ಶಿಕ್ಷಣ
Viveka Smruti-ವಿವೇಕಾನಂದ ಕಾಲೇಜಿನಲ್ಲಿ ‘ವಿವೇಕ ಸ್ಮೃತಿ’ ಸರಣಿ ಉಪನ್ಯಾಸ ಕಾರ್ಯಕ್ರಮ; ರಾಷ್ಟ್ರೀಯ ಪ್ರಜ್ಞೆಯು ಸ್ವತಂತ್ರವಾದ ಪರಿಕಲ್ಪನೆ-ಡಾ. ಅಜಕ್ಕಳ ಗಿರೀಶ ಭಟ್
ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಕೇಂದ್ರ, ವಿವೇಕಾನಂದ ಸಂಶೋಧನಾ ಕೇಂದ್ರ, ಐಕ್ಯೂಎಸಿ ಮತ್ತು ವಿವೇಕಾನಂದ ಕಾಲೇಜ್ ಆಫ್ ಫಾರ್ಮಾಸ್ಯುಟಿಕಲ್ ಸೈನ್ಸಸ್ ಇದರ ಸಹಯೋಗದಲ್ಲಿ ನಡೆದ ‘ವಿವೇಕ ಸ್ಮೃತಿ’ ಸರಣಿ ಉಪನ್ಯಾಸ ಕಾರ್ಯಕ್ರಮದ 29ನೆಯ ಸಂಚಿಕೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಕುವೆಂಪು ಭಾಷಾಭಾರತಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಡಾ. ಅಜಕ್ಕಳ ಗಿರೀಶ ಭಟ್ ಮಾತನಾಡಿದರು.
ಪುತ್ತೂರು, ಜೂನ್ 12: ರಾಷ್ಟ್ರ ಎನ್ನುವಾಗ ಅಲ್ಲಿ ನಾಗರೀಕತೆಯ ಪರಂಪರೆ ಹಾಗೂ ಸಾಂಸ್ಕೃತಿಕ ಪ್ರಕಾರಗಳು ಪ್ರಮುಖವಾಗುತ್ತದೆ. ರಾಷ್ಟ್ರೀಯ ಪ್ರಜ್ಞೆ ಎಂದರೆ ನಮ್ಮ ದೇಶದೊಳಗಿನ ಪರಿಸರ, ಸಂಸ್ಕೃತಿ ಹಾಗೂ ಎಲ್ಲಾ ಅಂಶಗಳ ಬಗೆಗೆ ಅಭಿಮಾನವನ್ನು ಮೈಗೂಡಿಸಿಕೊಳ್ಳುವುದಾಗಿದೆ. ಸ್ವಾಮಿ ವಿವೇಕಾನಂದರು ದೇಶದ ಒಳಿತಿಗಾಗಿ ಯಾರನ್ನೂ ಬೇಧ ಭಾವ ಮಾಡದೇ ಎಲ್ಲರೂ ನನ್ನವರೆಂಬ ಭಾವನೆಯನ್ನು ಬೆಳೆಸಿಕೊಳ್ಳಬೇಕು ಎಂದವರು. ರಾಷ್ಟ್ರೀಯ ಪ್ರಜ್ಞೆಯು ಸ್ವತಂತ್ರವಾದ ಪರಿಕಲ್ಪನೆಯಾಗಿದೆ. ಸುಶಿಕ್ಷಿತ ಸಮಾಜ ರೂಪುಗೊಂಡರೂ ದೇಶದ ಕುರಿತು ಅಭಿಮಾನ ಹೊಂದುವುದು ಅತ್ಯಂತ ಮುಖ್ಯ ಎಂದು ಕುವೆಂಪು ಭಾಷಾಭಾರತಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಡಾ. ಅಜಕ್ಕಳ ಗಿರೀಶ ಭಟ್ ತಿಳಿಸಿದರು.
ಇವರು ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಕೇಂದ್ರ, ವಿವೇಕಾನಂದ ಸಂಶೋಧನಾ ಕೇಂದ್ರ, ಐಕ್ಯೂಎಸಿ ಮತ್ತು ವಿವೇಕಾನಂದ ಕಾಲೇಜ್ ಆಫ್ ಫಾರ್ಮಾಸ್ಯುಟಿಕಲ್ ಸೈನ್ಸಸ್ ಇದರ ಸಹಯೋಗದಲ್ಲಿ ನಡೆದ ‘ವಿವೇಕ ಸ್ಮೃತಿ’ ಸರಣಿ ಉಪನ್ಯಾಸ ಕಾರ್ಯಕ್ರಮದ 29ನೆಯ ಸಂಚಿಕೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ವಿವೇಕಾನಂದ ಕಾಲೇಜ್ ಆಫ್ ಫಾರ್ಮಾಸ್ಯುಟಿಕಲ್ ಸೈನ್ಸಸ್ ಇದರ ಆಡಳಿತ ಮಂಡಳಿಯ ಸಂಚಾಲಕ ಗೋವಿಂದ ಪ್ರಕಾಶ್ ಸಾಯ ಅಧ್ಯಕ್ಷೀಯ ನುಡಿಗಳನ್ನಾಡಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.
ಕಾರ್ಯಕ್ರಮದಲ್ಲಿ ವಿವೇಕಾನಂದ ಮಹಾವಿದ್ಯಾಲಯದ (ಸ್ವಾಯತ್ತ) ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ ಭಟ್, ವಿವೇಕಾನಂದ ಫಾರ್ಮಸ್ಯುಟಿಕಲ್ ಕಾಲೇಜಿನ ಪ್ರಾಂಶುಪಾಲ ಡಾ. ಗುರುರಾಜ್.ಎಮ್ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ವಿವೇಕಾನಂದ ಸಂಶೋಧನಾ ಕೇಂದ್ರದ ನಿರ್ದೇಶಕಿ ಡಾ.ವಿಜಯಸರಸ್ವತಿ.ಬಿ ಸ್ವಾಗತಿಸಿ, ಭಾರತೀಯ ಸಂಸ್ಕೃತಿ ಮತ್ತು ಲಲಿತ ಕಲೆಗಳ ಅಧ್ಯಯನ ಕೇಂದ್ರದ ಸಂಯೋಜಕಿ ಡಾ. ವಿದ್ಯಾ ಎಸ್ ವಂದಿಸಿದರು. ಕಾಲೇಜಿನ ಕನ್ನಡ ವಿಭಾಗದ ಉಪನ್ಯಾಸಕ ಮಧು ಕುಮಾರ್ ನಿರ್ವಹಿಸಿದರು.
ಶಿಕ್ಷಣ
Vivekananda-ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಧನುಷ್ ಎಸ್, ಯಶಸ್ ಎಚ್ . ಸಿ ದ್ವಿತೀಯ ಪಿಯುಸಿ ಗಗನ್ ಕೆ.ಎನ್, ತೇಜಸ್ ಟಿ. ಆರ್, ಜಶ್ವಂತ್ ಗೌಡ, ಧನುಷ್ ಕೆ . ಎಚ್, ಆಕಾಶ್ ಭಾಗವಹಿಸಿರುತ್ತಾರೆ.
ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
ಶಿಕ್ಷಣ
Taekwondo Competition-ಟೇಕ್ವಾಂಡೋ ಸ್ಪರ್ಧೆ: ಸಂತ ಫಿಲೋಮಿನಾ ಪ ಪೂ ಕಾಲೇಜಿನ ಮೊಹಮ್ಮದ್ ಶಾಜ್ ಗೆ ಪ್ರಶಸ್ತಿ
ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ಪುತ್ತೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಚಿಕ್ಕಮಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಿಕ್ಕಮಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ಇವರು ಉಪ್ಪಿನಂಗಡಿ ನಿವಾಸಿ ಮೊಹಮ್ಮದ್ ಮುಸ್ತಫಾ ಮತ್ತು ಸೌಧ ದಂಪತಿಗಳ ಪುತ್ರ.
ಇವರಿಗೆ ಶಿಹಾಬ್ ಟಿ ತರಬೇತಿ ನೀಡಿರುತ್ತಾರೆ.
ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.
ಶಿಕ್ಷಣ
Vivekananda-ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಯ ಸಾಧನೆ..!
ಪುತ್ತೂರು: ವಿವೇಕಾನಂದ ಮಹಾವಿದ್ಯಾಲಯ (ಸ್ವಾಯತ್ತ) ಇದರ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಶ್ರೀಹರಿ ಶರ್ಮಾ ನೋಯ್ಡಾದ ಆಮಿಟಿ ಯುನಿವರ್ಸಿಟಿಯಲ್ಲಿ ಇಂಡಿಯನ್ ಅಸೋಸಿಯೇಷನ್ ಆಫ್ ಫಿಸಿಕ್ಸ್ ಟೀರ‍್ಸ್ (ಐಎಪಿಟಿ) ಸಂಸ್ಥೆಯ ಸಹಯೋಗದೊಂದಿಗೆ ನಡೆದ ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆ National Competition for Innovative Experiments in Physics (NCIEP)ನಲ್ಲಿ “Electromagnetic Shock-Absorber for the Real-Time Landing of Reusable Spacecraft” ಎಂಬ ಭೌತಶಾಸ್ತ್ರದ ಮಾದರಿಯನ್ನು ಸ್ಪರ್ಧೆಯಲ್ಲಿ ಪ್ರಸ್ತುತಪಡಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.

ಅಕ್ಟೋಬರ್ 4ರಿಂದ 6ರವರೆಗೆ ನಡೆದ 40ನೇ IAPT Annual Conventionನಲ್ಲಿ ಇವರು ಪದವಿ ಮತ್ತು ಸ್ನಾತಕೋತ್ತರ ವಿಭಾಗದಲ್ಲಿ ಭಾಗವಹಿಸಿದ್ದರು. ದೇಶದ ವಿವಿಧ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು, ಐಐಟಿಗಳು ಹಾಗೂ ವಿಶ್ವವಿದ್ಯಾಲಯಗಳ ಒಟ್ಟು 118 ಮಾದರಿಗಳ ಪೈಕಿ 12ಮಾದರಿಗಳು ಸ್ಪರ್ಧೆಗೆ ಆಯ್ಕೆಯಾಗಿದ್ದವು.
ಕರ್ನಾಟಕದಿಂದ ಪ್ರಸ್ತುತಪಡಿಸಲು ಆಯ್ಕೆಯಾದ ಏಕೈಕ ಮಾದರಿ ಇವರದ್ದಾಗಿತ್ತು. ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೋ. ಶಿವಪ್ರಸಾದ್ ಕೆ.ಎಸ್. ಈ ಮಾದರಿ ತಯಾರಿಕೆಯಲ್ಲಿ ಮಾರ್ಗದರ್ಶನ ನೀಡಿರುದ್ದಾರೆ. ಈ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ ಮತ್ತು ಶಿಕ್ಷಕೇತರ ವೃಂದ ಮತ್ತು ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.
-
ನಿಧನ ವಾರ್ತೆ15 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
-
ಮಂಗಳೂರು13 hours agoUjire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
-
ಮಂಗಳೂರು10 hours agoMulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
-
ಅಂತರ ರಾಜ್ಯ14 hours agoArrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
-
ರಾಜ್ಯ14 hours agoRobotic technology-ರೋಬೋಟಿಕ್ ತಂತ್ರಜ್ಞಾನದ ಅದ್ಭುತ: ಸ್ಪೇನ್ನಲ್ಲಿ ಕುಳಿತು ಕರ್ನಾಟಕದ ಮಹಿಳೆಗೆ ಹೃದಯ ಶಸ್ತ್ರಚಿಕಿತ್ಸೆ
-
ಅಂತರ ರಾಜ್ಯ14 hours agoJantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
-
ಅಂತರ ರಾಜ್ಯ14 hours agoBy-election results-ಉಪಚುನಾವಣೆ ಫಲಿತಾಂಶ: ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ತಮಿಳುನಾಡಿನಲ್ಲಿ ಟಿವಿಕೆ ಅಬ್ಬರ
-
ಅಂತರ ರಾಜ್ಯ15 hours agoDhruv Rati-BIG BREAKING: ದೆಹಲಿಯ ಜಂತರ್ ಮಂತರ್ ನಲ್ಲಿ ಸಿಜೆಪಿ ಪ್ರತಿಭಟನೆ ಹಿನ್ನಲೆ – ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ?




















