Connect with us

ಸ್ಥಳೀಯ

Dharmasthala-ಧರ್ಮಸ್ಥಳದಲ್ಲೊಂದು ಸಿನಿಮೀಯ ಮಾದರಿ ಘಟನೆ..! ಸರ್ಕಸ್ ತಂಡದ ಜೊತೆ 12ನೇ ವಯಸ್ಸಿನಲ್ಲಿ ಓಡಿ ಹೋಗಿದ್ದ ಬಾಲಕ 26 ವರ್ಷದ ನಂತರ ಮರಳಿ ತಾಯಿ ಮಡಿಲಿಗೆ : ‘ಸತೀಶ್’ ಈಗ ‘ಸಲೀಂ’ನಾದರೂ ಕರೆಯಿತು ಕರುಳಿನ ಕೂಗು

Published

on

Ad Widget

Ad Widget

Ad Widget

Ad Widget

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ಸಿನಿಮೀಯ ಮಾದರಿಯ ಅಚ್ಚರಿಯ ಘಟನೆಯೊಂದು ನಡೆದಿದೆ. ಬರೋಬ್ಬರಿ 26 ವರ್ಷಗಳ ಹಿಂದೆ 12ನೇ ವಯಸ್ಸಿನಲ್ಲಿ ಮನೆ ಬಿಟ್ಟು ನಾಪತ್ತೆಯಾಗಿದ್ದ ಬಾಲಕನೊಬ್ಬ, ಈಗ ಮರಳಿ ಬಂದು ತನ್ನ ತಾಯಿಯನ್ನು ಸೇರಿಕೊಂಡಿದ್ದಾನೆ. ಅಂದು ಮನೆಯವರಿಂದ ದೂರವಾಗಿದ್ದ ‘ಸತೀಶ್’ ಇಂದು ‘ಸಲೀಂ’ ಆಗಿ ಮನೆಗೆ ಬಂದಿಳಿದಿದ್ದಾನೆ.

Ad Widget

Ad Widget

Ad Widget

Ad Widget

ಧರ್ಮಸ್ಥಳ: ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ಸಿನಿಮೀಯ ಮಾದರಿಯ ಅಚ್ಚರಿಯ ಘಟನೆಯೊಂದು ನಡೆದಿದೆ. ಬರೋಬ್ಬರಿ 26 ವರ್ಷಗಳ ಹಿಂದೆ 12ನೇ ವಯಸ್ಸಿನಲ್ಲಿ ಮನೆ ಬಿಟ್ಟು ನಾಪತ್ತೆಯಾಗಿದ್ದ ಬಾಲಕನೊಬ್ಬ, ಈಗ ಮರಳಿ ಬಂದು ತನ್ನ ತಾಯಿಯನ್ನು ಸೇರಿಕೊಂಡಿದ್ದಾನೆ. ಅಂದು ಮನೆಯವರಿಂದ ದೂರವಾಗಿದ್ದ ‘ಸತೀಶ್’ ಇಂದು ‘ಸಲೀಂ’ ಆಗಿ ಮನೆಗೆ ಬಂದಿಳಿದಿದ್ದಾನೆ.

Ad Widget

Ad Widget alt="Ad Widget"/>

Ad Widget

ಬಾಲಕ ಸತೀಶ್ ಸಲೀಂ ಆಗಿದ್ದು ಹೇಗೆ?
2000ನೇ ಇಸವಿಯಲ್ಲಿ ಧರ್ಮಸ್ಥಳಕ್ಕೆ ಬಂದಿದ್ದ ಸರ್ಕಸ್ ತಂಡದ ಆಕರ್ಷಣೆಗೆ ಒಳಗಾಗಿ ಬಾಲಕ ಸತೀಶ್ ಊರು ಬಿಟ್ಟಿದ್ದನು. ದೇಶದಾದ್ಯಂತ ಸರ್ಕಸ್ ತಂಡದೊಂದಿಗೆ ಸುತ್ತಾಡಿದ ಆತ ಕೊನೆಗೆ ಮಹಾರಾಷ್ಟ್ರದಲ್ಲಿ ನೆಲೆನಿಂತಿದ್ದನು. ಅಲ್ಲಿಯೇ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡು ತನ್ನ ಹೆಸರನ್ನು ‘ಸಲೀಂ ಅಬ್ದುಲ್ ಅನ್ಸಾರಿ’ ಎಂದು ಬದಲಾಯಿಸಿಕೊಂಡಿದ್ದನು. ಸದ್ಯ ಅಲ್ಲಿಯೇ ವಿವಾಹವಾಗಿ ಇಬ್ಬರು ಮಕ್ಕಳ ತಂದೆಯೂ ಆಗಿರುವ ಸತೀಶ್‌ಗೆ, ತನ್ನ ಮಾತೃಭಾಷೆಯಾದ ತುಳು ಮತ್ತು ಕನ್ನಡ ಸಂಪೂರ್ಣವಾಗಿ ಮರೆತುಹೋಗಿದೆ. ಆತ ಈಗ ಕೇವಲ ಹಿಂದಿಯಲ್ಲಿ ಮಾತ್ರ ಮಾತನಾಡುತ್ತಿದ್ದಾನೆ.

Ad Widget

Ad Widget <> Ad Widget

ನೆನಪು ಮರುಕಳಿಸಿದ್ದು ಪ್ರವಾಸದ ವೇಳೆ:
ಜೂನ್ 9ರಂದು ಸಲೀಂ (ಸತೀಶ್) ತನ್ನ ಮಹಾರಾಷ್ಟ್ರದ ಸ್ನೇಹಿತರೊಂದಿಗೆ ಪ್ರವಾಸಿಗನಾಗಿ ಧರ್ಮಸ್ಥಳಕ್ಕೆ ಬಂದಿದ್ದನು. ಈ ವೇಳೆ ತಾನು ಈ ಹಿಂದೆ ಸರ್ಕಸ್ ನೋಡಿದ್ದ ಜಾಗಕ್ಕೆ ಬಂದಾಗ ಆತನಿಗೆ ಹಳೆಯ ನೆನಪುಗಳು ಹಠಾತ್ತಾಗಿ ಕಾಡಲಾರಂಭಿಸಿದವು. ತನ್ನ ತಮ್ಮಂದಿರ ಹೆಸರು ನೆನಪಿದ್ದ ಕಾರಣ, ಸ್ಥಳೀಯರ ಸಹಾಯದಿಂದ ಅಶೋಕನಗರದಲ್ಲಿರುವ ತನ್ನ ಹಳೆಯ ಮನೆಯನ್ನು ಪತ್ತೆಹಚ್ಚಿದ್ದಾನೆ.

ಕರುಳಿನ ಸಂಬಂಧಕ್ಕೆ ಭಾಷೆಯ ಹಂಗಿಲ್ಲ:
ಮನೆಯ ಬಾಗಿಲಿಗೆ ಬಂದು ನಿಂತ ಮಗನನ್ನು ಕಂಡ ತಾಯಿಯ ಕಣ್ಣಲ್ಲಿ ಆನಂದಬಾಷ್ಪ ಹರಿದಿದೆ. ಮಗನಿಗೆ ಕನ್ನಡ ಬರುವುದಿಲ್ಲ, ಇತ್ತ ತಾಯಿಗೆ ಹಿಂದಿ ಬರುವುದಿಲ್ಲ. ಆದರೂ ಭಾಷೆಯ ಮಿತಿ ಮೀರಿದ ಪ್ರೀತಿಯಿಂದ ಇಬ್ಬರೂ ಪರಸ್ಪರ ಅಪ್ಪಿಕೊಂಡು ಕಣ್ಣೀರಿಟ್ಟಿದ್ದಾರೆ. ಮಗ ಸಿಗಲಿ ಎಂದು ಧರ್ಮಸ್ಥಳ ಮಂಜುನಾಥ ಸ್ವಾಮಿ, ಕಟೀಲು ಅಮ್ಮನವರು ಮತ್ತು ಪಣೋಲಿಬೈಲ್ ದೈವಕ್ಕೆ ತಾಯಿ ಹೊತ್ತಿದ್ದ ಹರಕೆ ಕೊನೆಗೂ ಫಲಿಸಿದಂತಾಗಿದೆ.

Ad Widget

Ad Widget

“ನಾನು ಸಾಯುವ ಮೊದಲು ನನ್ನ ಮಗನನ್ನು ನೋಡಬೇಕು” ಎಂದು ಹಂಬಲಿಸುತ್ತಿದ್ದ ತಾಯಿಯ ಆಸೆ ಈಡೇರಿದೆ. ಸದ್ಯ ಕುಟುಂಬದವರೊಂದಿಗೆ ಕೆಲವು ದಿನಗಳನ್ನು ಕಳೆದ ಸತೀಶ್, ಸದ್ಯ ಮಹಾರಾಷ್ಟ್ರದಲ್ಲಿರುವ ತನ್ನ ಪತ್ನಿ ಮತ್ತು ಮಕ್ಕಳ ಬಳಿಗೆ ಮರಳಿದ್ದಾನೆ. ಮಗ ಜೀವಂತವಾಗಿದ್ದಾನೆ ಮತ್ತು ಸುಖವಾಗಿದ್ದಾನೆ ಎಂಬ ಸತ್ಯ ತಿಳಿದಿದ್ದೇ ತಾಯಿಗೆ ದೊಡ್ಡ ನೆಮ್ಮದಿ ನೀಡಿದೆ.

Ad Widget
Click to comment

Leave a Reply

ಅಪರಾಧ

Punacha-ಪುಣಚ: ಅಕ್ರಮ ಮರಳುಗಾರಿಕೆ ಪತ್ತೆ; ಪಿಕಪ್ ವಾಹನ ಜಪ್ತಿ- ನಾಲ್ವರು ವಶಕ್ಕೆ

Published

on

Ad Widget

Ad Widget

Ad Widget

Ad Widget

ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ದಂಬೆ ಎಂಬಲ್ಲಿ ಸಾರ್ವಜನಿಕ ತೋಡಿನಿಂದ ಅಕ್ರಮವಾಗಿ ಮರಳು ತೆಗೆದು ಸಾಗಾಟಕ್ಕೆ ಸಿದ್ಧಪಡಿಸುತ್ತಿದ್ದ ನಾಲ್ವರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಮರಳು ತುಂಬಿದ್ದ ಪಿಕಪ್ ವಾಹನವನ್ನು ಜಪ್ತಿ ಮಾಡಿದ್ದಾರೆ.

Ad Widget

Ad Widget

Ad Widget

Ad Widget

ವಿಟ್ಲ, ನ.20: ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ದಂಬೆ ಎಂಬಲ್ಲಿ ಸಾರ್ವಜನಿಕ ತೋಡಿನಿಂದ ಅಕ್ರಮವಾಗಿ ಮರಳು ತೆಗೆದು ಸಾಗಾಟಕ್ಕೆ ಸಿದ್ಧಪಡಿಸುತ್ತಿದ್ದ ನಾಲ್ವರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಮರಳು ತುಂಬಿದ್ದ ಪಿಕಪ್ ವಾಹನವನ್ನು ಜಪ್ತಿ ಮಾಡಿದ್ದಾರೆ.

Ad Widget

Ad Widget alt="Ad Widget"/>

Ad Widget

ಆರೋಪಿಗಳನ್ನು ಪುಣಚ ಗ್ರಾಮದ ವಿಶ್ವಾಸ್ ಹೆಚ್. (27), ಶಶಿಧರ (45), ಹರೀಶ್ ಅಜ್ಜಿನಡ್ಕ (35) ಹಾಗೂ ಕೇಪು ಗ್ರಾಮದ ಪುಷ್ಪರಾಜ್ ಎನ್. (32) ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ನ.19ರಂದು ಬೆಳಿಗ್ಗೆ ಪುಣಚ ಗ್ರಾಮದ ದಂಬೆ ಎಂಬಲ್ಲಿನ ಸಾರ್ವಜನಿಕ ತೋಡಿನಿಂದ ಮಾರಾಟ ಮಾಡುವ ಉದ್ದೇಶದಿಂದ ಅಕ್ರಮವಾಗಿ ಮರಳು ತೆಗೆದು ಪಿಕಪ್ ವಾಹನಕ್ಕೆ ತುಂಬಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ವಿಟ್ಲ ಪೊಲೀಸ್ ಠಾಣೆಯ ತನಿಖಾ ವಿಭಾಗದ ಪಿಎಸ್‌ಐ ರತ್ನಕುಮಾರ್ ಅವರಿಗೆ ಲಭಿಸಿತ್ತು.

ಮಾಹಿತಿ ಮೇರೆಗೆ ಪೊಲೀಸ್ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ, ನಾಲ್ವರು ವ್ಯಕ್ತಿಗಳು ತೋಡಿನಿಂದ ಮರಳು ತೆಗೆದು ಪಿಕಪ್ ವಾಹನಕ್ಕೆ ತುಂಬಿಸುತ್ತಿರುವುದು ಕಂಡುಬಂದಿದೆ. ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮರಳು ತೆಗೆಯುತ್ತಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ, ಸ್ಥಳದಲ್ಲಿದ್ದ ಮರಳು ತುಂಬಿದ KA-70-8785 ನೋಂದಣಿಯ ಪಿಕಪ್ ವಾಹನ ಸೇರಿದಂತೆ ಇತರ ಸೊತ್ತುಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.

Ad Widget

Ad Widget

ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 236/2026ರಂತೆ ಪ್ರಕರಣ ದಾಖಲಿಸಿಕೊಂಡಿದ್ದು, ಕರ್ನಾಟಕ ಕಿರು ಖನಿಜ ರಿಯಾಯಿತಿ ನಿಯಮಗಳು, MMDR ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಕಲಂಗಳಡಿ ತನಿಖೆ ಮುಂದುವರಿದಿದೆ.

Ad Widget
Continue Reading

ಅಪರಾಧ

Vitla-ವಿಟ್ಲ: ಪರವಾನಿಗೆ ಇಲ್ಲದೆ ಕೆಂಪು ಕಲ್ಲು ಸಾಗಾಟ; ಲಾರಿ ವಶ, ಚಾಲಕ–ಮಾಲೀಕನ ವಿರುದ್ಧ ಪ್ರಕರಣ

Published

on

Ad Widget

Ad Widget

Ad Widget

Ad Widget

ಯಾವುದೇ ಪರವಾನಿಗೆ ಅಥವಾ ಸೂಕ್ತ ದಾಖಲೆಗಳಿಲ್ಲದೆ ಲಾರಿಯಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿಯನ್ನು ವಿಟ್ಲ ಪೊಲೀಸರು ವಶಪಡಿಸಿಕೊಂಡಿದ್ದು, ಚಾಲಕ ಹಾಗೂ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

Ad Widget

Ad Widget

Ad Widget

Ad Widget

ವಿಟ್ಲ,ನ.20: ಯಾವುದೇ ಪರವಾನಿಗೆ ಅಥವಾ ಸೂಕ್ತ ದಾಖಲೆಗಳಿಲ್ಲದೆ ಲಾರಿಯಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿಯನ್ನು ವಿಟ್ಲ ಪೊಲೀಸರು ವಶಪಡಿಸಿಕೊಂಡಿದ್ದು, ಚಾಲಕ ಹಾಗೂ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ನ.19ರಂದು ಮಧ್ಯಾಹ್ನ ಕೇರಳ ಕಡೆಯಿಂದ ಮಂಚಿ ಮಾರ್ಗವಾಗಿ ವೀರಕಂಭ ಕಡೆಗೆ ಲಾರಿಯಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ವಿಟ್ಲ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಉಪ ನಿರೀಕ್ಷಕ ಜಯರಾಮ ಕೆ. ಅವರಿಗೆ ಲಭಿಸಿತ್ತು.

Ad Widget

Ad Widget <> Ad Widget

ಮಾಹಿತಿಯ ಮೇರೆಗೆ ಪೊಲೀಸ್ ಸಿಬ್ಬಂದಿಗಳೊಂದಿಗೆ ಬಂಟ್ವಾಳ ತಾಲೂಕಿನ ಬೊಳಂತೂರು ಗ್ರಾಮದ ಕೊಕ್ಕಪುನಿ ಎಂಬಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, KA-19-AA-0601 ನೋಂದಣಿಯ ಲಾರಿಯನ್ನು ತಡೆದು ಪರಿಶೀಲಿಸಿದರು. ಈ ವೇಳೆ ಯಾವುದೇ ಪರವಾನಿಗೆ ಅಥವಾ ಸೂಕ್ತ ದಾಖಲೆಗಳಿಲ್ಲದೆ ಕೆಂಪು ಕಲ್ಲು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.

ಪೊಲೀಸರು ಲಾರಿಯನ್ನು ವಶಪಡಿಸಿಕೊಂಡಿದ್ದು, ಚಾಲಕ ಮೊಹಮ್ಮದ್ ರಫೀಕ್ (62) ಹಾಗೂ ಲಾರಿ ಮಾಲೀಕ ಮೊಹಮ್ಮದ್ ಅಶ್ರಫ್ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 237/2026ರಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Ad Widget

Ad Widget

ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2), MMDR ಕಾಯ್ದೆ 1957ರ ಕಲಂ 4(1), 21 ಹಾಗೂ ಕರ್ನಾಟಕ ಕಿರು ಖನಿಜ ನಿಯಮಾವಳಿ 1994ರ ಕಲಂ 3, 44ರಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ad Widget
Continue Reading

ರಾಜಕೀಯ

BJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ

Published

on

Ad Widget

Ad Widget

Ad Widget

Ad Widget

ಗಡಿಪಾರಿಗೊಳಗಾದ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಅವರ ನಿವಾಸಕ್ಕೆ ಬಿಜೆಪಿ ಮುಖಂಡರಾದ ಸಹಜ್ ರೈ ಬಳಜ್ಜ, ಪ್ರಸನ್ನ ದರ್ಬೆ ಹಾಗೂ ಅಜಿತ್ ರೈ ಹೊಸಮನೆ ಭೇಟಿ ನೀಡಿ ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿದರು.

Ad Widget

Ad Widget

Ad Widget

Ad Widget

ಪುತ್ತೂರು: ಗಡಿಪಾರಿಗೊಳಗಾದ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಅವರ ನಿವಾಸಕ್ಕೆ ಬಿಜೆಪಿ ಮುಖಂಡರಾದ ಸಹಜ್ ರೈ ಬಳಜ್ಜ, ಪ್ರಸನ್ನ ದರ್ಬೆ ಹಾಗೂ ಅಜಿತ್ ರೈ ಹೊಸಮನೆ ಭೇಟಿ ನೀಡಿ ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿದರು.

Ad Widget

Ad Widget alt="Ad Widget"/>

Ad Widget

ನರಸಿಂಹ ಮಾಣಿ ಅವರು ಎದುರಿಸುತ್ತಿರುವ ಪ್ರಸಕ್ತ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕುಟುಂಬದ ಸದಸ್ಯರಿಗೆ ಧೈರ್ಯ ಹಾಗೂ ಆತ್ಮಸ್ಥೈರ್ಯ ತುಂಬುವ ಉದ್ದೇಶದಿಂದ ಈ ಭೇಟಿ ನಡೆಯಿತು. ಈ ಸಂದರ್ಭದಲ್ಲಿ ಅವರ ತಾಯಿಯ ಯೋಗಕ್ಷೇಮ ವಿಚಾರಿಸಿದ ಮುಖಂಡರು, ಧೈರ್ಯ ಕಳೆದುಕೊಳ್ಳದೆ ಆತ್ಮವಿಶ್ವಾಸದಿಂದ ಇರುವಂತೆ ಪ್ರೇರಣೆ ನೀಡಿದರು.

Ad Widget

Ad Widget <> Ad Widget

ಸಾಮಾಜಿಕ ಹಾಗೂ ಸಂಘಟನಾತ್ಮಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಕಾರ್ಯಕರ್ತರ ಕುಟುಂಬದೊಂದಿಗೆ ಸಮಾಜ ನಿಲ್ಲಬೇಕು ಎಂಬ ಆಶಯವನ್ನು ಈ ಸಂದರ್ಭದಲ್ಲಿ ವ್ಯಕ್ತಪಡಿಸಲಾಯಿತು.

ಭೇಟಿಯ ವೇಳೆ ಬಿಜೆಪಿ ಪುತ್ತೂರು ಮಂಡಲ ಉಪಾಧ್ಯಕ್ಷ ರತನ್ ರೈ ಕುಂಬ್ರ, ಪುತ್ತೂರು ಯುವಮೋರ್ಚಾ ನಗರ ಮಂಡಲ ಅಧ್ಯಕ್ಷ ನಿತೇಶ್ ನೆಲಪ್ಪಾಲು, ಯುವಮೋರ್ಚಾದ ಪವನ್ ಶೆಟ್ಟಿ ಕಂಬಳತ್ತಡ್ಡ, ಪ್ರೀತಮ್ ಶೆಟ್ಟಿ ಪೆರ್ನೆ, ಆದೇಶ್ ಶೆಟ್ಟಿ ಉಪ್ಪಿನಂಗಡಿ, ವಿಶ್ವನಾಥ ಕುಲಾಲ್ ಹಾಗೂ ಹಿಂದೂ ಜಾಗರಣ ವೇದಿಕೆಯ ರಾಜೇಶ್ ಉಪಸ್ಥಿತರಿದ್ದರು.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!