Connect with us

ರಾಜಕೀಯ

Ashok Rai-ಮೂರು ರಸ್ತೆಗಳ ಅಭಿವೃದ್ದಿಗೆ 6 ಕೋಟಿ ಅನುದಾನ ಬಿಡುಗಡೆ; ಉಪ್ಪಿನಂಗಡಿ- ಕಡಬ ರಸ್ತೆಗೂ 3 ಕೋಟಿ ಮಂಜೂರು: ಶಾಸಕ ಅಶೋಕ್ ರೈ

Published

on



Ad Widget

Ad Widget

Ad Widget

Ad Widget

ಪುತ್ತೂರು ವಿಧಾನಸಭಾ ಕ್ಷೇತ್ರದ ಮೂರು ಪ್ರಮುಖ ರಸ್ತೆಗಳ ಅಭಿವೃದ್ದಿಗೆ ಒಟ್ಟು 6 ಕೋಟಿ ಅನುದಾನ ಮಂಜೂರಾಗಿದೆ‌.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಮೂರು ಪ್ರಮುಖ ರಸ್ತೆಗಳ ಅಭಿವೃದ್ದಿಗೆ ಒಟ್ಟು 6 ಕೋಟಿ ಅನುದಾನ ಮಂಜೂರಾಗಿದೆ‌.

Ad Widget

Ad Widget

Ad Widget alt="Ad Widget"/>

Ad Widget

ಪುತ್ತೂರು ಉಪ್ಪಿನಂಗಡಿ ರಸ್ತೆಯ ಕೇಪುಳಿನಿಂದ ಪಡೀಲ್ ತನಕ ರಸ್ತೆ ಡಾಮರೀಕರಣಕ್ಕೆ 1 ಕೋಟಿ ಅನುದಾನ, ಪಾಣಾಜೆಗೆ ಸಂಪರ್ಕ ಕಲ್ಪಿಸುವ ಚೆಲ್ಯಡ್ಕದಿಂದ‌ಬೆಟ್ಟಂಪಾಡಿ ತನಕ ರಸ್ತೆ ಮರುಡಾಮರೀಕರಣಕ್ಕೆ 3 ಕೋಟಿ ಹಾಗೂ ಉಪ್ಪಿನಂಗಡಿ ಕಡಬ ರಸ್ತೆಯ ಸುಬ್ರಹ್ಮಣ್ಯ ಕ್ರಾಸ್ ನವನಗರದಿಂದ ಕೊಯಿಲದ ತನಕ ರಸ್ತೆ ಅಭಿವೃದ್ದಿಗೆ 2 ಕೋಟಿ ಅನುದಾನ ಮಂಜೂರಾಗಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.

Ad Widget

Ad Widget <> Ad Widget

ಇದರಲ್ಲಿ ಪ್ರಮುಖವಾಗಿ ಉಪ್ಪಿನಂಗಡಿಯಿಂದ ಕಡಬಕ್ಕೆ ತೆರಳುವ ರಸ್ತೆ ಅಭಿವೃದ್ದಿ ಮಾಡಬೇಕೆಂಬುದು ಹಲವು ವರ್ಷಗಳ ಬೇಡಿಕೆಯಾಗಿದೆ. ಚೆಲ್ಯಡ್ಕದಿಂದ ಬೆಟ್ಟಂಪಾಡಿ ತನಕ ರಸ್ತೆ ಗೆ ಮರು ಡಾಮರೀಕರಣ ಮಾಡುವ ಉದ್ದೇಶದಿಂದ 3 ಕೋಟಿ ಅನುದಾನ ಬಿಡುಗಡೆಯಾಗಿದೆ ಈ‌ರಸ್ತೆಯು ಕೆಟ್ಟು ಹೋಗಿತ್ತು.



Ad Widget

ಮೂರು ರಸ್ತೆಗಳ ಅಭಿವೃದ್ದಿಗೆ 6 ಕೋಟಿ ಅನುದಾನ ಮಂಜೂರಾಗಿದೆ. ಈ ಮೂರು ರಸ್ತೆಗಳು ಅಗತ್ಯವಾಗಿ ನಡೆಯಬೇಕಾದ ಕಾಮಗಾರಿಯಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಅನುದಾನಗಳು ಬರಲಿದೆ

Ad Widget

Ad Widget

-ಅಶೋಕ್ ರೈ ಶಾಸಕರು, ಪುತ್ತೂರು

Ad Widget
Click to comment

Leave a Reply

ಮಂಗಳೂರು

D.K. Shivakumar-ಅ.15ರಂದು ಮಂಗಳೂರು, ಉಡುಪಿ ಜಿಲ್ಲೆಗೆ ಡಿ.ಕೆ. ಶಿವಕುಮಾರ್ ಭೇಟಿ

Published

on



Ad Widget

Ad Widget

Ad Widget

Ad Widget

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಕ್ಟೋಬರ್ 15ರ ಗುರುವಾರ ಮಂಗಳೂರು ಹಾಗೂ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಗುರುವಾರ ಮಧ್ಯಾಹ್ನ 4.10ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು, ಸಂಜೆ 4.40ಕ್ಕೆ ಕಾಪು ಉಚ್ಚಿಲದಲ್ಲಿ ನಡೆಯುವ ದಸರಾ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ, ಮಹಿಳಾ ದಸರಾವನ್ನು ಉದ್ಘಾಟಿಸಲಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಕ್ಟೋಬರ್ 15ರ ಗುರುವಾರ ಮಂಗಳೂರು ಹಾಗೂ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಗುರುವಾರ ಮಧ್ಯಾಹ್ನ 4.10ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು, ಸಂಜೆ 4.40ಕ್ಕೆ ಕಾಪು ಉಚ್ಚಿಲದಲ್ಲಿ ನಡೆಯುವ ದಸರಾ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ, ಮಹಿಳಾ ದಸರಾವನ್ನು ಉದ್ಘಾಟಿಸಲಿದ್ದಾರೆ.

Ad Widget

Ad Widget <> Ad Widget

ಬಳಿಕ ಸಂಜೆ 6.30ಕ್ಕೆ ಮಂಗಳೂರಿನಲ್ಲಿ ನಡೆಯುವ ಮಂಗಳೂರು ದಸರಾ ನವರಾತ್ರಿ ಮಹೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ರಾತ್ರಿ 8 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಲಿರುವ ಅವರು, ಅಲ್ಲಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ತಿಳಿದುಬಂದಿದೆ.



Ad Widget
Ad Widget
Continue Reading

ರಾಜಕೀಯ

Siddaramaiah-ಸ್ಟಿಂಗ್ ವಿಡಿಯೋ ಪ್ರಸಾರಕ್ಕೆ ಬ್ರೇಕ್ ಹಾಕಲು ಸಿದ್ದರಾಮಯ್ಯ ಕೋರ್ಟ್ ಮೊರೆ

Published

on



Ad Widget

Ad Widget

Ad Widget

Ad Widget

ರಾಜ್ಯ ರಾಜಕೀಯದಲ್ಲಿ ಸ್ಟಿಂಗ್ ಆಪರೇಷನ್ ವಿಚಾರ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ, ಸ್ಟಿಂಗ್ ಆಪರೇಷನ್‌ಗೆ ಸಂಬಂಧಿಸಿದ ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ 18ನೇ ಸಿಸಿಎಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆ ನಾಳೆ ನಡೆಯಲಿದ್ದು, ನ್ಯಾಯಾಲಯದ ನಿರ್ಧಾರದ ಬಗ್ಗೆ ಕುತೂಹಲ ಮೂಡಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸ್ಟಿಂಗ್ ಆಪರೇಷನ್ ವಿಚಾರ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ, ಸ್ಟಿಂಗ್ ಆಪರೇಷನ್‌ಗೆ ಸಂಬಂಧಿಸಿದ ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ 18ನೇ ಸಿಸಿಎಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆ ನಾಳೆ ನಡೆಯಲಿದ್ದು, ನ್ಯಾಯಾಲಯದ ನಿರ್ಧಾರದ ಬಗ್ಗೆ ಕುತೂಹಲ ಮೂಡಿದೆ.

Ad Widget

Ad Widget

Ad Widget alt="Ad Widget"/>

Ad Widget

ಸ್ಟಿಂಗ್ ಆಪರೇಷನ್ ವಿಡಿಯೋ ಪ್ರಸಾರಕ್ಕೆ ತಡೆಯಾಜ್ಞೆ ನೀಡುವಂತೆ ಕೋರಿರುವ ಅರ್ಜಿಯಲ್ಲಿ ಖಾಸಗಿ ಸುದ್ದಿ ವಾಹಿನಿಗಳು ಹಾಗೂ ಪತ್ರಿಕೆಗಳು ಸೇರಿದಂತೆ ಒಟ್ಟು 42 ಮಾಧ್ಯಮ ಸಂಸ್ಥೆಗಳನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ನಡೆದಿದೆ ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಸಿದ್ದರಾಮಯ್ಯ, ಸ್ಟಿಂಗ್ ಆಪರೇಷನ್ ನಡೆಯುತ್ತಿರುವುದು ನಿಜ. ಆದರೆ ಇದನ್ನು ಮಾಡಿಸುತ್ತಿರುವವರು ಯಾರು ಎಂಬುದು ಬಹಿರಂಗವಾಗಬೇಕು ಎಂದು ಹೇಳಿದ್ದರು.



Ad Widget

ಇದೀಗ ಸ್ಟಿಂಗ್ ಆಪರೇಷನ್‌ಗೆ ಸಂಬಂಧಿಸಿದ ವಿಡಿಯೋ ಪ್ರಸಾರಕ್ಕೆ ತಡೆಯಾಜ್ಞೆ ಕೋರಿ ಸಿದ್ದರಾಮಯ್ಯ ನ್ಯಾಯಾಲಯದ ಮೊರೆ ಹೋಗಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

Ad Widget

Ad Widget

‘ಸುಳ್ಳು ಪ್ರಚಾರ ತಡೆಯಲು ತಡೆಯಾಜ್ಞೆ ಕೋರುತ್ತಿದ್ದೇವೆ’: ಸಿದ್ದರಾಮಯ್ಯ
ಸಾಮಾಜಿಕ ಜಾಲತಾಣಗಳಲ್ಲಿ ಸ್ಟಿಂಗ್ ಆಪರೇಷನ್ ಕುರಿತು ಸುಳ್ಳು ಪ್ರಚಾರ ಮಾಡಲಾಗುತ್ತಿದೆ. ಇದನ್ನು ತಡೆಯುವ ಉದ್ದೇಶದಿಂದ ನ್ಯಾಯಾಲಯದಿಂದ ತಡೆಯಾಜ್ಞೆ ಪಡೆಯಲು ಮುಂದಾಗಿದ್ದೇವೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಸೋಮವಾರ ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ನವದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಯಲ್ಲಿ ತಾವು ಭಾಗವಹಿಸಬೇಕಿತ್ತು, ಆದರೆ ಹೋಗಲು ಸಾಧ್ಯವಾಗಲಿಲ್ಲ ಎಂದು ಹೇಳಿದರು.

ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ವಿಚಾರಣೆ ಹಾಗೂ ಮುಂದಿನ ಆದೇಶದತ್ತ ಇದೀಗ ಎಲ್ಲರ ಗಮನ ನೆಟ್ಟಿದೆ.

Ad Widget
Continue Reading

ಮಂಗಳೂರು

Raghupti Bhat-2028ರ ಚುನಾವಣೆಯಲ್ಲಿ ಸ್ಪರ್ಧೆ ಖಚಿತ; ಕಾಂಗ್ರೆಸ್ ಸೇರ್ಪಡೆ ಬಗ್ಗೆ ಏನು ಹೇಳಿದ್ರು ರಘುಪತಿ ಭಟ್

Published

on



Ad Widget

Ad Widget

Ad Widget

Ad Widget

ಕಾಂಗ್ರೆಸ್ ಸೇರ್ಪಡೆಯ ಕುರಿತು ಇನ್ನೂ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಆದರೆ 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಉಡುಪಿ ಮಾಜಿ ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಕಾಂಗ್ರೆಸ್ ಸೇರ್ಪಡೆಯ ಕುರಿತು ಇನ್ನೂ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಆದರೆ 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಉಡುಪಿ ಮಾಜಿ ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಮಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನಿಂದ ಈಗಾಗಲೇ ಆಹ್ವಾನ ಬಂದಿರುವುದು ನಿಜ. ಈ ಬಗ್ಗೆ ಯೋಚನೆ ಮಾಡುತ್ತಿದ್ದೇನೆ. ನನ್ನ ಬೆಂಬಲಿಗರೊಂದಿಗೆ ಚರ್ಚಿಸಿ, ಅವರ ಅಭಿಪ್ರಾಯ ಪಡೆದುಕೊಂಡ ಬಳಿಕವೇ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಹೇಳಿದರು.

Ad Widget

Ad Widget <> Ad Widget

“ಬಿಜೆಪಿಯವರು ಕರೆಯುತ್ತಾರೆ ಎಂದು ಕಾಯುತ್ತಿದ್ದೇನೆ. ಬಿಜೆಪಿ ಸೇರುವ ಬಗ್ಗೆಯೂ ಯೋಚಿಸಬಹುದು. ಆದರೆ ಕಾಂಗ್ರೆಸ್ ಸೇರುವ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ” ಎಂದು ಸ್ಪಷ್ಟಪಡಿಸಿದರು.
ಬಾಲ್ಯದಿಂದಲೂ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತನಾಗಿ ಬೆಳೆದು, ಬಿಜೆಪಿಯಲ್ಲಿ ಯುವ ಮೋರ್ಚಾ ಜಿಲ್ಲಾ ಘಟಕ ಹಾಗೂ ಜಿಲ್ಲಾಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ಮೂರು ಬಾರಿ ಶಾಸಕನಾಗಿದ್ದೇನೆ. ಹೀಗಿರುವಾಗ ಏಕಾಏಕಿ ಪಕ್ಷ ಬದಲಿಸುವ ನಿರ್ಧಾರ ಕೈಗೊಳ್ಳಲು ನನ್ನ ಮನಸ್ಸು ಒಪ್ಪುತ್ತಿಲ್ಲ. ನನ್ನ ಬೆಂಬಲಿಗರ ವಿಶ್ವಾಸ ಪಡೆದುಕೊಂಡೇ ಮುಂದಿನ ಹೆಜ್ಜೆ ಇಡುತ್ತೇನೆ ಎಂದು ತಿಳಿಸಿದರು.



Ad Widget

ಕಳೆದ ಚುನಾವಣೆಯ ಸಂದರ್ಭ ತಮಗೆ ಅನ್ಯಾಯವಾಗಿದೆ ಎಂಬ ಅಸಮಾಧಾನ ವ್ಯಕ್ತಪಡಿಸಿದ ರಘುಪತಿ ಭಟ್, ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ತಪ್ಪಿದ್ದಕ್ಕಿಂತಲೂ ವಿಧಾನ ಪರಿಷತ್ ಸ್ಥಾನ ನೀಡುವುದಾಗಿ ಹೇಳಿ, ಕೊನೆಗೆ ಅವಕಾಶ ನೀಡದಿರುವುದು ನೋವು ತಂದಿದೆ ಎಂದರು.

Ad Widget

Ad Widget

ತಮ್ಮದೇ ಪಕ್ಷದ ಕೆಲವು ಶಾಸಕರಿಂದ ವೈಯಕ್ತಿಕ ದಬ್ಬಾಳಿಕೆ ಎದುರಿಸಬೇಕಾಯಿತು ಎಂದು ಆರೋಪಿಸಿದ ಅವರು, ಈ ವಿಚಾರದಲ್ಲಿ ಸಂಘದ ಹಿರಿಯರು ಹಾಗೂ ಬಿಜೆಪಿಯ ನಾಯಕರು ತಮ್ಮೊಂದಿಗೆ ಮಾತನಾಡದಿರುವುದು ಬೇಸರ ತಂದಿದೆ ಎಂದು ಹೇಳಿದರು.

“ನನ್ನ ಹತ್ತಿರದ ಕ್ಷೇತ್ರಗಳ ಮಾಜಿ ಶಾಸಕರನ್ನು ಗೌರವದಿಂದ ಕಾಣಲಾಗುತ್ತದೆ. ನನಗೆ ವಿಶೇಷ ಗೌರವ ಬೇಡ. ಕನಿಷ್ಠ ಬಹುವಚನದಲ್ಲಿ ಮಾತನಾಡಿದ್ದರೂ ಸಾಕಿತ್ತು. ಈ ಎಲ್ಲ ಘಟನೆಗಳು ಮಾನಸಿಕವಾಗಿ ನೋವುಂಟುಮಾಡಿವೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

2028ರ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಮಾತನಾಡಿದ ಅವರು, ಕ್ಷೇತ್ರದ ಜನರು ನನ್ನನ್ನು ಸೋಲಿಸಿಲ್ಲ. ಪಕ್ಷವೇ ನನಗೆ ಟಿಕೆಟ್ ತಪ್ಪಿಸಿದೆ ಎಂಬ ಭಾವನೆ ಜನರಲ್ಲಿದೆ. ಜನರು ಸ್ಪರ್ಧಿಸುವಂತೆ ಒತ್ತಾಯಿಸುತ್ತಿದ್ದಾರೆ. ಜನರು ಬೇಡ, ನೀವು ಚುನಾವಣೆಗೆ ನಿಲ್ಲಬೇಡಿ ಎಂದು ಹೇಳಿದರೆ ಮನೆಯಲ್ಲೇ ಕುಳಿತುಕೊಳ್ಳುತ್ತೇನೆ. ಜನರ ಕೆಲಸ ಮಾಡಲು ಜನಪ್ರತಿನಿಧಿಯಾಗಲೇಬೇಕೆಂದಿಲ್ಲ. ಚುನಾವಣಾ ರಾಜಕೀಯದಿಂದ ದೂರವಿದ್ದರೂ ಜನರಿಗೆ ಸಹಾಯ ಮಾಡಬಹುದು ಎಂದು ರಘುಪತಿ ಭಟ್ ಹೇಳಿದರು

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading