Connect with us

ಸ್ಥಳೀಯ

Charmadi Ghat-Big Breaking: ಚಾರ್ಮಾಡಿ ಘಾಟಿಯಲ್ಲಿ ಎಸ್‌ಐಟಿ ಎಸ್‌ಪಿ ಕಾರು ಪಲ್ಟಿ: ಎಸ್ಪಿ ಸೈಮನ್ ಸೇರಿ ಅಧಿಕಾರಿಗಳು ಅದೃಷ್ಟವಶಾತ್ ಪಾರು..!

Published

on



Ad Widget

Ad Widget

Ad Widget

Ad Widget

`ಬುರುಡೆ ಪ್ರಕರಣ’ದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (SIT) ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಕಾರು ಚಾರ್ಮಾಡಿ ಘಾಟಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಜೂನ್ 16ರಂದು ಮಧ್ಯಾಹ್ನ ಸಂಭವಿಸಿದೆ.

Ad Widget

Ad Widget

Ad Widget

Ad Widget

ಬೆಳ್ತಂಗಡಿ: ‘ಬುರುಡೆ ಪ್ರಕರಣ’ದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (SIT) ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಕಾರು ಚಾರ್ಮಾಡಿ ಘಾಟಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಜೂನ್ 16ರಂದು ಮಧ್ಯಾಹ್ನ ಸಂಭವಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಘಟನೆಯ ವಿವರ:
ಬೆಳ್ತಂಗಡಿಯ ಎಸ್‌ಐಟಿ ಕಚೇರಿಯಿಂದ ಎಸ್‌ಪಿ ಸಿ.ಎ. ಸೈಮನ್, ಇನ್‌ಸ್ಪೆಕ್ಟರ್ ಕುಸುಮಾಧರ್ ಹಾಗೂ ಸಿಬ್ಬಂದಿ ಮಂಜುನಾಥ್ ಅವರು ಚಿಕ್ಕಮಗಳೂರಿಗೆ ತೆರಳುತ್ತಿದ್ದರು. ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ನಲ್ಲಿ ದಾಖಲಾಗಿರುವ ರಿಟ್ ಅರ್ಜಿಯ ಕುರಿತು ಚರ್ಚಿಸಲು ಚಿಕ್ಕಮಗಳೂರು ಎಸ್‌ಪಿ ಹಾಗೂ ಎಸ್‌ಐಟಿ ತನಿಖಾಧಿಕಾರಿಯಾದ ಜಿತೇಂದ್ರ ಕುಮಾರ್ ದಯಾಮ ಅವರನ್ನು ಭೇಟಿ ಮಾಡುವುದು ಇವರ ಉದ್ದೇಶವಾಗಿತ್ತು.

Ad Widget

Ad Widget <> Ad Widget

ಈ ವೇಳೆ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಇನೋವಾ ಕಾರು (KA-01-G-6463) ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿಯಾಗಿದೆ.



Ad Widget

ಅದೃಷ್ಟವಶಾತ್ ಪಾರು:
ಕಾರಿನಲ್ಲಿ ಚಾಲಕ ಸೇರಿ ಒಟ್ಟು ನಾಲ್ವರು ಪ್ರಯಾಣಿಸುತ್ತಿದ್ದರು. ಕಾರು ಪಲ್ಟಿಯಾದ ರಭಸಕ್ಕೆ ವಾಹನಕ್ಕೆ ಹಾನಿಯಾಗಿದೆಯಾದರೂ, ಕಾರಿನಲ್ಲಿದ್ದ ಎಸ್‌ಪಿ ಸೈಮನ್ ಸೇರಿದಂತೆ ನಾಲ್ವರೂ ಯಾವುದೇ ಗಾಯಗಳಿಲ್ಲದೆ ಅದೃಷ್ಟವಶಾತ್ ಪಾರಾಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ದೂರು ದಾಖಲಿಸಲು ಅಧಿಕಾರಿಗಳು ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಗೆ ಆಗಮಿಸಿದ್ದಾರೆ.

Click to comment

Leave a Reply

ರಾಜಕೀಯ

Puttur-ಪುತ್ತೂರು: ಅಲ್ಪಸಂಖ್ಯಾತ ಸೇವಾ ಕೇಂದ್ರ ಉದ್ಘಾಟನೆಗೆ ಬಿಜೆಪಿ ಮೋರ್ಚಾದಿಂದ ಆಗ್ರಹ

Published

on



Ad Widget

Ad Widget

Ad Widget

Ad Widget

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪುತ್ತೂರಿನ ದರ್ಬೆ ಸಿಟಿ ಗುಡ್ಡೆಯಲ್ಲಿ ನಿರ್ಮಿಸಲಾಗಿರುವ ಅಲ್ಪಸಂಖ್ಯಾತ ಸಾಮಾನ್ಯ ಸೇವಾ ಕೇಂದ್ರವನ್ನು ಯಥಾಸ್ಥಿತಿಯಲ್ಲಿ ಉಳಿಸಿ, ಶೀಘ್ರ ಉದ್ಘಾಟನೆ ಮಾಡಿ ಅಲ್ಪಸಂಖ್ಯಾತ ಸಮುದಾಯದ ಸೇವೆಗೆ ನಿಯೋಜಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಆಗ್ರಹಿಸಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪುತ್ತೂರಿನ ದರ್ಬೆ ಸಿಟಿ ಗುಡ್ಡೆಯಲ್ಲಿ ನಿರ್ಮಿಸಲಾಗಿರುವ ಅಲ್ಪಸಂಖ್ಯಾತ ಸಾಮಾನ್ಯ ಸೇವಾ ಕೇಂದ್ರವನ್ನು ಯಥಾಸ್ಥಿತಿಯಲ್ಲಿ ಉಳಿಸಿ, ಶೀಘ್ರ ಉದ್ಘಾಟನೆ ಮಾಡಿ ಅಲ್ಪಸಂಖ್ಯಾತ ಸಮುದಾಯದ ಸೇವೆಗೆ ನಿಯೋಜಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಆಗ್ರಹಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಈ ಕುರಿತು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮೋರ್ಚಾ ಮುಖಂಡರು, ಪುತ್ತೂರಿನ ಅಲ್ಪಸಂಖ್ಯಾತ ಸಮುದಾಯದ ಅಭಿವೃದ್ಧಿಗಾಗಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಲವು ಯೋಜನೆಗಳಿಗೆ ಅನುದಾನ ನೀಡಲಾಗಿದೆ ಎಂದು ಹೇಳಿದರು.

Ad Widget

Ad Widget <> Ad Widget

2020ರಲ್ಲಿ ಅಂದಿನ ಶಾಸಕ ಸಂಜೀವ ಮಟಂದೂರು ಅವರ ಅವಧಿಯಲ್ಲಿ ವಾಜಪೇಯಿ ಅವರ ಅಲ್ಪಸಂಖ್ಯಾತರ ಅಭಿವೃದ್ಧಿಯ ಕನಸಿನ ಭಾಗವಾಗಿ ಸುಮಾರು ₹2.50 ಕೋಟಿ ವೆಚ್ಚದಲ್ಲಿ ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಶಾಲೆ ನಿರ್ಮಾಣವಾಗಿದೆ. ಇದರ ಬಳಿಕ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳನ್ನು ಅಲ್ಪಸಂಖ್ಯಾತರಿಗೆ ತಲುಪಿಸುವ ಉದ್ದೇಶದಿಂದ ದರ್ಬೆ ಸಿಟಿ ಗುಡ್ಡೆಯಲ್ಲಿ ಸುಮಾರು ₹1.40 ಕೋಟಿ ವೆಚ್ಚದಲ್ಲಿ 4,000 ಚದರ ಅಡಿ ವಿಸ್ತೀರ್ಣದ ಅಲ್ಪಸಂಖ್ಯಾತ ಸಾಮಾನ್ಯ ಸೇವಾ ಕೇಂದ್ರ ನಿರ್ಮಿಸಲಾಗಿದೆ ಎಂದು ಅವರು ತಿಳಿಸಿದರು.



Ad Widget

ಕಟ್ಟಡ ಕಾಮಗಾರಿ ಪೂರ್ಣಗೊಂಡು ಉದ್ಘಾಟನೆಗೆ ಸಿದ್ಧವಾಗಿದ್ದ ಸಂದರ್ಭದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ಉದ್ಘಾಟನೆ ಸಾಧ್ಯವಾಗಿರಲಿಲ್ಲ. ಬಳಿಕವೂ ಕಟ್ಟಡವನ್ನು ಉದ್ಘಾಟಿಸಿ ಬಳಕೆಗೆ ನೀಡಲಾಗದೆ ಕಳೆದ ನಾಲ್ಕು ವರ್ಷಗಳಿಂದ ಪಾಳು ಬಿದ್ದಿದೆ ಎಂದು ಮೋರ್ಚಾ ಮುಖಂಡರು ಆರೋಪಿಸಿದರು.

Ad Widget

Ad Widget

ಬೇರೆ ಉದ್ದೇಶಕ್ಕೆ ಬಳಸಬೇಡಿ
ಪ್ರಸ್ತುತ ಶಾಸಕರು ಈ ಕಟ್ಟಡವನ್ನು ಬೇರೆ ಕಾರ್ಯಕ್ಕೆ ಬಳಸಲು ಮುಂದಾಗಿರುವುದು ಸರಿಯಲ್ಲ ಎಂದು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದರು.

ಅಲ್ಪಸಂಖ್ಯಾತ ಸಮುದಾಯಕ್ಕೆ ಅಗತ್ಯವಿರುವ ಸೇವೆಗಳನ್ನು ಒದಗಿಸುವ ಕೇಂದ್ರವಾಗಿಯೇ ಕಟ್ಟಡವನ್ನು ಬಳಕೆ ಮಾಡಬೇಕು. ಪುತ್ತೂರಿನಲ್ಲಿ ಅಲ್ಪಸಂಖ್ಯಾತರಿಗಾಗಿ ಬಾಲಕರ ಹಾಗೂ ಬಾಲಕಿಯರ ಪ್ರತ್ಯೇಕ ಹಾಸ್ಟೆಲ್‌ಗಳು ಮತ್ತು ಸಮುದಾಯ ಭವನ ನಿರ್ಮಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ಸಿಟಿ ಗುಡ್ಡೆ ಪ್ರದೇಶದಲ್ಲಿ ಈಗಾಗಲೇ ವಾಣಿಜ್ಯ ತೆರಿಗೆ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ ಇಲಾಖೆಗಳ ಕಚೇರಿಗಳಿವೆ. ಪುತ್ತೂರು ನಗರದ ಎರಡನೇ ಪ್ರಮುಖ ಪ್ರದೇಶವಾಗಿ ದರ್ಬೆ ಬೆಳೆಯುತ್ತಿರುವ ಹಿನ್ನೆಲೆಯಲ್ಲಿ ಅಲ್ಪಸಂಖ್ಯಾತ ಸೇವಾ ಕೇಂದ್ರವೂ ತನ್ನ ಉದ್ದೇಶಕ್ಕೆ ಅನುಗುಣವಾಗಿ ಕಾರ್ಯನಿರ್ವಹಿಸಬೇಕು ಎಂದು ಅವರು ಹೇಳಿದರು.

ಕಾಂಗ್ರೆಸ್ ವಿರುದ್ಧ ಆರೋಪ
ಅಲ್ಪಸಂಖ್ಯಾತ ಸಮುದಾಯಕ್ಕೆ ಸರ್ಕಾರದ ಯೋಜನೆಗಳು ಹಾಗೂ ಮೂಲಸೌಕರ್ಯ ಕಲ್ಪಿಸುವ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಮುಖಂಡರು ಆರೋಪಿಸಿದರು.

ಅಲ್ಪಸಂಖ್ಯಾತರ ಬೆಂಬಲವನ್ನು ಪಡೆದಿರುವ ಹಾಲಿ ಶಾಸಕರು ತಮ್ಮ ಅವಧಿಯಲ್ಲಿ ಸಮುದಾಯಕ್ಕೆ ನೀಡಿರುವ ಕೊಡುಗೆ ಏನು ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಅವರು ಪ್ರಶ್ನಿಸಿದರು.

ಬಿಜೆಪಿ ಸರ್ಕಾರ ನಿರ್ಮಿಸಿರುವ ಸೇವಾ ಕೇಂದ್ರವನ್ನು ವಿರೋಧಿಸುವ ಬದಲು ಅದನ್ನು ಉದ್ಘಾಟಿಸಿ ಅಲ್ಪಸಂಖ್ಯಾತ ಸಮುದಾಯದ ಬಹುಉಪಯೋಗಕ್ಕೆ ಬಳಸಲು ಸಹಕರಿಸಬೇಕು ಎಂದು ಅವರು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಟಿ.ಎ. ಶನವಾಜ್, ಪ್ರಧಾನ ಕಾರ್ಯದರ್ಶಿ ಫೆಡ್ರಿಕ್ ಪೌಲ್, ಉಪಾಧ್ಯಕ್ಷ ಅಜ್ಗರ್ ಮುಡಿಪು, ಜಿಲ್ಲಾ ಉಪಾಧ್ಯಕ್ಷ ಮೊಹಮ್ಮದ್ ರಫೀಕ್ ದರ್ಬೆ, ಹಿರೆಬಂಡಾಡಿ ಪಂಚಾಯತ್‌ ಮಾಜಿ ಅಧ್ಯಕ್ಷ ಸೌಕತ್‌ ಅಲಿ, ರಾಜೇಶ ಬನ್ನೂರು ಉಪಸ್ಥಿತರಿದ್ದರು.

Ad Widget
Continue Reading

ಬಿಗ್ ನ್ಯೂಸ್

Master Anand-ಕಾರಂತರ ಬಾಲವನ ಪ್ರಶಸ್ತಿಗೆ ಆಯ್ಕೆಯಾದ ಮಾಸ್ಟರ್ ಪ್ಲಾನರಿಯ ಮಾಸ್ಟರ್ ಆನಂದ್

Published

on



Ad Widget

Ad Widget

Ad Widget

Ad Widget

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಶಿವರಾಮ ಕಾರಂತರ ಕರ್ಮಭೂಮಿಯಾದ ಪುತ್ತೂರಿನ ಬಾಲವನದಲ್ಲಿ ಪ್ರದಾನ ಮಾಡಲಾಗುವ ಪ್ರತಿಷ್ಠಿತ ‘ಡಾ. ಶಿವರಾಮ ಕಾರಂತ ಬಾಲವನ ರಾಜ್ಯ ಪ್ರಶಸ್ತಿ-2026’ಕ್ಕೆ ಪುತ್ತೂರಿನ ಶ್ರೇಷ್ಠ ಸಿವಿಲ್ ಇಂಜಿನಿಯರಿಂಗ್ ಸಾಧಕ ಹಾಗೂ ‘ಮಾಸ್ಟರ್ ಪ್ಲಾನರಿ’ ಸಂಸ್ಥೆಯ ಮುಖ್ಯಸ್ಥ ಎಸ್.ಕೆ. ಆನಂದ್ ಆಯ್ಕೆಯಾಗಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಶಿವರಾಮ ಕಾರಂತರ ಕರ್ಮಭೂಮಿಯಾದ ಪುತ್ತೂರಿನ ಬಾಲವನದಲ್ಲಿ ಪ್ರದಾನ ಮಾಡಲಾಗುವ ಪ್ರತಿಷ್ಠಿತ ‘ಡಾ. ಶಿವರಾಮ ಕಾರಂತ ಬಾಲವನ ರಾಜ್ಯ ಪ್ರಶಸ್ತಿ-2026’ಕ್ಕೆ ಪುತ್ತೂರಿನ ಶ್ರೇಷ್ಠ ಸಿವಿಲ್ ಇಂಜಿನಿಯರಿಂಗ್ ಸಾಧಕ ಹಾಗೂ ‘ಮಾಸ್ಟರ್ ಪ್ಲಾನರಿ’ ಸಂಸ್ಥೆಯ ಮುಖ್ಯಸ್ಥ ಎಸ್.ಕೆ. ಆನಂದ್ ಆಯ್ಕೆಯಾಗಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ವೈಜ್ಞಾನಿಕ ಮನೋಭಾವ, ಪರಿಸರ ಕಾಳಜಿ ಹಾಗೂ ಸುಸ್ಥಿರ ಜೀವನಶೈಲಿಯನ್ನು ತಮ್ಮ ವೃತ್ತಿ ಬದುಕಿನಲ್ಲಿ ಅಳವಡಿಸಿಕೊಂಡಿರುವ ಎಸ್.ಕೆ. ಆನಂದ್ ಅವರು, ಸಿಮೆಂಟ್ ಪ್ರೀಕಾಸ್ಟ್ ತಂತ್ರಜ್ಞಾನದ ಮೂಲಕ ಮರಕ್ಕೆ ಪರ್ಯಾಯವಾದ ‘ಕಾಂಕೂಡ್’ (Concood™) ಎಂಬ ಉತ್ಪನ್ನವನ್ನು ಅಭಿವೃದ್ಧಿಪಡಿಸಿದ್ದಾರೆ. ಈ ಆವಿಷ್ಕಾರದ ಮೂಲಕ ಕಳೆದ ಹಲವು ದಶಕಗಳಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಮರಮುಟ್ಟುಗಳ ಬಳಕೆಯನ್ನು ತಪ್ಪಿಸಿ, ಲಕ್ಷಾಂತರ ಮರಗಳನ್ನು ಕೊಡಲಿಗೆ ಬಲಿಯಾಗದಂತೆ ಸಂರಕ್ಷಿಸಿದ ಸಾಧನೆ ಅವರದ್ದಾಗಿದೆ.

Ad Widget

Ad Widget <> Ad Widget

1951ರಲ್ಲಿ ಪುತ್ತೂರಿನಲ್ಲಿ ಜನಿಸಿದ ಎಸ್.ಕೆ. ಆನಂದ್ ಅವರು ದಿವಂಗತ ಎಸ್.ಕೆ. ಈಶ್ವರ ಭಟ್ ಹಾಗೂ ಶಾರದಾ ಭಟ್ ದಂಪತಿಯ ಪುತ್ರ. ಮಂಗಳೂರಿನ ಕೆ.ಆರ್.ಇ.ಸಿ. (ಪ್ರಸ್ತುತ NITK, ಸುರತ್ಕಲ್)ಯಲ್ಲಿ ಸಿವಿಲ್ ಇಂಜಿನಿಯರಿಂಗ್ ಪದವಿ ಹಾಗೂ ಎಂ.ಟೆಕ್ ಪದವಿಯನ್ನು ಉನ್ನತ ಶ್ರೇಣಿಯಲ್ಲಿ ಪಡೆದ ಅವರು, 1975ರಲ್ಲಿ ತಂದೆಯವರು ಸ್ಥಾಪಿಸಿದ್ದ ‘ಮಾಸ್ಟರ್ ಪ್ಲಾನರಿ’ ಸಂಸ್ಥೆಯ ಜವಾಬ್ದಾರಿ ವಹಿಸಿಕೊಂಡರು. ಉನ್ನತ ಅವಕಾಶಗಳಿದ್ದರೂ ದೊಡ್ಡ ನಗರಗಳತ್ತ ತೆರಳದೆ ಪುತ್ತೂರಿನಲ್ಲೇ ನೆಲೆಸಿ, ಸುಸ್ಥಿರ ನಿರ್ಮಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ.



Ad Widget

‘ಕಾಂಕೂಡ್’ ಮೂಲಕ ಮರಕ್ಕೆ ಪರ್ಯಾಯ
ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮನೆ, ಕಚೇರಿ, ಶಾಲಾ-ಕಾಲೇಜುಗಳ ನಿರ್ಮಾಣಕ್ಕೆ ದಾರಂದ, ಕಿಟಕಿ, ಮೇಲ್ಛಾವಣಿಯ ತೊಲೆ, ಬೆಂಚ್-ಡೆಸ್ಕ್ ಸೇರಿದಂತೆ ವಿವಿಧ ಕಾರ್ಯಗಳಿಗೆ ಅಪಾರ ಪ್ರಮಾಣದ ಮರಮುಟ್ಟುಗಳನ್ನು ಬಳಸಲಾಗುತ್ತಿತ್ತು. ಈ ಸಮಸ್ಯೆಗೆ ಪರಿಸರಸ್ನೇಹಿ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಆನಂದ್ ಅವರು ಸಿಮೆಂಟ್ ಪ್ರೀಕಾಸ್ಟ್ ತಂತ್ರಜ್ಞಾನದ ಕುರಿತು ಸುದೀರ್ಘ ಸಂಶೋಧನೆ ನಡೆಸಿ, ಮರದ ಬಲಕ್ಕೆ ಪರ್ಯಾಯವಾಗಬಲ್ಲ ಕಾಂಕ್ರೀಟ್ ಉತ್ಪನ್ನಗಳನ್ನು ಅಭಿವೃದ್ಧಿಪಡಿಸಿದರು.

Ad Widget

Ad Widget

‘ಕಾಂಕೂಡ್’ ಹೆಸರಿನ ಈ ಉತ್ಪನ್ನಗಳಿಗೆ 2007ರಲ್ಲಿ ಭಾರತ ಸರ್ಕಾರದಿಂದ ಅಧಿಕೃತ ಟ್ರೇಡ್‌ಮಾರ್ಕ್ ನೋಂದಣಿಯೂ ದೊರೆತಿದೆ. ಇಂದು ವಿವಿಧ ಅಗತ್ಯಗಳಿಗೆ ಬಳಸಬಹುದಾದ 250ಕ್ಕೂ ಅಧಿಕ ಕಾಂಕ್ರೀಟ್ ಪರಿಕರಗಳು ‘ಮಾಸ್ಟರ್ ಪ್ಲಾನರಿ’ಯಲ್ಲಿ ಲಭ್ಯವಿವೆ.

36.5 ಲಕ್ಷಕ್ಕೂ ಅಧಿಕ ಮರಗಳ ಸಂರಕ್ಷಣೆ
‘ಮಾಸ್ಟರ್ ಪ್ಲಾನರಿ’ ಸಂಸ್ಥೆಯಲ್ಲಿ ಪ್ರತಿದಿನ ಸರಾಸರಿ 200 CFTಗೂ ಅಧಿಕ ಕಾಂಕ್ರೀಟ್ ಪರಿಕರಗಳನ್ನು ಉತ್ಪಾದಿಸಲಾಗುತ್ತಿದ್ದು, ಈ ಪರಿಕರಗಳ ಬಳಕೆಯಿಂದ ಪ್ರತಿದಿನ ಸರಾಸರಿ 20 ಬೃಹತ್ ಮರಗಳು ಕಡಿಯುವುದನ್ನು ತಪ್ಪಿಸಲಾಗುತ್ತಿದೆ ಎಂದು ಸಂಸ್ಥೆ ತಿಳಿಸಿದೆ.

ಕಳೆದ 50 ವರ್ಷಗಳ ಈ ಸೇವೆಯ ಲೆಕ್ಕಾಚಾರದಂತೆ, ಇದುವರೆಗೆ ಸುಮಾರು 36.5 ಲಕ್ಷಕ್ಕೂ ಅಧಿಕ ಬೃಹತ್ ಮರಗಳು ಕೊಡಲಿಗೆ ಬಲಿಯಾಗುವುದನ್ನು ತಪ್ಪಿಸಿ ಸಂರಕ್ಷಿಸಲಾಗಿದೆ. ಶಾಲಾ-ಕಾಲೇಜುಗಳು, ಸರ್ಕಾರಿ ಸಂಸ್ಥೆಗಳು ಸೇರಿದಂತೆ ಹಲವು ಕಡೆಗಳಲ್ಲಿ ಮರದ ಪರ್ಯಾಯವಾಗಿ ‘ಕಾಂಕೂಡ್’ ಉತ್ಪನ್ನಗಳನ್ನು ಬಳಸಲಾಗುತ್ತಿದೆ.

ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್ ಅವರು ದೇಶಾದ್ಯಂತ ನಿರ್ಮಿಸಿರುವ 30ಕ್ಕೂ ಅಧಿಕ ತೂಗು ಸೇತುವೆಗಳಲ್ಲೂ ಮರದ ಹಲಗೆಗಳ ಬದಲಿಗೆ ‘ಕಾಂಕೂಡ್’ ಪರಿಕರಗಳನ್ನು ಬಳಸಲಾಗಿದೆ. ಬೆಂಗಳೂರು ಮಹಾನಗರ ಪಾಲಿಕೆ, ಕರ್ನಾಟಕ ಅರಣ್ಯ ಇಲಾಖೆ ಸೇರಿದಂತೆ ಕೇರಳ, ತಮಿಳುನಾಡು ಹಾಗೂ ಆಂಧ್ರಪ್ರದೇಶಗಳಲ್ಲೂ ಈ ತಂತ್ರಜ್ಞಾನ ಬಳಕೆಯಾಗಿದೆ.

50 ಎಕರೆಗೂ ಅಧಿಕ ಹಸಿರು ಕಾಡು
ಮರಗಳ ಸಂರಕ್ಷಣೆಯ ಜತೆಗೆ ವೈಯಕ್ತಿಕವಾಗಿಯೂ ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಿರುವ ಎಸ್.ಕೆ. ಆನಂದ್ ಅವರು ಸೊರಕೆ ಹಾಗೂ ಕುಡಿಪಾಡಿಯಲ್ಲಿ ‘ಕುಡಿಕಾಡು’ ಹೆಸರಿನಲ್ಲಿ 50 ಎಕರೆಗೂ ಅಧಿಕ ಪ್ರದೇಶದಲ್ಲಿ ಸಾವಿರಾರು ಗಿಡ-ಮರಗಳನ್ನು ಬೆಳೆಸಿ ಹಸಿರು ಕಾಡು ನಿರ್ಮಿಸಿದ್ದಾರೆ.

‘ಮಾಸ್ಟರ್ ಪ್ಲಾನರಿ’ ಸಂಸ್ಥೆಯಡಿ 9 ಕೇಂದ್ರಗಳಲ್ಲಿ 24 ಸಂಸ್ಥೆಗಳ ಮೂಲಕ 800ಕ್ಕೂ ಅಧಿಕ ಮಂದಿಗೆ ನೇರ ಉದ್ಯೋಗ ಕಲ್ಪಿಸಲಾಗಿದೆ. ಇವರಲ್ಲಿ 200ಕ್ಕೂ ಅಧಿಕ ಮಹಿಳೆಯರು ಹಾಗೂ 20ಕ್ಕೂ ಅಧಿಕ ಭಿನ್ನಸಾಮರ್ಥ್ಯ ಹೊಂದಿರುವವರು ಸೇರಿದ್ದಾರೆ. ಪರೋಕ್ಷವಾಗಿ 3,000ಕ್ಕೂ ಅಧಿಕ ಉದ್ಯೋಗ ಸೃಷ್ಟಿಯಾಗಿರುವುದಾಗಿ ತಿಳಿಸಲಾಗಿದೆ.

ಸಂಸ್ಥೆಯ ಸಿಬ್ಬಂದಿಯ ಮಕ್ಕಳ ಆರೈಕೆ ಹಾಗೂ ಶಿಕ್ಷಣಕ್ಕಾಗಿ ಆವರಣದಲ್ಲೇ ಅಂಗನವಾಡಿ ಮಾದರಿಯ ಪ್ಲೇ ಸ್ಕೂಲ್ ಆರಂಭಿಸಿರುವುದು ಅವರ ಸಾಮಾಜಿಕ ಕಾಳಜಿಗೆ ಮತ್ತೊಂದು ಉದಾಹರಣೆಯಾಗಿದೆ.

ಚಾಮರಾಜನಗರ ಹಾಗೂ ನಾಗರಹೊಳೆ ಭಾಗದ ಅರಣ್ಯವಾಸಿ ಗಿರಿಜನರಿಗೆ 8,000ಕ್ಕೂ ಅಧಿಕ ಮನೆಗಳನ್ನು ನಿರ್ಮಿಸಿಕೊಟ್ಟಿರುವ ಅವರು, ಸುಳ್ಯದಲ್ಲಿ ಕಳೆದ 20 ವರ್ಷಗಳಿಂದ ‘ಸ್ನೇಹ ಶಿಕ್ಷಣ ಸಂಸ್ಥೆ’ ಮೂಲಕ ಗ್ರಾಮೀಣ ಮಕ್ಕಳಿಗೆ ಕನ್ನಡ ಮಾಧ್ಯಮ ಶಿಕ್ಷಣ ನೀಡುತ್ತಿದ್ದಾರೆ.

ಸಾಹಿತ್ಯ ಕ್ಷೇತ್ರದಲ್ಲೂ ಆಸಕ್ತಿ ಹೊಂದಿರುವ ಆನಂದ್ ಅವರು ‘ಭಾವಲೋಕ’ ಎಂಬ ಕವನ ಸಂಕಲನ ಸೇರಿದಂತೆ ಹಲವು ಭಾವಗೀತೆಗಳನ್ನು ರಚಿಸಿ ಪ್ರಕಟಿಸಿದ್ದಾರೆ.

ಎಸ್.ಕೆ. ಆನಂದ್ ಹಾಗೂ ರೇಖಾ ಆನಂದ್ ದಂಪತಿಯ ನಾಲ್ವರು ಮಕ್ಕಳಾದ ಅಕ್ಷಯ್, ಅರ್ಜುನ್, ಆಕಾಶ್ ಹಾಗೂ ಆರತಿ ಅವರು ಸಿವಿಲ್ ಇಂಜಿನಿಯರಿಂಗ್ ಪದವೀಧರರಾಗಿದ್ದು, ಕುಟುಂಬದ ಸುಸ್ಥಿರ ಹಾಗೂ ಪರಿಸರಸ್ನೇಹಿ ನಿರ್ಮಾಣ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ.

ಹಲವು ಪ್ರಶಸ್ತಿಗಳ ಗರಿ
ಪರಿಸರ ಸೇವೆಗಾಗಿ 2003ರಲ್ಲಿ ‘ಪರಿಸರಪ್ರೇಮಿ’ ಪ್ರಶಸ್ತಿ, 2008ರಲ್ಲಿ ICI ವತಿಯಿಂದ ‘ಕರ್ನಾಟಕದ ಅತ್ಯುತ್ತಮ ಕಾಂಕ್ರೀಟ್ ಇಂಜಿನಿಯರ್’ ಪ್ರಶಸ್ತಿ ಸೇರಿದಂತೆ ರಾಷ್ಟ್ರೀಯ ಜೆಸಿಐ ‘TOBIP’ ಹಾಗೂ ACCE-UltraTech ಪ್ರಶಸ್ತಿಗಳು ಎಸ್.ಕೆ. ಆನಂದ್ ಅವರಿಗೆ ಸಂದಿವೆ.

ಬಾಲವನ ಪ್ರಶಸ್ತಿ ಆಯ್ಕೆ ಸಮಿತಿ ಅಧ್ಯಕ್ಷ ಹಾಗೂ ಶಾಸಕ ಅಶೋಕ್ ಕುಮಾರ್ ರೈ ಅವರ ನೇತೃತ್ವದಲ್ಲಿ, ಉಪವಿಭಾಗಾಧಿಕಾರಿ ಹಾಗೂ ಬಾಲವನ ಪ್ರಶಸ್ತಿ ಸಮಿತಿ ಕಾರ್ಯದರ್ಶಿ ಸ್ಟೆಲ್ಲಾ ವರ್ಗೀಸ್, ತಾಲೂಕು ಕಸಾಪ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್, ಹಿರಿಯ ಸಾಹಿತಿಗಳಾದ ವಿ.ಬಿ. ಆರ್ತಿಕಜೆ ಹಾಗೂ ರೆ. ವಿಜಯ್ ಹಾರ್ವಿನ್ ಅವರನ್ನು ಒಳಗೊಂಡ ಆಯ್ಕೆ ಸಮಿತಿ ಎಸ್.ಕೆ. ಆನಂದ್ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ.

ಅಕ್ಟೋಬರ್ 10, 2026ರಂದು ಪುತ್ತೂರಿನ ಐತಿಹಾಸಿಕ ಬಾಲವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ‘ಡಾ. ಶಿವರಾಮ ಕಾರಂತ ಬಾಲವನ ರಾಜ್ಯ ಪ್ರಶಸ್ತಿ-2026’ ಪ್ರದಾನ ಮಾಡಿ ಎಸ್.ಕೆ. ಆನಂದ್ ಅವರನ್ನು ಗೌರವಿಸಲಾಗುವುದು.

Ad Widget
Continue Reading

ನಿಧನ ವಾರ್ತೆ

Uppinangadi-ಉಪ್ಪಿನಂಗಡಿ: ಸೇತುವೆ ಮೇಲೆ ಬೈಕ್, ಮೊಬೈಲ್ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ನದಿಯಲ್ಲಿ ಶವವಾಗಿ ಪತ್ತೆ

Published

on



Ad Widget

Ad Widget

Ad Widget

Ad Widget

ಕುಮಾರಧಾರ ಹಳೆ ಸೇತುವೆ ಮೇಲೆ ಬೈಕ್ ಹಾಗೂ ಮೊಬೈಲ್ ಇಟ್ಟು ನಾಪತ್ತೆಯಾಗಿದ್ದ ಹಿರೇಬಂಡಾಡಿ ಗ್ರಾಮದ ಪೆರಾಬೆ ನಿವಾಸಿ ಮಾಧವ ಗೌಡ (44) ಅವರ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಅವರು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.

Ad Widget

Ad Widget

Ad Widget

Ad Widget

ಉಪ್ಪಿನಂಗಡಿ: ಕುಮಾರಧಾರ ಹಳೆ ಸೇತುವೆ ಮೇಲೆ ಬೈಕ್ ಹಾಗೂ ಮೊಬೈಲ್ ಇಟ್ಟು ನಾಪತ್ತೆಯಾಗಿದ್ದ ಹಿರೇಬಂಡಾಡಿ ಗ್ರಾಮದ ಪೆರಾಬೆ ನಿವಾಸಿ ಮಾಧವ ಗೌಡ (44) ಅವರ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಅವರು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.

Ad Widget

Ad Widget

Ad Widget alt="Ad Widget"/>

Ad Widget

ಆತೂರಿನಲ್ಲಿ ಇತ್ತೀಚೆಗಷ್ಟೇ ಟಯರ್ ಪಂಕ್ಚರ್ ಅಂಗಡಿ ಆರಂಭಿಸಿದ್ದ ಮಾಧವ ಗೌಡ ಅವರು ಅ.2ರಂದು ಮನೆಯಿಂದ ಅಂಗಡಿಗೆ ತೆರಳಿದ್ದರು. ಆದರೆ ಬಳಿಕ ಮನೆಗೆ ವಾಪಸ್ ಆಗದೆ ನಾಪತ್ತೆಯಾಗಿದ್ದರು. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹಾಗೂ ಸ್ಥಳೀಯರು ಹುಡುಕಾಟ ನಡೆಸಿದಾಗ, ಅವರ ಬೈಕ್ ಮತ್ತು ಮೊಬೈಲ್ ಉಪ್ಪಿನಂಗಡಿಯ ಕುಮಾರಧಾರ ನದಿಯ ಹಳೆ ಸೇತುವೆ ಮೇಲೆ ಪತ್ತೆಯಾಗಿತ್ತು.

Ad Widget

Ad Widget <> Ad Widget

ಅವರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಅ.4ರಂದು ಪುತ್ತೂರು ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಮುಳುಗು ತಜ್ಞರು ದೋಣಿಯ ಮೂಲಕ ನದಿಯಲ್ಲಿ ಹುಡುಕಾಟ ನಡೆಸಿದ್ದರು. ಮಧ್ಯಾಹ್ನದಿಂದ ಸಂಜೆಯವರೆಗೆ ಶೋಧ ಕಾರ್ಯ ನಡೆಸಿದರೂ ಯಾವುದೇ ಸುಳಿವು ಪತ್ತೆಯಾಗಿರಲಿಲ್ಲ.



Ad Widget

ಇದೀಗ ಎರಡು ದಿನಗಳ ಬಳಿಕ ನೆಕ್ಕಿಲಾಡಿ ಗ್ರಾಮದ ಬೊಳ್ಳಾರ್ ಸಮೀಪ ನೇತ್ರಾವತಿ ನದಿಯಲ್ಲಿ ಮಾಧವ ಗೌಡ ಅವರ ಮೃತದೇಹ ಪತ್ತೆಯಾಗಿದೆ. ಅವರ ನಾಪತ್ತೆ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading