ಮಂಗಳೂರು
Political Exclusive: ಮಂಗಳೂರಿನಲ್ಲಿ ಬಿಜೆಪಿ ಹೈಕಮಾಂಡ್ ಸೀಕ್ರೆಟ್ ಮೀಟಿಂಗ್: ಪುತ್ತೂರು ಬಂಡಾಯ ಶಮನಕ್ಕೆ ಮಾಸ್ಟರ್ ಪ್ಲ್ಯಾನ್
ಮುಂದಿನ ವಿಧಾನಸಭಾ ಚುನಾವಣೆಗೆ ಇನ್ನು ಎರಡು ವರ್ಷಗಳ ಬಾಕಿ ಇರುವಾಗಲೇ ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದ ಬಿಜೆಪಿ ಪಾಳಯದಲ್ಲಿ ರಾಜಕೀಯ ಚಟುವಟಿಕೆಗಳು ದಿಢೀರ್ ಗರಿಗೆದರಿವೆ. ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಬೇಕಾದರೆ ಜಿಲ್ಲೆಯ ಎಲ್ಲಾ ಎಂಟು ಕ್ಷೇತ್ರಗಳಲ್ಲೂ ಕಮಲ ಅರಳುವುದು ಅನಿವಾರ್ಯ ಎಂಬ ಕಡಕ್ ಸಂದೇಶವನ್ನು ಪಕ್ಷದ ರಾಷ್ಟ್ರೀಯ ಹೈಕಮಾಂಡ್ ರವಾನಿಸಿದೆ ಎಂದು ಹೇಳಲಾಗುತ್ತಿದೆ.
ಮಂಗಳೂರು: ಮುಂದಿನ ವಿಧಾನಸಭಾ ಚುನಾವಣೆಗೆ ಇನ್ನು ಎರಡು ವರ್ಷಗಳ ಬಾಕಿ ಇರುವಾಗಲೇ ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದ ಬಿಜೆಪಿ ಪಾಳಯದಲ್ಲಿ ರಾಜಕೀಯ ಚಟುವಟಿಕೆಗಳು ದಿಢೀರ್ ಗರಿಗೆದರಿವೆ. ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಬೇಕಾದರೆ ಜಿಲ್ಲೆಯ ಎಲ್ಲಾ ಎಂಟು ಕ್ಷೇತ್ರಗಳಲ್ಲೂ ಕಮಲ ಅರಳುವುದು ಅನಿವಾರ್ಯ ಎಂಬ ಕಡಕ್ ಸಂದೇಶವನ್ನು ಪಕ್ಷದ ರಾಷ್ಟ್ರೀಯ ಹೈಕಮಾಂಡ್ ರವಾನಿಸಿದೆ ಎಂದು ಹೇಳಲಾಗುತ್ತಿದೆ.
ಶನಿವಾರ ಮಂಗಳೂರಿನಲ್ಲಿ ನಡೆದ ‘ವಿಕಸಿತ ಭಾರತ ಸಂಕಲ್ಪ ಸಮಾವೇಶ’ಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಬಿಜೆಪಿಯ ರಾಷ್ಟ್ರೀಯ ಮುಖಂಡ ರಾಧಾಮೋಹನ ದಾಸ್ ಅಗರ್‌ವಾಲ್ ಅವರು ಜಿಲ್ಲಾ ಪ್ರಮುಖರೊಂದಿಗೆ ಪ್ರತ್ಯೇಕ ರಹಸ್ಯ ಸಭೆ ನಡೆಸಿ, ಚುನಾವಣಾ ರೋಡ್‌ಮ್ಯಾಪ್ ಸಿದ್ಧಪಡಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಉಳ್ಳಾಲ-ಪುತ್ತೂರು ಮರು ವಶಕ್ಕೆ ಹೈಕಮಾಂಡ್ ಸೂಚನೆ
ಜಿಲ್ಲೆಯ ಎಂಟು ಕ್ಷೇತ್ರಗಳ ಪೈಕಿ ಸದ್ಯ ಹಸ್ತ ಪಾಲಾಗಿರುವ ಮಂಗಳೂರು (ಉಳ್ಳಾಲ) ಮತ್ತು ಪುತ್ತೂರು ಕ್ಷೇತ್ರಗಳನ್ನು ಮರಳಿ ತನ್ನ ತೆಕ್ಕೆಗೆ ತೆಗೆದುಕೊಳ್ಳಲು ವಿಶೇಷ ಕಾರ್ಯತಂತ್ರ (Strategy) ರೂಪಿಸುವಂತೆ ಹೈಕಮಾಂಡ್ ಜಿಲ್ಲಾ ನಾಯಕರಿಗೆ ಟಾಸ್ಕ್ ನೀಡಿದೆ ಎನ್ನಲಾಗಿದೆ
ಉಳ್ಳಾಲದ ಇತಿಹಾಸ: ಮುಸ್ಲಿಂ ಮತದಾರರು ನಿರ್ಣಾಯಕ ಸಂಖ್ಯೆಯಲ್ಲಿರುವ ಉಳ್ಳಾಲ ಕ್ಷೇತ್ರದಲ್ಲಿ 1994ರಲ್ಲಿ ಬಿಜೆಪಿಯ ಜಯರಾಮ ಶೆಟ್ಟಿ ಗೆದ್ದ ಬಳಿಕ ಮತ್ಯಾವತ್ತೂ ಕಮಲ ಅರಳಿಲ್ಲ. ಯು.ಟಿ. ಖಾದರ್ ಅವರ ಭದ್ರಕೋಟೆಯಾಗಿರುವ ಈ ಕ್ಷೇತ್ರವನ್ನು ಭೇದಿಸುವುದು ಬಿಜೆಪಿಗೆ ಸದಾ ಸವಾಲಿನ ಕೆಲಸ.
ಪುತ್ತೂರಿನ ವ್ಯತಿರಿಕ್ತ ಚಿತ್ರಣ: ಆದರೆ ಪುತ್ತೂರಿನ ಕಥೆ ಸಂಪೂರ್ಣ ಭಿನ್ನವಾಗಿದೆ. 1994 ರಿಂದಲೂ ಇಲ್ಲಿ ಬಿಜೆಪಿ ಮೇಲುಗೈ ಸಾಧಿಸುತ್ತಾ ಬಂದಿದೆ. ಕಳೆದ ಮೂರು ಲೋಕಸಭಾ ಚುನಾವಣೆಗಳಲ್ಲೂ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಿಜೆಪಿ 30 ಸಾವಿರಕ್ಕೂ ಅಧಿಕ ಮತಗಳ ಮುನ್ನಡೆ ಕಾಯ್ದುಕೊಂಡಿದೆ. ಆದರೆ, 2013 ಮತ್ತು 2023ರ ವಿಧಾನಸಭಾ ಚುನಾವಣೆಗಳಲ್ಲಿ ಪಕ್ಷದೊಳಗಿನ ಆಂತರಿಕ ಬಂಡಾಯವೇ ಇಲ್ಲಿ ಬಿಜೆಪಿಯ ಸೋಲಿಗೆ ಕಾರಣವಾಗಿತ್ತು.
ಪುತ್ತೂರು ಗೆಲುವಿಗೆ ಅಗರ್‌ವಾಲ್ ನೀಡಿದ ‘ಮಾಸ್ಟರ್ ಪ್ಲಾನ್’
ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ವಿವಿಧ ಮಂಡಲಗಳ ಪ್ರಮುಖರ ಸಭೆ ನಡೆಸಿದ ರಾಧಾಮೋಹನ ದಾಸ್ ಅಗರ್‌ವಾಲ್, ಬಂಡಾಯದಿಂದಾಗಿ ಕೈತಪ್ಪಿದ ಪುತ್ತೂರನ್ನು ಮರಳಿ ಗೆಲ್ಲಲು ಪ್ರಮುಖ ಸೂತ್ರಗಳನ್ನು ನಾಯಕರ ಮುಂದಿಟ್ಟಿರುವುದಾಗಿ ತಿಳಿದು ಬಂದಿದೆ.
೧. ಅಭ್ಯರ್ಥಿಗಿಂತ ‘ಕಮಲ’ ಚಿಹ್ನೆಯೇ ಮುಖ್ಯ:
ಕಳೆದ ಚುನಾವಣೆಯ ಹಿನ್ನಡೆಯನ್ನು ಗಮನದಲ್ಲಿಟ್ಟುಕೊಂಡು, ಈ ಬಾರಿ ಪುತ್ತೂರಿನಲ್ಲಿ ಅಭ್ಯರ್ಥಿ ಯಾರು ಎನ್ನುವುದಕ್ಕಿಂತ ಪಕ್ಷದ ‘ಚಿಹ್ನೆ’ಯನ್ನು ಮುನ್ನೆಲೆಗೆ ತರಬೇಕು. ಈ ಮಂತ್ರವನ್ನು ನಾಯಕರು ಮತ್ತು ಕಾರ್ಯಕರ್ತರು ಜನಸಾಮಾನ್ಯರ ಮನಸ್ಸಿನಲ್ಲಿ ಆಳವಾಗಿ ಬೇರೂರುವಂತೆ ಮಾಡಬೇಕು ಎಂಬ ಸಲಹೆ ನೀಡಿರುವುದಾಗಿ ಮೂಲಗಳು ತಿಳಿಸಿವೆ.
೨. ಅಸಮಾಧಾನಿತರ ಮನವೊಲಿಕೆ, ತಾತ್ಸಾರಕ್ಕೆ ಬ್ರೇಕ್:
ಪಕ್ಷದ ಸಿದ್ದಾಂತವನ್ನು ಒಪ್ಪುವ ಹಾಗೂ ಅದಕ್ಕೆ ಪೂರಕವಾಗಿ ಕೆಲಸ ಮಾಡಲು ಸಿದ್ಧರಿರುವ ಯಾರನ್ನೂ ಕಡೆಗಣಿಸಬಾರದು. ಯಾರ ಬಗ್ಗೆಯೂ ತಾತ್ಸಾರ ಭಾವನೆ ಹೊಂದದೆ, ಎಲ್ಲರನ್ನೂ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಒಟ್ಟಾಗಿ ಮುನ್ನಡೆಯಬೇಕು ಎಂದು ಅಗರ್‌ವಾಲ್ ಕಿವಿಮಾತು ಹೇಳಿದ್ದಾರೆ ಎನ್ನಲಾಗಿದೆ.
ಒಟ್ಟಾರೆಯಾಗಿ, ಎರಡು ವರ್ಷ ಮುಂಚಿತವಾಗಿಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಮಲ ಪಾಳಯ ಚುನಾವಣಾ ರಣಕಹಳೆ ಮೊಳಗಿಸಿದ್ದು, ಆಂತರಿಕ ಭಿನ್ನಮತ ಶಮನಗೊಳಿಸಿ ಕಳೆದುಹೋದ ಕ್ಷೇತ್ರಗಳನ್ನು ಮರಳಿ ಪಡೆಯಲು ಭರ್ಜರಿ ತಂತ್ರಗಾರಿಕೆಗೆ ಚಾಲನೆ ನೀಡಿದೆ.
ಅಪರಾಧ
Mangalore-ಮಂಗಳೂರು: ಸರಣಿ ಮನೆಕಳ್ಳತನ: ದೆಹಲಿ ಮೂಲದ ಇಬ್ಬರು ಕುಖ್ಯಾತ ಕಳ್ಳರ ಬಂಧನ; ₹18 ಲಕ್ಷ ಮೌಲ್ಯದ ಸೊತ್ತು ವಶ
ಮಂಗಳೂರು ನಗರದ ಬರ್ಕೆ ಹಾಗೂ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಕನ್ನ ಕಳವು ಪ್ರಕರಣಗಳಿಗೆ ಸಂಬಂಧಿಸಿ ದೆಹಲಿ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅರ್ಮಾನ್ ಖಾನ್ ಅಲಿಯಾಸ್ ಅಮನ್ ಸೋನಿ (34), ಸಂಜೀವ್ ಕುಮಾರ್ ಅಲಿಯಾಸ್ ಜಾನಿ (34) ಬಂಧಿತ ಆರೋಪಿಗಳು
ಮಂಗಳೂರು: ನಗರದ ಬರ್ಕೆ ಹಾಗೂ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಕನ್ನ ಕಳವು ಪ್ರಕರಣಗಳಿಗೆ ಸಂಬಂಧಿಸಿ ದೆಹಲಿ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಅರ್ಮಾನ್ ಖಾನ್ ಅಲಿಯಾಸ್ ಅಮನ್ ಸೋನಿ (34), ಸಂಜೀವ್ ಕುಮಾರ್ ಅಲಿಯಾಸ್ ಜಾನಿ (34) ಬಂಧಿತ ಆರೋಪಿಗಳು
ಸೆ.28ರಂದು ಅಳಕೆ ಕಂಬ್ಲ ಕ್ರಾಸ್ ರಸ್ತೆಯ ಸಹಯೋಗ ರೆಸಿಡೆನ್ಸಿ ಕಾಂಪ್ಲೆಕ್ಸ್‌ನ ಮನೆಯೊಂದರ ನಿವಾಸಿಗಳು ಮಧ್ಯಾಹ್ನ ಸುಮಾರು 3 ಗಂಟೆಗೆ ಮನೆಗೆ ಬೀಗ ಹಾಕಿಕೊಂಡು ಮಾರುಕಟ್ಟೆಗೆ ತೆರಳಿದ್ದರು. ಸಂಜೆ 5.10ರ ಸುಮಾರಿಗೆ ವಾಪಸ್ ಬಂದು ನೋಡಿದಾಗ ಮನೆಯ ಮುಂಭಾಗದ ಬಾಗಿಲಿನ ಕೊಂಡಿಯನ್ನು ಮುರಿದು ಕಳ್ಳರು ಒಳನುಗ್ಗಿರುವುದು ಕಂಡುಬಂದಿದೆ.
ಕಳ್ಳರು ಮನೆಯಲ್ಲಿದ್ದ ಸುಮಾರು ₹14 ಲಕ್ಷ ಮೌಲ್ಯದ ಚಿನ್ನಾಭರಣ, ನಗದು, ವಾಚ್ ಹಾಗೂ ಟ್ರಾಲಿ ಬ್ಯಾಗ್ ಸೇರಿದಂತೆ ಹಲವು ಸೊತ್ತುಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಈ ಕುರಿತು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದೇ ವೇಳೆ ಸೆ.27ರಂದು ಹಗಲು ವೇಳೆಯಲ್ಲಿ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಬೊಕ್ಕಪಟ್ಣ ರಸ್ತೆಯ ಮನೆಯೊಂದರಲ್ಲೂ ಕಳ್ಳತನ ನಡೆದಿತ್ತು. ಮನೆಯ ಲಾಕರ್‌ನ್ನು ಹೊಡೆದು ಕಳ್ಳತನಕ್ಕೆ ಯತ್ನಿಸಿದ್ದ ಆರೋಪಿಗಳು ಯಾವುದೇ ಬೆಲೆಬಾಳುವ ವಸ್ತು ಸಿಗದ ಹಿನ್ನೆಲೆಯಲ್ಲಿ ಚೆಕ್ ಪುಸ್ತಕಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಈ ಪ್ರಕರಣವೂ ಬರ್ಕೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.
ಎರಡೂ ಪ್ರಕರಣಗಳ ತನಿಖೆ ಕೈಗೊಂಡ ಪೊಲೀಸರು ಕೇಂದ್ರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಿ ಆರೋಪಿಗಳ ಚಲನವಲನದ ಬಗ್ಗೆ ಮಾಹಿತಿ ಸಂಗ್ರಹಿಸಿದರು. ಈ ವೇಳೆ ಆರೋಪಿಗಳು ಮನೆಕಳ್ಳತನ ನಡೆಸಿದ ಬಳಿಕ ರೈಲಿನಲ್ಲಿ ದೆಹಲಿ ಕಡೆಗೆ ಪ್ರಯಾಣಿಸುತ್ತಿರುವುದು ಪೊಲೀಸರಿಗೆ ತಿಳಿದುಬಂದಿದೆ.
ತಕ್ಷಣ ಗುಜರಾತ್‌ನ ವಡೋದರಾ ಪೊಲೀಸರ ಸಹಾಯ ಪಡೆದುಕೊಂಡ ಮಂಗಳೂರು ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಪ್ರಕರಣ ದಾಖಲಾಗಿದ್ದ 24 ಗಂಟೆಗಳೊಳಗಾಗಿ ಸೆ.29ರಂದು ವಡೋದರಾದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರಿಂದ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅವುಗಳ ಒಟ್ಟು ಮೌಲ್ಯ ಸುಮಾರು ₹18 ಲಕ್ಷ ಎಂದು ಅಂದಾಜಿಸಲಾಗಿದೆ.
ಬಂಧಿತ ಆರೋಪಿಗಳನ್ನು ವಡೋದರಾದಿಂದ ಮಂಗಳೂರಿಗೆ ಕರೆತಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಮುಂದಿನ ತನಿಖೆಗಾಗಿ ಆರೋಪಿಗಳನ್ನು ಪೊಲೀಸ್ ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿಗಳ ಪೈಕಿ ಅರ್ಮಾನ್ ಖಾನ್ ವಿರುದ್ಧ ದೆಹಲಿ, ಮುಂಬೈ, ಬೆಂಗಳೂರು, ಗೋವಾ ಹಾಗೂ ಹೈದರಾಬಾದ್ ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ 40ಕ್ಕೂ ಅಧಿಕ ಮನೆಕಳ್ಳತನ ಪ್ರಕರಣಗಳು ದಾಖಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ. ಆತನ ವಿರುದ್ಧ ವಾರಂಟ್ ಹಾಗೂ ಪ್ರೊಕ್ಲಮೇಶನ್ ಕೂಡ ಬಾಕಿ ಇದ್ದು, ಈ ಕುರಿತು ಸಂಬಂಧಪಟ್ಟ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡಲಾಗಿದೆ.
ಮಂಗಳೂರು
CM-ಒಂದು ಅಭಿನಂದನೆಯೂ ಇಲ್ಲ ಎಂದು ಕ್ರೀಡಾಪಟುವಿನಿಂದ ಬೇಸರ ವ್ಯಕ್ತವಾದ ಕೂಡಲೇ ಪೂವಮ್ಮಗೆ ಕರೆ ಮಾಡಿದ ಸಿಎಂ..! ಏನೂ ಹೇಳಿದ್ರು ಗೊತ್ತೇ..?
ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಬಂಗಾರದ ಪದಕ ತಂದುಕೊಟ್ಟ ಮಂಗಳೂರಿನ ಹೆಮ್ಮೆಯ ಅಥ್ಲೀಟ್ ಎಂ.ಆರ್. ಪೂವಮ್ಮ ಅವರ ಸಾಧನೆಯನ್ನು ಮುಕ್ತಕಂಠದಿಂದ ಶ್ಲಾಘಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಅವರಿಗೆ ದೂರವಾಣಿ ಕರೆ ಮಾಡಿ ಶುಭಾಶಯ ಕೋರಿದ್ದಾರೆ. ಅಲ್ಲದೆ ಅಕ್ಟೋಬರ್ 6 ರಂದು ಬೆಂಗಳೂರಿನಲ್ಲಿ ತಮ್ಮನ್ನು ಭೇಟಿಯಾಗುವಂತೆ ಆಹ್ವಾನ ನೀಡಿದ್ದಾರೆ.

ಮಂಗಳೂರು, ಅ.03: ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಬಂಗಾರದ ಪದಕ ತಂದುಕೊಟ್ಟ ಮಂಗಳೂರಿನ ಹೆಮ್ಮೆಯ ಅಥ್ಲೀಟ್ ಎಂ.ಆರ್. ಪೂವಮ್ಮ ಅವರ ಸಾಧನೆಯನ್ನು ಮುಕ್ತಕಂಠದಿಂದ ಶ್ಲಾಘಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಅವರಿಗೆ ದೂರವಾಣಿ ಕರೆ ಮಾಡಿ ಶುಭಾಶಯ ಕೋರಿದ್ದಾರೆ. ಅಲ್ಲದೆ ಅಕ್ಟೋಬರ್ 6 ರಂದು ಬೆಂಗಳೂರಿನಲ್ಲಿ ತಮ್ಮನ್ನು ಭೇಟಿಯಾಗುವಂತೆ ಆಹ್ವಾನ ನೀಡಿದ್ದಾರೆ.
ತನ್ನದೇ ತಂಡದ ಬೇರೆ ಕ್ರೀಡಾಪಟುಗಳಿಗೆ ಅಲ್ಲಿನ ಸಿಎಂ ಹಾಗೂ ಇತರ ಮಂತ್ರಿಗಳು ಫೋನ್ ಮೂಲಕ ಅಭಿನಂದಿಸಿದ್ದಾರೆ ಹಾಗೂ ಕರ್ನಾಟಕದಲ್ಲಿ ಕೇವಲ 30 ಲಕ್ಷ ಬಹುಮಾನ ನೀಡಲಾಗುತ್ತಿದೆ ಬೇರೆ ರಾಜ್ಯದಲ್ಲಿ 1 ಕೋಟಿ ಬಹುಮಾನ ನೀಡುತ್ತಾರೆ ಎಂದು ಸಾಧಕಿ ಪೂವಮ್ಮ ನಿನ್ನೆ ಬೇಸರ ವ್ಯಕ್ತಪಡಿಸಿದ್ದರು.
ಅದ್ಧೂರಿ ಸ್ವಾಗತ:
ಜಪಾನ್‌ನಲ್ಲಿ ನಡೆದ ಏಷ್ಯನ್ ಗೇಮ್ಸ್‌ನ 4×400 ಮೀಟರ್ ಮಹಿಳೆಯರ ರಿಲೇ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಪೂವಮ್ಮ, ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ಅಭಿಮಾನಿಗಳು ಹಾಗೂ ಸಾರ್ವಜನಿಕರು ಹೂಮಳೆಗರೆದು ಅದ್ಧೂರಿ ಸ್ವಾಗತ ಕೋರಿದರು. ಇದು ಪೂವಮ್ಮ ಭಾಗವಹಿಸಿದ 3ನೇ ಏಷ್ಯನ್ ಗೇಮ್ಸ್ ಆಗಿದ್ದು, ಒಟ್ಟಾರೆಯಾಗಿ ಅವರ 6ನೇ ಪದಕವಾಗಿದೆ. ಕ್ರೀಡಾಂಗಣದಲ್ಲಿ ಭಾರತದ ರಾಷ್ಟ್ರಗೀತೆ ಮೊಳಗಿದ್ದು ಅತ್ಯಂತ ಹೆಮ್ಮೆಯ ಕ್ಷಣ ಎಂದು ಅವರು ಹರ್ಷ ವ್ಯಕ್ತಪಡಿಸಿದ್ದಾರೆ.
ಹಲವು ಗಣ್ಯರಿಂದ ಅಭಿನಂದನೆ
ಆರಂಭದಲ್ಲಿ ತಮಗೆ ಸೂಕ್ತ ಗೌರವ ಹಾಗೂ ಶುಭಾಶಯಗಳು ದೊರೆಯದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ್ದ ಪೂವಮ್ಮ, ಬಳಿಕ ಡಿಸಿಎಂ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರಿಂದ ಅಭಿನಂದನೆಗಳನ್ನು ಸ್ವೀಕರಿಸಿದರು.
ಇದೇ ವೇಳೆ ಕ್ರೀಡಾಪಟುಗಳ ಪ್ರೋತ್ಸಾಹಧನ ಹೆಚ್ಚಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ ಪೂವಮ್ಮ, “ಹರಿಯಾಣ ಸೇರಿದಂತೆ ಇತರ ರಾಜ್ಯಗಳಲ್ಲಿ ಚಿನ್ನ ಗೆದ್ದವರಿಗೆ 3 ಕೋಟಿ ರೂ. ನಗದು ಬಹುಮಾನ ನೀಡಲಾಗುತ್ತಿದೆ. ಆದರೆ ನಮ್ಮ ಕರ್ನಾಟಕದಲ್ಲಿ ಕೇವಲ 35 ಲಕ್ಷ ರೂ. ಮಾತ್ರ ನೀಡಲಾಗುತ್ತಿದೆ. ಯುವ ಅಥ್ಲೀಟ್‌ಗಳನ್ನು ಪ್ರೋತ್ಸಾಹಿಸಲು ಈ ಬಹುಮಾನದ ಮೊತ್ತವನ್ನು ಹೆಚ್ಚಿಸಬೇಕು,” ಎಂದು ಒತ್ತಾಯಿಸಿದ್ದಾರೆ.
ಮಂಗಳೂರು
Puvamma-ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನ ಗೆದ್ದ ಮಂಗಳೂರಿನ ಪೂವಮ್ಮ; ಕನಿಷ್ಠ ಅಭಿನಂದನೆ ಕೂಡ ಸಲ್ಲಿಸದ ರಾಜ್ಯ ಸರ್ಕಾರದ ನಿರ್ಲಕ್ಷ್ಯಕ್ಕೆ ಕುಟುಂಬ ಬೇಸರ
2026ರ ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಚಿನ್ನದ ಪದಕ ಗೆದ್ದ ಭಾರತೀಯ ತಂಡದ ಸದಸ್ಯೆಯಾಗಿರುವ ಮಂಗಳೂರಿನ ಎಂ.ಆರ್. ಪೂವಮ್ಮ ಅವರ ಸಾಧನೆಗೆ ಅಭಿನಂದನೆ ಸಲ್ಲಿಸುವಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರಿದೆ ಎಂದು ಅವರ ತಾಯಿ ಜಾಜಿ ಬೇಸರ ವ್ಯಕ್ತಪಡಿಸಿದ್ದಾರೆ.
ಮಂಗಳೂರು, ಅ.1: 2026ರ ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಚಿನ್ನದ ಪದಕ ಗೆದ್ದ ಭಾರತೀಯ ತಂಡದ ಸದಸ್ಯೆಯಾಗಿರುವ ಮಂಗಳೂರಿನ ಎಂ.ಆರ್. ಪೂವಮ್ಮ ಅವರ ಸಾಧನೆಗೆ ಅಭಿನಂದನೆ ಸಲ್ಲಿಸುವಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರಿದೆ ಎಂದು ಅವರ ತಾಯಿ ಜಾಜಿ ಬೇಸರ ವ್ಯಕ್ತಪಡಿಸಿದ್ದಾರೆ.
ಕಿರಣ್ ಪಹಲ್, ಪ್ರಾಚಿ ಚೌಧರಿ, ಎಂ.ಆರ್. ಪೂವಮ್ಮ ಹಾಗೂ ವಿಥ್ಯಾ ರಾಮರಾಜ್ ಒಳಗೊಂಡ ಭಾರತ ತಂಡ 3:29.69 ನಿಮಿಷಗಳಲ್ಲಿ ಗುರಿ ತಲುಪಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಚಿನ್ನ ಗೆದ್ದಿದೆ. ಇದು ಈ ಬಾರಿಯ ಏಷ್ಯನ್ ಗೇಮ್ಸ್‌ನಲ್ಲಿ ಅಥ್ಲೆಟಿಕ್ಸ್ ವಿಭಾಗದಲ್ಲಿ ಭಾರತಕ್ಕೆ ದೊರೆತ ಚಿನ್ನದ ಪದಕವಾಗಿದೆ.
ಆದರೆ, ಈ ಸಾಧನೆ ಮಾಡಿದ ಪೂವಮ್ಮ ಅವರನ್ನು ರಾಜ್ಯ ಸರ್ಕಾರ ಈವರೆಗೆ ಗುರುತಿಸಿಲ್ಲ ಎಂಬುದು ಕುಟುಂಬದ ಬೇಸರಕ್ಕೆ ಕಾರಣವಾಗಿದೆ. ಪೂವಮ್ಮ ಅವರ ತಾಯಿ ಜಾಜಿ ಮಾಧ್ಯಮಗಳೊಂದಿಗೆ ಮಾತನಾಡಿ, 20 ವರ್ಷಗಳಿಂದ ಅಥ್ಲೆಟಿಕ್ಸ್‌ನಲ್ಲಿ ಶ್ರಮಿಸುತ್ತಿರುವ ಮಗಳಿಗೆ ರಾಜ್ಯ ಸರ್ಕಾರದಿಂದ ಸೂಕ್ತ ಪ್ರೋತ್ಸಾಹ ಸಿಕ್ಕಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
“ನನ್ನ ಮಗಳು 36 ವರ್ಷದವಳಾಗಿದ್ದು, ಕಳೆದ 20 ವರ್ಷಗಳಿಂದ ಅಥ್ಲೆಟಿಕ್ಸ್‌ಗಾಗಿ ಶ್ರಮಿಸುತ್ತಿದ್ದಾಳೆ. ಬೇರೆ ರಾಜ್ಯಗಳಲ್ಲಿ ಕ್ರೀಡಾಪಟುಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ. ಆದರೆ ಪೂವಮ್ಮ ಸಾಧನೆ ಮಾಡಿದ ಬಳಿಕವೂ ರಾಜ್ಯ ಸರ್ಕಾರದಿಂದ ಕನಿಷ್ಠ ಒಂದು ಕರೆ ಕೂಡ ಬಂದಿಲ್ಲ” ಎಂದು ಜಾಜಿ ಬೇಸರ ವ್ಯಕ್ತಪಡಿಸಿದ್ದಾರೆ.
“ಕ್ಯಾಶ್ ಪ್ರೈಸ್ ನೀಡುವುದು ಒಂದು ವಿಚಾರ. ಈ ಬಾರಿ ದೇಶಕ್ಕೆ ಅಥ್ಲೆಟಿಕ್ಸ್‌ನಲ್ಲಿ ಚಿನ್ನ ತಂದುಕೊಟ್ಟ ತಂಡದಲ್ಲಿ ಪೂವಮ್ಮ ಇದ್ದಾರೆ. ಆದರೆ ರಾಜ್ಯ ಸರ್ಕಾರದಿಂದ ಕನಿಷ್ಠ ಶುಭಾಶಯದ ಸಂದೇಶವೂ ಬಂದಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಮಂಗಳೂರಿನವರೇ ಆಗಿದ್ದರೂ ಕರೆ ಮಾಡಿಲ್ಲ” ಎಂದು ಅವರು ಹೇಳಿದ್ದಾರೆ.
ಉತ್ತರ ಪ್ರದೇಶ ಮತ್ತು ಕೇರಳದಲ್ಲಿ ಕ್ರೀಡಾಪಟುಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ. ದೊಡ್ಡ ಮೊತ್ತದ ಬಹುಮಾನಗಳನ್ನು ಘೋಷಿಸಲಾಗುತ್ತಿದೆ. ಆದರೆ ಕರ್ನಾಟಕದಲ್ಲಿ ಕನಿಷ್ಠ ಗುರುತಿಸುವಿಕೆಯೂ ಸಿಗದಿರುವುದು ಬೇಸರ ತಂದಿದೆ ಎಂದು ಜಾಜಿ ತಿಳಿಸಿದ್ದಾರೆ.
ಪೂವಮ್ಮ ಕಠಿಣ ತರಬೇತಿ ಮತ್ತು ಹಲವು ವರ್ಷಗಳ ಪರಿಶ್ರಮದಿಂದ ಈ ಸಾಧನೆ ಮಾಡಿದ್ದಾರೆ. ಕಳೆದ ಮೂರು-ನಾಲ್ಕು ವರ್ಷಗಳ ಶ್ರಮಕ್ಕೆ ಇದೀಗ ಫಲ ಸಿಕ್ಕಿದೆ. ಅಥ್ಲೆಟಿಕ್ಸ್ ಆಕೆಯ ಜೀವನದ ಅವಿಭಾಜ್ಯ ಭಾಗವಾಗಿದೆ. ನಾವು ಮಧ್ಯಮ ವರ್ಗದ ಕುಟುಂಬವಾಗಿದ್ದು, ತರಬೇತಿಗಾಗಿ ಸಾಕಷ್ಟು ವೆಚ್ಚ ಮಾಡಬೇಕಾಗುತ್ತದೆ. ಸರ್ಕಾರದಿಂದ ಬೆಂಬಲ ದೊರೆತರೆ ಅದು ಕ್ರೀಡಾಪಟುಗಳಿಗೆ ಇನ್ನಷ್ಟು ಸ್ಫೂರ್ತಿ ನೀಡುತ್ತದೆ ಎಂದು ಜಾಜಿ ಹೇಳಿದ್ದಾರೆ.
ಪೂವಮ್ಮ ಅವರ ಈ ಸಾಧನೆಯನ್ನು ಪ್ರಧಾನಿ ನರೇಂದ್ರ ಮೋದಿ ಕೂಡ ಅಭಿನಂದಿಸಿದ್ದು, 4×400 ಮೀಟರ್ ರಿಲೇ ತಂಡದ ವೇಗ ಮತ್ತು ದೃಢಸಂಕಲ್ಪ ಭಾರತವನ್ನು ಅಗ್ರಸ್ಥಾನಕ್ಕೆ ಕೊಂಡೊಯ್ದಿದೆ ಎಂದು ಶ್ಲಾಘಿಸಿದ್ದಾರೆ.
-
Uncategorized7 hours ago
ಸೌಜನ್ಯ ಪರ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ವಕೀಲ ಮೋಹಿತ್ ಕುಮಾರ್ ಗೆ ಮಾತೃ ವಿಯೋಗ
-
Uncategorized6 hours ago
ಮಂಗಳೂರು : ಸಹಪಾಠಿಯೊಂದಿಗೆ ಜಗಳ: ಬಿಸಿಎ ವಿದ್ಯಾರ್ಥಿಗೆ ಚೂರಿಯಿಂದ ಇರಿತ; ಇಬ್ಬರು ವಶಕ್ಕೆ
-
ದಕ್ಷಿಣ ಕನ್ನಡ17 minutes ago
Raod Accident : ಮಂತ್ರಾಲಯ ಯಾತ್ರೆ ವೇಳೆ ಬಣಕಲ್ ನಲ್ಲಿ ಭೀಕರ ಅಪಘಾತ: ಗಂಭೀರ ಗಾಯಗೊಂಡಿದ್ದ ಶಿಶಿಲದ ಯುವಕ ಸಾವು


















