ಮೈಸೂರು
Mysuru-ಮೈಸೂರು ಜಯದೇವ ಆಸ್ಪತ್ರೆಯಲ್ಲಿ 24 ಗಂಟೆಯಲ್ಲಿ 11 ಸಾವು: ವೈದ್ಯರ ನಿರ್ಲಕ್ಷ್ಯ ಆರೋಪಿಸಿ ಜನರ ಆಕ್ರೋಶ..!
ಮೈಸೂರಿನ ಪ್ರತಿಷ್ಠಿತ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 11 ಮಂದಿ ರೋಗಿಗಳು ಸಾವನ್ನಪ್ಪಿದ್ದು, ಆಸ್ಪತ್ರೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ವೈದ್ಯರ ಕೊರತೆ ಮತ್ತು ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡದ ಕಾರಣದಿಂದಲೇ ಈ ಸಾವುಗಳು ಸಂಭವಿಸಿವೆ ಎಂದು ಆರೋಪಿಸಿ ರೋಗಿಗಳ ಸಂಬಂಧಿಕರು ಆಸ್ಪತ್ರೆ ಸಿಬ್ಬಂದಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೈಸೂರು: ಇಲ್ಲಿನ ಪ್ರತಿಷ್ಠಿತ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 11 ಮಂದಿ ರೋಗಿಗಳು ಸಾವನ್ನಪ್ಪಿದ್ದು, ಆಸ್ಪತ್ರೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ವೈದ್ಯರ ಕೊರತೆ ಮತ್ತು ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡದ ಕಾರಣದಿಂದಲೇ ಈ ಸಾವುಗಳು ಸಂಭವಿಸಿವೆ ಎಂದು ಆರೋಪಿಸಿ ರೋಗಿಗಳ ಸಂಬಂಧಿಕರು ಆಸ್ಪತ್ರೆ ಸಿಬ್ಬಂದಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಂಬಂಧಿಕರ ಗಂಭೀರ ಆರೋಪ:
ಆಸ್ಪತ್ರೆಯಲ್ಲಿ ಸರಿಯಾದ ವ್ಯವಸ್ಥೆಗಳಿಲ್ಲ ಮತ್ತು ವೈದ್ಯರ ಲಭ್ಯತೆ ಇಲ್ಲದೆ ರೋಗಿಗಳು ಮೃತಪಡುತ್ತಿದ್ದಾರೆ ಎಂದು ಕಿಡಿಕಾರಿದ ಮೃತರ ಸಂಬಂಧಿಕರು, ಆಸ್ಪತ್ರೆಯ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು. ಪರಿಸ್ಥಿತಿ ನಿಯಂತ್ರಿಸಲು ಬಂದ ಪೊಲೀಸ್ ಸಿಬ್ಬಂದಿಯೊಂದಿಗೂ ಸಾರ್ವಜನಿಕರು ವಾಗ್ವಾದ ನಡೆಸಿದ ಘಟನೆ ನಡೆಯಿತು.
ಆಸ್ಪತ್ರೆ ಮಂಡಳಿಯ ಸ್ಪಷ್ಟನೆ:
ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಸದಾನಂದ ಅವರು, “ವೈದ್ಯರ ನಿರ್ಲಕ್ಷ್ಯದಿಂದ ಸಾವು ಸಂಭವಿಸಿದೆ ಎಂಬ ಆರೋಪ ಸತ್ಯಕ್ಕೆ ದೂರವಾದುದು. ಮೃತಪಟ್ಟ 11 ರೋಗಿಗಳು ತೀವ್ರತರವಾದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಚಿಕಿತ್ಸೆ ನೀಡುವಲ್ಲಿ ಯಾವುದೇ ವಿಳಂಬವಾಗಿಲ್ಲ. ರಾತ್ರಿ ಮೂವರು ವೈದ್ಯರು ಕರ್ತವ್ಯದಲ್ಲಿದ್ದರು, ಇದಕ್ಕೆ ಸಿಸಿಟಿವಿ ಸಾಕ್ಷಿಯಿದೆ” ಎಂದು ಸ್ಪಷ್ಟಪಡಿಸಿದರು.
ಒತ್ತಡದಲ್ಲಿ ಜಯದೇವ ಆಸ್ಪತ್ರೆ:
ಆಸ್ಪತ್ರೆಯ ಮೇಲಿರುವ ಒತ್ತಡದ ಬಗ್ಗೆ ವಿವರಿಸಿದ ಡಾ. ಸದಾನಂದ ಅವರು, ಮೈಸೂರು ಮಾತ್ರವಲ್ಲದೆ ಹಾಸನ, ಕೊಡಗು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳಿಂದಲೂ ಹೆಚ್ಚಿನ ರೋಗಿಗಳು ಇಲ್ಲಿಗೆ ಬರುತ್ತಾರೆ. ಒಬ್ಬ ವೈದ್ಯರು ದಿನಕ್ಕೆ 50-60 ರೋಗಿಗಳನ್ನು ನೋಡಬೇಕಾದ ಜಾಗದಲ್ಲಿ 100ಕ್ಕೂ ಹೆಚ್ಚು ರೋಗಿಗಳನ್ನು ನೋಡುತ್ತಿದ್ದಾರೆ. ಆಸ್ಪತ್ರೆಯ ಬೆಡ್ಗಳು ಭರ್ತಿಯಾಗಿರುವುದರಿಂದ ಅನಿವಾರ್ಯವಾಗಿ 20ಕ್ಕೂ ಹೆಚ್ಚು ರೋಗಿಗಳಿಗೆ ಟ್ರ್ಯಾಲಿಗಳಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ. ಈ ಇಕ್ಕಟ್ಟಿನ ಪರಿಸ್ಥಿತಿಯಲ್ಲೂ ಗುಣಮಟ್ಟದ ಸೇವೆ ನೀಡಲು ನಮ್ಮ ತಂಡ ಶ್ರಮಿಸುತ್ತಿದೆ ಎಂದು ಹೇಳಿದರು.
ಮೈಸೂರು
H. Vishwanath-ʻಬಾಂಬೆ ಡೇಸ್ʼ ಪುಸ್ತಕ ಬಿಡುಗಡೆಯಾದರೆ ರಾಜ್ಯ ರಾಜಕೀಯದಲ್ಲಿ ಸಂಚಲನ: ಎಚ್. ವಿಶ್ವನಾಥ್
ʻಬಾಂಬೆ ಡೇಸ್ʼ ಪುಸ್ತಕ ಬಿಡುಗಡೆಯಾದರೆ ರಾಜ್ಯ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಯಾಗಲಿದೆ. ಹೀಗಾಗಿ, ಪುಸ್ತಕ ಬರವಣಿಗೆ ಪೂರ್ಣಗೊಂಡಿದ್ದರೂ ಅದನ್ನು ಪ್ರಕಟಿಸದಿರಲು ನಿರ್ಧರಿಸಿದ್ದೇನೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್ ತಿಳಿಸಿದ್ದಾರೆ.
ಮೈಸೂರು: ʻಬಾಂಬೆ ಡೇಸ್ʼ ಪುಸ್ತಕ ಬಿಡುಗಡೆಯಾದರೆ ರಾಜ್ಯ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಯಾಗಲಿದೆ. ಹೀಗಾಗಿ, ಪುಸ್ತಕ ಬರವಣಿಗೆ ಪೂರ್ಣಗೊಂಡಿದ್ದರೂ ಅದನ್ನು ಪ್ರಕಟಿಸದಿರಲು ನಿರ್ಧರಿಸಿದ್ದೇನೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಈಗಾಗಲೇ ಜನರು ರಾಜಕೀಯದ ಬಗ್ಗೆ ಸಾಕಷ್ಟು ಅಸಹ್ಯಪಟ್ಟುಕೊಂಡಿದ್ದಾರೆ. ನನ್ನ ಪುಸ್ತಕ ಬಿಡುಗಡೆಯಾದರೆ ರಾಜಕೀಯದ ಬಗ್ಗೆ ಜನರಲ್ಲಿ ಮತ್ತಷ್ಟು ಅಸಹ್ಯ ಮೂಡುವ ಸಾಧ್ಯತೆಯಿದೆ” ಎಂದು ಹೇಳಿದರು.
ಯತೀಂದ್ರ ಇತಿಹಾಸ ತಿಳಿದು ಮಾತನಾಡಲಿ
ರಾಜವಂಶಸ್ಥರ ಕುರಿತು ಸಚಿವ ಡಾ. ಯತೀಂದ್ರ ನೀಡಿರುವ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ವಿಶ್ವನಾಥ್, “ಅನುಭವ ಇಲ್ಲದವರಿಗೆ ಜವಾಬ್ದಾರಿ ನೀಡಿದರೆ ಏನಾಗುತ್ತದೆ ಎಂಬುದಕ್ಕೆ ರಾಜವಂಶಸ್ಥರ ಕುರಿತು ಯತೀಂದ್ರ ಮಾತನಾಡಿರುವ ಹಗುರವಾದ ಹೇಳಿಕೆಯೇ ಸಾಕ್ಷಿ. ಸಿದ್ದರಾಮಯ್ಯ ಮತ್ತು ಅವರ ಪುತ್ರ ಮೈಸೂರು ರಾಜಮನೆತನದ ಇತಿಹಾಸ ಹಾಗೂ ಹಿನ್ನೆಲೆಯನ್ನು ತಿಳಿದುಕೊಳ್ಳಬೇಕು” ಎಂದು ಹೇಳಿದರು.
“ಚಾಮುಂಡೇಶ್ವರಿ ಉಪಚುನಾವಣೆಯ ಪ್ರಚಾರಕ್ಕೆ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರು ಆಗಮಿಸದೇ ಇದ್ದಿದ್ದರೆ ಸಿದ್ದರಾಮಯ್ಯ ಗೆಲುವು ಸಾಧಿಸಲು ಸಾಧ್ಯವಾಗುತ್ತಿರಲಿಲ್ಲ. ಅವರು ಮುಖ್ಯಮಂತ್ರಿಯೂ ಆಗುತ್ತಿರಲಿಲ್ಲ” ಎಂದು ಎಚ್. ವಿಶ್ವನಾಥ್ ಟೀಕಿಸಿದರು.
ಮೈಸೂರು
Siddaramaiah–Vijayendra-ಸ್ಟಿಂಗ್ ಮತ್ತು ಪರಿಷತ್ ಫಲಿತಾಂಶ ನಡುವೆಯೇ ಒಂದೇ ವೇದಿಕೆಯಲ್ಲಿ ಸಿದ್ದರಾಮಯ್ಯ–ವಿಜಯೇಂದ್ರ; ಗಮನ ಸೆಳೆದ ಗೌರವ ವಿನಿಮಯ
ರಾಜ್ಯ ರಾಜಕಾರಣದಲ್ಲಿ ಸ್ಟಿಂಗ್ ಆಪರೇಷನ್ ಆರೋಪ-ಪ್ರತ್ಯಾರೋಪಗಳು ಹಾಗೂ ವಿಧಾನಪರಿಷತ್ ಚುನಾವಣೆ ಫಲಿತಾಂಶದ ಚರ್ಚೆಗಳು ನಡೆಯುತ್ತಿರುವ ನಡುವೆಯೇ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡು ಗಮನ ಸೆಳೆದಿದ್ದಾರೆ.
ಮೈಸೂರು, ಅ.28: ರಾಜ್ಯ ರಾಜಕಾರಣದಲ್ಲಿ ಸ್ಟಿಂಗ್ ಆಪರೇಷನ್ ಆರೋಪ-ಪ್ರತ್ಯಾರೋಪಗಳು ಹಾಗೂ ವಿಧಾನಪರಿಷತ್ ಚುನಾವಣೆ ಫಲಿತಾಂಶದ ಚರ್ಚೆಗಳು ನಡೆಯುತ್ತಿರುವ ನಡುವೆಯೇ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡು ಗಮನ ಸೆಳೆದಿದ್ದಾರೆ.
ಮೈಸೂರಿನ ಕೆ.ಆರ್. ನಗರದಲ್ಲಿ ನಡೆದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮತ್ತು ವಿಜಯೇಂದ್ರ ಅಕ್ಕಪಕ್ಕದಲ್ಲಿ ಕುಳಿತುಕೊಂಡಿದ್ದರು. ಈ ವೇಳೆ ವಿಜಯೇಂದ್ರ ಅವರು ಸಿದ್ದರಾಮಯ್ಯ ಅವರಿಗೆ ಎರಡೂ ಕೈಗಳನ್ನು ಜೋಡಿಸಿ ನಮಸ್ಕರಿಸಿದರು. ಇದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ಅವರು ವಿಜಯೇಂದ್ರ ಅವರ ಬೆನ್ನು ತಟ್ಟಿದರು.
ರಾಜಕೀಯವಾಗಿ ಆರೋಪ-ಪ್ರತ್ಯಾರೋಪಗಳು ನಡೆಯುತ್ತಿರುವ ಸಂದರ್ಭದಲ್ಲಿ ಇಬ್ಬರು ನಾಯಕರು ವೇದಿಕೆಯಲ್ಲಿ ಪರಸ್ಪರ ಗೌರವ ವಿನಿಮಯ ಮಾಡಿಕೊಂಡ ದೃಶ್ಯ ಗಮನ ಸೆಳೆಯಿತು.
ಮೈಸೂರು
Mysuru-ಮೈಸೂರು ದಸರಾ ವಿವಾದ: ಪ್ರಮೋದಾದೇವಿ ಒಡೆಯರ್ಗೆ ಯತೀಂದ್ರ ಸಿದ್ದರಾಮಯ್ಯ ತಿರುಗೇಟು
ಮೈಸೂರು ದಸರಾ ಆಚರಣೆಯಲ್ಲಿ ರಾಜಮನೆತನ ಮತ್ತು ಸರಕಾರಿ ಅಧಿಕಾರಿಗಳ ನಡುವಿನ ಸಮನ್ವಯದ ಕೊರತೆ ಕುರಿತು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ, ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಮೈಸೂರು: ಮೈಸೂರು ದಸರಾ ಆಚರಣೆಯಲ್ಲಿ ರಾಜಮನೆತನ ಮತ್ತು ಸರಕಾರಿ ಅಧಿಕಾರಿಗಳ ನಡುವಿನ ಸಮನ್ವಯದ ಕೊರತೆ ಕುರಿತು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ, ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
‘ಅರಮನೆ ಮಂಡಳಿ ಸರಕಾರದ್ದು, ಅರಮನೆ ಜಾಗವೂ ಸರಕಾರದ್ದು. ಅವರಿಗೆ ಉಳಿದುಕೊಳ್ಳಲು ಒಂದಿಷ್ಟು ಜಾಗ ಕೊಟ್ಟಿದ್ದೇವೆ ಅಷ್ಟೆ’ ಎಂದು ಸಚಿವರು ಹೇಳಿದ್ದು, ಈ ಹೇಳಿಕೆ ರಾಜಮನೆತನ ಮತ್ತು ಸರಕಾರದ ನಡುವಿನ ಚರ್ಚೆಗೆ ಹೊಸ ತಿರುವು ನೀಡಿದೆ.
ರವಿವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದ ಪ್ರಮೋದಾದೇವಿ ಒಡೆಯರ್, ದಸರಾ ಸಂದರ್ಭದಲ್ಲಿ ರಾಜಮನೆತನ ಮತ್ತು ಅಧಿಕಾರಿಗಳ ನಡುವೆ ಸಮನ್ವಯದ ಕೊರತೆಯಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಕುರಿತು ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ಅವರು ಪ್ರಸ್ತಾಪಿಸಿರುವ ಸಮಸ್ಯೆಗಳನ್ನು ಬಗೆಹರಿಸಲು ಸರಕಾರ ಸಿದ್ಧವಿದೆ. ಆದರೆ, ಅವರು ಹೇಳಿರುವ ಎಲ್ಲ ವಿಚಾರಗಳನ್ನೂ ಒಪ್ಪಲು ಸಾಧ್ಯವಿಲ್ಲ ಎಂದರು.
‘ಸರಕಾರದ ದಸರಾಕ್ಕೂ ಇತಿಹಾಸವಿದೆ’
‘ಅವರು ಹೇಳಿದಂತೆ ಏಳು ದಿನ ದಸರಾ ಆಚರಿಸಲು ಸಾಧ್ಯವಿಲ್ಲ. ಸರಕಾರದ ದಸರಾ ಅಲ್ಲ ಎಂಬ ಪದ ಬಳಕೆಯೂ ಸರಿಯಲ್ಲ. ಸರಕಾರದ ದಸರಾಕ್ಕೂ ಇತಿಹಾಸವಿದೆ. ಅದನ್ನು ದಸರಾ ಅಲ್ಲ ಎಂದು ಹೇಳುವುದನ್ನು ನಾವು ಒಪ್ಪುವುದಿಲ್ಲ’ ಎಂದು ಸಚಿವರು ಸ್ಪಷ್ಟಪಡಿಸಿದರು.
ಅಂಬಾರಿಯನ್ನು ಸರಕಾರ ಉಚಿತವಾಗಿ ಪಡೆಯುತ್ತಿಲ್ಲ. ಅದಕ್ಕೂ ಸರಕಾರ ಹಣ ಪಾವತಿಸುತ್ತದೆ ಎಂದು ತಿಳಿಸಿದ ಅವರು, ಪ್ರಮೋದಾದೇವಿ ಒಡೆಯರ್ ಅವರಿಗೆ ಯಾವುದೇ ಸಮಸ್ಯೆಗಳಿದ್ದರೆ ನೇರವಾಗಿ ಸರಕಾರದ ಗಮನಕ್ಕೆ ತರಬಹುದಿತ್ತು ಎಂದರು.
‘ನಾವು ನಿರಂತರವಾಗಿ ಅವರ ಸಂಪರ್ಕದಲ್ಲಿದ್ದೆವು. ಆದರೆ, ನಮ್ಮ ಗಮನಕ್ಕೆ ಯಾವುದೇ ವಿಚಾರವನ್ನು ತಂದಿರಲಿಲ್ಲ. ಸರಕಾರಕ್ಕೆ ಪತ್ರ ಬರೆಯದೆ ಏಕಾಏಕಿ ಮಾಧ್ಯಮಗಳಿಗೆ ಪತ್ರ ಬರೆದರೆ ಹೇಗೆ?’ ಎಂದು ಪ್ರಶ್ನಿಸಿದರು.
ಅಗತ್ಯವಿದ್ದರೆ ಸರಕಾರದ ವತಿಯಿಂದ ಪ್ರತಿನಿಧಿಗಳನ್ನು ರಾಜಮನೆತನದವರ ಬಳಿಗೆ ಕಳುಹಿಸಲಾಗುವುದು. ಮುಖ್ಯಮಂತ್ರಿ ಅವರು ಈ ಕುರಿತು ಕ್ರಮ ಕೈಗೊಳ್ಳಲಿದ್ದಾರೆ. ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಲು ಸರಕಾರ ಸಿದ್ಧವಿದೆ ಎಂದು ತಿಳಿಸಿದರು.
ಅಂಬಾರಿ ಆನೆ ಆಯ್ಕೆಯಲ್ಲಿ ಗೊಂದಲ
ಅಂಬಾರಿ ಹೊರುವ ಆನೆಯ ಆಯ್ಕೆ ವಿಚಾರವಾಗಿಯೂ ಪ್ರತಿಕ್ರಿಯಿಸಿದ ಯತೀಂದ್ರ ಸಿದ್ದರಾಮಯ್ಯ, ಯಾವ ಆನೆಯನ್ನು ಆಯ್ಕೆ ಮಾಡಲಾಗಿದೆ ಎಂಬುದನ್ನು ರಾಜಮನೆತನಕ್ಕೆ ತಿಳಿಸುವ ಕಾನೂನುಬದ್ಧ ಅಗತ್ಯವಿಲ್ಲ ಎಂದು ಹೇಳಿದರು.
ಆರಂಭದಲ್ಲಿ ಮಹೇಂದ್ರ, ಬಳಿಕ ಧನಂಜಯ ಹಾಗೂ ನಂತರ ಪ್ರಶಾಂತ್ ಆನೆಯ ಹೆಸರುಗಳು ಚರ್ಚೆಗೆ ಬಂದಿದ್ದವು. ಈ ವಿಚಾರದಲ್ಲಿ ಗೊಂದಲ ಉಂಟಾಗಿದ್ದರಿಂದ ಅಂಬಾರಿ ಆನೆಯ ಆಯ್ಕೆ ವಿಳಂಬವಾಯಿತು ಎಂದು ಅವರು ವಿವರಿಸಿದರು.
ಜೆಟ್ಟಿ ಕಾಳಗ ರದ್ದತಿ ವಿಚಾರ ಪರಿಶೀಲನೆ
ದಸರಾ ಸಂದರ್ಭದಲ್ಲಿ ಜೆಟ್ಟಿ ಕಾಳಗ ರದ್ದಾದ ವಿಚಾರವಾಗಿ ಪ್ರಮೋದಾದೇವಿ ಒಡೆಯರ್ ಅವರು ಪತ್ರದಲ್ಲಿ ಉಲ್ಲೇಖಿಸಿರುವ ಅಂಶಗಳಿಗೂ, ಪೊಲೀಸರು ನೀಡಿರುವ ಮಾಹಿತಿಗೂ ವ್ಯತ್ಯಾಸವಿದೆ ಎಂದು ಸಚಿವರು ಹೇಳಿದರು.
ಜೆಟ್ಟಿಗಳು ತಡವಾಗಿ ಆಗಮಿಸಿದ್ದರಿಂದ ಕಾರ್ಯಕ್ರಮಕ್ಕೆ ತೊಂದರೆಯಾಯಿತು; ಪೊಲೀಸರಿಂದ ಯಾವುದೇ ಸಮಸ್ಯೆಯಾಗಿಲ್ಲ ಎಂಬುದು ಪೊಲೀಸರ ಹೇಳಿಕೆಯಾಗಿದೆ. ಈ ಕುರಿತು ಸರಕಾರ ಪರಿಶೀಲನೆ ನಡೆಸುತ್ತಿದ್ದು, ಎಲ್ಲಿ ತಪ್ಪಾಗಿದೆ ಎಂಬುದನ್ನು ಗಮನಿಸಲಾಗುತ್ತಿದೆ ಎಂದು ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.
-
ಬಿಗ್ ನ್ಯೂಸ್20 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಬಿಗ್ ನ್ಯೂಸ್12 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಅಂತರ ರಾಜ್ಯ18 hours agoToll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
-
ಮಂಗಳೂರು20 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು
-
Uncategorized19 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ಬಿಗ್ ನ್ಯೂಸ್20 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ರಾಜಕೀಯ18 hours agoPuttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
-
ಬಿಗ್ ನ್ಯೂಸ್19 hours agoPuttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ















