ನಿಧನ ವಾರ್ತೆ
Sanchita Ugale-‘ಕುಂಕುಮ್ ಭಾಗ್ಯ’ ನಟಿ ಸಂಚಿತಾ ಉಗಾಳೆ ಆತ್ಮಹತ್ಯೆ; ನಗುನಗುತ್ತಾ ರೀಲ್ಸ್ ಹಂಚಿಕೊಂಡ ಕೆಲವೇ ಗಂಟೆಗಳಲ್ಲಿ ದಾರುಣ ಅಂತ್ಯ..!
ಹಿಂದಿ ಕಿರುತೆರೆಯ ಜನಪ್ರಿಯ ಧಾರಾವಾಹಿ ‘ಕುಂಕುಮ್ ಭಾಗ್ಯ’ ಮೂಲಕ ಮನೆಮಾತಾಗಿದ್ದ ಯುವ ನಟಿ ಸಂಚಿತಾ ಉಗಾಳೆ (30) ಮುಂಬೈನ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭಾನುವಾರ (ಜೂನ್ 14) ಸಂಜೆ ಮುಂಬೈ ಸಮೀಪದ ನಲಸೋಪಾರಾದಲ್ಲಿರುವ ಮನೆಯ ಬೆಡ್‌ರೂಮ್‌ನಲ್ಲಿ ಅವರ ಮೃತದೇಹ ಪತ್ತೆಯಾಗಿದ್ದು, ಸೋಮವಾರ ಈ ವಿಷಯ ಅಧಿಕೃತವಾಗಿ ಬೆಳಕಿಗೆ ಬಂದಿದೆ.
ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ಧಾರಾವಾಹಿ ‘ಕುಂಕುಮ್ ಭಾಗ್ಯ’ ಮೂಲಕ ಮನೆಮಾತಾಗಿದ್ದ ಯುವ ನಟಿ ಸಂಚಿತಾ ಉಗಾಳೆ (30) ಮುಂಬೈನ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭಾನುವಾರ (ಜೂನ್ 14) ಸಂಜೆ ಮುಂಬೈ ಸಮೀಪದ ನಲಸೋಪಾರಾದಲ್ಲಿರುವ ಮನೆಯ ಬೆಡ್‌ರೂಮ್‌ನಲ್ಲಿ ಅವರ ಮೃತದೇಹ ಪತ್ತೆಯಾಗಿದ್ದು, ಸೋಮವಾರ ಈ ವಿಷಯ ಅಧಿಕೃತವಾಗಿ ಬೆಳಕಿಗೆ ಬಂದಿದೆ.
ಘಟನೆಯ ವಿವರ:
ಸಂಚಿತಾ ಅವರು ಆತ್ಮಹತ್ಯೆ ಮಾಡಿಕೊಂಡ ಸಮಯದಲ್ಲಿ ಮನೆಯಲ್ಲಿ ಒಬ್ಬರೇ ಇದ್ದರು ಎನ್ನಲಾಗಿದೆ. ಕುಟುಂಬಸ್ಥರು ಮನೆಗೆ ಬಂದಾಗ ಈ ದಾರುಣ ಘಟನೆ ಬೆಳಕಿಗೆ ಬಂದಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅವರು ಅದಾಗಲೇ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ. ಘಟನಾ ಸ್ಥಳದಲ್ಲಿ ಯಾವುದೇ ‘ಡೆತ್ ನೋಟ್’ ಪತ್ತೆಯಾಗಿಲ್ಲ, ಹೀಗಾಗಿ ಅವರ ಈ ನಿರ್ಧಾರಕ್ಕೆ ನಿಖರ ಕಾರಣವೇನು ಎಂಬುದು ನಿಗೂಢವಾಗಿದೆ.
ಸಾವಿಗೂ ಮುನ್ನ ಇನ್‌ಸ್ಟಾಗ್ರಾಮ್ ರೀಲ್ಸ್!
ಅಚ್ಚರಿಯ ವಿಷಯವೆಂದರೆ, ಸಂಚಿತಾ ಅವರು ಸಾವನ್ನಪ್ಪುವ ಕೆಲವೇ ಗಂಟೆಗಳ ಮೊದಲು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋ (Reels) ಒಂದನ್ನು ಹಂಚಿಕೊಂಡಿದ್ದರು. ಅದರಲ್ಲಿ ಅತ್ಯಂತ ಖುಷಿಯಾಗಿ ನಗುತ್ತಾ ಕಾಣಿಸಿಕೊಂಡಿದ್ದ ನಟಿ, ಇಷ್ಟೊಂದು ಬೇಗ ಇಂತಹ ಕಠಿಣ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ. ಅವರ ಈ ದಿಢೀರ್ ಸಾವು ಅಭಿಮಾನಿಗಳು ಮತ್ತು ಸಹ-ಕಲಾವಿದರನ್ನು ಆಘಾತಕ್ಕೀಡು ಮಾಡಿದೆ.
ಹೋರಾಟದ ಹಾದಿ:
ಸಾಧಾರಣ ಕುಟುಂಬದಿಂದ ಬಂದ ಸಂಚಿತಾ, ಚಿತ್ರರಂಗದಲ್ಲಿ ತನ್ನದೇ ಆದ ಗುರುತು ಮೂಡಿಸಲು ಸಾಕಷ್ಟು ಶ್ರಮಿಸಿದ್ದರು. ‘ಕುಂಕುಮ್ ಭಾಗ್ಯ’ದಲ್ಲಿ ದಿಯಾ ಟಂಡನ್ ಪಾತ್ರದ ಮೂಲಕ ಜನಪ್ರಿಯತೆ ಗಳಿಸಿದ್ದ ಅವರು, ‘ವಾಗ್ಲೆ ಕಿ ದುನಿಯಾ’ ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ನಟಿಸಿದ್ದರು. ಬೆಳ್ಳಿಪರದೆಯಲ್ಲೂ ಗುರುತಿಸಿಕೊಂಡಿದ್ದ ಅವರು, ಮನೋಜ್ ಬಾಜಪೇಯಿ ಅವರ ‘ಸೈಲೆನ್ಸ್ 2’ ಮತ್ತು ವಿಕ್ಕಿ ಕೌಶಲ್ ನಟನೆಯ ಮುಂಬರುವ ಐತಿಹಾಸಿಕ ಸಿನಿಮಾ ‘ಛಾವಾ’ದಲ್ಲಿ ಅಭಿನಯಿಸಿದ್ದರು.
ಕೆಲಸದ ಒತ್ತಡ ಕಾರಣವೇ?
ಕಳೆದ ವರ್ಷವೊಂದರಲ್ಲಿ ನೀಡಿದ್ದ ಸಂದರ್ಶನದಲ್ಲಿ ಸಂಚಿತಾ ಅವರು ತಮ್ಮ ವೃತ್ತಿಜೀವನದ ಒತ್ತಡದ ಬಗ್ಗೆ ಮಾತನಾಡಿದ್ದರು. “ದಿನಕ್ಕೆ 17-18 ಗಂಟೆಗಳ ಕಾಲ ಶೂಟಿಂಗ್ ಇರುವುದರಿಂದ ವೈಯಕ್ತಿಕ ಜೀವನ ಮತ್ತು ಆರೋಗ್ಯದ ಕಡೆ ಗಮನ ನೀಡಲು ಸಾಧ್ಯವಾಗುತ್ತಿಲ್ಲ” ಎಂದು ಅಳಲು ತೋಡಿಕೊಂಡಿದ್ದರು. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.
ನಿಧನ ವಾರ್ತೆ
Kadaba-ಕಡಬ : ಹೆದ್ದಾರಿಯಲ್ಲಿ ದಿಢೀರ್ ಪ್ರತ್ಯಕ್ಷವಾದ ಕಡವೆ; ಕಾರಿಗೆ ಡಿಕ್ಕಿ, ಸ್ಥಳದಲ್ಲೇ ಸಾವು
ಗುಂಡ್ಯ–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಕಡವೆಯೊಂದು ಕಾರಿಗೆ ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ಶುಕ್ರವಾರ ನಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗಕ್ಕೆ ಭಾರೀ ಹಾನಿಯಾಗಿದ್ದು, ಕಡವೆ ರಸ್ತೆಯ ಬದಿಗೆ ಎಸೆಯಲ್ಪಟ್ಟು ಮೃತಪಟ್ಟಿದೆ.
ಕಡಬ: ಗುಂಡ್ಯ–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಕಡವೆಯೊಂದು ಕಾರಿಗೆ ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ಶುಕ್ರವಾರ ನಡೆದಿದೆ.
ಹೆದ್ದಾರಿಯಲ್ಲಿ ಕಾರೊಂದು ಸಂಚರಿಸುತ್ತಿದ್ದ ವೇಳೆ ಏಕಾಏಕಿ ಅಡ್ಡ ಬಂದ ಕಡವೆಗೆ ಕಾರು ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗಕ್ಕೆ ಭಾರೀ ಹಾನಿಯಾಗಿದ್ದು, ಕಡವೆ ರಸ್ತೆಯ ಬದಿಗೆ ಎಸೆಯಲ್ಪಟ್ಟು ಮೃತಪಟ್ಟಿದೆ.
ಈ ಭಾಗದಲ್ಲಿ ಕಾಡುಪ್ರಾಣಿಗಳ ಸಂಚಾರ ಸಾಮಾನ್ಯವಾಗಿರುವ ಹಿನ್ನೆಲೆಯಲ್ಲಿ ಘಟನೆ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ವಿಶೇಷವಾಗಿ ರಾತ್ರಿ ಹಾಗೂ ಮುಂಜಾನೆ ವೇಳೆ ಕಾಡುಪ್ರಾಣಿಗಳು ಹೆದ್ದಾರಿಗೆ ಬರುವ ಸಾಧ್ಯತೆ ಇರುವುದರಿಂದ ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸಬೇಕಾದ ಅಗತ್ಯವಿದೆ.
ಈ ಹಿಂದೆಯೂ ಇದೇ ಪರಿಸರದಲ್ಲಿ ಕಾಡುಪ್ರಾಣಿಗಳಿಂದ ವಾಹನ ಸವಾರರಿಗೆ ಅಪಾಯ ಉಂಟಾದ ಘಟನೆಗಳು ನಡೆದಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಕಾಡುಪ್ರಾಣಿಗಳ ಸಂಚಾರವಿರುವ ಪ್ರದೇಶಗಳಲ್ಲಿ ವಾಹನಗಳ ವೇಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವುದರ ಜತೆಗೆ, ರಸ್ತೆ ಬದಿಯ ಪೊದೆಗಳನ್ನು ತೆರವುಗೊಳಿಸಿ ವಾಹನ ಸವಾರರಿಗೆ ದೂರದಿಂದಲೇ ಪ್ರಾಣಿಗಳು ಕಾಣುವಂತೆ ಮಾಡುವ ಅಗತ್ಯವಿದೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.
ಅರಣ್ಯ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಈ ಭಾಗದಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಕಾಡುಪ್ರಾಣಿಗಳು ಹೆದ್ದಾರಿಗೆ ಬರುವುದರಿಂದ ಉಂಟಾಗುವ ಅಪಘಾತಗಳನ್ನು ತಡೆಯಲು ಕ್ರಮ ವಹಿಸಬೇಕು ಎಂಬ ಆಗ್ರಹ ಕೇಳಿಬಂದಿದೆ.
ನಿಧನ ವಾರ್ತೆ
Kasaragod-ಕಾಸರಗೋಡು: ಬೈಕ್-ಕಾರು ಮುಖಾಮುಖಿ ಡಿಕ್ಕಿ; ಸವಾರ ಸಾವು, ಪತ್ನಿ ಗಂಭೀರ
ಸೀತಾಂಗೋಳಿ–ಪೆರ್ಲ ರಸ್ತೆಯ ಪುತ್ತಿಗೆ ಮುಗುರೋಡ್ ಬಳಿ ಇಂದು ಮಧ್ಯಾಹ್ನ ಸಂಭವಿಸಿದ ಬೈಕ್-ಕಾರು ಮುಖಾಮುಖಿ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಅವರ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಊಞಂಪದವು ನಿವಾಸಿ ಎಂ.ಟಿ. ಮುಹಮ್ಮದ್ ಅಶ್ರಫ್ (48) ಎಂದು ಗುರುತಿಸಲಾಗಿದೆ.
ಕಾಸರಗೋಡು: ಸೀತಾಂಗೋಳಿ–ಪೆರ್ಲ ರಸ್ತೆಯ ಪುತ್ತಿಗೆ ಮುಗುರೋಡ್ ಬಳಿ ಇಂದು ಮಧ್ಯಾಹ್ನ ಸಂಭವಿಸಿದ ಬೈಕ್-ಕಾರು ಮುಖಾಮುಖಿ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಅವರ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು ಊಞಂಪದವು ನಿವಾಸಿ ಎಂ.ಟಿ. ಮುಹಮ್ಮದ್ ಅಶ್ರಫ್ (48) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಅವರ ಪತ್ನಿಯನ್ನು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು ಮಧ್ಯಾಹ್ನ ಸುಮಾರು 12 ಗಂಟೆ ವೇಳೆಗೆ ಅಪಘಾತ ಸಂಭವಿಸಿದೆ. ಮುಹಮ್ಮದ್ ಅಶ್ರಫ್ ಅವರು ಚಲಾಯಿಸುತ್ತಿದ್ದ ಬೈಕ್‌ಗೆ ವಿರುದ್ಧ ದಿಕ್ಕಿನಿಂದ ಬಂದ ಕಾರು ಮುಖಾಮುಖಿಯಾಗಿ ಡಿಕ್ಕಿಯಾಗಿದೆ.
ಡಿಕ್ಕಿಯ ರಭಸಕ್ಕೆ ಅಶ್ರಫ್ ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ನಿಧನ ವಾರ್ತೆ
Mangalore-ಮಂಗಳೂರು: ನ್ಯಾಯಾಧೀಶರ ಕಾರು, ಗೂಡ್ಸ್ ಆಟೋ, ಬೈಕ್ ನಡುವೆ ಸರಣಿ ಅಪಘಾತ; ಗೂಡ್ಸ್ ಆಟೋ ಚಾಲಕ ಮೃತ್ಯು
ಮಂಗಳೂರು ನಗರದ ಬಾವುಟಗುಡ್ಡೆಯ ಕೋರ್ಟ್ ಕ್ರಾಸ್ ರಸ್ತೆಯಲ್ಲಿ ಮಂಗಳವಾರ ಬೆಳಗ್ಗೆ ಕಾರು, ಗೂಡ್ಸ್ ಆಟೋ ರಿಕ್ಷಾ ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಗೂಡ್ಸ್ ಆಟೋ ರಿಕ್ಷಾ ಚಾಲಕ ಮೃತಪಟ್ಟಿದ್ದಾರೆ. ಮೃತರನ್ನು ಕಾಸರಗೋಡು ಮೊಗ್ರಾಲ್‌ನ ಪೊಟ್ಟೊರಿ ಪೇರಲ್ ನಿವಾಸಿ ಚಂದ್ರ ಕೆ. (67) ಎಂದು ಗುರುತಿಸಲಾಗಿದೆ.
ಮಂಗಳೂರು: ನಗರದ ಬಾವುಟಗುಡ್ಡೆಯ ಕೋರ್ಟ್ ಕ್ರಾಸ್ ರಸ್ತೆಯಲ್ಲಿ ಮಂಗಳವಾರ ಬೆಳಗ್ಗೆ ಕಾರು, ಗೂಡ್ಸ್ ಆಟೋ ರಿಕ್ಷಾ ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಗೂಡ್ಸ್ ಆಟೋ ರಿಕ್ಷಾ ಚಾಲಕ ಮೃತಪಟ್ಟಿದ್ದಾರೆ.
ಮೃತರನ್ನು ಕಾಸರಗೋಡು ಮೊಗ್ರಾಲ್‌ನ ಪೊಟ್ಟೊರಿ ಪೇರಲ್ ನಿವಾಸಿ ಚಂದ್ರ ಕೆ. (67) ಎಂದು ಗುರುತಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ವಿನಯ್ ಡಿ. ಅವರು ಕಾರಿನಲ್ಲಿ (ಕೆಎ-05-ಎನ್‌ಕೆ-2504) ಬೆಳಗ್ಗೆ ನ್ಯಾಯಾಲಯದತ್ತ ತೆರಳುತ್ತಿದ್ದರು. ಕರಂಗಲ್ಪಾಡಿಯ ರಾಧಾ ಮೆಡಿಕಲ್ಸ್ ಎದುರಿನ ತಿರುವಿನಲ್ಲಿ ಸಾಗುತ್ತಿದ್ದಾಗ, ಗೂಡ್ಸ್ ಆಟೋ ರಿಕ್ಷಾ (ಕೆಎ-19-ಎಡಿ-4395) ನಿಯಂತ್ರಣ ತಪ್ಪಿ ನ್ಯಾಯಾಧೀಶರ ಕಾರಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಬಳಿಕ ಗೂಡ್ಸ್ ಆಟೋ ರಿಕ್ಷಾ ಅದೇ ರಸ್ತೆಯಲ್ಲಿ ಬರುತ್ತಿದ್ದ ದ್ವಿಚಕ್ರ ವಾಹನ (ಕೆಎ-19-ಎಚ್‌ವೈ-1664)ಕ್ಕೂ ಢಿಕ್ಕಿ ಹೊಡೆದು ಮಗುಚಿಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಚಂದ್ರ ಕೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಗೂಡ್ಸ್ ಆಟೋ ರಿಕ್ಷಾ ಢಿಕ್ಕಿಯಿಂದ ದ್ವಿಚಕ್ರ ವಾಹನ ಸವಾರ ಪ್ಲೆವಿಯನ್ ಮೆರ್ವಿನ್ ಅವರಿಗೂ ಗಾಯಗಳಾಗಿವೆ. ಅಪಘಾತದಲ್ಲಿ ಕಾರು, ಗೂಡ್ಸ್ ಆಟೋ ರಿಕ್ಷಾ ಹಾಗೂ ದ್ವಿಚಕ್ರ ವಾಹನ ಜಖಂಗೊಂಡಿವೆ.
ಅಪಘಾತದಲ್ಲಿ ನ್ಯಾಯಾಧೀಶ ವಿನಯ್ ಡಿ. ಅವರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ನ್ಯಾಯಾಧೀಶ ವಿನಯ್ ಡಿ. ಅವರು ನೀಡಿದ ದೂರಿನ ಆಧಾರದ ಮೇಲೆ ಕದ್ರಿ ಟ್ರಾಫಿಕ್ ಈಸ್ಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
-
ನಿಧನ ವಾರ್ತೆ23 hours agoKadaba-ಕಡಬ : ಹೆದ್ದಾರಿಯಲ್ಲಿ ದಿಢೀರ್ ಪ್ರತ್ಯಕ್ಷವಾದ ಕಡವೆ; ಕಾರಿಗೆ ಡಿಕ್ಕಿ, ಸ್ಥಳದಲ್ಲೇ ಸಾವು
-
ಬಿಗ್ ನ್ಯೂಸ್18 hours agoArshia Khan-ನವರಾತ್ರಿಗೆ ‘ಅಷ್ಟಭುಜ ಧಾರಿಣಿ ದೇವಿ’ಯಾಗಿ ಮಿಂಚಲಿರುವ ವಿಟ್ಲದ ಅರ್ಷಿಯಾ ಖಾನ್
-
ಪುತ್ತೂರು15 hours ago
ಮಾಣಿ : ಲೈನ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶ: ಪವರ್ಮ್ಯಾನ್ ಮೃತ್ಯು
-
ಮಂಗಳೂರು18 hours agoCM-ಒಂದು ಅಭಿನಂದನೆಯೂ ಇಲ್ಲ ಎಂದು ಕ್ರೀಡಾಪಟುವಿನಿಂದ ಬೇಸರ ವ್ಯಕ್ತವಾದ ಕೂಡಲೇ ಪೂವಮ್ಮಗೆ ಕರೆ ಮಾಡಿದ ಸಿಎಂ..! ಏನೂ ಹೇಳಿದ್ರು ಗೊತ್ತೇ..?
-
Uncategorized23 hours agoಅ.6: ಮಂಗಳೂರಿನ ಪುರಭವನದಲ್ಲಿ ‘ಲವ್ ಜಿಹಾದ್ ಮತ್ತು ಮತಾಂತರ: ಪ್ರಚಾರ ಮತ್ತು ವಾಸ್ತವ’ ಪುಸ್ತಕ ಬಿಡುಗಡೆ
-
ಅಂತರ ರಾಜ್ಯ21 hours agoECI-ಮುಖ್ಯ ಚುನಾವಣ ಆಯುಕ್ತ ವಿರುದ್ಧ ದೇಶಾದ್ಯಂತ ಹೋರಾಟ ತೀವ್ರಗೊಳ್ಳುತ್ತಿದ್ದಂತೆ ‘ಬಿಟ್ಟು ಹೋದವರ ಹೆಸರು ಸೇರ್ಪಡೆಗೆ ಅಭಿಯಾನ’…! 20 ರಾಜ್ಯಗಳಲ್ಲಿ ಕೈಬಿಟ್ಟ 13 ಕೋಟಿ ಮತದಾರರ ಮರುಸೇರ್ಪಡೆಗೆ ಆಯೋಗ ಅವಕಾಶ
-
ಬಿಗ್ ನ್ಯೂಸ್17 hours agoNagalakshmi Chowdary-ಬಂಗ್ಲೆಗುಡ್ಡೆ ಏನೂ ಸ್ಮಶಾನ ಅಲ್ಲ : ಅಲ್ಲಿ ಯಾಕೆ ಅಷ್ಟು ಅಸ್ಥಿಪಂಜರಗಳು ಸಿಕ್ಕಿದವು..? ಧರ್ಮಸ್ಥಳ ಎಸ್ಐಟಿಗೆ ಹೆಚ್ಚಿನ ಅಧಿಕಾರ ನೀಡಬೇಕು..! : ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ
-
ರಾಜ್ಯ20 hours agoTemperature-ಹಿಂಗಾರು ಮಳೆ ಇಳಿಮುಖ, ಬಿಸಿಲು ಏರುಮುಖ; ಕರ್ನಾಟಕಕ್ಕೆ ಹವಾಮಾನ ಎಚ್ಚರಿಕೆ..!


















