ಅಂತರ ರಾಜ್ಯ
Smriti Irani-ಅಮೇಠಿ ಪಂಚಾಯತ್ ಮತದಾರರ ಪಟ್ಟಿಯಿಂದ ಸ್ಮೃತಿ ಇರಾನಿ ಹೆಸರು ನಾಪತ್ತೆ; ಉನ್ನತ ಮಟ್ಟದ ತನಿಖೆಗೆ ಆದೇಶ
ಇತ್ತೀಚಿನ ಲೋಕಸಭಾ ಚುನಾವಣೆಯಲ್ಲಿ ಪರಾಭವಗೊಂಡಿದ್ದ ಮಾಜಿ ಕೇಂದ್ರ ಸಚಿವೆ ಹಾಗೂ ಬಿಜೆಪಿ ನಾಯಕಿ ಸ್ಮೃತಿ ಇರಾನಿ ಅವರಿಗೆ ಈಗ ಮತ್ತೊಂದು ಮುಜುಗರ ಎದುರಾಗಿದೆ. ಅಮೇಠಿ ಜಿಲ್ಲೆಯ ಮೇದನ್ ಮವಾಯಿ ಗ್ರಾಮದ ಪಂಚಾಯತ್ ಮತದಾರರ ಪಟ್ಟಿಯಿಂದ ಅವರ ಹೆಸರು ನಾಪತ್ತೆಯಾಗಿದ್ದು, ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.
ಅಮೇಠಿ (ಉತ್ತರ ಪ್ರದೇಶ): ಇತ್ತೀಚಿನ ಲೋಕಸಭಾ ಚುನಾವಣೆಯಲ್ಲಿ ಪರಾಭವಗೊಂಡಿದ್ದ ಮಾಜಿ ಕೇಂದ್ರ ಸಚಿವೆ ಹಾಗೂ ಬಿಜೆಪಿ ನಾಯಕಿ ಸ್ಮೃತಿ ಇರಾನಿ ಅವರಿಗೆ ಈಗ ಮತ್ತೊಂದು ಮುಜುಗರ ಎದುರಾಗಿದೆ. ಅಮೇಠಿ ಜಿಲ್ಲೆಯ ಮೇದನ್ ಮವಾಯಿ ಗ್ರಾಮದ ಪಂಚಾಯತ್ ಮತದಾರರ ಪಟ್ಟಿಯಿಂದ ಅವರ ಹೆಸರು ನಾಪತ್ತೆಯಾಗಿದ್ದು, ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.
ಲೋಕಸಭೆ ಮತ್ತು ವಿಧಾನಸಭಾ ಕ್ಷೇತ್ರಗಳ ಅಧಿಕೃತ ಮತದಾರರ ಪಟ್ಟಿಯಲ್ಲಿ ಅವರ ಹೆಸರು ಇದ್ದಾಗ್ಯೂ, ಪಂಚಾಯತ್ ಚುನಾವಣಾ ಪಟ್ಟಿಯಿಂದ ಕೈಬಿಟ್ಟಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಅಮೇಥಿ ಜಿಲ್ಲಾಧಿಕಾರಿ ಸಂಜಯ್ ಚೌಹಾಣ್ ಈ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ.
ಸ್ಮೃತಿ ಇರಾನಿ ಅವರು 2019 ರಿಂದ 2024 ರವರೆಗೆ ಅಮೇಥಿ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. 2019ರ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿದ ಬಳಿಕ, ಗೌರಿಗಂಜ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮೇದನ್ ಮವಾಯಿ ಗ್ರಾಮದಲ್ಲಿ ಅವರು ಸ್ವಂತ ನಿವಾಸವನ್ನು ನಿರ್ಮಿಸಿದ್ದರು. ಈ ಗ್ರಾಮದ ಮತದಾರರಾಗಿಯೇ ಅವರು ನೋಂದಾಯಿಸಿಕೊಂಡಿದ್ದು, ಕಳೆದ ಲೋಕಸಭಾ ಚುನಾವಣೆಯಲ್ಲೂ ಇಲ್ಲೇ ಹಕ್ಕು ಚಲಾಯಿಸಿದ್ದರು.
ಜೂ.10 ರ ಪಟ್ಟಿಯಲ್ಲಿ ಬಯಲಾದ ಲೋಪ
ಜೂ.10 ರಂದು ಪ್ರಕಟವಾದ ಪಂಚಾಯತ್ ಮತದಾರರ ಹೊಸ ಪಟ್ಟಿಯಲ್ಲಿ ಸ್ಮೃತಿ ಇರಾನಿ ಅವರ ಹೆಸರು ಇಲ್ಲದಿರುವುದು ಬೆಳಕಿಗೆ ಬಂದಿದೆ. ಲೋಕಸಭೆ ಚುನಾವಣೆಯಲ್ಲಿ ಮತ ಚಲಾಯಿಸಿದ ಪ್ರಮುಖ ನಾಯಕಿಯ ಹೆಸರೇ ಸ್ಥಳೀಯ ಪಟ್ಟಿಯಿಂದ ಹೇಗೆ ಬಿಟ್ಟುಹೋಗಿದೆ ಎಂಬ ಪ್ರಶ್ನೆಗಳು ಎದ್ದಿವೆ.
ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾಧಿಕಾರಿ ಸಂಜಯ್ ಚೌಹಾಣ್, ಈ ಲೋಪಕ್ಕೆ ನಿಖರವಾದ ಕಾರಣವೇನೆಂಬುದು ತನಿಖಾ ವರದಿ ಬಂದ ನಂತರವಷ್ಟೇ ತಿಳಿಯಲಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು” ಎಂದಿದ್ದಾರೆ.
ಬಿಜೆಪಿಯಿಂದ ಮರುಸೇರ್ಪಡೆಗೆ ಅರ್ಜಿ:
ಅಮೇಥಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುಧಾಂಶು ಶುಕ್ಲಾ ಮಾತನಾಡಿ, ‘ಸ್ಮೃತಿ ಇರಾನಿ ಅವರ ಹೆಸರನ್ನು ಪಂಚಾಯತ್ ಮತದಾರರ ಪಟ್ಟಿಗೆ ಮರುಸೇರ್ಪಡೆ ಮಾಡಲು ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಔಪಚಾರಿಕ ಅರ್ಜಿ ಸಲ್ಲಿಸಲಾಗಿದೆ. ಈ ವಿಷಯವನ್ನು ಹಿರಿಯ ಅಧಿಕಾರಿಗಳ ಗಮನಕ್ಕೂ ತರಲಾಗಿದೆ” ಎಂದು ತಿಳಿಸಿದ್ದಾರೆ. ಸೂಕ್ತ ಪರಿಶೀಲನೆಯ ನಂತರ ಹೆಸರನ್ನು ಶೀಘ್ರದಲ್ಲೇ ಸೇರಿಸಲಾಗುವುದು ಎಂದು ಅಧಿಕಾರಿಗಳು ಭರವಸೆ ನೀಡಿದ್ದಾರೆ ಎಂದು ಅವರು ಹೇಳಿದ್ದಾರೆ.
ಸ್ಮೃತಿ ಇರಾನಿ ಅವರು ಇತ್ತೀಚಿನ ಲೋಕಸಭಾ ಚುನಾವಣೆಯಲ್ಲಿ ಅಮೇಥಿ ಕ್ಷೇತ್ರದಿಂದ ಕಾಂಗ್ರೆಸ್ ನಾಯಕ ಕಿಶೋರಿ ಲಾಲ್ ಶರ್ಮಾ ವಿರುದ್ಧ ಪರಾಭವಗೊಂಡಿದ್ದರು. ಇದೀಗ ಅವರ ಹೆಸರು ಪಂಚಾಯತ್ ಪಟ್ಟಿಯಿಂದ ಕಾಣೆಯಾಗಿರುವುದು ಸ್ಥಳೀಯ ರಾಜಕೀಯ ವಲಯದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ.
ಅಂತರ ರಾಜ್ಯ
Toll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.
ನವದೆಹಲಿ: ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.
ಈ ವ್ಯವಸ್ಥೆಯ ಪ್ರಕಾರ, ಟೋಲ್ ಪ್ಲಾಜಾ ದಾಟುವ ವಾಹನದ ವಿಮೆ ಚಾಲ್ತಿಯಲ್ಲಿದೆಯೇ ಎಂಬುದನ್ನು ಸ್ವಯಂಚಾಲಿತವಾಗಿ ಪರಿಶೀಲಿಸಲಾಗುತ್ತದೆ. ಒಂದು ವೇಳೆ ವಿಮೆಯ ಅವಧಿ ಮುಗಿದಿದ್ದರೆ, ವಾಹನದ ಮಾಲೀಕರ ನೋಂದಾಯಿತ ಮೊಬೈಲ್ ಸಂಖ್ಯೆಗೆ ತಕ್ಷಣವೇ SMS ಮೂಲಕ ಎಚ್ಚರಿಕೆ ಸಂದೇಶ ಕಳುಹಿಸಲಾಗುತ್ತದೆ. ವಿಮೆ ಇಲ್ಲದೆ ವಾಹನ ಚಲಾಯಿಸುವವರಿಗೆ ನಿಯಮಾನುಸಾರ 10,000 ರೂ.ವರೆಗೆ ದಂಡ ವಿಧಿಸುವ ಅವಕಾಶವೂ ಇದೆ.
ಟೋಲ್ ಪ್ಲಾಜಾದಲ್ಲಿ ವಿಮೆ ಪರಿಶೀಲನೆ ಹೇಗೆ?
ಹೊಸ ವ್ಯವಸ್ಥೆಯು ರಾಷ್ಟ್ರೀಯ ಮಾಹಿತಿ ಕೇಂದ್ರ (NIC) ನಿರ್ವಹಿಸುವ ‘ವಾಹನ್’ (VAHAN) ಡೇಟಾಬೇಸ್ನಲ್ಲಿರುವ ವಾಹನಗಳ ನೋಂದಣಿ ಹಾಗೂ ವಿಮೆಯ ಮಾಹಿತಿಯನ್ನು ಆಧರಿಸಿ ಕಾರ್ಯನಿರ್ವಹಿಸಲಿದೆ.
ವಾಹನ ಟೋಲ್ ಪ್ಲಾಜಾ ದಾಟುವಾಗ ಅದರ ನೋಂದಣಿ ಸಂಖ್ಯೆಯನ್ನು ಗುರುತಿಸಿ, ಡೇಟಾಬೇಸ್ನಲ್ಲಿರುವ ವಿಮೆಯ ವಿವರಗಳೊಂದಿಗೆ ಹೋಲಿಕೆ ಮಾಡಲಾಗುತ್ತದೆ. ಈ ಮೂಲಕ ವಿಮೆ ಚಾಲ್ತಿಯಲ್ಲಿದೆಯೇ ಅಥವಾ ಅವಧಿ ಮುಗಿದಿದೆಯೇ ಎಂಬುದನ್ನು ತಂತ್ರಜ್ಞಾನದ ಸಹಾಯದಿಂದ ಪರಿಶೀಲಿಸಲಾಗುತ್ತದೆ.
ವಿಮೆಯ ಅವಧಿ ಮುಗಿದಿದ್ದರೆ ಕೆಲವೇ ನಿಮಿಷಗಳಲ್ಲಿ ವಾಹನ ಮಾಲೀಕರ ಮೊಬೈಲ್ಗೆ SMS ರವಾನೆಯಾಗಲಿದೆ.
SMSನಲ್ಲಿ ಯಾವ ಮಾಹಿತಿ ಇರಲಿದೆ?
ವಾಹನದ ವಿಮೆ ಅವಧಿ ಮುಗಿದಿದ್ದರೆ ಮಾಲೀಕರಿಗೆ ಕಳುಹಿಸುವ ಸಂದೇಶದಲ್ಲಿ ಈ ಕೆಳಗಿನ ವಿವರಗಳಿರಲಿವೆ:
- ವಾಹನದ ನೋಂದಣಿ ಸಂಖ್ಯೆ.
- ಟೋಲ್ ಪ್ಲಾಜಾ ದಾಟಿದ ದಿನಾಂಕ ಮತ್ತು ಸಮಯ.
- ವಾಹನದ ವಿಮೆ ಅವಧಿ ಮುಗಿದ ದಿನಾಂಕ.
- ವಿಮೆಯನ್ನು ನವೀಕರಿಸಿಕೊಳ್ಳುವಂತೆ ಸೂಚನೆ.
ಈ ಮೂಲಕ ವಾಹನ ಮಾಲೀಕರು ವಿಮೆಯನ್ನು ತಕ್ಷಣ ನವೀಕರಿಸಿಕೊಳ್ಳಲು ಎಚ್ಚರಿಕೆ ನೀಡುವ ಉದ್ದೇಶ ಹೊಂದಲಾಗಿದೆ. - ವಿಮೆ ಇಲ್ಲದೆ ವಾಹನ ಚಲಾಯಿಸಿದರೆ ಎಷ್ಟು ದಂಡ?
- ಮೋಟಾರು ವಾಹನ ಕಾಯ್ದೆಯ ಪ್ರಕಾರ ಸಾರ್ವಜನಿಕ ರಸ್ತೆಗಳಲ್ಲಿ ಸಂಚರಿಸುವ ಪ್ರತಿಯೊಂದು ವಾಹನಕ್ಕೂ ಮಾನ್ಯವಾದ ಥರ್ಡ್ ಪಾರ್ಟಿ ವಿಮೆ ಹೊಂದಿರುವುದು ಕಡ್ಡಾಯವಾಗಿದೆ. ಅಪಘಾತ ಸಂಭವಿಸಿದಾಗ ಮತ್ತೊಬ್ಬ ವ್ಯಕ್ತಿಗೆ ಗಾಯ, ಸಾವು ಅಥವಾ ಆಸ್ತಿಗೆ ಹಾನಿಯಾದರೆ ಪರಿಹಾರ ನೀಡಲು ಈ ವಿಮೆ ನೆರವಾಗುತ್ತದೆ.
ಮಾನ್ಯ ವಿಮೆ ಇಲ್ಲದೆ ವಾಹನ ಚಲಾಯಿಸುವುದು ಕಾನೂನು ಉಲ್ಲಂಘನೆಯಾಗಿದ್ದು, ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 196ರ ಅಡಿಯಲ್ಲಿ ಮೊದಲ ಬಾರಿಗೆ ತಪ್ಪು ಎಸಗಿದರೆ 2,000 ರೂ. ಹಾಗೂ ಮರುಕಳಿಸಿದರೆ 4,000 ರೂ. ದಂಡ ಅಥವಾ ಕಾಯ್ದೆಯಲ್ಲಿ ನಿಗದಿಪಡಿಸಿರುವ ಇತರ ಶಿಕ್ಷೆ ವಿಧಿಸಬಹುದು.
ಸದ್ಯ ಒಂದು ಟೋಲ್ ಪ್ಲಾಜಾದಲ್ಲಿ ಮಾತ್ರ ಪ್ರಾಯೋಗಿಕ ಪರೀಕ್ಷೆ
ಪ್ರಸ್ತುತ ದೆಹಲಿಯ ಅರ್ಬನ್ ಎಕ್ಸ್ಟೆನ್ಷನ್ ರಸ್ತೆ-2 (UER-II)ಯ ಮುಂಡ್ಯಾ ಟೋಲ್ ಪ್ಲಾಜಾದಲ್ಲಿ ಈ ವ್ಯವಸ್ಥೆಯ ಪ್ರಾಯೋಗಿಕ ಪರೀಕ್ಷೆ ನಡೆಯುತ್ತಿದೆ. ಪ್ರಯೋಗ ಯಶಸ್ವಿಯಾದರೆ ದೇಶದ ಇತರ ಟೋಲ್ ಪ್ಲಾಜಾಗಳಿಗೂ ವಿಸ್ತರಿಸುವ ಕುರಿತು NHAI ಚಿಂತನೆ ನಡೆಸಿದೆ.
ಆದರೆ ದೇಶಾದ್ಯಂತ ಈ ವ್ಯವಸ್ಥೆ ಯಾವಾಗ ಜಾರಿಗೆ ಬರಲಿದೆ ಎಂಬ ಬಗ್ಗೆ ಪ್ರಾಧಿಕಾರ ಇನ್ನೂ ಅಧಿಕೃತ ದಿನಾಂಕ ಪ್ರಕಟಿಸಿಲ್ಲ. ಪ್ರಾಯೋಗಿಕ ಪರೀಕ್ಷೆಯ ಫಲಿತಾಂಶಗಳ ಆಧಾರದ ಮೇಲೆ ಮುಂದಿನ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.
ವಾಹನ ಸವಾರರೇ ಎಚ್ಚರ: ನಿಮ್ಮ ವಾಹನದ ವಿಮೆಯ ಅವಧಿಯನ್ನು ಆಗಾಗ್ಗೆ ಪರಿಶೀಲಿಸಿ. ಅವಧಿ ಮುಗಿಯುವ ಮೊದಲೇ ವಿಮೆಯನ್ನು ನವೀಕರಿಸಿಕೊಳ್ಳಿ. ವಿಮೆ ಇಲ್ಲದೆ ವಾಹನ ಚಲಾಯಿಸುವುದು ಕಾನೂನುಬಾಹಿರವಾಗಿದ್ದು, ಅಪಘಾತ ಸಂಭವಿಸಿದ ಸಂದರ್ಭದಲ್ಲಿ ದೊಡ್ಡ ಆರ್ಥಿಕ ಹೊರೆ ಎದುರಿಸಬೇಕಾಗಬಹುದು.
ಅಂತರ ರಾಜ್ಯ
Election Commission-ಯುಪಿಯಲ್ಲಿ 1.27 ಕೋಟಿ ಹಿಂದೂ ಮತದಾರರು ನಾಪತ್ತೆ? ಆದಿತ್ಯನಾಥ್ ಆರೋಪಕ್ಕೆ ಚುನಾವಣಾ ಆಯೋಗದ ಸ್ಪಷ್ಟನೆ
ಉತ್ತರ ಪ್ರದೇಶದ ಮತದಾರರ ಪಟ್ಟಿಯಿಂದ ಹಿಂದೂ ಮತದಾರರ ಹೆಸರುಗಳು ನಾಪತ್ತೆಯಾಗಿವೆ ಎಂಬ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೇಳಿಕೆ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ ಕುರಿತು ಸ್ಪಷ್ಟನೆ ನೀಡಿರುವ ರಾಜ್ಯದ ಮುಖ್ಯ ಚುನಾವಣಾಧಿಕಾರಿ (ಸಿಇಒ) ನವದೀಪ್ ರಿನ್ವಾ, ಚುನಾವಣಾ ಆಯೋಗವು ಮತದಾರರ ಧರ್ಮ ಅಥವಾ ಜಾತಿಯ ಆಧಾರದಲ್ಲಿ ಯಾವುದೇ ದಾಖಲೆಗಳನ್ನು ನಿರ್ವಹಿಸುವುದಿಲ್ಲ ಎಂದು ತಿಳಿಸಿದ್ದಾರೆ.
ಲಕ್ನೋ: ಉತ್ತರ ಪ್ರದೇಶದ ಮತದಾರರ ಪಟ್ಟಿಯಿಂದ ಹಿಂದೂ ಮತದಾರರ ಹೆಸರುಗಳು ನಾಪತ್ತೆಯಾಗಿವೆ ಎಂಬ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೇಳಿಕೆ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ ಕುರಿತು ಸ್ಪಷ್ಟನೆ ನೀಡಿರುವ ರಾಜ್ಯದ ಮುಖ್ಯ ಚುನಾವಣಾಧಿಕಾರಿ (ಸಿಇಒ) ನವದೀಪ್ ರಿನ್ವಾ, ಚುನಾವಣಾ ಆಯೋಗವು ಮತದಾರರ ಧರ್ಮ ಅಥವಾ ಜಾತಿಯ ಆಧಾರದಲ್ಲಿ ಯಾವುದೇ ದಾಖಲೆಗಳನ್ನು ನಿರ್ವಹಿಸುವುದಿಲ್ಲ ಎಂದು ತಿಳಿಸಿದ್ದಾರೆ.
ಇತ್ತೀಚೆಗೆ ನೀಡಿದ ಸಂದರ್ಶನವೊಂದರಲ್ಲಿ ಮುಖ್ಯಮಂತ್ರಿ ಆದಿತ್ಯನಾಥ್ ಅವರು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯ ಬಳಿಕ ಪಟ್ಟಿಯಲ್ಲಿ ಹಲವು ವ್ಯತ್ಯಾಸಗಳು ಕಂಡುಬಂದಿವೆ ಎಂದು ಆತಂಕ ವ್ಯಕ್ತಪಡಿಸಿದ್ದರು.
ರಾಜ್ಯದ ಪಂಚಾಯತ್ ಚುನಾವಣೆಯ ಮತದಾರರ ಪಟ್ಟಿಯಲ್ಲಿದ್ದ ಸುಮಾರು 1.27 ಕೋಟಿ ಹಿಂದೂ ಮತದಾರರ ಹೆಸರುಗಳು ಭಾರತೀಯ ಚುನಾವಣಾ ಆಯೋಗದ ಮತದಾರರ ಪಟ್ಟಿಯಲ್ಲಿ ಕಾಣೆಯಾಗಿವೆ ಎಂದು ಅವರು ಆರೋಪಿಸಿದ್ದರು. ಈ ವ್ಯತ್ಯಾಸಗಳ ಕುರಿತು ಸ್ಪಷ್ಟನೆ ನೀಡುವಂತೆ ರಾಜ್ಯ ಸರ್ಕಾರವು ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದೆ ಎಂದೂ ತಿಳಿಸಿದ್ದರು.
ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಪ್ರತಿಕ್ರಿಯಿಸಿದ ಮುಖ್ಯ ಚುನಾವಣಾಧಿಕಾರಿ ನವದೀಪ್ ರಿನ್ವಾ, ಚುನಾವಣಾ ಇಲಾಖೆಯು ಮತದಾರರ ಧರ್ಮ ಅಥವಾ ಜಾತಿಗೆ ಸಂಬಂಧಿಸಿದ ಯಾವುದೇ ಮಾಹಿತಿಯನ್ನು ಸಂಗ್ರಹಿಸುವುದಿಲ್ಲ. ಹೀಗಾಗಿ ಧರ್ಮ ಅಥವಾ ಜಾತಿಯ ಆಧಾರದ ಮೇಲೆ ಅಧಿಕೃತ ವಿಶ್ಲೇಷಣೆ ನಡೆಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.
ಮತದಾರರ ದತ್ತಾಂಶದಲ್ಲಿ ಹೆಸರು, ತಂದೆ ಅಥವಾ ಸಂಗಾತಿಯ ಹೆಸರು, ವಯಸ್ಸು, ಮನೆ ಸಂಖ್ಯೆ ಹಾಗೂ ಲಿಂಗದಂತಹ ವಿವರಗಳು ಮಾತ್ರ ದಾಖಲಾಗಿರುತ್ತವೆ. ಧರ್ಮ ಮತ್ತು ಜಾತಿಗೆ ಸಂಬಂಧಿಸಿದ ಮಾಹಿತಿಗಳನ್ನು ಚುನಾವಣಾ ಆಯೋಗದ ಡೇಟಾಬೇಸ್ನಲ್ಲಿ ಸಂಗ್ರಹಿಸಲಾಗುವುದಿಲ್ಲ ಎಂದು ಅವರು ವಿವರಿಸಿದರು.
ಮತದಾರರ ಪಟ್ಟಿಗಳು ಸಾರ್ವಜನಿಕ ದಾಖಲೆಗಳಾಗಿರುವುದರಿಂದ ಮಾಧ್ಯಮ ಸಂಸ್ಥೆಗಳು ಹಾಗೂ ಸ್ವತಂತ್ರ ವಿಶ್ಲೇಷಕರು ಮತದಾರರ ಹೆಸರುಗಳು ಮತ್ತು ಲಭ್ಯವಿರುವ ಇತರ ಮಾಹಿತಿಗಳ ಆಧಾರದಲ್ಲಿ ತಮ್ಮದೇ ಆದ ವಿಶ್ಲೇಷಣೆ ನಡೆಸಬಹುದು. ಆದರೆ ಅಂತಹ ವಿಶ್ಲೇಷಣೆಗಳನ್ನು ಚುನಾವಣಾ ಇಲಾಖೆಯ ಅಧಿಕೃತ ದತ್ತಾಂಶ ಅಥವಾ ಸಂಶೋಧನೆ ಎಂದು ಪರಿಗಣಿಸಬಾರದು ಎಂದು ರಿನ್ವಾ ಸ್ಪಷ್ಟಪಡಿಸಿದರು.
ಯುಪಿಯಲ್ಲಿ 13.58 ಕೋಟಿ ಮತದಾರರು
2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಸಿದ್ಧತೆ ನಡೆಯುತ್ತಿರುವ ಬೆನ್ನಲ್ಲೇ ಮಂಗಳವಾರ ಕರಡು ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಈ ಪಟ್ಟಿಯಲ್ಲಿ ಒಟ್ಟು 13.58 ಕೋಟಿ ಮತದಾರರಿದ್ದು, ಅವರಲ್ಲಿ 6.20 ಕೋಟಿ ಮಹಿಳಾ ಮತದಾರರು ಸೇರಿದ್ದಾರೆ ಎಂದು ನವದೀಪ್ ರಿನ್ವಾ ಮಾಹಿತಿ ನೀಡಿದರು.
ಏಪ್ರಿಲ್ನಲ್ಲಿ ಘೋಷಿಸಲಾಗಿದ್ದ ಎಸ್ಐಆರ್ ಪ್ರಕ್ರಿಯೆಯ ನಂತರ ನಡೆದ ವಿಶೇಷ ಸಾರಾಂಶ ಪರಿಷ್ಕರಣೆ (ಎಸ್ಎಸ್ಆರ್) ಅವಧಿಯಲ್ಲಿ 18 ಲಕ್ಷಕ್ಕೂ ಅಧಿಕ ಮತದಾರರ ಹೆಚ್ಚಳವಾಗಿದೆ ಎಂದು ಅವರು ತಿಳಿಸಿದರು.
ಉತ್ತರ ಪ್ರದೇಶದ ಅಂತಿಮ ಮತದಾರರ ಪಟ್ಟಿಯನ್ನು 2027ರ ಜನವರಿ 4ರಂದು ಪ್ರಕಟಿಸಲು ನಿರ್ಧರಿಸಲಾಗಿದೆ. ವಿಧಾನಸಭಾ ಚುನಾವಣೆಗೂ ಮುನ್ನ ಮತದಾರರ ಪಟ್ಟಿಯಲ್ಲಿನ ವ್ಯತ್ಯಾಸಗಳು ಮತ್ತು ಪರಿಷ್ಕರಣೆ ಪ್ರಕ್ರಿಯೆ ಇದೀಗ ರಾಜಕೀಯ ವಲಯದಲ್ಲಿ ಗಮನ ಸೆಳೆದಿದೆ.
ಅಂತರ ರಾಜ್ಯ
Chinmaya Krishna Das-ಚಟ್ಟೋಗ್ರಾಮ್ನಿಂದ ಢಾಕಾ ಜೈಲಿಗೆ ಸ್ಥಳಾಂತರ: ಹಿಂದೂ ಸನ್ಯಾಸಿ ಚಿನ್ಮಯ ಕೃಷ್ಣ ದಾಸ್ ಆರೋಗ್ಯದ ಬಗ್ಗೆ ವಕೀಲರ ಕಳವಳ
ಬಾಂಗ್ಲಾದೇಶದ ಹಿಂದೂ ಸನ್ಯಾಸಿ ಹಾಗೂ ಸನಾತನ ಜಾಗರಣ ಜೋಟ್ ಸಂಘಟನೆಯ ವಕ್ತಾರ ಚಿನ್ಮಯ ಕೃಷ್ಣ ದಾಸ್ ಅವರನ್ನು ಚಟ್ಟೋಗ್ರಾಮ್ ಕೇಂದ್ರ ಕಾರಾಗೃಹದಿಂದ ಢಾಕಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ. ಈ ಬೆಳವಣಿಗೆಯ ಬೆನ್ನಲ್ಲೇ ಅವರ ಆರೋಗ್ಯ ಮತ್ತು ಆಹಾರ ವ್ಯವಸ್ಥೆಯ ಕುರಿತು ವಕೀಲರು ಗಂಭೀರ ಆತಂಕ ವ್ಯಕ್ತಪಡಿಸಿದ್ದಾರೆ.
ಢಾಕಾ: ಬಾಂಗ್ಲಾದೇಶದ ಹಿಂದೂ ಸನ್ಯಾಸಿ ಹಾಗೂ ಸನಾತನ ಜಾಗರಣ ಜೋಟ್ ಸಂಘಟನೆಯ ವಕ್ತಾರ ಚಿನ್ಮಯ ಕೃಷ್ಣ ದಾಸ್ ಅವರನ್ನು ಚಟ್ಟೋಗ್ರಾಮ್ ಕೇಂದ್ರ ಕಾರಾಗೃಹದಿಂದ ಢಾಕಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ. ಈ ಬೆಳವಣಿಗೆಯ ಬೆನ್ನಲ್ಲೇ ಅವರ ಆರೋಗ್ಯ ಮತ್ತು ಆಹಾರ ವ್ಯವಸ್ಥೆಯ ಕುರಿತು ವಕೀಲರು ಗಂಭೀರ ಆತಂಕ ವ್ಯಕ್ತಪಡಿಸಿದ್ದಾರೆ.
ಕಟ್ಟುನಿಟ್ಟಿನ ಸಸ್ಯಾಹಾರಿಯಾಗಿರುವ ಚಿನ್ಮಯ ಕೃಷ್ಣ ದಾಸ್ ಅವರು ತಮ್ಮ ಆಹಾರವನ್ನು ತಾವೇ ತಯಾರಿಸಿಕೊಂಡು ಸೇವಿಸುವ ಪದ್ಧತಿಯನ್ನು ಅನುಸರಿಸುತ್ತಿದ್ದಾರೆ. ಆದರೆ, ಢಾಕಾ ಕೇಂದ್ರ ಕಾರಾಗೃಹದಲ್ಲಿ ಈ ಸೌಲಭ್ಯ ಲಭ್ಯವಿಲ್ಲದಿರುವುದು ಅವರ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು ಎಂದು ಅವರ ಪರ ವಕೀಲ ಅಪೂರ್ವ ಕುಮಾರ್ ಭಟ್ಟಾಚಾರ್ಯ ತಿಳಿಸಿದ್ದಾರೆ.
ಚಿನ್ಮಯ ಕೃಷ್ಣ ದಾಸ್ ಅವರು ಬ್ರಹ್ಮಚಾರಿ ಹಾಗೂ ವೈಷ್ಣವ ಪರಂಪರೆಯನ್ನು ಅನುಸರಿಸುವ ಸನ್ಯಾಸಿಯಾಗಿದ್ದು, ಕಟ್ಟುನಿಟ್ಟಿನ ಸಸ್ಯಾಹಾರ ಪದ್ಧತಿಯನ್ನು ಪಾಲಿಸುತ್ತಾರೆ. ಚಟ್ಟೋಗ್ರಾಮ್ ಕೇಂದ್ರ ಕಾರಾಗೃಹದಲ್ಲಿದ್ದಾಗ ರಂಗನಾಥನ್ ಬ್ರಹ್ಮಚಾರಿ ಎಂಬ ಮತ್ತೊಬ್ಬ ಆರೋಪಿಯು ಅವರಿಗೆ ಅಡುಗೆ ಮಾಡಲು ನೆರವಾಗುತ್ತಿದ್ದರು. ಇದರಿಂದ ಸುಮಾರು ಎರಡು ವರ್ಷಗಳ ಬಂಧನದ ಅವಧಿಯಲ್ಲೂ ತಮ್ಮ ಆಹಾರ ಪದ್ಧತಿಯನ್ನು ಮುಂದುವರಿಸಲು ಸಾಧ್ಯವಾಗಿತ್ತು ಎಂದು ವಕೀಲರು ವಿವರಿಸಿದ್ದಾರೆ.
ಇದಲ್ಲದೆ, ಚಿನ್ಮಯ ಕೃಷ್ಣ ದಾಸ್ ಅವರು ಗಂಭೀರ ಯಕೃತ್ತಿನ ಕಾಯಿಲೆಯಿಂದ ಬಳಲುತ್ತಿದ್ದು, ಯಾವುದೇ ಆಹಾರವನ್ನು ಸೇವಿಸಲು ಸಾಧ್ಯವಿಲ್ಲದ ಸ್ಥಿತಿಯಲ್ಲಿದ್ದಾರೆ ಎಂದು ವಕೀಲರು ಹೇಳಿದ್ದಾರೆ.
ಢಾಕಾ ಕೇಂದ್ರ ಕಾರಾಗೃಹದಲ್ಲಿ ಸ್ವತಃ ಅಡುಗೆ ಮಾಡಿಕೊಳ್ಳುವ ವ್ಯವಸ್ಥೆ ಇಲ್ಲದ ಕಾರಣ ಸದ್ಯ ಅವರು ಹಣ್ಣುಗಳನ್ನು ಮಾತ್ರ ಸೇವಿಸುತ್ತಿದ್ದಾರೆ. “ಅವರಿಗೆ ಅಗತ್ಯವಾದ ಆಹಾರ ಸಿಗುತ್ತಿಲ್ಲ. ಅವರ ಜೀವಕ್ಕೆ ಅಪಾಯ ಎದುರಾಗಬಹುದು ಎಂಬ ಆತಂಕ ನನಗಿದೆ” ಎಂದು ಅಪೂರ್ವ ಕುಮಾರ್ ಭಟ್ಟಾಚಾರ್ಯ ಎಎನ್ಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
ಸ್ಥಳೀಯ ಮಾಧ್ಯಮಗಳ ವರದಿಯ ಪ್ರಕಾರ, ಸೋಮವಾರ ಬೆಳಗ್ಗೆ ಬಿಗಿ ಪೊಲೀಸ್ ಭದ್ರತೆಯೊಂದಿಗೆ ಚಿನ್ಮಯ ಕೃಷ್ಣ ದಾಸ್ ಅವರನ್ನು ಚಟ್ಟೋಗ್ರಾಮ್ನಿಂದ ಢಾಕಾಗೆ ಕರೆತರಲಾಗಿದೆ. ಅವರನ್ನು ಕರೆದೊಯ್ಯುತ್ತಿದ್ದ ವಾಹನ ಬೆಳಗ್ಗೆ ಸುಮಾರು 10 ಗಂಟೆಗೆ ಢಾಕಾ ಕೇಂದ್ರ ಕಾರಾಗೃಹ ತಲುಪಿತ್ತು.
ಚಟ್ಟೋಗ್ರಾಮ್ ನ್ಯಾಯಾಲಯದ ಗಲಭೆ ಪ್ರಕರಣದ ಹಿನ್ನೆಲೆ
ಸನಾತನ ಜಾಗರಣ ಜೋಟ್ ಸಂಘಟನೆಯ ವಕ್ತಾರರಾಗಿರುವ ಚಿನ್ಮಯ ಕೃಷ್ಣ ದಾಸ್ ಅವರನ್ನು 2024ರ ನವೆಂಬರ್ 25ರಂದು ಢಾಕಾದಲ್ಲಿ ದೇಶದ್ರೋಹ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿತ್ತು.
2024ರ ಅಕ್ಟೋಬರ್ 31ರಂದು ಈ ಪ್ರಕರಣ ದಾಖಲಾಗಿತ್ತು. ಚಟ್ಟೋಗ್ರಾಮ್ನ ಚಂದ್ಗಾಂವ್ ಪೊಲೀಸ್ ಠಾಣಾ ವ್ಯಾಪ್ತಿಯ ಮೊಹ್ರಾ ವಾರ್ಡ್ನ ಆಗಿನ ಬಿಎನ್ಪಿ ಪ್ರಧಾನ ಕಾರ್ಯದರ್ಶಿ ಫಿರೋಜ್ ಖಾನ್ ದೂರು ದಾಖಲಿಸಿದ್ದರು. ರಾಷ್ಟ್ರೀಯ ಧ್ವಜಕ್ಕೆ ಅಗೌರವ ತೋರಿದ ಆರೋಪದಡಿ ಚಿನ್ಮಯ ಕೃಷ್ಣ ದಾಸ್ ಸೇರಿದಂತೆ ಒಟ್ಟು 19 ಮಂದಿಯನ್ನು ಪ್ರಕರಣದಲ್ಲಿ ಆರೋಪಿಗಳೆಂದು ಹೆಸರಿಸಲಾಗಿತ್ತು. ಬಳಿಕ ಫಿರೋಜ್ ಖಾನ್ ಅವರನ್ನು ಬಿಎನ್ಪಿ ಪಕ್ಷದ ಹುದ್ದೆಯಿಂದ ಬಿಡುಗಡೆಗೊಳಿಸಿತ್ತು.
2024ರ ನವೆಂಬರ್ 26ರಂದು ಚಿನ್ಮಯ ಕೃಷ್ಣ ದಾಸ್ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಯುತ್ತಿದ್ದ ಸಂದರ್ಭದಲ್ಲಿ ಚಟ್ಟೋಗ್ರಾಮ್ ನ್ಯಾಯಾಲಯದ ಆವರಣದಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು. ಈ ವೇಳೆ ವಕೀಲ ಸೈಫುಲ್ ಇಸ್ಲಾಂ ಅವರ ಮೇಲೆ ಹಲ್ಲೆ ನಡೆಸಿ, ಹರಿತವಾದ ಆಯುಧಗಳಿಂದ ಹತ್ಯೆ ಮಾಡಲಾಗಿತ್ತು.
ಈ ಸಂಬಂಧ ಮೃತ ವಕೀಲರ ತಂದೆ ಜಮಾಲ್ ಉದ್ದೀನ್ ಅವರು 31 ಜನರ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದರು. ಇದರ ಜೊತೆಗೆ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸುವುದು, ವಕೀಲರು ಹಾಗೂ ನ್ಯಾಯಾಲಯಕ್ಕೆ ಬಂದವರ ಮೇಲೆ ಹಲ್ಲೆ ಮತ್ತು ಸ್ಫೋಟಕ ವಸ್ತುಗಳ ಬಳಕೆಗೆ ಸಂಬಂಧಿಸಿದಂತೆ ಇನ್ನೂ ಐದು ಪ್ರಕರಣಗಳು ದಾಖಲಾಗಿದ್ದವು.
2025ರ ಜುಲೈ 1ರಂದು ತನಿಖಾಧಿಕಾರಿಗಳು ಚಟ್ಟೋಗ್ರಾಮ್ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಅದರಲ್ಲಿ ಚಿನ್ಮಯ ದಾಸ್ ಸೇರಿದಂತೆ 38 ಮಂದಿಯ ಹೆಸರುಗಳನ್ನು ಉಲ್ಲೇಖಿಸಿದ್ದರು. ಆರೋಪಪಟ್ಟಿಯ ಅಂಶಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ದೂರುದಾರರು ನ್ಯಾಯಾಲಯಕ್ಕೆ ಆಕ್ಷೇಪಣಾ ಅರ್ಜಿ ಸಲ್ಲಿಸಿದ್ದರು.
2025ರ ಆಗಸ್ಟ್ 25ರಂದು ನ್ಯಾಯಾಲಯವು ಸುಕಾಂತ ದತ್ತ ಸೇರಿದಂತೆ ಒಟ್ಟು 39 ಆರೋಪಿಗಳ ವಿರುದ್ಧದ ಆರೋಪಪಟ್ಟಿಯನ್ನು ಅಂಗೀಕರಿಸಿತು. ಸದ್ಯ ಪ್ರಕರಣದ ವಿಚಾರಣೆಯು ಚಟ್ಟೋಗ್ರಾಮ್ ವಿಭಾಗೀಯ ತ್ವರಿತ ವಿಚಾರಣಾ ನ್ಯಾಯಮಂಡಳಿಯಲ್ಲಿ ನಡೆಯುತ್ತಿದ್ದು, ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗುತ್ತಿದೆ.
ಚಿನ್ಮಯ ಕೃಷ್ಣ ದಾಸ್ ಅವರ ಜೈಲು ಸ್ಥಳಾಂತರದ ಬೆನ್ನಲ್ಲೇ ಅವರ ಆಹಾರ ಪದ್ಧತಿ, ಆರೋಗ್ಯ ಮತ್ತು ವೈದ್ಯಕೀಯ ಸೌಲಭ್ಯಗಳ ವಿಚಾರ ಮತ್ತೆ ಚರ್ಚೆಗೆ ಬಂದಿದೆ. ಢಾಕಾ ಕೇಂದ್ರ ಕಾರಾಗೃಹದಲ್ಲಿ ಅವರಿಗೆ ಅಗತ್ಯವಾದ ಆಹಾರ ಹಾಗೂ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲಾಗುತ್ತದೆಯೇ ಎಂಬುದು ಈಗ ಕುತೂಹಲ ಮೂಡಿಸಿದೆ.
-
ರಾಜಕೀಯ21 hours agoPuttur-Big Breaking: ನಾಳೆ ಪುತ್ತೂರಿಗೆ ಬಿಜೆಪಿ ಘಟಾನುಘಟಿ ನಾಯಕರ ದಂಡು; ವಿಜಯೇಂದ್ರ, ಆರ್. ಅಶೋಕ್ ಸಹಿತ ಹಲವು ಹಿರಿಯ ನಾಯಕರ ಭೇಟಿ
-
ಸಿನೆಮಾ22 hours agoRamya Krishnan-ಪತಿಯಿಂದ ದೂರವಿದ್ದರೂ ದಾಂಪತ್ಯ ಗಟ್ಟಿಯಾಗಿದೆ..! ವಿಚ್ಛೇದನ ವದಂತಿಗೆ ರಮ್ಯಾ ಕೃಷ್ಣನ್ ಸ್ಪಷ್ಟನೆ
-
ಅಂತರ ರಾಜ್ಯ21 hours agoElection Commission-ಯುಪಿಯಲ್ಲಿ 1.27 ಕೋಟಿ ಹಿಂದೂ ಮತದಾರರು ನಾಪತ್ತೆ? ಆದಿತ್ಯನಾಥ್ ಆರೋಪಕ್ಕೆ ಚುನಾವಣಾ ಆಯೋಗದ ಸ್ಪಷ್ಟನೆ
-
ಬಿಗ್ ನ್ಯೂಸ್4 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಕಾರ್ಯಕ್ರಮಗಳು21 hours agoPuttur-ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ ರಾಷ್ಟ್ರೀಯ ಈಜು ಚಾಂಪಿಯನ್ಶಿಪ್-2026
-
ಅಂತರ ರಾಜ್ಯ21 hours agoChinmaya Krishna Das-ಚಟ್ಟೋಗ್ರಾಮ್ನಿಂದ ಢಾಕಾ ಜೈಲಿಗೆ ಸ್ಥಳಾಂತರ: ಹಿಂದೂ ಸನ್ಯಾಸಿ ಚಿನ್ಮಯ ಕೃಷ್ಣ ದಾಸ್ ಆರೋಗ್ಯದ ಬಗ್ಗೆ ವಕೀಲರ ಕಳವಳ
-
ಬಿಗ್ ನ್ಯೂಸ್4 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ಮಂಗಳೂರು4 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು















