ಸ್ಥಳೀಯ
Guruvayankere-Big Breaking-ಗುರುವಾಯನಕೆರೆಯ ‘ಎಕ್ಸೆಲ್ ಕಾಲೇಜು’ ಮಾನ್ಯತೆ ರದ್ದು ಸುದ್ದಿ ಸಂಪೂರ್ಣ ಸುಳ್ಳು: ಗೊಂದಲ ಬೇಡ ಎಂದ ಆಡಳಿತ ಮಂಡಳಿ; ‘SATS’ ಮೂಲಕ ಸತ್ಯಾಸತ್ಯತೆ ತಿಳಿಯಲು ಪೋಷಕರಿಗೆ ಮುಕ್ತ ಸವಾಲು – ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಾನೂನು ಸಮರ ಸಾರಿದ ರಾಜ್ಯದ ಪ್ರತಿಷ್ಠಿತ ಕಾಲೇಜ್
ಬೆಳ್ತಂಗಡಿಯ ಗುರುವಾಯನಕೆರೆಯಲ್ಲಿರುವ ಪ್ರತಿಷ್ಠಿತ ‘ಎಕ್ಸೆಲ್ ಪದವಿ ಪೂರ್ವ ಕಾಲೇಜಿ’ನ ಮಾನ್ಯತೆ ರದ್ದಾಗಿದೆ ಎಂದು ಕೆಲವು ದೃಶ್ಯ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಶುಕ್ರವಾರ ಸಂಜೆಯಿಂದ ಹರಿದಾಡುತ್ತಿರುವ ಸುದ್ದಿ ಸಂಪೂರ್ಣ ಸತ್ಯಕ್ಕೆ ದೂರವಾಗಿದ್ದು, ಸಾರ್ವಜನಿಕರು ಹಾಗೂ ಪೋಷಕರು ಯಾವುದೇ ಅಪಪ್ರಚಾರಕ್ಕೆ ಕಿವಿಗೊಡಬಾರದು ಎಂದು ಕಾಲೇಜು ಆಡಳಿತ ಮಂಡಳಿ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದೆ.
ಬೆಳ್ತಂಗಡಿ: ಬೆಳ್ತಂಗಡಿಯ ಗುರುವಾಯನಕೆರೆಯಲ್ಲಿರುವ ಪ್ರತಿಷ್ಠಿತ ‘ಎಕ್ಸೆಲ್ ಪದವಿ ಪೂರ್ವ ಕಾಲೇಜಿ’ನ ಮಾನ್ಯತೆ ರದ್ದಾಗಿದೆ ಎಂದು ಕೆಲವು ದೃಶ್ಯ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಶುಕ್ರವಾರ ಸಂಜೆಯಿಂದ ಹರಿದಾಡುತ್ತಿರುವ ಸುದ್ದಿ ಸಂಪೂರ್ಣ ಸತ್ಯಕ್ಕೆ ದೂರವಾಗಿದ್ದು, ಸಾರ್ವಜನಿಕರು ಹಾಗೂ ಪೋಷಕರು ಯಾವುದೇ ಅಪಪ್ರಚಾರಕ್ಕೆ ಕಿವಿಗೊಡಬಾರದು ಎಂದು ಕಾಲೇಜು ಆಡಳಿತ ಮಂಡಳಿ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದೆ. ಸಂಸ್ಥೆಯ ಶೈಕ್ಷಣಿಕ ಘನತೆಗೆ ಕುಂದು ತರುವ ನಿಟ್ಟಿನಲ್ಲಿ ಕೆಲವು ‘ಕಾಣದ ಕೈಗಳು’ ವ್ಯವಸ್ಥಿತವಾಗಿ ಈ ಕುತಂತ್ರ ನಡೆಸಿವೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಂಡಳಿ, ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದೆ.

ವದಂತಿಗಳಿಗೆ ಪತ್ರಿಕಾ ಪ್ರಕಟಣೆ ಮೂಲಕ ತಾರ್ಕಿಕ ಉತ್ತರ ನೀಡಿರುವ ಸಂಸ್ಥೆಯು ತಾಂತ್ರಿಕ ವಿವರಗಳನ್ನು ಬಹಿರಂಗಪಡಿಸಿದೆ. ಗುರುವಾಯನಕೆರೆಯಲ್ಲಿರುವ ಎಕ್ಸೆಲ್ ಪಿಯು ಕಾಲೇಜು 2021ರಲ್ಲೇ ಶಿಕ್ಷಣ ಇಲಾಖೆಯಿಂದ ಅಧಿಕೃತ ಮಾನ್ಯತೆ (SS0351′ ಕಾಲೇಜು ಕೋಡ್) ಪಡೆದುಕೊಂಡಿದ್ದು, ಸಂಸ್ಥೆಯ ಉತ್ಕೃಷ್ಟ ಶೈಕ್ಷಣಿಕ ಗುಣಮಟ್ಟದಿಂದಾಗಿ ವಿದ್ಯಾರ್ಥಿಗಳ ದಾಖಲಾತಿ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿತ್ತು. ಈ ಹಿನ್ನೆಲೆಯಲ್ಲಿ ವೇಣೂರು ಹಾಗೂ ಬೆಳ್ತಂಗಡಿಯಲ್ಲಿ ಮತ್ತೆರಡು ಕಾಲೇಜು ಸ್ಥಾಪಿಸುವ ಉದ್ದೇಶದಿಂದ ಸಂಸ್ಥೆಯು 2024ರಲ್ಲಿ ಅನುಮತಿಗೆ ಅರ್ಜಿ ಸಲ್ಲಿಸಿತ್ತು ಹಾಗೂ ‘SS0376’ ಕೋಡ್ ನಡಿ ಮಾನ್ಯತೆ ನೀಡಲಾಗಿತ್ತು.
ಆದರೆ, ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಲಿ ಇರುವ ಕಾಲೇಜಿನಲ್ಲೇ ಹೆಚ್ಚಿನ ಬ್ಯಾಚ್‌ಗಳನ್ನು ಆರಂಭಿಸಲು ಅವಕಾಶ ನೀಡುವುದಾಗಿ ಭರವಸೆ ನೀಡಿದ ಕಾರಣ, ಹೊಸ ಕಾಲೇಜಿಗೆ ನೀಡಲಾಗಿದ್ದ ಮಾನ್ಯತೆಯನ್ನು ( ‘SS0376’ ಕೋಡ್ ) ರದ್ದುಗೊಳಿಸುವಂತೆ ಸ್ವತಃ ಆಡಳಿತ ಮಂಡಳಿಯೇ ಇಲಾಖೆಗೆ ಲಿಖಿತವಾಗಿ ಕೋರಿತ್ತು.
ಮಾಧ್ಯಮಗಳಲ್ಲಿ ಸದ್ಯ ಬಿತ್ತರವಾಗುತ್ತಿರುವ ‘SS0376’ ಕೋಡ್ ಅನ್ನು ರದ್ದುಗೊಳಿಸುವಂತೆ ಸಂಸ್ಥೆಯೇ ಕಳೆದ ಮಾರ್ಚ್ ತಿಂಗಳ ಕೊನೆಯಲ್ಲಿ ಶಿಕ್ಷಣ ಇಲಾಖೆಗೆ ಅರ್ಜಿ ಸಲ್ಲಿಸಿತ್ತು. ಈ ಕೋಡ್ ಅಡಿಯಲ್ಲಿ ಕಳೆದ ವರ್ಷವಾಗಲಿ ಅಥವಾ ಪ್ರಸಕ್ತ ವರ್ಷವಾಗಲಿ ಯಾವುದೇ ವಿದ್ಯಾರ್ಥಿಗಳ ದಾಖಲಾತಿ ನಡೆದೇ ಇಲ್ಲ. ಪ್ರಸ್ತುತ ಸಂಸ್ಥೆಯು ತನ್ನೆಲ್ಲಾ ವಿದ್ಯಾರ್ಥಿಗಳನ್ನು ‘SS0351’ ಕಾಲೇಜು ಕೋಡ್ ಅಡಿಯಲ್ಲಿ ದಾಖಲಾತಿ ಮಾಡಿಕೊಂಡಿದ್ದು, ಈ ಕೋಡ್ ಸಂಪೂರ್ಣ ಅಧಿಕೃತ ಹಾಗೂ ಚಾಲ್ತಿಯಲ್ಲಿದೆ
ಪ್ರಸಕ್ತ ಸಾಲಿನ ಪ್ರಥಮ ಪಿಯುಸಿ ದಾಖಲಾತಿಯೂ ಇದೇ ಕೋಡ್ ಅಡಿಯಲ್ಲಿ ಸುಸೂತ್ರವಾಗಿ ನಡೆಯುತ್ತಿದೆ ಎಂದು ಮಂಡಳಿ ತಿಳಿಸಿದೆ.
ನಮ್ಮಲ್ಲಿ ದಾಖಲಾಗಿರುವ ಪ್ರತಿಯೊಬ್ಬ ವಿದ್ಯಾರ್ಥಿಯ ಭವಿಷ್ಯವೂ ಸುರಕ್ಷಿತವಾಗಿದೆ. ಪೋಷಕರು ಯಾರದೋ ಮಾತನ್ನು ಕೇಳಿ ಆತಂಕಪಡುವ ಅಗತ್ಯವಿಲ್ಲ. ಪೋಷಕರು ತಮ್ಮ ಮಕ್ಕಳ ‘ಸ್ಯಾಟ್ಸ್’ (SATS) ಸಂಖ್ಯೆಯನ್ನು ಬಳಸಿ ಹತ್ತಿರದ ಡಿಡಿಪಿಯು (DDPU) ಕಚೇರಿ ಅಥವಾ ರಾಜ್ಯದ ಯಾವುದೇ ಸರ್ಕಾರಿ ಕಾಲೇಜುಗಳಲ್ಲಿ ಕಾಲೇಜು ಕೋಡ್‌ನ ಮಾನ್ಯತೆಯನ್ನು ಸ್ವತಃ ಖಚಿತಪಡಿಸಿಕೊಳ್ಳಬಹುದು ಎಂದು ಆಡಳಿತ ಮಂಡಳಿ ಮುಕ್ತ ಸವಾಲು ಹಾಕಿದೆ.

ಸಂಸ್ಥೆಯ ಅಭಿವೃದ್ಧಿಯನ್ನು ಸಹಿಸದೆ ದುರುದ್ದೇಶಪೂರ್ವಕವಾಗಿ ಸುಳ್ಳು ಸುದ್ದಿ ಬಿತ್ತರಿಸುತ್ತಿರುವವರ ವಿರುದ್ಧ ಕಾನೂನು ರೀತ್ಯಾ ಕಠಿಣ ಕ್ರಮ ಜರುಗಿಸಲಾಗುವುದು. ಪೋಷಕರು ಯಾವುದೇ ಕಾರಣಕ್ಕೂ ಧೃತಿಗೆಡಬಾರದು ಎಂದು ವಿನಂತಿಸಿರುವ ಕಾಲೇಜು, ಹೆಚ್ಚಿನ ಮಾಹಿತಿ ಹಾಗೂ ಸಂದೇಹಗಳಿದ್ದಲ್ಲಿ ನೇರವಾಗಿ ಪ್ರಾಚಾರ್ಯರ ದೂರವಾಣಿ ಸಂಖ್ಯೆಗಳಾದ 8050902319 ಅಥವಾ 9743409651 ಅನ್ನು ಸಂಪರ್ಕಿಸಲು ಕೋರಿದೆ.
ಅಪರಾಧ
Bantwal-ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಗುಂಪುಗೂಡಿ ಗಲಾಟೆ; ಟೋಲ್ ಉಪಕರಣಗಳಿಗೆ ಹಾನಿ ಯತ್ನ – ಪ್ರಕರಣ ದಾಖಲು
ಯಾವುದೇ ಪೂರ್ವಾನುಮತಿ ಪಡೆಯದೆ ರಾಜಕೀಯ ಪಕ್ಷವೊಂದರ ಧ್ವಜ ಹಾಗೂ ಬ್ಯಾನರ್‌ಗಳನ್ನು ಹಿಡಿದು ಗುಂಪುಗೂಡಿದ ಕೆಲವರು ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಟೋಲ್ ಕಾರ್ಯಾಚರಣೆಗೆ ಅಡ್ಡಿಪಡಿಸಿ, ಉಪಕರಣಗಳಿಗೆ ಹಾನಿ ಮಾಡಲು ಯತ್ನಿಸಿದ ಘಟನೆ ನ.26ರಂದು ನಡೆದಿದೆ.
ಬಂಟ್ವಾಳ: ಯಾವುದೇ ಪೂರ್ವಾನುಮತಿ ಪಡೆಯದೆ ರಾಜಕೀಯ ಪಕ್ಷವೊಂದರ ಧ್ವಜ ಹಾಗೂ ಬ್ಯಾನರ್‌ಗಳನ್ನು ಹಿಡಿದು ಗುಂಪುಗೂಡಿದ ಕೆಲವರು ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಟೋಲ್ ಕಾರ್ಯಾಚರಣೆಗೆ ಅಡ್ಡಿಪಡಿಸಿ, ಉಪಕರಣಗಳಿಗೆ ಹಾನಿ ಮಾಡಲು ಯತ್ನಿಸಿದ ಘಟನೆ ನ.26ರಂದು ನಡೆದಿದೆ.
ನ.26ರಂದು ಬೆಳಿಗ್ಗೆ ಸುಮಾರು 11.40ರ ವೇಳೆಗೆ ಈ ಘಟನೆ ನಡೆದಿದ್ದು, ಗುಂಪುಗೂಡಿದವರು ಟೋಲ್ ಪ್ಲಾಜಾದ ಕಾರ್ಯಾಚರಣೆಗೆ ಅಡ್ಡಿಪಡಿಸಿದ್ದಲ್ಲದೆ, ಅಲ್ಲಿನ ಉಪಕರಣಗಳಿಗೆ ಹಾನಿ ಮಾಡಲು ಪ್ರಯತ್ನಿಸಿದ್ದಾರೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮಂಗಳೂರು ಯೋಜನಾ ನಿರ್ದೇಶಕರು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಈ ದೂರಿನ ಆಧಾರದಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 166/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 189(2), 191(2) ಹಾಗೂ 190ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಶಿಕ್ಷಣ
Narendra-ನ.28 : ನರೇಂದ್ರ ಪ.ಪೂ.ಕಾಲೇಜಿನ ವಾರ್ಷಿಕೋತ್ಸವ ಸಂಭ್ರಮ “ಪ್ರತಿಭಾ ಪರ್ವ”
2026-27 ನೇ ಶೈಕ್ಷಣಿಕ ಸಾಲಿನ ವಾರ್ಷಿಕೋತ್ಸವ ಸಂಭ್ರಮ “ ಪ್ರತಿಭಾ ಪರ್ವ” ಕಾರ‍್ಯಕ್ರಮವು ನವೆಂಬರ್ 28 , ಶನಿವಾರದಂದು ತೆಂಕಿಲದ ನರೇಂದ್ರ ಪ.ಪೂ. ಕಾಲೇಜಿನ ಹಂಸಧ್ವನಿ ಸಭಾಂಗಣದಲ್ಲಿ ಅಪರಾಹ್ನ 2 ಗಂಟೆಯಿಂದ ಪ್ರಾರಂಭಗೊಳ್ಳಲಿದೆ. ಅಪರಾಹ್ನ 3 ಗಂಟೆಯಿಂದ ಸಭಾ ಕಾರ‍್ಯಕ್ರಮ ನಡೆಯಲಿದ್ದು ಕಾರ‍್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ರವೀಶ ನಾಯಕ್ ಬಿ.ಸಿ. ಇವರು ವಹಿಸಿಕೊಳ್ಳಲಿದ್ದಾರೆ.
ಶಿಕ್ಷಣದ ಮೂಲಕ ಸಾಮಾಜಿಕ ಬದಲಾವಣೆಯ ಮಹತ್ತರ ಉದ್ದೇಶವನ್ನಿಟ್ಟುಕೊಂಡು ಕಾರ್ಯ ನಿರ್ವಹಿಸುತ್ತಿರುವ ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಘಟಕವಾದ ನರೇಂದ್ರ ಪದವಿ ಪೂರ್ವ ಕಾಲೇಜು ಶಿಕ್ಷಣದ ಮೂಲಕ ವಿದ್ಯಾರ್ಥಿಯ ಬೌಧ್ಧಿಕ, ಸಾಮಾಜಿಕ, ಭೌತಿಕ, ಆರ್ಥಿಕ, ಧಾರ್ಮಿಕ, ಸಾಂಸ್ಕೃತಿಕ, ನೈತಿಕ,ಆಧ್ಯಾತ್ಮಿಕ ಮೌಲ್ಯಗಳಿಂದ ಪ್ರಬಲವಾಗಿರುವ ಬುದ್ಧಿಶಕ್ತಿಯನ್ನು ಉತ್ತೇಜಿಸಿ ಸದೃಢರನ್ನಾಗಿ ಬೆಳೆಸುವ ಉದ್ದೇಶವನ್ನು ಹೊಂದಿದೆ.
2017ರಲ್ಲಿ ತೆಂಕಿಲದ ವಿವೇಕನಗರದಲ್ಲಿ ಸ್ಥಾಪನೆಗೊಂಡ ಸಂಸ್ಥೆ ನರೇಂದ್ರ ಪದವಿ ಪೂರ್ವ ಕಾಲೇಜು ಇದೀಗ ಒಂಬತ್ತು ವರ್ಷಗಳ ಯಶಸ್ವಿ ಪಯಣವನ್ನು ಪೂರೈಸಿ, ಹತ್ತನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಶುಭ ಸಂಭ್ರಮದಲ್ಲಿದೆ.
2026-27 ನೇ ಶೈಕ್ಷಣಿಕ ಸಾಲಿನ ವಾರ್ಷಿಕೋತ್ಸವ ಸಂಭ್ರಮ “ ಪ್ರತಿಭಾ ಪರ್ವ” ಕಾರ‍್ಯಕ್ರಮವು ನವೆಂಬರ್ 28 , ಶನಿವಾರದಂದು ತೆಂಕಿಲದ ನರೇಂದ್ರ ಪ.ಪೂ. ಕಾಲೇಜಿನ ಹಂಸಧ್ವನಿ ಸಭಾಂಗಣದಲ್ಲಿ ಅಪರಾಹ್ನ 2 ಗಂಟೆಯಿಂದ ಪ್ರಾರಂಭಗೊಳ್ಳಲಿದೆ. ಅಪರಾಹ್ನ 3 ಗಂಟೆಯಿಂದ ಸಭಾ ಕಾರ‍್ಯಕ್ರಮ ನಡೆಯಲಿದ್ದು ಕಾರ‍್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ರವೀಶ ನಾಯಕ್ ಬಿ.ಸಿ. ಇವರು ವಹಿಸಿಕೊಳ್ಳಲಿದ್ದಾರೆ.
ಮುಖ್ಯಅತಿಥಿಯಾಗಿ ಕರ್ನಾಟಕ ಹೈಕೋರ್ಟ್ನ ಹಿರಿಯ ವಕೀಲರು, ಕರ್ನಾಟಕದ ಮಾಜಿ ಹೆಚ್ಚುವರಿ ಅಡ್ವೊಕೇಟ್ ಜನರಲ್ ಮತ್ತು ಕರ್ನಾಟಕ ಬ್ಯಾಂಕ್ ಲಿಮಿಟೆಡ್ ನ ಸ್ವತಂತ್ರ ನಿರ್ದೇಶಕರು ಮತ್ತು ಪುತ್ತೂರಿನ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ನೂತನ ಆಡಳಿತ ಮಂಡಳಿಯ ಸದಸ್ಯರಾದ ಡಾ. ಎಮ್. ಅರುಣ್ ಶ್ಯಾಮ್ ರವರು ಭಾಗವಹಿಸಲಿದ್ದಾರೆ. ಇನ್ನೋರ್ವ ಅತಿಥಿಯಾಗಿ ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕರಾದ ರವೀಂದ್ರ ಪಿ. ಇವರು ಭಾಗವಹಿಸಲಿದ್ದಾರೆ.
ನವೆಂಬರ್ 28 ರಂದು ಅಪರಾಹ್ನ 2 ಗಂಟೆಯಿಂದ ವಿದ್ಯಾರ್ಥಿ ಸಾಧಕರಿಗೆ ಅಭಿನಂದನಾ ಸಮಾರಂಭ ಮತ್ತು ಪ್ರಸಕ್ತ ಸಾಲಿನಲ್ಲಿ ಶೈಕ್ಷಣಿಕವಾಗಿ, ಸಾಂಸ್ಕೃತಿಕ ,ಕ್ರೀಡೆ ಮತ್ತು ಇನ್ನಿತರ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದವರಿಗೆ ಬಹುಮಾನ ವಿತರಣಾ ಕಾರ‍್ಯಕ್ರಮ“ ಪ್ರತಿಭಾ ಪುರಸ್ಕಾರ” ನಡೆಯಲಿದೆ. ಈ ಕಾರ‍್ಯಕ್ರಮದ ಅಧ್ಯಕ್ಷತೆಯನ್ನು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕರಾದ ಮಹಾಲಕ್ಷ್ಮೀ ಕೆ. ಇವರು ವಹಿಸಿಕೊಳ್ಳಲಿದ್ದಾರೆ.
ಮುಖ್ಯಅತಿಥಿಗಳಾಗಿ ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಗಳು ನರಿಮೊಗರು ಪುತ್ತೂರು ಇಲ್ಲಿನ ಮುಖ್ಯಗುರುಗಳಾದ ಪ್ರಸನ್ನ ಕೆ. ಅವರು ಭಾಗವಹಿಸಲಿದ್ದಾರೆ. ನರೇಂದ್ರ ಪ.ಪೂ. ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ರವೀಶ ನಾಯಕ್ ಬಿ.ಸಿ. , ಸದಸ್ಯರಾದ ಸತ್ಯನಾರಾಯಣ ಬಿ., ರಮೇಶ ನಾಯಕ್ ಕೆ., ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಗುಣಪಾಲ, ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ತೀರ್ಥರಾಜ್ ಕೆ. ಉಪಸ್ಥಿತಿ ಇರಲಿದ್ದಾರೆ. ಮತ್ತು ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಾದ ದ್ವಿತೀಯ ವಿಜ್ಞಾನ ವಿಭಾಗದ ಶ್ರೀಶಾನ್ ಡಿ.ಕೆ., ಕನ್ನಿಕಾ ಕೆ.ಆರ್., ಪ್ರಥಮ ವಿಜ್ಞಾನ ವಿಭಾಗದ ಜೆ.ಶೃಜಾ ಭಾಗವಹಿಸಲಿದ್ದಾರೆ.ಸಭಾಕರ‍್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕರ‍್ಯಕ್ರಮಗಳು ನಡೆಯಲಿದೆ. ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಅಪರಾಧ
Punacha-ಪುಣಚದಲ್ಲಿ ಬೈಕ್‌ಗೆ ಕಾರು ಡಿಕ್ಕಿ; ಸವಾರನಿಗೆ ಗಂಭೀರ ಗಾಯ – ನಿಲ್ಲಿಸದೆ ಪರಾರಿಯಾದ ಕಾರು?
ಪುಣಚದಲ್ಲಿ ಬೈಕ್‌ಗೆ ಕಾರೊಂದು ಡಿಕ್ಕಿ ಹೊಡೆದು, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ತೋರಣಕಟ್ಟೆಯಿಂದ ಪುಣಚ ಸಂಪರ್ಕಿಸುವ ರಸ್ತೆಯ ತಿರುವಿನಲ್ಲಿ ನಡೆದಿದೆ. ಅಪಘಾತದ ಬಳಿಕ ಕಾರು ನಿಲ್ಲಿಸದೆ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಪುತ್ತೂರು: ಪುಣಚದಲ್ಲಿ ಬೈಕ್‌ಗೆ ಕಾರೊಂದು ಡಿಕ್ಕಿ ಹೊಡೆದು, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ತೋರಣಕಟ್ಟೆಯಿಂದ ಪುಣಚ ಸಂಪರ್ಕಿಸುವ ರಸ್ತೆಯ ತಿರುವಿನಲ್ಲಿ ನಡೆದಿದೆ.
ಬೈಕ್ ಸವಾರ ನಿಧಾನವಾಗಿ ರಸ್ತೆ ಏರುತ್ತಿದ್ದ ವೇಳೆ ಎದುರಿನಿಂದ ಬಂದ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಗಾಯಗೊಂಡಿದ್ದು, ಅಪಘಾತದ ಬಳಿಕ ಕಾರು ನಿಲ್ಲಿಸದೆ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಅಪಘಾತದ ದೃಶ್ಯಗಳು ಸಮೀಪದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಅಪಘಾತಕ್ಕೆ ಕಾರಣವಾದ ಕಾರು ಹಾಗೂ ಅದರ ಚಾಲಕನ ಪತ್ತೆಗೆ ಈ ದೃಶ್ಯಗಳು ಸಹಕಾರಿಯಾಗುವ ಸಾಧ್ಯತೆಯಿದೆ.
ಇನ್ನು ಅಪಘಾತಕ್ಕೆ ಕಾರಣವಾದ ಕಾರಿನ ಚಾಲಕನ ಬಗ್ಗೆ ಸ್ಥಳೀಯವಾಗಿ ವಿವಿಧ ಚರ್ಚೆಗಳು ನಡೆಯುತ್ತಿದ್ದು, ಅಪಘಾತದ ವೇಳೆ ಚಾಲಕ ಮದ್ಯದ ಅಮಲಿನಲ್ಲಿದ್ದನೇ ಎಂಬ ಬಗ್ಗೆಯೂ ಆರೋಪಗಳು ಕೇಳಿಬಂದಿವೆ. ಆದರೆ ಈ ಆರೋಪಗಳಿಗೆ ಅಧಿಕೃತ ದೃಢೀಕರಣ ಲಭ್ಯವಾಗಿಲ್ಲ.
-
ಸುಳ್ಯ22 hours agoSuresh Raina-ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯದ ‘ರಸಪಾಕ ಗ್ರಾಂಡ್’ ಹೋಟೆಲ್ ಗೆ ಭೇಟಿ
-
ಸ್ಥಳೀಯ22 hours agoUppinangadi-ಉಪ್ಪಿನಂಗಡಿ: ಇಂದಿನಿಂದ ವಳಾಲು ಟೋಲ್ ಕಾರ್ಯಾರಂಭ; ಶೀಘ್ರದಲ್ಲೇ ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವು..!
-
ಸ್ಥಳೀಯ20 hours agoKadaba-ಕಡಬ: ಜಾಗದ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಗಲಾಟೆ; ಪರಸ್ಪರ ಹಲ್ಲೆ, ಜೀವಬೆದರಿಕೆ ಆರೋಪ; ಎರಡೂ ಕಡೆಯಿಂದ ಪ್ರಕರಣ ದಾಖಲು
-
ಮಂಗಳೂರು19 hours agoPriyanka Kharge-ಮಂಗಳೂರಿನಲ್ಲಿ ಭಾರತದ ಮೊದಲ ಸುಸ್ಥಿರ ಕರಾವಳಿ ಡೇಟಾ ಸೆಂಟರ್ ಸ್ಥಾಪನೆ : ತಣ್ಣೀರುಬಾವಿಯಲ್ಲಿ ಸ್ಥಳ ಪರಿಶೀಲಿಸಿದ ಸಚಿವ ಪ್ರಿಯಾಂಕ ಖರ್ಗೆ; ತಣ್ಣೀರು ಭಾವಿಯಲ್ಲಿ 49 ಎಕರೆ ಪ್ರದೇಶ ಗುರುತು; ಯೋಜನೆಯ ಕಾರ್ಯಸಾಧ್ಯತೆ ಪರಿಶೀಲನೆಗೆ ಕ್ರಮ – ಬಿಯಾಂಡ್ ಬೆಂಗಳೂರು ಆಶಯದಡಿ ಜಾಗತಿಕ ಮಟ್ಟದ ತಂತ್ರಜ್ಞಾನ ಪರಿಸರ ವ್ಯವಸ್ಥೆ ನಿರ್ಮಾಣಕ್ಕೆ ಮತ್ತೊಂದು ಹೆಜ್ಜೆ
-
ನಿಧನ ವಾರ್ತೆ3 hours agoMangaluru-ಮಂಗಳೂರು: ರಸ್ತೆ ದಾಟುತ್ತಿದ್ದ 2ನೇ ತರಗತಿ ವಿದ್ಯಾರ್ಥಿಯ ಮೇಲೆ ಬಸ್ ಹರಿದು ಸಾವು
-
ಅಂತರ ರಾಜ್ಯ3 hours agoChennai Jain couple-ತಿರುಪತಿ ತಿಮ್ಮಪ್ಪನಿಗೆ 206 ಕೋಟಿ ರೂ. ಮೌಲ್ಯದ 121 ಕೆ.ಜಿ. ಚಿನ್ನ, ವಜ್ರಾಭರಣ ಕಾಣಿಕೆ ನೀಡಿದ ಚೆನ್ನೈ ಜೈನ ದಂಪತಿ..!
-
ಅಪರಾಧ3 hours agoPunacha-ಪುಣಚದಲ್ಲಿ ಬೈಕ್‌ಗೆ ಕಾರು ಡಿಕ್ಕಿ; ಸವಾರನಿಗೆ ಗಂಭೀರ ಗಾಯ – ನಿಲ್ಲಿಸದೆ ಪರಾರಿಯಾದ ಕಾರು?
-
ಅಪರಾಧ3 hours agoPunacha-ಪುಣಚ: ಪತ್ನಿಯನ್ನು ಕೊಲೆಗೈದು ಹೃದಯಾಘಾತವೆಂದು ಬಿಂಬಿಸಲು ಯತ್ನ: ಪತಿಗೆ 5 ವರ್ಷ ಜೈಲು..!















