​ಪ್ರಕರಣದ ಹಿನ್ನೆಲೆ:ಬಂಧಿತ ಆರೋಪಿ ಡಾಲರ್ ಸಲಾಂ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ 2020 ಮತ್ತು 2022ರಲ್ಲಿ ಮನೆ ಕಳ್ಳತನಕ್ಕೆ (IPC 457, 380) ಸಂಬಂಧಿಸಿದಂತೆ ಎರಡು ಪ್ರತ್ಯೇಕ ಪ್ರಕರಣಗಳು […]" /> ​ಪ್ರಕರಣದ ಹಿನ್ನೆಲೆ:ಬಂಧಿತ ಆರೋಪಿ ಡಾಲರ್ ಸಲಾಂ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ 2020 ಮತ್ತು 2022ರಲ್ಲಿ ಮನೆ ಕಳ್ಳತನಕ್ಕೆ (IPC 457, 380) ಸಂಬಂಧಿಸಿದಂತೆ ಎರಡು ಪ್ರತ್ಯೇಕ ಪ್ರಕರಣಗಳು […]"> ಪುತ್ತೂರು: ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿ ‘ಡಾಲರ್ ಸಲಾಂ’ ದಸ್ತಗಿರಿ - Nikhara News | Kannada News Website
Connect with us

Uncategorized

ಪುತ್ತೂರು: ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿ ‘ಡಾಲರ್ ಸಲಾಂ’ ದಸ್ತಗಿರಿ

Published

on

Ad Widget

Ad Widget

Ad Widget

Ad Widget

ಪುತ್ತೂರು: ಕಳ್ಳತನ ಸೇರಿದಂತೆ ಹಲವು ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ದೀರ್ಘಕಾಲದಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ ಪೊಲೀಸರು ಮಂಗಳವಾರ (ಜೂನ್ 16) ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Ad Widget

Ad Widget

Ad Widget

Ad Widget


​ಪುತ್ತೂರಿನ ಚಿಕ್ಕಮುಡ್ನೂರು ನಿವಾಸಿ ಮೊಹಮ್ಮದ್ ಸಲಾಂ ಅಲಿಯಾಸ್ ಕೆ. ಎಂ. ಸಲಾಂ ಅಲಿಯಾಸ್ ‘ಡಾಲರ್ ಸಲಾಂ’ ಬಂಧಿತ ಆರೋಪಿ.

Ad Widget

Ad Widget alt="Ad Widget"/>

Ad Widget


​ಪ್ರಕರಣದ ಹಿನ್ನೆಲೆ:
ಬಂಧಿತ ಆರೋಪಿ ಡಾಲರ್ ಸಲಾಂ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ 2020 ಮತ್ತು 2022ರಲ್ಲಿ ಮನೆ ಕಳ್ಳತನಕ್ಕೆ (IPC 457, 380) ಸಂಬಂಧಿಸಿದಂತೆ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದವು. ಈ ಪ್ರಕರಣಗಳಲ್ಲಿ ಜಾಮೀನು ಪಡೆದಿದ್ದ ಆತ, ಬಳಿಕ ಮಾನ್ಯ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸತತವಾಗಿ ತಲೆಮರೆಸಿಕೊಂಡಿದ್ದ.

Ad Widget

Ad Widget <> Ad Widget


​ಇದಷ್ಟೇ ಅಲ್ಲದೆ, ಪುತ್ತೂರು ನಗರ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಕರ್ತವ್ಯದಲ್ಲಿದ್ದ ಸರ್ಕಾರಿ ನೌಕರರ ಮೇಲೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿ ಹಾಗೂ ನಿಂದನೆ ಮಾಡಿದ ಆರೋಪದಡಿ (IPC 353, 332, 504) 2023ರಲ್ಲಿ ಈತನ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲೂ ಕೋರ್ಟ್‌ಗೆ ಹಾಜರಾಗದ ಹಿನ್ನೆಲೆಯಲ್ಲಿ ನ್ಯಾಯಾಲಯವು ಆರೋಪಿಯ ವಿರುದ್ಧ ವಾರೆಂಟ್ ಜಾರಿಗೊಳಿಸಿತ್ತು.


​ರೈಲ್ವೆ ನಿಲ್ದಾಣದ ಬಳಿ ದಸ್ತಗಿರಿ:
ತಲೆಮರೆಸಿಕೊಂಡಿದ್ದ ಆರೋಪಿಯ ಪತ್ತೆಗಾಗಿ ಬಲೆ ಬೀಸಿದ್ದ ವಿಟ್ಲ ಠಾಣಾ ಪೊಲೀಸರು, ನಿಖರ ಮಾಹಿತಿ ಮೇರೆಗೆ ಜೂನ್ 16ರಂದು ಪುತ್ತೂರು ರೈಲ್ವೆ ನಿಲ್ದಾಣದ ಬಳಿ ಕಾರ್ಯಾಚರಣೆ ನಡೆಸಿ ಆತನನ್ನು ವಶಕ್ಕೆ ಪಡೆದಿದ್ದಾರೆ.
​ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮಾನ್ಯ ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Click to comment

Leave a Reply

Uncategorized

Philomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ

Published

on

Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು  ಕಾಲೇಜು ಸಭಾಂಗಣದಲ್ಲಿ  ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು  ಕಾಲೇಜು ಸಭಾಂಗಣದಲ್ಲಿ  ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.

Ad Widget

Ad Widget alt="Ad Widget"/>

Ad Widget

ಸಂಪನ್ಮೂಲ ವ್ಯಕ್ತಿಗಳಾಗಿ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ವಂದನ ಶಂಕರ್ ಮಾತನಾಡಿ, ಪಿ ಯು ಸಿ ನಂತರದ ಅವಕಾಶಗಳು, ಇಂಜಿನಿಯರಿಂಗ್ ವಿಭಾಗಗಳಲ್ಲಿ ಇರುವ ಉದ್ಯೋಗಾವಕಾಶಗಳ ಬಗ್ಗೆ ತಿಳಿಸಿದರು.

Ad Widget

Ad Widget <> Ad Widget

ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಚೇತನ್ ಮಾತನಾಡಿ, ಮಾದಕ ವಸ್ತುಗಳು ಹಾಗೂ ದೂಮಪಾನದ ವ್ಯಸನ ನಮ್ಮ ನೆನಪಿನ ಶಕ್ತಿಯನ್ನು ಕುಗ್ಗಿಸುತ್ತದೆ ಮತ್ತು ಕ್ಯಾನ್ಸರ್ ನಂತಹ ಮಾರಕ ರೋಗಗಳಿಗೆ ದಾರಿ ಮಾಡಿಕೊಡುತ್ತದೆ. ಹಾಗೆಯೇ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ನಮ್ಮ ಏಕಾಗ್ರತೆಯನ್ನು ಭಂಗ ಗೊಳಿಸುತ್ತದೆ ಎಂದು ಹೇಳಿದರು.

ವೃತ್ತಿ ಮಾರ್ಗದರ್ಶನ ವಿಭಾಗದ ನಿರ್ದೇಶಕರಾದ ರವಿಪ್ರಸಾದ್ ಬಿ. ಜಿ ನಿರಂಜನ್ ಜಿ. ಯು, ಕವಿತಾ ಕೆ ಹಾಗೂ ಕಾಲೇಜಿನ ಬೋಧಕ /ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Ad Widget

Ad Widget

ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ವಿದ್ಯಾರ್ಥಿ ಮೊಹಮ್ಮದ್ ಶಯಾನ್ ಅಬ್ಬಾಸ್ ಸ್ವಾಗತಿಸಿ, ವಂದಿಸಿ,
ಕಾರ್ಯಕ್ರಮವನ್ನು ನಿರೂಪಿಸಿದರು.

Ad Widget
Continue Reading

Uncategorized

ಹಿರಿಯ ಸಹಕಾರಿ ಧುರೀಣ ಕೆ.ಕೆ. ನಾರಾಯಣ ಚಳ್ಳಂಗಾರು ನಿಧನ

Published

on

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

ಕಲ್ಮಡ್ಕ: ತಾಲೂಕಿನ ಹಿರಿಯ ಸಹಕಾರಿ ಧುರೀಣ, ಸಾಮಾಜಿಕ ಮುಖಂಡ, ಬಹುಮುಖ ಚಿಂತಕ ಕಲ್ಮಡ್ಕ ಗ್ರಾಮದ ಚಳ್ಳಂಗಾರು ಕೆ.ಕೆ. ನಾರಾಯಣ (88) ಅವರು ವಯೋಸಹಜ ಅನಾರೋಗ್ಯದಿಂದ ಗುರುವಾರ ಸಂಜೆ ನಿಧನರಾದರು.

Ad Widget

Ad Widget alt="Ad Widget"/>

Ad Widget

ಮಂಡಲ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ತಮ್ಮ ಅವಧಿಯಲ್ಲಿ ಗ್ರಾಮದಲ್ಲಿ ಅಭಿವೃದ್ಧಿಯ ಹೊಸ ಶಕೆಗೆ ನಾಂದಿ ಹಾಡಿದ್ದರು. ಕಲ್ಮಡ್ಕ ಸಹಕಾರಿ ಸಂಘದ ನಿರ್ದೇಶಕರಾಗಿ ಸಂಸ್ಥೆಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದ ಅವರು, ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದರು. ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು.

Ad Widget

Ad Widget <> Ad Widget

ಕಲ್ಮಡ್ಕ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ವಿಶೇಷ ಶ್ರಮ ವಹಿಸಿದ್ದ ಅವರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಯಕ್ಷಗಾನದ ಅರ್ಥಧಾರಿಯಾಗಿ ಕಲಾ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದ ನಾರಾಯಣ ಅವರು, ಸಂಗಮ ಕಲಾ ಸಂಘದ ನಿರ್ದೇಶಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಉತ್ತಮ ಓದುಗ ಹಾಗೂ ವಿಮರ್ಶಕರಾಗಿದ್ದ ಅವರು ಸಾಹಿತ್ಯ, ಕಲೆ, ಸಹಕಾರ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.

ಮೃತರು ಪತ್ನಿ ಸುಬ್ಬಮ್ಮ, ಪುತ್ರಿಯರಾದ ವಿದ್ಯಾ, ಜಯಶ್ರೀ, ದೀಪಿಕಾ, ಪುತ್ರ, ಕ್ಯಾಂಪ್ಕೋ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ನ್ಯಾಯವಾದಿ ಮುರಳಿಕೃಷ್ಣ ಚಳ್ಳಂಗಾರು, ಸೊಸೆ ರಮ್ಯಾ ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

Continue Reading

Uncategorized

ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ- ಆಟೋ ರಿಕ್ಷಾಗಳಿಗೆ ಸ್ಟಿಕ್ಕ‌ರ್ ಅಭಿಯಾನಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಚಾಲನೆ

Published

on

Ad Widget

Ad Widget

Ad Widget

Ad Widget

ಪುತ್ತೂರು: ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ನಡೆಯಲಿರುವ ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ರಿಕ್ಷಾಗಳಿಗೆ ಸ್ಟಿಕ್ಕ‌ರ್ ಅಭಿಯಾನಕ್ಕೆ ವಿಧಾನಸಭೆಯ ವಿರೋಧಪಕ್ಷದ ನಾಯಕ ಆ‌ರ್.ಅಶೋಕ್ ಅವರು ಚಾಲನೆ ನೀಡಿದರು.

Ad Widget

Ad Widget

Ad Widget

Ad Widget

ನ.19ರಂದು ಪುತ್ತೂರಿನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್‌ ನಿಲ್ದಾಣದ ಬಳಿ ವೀರಾಂಜನೇಯ ಕ್ಷೇತ್ರದಲ್ಲಿ ನಡೆಯುವ ಪಂಚಮುಖಿ ಆಂಜನೇಯ ಹವನದ ಸ್ಟಿಕ್ಕರ್ ಅನ್ನು ಆಟೋ ರಿಕ್ಷಾಗಳಿಗೆ ಅಂಟಿಸುವ ಮೂಲಕ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಯಶಸ್ಸು ಕೋರಿದರು.

Ad Widget

Ad Widget alt="Ad Widget"/>

Ad Widget

ಆಟೋ ರಿಕ್ಷಾಗಳ ಎದುರಿನ ಮತ್ತು ಹಿಂಬದಿಯ ಭಾಗಕ್ಕೆ ತಾವೆ ಸ್ವತಃ ಸ್ಟಿಕ್ಕರ್ ಅಂಟಿಸಿ ಎಲ್ಲರೂ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

Ad Widget

Ad Widget <> Ad Widget

ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು, ಪಂಚಮುಖಿ ಆಂಜನೇಯ ಯಾಗ ಸಮಿತಿ ಪ್ರಧಾನ ಕಾರ್ಯದರ್ಶಿ ಮುರಳಿಕೃಷ್ಣ ಹಸಂತಡ್ಕ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಪ್ರಧಾನ ಕಾರ್ಯದರ್ಶಿ ಸುನಿಲ್ ದಡ್ಡು, ಯಾಗ ಸಮಿತಿಯ ಪ್ರಮುಖರಾದ ಶ್ಯಾಮ ಸುದರ್ಶನ್ ಹೊಸಮೂಲೆ, ಜಯಂತ ಶೆಟ್ಟಿ ಕಂಬಳತ್ತಡ್ಕ, ಶ್ರೀಧ‌ರ್ ತೆಂಕಿಲ ಸಹಿತ ಆಟೋ ರಿಕ್ಷಾ ಚಾಲಕರು ಮತ್ತು ಮಾಲಕರು ಉಪಸ್ಥಿತರಿದ್ದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!