ಕಾರ್ಯಕ್ರಮಗಳು
Muliya-ಮುಳಿಯ ಮ್ಯಾನ್ಜೆಡ್ ಫಾರ್ಮ್ ಲ್ಯಾಂಡ್ ವತಿಯಿಂದ ಸಮಗ್ರ ಮಲ್ಲಿಗೆ ಕೃಷಿ ತರಬೇತಿ
ಹಿಂದೂ ಎಕನಾಮಿಕ್ ಫೋರಂ ಮತ್ತು ಮುಳಿಯ ಮ್ಯಾನೇಜ್ಡ್ ಫಾರ್ಮ ಲ್ಯಾಂಡ್ ವತಿಯಿಂದ ದಿನಾಂಕ 14.06.2026 ರಂದು ಸಮಗ್ರ ಮಲ್ಲಿಗೆ ಕೃಷಿ ನಿರ್ವಹಣೆ ಮತ್ತು ಮಾರುಕಟ್ಟೆ ವಿಷಯದಲ್ಲಿ ತರಬೇತಿ ಕಾರ್ಯಕ್ರಮ ನಡೆಯಿತು.
ಹಿಂದೂ ಎಕನಾಮಿಕ್ ಫೋರಂ ಮತ್ತು ಮುಳಿಯ ಮ್ಯಾನೇಜ್ಡ್ ಫಾರ್ಮ ಲ್ಯಾಂಡ್ ವತಿಯಿಂದ ದಿನಾಂಕ 14.06.2026 ರಂದು ಸಮಗ್ರ ಮಲ್ಲಿಗೆ ಕೃಷಿ ನಿರ್ವಹಣೆ ಮತ್ತು ಮಾರುಕಟ್ಟೆ ವಿಷಯದಲ್ಲಿ ತರಬೇತಿ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿಂದೂ ಎಕನಾಮಿಕ್ ಫೋರಂ ನ ಪುತ್ತೂರು ಘಟಕದ ಅಧ್ಯಕ್ಷರಾದ ಮೋಹನ ಕೆ ಯವರು ವಹಿಸಿದರು. ಪ್ರಾಸ್ತಾವಿಕ,ಕಾರ್ಯಕ್ರಮದ ಉದ್ದೇಶ ಮತ್ತು ಸ್ವಾಗತವನ್ನು ಹಿಂದೂ ಎಕನಾಮಿಕ್ ಅಧ್ಯಕ್ಷರಾದ ಮೋಹನ ಕೆ ಯವರು ನೆರವೇರಿಸಿದರು.

ಉದ್ಘಾಟನೆಯನ್ನು ಮಲ್ಲಿಗೆ ಕೃಷಿ ತರಬೇತಿಯ ಸಂಪನ್ಮೂಲ ವ್ಯಕ್ತಿಯಾದ ರಾಮಕೃಷ್ಣ ಶರ್ಮ ಶಂಕರಪುರ ರವರು ನೆರವೇರಿಸಿದರು. ಮುಖ್ಯ ಅತಿಥಿಯಾದ ಶ್ರೀಮತಿ ಕೃಷ್ಣವೇಣಿ ಮುಳಿಯರವರು ಕಾರ್ಯಕ್ರಮದ ಉದ್ದೇಶ ಮತ್ತು ಸ್ವಾವಲಂಬಿ ಜೀವನಕ್ಕೆ ಮಲ್ಲಿಗೆ ಕೃಷಿ ಹೇಗೆ ಉಪಯೋಗ ಆಗಬಹುದು ಮತ್ತು ಹಿಂದೂ ಎಕನಾಮಿಕ್ ಫಾರಂನ ಮಹಿಳಾ ಘಟಕದ ಯೋಜನೆಗಳ ಬಗ್ಗೆ ಮಾಹಿತಿ ನೀಡಿ ಎಲ್ಲರಿಗೆ ಶುಭವನ್ನು ಕೋರಿದರು.
ಹಿಂದೂ ಎಕನಾಮಿಕ್ ಫೋರಂ ನ ಸ್ಥಾಪಕಾಧ್ಯಕ್ಷ ಕೃಷ್ಣ ಮೋಹನ್ ರವರು ಅತಿಥಿಗಳನ್ನು ಸಭೆಗೆ ಪರಿಚಯಿಸಿದರು.ವೇದಿಕೆಯಲ್ಲಿ ಹಿಂದೂ ಎಕನಾಮಿಕ್ ಫೋರಂ ನ ಮಹಿಳಾ ಘಟಕದ ಉಪಾಧ್ಯಕ್ಷೆ ಉಮಾ ಡಿ ಪ್ರಸನ್ನ, ಮಹಿಳಾ ಘಟಕದ ಕಾರ್ಯದರ್ಶಿ ಆಶಾ ಮುತ್ಲಾಜೆ, ಹಿಂದೂ ಎಕನಾಮಿಕ್ ಫೋರಂ ನ ಕಾರ್ಯದರ್ಶಿ ಅನೂಪ್ ಕೆ ಜೆ ಉಪಸ್ಥಿತರಿದ್ದರು.
ಕಾರ್ಯಕ್ರಮಗಳು
Puttur-ಪುತ್ತೂರಿನಲ್ಲಿ ‘ಸಾಮರಸ್ಯದ ತುಡರ್’ ಕಾರ್ಯಕ್ರಮ: ಮಹಾಲಿಂಗೇಶ್ವರ ದೇವಸ್ಥಾನದಿಂದ ಮನೆಮನೆಗೆ ದೀಪದ ಬೆಳಕು
ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಪುತ್ತೂರು: ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು.
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಬಳಿಕ ದೇವಸ್ಥಾನದಲ್ಲಿ ಬೆಳಗಿಸಿದ ದೀಪವನ್ನು ಮೆರವಣಿಗೆಯ ಮೂಲಕ ಕೊಂಡೊಯ್ದು ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶಗಳ ಸುತ್ತಮುತ್ತಲಿನ ಮನೆಗಳಲ್ಲಿ ದೀಪ ಬೆಳಗಿಸಲಾಯಿತು.
ಕಾರ್ಯಕ್ರಮದಲ್ಲಿ ಮಂಗಳೂರು ವಿಭಾಗದ ಸಾಮರಸ್ಯ ಸಂಯೋಜಕ ರವೀಂದ್ರ, ಜಿಲ್ಲಾ ಸಾಮರಸ್ಯ ಸಂಯೋಜಕ ಶ್ರೀಕುಮಾರ್ ಸುಬ್ರಹ್ಮಣ್ಯ, ದಾಮೋದರ ಪಾಟಲಿ, ಅಪ್ಪಯ್ಯ ಮಣಿಯಾಣಿ, ರಮೇಶ್ ಪ್ರಭು, ಸಂತೋಷ್ ಬೊನಂತಾಯ, ರಮೇಶ್ ನೆಗಳಗುಳಿ, ದಯಾನಂದ ಬೋಲ್ವಾರ್, ಸಚಿನ್ ಶೆಣೈ, ರಮೇಶ್ ಉರ್ಲಾಂಡಿ, ಅಶೋಕ್ ಬ್ರಹ್ಮನಗರ ಸೇರಿದಂತೆ ಪ್ರಮುಖರು ಹಾಗೂ ಮಾತೆಯರು ಉಪಸ್ಥಿತರಿದ್ದರು.
ಕಾರ್ಯಕ್ರಮಗಳು
Puttur-ಡಿ.8ರಂದು ಪುತ್ತೂರು ದೀಪೋತ್ಸವ: ದೇವಸ್ಥಾನದ ಮುಂಭಾಗದಲ್ಲಿ ಚಪ್ಪರ ಮುಹೂರ್ತ
ಪುತ್ತೂರು ದೀಪೋತ್ಸವ ಸಮಿತಿಯ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಡಿ.8ರಂದು ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿರುವ ಪುತ್ತೂರು ದೀಪೋತ್ಸವದ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ ಸಮಾರಂಭ ಬುಧವಾರ ನಡೆಯಿತು.
ಪುತ್ತೂರು, ನ.18: ಪುತ್ತೂರು ದೀಪೋತ್ಸವ ಸಮಿತಿಯ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಡಿ.8ರಂದು ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿರುವ ಪುತ್ತೂರು ದೀಪೋತ್ಸವದ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ ಸಮಾರಂಭ ಬುಧವಾರ ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಪುತ್ತೂರಿನ ಉದ್ಯಮಿ ವಾಮನ ಪೈ ಮಾತನಾಡಿ, ಶ್ರೀ ಮಹಾಲಿಂಗೇಶ್ವರ ದೇವರ ಅನುಗ್ರಹದಿಂದ ದೀಪೋತ್ಸವ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಲಿ ಎಂದು ಹಾರೈಸಿದರು.
ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಸುಭಾಶ್ ರೈ ಬೆಳ್ಳಿಪ್ಪಾಡಿ ಮಾತನಾಡಿ, ದೇವಸ್ಥಾನದ ಮುಂಭಾಗದಲ್ಲಿ ನಡೆಯುವ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಿಗೂ ವ್ಯವಸ್ಥಾಪನಾ ಸಮಿತಿಯ ಸಂಪೂರ್ಣ ಸಹಕಾರ ಇರಲಿದೆ. ಮುಂದಿನ ದಿನಗಳಲ್ಲಿ ಎಲ್ಲರ ಸಹಕಾರದೊಂದಿಗೆ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಗಳನ್ನೂ ಕೈಗೆತ್ತಿಕೊಳ್ಳಲಾಗುವುದು ಎಂದರು.

ದೀಪೋತ್ಸವ ಸಮಿತಿ ಅಧ್ಯಕ್ಷ ಎನ್. ರವೀಂದ್ರ ಶೆಟ್ಟಿ ನುಳಿಯಾಲು ಪ್ರಾಸ್ತಾವಿಕವಾಗಿ ಮಾತನಾಡಿ, ಈ ಬಾರಿ ದೀಪೋತ್ಸವವನ್ನು ಉತ್ಸವದ ರೀತಿಯಲ್ಲಿ ಆಯೋಜಿಸಲಾಗುತ್ತಿದೆ. ಐದು ಸಾವಿರಕ್ಕೂ ಅಧಿಕ ಮಂದಿ ದೀಪ ಬೆಳಗಿಸುವ ನಿರೀಕ್ಷೆಯಿದ್ದು, ಕಾರ್ಯಕ್ರಮದ ಯಶಸ್ಸಿಗಾಗಿ ಉತ್ತಮ ಸಮಿತಿ ರಚಿಸಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮಗಳು
Puttur-ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ ರಾಷ್ಟ್ರೀಯ ಈಜು ಚಾಂಪಿಯನ್‌ಶಿಪ್-2026
ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ಪುತ್ತೂರಿನ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ 37ನೇ ರಾಷ್ಟ್ರೀಯ ಸ್ವಿಮ್ಮಿಂಗ್ ಚಾಂಪಿಯನ್‌ಶಿಪ್-2026 ನವೆಂಬರ್ 20ರಿಂದ 22ರವರೆಗೆ ಪುತ್ತೂರಿನಲ್ಲಿ ನಡೆಯಲಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಜತೆ ಕಾರ್ಯದರ್ಶಿ ಭರತ್ ಪೈ ತಿಳಿಸಿದರು.
ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ಪುತ್ತೂರಿನ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ 37ನೇ ರಾಷ್ಟ್ರೀಯ ಸ್ವಿಮ್ಮಿಂಗ್ ಚಾಂಪಿಯನ್‌ಶಿಪ್-2026 ನವೆಂಬರ್ 20ರಿಂದ 22ರವರೆಗೆ ಪುತ್ತೂರಿನಲ್ಲಿ ನಡೆಯಲಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಜತೆ ಕಾರ್ಯದರ್ಶಿ ಭರತ್ ಪೈ ತಿಳಿಸಿದರು.
ಪುತ್ತೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ವಿದ್ಯಾಭಾರತಿಯ ಅಧೀನದಲ್ಲಿರುವ ದೇಶದ ವಿವಿಧ ರಾಜ್ಯಗಳ ಆರು ಕ್ಷೇತ್ರಗಳ ಒಟ್ಟು 162 ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ. ಇವರೊಂದಿಗೆ 30 ಎಸ್ಕಾರ್ಟ್‌ಗಳು ಹಾಗೂ ತರಬೇತುದಾರರು ಭಾಗವಹಿಸಲಿದ್ದು, ಒಟ್ಟು 104 ಸ್ಪರ್ಧಾ ವಿಭಾಗಗಳನ್ನು ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.
ನವೆಂಬರ್ 20ರಂದು ಸಂಜೆ 6 ಗಂಟೆಗೆ ವಿವೇಕಾನಂದ ಸೆಂಟ್ರಲ್ ಸ್ಕೂಲ್‌ನಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕೃಷ್ಣಕುಮಾರ್ ಶೆಟ್ಟಿ ಕಡಬ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಮಟ್ಟದ ಈಜುಪಟು ರಾಧಾಕೃಷ್ಣ ನಾಯಕ್ ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ವಿದ್ಯಾಭಾರತಿ ಕರ್ನಾಟಕದ ರಾಜ್ಯಾಧ್ಯಕ್ಷ ಪರಮೇಶ್ವರ ಹೆಗ್ಡೆ ಭಾಗವಹಿಸಲಿದ್ದು, ಮನಮೋಹನ್ ರೈ ಚೆಲ್ಯಡ್ಕ, ವಸಂತ ಮಾಧವ, ಯು.ಪಿ. ಹರಿದಾಸ್ ಹಾಗೂ ಬಿ.ಡಿ. ಮಣಿ ಉಪಸ್ಥಿತರಿರಲಿದ್ದಾರೆ.
ನವೆಂಬರ್ 21ರಂದು ಪುತ್ತೂರಿನ ಬಾಲವನ ಈಜುಕೊಳದಲ್ಲಿ ವಿವಿಧ ಸ್ಪರ್ಧೆಗಳು ನಡೆಯಲಿವೆ.
ನವೆಂಬರ್ 22ರಂದು ಬೆಳಗ್ಗೆ 11.30ಕ್ಕೆ ವಿವೇಕಾನಂದ ಸೆಂಟ್ರಲ್ ಸ್ಕೂಲ್‌ನಲ್ಲಿ ಸಮಾರೋಪ ಸಮಾರಂಭ ಆಯೋಜಿಸಲಾಗಿದೆ. ವಿದ್ಯಾಭಾರತಿ ದಕ್ಷಿಣ ಮಧ್ಯ ಕ್ಷೇತ್ರದ ಜಂಟಿ ಕಾರ್ಯದರ್ಶಿ ವಸಂತ ಮಾಧವ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬೆಂಗಳೂರಿನ ಬ್ರಾಂಡ್ ಮತ್ತು ಡಿಜಿಟಲ್ ಮಾರ್ಕೆಟಿಂಗ್ ಮ್ಯಾನೇಜರ್ ಶ್ರೀಕಾಂತ್ ಪ್ರಭು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ವಸಂತಿ ಕೆ. ಹಾಗೂ ಪ್ರತಿಮಾ ಹೆಗ್ಡೆ ಉಪಸ್ಥಿತರಿರಲಿದ್ದಾರೆ ಎಂದು ಭರತ್ ಪೈ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಆಡಳಿತ ಮಂಡಳಿ ಅಧ್ಯಕ್ಷ ವಿಷ್ಣು ಪ್ರಸಾದ್ ಸಿ., ಪ್ರಾಂಶುಪಾಲೆ ಸಿಂಧು ವಿ.ಜಿ., ರವಿನಾರಾಯಣ, ಶ್ಯಾಮಲಾ ಹಾಗೂ ವೆಂಕಟರಮಣ ಮಂಕುಡೆ ಉಪಸ್ಥಿತರಿದ್ದರು















