಿದ್ದ ಜಾಗದಲ್ಲಿ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳನ್ನು ಕಟ್ಟಿ, ಶಿಕ್ಷಣ ಕಾಶಿಯಾಗಿ ಪರಿವರ್ತಿಸಿ, ಸವಣೂರಿನ ಅಭಿವೃದ್ಧಿಯ ಹರಿಕಾರರಾದರು. ಸವಣೂರಿನ ಶಿಲ್ಪಿಯಾಗಿ ಹತ್ತೂರಿನಲ್ಲಿ ಹೆಸರನ್ನು ಪಡೆದಿದ್ದಾರೆ. ಸುಳ್ಯವನ್ನು ಕಟ್ಟಿದ ಕುರುಂಜಿ ವೆಂಕಟ್ರಮಣ ಗೌಡರು, ಮಣಿಪಾಲವನ್ನು ಬೆಳೆಸಿದ ಟಿಎಂಎಪೈಗಳಂತೆ ಸೀತಾರಾಮ ರೈಯವರು ಸವಣೂರನ್ನು ಅಭಿವೃದ್ಧಿ ಪಥದತ್ತ ಸಾಗಿಸಿದ ಮಹಾನ್ ವ್ಯಕ್ತಿಯಾಗಿದ್ದಾರೆ. ತನ್ನೂರಿನ ಮಕ್ಕಳಿಗೆ ಆಧುನಿಕ ಶಿಕ್ಷಣ ದೊರೆಯಬೇಕೆಂಬ ಮಹತ್ವದ ಉದ್ದೇಶದಿಂದ ಕಟ್ಟಿ ಬೆಳೆಸಿದ ಶಿಕ್ಷಣ ಸಂಸ್ಥೆ ವಿದ್ಯಾರಶ್ಮಿ ಆಗಿದೆ ಎಂದರು.

Ad Widget

Ad Widget <> Ad Widget

ಸೀತಾರಾಮ ರೈಯವರು ಸಮಾಜವನ್ನು ಕಟ್ಟುವ ಕಾಯಕದಲ್ಲಿ ನಿರತರಾದರು. ಸಾಮಾಜಿಕ, ಶಿಕ್ಷಣ ಸೇವೆಯೊಂದಿಗೆ ಸಹಕಾರ ಕ್ಷೇತ್ರದಲ್ಲಿ ರೈಯವರು ಸಾಧಿಸಿದ ಕೀರ್ತಿ ಬಹಳ ದೊಡ್ಡಮಟ್ಟದ್ದು. ಸೀತಾರಾಮ ರೈ ಹಾಗೂ ಅವರ ಒಡನಾಡಿಯಾಗಿದ್ದ ಕೆಎಸ್‌ಎನ್ ನಿಡ್ವಣ್ಣಾಯರವರು ಲವ-ಕುಶರಂತೆ ಸಮಾಜದಲ್ಲಿ ಕಂಡುಬರುತ್ತಿದ್ದರು ಎಂದು ಹೇಳಿದ ಗಣರಾಜ್ ಕುಂಬ್ಲೆರವರು, ಸವಣೂರು ವಿದ್ಯಾರಶ್ಮಿ ವಿದ್ಯಾಲಯ ಉತ್ತಮ ಸಂಸ್ಕಾರಯುತ ಶಿಕ್ಷಣವನ್ನು ನೀಡುತ್ತಿದೆ, ಇಲ್ಲಿ ವಿದ್ಯಾರ್ಥಿಗಳ ಶಿಸ್ತು, ನಿಯಮ ಪಾಲನೆಗಳು ಕಂಡು ಮನಸು ತುಂಬಿ ಬಂತು ಎಂದು ಹೇಳಿದರಲ್ಲದೆ, ಸಂಸ್ಥೆಯು ಮುಂದೆಯೂ ಅತ್ಯುತ್ತಮವಾದ ಸಾಧನೆಗಳನ್ನು ಮಾಡಲಿ, ಸೀತಾರಾಮ ರೈ ಅವರು ನೂರಾರು ವರ್ಷ ಸಮಾಜ ಸೇವೆಯನ್ನು ಮಾಡಿಕೊಂಡು ಬರಲಿ ಎಂದು ಶುಭ ಕೋರಿದರು.



Ad Widget

ವಿದ್ಯಾರಶ್ಮಿಯಲ್ಲಿ ಉತ್ತಮ ಶಿಕ್ಷಣ-ಸೀತಾರಾಮ ರೈ:
ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ `ಸಹಕಾರ ರತ್ನ’ ಸವಣೂರು ಸೀತಾರಾಮ ರೈಯವರು ದೀಪಬೆಳಗಿಸಿ ಸಮಾರಂಭವನ್ನು ಉದ್ಘಾಟಿಸಿದರು. ಬಳಿಕ ಅವರು ಮಾತನಾಡಿ, ನನ್ನ 79ನೇ ಹುಟ್ಟಹಬ್ಬದ ಈ ಸಂದರ್ಭದಲ್ಲಿ ನಮ್ಮ ಸಂಸ್ಥೆಯ ಪ್ರಾರಂಭೋತ್ಸವ ಮತ್ತು ಅಬಾಕಾಸ್ ತರಗತಿ ಉದ್ಘಾಟನೆಯನ್ನು ಹಮ್ಮಿಕೊಂಡಿವೆ. ಶಾಲಾ ಪ್ರಾರಂಭೋತ್ಸವ ಎಂದರೆ ಹೊಸ ಮಕ್ಕಳು ಶಾಲೆಗೆ ಸೇರುವಾಗ ಯಾವುದೇ ಆಳಕು-ಅಂಜಿಕೆ ಇಲ್ಲದೇ ಲವಲವಿಕೆಯಿಂದ ಇರಬೇಕು ಎಂಬ ಉದ್ದೇಶದಿಂದ ಕಾರ್ಯಕ್ರಮ ಮಾಡಲಾಗಿದೆ. ವಿದ್ಯಾರ್ಥಿಗಳು ಅತ್ಯುತ್ತಮವಾದ ಕಲಿಕೆಗೆ ಗಮನವನ್ನು ನೀಡಬೇಕು, ಉತ್ತಮ ಗುರಿಯೊಂದಿಗೆ ಕಲಿಕೆಯನ್ನು ಪಡೆದಾಗ ಮಾತ್ರ ಸಮಾಜದಲ್ಲಿ ಗೌರವ ಪ್ರಾಪ್ತವಾಗುತ್ತದೆ. ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳು ಎಲ್ಲಾ ರೀತಿಯಿಂದಲೂ ಉತ್ತಮ ಶಿಕ್ಷಣ,ಸಂಸ್ಕಾರವನ್ನು ನೀಡುತ್ತಿದೆ ಎಂದು ಹೇಳಿದರು.

Ad Widget

Ad Widget

ವಿದ್ಯಾರ್ಥಿಗಳು ಬೆಳೆಯಬೇಕು -ಅಶ್ವಿನ್ ಎಲ್ ಶೆಟ್ಟಿ:
ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಅಶ್ವಿನ್ ಎಲ್ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಸಾಧನೆಯನ್ನು ಮಾಡಬೇಕು, ತಮ್ಮ ಸಾಧನೆಗೆ ಬೆಂಬಲ ನೀಡುವವರನ್ನು ವಿದ್ಯಾರ್ಥಿಗಳು ಸ್ನೇಹಿತರಾಗಿ ಮಾಡಿಕೊಳ್ಳಬೇಕು. ಪಠ್ಯ ಚಟುವಟಿಕೆಯಲ್ಲಿ ಯಾವುದೇ ಸಮಸ್ಯೆ ಬಂದಲ್ಲಿ ಶಿಕ್ಷಕರನ್ನು ಪ್ರಶ್ನಿಸುವ ಮೂಲಕ ವಿದ್ಯಾರ್ಥಿಗಳು ಬೆಳೆಯಬೇಕು ಎಂದು ಹೇಳಿದರು. ನಮ್ಮ ಸಂಸ್ಥೆಯ ಸಂಚಾಲಕರಾದ ಸವಣೂರು ಸೀತಾರಾಮ ರೈಯವರ 79ನೇ ಹುಟ್ಟುಹಬ್ಬ ಸಂಭ್ರಮ ಕಾರ್‍ಯ ತುಂಬಾ ಅರ್ಥಪೂರ್ಣವಾಗಿ ನಡೆದಿದೆ ಎಂದು ಅವರು ಸಂತೋಷ ವ್ಯಕ್ತಪಡಿಸಿದರು

ಅಬಾಕಸ್ ಆತ್ಮವಿಶ್ವಾಸ ಹೆಚ್ಚಿಸುತ್ತದೆ-ಪ್ರಪುಲ್ಲಾ ಗಣೇಶ್:
ಐಆರ್‌ಸಿಎಂಡಿ ಎಜ್ಯುಕೇಶನ್ ಸೆಂಟರ್‌ನ ಸಿ.ಇ.ಓ.ಪ್ರಪುಲ್ಲಾ ಗಣೇಶ್ ಅವರು ಮಾತನಾಡಿ,2026-27ನೇ ಶೈಕ್ಷಣಿಕ ವರ್ಷದಿಂದ ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಒಂದನೇ ತರಗತಿಯಿಂದ 5ನೇ ತರಗತಿವರೆಗಿನ ವಿದ್ಯಾರ್ಥಿಗಳ ಗಣಿತ ಕೌಶಲ್ಯವನ್ನು ಹೆಚ್ಚಿಸಲು ಅಬಾಕಸ್ ತರಗತಿಗಳನ್ನು ಪ್ರಾರಂಭಿಸಲಾಗಿದೆ. ಅಬಾಕಸ್ ಒಂದು ಸರಳ ಹಾಗೂ ಪರಿಣಾಮಕಾರಿ ಗಣಿತ ಸಾಧನವಾಗಿದ್ದು ಇದರ ಮೂಲಕ ಮಕ್ಕಳು ಲೆಕ್ಕಾಚಾರವನ್ನು ಸುಲಭವಾಗಿ ಮತ್ತು ವೇಗವಾಗಿ ಕಲಿಯುತ್ತಾರೆ. ಈ ತರಗತಿಯಿಂದ ಮಕ್ಕಳ ಸ್ಮರಣಶಕ್ತಿ ಮತ್ತು ತಾರ್ಕಿಕ ಚಿಂತನೆ ಅಭಿವೃದ್ಧಿ, ಗಣಿತ ವಿಷಯದ ಆಸಕ್ತಿ ಹೆಚ್ಚಿಸುವುದು. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ಹಾಗೂ ಮಗುವಿನ ಏಕಾಗ್ರತೆ, ನೆನಪಿನ ಶಕ್ತಿ ಹೆಚ್ಚಿಸುತ್ತದೆ.ಹಾಗಾಗಿ ಅಬಾಕಸ್‌ನಿಂದ ಒಂದು ಮಗುವಿನ ಸಂಪೂರ್ಣ ಮೆದುಳಿನ ಬೆಳವಣಿಗೆಯ ಜೊತೆಗೆ ಆತ್ಮವಿಶ್ವಾಸ ಹೆಚ್ಚಿಸುತ್ತದೆ. ಅನುಭವೀ ಶಿಕ್ಷಕರಿಂದ ಈ ತರಗತಿಯು ನಡೆಯಲಿದೆ ಎಂದು ಹೇಳಿದರು.

ಹುಟ್ಟು ಹಬ್ಬ ಆಚರಣೆ ಸಂಭ್ರಮ ಸಂತೋಷ ತಂದಿದೆ-ಮಹೇಶ್ ರೈ ಸವಣೂರು:
ಅಮೇರಿಕಾದಲ್ಲಿ ಇಂಜಿನಿಯರ್ ಆಗಿರುವ ಸವಣೂರು ವಿದ್ಯಾರಶ್ಮಿ ಸಂಸ್ಥೆಯ ಟ್ರಸ್ಟಿ ಮಹೇಶ್ ರೈ ಸವಣೂರುರವರು ಮಾತನಾಡಿ, ಹೊಸದಾಗಿ ಶಾಲೆಗೆ ಸೇರಿದ ಪುಟಾಣಿಗಳಿಗೆ ಉತ್ತಮ ಭವಿಷ್ಯವನ್ನು ಹಾರೈಸಿ, ಸಂಸ್ಥೆಯ ಸಂಚಾಲಕರಾದ ಸೀತಾರಾಮ ರೈ ಅವರ ಹುಟ್ಟು ಹಬ್ಬ ಆಚರಣೆ ಸಂಭ್ರಮ ಸಂತೋಷ ತಂದಿದೆ ಎಂದರು.

ಸೀತಾರಾಮ ರೈ ಅವರು ಮಹಾಸಾಧಕರು-ಎನ್.ರವೀಂದ್ರ ಶೆಟ್ಟಿ ನುಳಿಯಾಲು:
ಉದ್ಯಮಿ,ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎನ್.ರವೀಂದ್ರ ಶೆಟ್ಟಿ ನುಳಿಯಾಲುರವರು ಸೀತಾರಾಮ ರೈ ಮತ್ತು ಕಸ್ತೂರಿಕಲಾ ಎಸ್ ರೈ ದಂಪತಿಯನ್ನು ಸನ್ಮಾನಿಸಿ, ಮಾತನಾಡಿ ಸೀತಾರಾಮ ರೈ ಮತ್ತು ನಾನು ಬಹಳ ವರ್ಷಗಳ ಒಡನಾಡಿಗಳಾಗಿದ್ದು, ಸೀತಾರಾಮ ರೈಯವರ ಸಾಧನೆಯನ್ನು ಕಂಡು ಮನಸ್ಸು ತುಂಬಿ ಬಂದಿದೆ.ಸವಣೂರಿನ ಚಿತ್ರಣವನ್ನೇ ಬದಲಾವಣೆ ಮಾಡಿದ ಸೀತಾರಾಮ ರೈ ಅವರು ಮಹಾಸಾಧಕರು ಎಂದು ಪ್ರಶಂಸಿದರು.

ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ವಿತರಣೆ
ಇಂಗ್ಲೀಷ್ ಇಂಟರ್‌ನ್ಯಾಷನಲ್ ಒಲಂಪಿಯಾಡ್ ಪರೀಕ್ಷೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರವನ್ನು ನೀಡಿ, ಗೌರವಿಸಲಾಯಿತು. ಸವಣೂರು ಜಿನ ಬಸದಿ ಬಳಿಯಿಂದ ವಿದ್ಯಾರಶ್ಮಿ ವಿದ್ಯಾಲಯದ ತನಕ ಮೆರಣಿಗೆಯನ್ನು ಆಯೋಜಿಸಲಾಗಿತ್ತು. ಸವಣೂರು ಬಸದಿಯ ಅರ್ಚಕ ಶ್ರೇಯಾಂಸ ಕುಮಾರ್ ಇಂದ್ರ ತೆಂಗಿನಕಾಯಿ ಒಡೆಯುವ ಮೂಲಕ ಶುಭಹಾರೈಸಿದರು. ಸಹಕಾರರತ್ನ ಸೀತಾರಾಮ ರೈ ಅವರು ಮೆರಣಿಗೆಗೆ ಚಾಲನೆಗೈದು ಶುಭಹಾರೈಸಿದರು.

ಹುಟ್ಟುಹಬ್ಬ ಆಚರಣೆ:
ಸೀತಾರಾಮ ರೈಯವರ 79ನೇ ಹುಟ್ಟುಹಬ್ಬದ ಪ್ರಯುಕ್ತ ವಿದ್ಯಾರ್ಥಿನಿ ಶ್ರದ್ಧಾ ಮತ್ತು ಬಳಗದವರು ಆರತಿ ಬೆಳಗಿಸಿ, ಜನ್ಮ ದಿನದ ಗೀತೆ ಹಾಡಿದರು. ಸಂಸ್ಥೆಯ ಸಿಬ್ಬಂದಿಗಳು ಹೂಗುಚ್ಚ ನೀಡಿ ಗೌರವಿಸಿದರು.

ಸವಣೂರು ಸೀತಾರಾಮ ರೈಯವರ ಪತ್ನಿ ಕಸ್ತೂರಿಕಲಾ ಎಸ್ ರೈ ಸವಣೂರು, ಸಂಸ್ಥೆಯ ಟ್ರಸ್ಟಿಗಳಾದ ಉದ್ಯಮಿ ಎನ್.ಸುಂದರ ರೈ ಸವಣೂರು ಮತ್ತು ರಶ್ಮಿ ಅಶ್ವಿನ್ ಎಲ್ ಶೆಟ್ಟಿ, ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷರಾಗಿರುವ ಸವಣೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷ ತಾರಾನಾಥ ಕಾಯರ್ಗ, ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲೆ ಶಶಿಕಲಾ ಎಸ್ ಆಳ್ವ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ಸಂತನುಕೃಷ್ಣ ಸ್ವಾಗತಿಸಿ, ಆಯಿಷತ್ ಹನಾ ಕಾರ್‍ಯಕ್ರಮ ನಿರೂಪಿಸಿದರು. ಕೃಪಾಲಿ ವಂದಿಸಿದರು.

Ad Widget
Click to comment

Leave a Reply

ಮಂಗಳೂರು

Mangaluru-ಬೆಳೆ ವಿಮೆ ಅನ್ಯಾಯ ಆರೋಪ: ಅ.9ರಂದು ಮಂಗಳೂರಿನಲ್ಲಿ ರೈತರ ಬೃಹತ್ ಹಕ್ಕೊತ್ತಾಯ | ಸಹಕಾರ ಭಾರತಿ – ಬಿಜೆಪಿ ಬೆಂಬಲ

Published

on



Ad Widget

Ad Widget

Ad Widget

Ad Widget

ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ. ಬೆಳೆ ವಿಮೆ ಯೋಜನೆಯಡಿ ರೈತರಿಗೆ ಸೂಕ್ತ ಪರಿಹಾರ ದೊರೆಯದಿರುವುದು ಸೇರಿದಂತೆ ವಿಮೆ ಪಾವತಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಸಭೆಯಲ್ಲಿ ಧ್ವನಿ ಎತ್ತಲಾಗುತ್ತದೆ.

Ad Widget

Ad Widget <> Ad Widget

ಬೆಳೆ ವಿಮೆ ಯೋಜನೆಯಡಿ ರೈತರಿಗೆ ನ್ಯಾಯಯುತ ಪರಿಹಾರ ದೊರೆಯಬೇಕು ಹಾಗೂ ವಿಮೆ ಪಾವತಿಯಲ್ಲಿ ಉಂಟಾಗಿರುವ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ.



Ad Widget

ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಸದಸ್ಯರು ಸೇರಿದಂತೆ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಬೆಳೆ ವಿಮೆಯಲ್ಲಿ ಆಗಿರುವ ಅನ್ಯಾಯದ ವಿರುದ್ಧ ಒಗ್ಗಟ್ಟಿನಿಂದ ಹಕ್ಕೊತ್ತಾಯ ಮಂಡಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.

Continue Reading

ಸ್ಥಳೀಯ

Dharmasthala-ಅ. 11 ರಿಂದ 19 : ಧರ್ಮಸ್ಥಳದಲ್ಲಿ ನವರಾತ್ರಿ ವೈಭವ

Published

on



Ad Widget

Ad Widget

Ad Widget

Ad Widget

ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಇದೇ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ. ಪ್ರತಿ ದಿನ ರಾತ್ರಿ ಅಮ್ಮನವರ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯುತ್ತದೆ.

Ad Widget

Ad Widget

Ad Widget

Ad Widget

ಉಜಿರೆ: ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಇದೇ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ. ಪ್ರತಿ ದಿನ ರಾತ್ರಿ ಅಮ್ಮನವರ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯುತ್ತದೆ.

Ad Widget

Ad Widget

Ad Widget alt="Ad Widget"/>

Ad Widget

ದೇವಸ್ಥಾನದ ಎದುರು ಇರುವ ಪ್ರವಚನಮಂಟಪದಲ್ಲಿ ಸಂಜೆ ಆರು ಗಂಟೆಯಿಂದ ಒಂಭತ್ತು ಗಂಟೆ ವರೆಗೆ ನಾಡಿನ ಖ್ಯಾತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ.

Ad Widget

Ad Widget <> Ad Widget

ಅ. 11: ಭಾನುವಾರ: ಕುಮಾರಿ ಪ್ರಾಪ್ತಿ ಶೆಟ್ಟಿ, ಧರ್ಮಸ್ಥಳ ಮತ್ತು ಕುಮಾರಿ ಆದ್ವಿ, ನಿಡಿಗಲ್ (ಭಕ್ತಿಸಂಗೀತ), ಅ. 12: ಸೋಮವಾರ: ಪವಿತ್ರವಿನಯ್ ಮಯ್ಯ ಅರ್ಕುಳ, ಮಂಗಳೂರು (ಸುಗಮ ಸಂಗೀತ), ಅ. 13: ಮಂಗಳವಾರ: ಕುಮಾರಿ ಮಾನ್ಸಿ, ಮೈಸೂರು (ಭಕ್ತಿಸಂಗೀತ), ಅ. 14: ಬುಧವಾರ: ಮಾಸ್ಟರ್ ಆಗಮ, ಪೆರ್ಲ, ಮಂಗಳೂರು (ಕರ್ನಾಟಕ ಶಾಸ್ತ್ರೀಯ ಸಂಗೀತ), ಅ. 15: ಗುರುವಾರ: ಕುಮಾರಿ ಧೃತಿ ಬಿ. ಆತ್ರೇಯಾಸ್, ಕುಮಾರಿ ಧನ್ವಿ ಬಿ. ಆತ್ರೇಯಾಸ್ ಮತ್ತು ಮಾಸ್ಟರ್ ಅಸ್ರಮೇಯ ಗುರುಪ್ರಸಾದ್, ಬೆಂಗಳೂರು (ನೃತ್ಯ, ಗಾನಲಹರಿ), ಅ. 16: ಶುಕ್ರವಾರ: ಸನತ್‌ಕುಮಾರ್, ಬೆಂಗಳೂರು (ವಯಲಿನ್ ವಾದನ), ಅ. 17: ಶನಿವಾರ: ಕುಮಾರಿ ಮಯೂರಿ ಭಟ್ ಪೊಳಲಿ, ಬಂಟ್ವಾಳ (ಕರ್ನಾಟಕ ಶಾಸ್ತ್ರೀಯ ಸಂಗೀತ), ಅ. 18: ಆದಿತ್ಯವಾರ: ಕುಮಾರಿ ಐಶ್ವರ್ಯ ಜೋಗಿ ಮತ್ತು ತಂಡ, ಕುಂದಾಪುರ (ಸುಮಧುರ ಗಾನವೈಭವ), ಅ. 19: ಸೋಮವಾರ: ಕುಮಾರಿ ಅರ್ಚಿಷಾ ರಾವ್ ಮತ್ತು ಬಳಗ, ಬೆಂಗಳೂರು (ಸಂಜೆ ಗಂಟೆ 6.30 ರಿಂದ 8.30). ಮಲ್ಲಿಕಾಮಟ್ಟಿ ಮತ್ತು ಬಳಗ, ಪೊಳಲಿ (ರಾತ್ರಿ ಗಂಟೆ 9 ರಿಂದ 11.30) ಭಕ್ತಿ ಸಂಗೀತ.



Ad Widget
Ad Widget
Continue Reading

ಸ್ಥಳೀಯ

Excel-ಎಕ್ಸೆಲ್ ಗುರು ನಮನ 2026: ಸಾಮರಸ್ಯವೇ ಸಮಾಜದ ಉನ್ನತಿಗೆ ತಳಪಾಯ: ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ

Published

on



Ad Widget

Ad Widget

Ad Widget

Ad Widget

ಎಕ್ಸೆಲ್ ಗುರುವಾಯನ ಕೆರೆಯಲ್ಲಿ ನಡೆದ ಗುರು ನಮನ 2026 ಕಾರ್ಯಕ್ರಮದಲ್ಲಿ ಮಾಣಿಲ ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದ ಪರಮ ಪೂಜ್ಯ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಮಾತನಾಡಿದರು.

Ad Widget

Ad Widget

Ad Widget

Ad Widget

ಗುರುವಾಯನಕೆರೆ, ಅ.4 : “ಸಮಾಜದಲ್ಲಿ ಎಲ್ಲರಿಗೂ ಬದುಕುವ ಅವಕಾಶವಿದೆ. ಪ್ರತಿಯೊಂದು ವರ್ಗ, ಸಮುದಾಯಕ್ಕೂ ಈ ಸಮಾಜ ಆಶ್ರಯ ನೀಡಿದೆ. ಪ್ರತಿಯೊಬ್ಬರ ನಂಬಿಕೆ ಆಚರಣೆಗಳು ಬೇರೆ ಬೇರೆಯಾಗಿರುತ್ತವೆ. ಅವರವರ ನಂಬಿಕೆ ಮತ್ತು ಆಚರಣೆಗಳನ್ನು ತಿರಸ್ಕರಿಸಿದಾಗ ಸಮಾಜದಲ್ಲಿ ಘರ್ಷಣೆಗಳು ಏರ್ಪಡುತ್ತವೆ. ಪ್ರತಿಯೊಬ್ಬರನ್ನೂ ಸಾಮರಸ್ಯದಿಂದ ನೋಡುವ ಗುಣ ನಮ್ಮದಾಗಬೇಕು. ಸಾಮರಸ್ಯವೇ ಸಮಾಜದ ಉನ್ನತಿಗೆ ಅಡಿಪಾಯವಿದ್ದಂತೆ” ಎಂದು ಎಕ್ಸೆಲ್ ಗುರುವಾಯನ ಕೆರೆಯಲ್ಲಿ ನಡೆದ ಗುರು ನಮನ 2026 ಕಾರ್ಯಕ್ರಮದಲ್ಲಿ ಮಾಣಿಲ ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದ ಪರಮ ಪೂಜ್ಯ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಹೇಳಿದರು.

Ad Widget

Ad Widget

Ad Widget alt="Ad Widget"/>

Ad Widget

ಸ್ವಾಮೀಜಿಯವರು ಮಾತನಾಡುತ್ತಾ ಎಕ್ಸೆಲ್ ವಿದ್ಯಾಸಂಸ್ಥೆಯು ಸುಂದರ ಪರಿಸರದಲ್ಲಿ ನಿರ್ಮಾಣಗೊಂಡಿದೆ. ಈ ವಿದ್ಯಾಸಂಸ್ಥೆಯಿಂದ ವಿದ್ಯಾರ್ಥಿಗಳ ಭವಿಷ್ಯ ರೂಪಗೊಳ್ಳುತ್ತದೆ. ವಿದ್ಯಾರ್ಥಿಗಳು ಪರಸ್ಪರ ಗೌರವಿಸಿರಿ. ಈ ಸಮಾಜಕ್ಕೆ ಒಳ್ಳೆಯದನ್ನು ಬಯಸಿ. ನೀವು ಓದಿದ ವಿದ್ಯಾ ಸಂಸ್ಥೆಗೆ ಚಿರಋಣಿಯಾಗಿರಬೇಕೆಂದು, ಈ ಸಂಸ್ಥೆಯು ಸಾವಿರಾರು ಶಿಕ್ಷಕರನ್ನು ನಿರಂತರವಾಗಿ ಗೌರವಿಸುತ್ತಾ ಬಂದಿರುವುದು ನಿಜವಾಗಿಯೂ ಅತ್ಯುತ್ತಮ ಬೆಳವಣಿಗೆಯಾಗಿದೆ. ಇದು ಸುಮಂತ್ ಕುಮಾರ್ ಅವರ ಈ ನಿಸ್ವಾರ್ಥ ಸೇವೆಗೆ ಸಾಕ್ಷಿಯಾಗಿದೆ ಎಂದರು.

Ad Widget

Ad Widget <> Ad Widget

ಸುಬ್ರಮಣ್ಯದ ಶ್ರೀ ಕುಕ್ಕೆ ಸುಬ್ರಹ್ಮಣ್ಯ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರಾದ ಸೋಮಶೇಖರ್ ನಾಯಕ್ ಇವರು ಮಾತನಾಡುತ್ತಾ ” ವಿದ್ಯಾರ್ಥಿಗಳು ಕಷ್ಟಕರ ವಿಷಯಗಳ ಕಡೆಗೆ ಹೆಚ್ಚು ಗಮನ ಕೊಡಬೇಕು. ನೀವೆಲ್ಲ ಎಕ್ಸೆಲ್ ವಿದ್ಯಾಸಂಸ್ಥೆಯಲ್ಲಿ ಓದುತ್ತಿರುವುದು ನಿಮ್ಮೆಲ್ಲರ ಅದೃಷ್ಟವೇ ಸರಿ. ಈ ಸಂಸ್ಥೆಯ ಅಧ್ಯಕ್ಷರಾದ ನುಮಂತ್ ಕುಮಾರ್ ಜೈನ್ ಇವರು ಉದಾರ ವ್ಯಕ್ತಿತ್ವದ ವ್ಯಕ್ತಿ. ಅವರ ಸೇವಾ ಮನೋಭಾವದಿಂದಲೇ ಈ ಶಿಕ್ಷಣ ಸಂಸ್ಥೆಯು ಎತ್ತರಕ್ಕೆ ಬೆಳೆಯುತ್ತಿದೆ. ಜಿಲ್ಲೆಯ ಯಾವುದೇ ಶೈಕ್ಷಣಿಕ ಸಾಮಾಜಿಕ ಧಾರ್ಮಿಕ ಕಾರ್ಯಕ್ರಮಗಳಿಗೆ ಸುಮಂತ್ ಅವರ ಕೊಡುಗೆ ಅಪಾರವಾದದ್ದು. ಈ ಸಂಸ್ಥೆಗೆ ನನ್ನನ್ನು ಆಹ್ವಾನಿಸಿ ಸನ್ಮಾನಿಸಿದ್ದೀರಿ. ನನ್ನಲ್ಲಿ ಕೃತಾರ್ಥತೆ ಭಾವ ಮೂಡುತ್ತಿದೆ. ಎಕ್ಸೆಲ್ ವಿದ್ಯಾಸಂಸ್ಥೆಗೆ ನಾನು ಚಿರಋಣಿ” ಎಂದು ಸಂತಸ ವ್ಯಕ್ತಪಡಿಸಿದರು.



Ad Widget

ಮೂಲ್ಕಿಯ ವಿಜಯ ಕಾಲೇಜಿನ ವಿಶ್ರಾಂತ ಪಾಚಾರ್ಯರಾದ ಡಾ .ನಾರಾಯಣ ಪೂಜಾರಿ ಮತ್ತು ಸಾಮಾಜಿಕ ಮತ್ತು ಧಾರ್ಮಿಕ ಮುಖಂಡರಾದ ಸಂತೋಷ್ ಕುಮಾರ್ ಕಾಪಿನಡ್ಕ ಇವರು ವಿದ್ಯಾರ್ಥಿಗಳ ಭವಿಷ್ಯಕ್ಕೆ ಶುಭ ಕೋರಿದರು.

Ad Widget

Ad Widget

ಎಕ್ಸೆಲ್ ವಿದ್ಯಾ ಸಂಸ್ಥೆಯ ಹಿತೈಷಿಗಳಾದ ರತ್ನರಾಜ್ ಜೈನ್ ಮತ್ತು ಪತ್ರಿಕೋದ್ಯಮಿಗಳಾದ ಸಂತೋಷ್ ಕೋಟ್ಯಾನ್ ಇವರು ಈ ಕಾರ್ಯಕ್ರಮದ ಭಾಗವಾಗಿ ಸನ್ಮಾನ ಸ್ವೀಕರಿಸಿದರು.

ಸಂಸ್ಥೆಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು ಅಧ್ಯಕ್ಷೀಯ ಭಾಷಣವನ್ನು ಮಾಡುತ್ತಾ “ನಮ್ಮ ಎಕ್ಸೆಲ್ ಸಂಸ್ಥೆಯ ವಿದ್ಯಾರ್ಥಿಗಳು ದೇಶವಿದೇಶಗಳಲ್ಲಿ ಉನ್ನತ ಶಿಕ್ಷಣವನ್ನು ಮಾಡುತ್ತಿದ್ದಾರೆ . ಇಲ್ಲಿ ಓದಿದ ವಿದ್ಯಾರ್ಥಿಗಳು ಆದರ್ಶ ವ್ಯಕ್ತಿಗಳಾಗಿ ರೂಪಗೊಳ್ಳುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ ಗುರುಗಳನ್ನು ಗೌರವಿಸುವ ಮೂಲಕ ನಮ್ಮಲ್ಲಿ ಧನ್ಯತಾಭಾವ ಮೂಡಿದೆ. ಶಿಕ್ಷಕರು ಜಗತ್ತಿನ ಪ್ರಥಮ ಪೂಜ್ಯರು . ಅಂತಹ ಶಿಕ್ಷಕರನ್ನು ಸನ್ಮಾನಿಸುವುದು ನಮ್ಮ ಸೌಭಾಗ್ಯ” ಎಂದು ಹೇಳಿದರು.

ಕಾಲೇಜಿನ ಬ್ರೋಚರ್ಸ್ ಅನ್ನು ಈ ಸಂದರ್ಭದಲ್ಲಿ ಲೋಕಾರ್ಪಣೆ ಮಾಡಲಾಯಿತು.ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆ, ತಾಲೂಕು ಗ್ರಾಮಗಳಲ್ಲಿ ಶಿಕ್ಷಕ ವೃತ್ತಿಯನ್ನು ಮಾಡುತ್ತ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುತ್ತಿರುವ 300 ಹೆಚ್ಚು ಶಿಕ್ಷಕರನ್ನು ಗೌರವಿಸಿದ್ದು ಅತ್ಯಂತ ವಿರಳ ಮತ್ತು ಸೃಜನಾತ್ಮಕ ಕಾರ್ಯಕ್ರಮವಾಗಿತ್ತು. ಎಲ್ಲ ಶಿಕ್ಷಕರಿಗೆ ಹಾರ , ಶಾಲು, ಪೇಟ ಮತ್ತು ಸ್ಮರಣಿಕೆ, ಉಡುಗೊರೆಗಳನ್ನು ನೀಡಿ ಸನ್ಮಾನಿಸಲಾಯಿತು. ಪ್ರಾಂಶುಪಾಲರಾದ ಡಾ ನವೀನ್ ಕುಮಾರ್ ಮರಿಕೆ ಸ್ವಾಗತಿಸಿದರು. ಎಕ್ಸೆಲ್ ಟೆಕ್ನೋ ಸ್ಕೂಲ್ ವೇಣೂರಿನ ಮುಖ್ಯೋಪಾಧ್ಯಯರಾದ ಶಾಂತಿರಾಜ್ ಜೈನ್ ವಂದಿಸಿದರು.

ಉಪನ್ಯಾಸಕರಾದ ಪ್ರಸನ್ನ ಭೋಜ, ತಿಪ್ಪೇಸ್ವಾಮಿ, ಪ್ರಜ್ವಿತ್ ರೈ, ಅನನ್ಯ ಜೈನ್, ವೈಷ್ಣವಿಯವರು ಕಾರ್ಯಕ್ರಮವನ್ನು ನಿರೂಪಿಸಿದರು. ದ್ವಿತೀಯ ಪಿಯು ವಿದ್ಯಾರ್ಥಿಗಳು ಪ್ರಾರ್ಥನೆ ಹಾಡುವ ಮೂಲಕ ಈ ಕಾರ್ಯಕ್ರಮಕ್ಕೆ ಆರಂಭವನ್ನು ಒದಗಿಸಿದರು.

ಪ್ರಾಂಶುಪಾಲರಾದ ಡಾ. ನವೀನ್ ಕುಮಾರ್ ಮರಿಕೆ, ಡಾ. ಪ್ರಜ್ವಲ್, ಉಪ ಪ್ರಾಚಾರ್ಯರಾದ ರೋಹಿತ್, ಹರೀಶ್ ಕುಮಾರ್ ಗುರುವಾಯನಕೆರೆ ಟೆಕ್ನೋ ಸ್ಕೂಲಿನ ಮುಖ್ಯ ಶಿಕ್ಷಕಿ ಸುಮಿತ್ರ, ವೇಣೂರು ಶಾಲೆಯ ಮುಖ್ಯೋಪಾಧ್ಯಾಯರಾದ ಶಾಂತಿರಾಜ್ ಜೈನ್, ವಿದ್ಯಾರ್ಥಿಗಳು, ಪೋಷಕರು, ಬೋಧಕ ಬೋಧಕೇತರ ಸಿಬ್ಬಂದಿಯವರು ಭಾಗವಹಿಸಿದ್ದರು.

ಎಕ್ಸೆಲ್ ಸಿಬ್ಬಂದಿಯಿಂದ ಸಾಂಸ್ಕೃತಿಕ ವೈಭವ: ಗಿರಿಜಾ ಕಲ್ಯಾಣ ಹಾಗೂ ತಾರಕಾಸುರ ವಧೆ ಯಕ್ಷಗಾನ ಪ್ರದರ್ಶನ

ಗುರು ನಮನ ಕಾರ್ಯಕ್ರಮದ ಅಂಗವಾಗಿ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜನೆಗೊಂಡಿದ್ದವು. ಎಕ್ಸೆಲ್ ಪಿಯು ಕಾಲೇಜಿನ ಸಿಬ್ಬಂದಿಯ ಜೊತೆಗೆ ಎಕ್ಸೆಲ್ ಟೆಕ್ನೋ ಸ್ಕೂಲ್ ಗುರುವಾಯನಕೆರೆ ಮತ್ತು ವೇಣೂರು ಶಾಲೆಗಳ ಸಿಬ್ಬಂದಿಯವರು ಭಾಗವಹಿಸಿದ್ದರು.

ಈ ಕಾರ್ಯಕ್ರಮದಲ್ಲಿ ಸಿಬ್ಬಂದಿ ವರ್ಗದವರು ವಿವಿಧ ನೃತ್ಯ,ಹಾಡು, ರೂಪಕ, ಭರತನಾಟ್ಯ ವೈವಿಧ್ಯಮಯ ಕಾರ್ಯಕ್ರಮಗಳನ್ನು ನಡೆಸಿಕೊಡುವ ಮೂಲಕ ಸರ್ವರನ್ನು ರೋಮಾಂಚನಗೊಳಿಸಿದರು. ಗಿರಿಜಾ ಕಲ್ಯಾಣ ಮತ್ತು ತಾರಕಾಸುರ ವಧೆ ಎನ್ನುವ ಯಕ್ಷಗಾನ ಪ್ರಸಂಗವನ್ನು ಪ್ರದರ್ಶಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading