ನಿಧನ ವಾರ್ತೆ
Udupi-ಉಡುಪಿಯಲ್ಲಿ ಹೃದಯವಿದ್ರಾವಕ ಘಟನೆ: ತಾಯಿಯ ಕಂಕುಳಲ್ಲಿದ್ದ ಮಗುವಿನ ತಲೆಗೆ ತೆಂಗಿನಕಾಯಿ ಬಿದ್ದು ಸಾವು..!
ತಾಯಿಯ ಕಂಕುಳಲ್ಲಿ ಸುಖವಾಗಿ ನಿದ್ರಿಸುತ್ತಿರಬೇಕಾದ ಒಂದೂವರೆ ವರ್ಷದ ಹಸುಳೆಯ ಮೇಲೆ ವಿಧಿ ಅಟ್ಟಹಾಸ ಮೆರೆದಿದೆ. ಹಿರಿಯ ಮಗಳನ್ನು ಶಾಲೆಗೆ ಬಿಡಲು ಹೋಗುತ್ತಿದ್ದ ತಾಯಿಯ ಕಂಕುಳಲ್ಲಿದ್ದ ಮಗುವಿನ ತಲೆಗೆ ಆಕಸ್ಮಿಕವಾಗಿ ತೆಂಗಿನಕಾಯಿ ಬಿದ್ದು, ಮಗು ಮೃತಪಟ್ಟಿರುವ ಅತ್ಯಂತ ಘೋರ ಘಟನೆ ಬ್ರಹ್ಮಾವರದ ಹೆರಂಜೆಯಲ್ಲಿ ಮಂಗಳವಾರ ನಡೆದಿದೆ.
ಉಡುಪಿ: ತಾಯಿಯ ಕಂಕುಳಲ್ಲಿ ಸುಖವಾಗಿ ನಿದ್ರಿಸುತ್ತಿರಬೇಕಾದ ಒಂದೂವರೆ ವರ್ಷದ ಹಸುಳೆಯ ಮೇಲೆ ವಿಧಿ ಅಟ್ಟಹಾಸ ಮೆರೆದಿದೆ. ಹಿರಿಯ ಮಗಳನ್ನು ಶಾಲೆಗೆ ಬಿಡಲು ಹೋಗುತ್ತಿದ್ದ ತಾಯಿಯ ಕಂಕುಳಲ್ಲಿದ್ದ ಮಗುವಿನ ತಲೆಗೆ ಆಕಸ್ಮಿಕವಾಗಿ ತೆಂಗಿನಕಾಯಿ ಬಿದ್ದು, ಮಗು ಮೃತಪಟ್ಟಿರುವ ಅತ್ಯಂತ ಘೋರ ಘಟನೆ ಬ್ರಹ್ಮಾವರದ ಹೆರಂಜೆಯಲ್ಲಿ ಮಂಗಳವಾರ ನಡೆದಿದೆ.
ಬ್ರಹ್ಮಾವರದಲ್ಲಿ ಫಾಸ್ಟ್ ಫುಡ್ ಅಂಗಡಿ ನಡೆಸುತ್ತಿರುವ ಪ್ರಶಾಂತ್ ಮತ್ತು ಸುಚಿತ್ರಾ ದಂಪತಿಯ ಒಂದೂವರೆ ವರ್ಷದ ಪುತ್ರನೇ ಈ ದುರ್ದೈವಿ.
ಮಳೆ ನಿಂತಿದ್ದೇ ದುರಂತಕ್ಕೆ ಕಾರಣವಾಯಿತೇ?
ಸಾಮಾನ್ಯವಾಗಿ ಸುಚಿತ್ರಾ ಅವರು ಮಳೆ ಬರುವಾಗ ತಮ್ಮ 6 ವರ್ಷದ ಹಿರಿಯ ಮಗಳನ್ನು ಶಾಲಾ ಬಸ್ ಹತ್ತಿಸಲು ಹೋಗುವಾಗ ಪುಟ್ಟ ಮಗುವನ್ನು ಮನೆಯಲ್ಲೇ ಬಿಟ್ಟು ಹೋಗುತ್ತಿದ್ದರು. ಆದರೆ, ಮಂಗಳವಾರ ಮಗಳ ಬಸ್ ಬರುವ ಸಮಯಕ್ಕೆ ಸರಿಯಾಗಿ ಮಳೆ ನಿಂತಿತ್ತು. ಹೀಗಾಗಿ ಮಗುವನ್ನು ಒಬ್ಬನೇ ಬಿಡುವುದು ಬೇಡ ಎಂದು ಸುಚಿತ್ರಾ ಅವರು ಕಂಕುಳಲ್ಲಿ ಎತ್ತಿಕೊಂಡು ಹೊರಟಿದ್ದರು. ಆದರೆ ಈ ನಿರ್ಧಾರವೇ ಮಗುವಿನ ಸಾವಿಗೆ ಕಾರಣವಾಗುತ್ತದೆ ಎಂದು ಅವರು ಕನಸಿನಲ್ಲೂ ಯೋಚಿಸಿರಲಿಲ್ಲ.
ದಂಪತಿಯ ಮನೆಯಿಂದ ಶಾಲಾ ಬಸ್ ಬರುವ ಜಾಗಕ್ಕೆ ತಲುಪಲು ಸುಮಾರು 300 ಮೀಟರ್ ತೋಟದ ಹಾದಿಯಲ್ಲಿ ನಡೆಯಬೇಕಿತ್ತು. ಮನೆ ದಾಟಿ ಕೇವಲ 50 ಮೀಟರ್ ಹೋಗುವಷ್ಟರಲ್ಲಿ, ದಾರಿ ಬದಿಯಲ್ಲಿದ್ದ ಸುಮಾರು 40 ಅಡಿ ಎತ್ತರದ ಮರದಿಂದ ಹಸಿ ತೆಂಗಿನಕಾಯಿಯೊಂದು ನೇರವಾಗಿ ಮಗುವಿನ ತಲೆಗೆ ಬಿದ್ದಿದೆ. ಕಾಯಿ ಬಿದ್ದ ರಭಸಕ್ಕೆ ಮಗುವಿನ ತಲೆಗೆ ಗಂಭೀರ ಗಾಯವಾಗಿತ್ತು.
ಫಲಿಸದ ಚಿಕಿತ್ಸೆ:
ದುರಂತ ಸಂಭವಿಸುತ್ತಿದ್ದಂತೆ ಸ್ಥಳೀಯರು ಮಗುವನ್ನು ತಕ್ಷಣವೇ ಪಕ್ಕದ ಮನೆಯ ವಾಹನದಲ್ಲಿ ಮಣಿಪಾಲ ಆಸ್ಪತ್ರೆಗೆ ಸಾಗಿಸಿದ್ದಾರೆ. ಆಸ್ಪತ್ರೆಗೆ ತಲುಪುವವರೆಗೂ ಮಗು ಪ್ರಜ್ಞೆಯಲ್ಲೇ ಇತ್ತು. ವೈದ್ಯರು ತಕ್ಷಣವೇ ತುರ್ತು ಶಸ್ತ್ರಚಿಕಿತ್ಸೆ ನಡೆಸಿದರಾದರೂ, ತಲೆಗೆ ತೀವ್ರ ಸ್ವರೂಪದ ಪೆಟ್ಟು ಬಿದ್ದಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಸಂಜೆ ಮಗು ಕೊನೆಯುಸಿರೆಳೆದಿದೆ.
ಅಪರೂಪದಲ್ಲೂ ಅಪರೂಪದ ಈ ವಿಧಿಯ ಕ್ರೂರ ಆಟಕ್ಕೆ ಇಡೀ ಹೆರಂಜೆ ಗ್ರಾಮವೇ ಕಂಬನಿ ಮಿಡಿದಿದೆ. ಆಟವಾಡಿಕೊಂಡಿರಬೇಕಾದ ಪುಟ್ಟ ಕಂದನ ಸಾವು ಕುಟುಂಬವನ್ನು ಅತೀವ ಶೋಕದಲ್ಲಿ ಮುಳುಗಿಸಿದೆ.
ನಿಧನ ವಾರ್ತೆ
Kadaba-ಕಡಬ : ಹೆದ್ದಾರಿಯಲ್ಲಿ ದಿಢೀರ್ ಪ್ರತ್ಯಕ್ಷವಾದ ಕಡವೆ; ಕಾರಿಗೆ ಡಿಕ್ಕಿ, ಸ್ಥಳದಲ್ಲೇ ಸಾವು
ಗುಂಡ್ಯ–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಕಡವೆಯೊಂದು ಕಾರಿಗೆ ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ಶುಕ್ರವಾರ ನಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗಕ್ಕೆ ಭಾರೀ ಹಾನಿಯಾಗಿದ್ದು, ಕಡವೆ ರಸ್ತೆಯ ಬದಿಗೆ ಎಸೆಯಲ್ಪಟ್ಟು ಮೃತಪಟ್ಟಿದೆ.
ಕಡಬ: ಗುಂಡ್ಯ–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಕಡವೆಯೊಂದು ಕಾರಿಗೆ ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ಶುಕ್ರವಾರ ನಡೆದಿದೆ.
ಹೆದ್ದಾರಿಯಲ್ಲಿ ಕಾರೊಂದು ಸಂಚರಿಸುತ್ತಿದ್ದ ವೇಳೆ ಏಕಾಏಕಿ ಅಡ್ಡ ಬಂದ ಕಡವೆಗೆ ಕಾರು ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗಕ್ಕೆ ಭಾರೀ ಹಾನಿಯಾಗಿದ್ದು, ಕಡವೆ ರಸ್ತೆಯ ಬದಿಗೆ ಎಸೆಯಲ್ಪಟ್ಟು ಮೃತಪಟ್ಟಿದೆ.
ಈ ಭಾಗದಲ್ಲಿ ಕಾಡುಪ್ರಾಣಿಗಳ ಸಂಚಾರ ಸಾಮಾನ್ಯವಾಗಿರುವ ಹಿನ್ನೆಲೆಯಲ್ಲಿ ಘಟನೆ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ವಿಶೇಷವಾಗಿ ರಾತ್ರಿ ಹಾಗೂ ಮುಂಜಾನೆ ವೇಳೆ ಕಾಡುಪ್ರಾಣಿಗಳು ಹೆದ್ದಾರಿಗೆ ಬರುವ ಸಾಧ್ಯತೆ ಇರುವುದರಿಂದ ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸಬೇಕಾದ ಅಗತ್ಯವಿದೆ.
ಈ ಹಿಂದೆಯೂ ಇದೇ ಪರಿಸರದಲ್ಲಿ ಕಾಡುಪ್ರಾಣಿಗಳಿಂದ ವಾಹನ ಸವಾರರಿಗೆ ಅಪಾಯ ಉಂಟಾದ ಘಟನೆಗಳು ನಡೆದಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಕಾಡುಪ್ರಾಣಿಗಳ ಸಂಚಾರವಿರುವ ಪ್ರದೇಶಗಳಲ್ಲಿ ವಾಹನಗಳ ವೇಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವುದರ ಜತೆಗೆ, ರಸ್ತೆ ಬದಿಯ ಪೊದೆಗಳನ್ನು ತೆರವುಗೊಳಿಸಿ ವಾಹನ ಸವಾರರಿಗೆ ದೂರದಿಂದಲೇ ಪ್ರಾಣಿಗಳು ಕಾಣುವಂತೆ ಮಾಡುವ ಅಗತ್ಯವಿದೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.
ಅರಣ್ಯ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಈ ಭಾಗದಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಕಾಡುಪ್ರಾಣಿಗಳು ಹೆದ್ದಾರಿಗೆ ಬರುವುದರಿಂದ ಉಂಟಾಗುವ ಅಪಘಾತಗಳನ್ನು ತಡೆಯಲು ಕ್ರಮ ವಹಿಸಬೇಕು ಎಂಬ ಆಗ್ರಹ ಕೇಳಿಬಂದಿದೆ.
ನಿಧನ ವಾರ್ತೆ
Kasaragod-ಕಾಸರಗೋಡು: ಬೈಕ್-ಕಾರು ಮುಖಾಮುಖಿ ಡಿಕ್ಕಿ; ಸವಾರ ಸಾವು, ಪತ್ನಿ ಗಂಭೀರ
ಸೀತಾಂಗೋಳಿ–ಪೆರ್ಲ ರಸ್ತೆಯ ಪುತ್ತಿಗೆ ಮುಗುರೋಡ್ ಬಳಿ ಇಂದು ಮಧ್ಯಾಹ್ನ ಸಂಭವಿಸಿದ ಬೈಕ್-ಕಾರು ಮುಖಾಮುಖಿ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಅವರ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಊಞಂಪದವು ನಿವಾಸಿ ಎಂ.ಟಿ. ಮುಹಮ್ಮದ್ ಅಶ್ರಫ್ (48) ಎಂದು ಗುರುತಿಸಲಾಗಿದೆ.
ಕಾಸರಗೋಡು: ಸೀತಾಂಗೋಳಿ–ಪೆರ್ಲ ರಸ್ತೆಯ ಪುತ್ತಿಗೆ ಮುಗುರೋಡ್ ಬಳಿ ಇಂದು ಮಧ್ಯಾಹ್ನ ಸಂಭವಿಸಿದ ಬೈಕ್-ಕಾರು ಮುಖಾಮುಖಿ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಅವರ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು ಊಞಂಪದವು ನಿವಾಸಿ ಎಂ.ಟಿ. ಮುಹಮ್ಮದ್ ಅಶ್ರಫ್ (48) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಅವರ ಪತ್ನಿಯನ್ನು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು ಮಧ್ಯಾಹ್ನ ಸುಮಾರು 12 ಗಂಟೆ ವೇಳೆಗೆ ಅಪಘಾತ ಸಂಭವಿಸಿದೆ. ಮುಹಮ್ಮದ್ ಅಶ್ರಫ್ ಅವರು ಚಲಾಯಿಸುತ್ತಿದ್ದ ಬೈಕ್‌ಗೆ ವಿರುದ್ಧ ದಿಕ್ಕಿನಿಂದ ಬಂದ ಕಾರು ಮುಖಾಮುಖಿಯಾಗಿ ಡಿಕ್ಕಿಯಾಗಿದೆ.
ಡಿಕ್ಕಿಯ ರಭಸಕ್ಕೆ ಅಶ್ರಫ್ ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ನಿಧನ ವಾರ್ತೆ
Mangalore-ಮಂಗಳೂರು: ನ್ಯಾಯಾಧೀಶರ ಕಾರು, ಗೂಡ್ಸ್ ಆಟೋ, ಬೈಕ್ ನಡುವೆ ಸರಣಿ ಅಪಘಾತ; ಗೂಡ್ಸ್ ಆಟೋ ಚಾಲಕ ಮೃತ್ಯು
ಮಂಗಳೂರು ನಗರದ ಬಾವುಟಗುಡ್ಡೆಯ ಕೋರ್ಟ್ ಕ್ರಾಸ್ ರಸ್ತೆಯಲ್ಲಿ ಮಂಗಳವಾರ ಬೆಳಗ್ಗೆ ಕಾರು, ಗೂಡ್ಸ್ ಆಟೋ ರಿಕ್ಷಾ ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಗೂಡ್ಸ್ ಆಟೋ ರಿಕ್ಷಾ ಚಾಲಕ ಮೃತಪಟ್ಟಿದ್ದಾರೆ. ಮೃತರನ್ನು ಕಾಸರಗೋಡು ಮೊಗ್ರಾಲ್‌ನ ಪೊಟ್ಟೊರಿ ಪೇರಲ್ ನಿವಾಸಿ ಚಂದ್ರ ಕೆ. (67) ಎಂದು ಗುರುತಿಸಲಾಗಿದೆ.
ಮಂಗಳೂರು: ನಗರದ ಬಾವುಟಗುಡ್ಡೆಯ ಕೋರ್ಟ್ ಕ್ರಾಸ್ ರಸ್ತೆಯಲ್ಲಿ ಮಂಗಳವಾರ ಬೆಳಗ್ಗೆ ಕಾರು, ಗೂಡ್ಸ್ ಆಟೋ ರಿಕ್ಷಾ ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಗೂಡ್ಸ್ ಆಟೋ ರಿಕ್ಷಾ ಚಾಲಕ ಮೃತಪಟ್ಟಿದ್ದಾರೆ.
ಮೃತರನ್ನು ಕಾಸರಗೋಡು ಮೊಗ್ರಾಲ್‌ನ ಪೊಟ್ಟೊರಿ ಪೇರಲ್ ನಿವಾಸಿ ಚಂದ್ರ ಕೆ. (67) ಎಂದು ಗುರುತಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ವಿನಯ್ ಡಿ. ಅವರು ಕಾರಿನಲ್ಲಿ (ಕೆಎ-05-ಎನ್‌ಕೆ-2504) ಬೆಳಗ್ಗೆ ನ್ಯಾಯಾಲಯದತ್ತ ತೆರಳುತ್ತಿದ್ದರು. ಕರಂಗಲ್ಪಾಡಿಯ ರಾಧಾ ಮೆಡಿಕಲ್ಸ್ ಎದುರಿನ ತಿರುವಿನಲ್ಲಿ ಸಾಗುತ್ತಿದ್ದಾಗ, ಗೂಡ್ಸ್ ಆಟೋ ರಿಕ್ಷಾ (ಕೆಎ-19-ಎಡಿ-4395) ನಿಯಂತ್ರಣ ತಪ್ಪಿ ನ್ಯಾಯಾಧೀಶರ ಕಾರಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಬಳಿಕ ಗೂಡ್ಸ್ ಆಟೋ ರಿಕ್ಷಾ ಅದೇ ರಸ್ತೆಯಲ್ಲಿ ಬರುತ್ತಿದ್ದ ದ್ವಿಚಕ್ರ ವಾಹನ (ಕೆಎ-19-ಎಚ್‌ವೈ-1664)ಕ್ಕೂ ಢಿಕ್ಕಿ ಹೊಡೆದು ಮಗುಚಿಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಚಂದ್ರ ಕೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಗೂಡ್ಸ್ ಆಟೋ ರಿಕ್ಷಾ ಢಿಕ್ಕಿಯಿಂದ ದ್ವಿಚಕ್ರ ವಾಹನ ಸವಾರ ಪ್ಲೆವಿಯನ್ ಮೆರ್ವಿನ್ ಅವರಿಗೂ ಗಾಯಗಳಾಗಿವೆ. ಅಪಘಾತದಲ್ಲಿ ಕಾರು, ಗೂಡ್ಸ್ ಆಟೋ ರಿಕ್ಷಾ ಹಾಗೂ ದ್ವಿಚಕ್ರ ವಾಹನ ಜಖಂಗೊಂಡಿವೆ.
ಅಪಘಾತದಲ್ಲಿ ನ್ಯಾಯಾಧೀಶ ವಿನಯ್ ಡಿ. ಅವರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ನ್ಯಾಯಾಧೀಶ ವಿನಯ್ ಡಿ. ಅವರು ನೀಡಿದ ದೂರಿನ ಆಧಾರದ ಮೇಲೆ ಕದ್ರಿ ಟ್ರಾಫಿಕ್ ಈಸ್ಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
-
ಪುತ್ತೂರು22 hours ago
ಮಾಣಿ : ಲೈನ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶ: ಪವರ್ಮ್ಯಾನ್ ಮೃತ್ಯು
-
ಬಿಗ್ ನ್ಯೂಸ್23 hours agoNagalakshmi Chowdary-ಬಂಗ್ಲೆಗುಡ್ಡೆ ಏನೂ ಸ್ಮಶಾನ ಅಲ್ಲ : ಅಲ್ಲಿ ಯಾಕೆ ಅಷ್ಟು ಅಸ್ಥಿಪಂಜರಗಳು ಸಿಕ್ಕಿದವು..? ಧರ್ಮಸ್ಥಳ ಎಸ್ಐಟಿಗೆ ಹೆಚ್ಚಿನ ಅಧಿಕಾರ ನೀಡಬೇಕು..! : ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ
-
ಅಪರಾಧ23 hours agoMangalore-ಮಂಗಳೂರು: ಸರಣಿ ಮನೆಕಳ್ಳತನ: ದೆಹಲಿ ಮೂಲದ ಇಬ್ಬರು ಕುಖ್ಯಾತ ಕಳ್ಳರ ಬಂಧನ; ₹18 ಲಕ್ಷ ಮೌಲ್ಯದ ಸೊತ್ತು ವಶ
-
ಶಿಕ್ಷಣ24 hours agoNarendra-ನರೇಂದ್ರ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ
-
Uncategorized2 hours ago
ಸೌಜನ್ಯ ಪರ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ವಕೀಲ ಮೋಹಿತ್ ಕುಮಾರ್ ಗೆ ಮಾತೃ ವಿಯೋಗ
-
Uncategorized2 hours ago
ಮಂಗಳೂರು : ಸಹಪಾಠಿಯೊಂದಿಗೆ ಜಗಳ: ಬಿಸಿಎ ವಿದ್ಯಾರ್ಥಿಗೆ ಚೂರಿಯಿಂದ ಇರಿತ; ಇಬ್ಬರು ವಶಕ್ಕೆ


















