Connect with us

ಸ್ಥಳೀಯ

Dharmasthala-ಧರ್ಮಸ್ಥಳ ‘ಬುರುಡೆ’ ಪ್ರಕರಣ: ‘200 ಕೋಟಿ ಡೀಲ್’ ಆರೋಪದ ವಿರುದ್ಧ ಎಸ್‌ಐಟಿಗೆ ಮಟ್ಟಣ್ಣನವರ್ ದೂರು; ಚಿನ್ನಯ್ಯ ಹಾಗೂ ತನ್ನ ಬ್ರೈನ್ ಮ್ಯಾಪಿಂಗ್‌ಗೆ ಸವಾಲು..!

Published

on

Ad Widget

Ad Widget

Ad Widget

Ad Widget

ಧರ್ಮಸ್ಥಳದ ಸೌಜನ್ಯ ಹಾಗೂ ಇತರ ಸರಣಿ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡಕ್ಕೆ (SIT) ಹೋರಾಟಗಾರ ಗಿರೀಶ್ ಮಟ್ಟಣ್ಣನವರ್ ಅವರು ದೂರು ಸಲ್ಲಿಸಿದ್ದು, ಈ ಪ್ರಕರಣದಲ್ಲಿ ಸುಳ್ಳು ಮಾಹಿತಿ ನೀಡುತ್ತಿರುವ ಚಿನ್ನಯ್ಯ ಎಂಬವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

Ad Widget

Ad Widget

Ad Widget

Ad Widget

ಬೆಳ್ತಂಗಡಿ: ಧರ್ಮಸ್ಥಳದ ಸೌಜನ್ಯ ಹಾಗೂ ಇತರ ಸರಣಿ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡಕ್ಕೆ (SIT) ಹೋರಾಟಗಾರ ಗಿರೀಶ್ ಮಟ್ಟಣ್ಣನವರ್ ಅವರು ದೂರು ಸಲ್ಲಿಸಿದ್ದು, ಈ ಪ್ರಕರಣದಲ್ಲಿ ಸುಳ್ಳು ಮಾಹಿತಿ ನೀಡುತ್ತಿರುವ ಚಿನ್ನಯ್ಯ ಎಂಬವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಘಟನೆಯ ಹಿನ್ನೆಲೆ:
ಚಿನ್ನಯ್ಯ ಇತ್ತೀಚೆಗೆ ಉಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ, ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಅವರ ಹೆಸರಿಗೆ ಕಳಂಕ ತರಲು ಹೋರಾಟಗಾರರು 200 ಕೋಟಿ ರೂಪಾಯಿಗಳ ವ್ಯವಹಾರ ನಡೆಸಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದರು. ಈ ಹೇಳಿಕೆಯಲ್ಲಿ ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ, ನಟ ಪ್ರಕಾಶ್ ರಾಜ್, ಸಮೀರ್‌ ಎಂಡಿ, ಅಜಯ್ ಅಂಚನ್, ಅಭಿಷೇಕ್, ದಿನೇಶ್ ಸೇರಿದಂತೆ ಹಲವರ ಹೆಸರನ್ನು ಉಲ್ಲೇಖಿಸಲಾಗಿತ್ತು.

Ad Widget

Ad Widget <> Ad Widget

ದೂರಿನಲ್ಲಿರುವ ಪ್ರಮುಖ ಅಂಶಗಳು:
ಸುಳ್ಳು ಆರೋಪ ಮತ್ತು ಸಂಚು: ಚಿನ್ನಯ್ಯ ನೀಡಿರುವ 200 ಕೋಟಿ ರೂಪಾಯಿ ಡೀಲ್ ಆರೋಪ ಸಂಪೂರ್ಣ ನಿರಾಧಾರವಾಗಿದ್ದು, ಇದು ಸಮಾಜದಲ್ಲಿ ಕೋಮು ಗಲಭೆ ಸೃಷ್ಟಿಸುವ ಮತ್ತು ನೈಜ ಆರೋಪಿಗಳನ್ನು ರಕ್ಷಿಸುವ ದೊಡ್ಡ ಸಂಚಿನ ಭಾಗವಾಗಿದೆ ಎಂದು ಮಟ್ಟೆಣ್ಣವರ ಆರೋಪಿಸಿದ್ದಾರೆ.

ಜಾಮೀನು ರದ್ದತಿಗೆ ಆಗ್ರಹ: ತನಿಖೆಗೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ಯಾವುದೇ ಹೇಳಿಕೆ ನೀಡಬಾರದು ಎಂಬ ಷರತ್ತನ್ನು ಉಲ್ಲಂಘಿಸಿರುವ ಹಿನ್ನೆಲೆಯಲ್ಲಿ ಚಿನ್ನಯ್ಯ ಅವರ ಜಾಮೀನನ್ನು ರದ್ದುಗೊಳಿಸಲು SIT ನ್ಯಾಯಾಲಯಕ್ಕೆ ಮನವಿ ಮಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

Ad Widget

Ad Widget

ಬ್ರೈನ್ ಮ್ಯಾಪಿಂಗ್ ಪರೀಕ್ಷೆಗೆ ಸವಾಲು: ಈ ಹಿಂದೆ ತಾನು ಅನೇಕ ಮೃತದೇಹಗಳನ್ನು ಹೂತು ಹಾಕಿರುವುದಾಗಿ ಹೇಳಿಕೆ ನೀಡಿದ್ದ ಚಿನ್ನಯ್ಯ, ಈಗ ಮಾತು ಬದಲಿಸುತ್ತಿದ್ದಾರೆ. ಸತ್ಯ ತಿಳಿಯಲು ಚಿನ್ನಯ್ಯ ಅವರಿಗೆ ‘ಬ್ರೈನ್ ಮ್ಯಾಪಿಂಗ್’ (Brain Mapping) ಪರೀಕ್ಷೆ ನಡೆಸಬೇಕು. ಈ ಪರೀಕ್ಷೆಗೆ ತಾವೂ ಸಿದ್ಧವಿರುವುದಾಗಿ ತಿಳಿಸಿರುವ ಗಿರೀಶ್ ಮಟ್ಟೆಣ್ಣವರ, ಇದನ್ನು ಲೈವ್ ಮಾಧ್ಯಮಗಳ ಮೂಲಕ ಜನರಿಗೆ ತೋರಿಸಬೇಕು ಎಂದು ಸವಾಲು ಹಾಕಿದ್ದಾರೆ.

ಚಿನ್ನಯ್ಯ ಹಾಗೂ ಕುಟುಂಬಕ್ಕೆ ಸೂಕ್ತ ಪೊಲೀಸ್ ಭದ್ರತೆ ನೀಡುವಂತೆ ಮನವಿ ಸಲ್ಲಿಸಿದ್ದಾರೆ.
ಈ ಕುರಿತು SIT ತಂಡವು ತಕ್ಷಣ ಸ್ಪಂದಿಸಿ, ಸಮಾಜದಲ್ಲಿ ಶಾಂತಿ ಕಾಪಾಡುವಂತೆ ಮತ್ತು ನ್ಯಾಯ ಒದಗಿಸುವಂತೆ ಅವರು ಆಗ್ರಹಿಸಿದ್ದಾರೆ

Ad Widget
Click to comment

Leave a Reply

ಅಪರಾಧ

Punacha-ಪುಣಚ: ಅಕ್ರಮ ಮರಳುಗಾರಿಕೆ ಪತ್ತೆ; ಪಿಕಪ್ ವಾಹನ ಜಪ್ತಿ- ನಾಲ್ವರು ವಶಕ್ಕೆ

Published

on

Ad Widget

Ad Widget

Ad Widget

Ad Widget

ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ದಂಬೆ ಎಂಬಲ್ಲಿ ಸಾರ್ವಜನಿಕ ತೋಡಿನಿಂದ ಅಕ್ರಮವಾಗಿ ಮರಳು ತೆಗೆದು ಸಾಗಾಟಕ್ಕೆ ಸಿದ್ಧಪಡಿಸುತ್ತಿದ್ದ ನಾಲ್ವರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಮರಳು ತುಂಬಿದ್ದ ಪಿಕಪ್ ವಾಹನವನ್ನು ಜಪ್ತಿ ಮಾಡಿದ್ದಾರೆ.

Ad Widget

Ad Widget

Ad Widget

Ad Widget

ವಿಟ್ಲ, ನ.20: ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ದಂಬೆ ಎಂಬಲ್ಲಿ ಸಾರ್ವಜನಿಕ ತೋಡಿನಿಂದ ಅಕ್ರಮವಾಗಿ ಮರಳು ತೆಗೆದು ಸಾಗಾಟಕ್ಕೆ ಸಿದ್ಧಪಡಿಸುತ್ತಿದ್ದ ನಾಲ್ವರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಮರಳು ತುಂಬಿದ್ದ ಪಿಕಪ್ ವಾಹನವನ್ನು ಜಪ್ತಿ ಮಾಡಿದ್ದಾರೆ.

Ad Widget

Ad Widget alt="Ad Widget"/>

Ad Widget

ಆರೋಪಿಗಳನ್ನು ಪುಣಚ ಗ್ರಾಮದ ವಿಶ್ವಾಸ್ ಹೆಚ್. (27), ಶಶಿಧರ (45), ಹರೀಶ್ ಅಜ್ಜಿನಡ್ಕ (35) ಹಾಗೂ ಕೇಪು ಗ್ರಾಮದ ಪುಷ್ಪರಾಜ್ ಎನ್. (32) ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ನ.19ರಂದು ಬೆಳಿಗ್ಗೆ ಪುಣಚ ಗ್ರಾಮದ ದಂಬೆ ಎಂಬಲ್ಲಿನ ಸಾರ್ವಜನಿಕ ತೋಡಿನಿಂದ ಮಾರಾಟ ಮಾಡುವ ಉದ್ದೇಶದಿಂದ ಅಕ್ರಮವಾಗಿ ಮರಳು ತೆಗೆದು ಪಿಕಪ್ ವಾಹನಕ್ಕೆ ತುಂಬಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ವಿಟ್ಲ ಪೊಲೀಸ್ ಠಾಣೆಯ ತನಿಖಾ ವಿಭಾಗದ ಪಿಎಸ್‌ಐ ರತ್ನಕುಮಾರ್ ಅವರಿಗೆ ಲಭಿಸಿತ್ತು.

ಮಾಹಿತಿ ಮೇರೆಗೆ ಪೊಲೀಸ್ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ, ನಾಲ್ವರು ವ್ಯಕ್ತಿಗಳು ತೋಡಿನಿಂದ ಮರಳು ತೆಗೆದು ಪಿಕಪ್ ವಾಹನಕ್ಕೆ ತುಂಬಿಸುತ್ತಿರುವುದು ಕಂಡುಬಂದಿದೆ. ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮರಳು ತೆಗೆಯುತ್ತಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ, ಸ್ಥಳದಲ್ಲಿದ್ದ ಮರಳು ತುಂಬಿದ KA-70-8785 ನೋಂದಣಿಯ ಪಿಕಪ್ ವಾಹನ ಸೇರಿದಂತೆ ಇತರ ಸೊತ್ತುಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.

Ad Widget

Ad Widget

ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 236/2026ರಂತೆ ಪ್ರಕರಣ ದಾಖಲಿಸಿಕೊಂಡಿದ್ದು, ಕರ್ನಾಟಕ ಕಿರು ಖನಿಜ ರಿಯಾಯಿತಿ ನಿಯಮಗಳು, MMDR ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಕಲಂಗಳಡಿ ತನಿಖೆ ಮುಂದುವರಿದಿದೆ.

Ad Widget
Continue Reading

ಅಪರಾಧ

Vitla-ವಿಟ್ಲ: ಪರವಾನಿಗೆ ಇಲ್ಲದೆ ಕೆಂಪು ಕಲ್ಲು ಸಾಗಾಟ; ಲಾರಿ ವಶ, ಚಾಲಕ–ಮಾಲೀಕನ ವಿರುದ್ಧ ಪ್ರಕರಣ

Published

on

Ad Widget

Ad Widget

Ad Widget

Ad Widget

ಯಾವುದೇ ಪರವಾನಿಗೆ ಅಥವಾ ಸೂಕ್ತ ದಾಖಲೆಗಳಿಲ್ಲದೆ ಲಾರಿಯಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿಯನ್ನು ವಿಟ್ಲ ಪೊಲೀಸರು ವಶಪಡಿಸಿಕೊಂಡಿದ್ದು, ಚಾಲಕ ಹಾಗೂ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

Ad Widget

Ad Widget

Ad Widget

Ad Widget

ವಿಟ್ಲ,ನ.20: ಯಾವುದೇ ಪರವಾನಿಗೆ ಅಥವಾ ಸೂಕ್ತ ದಾಖಲೆಗಳಿಲ್ಲದೆ ಲಾರಿಯಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿಯನ್ನು ವಿಟ್ಲ ಪೊಲೀಸರು ವಶಪಡಿಸಿಕೊಂಡಿದ್ದು, ಚಾಲಕ ಹಾಗೂ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ನ.19ರಂದು ಮಧ್ಯಾಹ್ನ ಕೇರಳ ಕಡೆಯಿಂದ ಮಂಚಿ ಮಾರ್ಗವಾಗಿ ವೀರಕಂಭ ಕಡೆಗೆ ಲಾರಿಯಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ವಿಟ್ಲ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಉಪ ನಿರೀಕ್ಷಕ ಜಯರಾಮ ಕೆ. ಅವರಿಗೆ ಲಭಿಸಿತ್ತು.

Ad Widget

Ad Widget <> Ad Widget

ಮಾಹಿತಿಯ ಮೇರೆಗೆ ಪೊಲೀಸ್ ಸಿಬ್ಬಂದಿಗಳೊಂದಿಗೆ ಬಂಟ್ವಾಳ ತಾಲೂಕಿನ ಬೊಳಂತೂರು ಗ್ರಾಮದ ಕೊಕ್ಕಪುನಿ ಎಂಬಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, KA-19-AA-0601 ನೋಂದಣಿಯ ಲಾರಿಯನ್ನು ತಡೆದು ಪರಿಶೀಲಿಸಿದರು. ಈ ವೇಳೆ ಯಾವುದೇ ಪರವಾನಿಗೆ ಅಥವಾ ಸೂಕ್ತ ದಾಖಲೆಗಳಿಲ್ಲದೆ ಕೆಂಪು ಕಲ್ಲು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.

ಪೊಲೀಸರು ಲಾರಿಯನ್ನು ವಶಪಡಿಸಿಕೊಂಡಿದ್ದು, ಚಾಲಕ ಮೊಹಮ್ಮದ್ ರಫೀಕ್ (62) ಹಾಗೂ ಲಾರಿ ಮಾಲೀಕ ಮೊಹಮ್ಮದ್ ಅಶ್ರಫ್ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 237/2026ರಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Ad Widget

Ad Widget

ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2), MMDR ಕಾಯ್ದೆ 1957ರ ಕಲಂ 4(1), 21 ಹಾಗೂ ಕರ್ನಾಟಕ ಕಿರು ಖನಿಜ ನಿಯಮಾವಳಿ 1994ರ ಕಲಂ 3, 44ರಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ad Widget
Continue Reading

ರಾಜಕೀಯ

BJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ

Published

on

Ad Widget

Ad Widget

Ad Widget

Ad Widget

ಗಡಿಪಾರಿಗೊಳಗಾದ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಅವರ ನಿವಾಸಕ್ಕೆ ಬಿಜೆಪಿ ಮುಖಂಡರಾದ ಸಹಜ್ ರೈ ಬಳಜ್ಜ, ಪ್ರಸನ್ನ ದರ್ಬೆ ಹಾಗೂ ಅಜಿತ್ ರೈ ಹೊಸಮನೆ ಭೇಟಿ ನೀಡಿ ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿದರು.

Ad Widget

Ad Widget

Ad Widget

Ad Widget

ಪುತ್ತೂರು: ಗಡಿಪಾರಿಗೊಳಗಾದ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಅವರ ನಿವಾಸಕ್ಕೆ ಬಿಜೆಪಿ ಮುಖಂಡರಾದ ಸಹಜ್ ರೈ ಬಳಜ್ಜ, ಪ್ರಸನ್ನ ದರ್ಬೆ ಹಾಗೂ ಅಜಿತ್ ರೈ ಹೊಸಮನೆ ಭೇಟಿ ನೀಡಿ ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿದರು.

Ad Widget

Ad Widget alt="Ad Widget"/>

Ad Widget

ನರಸಿಂಹ ಮಾಣಿ ಅವರು ಎದುರಿಸುತ್ತಿರುವ ಪ್ರಸಕ್ತ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕುಟುಂಬದ ಸದಸ್ಯರಿಗೆ ಧೈರ್ಯ ಹಾಗೂ ಆತ್ಮಸ್ಥೈರ್ಯ ತುಂಬುವ ಉದ್ದೇಶದಿಂದ ಈ ಭೇಟಿ ನಡೆಯಿತು. ಈ ಸಂದರ್ಭದಲ್ಲಿ ಅವರ ತಾಯಿಯ ಯೋಗಕ್ಷೇಮ ವಿಚಾರಿಸಿದ ಮುಖಂಡರು, ಧೈರ್ಯ ಕಳೆದುಕೊಳ್ಳದೆ ಆತ್ಮವಿಶ್ವಾಸದಿಂದ ಇರುವಂತೆ ಪ್ರೇರಣೆ ನೀಡಿದರು.

Ad Widget

Ad Widget <> Ad Widget

ಸಾಮಾಜಿಕ ಹಾಗೂ ಸಂಘಟನಾತ್ಮಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಕಾರ್ಯಕರ್ತರ ಕುಟುಂಬದೊಂದಿಗೆ ಸಮಾಜ ನಿಲ್ಲಬೇಕು ಎಂಬ ಆಶಯವನ್ನು ಈ ಸಂದರ್ಭದಲ್ಲಿ ವ್ಯಕ್ತಪಡಿಸಲಾಯಿತು.

ಭೇಟಿಯ ವೇಳೆ ಬಿಜೆಪಿ ಪುತ್ತೂರು ಮಂಡಲ ಉಪಾಧ್ಯಕ್ಷ ರತನ್ ರೈ ಕುಂಬ್ರ, ಪುತ್ತೂರು ಯುವಮೋರ್ಚಾ ನಗರ ಮಂಡಲ ಅಧ್ಯಕ್ಷ ನಿತೇಶ್ ನೆಲಪ್ಪಾಲು, ಯುವಮೋರ್ಚಾದ ಪವನ್ ಶೆಟ್ಟಿ ಕಂಬಳತ್ತಡ್ಡ, ಪ್ರೀತಮ್ ಶೆಟ್ಟಿ ಪೆರ್ನೆ, ಆದೇಶ್ ಶೆಟ್ಟಿ ಉಪ್ಪಿನಂಗಡಿ, ವಿಶ್ವನಾಥ ಕುಲಾಲ್ ಹಾಗೂ ಹಿಂದೂ ಜಾಗರಣ ವೇದಿಕೆಯ ರಾಜೇಶ್ ಉಪಸ್ಥಿತರಿದ್ದರು.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!