ಬಿಗ್ ನ್ಯೂಸ್
MESCOM-ವಿದ್ಯುತ್ ಖಾಸಗೀಕರಣದ ವಿರುದ್ಧ ಪುತ್ತೂರಿನಲ್ಲಿ ಮೆಸ್ಕಾಂ ಅಧಿಕಾರಿ – ಸಿಬ್ಬಂದಿಗಳಿಂದ ಪ್ರತಿಭಟನೆ; ಬಿಎಸ್‌ಎನ್‌ಎಲ್‌ನ ಪರಿಸ್ಥಿತಿ ಮೆಸ್ಕಾಂಗೂ ಬರಬಹುದು : ಕೃಷಿ ಉಚಿತ ವಿದ್ಯುತ್ , ಗೃಹಜ್ಯೋತಿ ಯೋಜನೆ ಸ್ಥಗಿತವಾಗಬಹುದು -ಕಾರ್ಯನಿರ್ವಾಹಕ ಇಂಜಿನಿಯರ್ ರಾಮಚಂದ್ರ ಎ; ಕೈಗಾರಿಕೋಧ್ಯಮಕ್ಕೆ ರೈತರಿಗೆ ಸಾರ್ವಜನಿಕರಿಗೆ ಯೋಜನೆ ಮಾರಕ – ಆಕ್ಷೇಪಣೆ ಸಲ್ಲಿಸಲು ಜೂ.23ರ ತನಕ ಅವಕಾಶ
ಮೆಸ್ಕಾಂನ 3 ಜಿಲ್ಲೆ ಸೇರಿದಂತೆ ರಾಜ್ಯದ 15 ಜಿಲ್ಲೆಗಳಲ್ಲಿ ವಿದ್ಯುತ್ ಇಲಾಖೆಯನ್ನು ಕರ್ನಾಟಕದಲ್ಲಿ ಖಾಸಗೀಕರಣಗೊಳಿಸುವುದರ ವಿರುದ್ಧ ಜೂ.16ರಂದು ಬನ್ನೂರಿನಲ್ಲಿರುವ ಮೆಸ್ಕಾಂನ ಪುತ್ತೂರು ವಿಭಾಗದ ಕಚೇರಿಯಲ್ಲಿ ಮೆಸ್ಕಾಂನ ಅಧಿಕಾರಿ ಹಾಗೂ ಸಿಬ್ಬಂದಿಗಳು ಪ್ರತಿಭಟನೆ ನಡೆಸಿದರು.
ಪುತ್ತೂರು: ಮೆಸ್ಕಾಂನ 3 ಜಿಲ್ಲೆ ಸೇರಿದಂತೆ ರಾಜ್ಯದ 15 ಜಿಲ್ಲೆಗಳಲ್ಲಿ ವಿದ್ಯುತ್ ಇಲಾಖೆಯನ್ನು ಕರ್ನಾಟಕದಲ್ಲಿ ಖಾಸಗೀಕರಣಗೊಳಿಸುವುದರ ವಿರುದ್ಧ ಜೂ.16ರಂದು ಬನ್ನೂರಿನಲ್ಲಿರುವ ಮೆಸ್ಕಾಂನ ಪುತ್ತೂರು ವಿಭಾಗದ ಕಚೇರಿಯಲ್ಲಿ ಮೆಸ್ಕಾಂನ ಅಧಿಕಾರಿ ಹಾಗೂ ಸಿಬ್ಬಂದಿಗಳು ಪ್ರತಿಭಟನೆ ನಡೆಸಿದರು
ವಿದ್ಯುತ್ ಇಲಾಖೆಯನ್ನು ಖಾಸಗೀಕರಣಗೊಳಿಸುವ ಪ್ರಕ್ರಿಯೆ ಈಗಾಗಲೇ ಕರ್ನಾಟಕದಲ್ಲಿ ಪ್ರಾರಂಭಗೊಂಡಿದೆ. ಟಾಟಾ ಕಂಪನಿಯವರು ಖಾಸಗಿಗೆ ಅರ್ಜಿ ಹಾಕಿದ್ದಾರೆ. ಖಾಸಗಿಯವರಿಗೆ ನೀಡಬೇಕಾದರೆ ಕರ್ನಾಟಕ ವಿದ್ಯುತ್ಚಕ್ತಿ ನಿಯಂತ್ರಣ ಆಯೋಗ ಸಾರ್ವಜನಿಕರ ಅಭಿಪ್ರಾಯ, ಆಕ್ಷೇಪಣೆಗಳನ್ನು ಪಡೆಯಬೇಕು. ಆಕ್ಷೇಪಣೆಗಳನ್ನು ಸಲ್ಲಿಸಲು ಜೂ.23ರ ತನಕ ಅವಕಾಶವಿದ್ದು ಇದನ್ನು ಸದುಪಯೋಗಪಡಿಸಿಕೊಳ್ಳಬೇಕು. ಖಾಸಗೀಕರಣಗೊಂಡರೆ ಕೃಷಿ, ಕೈಗಾರಿಕೆ, ಗುತ್ತಿಗೆದಾರರು ಸಹಿತ ಎಲ್ಲಾ ವರ್ಗದವರಿಗೂ ಪರಿಣಾಮ ಬೀಳಲಿದೆ. ಹೀಗಾಗಿ ಪ್ರತಿಯೊಬ್ಬ ನಾಗರೀಕರು ಆಕ್ಷೇಪಣೆಗಳನ್ನು ಸಲ್ಲಿಸುವ ಮೂಲಕ ಖಾಸಗೀಕರಣದಿಂದ ಸಂಭವಿಸಬಹುದಾದ ಹೊಡೆತ, ಸಮಸ್ಯೆಗಳನ್ನು ತಡೆಯುವಂತೆ ಪ್ರತಿಭಟನೆಯಲ್ಲಿ ಆಗ್ರಹ ವ್ಯಕ್ತವಾಯಿತು.
ಬಿಎಸ್‌ಎನ್‌ಎಲ್‌ನ ಪರಿಸ್ಥಿತಿ ಮೆಸ್ಕಾಂಗೂ ಬರಬಹುದು-ರಾಮಚಂದ್ರ;
ಮೆಸ್ಕಾಂ ಪುತ್ತೂರು ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್, ಡಿಪ್ಲೋಮ ಇಂಜಿನಿಯರ್ಸ್ ಎಸೋಸಿಯೇಶನ್ ರಾಜ್ಯಾಧ್ಯಕ್ಷರಾಗಿರುವ ರಾಮಚಂದ್ರ ಎ. ಮಾತನಾಡಿ, ವಿದ್ಯುತ್ ಇಲಾಖೆಯನ್ನು ಖಾಸಗೀಕರಣಗೊಳಿಸುವ ಪ್ರಕ್ರೀಯೆ ಈಗಾಗಲೇ ಪ್ರಾರಂಭಗೊಂಡಿದೆ. ವಿದ್ಯುತ್ ಖಾಸಗೀಕರಣಗೊಂಡರೆ ಬಿಎಸ್‌ಎನ್‌ಎಲ್‌ನ ಪರಿಸ್ಥಿತಿ ಎದುರಿಸಬೇಕಾಗಬಹುದು. ಅಧಿಕ ಜನಸಂಖ್ಯೆ ಆದಾಯ ಬರುವ ಪ್ರಮುಖ ನಗರಗಳನ್ನು ಏರ್‌ಟೆಲ್, ಜಿಯೋದಂತಹ ಖಾಸಗಿ ಕಂಪನಿಗಳು ಪಡೆದುಕೊಂಡಿದೆ. ಆದಾಯ ಇಲ್ಲದೇ ಇರುವ ಗ್ರಾಮೀಣ ಪ್ರದೇಶಗಳು ಸರಕಾರಿ ಸಂಸ್ಥೆಗಳ ಕೈಯಲ್ಲಿದ್ದು ಅಲ್ಲಿ ಸಮಸ್ಯೆ ನಿಭಾಯಿಸಲು ಅಸಾಧ್ಯವಾಗಿದೆ. ಮುಂದೆ ಮೆಸ್ಕಾಂನ ಸ್ಥಿತಿಯೂ ಇದೇ ರೀತಿಯಾಗುವ ಸಾಧ್ಯತೆಯಿದೆ. ಟಾಟಾ ಸಂಸ್ಥೆಯ ಮಂಗಳೂರು ಮಹಾನಗರ ಪಾಲಿಕೆ, ಉಳ್ಳಾಲ, ಉಡುಪಿ, ಶಿವಮೊಗ್ಗ ನಗರ ಮಾತ್ರ ಖಾಸಗಿಕರಣಕ್ಕೆ ಪ್ರಸ್ತಾವಣೆ ಸಲ್ಲಿಸಿದ್ದಾರೆ. ಸುಳ್ಯ, ನೆಲ್ಯಾಡಿ ಪುತ್ತೂರುಗಳನ್ನು ಅವರು ಬಿಟ್ಟಿದ್ದಾರೆ. ದೊಡ್ಡ ನಗರಗಳಲ್ಲಿ ಬೃಹತ್ ಕೈಗಾರಿಕೆಗಳು, ಅಪಾರ್ಟ್ ಮೆಂಟ್‌ಗಳಿದ್ದು ಅಲ್ಲಿ ದೊಡ್ಡ ಮಟ್ಟದ ಆದಾಯ ಬರುತ್ತದೆ. ಖಾಸಗಿಯವರು ಸ್ವಂತ ಲಾಭಾಕ್ಕಾಗಿ ಮಾತ್ರ ಮಾಡುತ್ತಾರೆಯೇ ವಿನಃ ಸಾರ್ವಜನಿಕ ಹಿತಾಶಕ್ತಿ ನೋಡಲು ಸಾಧ್ಯವಿಲ್ಲ. ಈಗಾಗಲೇ ಖಾಸಗೀಕರಣಗೊಂಡಿರುವ ದೆಹಲಿ, ಒಡಿಸ್ಸಾ, ಮಹಾರಾಷ್ಟ್ರ ಸಹಿತ ಹಲವು ರಾಜ್ಯಗಳಲ್ಲಿ ಅಲ್ಲಿನ ಜನತೆ ಬಹಳಷ್ಟು ಸಂಕಷ್ಟು ಎದುರಿಸುತ್ತಿದ್ದು ಈ ಪರಿಸ್ಥಿತಿ ಕರ್ನಾಟಕದ ಜನತೆಗೆ ಬಾರದಂತೆ ಪ್ರತಿಯೊಬ್ಬರೂ ಆಕ್ಷೇಪಣೆ ಸಲ್ಲಿಸುವಂತೆ ಅವರು ವಿನಂತಿಸಿದರು.
ಖಾಸಗೀಕರಣದ ಪರಿಣಾಮದ ಬಗ್ಗೆ ಜನರಿಗೆ ಅರಿವು ಮೂಡಿಸಬೇಕು-ಕರಿಬಸಪ್ಪ:
659 ಸಂಘದ ಕೇಂದ್ರ ಸಮಿತಿ ಸದಸ್ಯ ಕರಿಬಸಪ್ಪ ಮಾತನಾಡಿ, ಒಂದು ಬಾರಿ ಖಾಸಗೀಕರಣಗೊಂಡರೆ ಬಳಿಕ ಏನೂ ಮಾಡಲು ಸಾಧ್ಯವಿಲ್ಲ. ಉಚಿತ ಯೋಜನೆಗಳು ಸ್ಥಗಿತಗೊಳ್ಳಲಿದೆ.
ಉತ್ತರಪ್ರದೇಶದಲ್ಲಿ ನಿರಂತರ ಹೋರಾಟದ ಪರಿಣಾಮ ಖಾಸಗೀಕರಣಗೊಂಡಿಲ್ಲ. ಒಡಿಸ್ಸಾದಲ್ಲಿ ಸಂಘಟನೆಗಳು ಭಿನ್ನಮತದಿಂದಾಗಿ ಖಾಸಗೀಕರಣಗೊಂಡು ಇಂದು ಸಾರ್ವಜನಿಕರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಾರೆ. ಅಲ್ಲಿ1999ರಲ್ಲಿ ನೆರೆಬಂದಾಗ ಖಾಸಗಿ ಕಂಪನಿಯವರು ಸ್ಪಂಧನೆ ನೀಡದೆ ಅಲ್ಲಿನ ಜನತೆ ಬಹಳಷ್ಟು ಸಂಕಷ್ಟಗಳನ್ನು ಅನುಭವಿಸಿದ್ದರು. ಈಗ ಅಲ್ಲಿ ಕಳೆದ ಎರಡೂವರೆ ವರ್ಷಗಳಿಂದ ಹೋರಾಟ ನಡೆಸುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಸಾರ್ವಜನಿಕರ ಸಂಸ್ಥೆಗಳ ಜನರ ಸೇವೆಗಾಗಿರುವಂತದ್ದು ಹೊರತು ಹಣ ಮಾಡುವ ಉದ್ದೇಶವಲ್ಲ. ಖಾಸಗಿ ಕಂಪನಿಗಳು ತಮ್ಮ ಲಾಭಕ್ಕಾಗಿ ಮಾತ್ರ ಬರುತ್ತಾರೆ. ಜನಸೇವೆ ಸಾಧ್ಯವಿಲ್ಲ. ಇದರ ಬಗ್ಗೆ ಜನರಿಗೆ ಅರಿವು ಮೂಡಿಸಬೇಕು. ಖಾಸಗಿಗೆ ಈಗ ಮಂಗಳೂರು ನಗರ ಮಾತ್ರ ಕೇಳಿದ್ದು ಮುಂದೆ ಎಲ್ಲಾ ಕಡೆ ವ್ಯಾಪಿಸಲಿದೆ. ಪ್ರತಿಯೊಬ್ಬರೂ ಹೋರಾಟಕ್ಕೆ ಸಿದ್ದರಿರಬೇಕು ಎಂದರು.
ಪ್ರತಿಯೊಬ್ಬರ ಅಳಿವು, ಉಳಿವಿನ ಪ್ರಶ್ನೆ-ಷಣ್ಮುಗಪ್ಪ:
659 ನೌಕರರ ಸಂಘದ ಸಂಘಟನಾ ಕಾರ್ಯದರ್ಶಿ ಷಣ್ಮುಗಪ್ಪ ಮಾತನಾಡಿ, ವಿದ್ಯುತ್ ಇಲಾಖೆ ಖಾಸಗೀರಕಣಗೊಂಡರೆ ಸಿಬ್ಬಂದಿಗಳು ಮಾತ್ರವಲ್ಲ ಗ್ರಾಹಕರು, ರೈತರು, ಗುತ್ತಿಗೆದಾರರ ಅಳಿವು ಉಳಿವಿನ ಪ್ರಶ್ನೆಯಿದೆ. ಇದಕ್ಕಾಗಿ ಪುತ್ತೂರು ವಿಭಾಗ ವ್ಯಾಪ್ತಿಯ ರೈತ ಸಂಘಟನೆಗಳ ಮುಖಾಂತವೂ ಆಕ್ಷೇಪಣೆಗಳನ್ನು ಸಲ್ಲಿಸಬೇಕು. ಒಡಿಸಾದಲ್ಲಿ ಖಾಸಗೀಕರಣಗೊಂಡಿದ್ದು ಗ್ರಾಹಕರು, ನೌಕರರು, ಕೃಷಿಕರಿಗೆ ಬಹಳಷ್ಟು ಸಂಕಷ್ಟ ಎದುರಿಸುವಂತಾಗಿದೆ.
ದೆಹಲಿಯಲ್ಲಿ ಖಾಸಗೀಕರಣದ ಪರಿಣಾಮ 700 ರೂಪಾಯಿ ಬರುತ್ತಿದ್ದ ಗ್ರಾಹಕರ ಬಿಲ್ ೨೭೦೦ ರೂಪಾಯಿ ಏರಿಕೆಯಾಗಿದೆ. ಹೀಗಾಗಿ ಗ್ರಾಹಕರಿಗೆ ಖಾಸಗೀಕರಣದ ಪರಿಣಾಮಗಳ ಕುರಿತು ಅರಿವು ಮೂಡಿಸಬೇಕು. ಇಂಧನ ಸಚಿವರು, ಮುಖ್ಯಮಂತ್ರಿಗಳು ಹಾಗೂ ಕರ್ನಾಟಕ ವಿದ್ಯುಚ್ಚಕ್ತಿ ನಿಯಂತ್ರಣ ಆಯೋಗಕ್ಕೆ ಆಕ್ಷೇಪಣೆಗಳನ್ನು ಸಲ್ಲಿಸಬೇಕು. ಒಕ್ಕೂಟ ನೀಡುವ ಕರೆಗಳಿಗೆ ಪ್ರತಿಯೊಬ್ಬರು ಸ್ಪಂಧನೆ ನೀಡಬೇಕು ಎಂದರು.
ಹೋರಾಟಕ್ಕೆ ಗುತ್ತಿಗೆದಾರರ ಸಂಘದ ಬೆಂಬಲ-ಕೃಷ್ಣಪ್ರಶಾಂತ್:
ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೃಷ್ಣಪ್ರಶಾಂತ್ ಮಾತನಾಡಿ, ವಿದ್ಯುತ್ ಇಲಾಖೆ ಖಾಸಗೀರಕಣದ ವಿರುದ್ಧ ಗುತ್ತಿಗೆದಾರರ ರಾಜ್ಯ ಸಂಘದ ಮೂಲಕ ಕಳೆದ ಒಂದು ತಿಂಗಳುಗಳಿಂದ ಬಹಳಷ್ಟು ಹೋರಾಟ ಮಾಡಲಾಗುತ್ತಿದೆ. ಗುತ್ತಿಗೆದಾರರು ಬಹಳಷ್ಟು ವರ್ಷಗಳಿಂದ ಇಲಾಖೆಯೊಂದಿಗೆ ಕೆಲಸ ಮಾಡಿಕೊಂಡು ಬಂದವರು. ಹೀಗಾಗಿ ಇಲಾಖೆ ಬೇರೆಯಲ್ಲ, ನಾವು ಬೇರೆಯಲ್ಲ. ಖಾಸಗೀಕರಣಗೊಂಡರೆ ಸೀಮಿತ ಗುತ್ತಿಗೆದಾರರಿಗೆ ಮಾತ್ರ ಕೆಲಸ ದೊರೆಯಲಿದೆ. ಸಣ್ಣಪುಟ್ಟ ಗುತ್ತಿಗೆದಾರರಿಗೆ ಕೆಲಸ ದೊರೆಯುವುದು ಶೇ.98ರಷ್ಟು ಅಸಾಧ್ಯ. ಹೀಗಾಗಿ ನಿಮ್ಮ ಹೋರಾಟಕ್ಕೆ ಗುತ್ತಿಗೆದಾರರ ಬೆಂಬಲವಿದೆ ಎಂದು ಹೇಳಿದರು.
ವಿದ್ಯುತ್ ಕಾಯಿದೆಯ 2026ರ ತಿದ್ದುಪಡಿಯಿಂದ ಸಂಕಷ್ಟ-ಸುಪ್ರೀತ್ ಕುಮಾರ್
ಸುಳ್ಯದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಸುಪ್ರೀತ್ ಕುಮಾರ್ ಮಾತನಾಡಿ, ಕೇಂದ್ರ ಸರಕಾರವು ೨೦೦೩ರಲ್ಲಿ ಜಾರಿ ಮಾಡಿದ ವಿದ್ಯುತ್ ಕಾಯಿದೆಯಂತೆ ಖಾಸಗಿಕರಣಗೊಂಡ ಬಳಿಕ ಯಾವುದೇ ಸಮಸ್ಯೆಯಾದರೂ ಕಾಯಿದೆಯಂತೆ ಸಾರ್ವಜನಿಕ ಹಿತದೃಷ್ಠಿಯಿಂದ ಸೆಕ್ಷನ್ ೧೦೮ರಲ್ಲಿಅಧಿಕಾರ ಚಲಾಯಿಸಿ ಖಾಸಗಿಯವರ ಲೈಸನ್ಸ್ ರದ್ದು ಮಾಡಲು ರಾಜ್ಯ ಸರಕಾರಕ್ಕೆ ಅಧಿಕಾರವಿತ್ತು. ಆದರೆ 2026ರ ತಿದ್ದುಪಡಿ ಕಾಯಿದೆಯಲ್ಲಿ ಸೆಕ್ಷನ್ 108ನ್ನು ತೆಗೆದುಹಾಕಿದ್ದಾರೆ. ಹೀಗಾಗಿ ಮುಂದೆ ತಿದ್ದುಪಡಿ ಕಾಯಿದೆ ಜಾರಿಯಾದರೆ ರಾಜ್ಯ ಸರಕಾರಕ್ಕೆ ಯಾವುದೇ ಅಧಿಕಾರವಿರುವುದಿಲ್ಲ. ಈ ಕಾಯಿದೆಯು ಲೋಕಸಭೆಯಲ್ಲಿ ಅನುಮೋದನೆ ಪಡೆದು ರಾಜ್ಯ ಸಭೆಯಲ್ಲಿದೆ. ಅಲ್ಲಿಯೂ ಅನುಮೋದನೆ ದೊರೆತರೆ ಮುಂದೆ ಸಂಭವಿಸಬಹುದಾದ ಸಮಸ್ಯೆಗಳ ಬಗ್ಗೆ ನಾವು ಯೋಚಿಸಬೇಕು. ಗ್ರಾಹಕರೂ ಆಕ್ಷೇಪಣೆ ಸಲ್ಲಿಸಬೇಕು. ನಾಗರಿಕರೆಲ್ಲರೂ ಒಟ್ಟಾಗಿ ಹೋರಾಟ ನಡೆಸಬೇಕಾದ ಅನಿವಾರ್ಯತೆಯಿದೆ. ಅದು ಪುತ್ತೂರಿನಿಂದ ಪ್ರಾರಂಭವಾಗಬೇಕು ಎಂದು ಹೇಳಿದರು.
ಇಂಜಿನಿಯರ್ಸ್ ಸಂಘದ ಕೇಂದ್ರ ಸಮಿತಿ ಸಂಘಟನಾ ಕಾರ್ಯದರ್ಶಿ ಪ್ರಶಾಂತ್ ಪೈ, 659 ನೌಕರರ ಸಂಘದ ಅಧ್ಯಕ್ಷ ಶಂಕರ ಪ್ರಕಾಶ್, ಎಸ್‌ಎಲ್‌ಇಎಸ್‌ಟಿ ಅಸೋಸಿಯೇಶನ್‌ನ ಕೇಂದ್ರ ಸಮಿತಿ ಸದಸ್ಯ ಸದಾಶಿವ, 659 ಸಂಘದ ಕೇಂದ್ರ ಸಮಿತಿ ಸದಸ್ಯ ಪುತ್ತು ಜೆ. ಮಾತನಾಡಿ, ವಿದ್ಯುತ್ ಖಾಸಗೀಕರಣದ ವಿರುದ್ಧ ಆಕ್ಷೇಪಣೆಗಳನ್ನು ಸಲ್ಲಿಸುವಂತೆ ಆಗ್ರಹಿಸಿದರು. ನಗರ ಉಪ ವಿಭಾಗ ಸಹಾಯಕ ಲೆಕ್ಕಾಧಿಕಾರಿ ಕೃಷ್ಣಮೂರ್ತಿ ಸ್ವಾಗತಿಸಿ, ವಂದಿಸಿದರು. ಮೆಸ್ಕಾಂ ಪುತ್ತೂರು ವಿಭಾಗದ ಸುಳ್ಯ, ಸುಬ್ರಹ್ಮಣ್ಯ, ಕಡಬ, ಪುತ್ತೂರು ವಿಭಾಗಗಳ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‌ಗಳು, ಗುತ್ತಿಗೆದಾರರು, ವಿವಿಧ ವಿಭಾಗಗಳ ಅಧಿಕಾರಿ ಹಾಗೂ ಸಿಬ್ಬಂದಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಬಿಗ್ ನ್ಯೂಸ್
Nagalakshmi Chowdary-ಬಂಗ್ಲೆಗುಡ್ಡೆ ಏನೂ ಸ್ಮಶಾನ ಅಲ್ಲ : ಅಲ್ಲಿ ಯಾಕೆ ಅಷ್ಟು ಅಸ್ಥಿಪಂಜರಗಳು ಸಿಕ್ಕಿದವು..? ಧರ್ಮಸ್ಥಳ ಎಸ್ಐಟಿಗೆ ಹೆಚ್ಚಿನ ಅಧಿಕಾರ ನೀಡಬೇಕು..! : ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ
ಧರ್ಮಸ್ಥಳದಲ್ಲಿ ವರದಿಯಾಗಿರುವ ಅಸಹಜ ಸಾವುಗಳ ಕುರಿತು ನಡೆಯುತ್ತಿರುವ ತನಿಖೆಯಲ್ಲಿ ಹಲವು ದಾಖಲೆಗಳ ನಡುವೆ ವ್ಯತ್ಯಾಸ ಕಂಡುಬಂದಿರುವುದಾಗಿ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಸಲು ಪ್ರಸ್ತುತ ರಚಿಸಲಾಗಿರುವ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಸಂಪೂರ್ಣ ಅಧಿಕಾರ ನೀಡುವಂತೆ ಸರ್ಕಾರಕ್ಕೆ ಪತ್ರ ಬರೆದಿರುವುದಾಗಿ ಅವರು ಹೇಳಿದ್ದಾರೆ.
ಬೆಂಗಳೂರು: ಧರ್ಮಸ್ಥಳದಲ್ಲಿ ವರದಿಯಾಗಿರುವ ಅಸಹಜ ಸಾವುಗಳ ಕುರಿತು ನಡೆಯುತ್ತಿರುವ ತನಿಖೆಯಲ್ಲಿ ಹಲವು ದಾಖಲೆಗಳ ನಡುವೆ ವ್ಯತ್ಯಾಸ ಕಂಡುಬಂದಿರುವುದಾಗಿ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಸಲು ಪ್ರಸ್ತುತ ರಚಿಸಲಾಗಿರುವ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಸಂಪೂರ್ಣ ಅಧಿಕಾರ ನೀಡುವಂತೆ ಸರ್ಕಾರಕ್ಕೆ ಪತ್ರ ಬರೆದಿರುವುದಾಗಿ ಅವರು ಹೇಳಿದ್ದಾರೆ.
ಸಂವಾದವೊಂದರಲ್ಲಿ ಮಾತನಾಡಿದ ಚೌದರಿ , ಎಸ್‌ಐಟಿ ತನಿಖಾ ವರದಿಯಲ್ಲಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳ ಸಂಖ್ಯೆ ಹಾಗೂ ಗ್ರಾಮ ಪಂಚಾಯತ್‌ನಲ್ಲಿ ದಾಖಲಾಗಿರುವ ಸಾವುಗಳ ವಿವರಗಳಲ್ಲಿ ವ್ಯತ್ಯಾಸವಿದೆ. ಈ ಹಿನ್ನೆಲೆಯಲ್ಲಿ ಮತ್ತಷ್ಟು ಅಳವಾಗಿ ತನಿಖೆ ನಡೆಸಲು ಸರ್ಕಾರ ಅವಕಾಶ ನೀಡಬೇಕು ಎಂದು ಎಸ್‌ಐಟಿ ತಿಳಿಸಿದೆ ಎಂದು ನಾಗಲಕ್ಷ್ಮೀ ಚೌದರಿ ಹೇಳಿದ್ದಾರೆ.
ಬಂಗ್ಲೆ ಗುಡ್ಡೆಯಲ್ಲಿ ಹಲವಾರು ಅಸ್ತಿಪಂಜರಗಳು ಪತ್ತೆಯಾಗಿರುವ ಬಗ್ಗೆಯೂ ಅವರು ಪ್ರಶ್ನೆಗಳನ್ನು ಎತ್ತಿದ್ದಾರೆ. ಬಂಗ್ಲೆ ಗುಡ್ಡೆ ಸ್ಮಶಾನವಲ್ಲದಿದ್ದರೂ ಅಲ್ಲಿ ಇಷ್ಟೊಂದು ಎಲುಬುಗಳು ಮತ್ತು ಅಸ್ತಿಪಂಜರಗಳು ಪತ್ತೆಯಾಗಿರುವುದು ಹೇಗೆ ಎಂಬುದರ ಕುರಿತು ಉನ್ನತ ತನಿಖೆ ಅಗತ್ಯವಿದೆ ಎಂದು ತಿಳಿಸಿದ್ದಾರೆ.
ಪತ್ತೆಯಾದ ಕೆಲವು ಅಸ್ತಿಪಂಜರಗಳ ಪರೀಕ್ಷೆಯಲ್ಲಿ ಅವು ಪುರುಷರದ್ದು ಎಂಬ ಅಂಶ ಬೆಳಕಿಗೆ ಬಂದಿದೆ ಎಂದು ಅವರು ಹೇಳಿದ್ದಾರೆ. ಅಲ್ಲದೆ, ಒಂದು ಹುಡುಗಿಯ ಅಸ್ತಿಪಂಜರವನ್ನು ಆಸಿಡ್‌ನಿಂದ ಸುಟ್ಟಿರುವ ಸ್ಥಿತಿಯಲ್ಲಿ ಹೂತುಹಾಕಲಾಗಿದೆ ಎಂಬ ಮಾಹಿತಿ ನೀಡಲಾಗಿತ್ತು. ಆದರೆ, ಆ ವ್ಯಕ್ತಿ ಆಸಿಡ್‌ನಿಂದ ಮೃತಪಟ್ಟಿಲ್ಲ ಎಂಬುದು ಡಿಎನ್‌ಎ ವರದಿಯಲ್ಲಿ ತಿಳಿದುಬಂದಿದೆ ಎಂದು ನಾಗಲಕ್ಷ್ಮೀ ಚೌದರಿ ಹೇಳಿದ್ದಾರೆ.
ಈ ರೀತಿಯಾಗಿ ವಿವಿಧ ವರದಿಗಳ ನಡುವೆ ವ್ಯತ್ಯಾಸ ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಎಸ್‌ಐಟಿಗೆ ಪೂರಕ ತನಿಖೆ ನಡೆಸಲು ಸಂಪೂರ್ಣ ಅಧಿಕಾರ ನೀಡಬೇಕು ಎಂದು ಸರ್ಕಾರಕ್ಕೆ ಪತ್ರದ ಮೂಲಕ ಶಿಫಾರಸು ಮಾಡಿರುವುದಾಗಿ ಅವರು ತಿಳಿಸಿದ್ದಾರೆ.
ಪ್ರಸ್ತುತ ರಚನೆಯಾಗಿರುವ ಎಸ್‌ಐಟಿ ವ್ಯಾಪ್ತಿಗೆ ಈ ಹೊಸ ಮಾಹಿತಿಗಳು ಸ್ವಯಂಚಾಲಿತವಾಗಿ ಸೇರುತ್ತವೆಯೇ ಎಂಬ ಬಗ್ಗೆ ಕಾನೂನುಬದ್ಧ ಸ್ಪಷ್ಟತೆ ಅಗತ್ಯವಿದೆ. ಆದ್ದರಿಂದ ಸರ್ಕಾರ ಸ್ಪಷ್ಟ ಆದೇಶ ಹೊರಡಿಸಿ, ಈ ಎಲ್ಲ ವಿಷಯಗಳನ್ನು ಈಗಾಗಲೇ ರಚಿಸಿರುವ ಎಸ್‌ಐಟಿಗೆ ವಹಿಸಬೇಕು. ಅಗತ್ಯವಿದ್ದರೆ ಅದರ ‘ಟರ್ಮ್ಸ್ ಆಫ್ ರೆಫರೆನ್ಸ್’ (ತನಿಖೆಯ ವ್ಯಾಪ್ತಿ) ವಿಸ್ತರಿಸಬೇಕು ಎಂದು ಮಹಿಳಾ ಆಯೋಗ ಶಿಫಾರಸು ಮಾಡಿದೆ.
ಸರ್ಕಾರದ ಪ್ರತಿಕ್ರಿಯೆಗಾಗಿ ಇನ್ನೂ 15 ದಿನ ಕಾಯಲಾಗುವುದು. ಬಳಿಕ ಎರಡು ಬಾರಿ ಸರ್ಕಾರಕ್ಕೆ ನೆನಪಿನ ಪತ್ರ ಕಳುಹಿಸುವುದಾಗಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ತಿಳಿಸಿದ್ದಾರೆ.
ಬಿಗ್ ನ್ಯೂಸ್
Arshia Khan-ನವರಾತ್ರಿಗೆ ‘ಅಷ್ಟಭುಜ ಧಾರಿಣಿ ದೇವಿ’ಯಾಗಿ ಮಿಂಚಲಿರುವ ವಿಟ್ಲದ ಅರ್ಷಿಯಾ ಖಾನ್
ನವರಾತ್ರಿ ಸಂದರ್ಭ ನಡೆಯಲಿರುವ ‘ಶ್ರೀದೇವಿ ಮಹಾತ್ಮೆ’ ಯಕ್ಷಗಾನ ಪ್ರದರ್ಶನದಲ್ಲಿ ವಿಟ್ಲದ ಯಕ್ಷಗಾನ ಕಲಾವಿದೆ ಅರ್ಷಿಯಾ ಖಾನ್ ಅವರು ‘ಅಷ್ಟಭುಜ ಧಾರಿಣಿ ದೇವಿ’ಯಾಗಿ ರಂಗಸ್ಥಳವೇರಲು ಸಜ್ಜಾಗಿದ್ದಾರೆ.
ಮಂಗಳೂರು: ನವರಾತ್ರಿ ಸಂದರ್ಭ ನಡೆಯಲಿರುವ ‘ಶ್ರೀದೇವಿ ಮಹಾತ್ಮೆ’ ಯಕ್ಷಗಾನ ಪ್ರದರ್ಶನದಲ್ಲಿ ವಿಟ್ಲದ ಯಕ್ಷಗಾನ ಕಲಾವಿದೆ ಅರ್ಷಿಯಾ ಖಾನ್ ಅವರು ‘ಅಷ್ಟಭುಜ ಧಾರಿಣಿ ದೇವಿ’ಯಾಗಿ ರಂಗಸ್ಥಳವೇರಲು ಸಜ್ಜಾಗಿದ್ದಾರೆ.
‘ಯಕ್ಷಪ್ರಿಯೆ ತನು ವಿಟ್ಲ’ ಎಂದೇ ಪರಿಚಿತರಾಗಿರುವ ಅರ್ಷಿಯಾ ಖಾನ್ ಅವರು ಕದ್ರಿಯ ಕದಳಿ ಕಲಾ ಕೇಂದ್ರದ ವಿದ್ಯಾರ್ಥಿನಿ. ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಕದಳಿ ಕಲಾ ಕೇಂದ್ರ ಆಯೋಜಿಸಿರುವ ‘ಕದಳಿ ದಶಾಹಃ’ ಯಕ್ಷಗಾನ ಹಬ್ಬದ ಅಂಗವಾಗಿ ಅ.20ರಂದು ಸಂಪೂರ್ಣ ‘ಶ್ರೀದೇವಿ ಮಹಾತ್ಮೆ’ ಯಕ್ಷಗಾನ ಪ್ರದರ್ಶನಗೊಳ್ಳಲಿದೆ. ಈ ಪ್ರದರ್ಶನದಲ್ಲಿ ಅರ್ಷಿಯಾ ಅವರು ದೇವಿ ಪಾತ್ರ ನಿರ್ವಹಿಸಲಿದ್ದಾರೆ.
ಕಳೆದ 12 ವರ್ಷಗಳಿಂದ ಯಕ್ಷಗಾನದಲ್ಲಿ ವಿವಿಧ ಪಾತ್ರಗಳನ್ನು ನಿರ್ವಹಿಸುತ್ತಿರುವ ಅರ್ಷಿಯಾ, ಆದಿಮಾಯೆ ಸೇರಿದಂತೆ ಹಲವು ಅಸುರ ಪಾತ್ರಗಳಲ್ಲೂ ಕಾಣಿಸಿಕೊಂಡಿದ್ದಾರೆ.
“ಉಳ್ಳಾಲ್ತಿ ಅಮ್ಮನ (ಕಟೀಲು ದುರ್ಗಾಪರಮೇಶ್ವರಿ) ಮೇಲಿನ ಭಕ್ತಿಯೇ ನನ್ನಲ್ಲಿ ಯಕ್ಷಗಾನದ ಆಸಕ್ತಿ ಮೂಡಲು ಕಾರಣ. ಈ ಬಾರಿ ನವರಾತ್ರಿಯ ಪರ್ವಕಾಲದಲ್ಲಿ ದೇವಿ ಪಾತ್ರ ನಿರ್ವಹಿಸುವ ಅವಕಾಶ ದೊರೆತಿದೆ. ಅಷ್ಟಭುಜ ಧರಿಸಿ ರಂಗಸ್ಥಳ ಏರುವ ಆ ಪವಿತ್ರ ಕ್ಷಣವನ್ನು ಕಲ್ಪಿಸಿಕೊಂಡಾಗಲೇ ರೋಮಾಂಚನವಾಗುತ್ತದೆ” ಎಂದು ಅರ್ಷಿಯಾ ಹೇಳಿದ್ದಾರೆ.
ಯಕ್ಷಗಾನಕ್ಕೆ ತನ್ನದೇ ಆದ ಪಾವಿತ್ರ್ಯವಿದೆ ಎಂದು ಹೇಳಿದ ಅವರು, ದೇವಿ ಪಾತ್ರ ನಿರ್ವಹಿಸುವ ಸಂದರ್ಭದಲ್ಲಿ ಪರಿಶುದ್ಧತೆಯನ್ನು ಕಾಪಾಡಿಕೊಳ್ಳುವ ಉದ್ದೇಶದಿಂದ ಕಳೆದ ಆರು ತಿಂಗಳಿಂದ ಮಾಂಸಾಹಾರ ತ್ಯಜಿಸಿ ವ್ರತ ಆಚರಿಸುತ್ತಿರುವುದಾಗಿ ತಿಳಿಸಿದ್ದಾರೆ.
ಪ್ರತಿದಿನ ದೈವಸ್ಥಾನ ಅಥವಾ ದೇವಸ್ಥಾನಕ್ಕೆ ಭೇಟಿ ನೀಡಿ ಧ್ಯಾನ ಮಾಡುತ್ತಿದ್ದೇನೆ. ನವರಾತ್ರಿ ಆರಂಭವಾದ ಬಳಿಕ ಇನ್ನಷ್ಟು ಕಟ್ಟುನಿಟ್ಟಿನ ವ್ರತ ಆಚರಿಸಲು ಉದ್ದೇಶಿಸಿದ್ದೇನೆ ಎಂದು ಅವರು ಹೇಳಿದ್ದಾರೆ.
ಯಕ್ಷಗಾನ ಪ್ರೇಮಕ್ಕೆ ಕುಟುಂಬದ ಬೆಂಬಲ
“ಯಕ್ಷಗಾನವು ಪೌರಾಣಿಕ ಕಥಾನಕಗಳನ್ನು ಆಧರಿಸಿದೆ. ನಮ್ಮ ಧರ್ಮ ಬೇರೆಯಾಗಿರುವುದರಿಂದ ಯಕ್ಷಗಾನದ ಕಥಾನಕಗಳಲ್ಲಿನ ಪ್ರತಿಯೊಂದು ಪಾತ್ರವನ್ನೂ ಓದಿ ತಿಳಿದುಕೊಳ್ಳುವುದು ಅಗತ್ಯ. ಇದು ನನಗಿರುವ ದೊಡ್ಡ ಸವಾಲು. ಆದರೆ ಯಕ್ಷಗುರು ರಮೇಶ್ ಭಟ್ ಅವರ ಮಾರ್ಗದರ್ಶನದಲ್ಲಿ ಎಲ್ಲವನ್ನೂ ಕಲಿಯಲು ಪ್ರಯತ್ನಿಸುತ್ತಿದ್ದೇನೆ” ಎಂದು ಅರ್ಷಿಯಾ ತಿಳಿಸಿದ್ದಾರೆ.
ತಮ್ಮ ಯಕ್ಷಗಾನ ಆಸಕ್ತಿಗೆ ಕುಟುಂಬದವರ ಸಂಪೂರ್ಣ ಸಹಕಾರವಿದೆ. ಸಾರ್ವಜನಿಕರಿಂದಲೂ ಸಾಕಷ್ಟು ಬೆಂಬಲ ದೊರೆತಿದೆ. ಕೆಲವರು ಟೀಕಿಸಿದರೂ ಅದನ್ನೂ ಮುಕ್ತ ಮನಸ್ಸಿನಿಂದ ಸ್ವೀಕರಿಸಿದ್ದೇನೆ ಎಂದು ಅವರು ಹೇಳಿದ್ದಾರೆ.
ಪದವೀಧರೆಯಾಗಿರುವ ಅರ್ಷಿಯಾ ಖಾನ್ ಅವರು ಪ್ರಸ್ತುತ ಮಾಧ್ಯಮ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿದ್ದಾರೆ.
ರಾಜ್ಯ
Temperature-ಹಿಂಗಾರು ಮಳೆ ಇಳಿಮುಖ, ಬಿಸಿಲು ಏರುಮುಖ; ಕರ್ನಾಟಕಕ್ಕೆ ಹವಾಮಾನ ಎಚ್ಚರಿಕೆ..!
ರಾಜ್ಯದಲ್ಲಿ ಮುಂಗಾರು ಹಂಗಾಮು ಅಂತ್ಯಗೊಂಡು ಹಿಂಗಾರು ಆರಂಭವಾಗಿರುವ ಬೆನ್ನಲ್ಲೇ ಮಳೆ ಕೊರತೆಯ ಆತಂಕ ಎದುರಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ಬಿಡುಗಡೆ ಮಾಡಿರುವ ಋತುಮಾನದ ಮುನ್ಸೂಚನೆ ಪ್ರಕಾರ, ಕರ್ನಾಟಕದ ಬಹುತೇಕ ಭಾಗಗಳಲ್ಲಿ ಈ ಬಾರಿ ಹಿಂಗಾರು ಮಳೆ ವಾಡಿಕೆಗಿಂತ ಕಡಿಮೆಯಾಗುವ ಸಾಧ್ಯತೆಯಿದೆ.
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಹಂಗಾಮು ಅಂತ್ಯಗೊಂಡು ಹಿಂಗಾರು ಆರಂಭವಾಗಿರುವ ಬೆನ್ನಲ್ಲೇ ಮಳೆ ಕೊರತೆಯ ಆತಂಕ ಎದುರಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ಬಿಡುಗಡೆ ಮಾಡಿರುವ ಋತುಮಾನದ ಮುನ್ಸೂಚನೆ ಪ್ರಕಾರ, ಕರ್ನಾಟಕದ ಬಹುತೇಕ ಭಾಗಗಳಲ್ಲಿ ಈ ಬಾರಿ ಹಿಂಗಾರು ಮಳೆ ವಾಡಿಕೆಗಿಂತ ಕಡಿಮೆಯಾಗುವ ಸಾಧ್ಯತೆಯಿದೆ.
ಅಕ್ಟೋಬರ್‌ನಿಂದ ಡಿಸೆಂಬರ್‌ವರೆಗಿನ ಹಿಂಗಾರು ಅವಧಿಯಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಈ ಅವಧಿಯ ವಾಡಿಕೆ ಸರಾಸರಿ ಮಳೆ 182.2 ಮಿ.ಮೀ. ಆಗಿದ್ದು, ದಕ್ಷಿಣ ಒಳನಾಡಿನಲ್ಲಿ 201.9 ಮಿ.ಮೀ. ವಾಡಿಕೆ ಮಳೆಯಿದೆ. ಆದರೆ ಈ ಬಾರಿ ಈ ಪ್ರಮಾಣಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಳೆ ಕೊರತೆಯ ಮುನ್ಸೂಚನೆಯು ಕೃಷಿ ಹಾಗೂ ಜಲಾಶಯಗಳ ನೀರಿನ ನಿರ್ವಹಣೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಹೀಗಾಗಿ ನೀರಿನ ಮಿತವ್ಯಯ ಹಾಗೂ ಪರ್ಯಾಯ ಬೆಳೆ ಯೋಜನೆಗಳತ್ತ ಗಮನಹರಿಸುವ ಅಗತ್ಯವಿದೆ.
ಮಳೆ ಕೊರತೆಗೆ ಕಾರಣವೇನು?
ಎಲ್ ನಿನೋ ಪ್ರಭಾವ: ಸಮಭಾಜಕ ಪೆಸಿಫಿಕ್ ಮಹಾಸಾಗರದಲ್ಲಿ ಎಲ್ ನಿನೋ ಪರಿಸ್ಥಿತಿ ಮುಂದುವರಿದಿದ್ದು, ಸಮುದ್ರದ ಮೇಲ್ಮೈ ತಾಪಮಾನ ವಾಡಿಕೆಗಿಂತ ಹೆಚ್ಚಾಗಿದೆ. ಈ ಪರಿಸ್ಥಿತಿ ವರ್ಷಾಂತ್ಯದವರೆಗೂ ಮುಂದುವರಿಯುವ ಸಾಧ್ಯತೆಯಿದ್ದು, ಹಿಂಗಾರು ಮಳೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.
ತಟಸ್ಥ ಐಒಡಿ: ಹಿಂದೂ ಮಹಾಸಾಗರದಲ್ಲಿನ ಇಂಡಿಯನ್ ಓಷನ್ ಡೈಪೋಲ್ (IOD) ಸದ್ಯ ತಟಸ್ಥ ಸ್ಥಿತಿಯಲ್ಲಿದ್ದು, ಹಿಂಗಾರು ಅವಧಿಯಲ್ಲೂ ಇದೇ ಸ್ಥಿತಿ ಮುಂದುವರಿಯುವ ಸಾಧ್ಯತೆಯಿದೆ.
ದಕ್ಷಿಣ ಭಾರತದಲ್ಲಿ ಹೇಗಿರಲಿದೆ ಮಳೆ?
ತಮಿಳುನಾಡು, ಪುದುಚೇರಿ-ಕಾರೈಕಲ್, ಕರಾವಳಿ ಆಂಧ್ರಪ್ರದೇಶ-ಯಾನಾಂ, ರಾಯಲಸೀಮೆ, ಕೇರಳ-ಮಾಹೆ ಸೇರಿದಂತೆ ದಕ್ಷಿಣ ಭಾರತದ ಕೆಲವು ಹವಾಮಾನ ಉಪವಿಭಾಗಗಳಲ್ಲಿ ಹಿಂಗಾರು ಮಳೆ ಸಾಮಾನ್ಯ ಅಥವಾ ವಾಡಿಕೆಯಷ್ಟಿರುವ ಸಾಧ್ಯತೆಯಿದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲೂ ಮಳೆ ವಾಡಿಕೆಯಷ್ಟಿರುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ತಿಳಿಸಿದೆ.
ದೇಶದ ಮಟ್ಟದಲ್ಲಿ ಅಕ್ಟೋಬರ್‌ನಲ್ಲಿ ಬಹುತೇಕ ಭಾಗಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ. ಆದರೆ ವಾಯವ್ಯ ಭಾರತದ ಕೆಲವು ಭಾಗಗಳು, ದಕ್ಷಿಣ ಪರ್ಯಾಯ ದ್ವೀಪ ಹಾಗೂ ಪೂರ್ವ ಭಾರತದ ಕೆಲವೆಡೆ ವಾಡಿಕೆ ಅಥವಾ ವಾಡಿಕೆಗಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ.
ಮಳೆಯಷ್ಟೇ ಅಲ್ಲ, ತಾಪಮಾನವೂ ಏರಿಕೆ
ಹಿಂಗಾರು ಮಳೆಯ ಕೊರತೆಯೊಂದಿಗೆ ದೇಶದ ಬಹುತೇಕ ಭಾಗಗಳಲ್ಲಿ ತಾಪಮಾನವೂ ವಾಡಿಕೆಗಿಂತ ಹೆಚ್ಚಾಗುವ ಸಾಧ್ಯತೆ ಇದೆ.
ಈಶಾನ್ಯ ಮತ್ತು ವಾಯವ್ಯ ಭಾರತದ ಕೆಲವು ಭಾಗಗಳನ್ನು ಹೊರತುಪಡಿಸಿ, ದೇಶದ ಬಹುತೇಕ ಕಡೆ ಹಗಲಿನ ಗರಿಷ್ಠ ತಾಪಮಾನ ವಾಡಿಕೆಗಿಂತ ಹೆಚ್ಚಾಗುವ ಸಾಧ್ಯತೆಯಿದೆ. ಇದೇ ರೀತಿ ಈಶಾನ್ಯ ಭಾರತ ಹೊರತುಪಡಿಸಿ ಬಹುತೇಕ ಪ್ರದೇಶಗಳಲ್ಲಿ ರಾತ್ರಿಯ ಕನಿಷ್ಠ ತಾಪಮಾನವೂ ವಾಡಿಕೆಗಿಂತ ಹೆಚ್ಚಾಗುವ ಸಾಧ್ಯತೆಯಿದ್ದು, ಸೆಕೆ ಮುಂದುವರಿಯುವ ಮುನ್ಸೂಚನೆ ಇದೆ.
-
ಪುತ್ತೂರು19 hours ago
ಮಾಣಿ : ಲೈನ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶ: ಪವರ್ಮ್ಯಾನ್ ಮೃತ್ಯು
-
ಬಿಗ್ ನ್ಯೂಸ್23 hours agoArshia Khan-ನವರಾತ್ರಿಗೆ ‘ಅಷ್ಟಭುಜ ಧಾರಿಣಿ ದೇವಿ’ಯಾಗಿ ಮಿಂಚಲಿರುವ ವಿಟ್ಲದ ಅರ್ಷಿಯಾ ಖಾನ್
-
ಮಂಗಳೂರು22 hours agoCM-ಒಂದು ಅಭಿನಂದನೆಯೂ ಇಲ್ಲ ಎಂದು ಕ್ರೀಡಾಪಟುವಿನಿಂದ ಬೇಸರ ವ್ಯಕ್ತವಾದ ಕೂಡಲೇ ಪೂವಮ್ಮಗೆ ಕರೆ ಮಾಡಿದ ಸಿಎಂ..! ಏನೂ ಹೇಳಿದ್ರು ಗೊತ್ತೇ..?
-
ಬಿಗ್ ನ್ಯೂಸ್21 hours agoNagalakshmi Chowdary-ಬಂಗ್ಲೆಗುಡ್ಡೆ ಏನೂ ಸ್ಮಶಾನ ಅಲ್ಲ : ಅಲ್ಲಿ ಯಾಕೆ ಅಷ್ಟು ಅಸ್ಥಿಪಂಜರಗಳು ಸಿಕ್ಕಿದವು..? ಧರ್ಮಸ್ಥಳ ಎಸ್ಐಟಿಗೆ ಹೆಚ್ಚಿನ ಅಧಿಕಾರ ನೀಡಬೇಕು..! : ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ
-
ಶಿಕ್ಷಣ22 hours agoSpecial classes: ಮಳೆ ರಜೆ ಹೊಂದಾಣಿಕೆ: ಅ.3ರಿಂದ ಅ.7ರವರೆಗೆ ದಸರಾ ರಜೆಯಲ್ಲೂ ವಿಶೇಷ ತರಗತಿ
-
ಅಪರಾಧ21 hours agoMangalore-ಮಂಗಳೂರು: ಸರಣಿ ಮನೆಕಳ್ಳತನ: ದೆಹಲಿ ಮೂಲದ ಇಬ್ಬರು ಕುಖ್ಯಾತ ಕಳ್ಳರ ಬಂಧನ; ₹18 ಲಕ್ಷ ಮೌಲ್ಯದ ಸೊತ್ತು ವಶ
-
ಶಿಕ್ಷಣ22 hours agoNarendra-ನರೇಂದ್ರ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ
-
ಶಿಕ್ಷಣ22 hours agoVivekananda-ವಿವೇಕಾನಂದ ಕಾಲೇಜಿನಲ್ಲಿ ತರಬೇತಿ ಕಾರ್ಯಾಗಾರ; ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವಸಿದ್ಧತೆ ಅಗತ್ಯ : ಪ್ರತಿಮಾ


















