ಈ ಕಾರ್ಯಕ್ರಮದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ […]" /> ಈ ಕಾರ್ಯಕ್ರಮದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ […]"> Dharmasthala-ಸಿರಿ ಸಂಸ್ಥೆಯ ವತಿಯಿಂದ ಧರ್ಮಸ್ಥಳದ ಎ.ವಿ. ಶೆಟ್ಟಿ ದಂಪತಿಗಳಿಗೆ ಗೌರವಾರ್ಪಣೆ - Nikhara News | Kannada News Website
Connect with us

ಸ್ಥಳೀಯ

Dharmasthala-ಸಿರಿ ಸಂಸ್ಥೆಯ ವತಿಯಿಂದ ಧರ್ಮಸ್ಥಳದ ಎ.ವಿ. ಶೆಟ್ಟಿ ದಂಪತಿಗಳಿಗೆ ಗೌರವಾರ್ಪಣೆ

Published

on

Ad Widget

Ad Widget

Ad Widget

Ad Widget

ಬೆಳ್ತಂಗಡಿಯ ರೆಂಕೆದಗುತ್ತುವಿನಲ್ಲಿ ಕಾರ್ಯಾಚರಿಸುತ್ತಿರುವ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೂಗ ಸಂಸ್ಥೆಯ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ ನಲ್ಲಿ ಪ್ರತಿ ತಿಂಗಳು ಆಚರಿಸುವಂತೆ ಸಿರಿ ಸಿಬ್ಬಂದಿಗಳ ಹುಟ್ಟು ಹಬ್ಬ ಆಚರಣೆ ಕಾರ್ಯಕ್ರಮವು ಜೂ.6ರಂದು ಜರುಗಿತು.

Ad Widget

Ad Widget

Ad Widget

Ad Widget

ಬೆಳ್ತಂಗಡಿಯ ರೆಂಕೆದಗುತ್ತುವಿನಲ್ಲಿ ಕಾರ್ಯಾಚರಿಸುತ್ತಿರುವ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೂಗ ಸಂಸ್ಥೆಯ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ ನಲ್ಲಿ ಪ್ರತಿ ತಿಂಗಳು ಆಚರಿಸುವಂತೆ ಸಿರಿ ಸಿಬ್ಬಂದಿಗಳ ಹುಟ್ಟು ಹಬ್ಬ ಆಚರಣೆ ಕಾರ್ಯಕ್ರಮವು ಜೂ.6ರಂದು ಜರುಗಿತು.

Ad Widget

Ad Widget alt="Ad Widget"/>

Ad Widget

ಈ ಕಾರ್ಯಕ್ರಮದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಜೂನ್ ತಿಂಗಳಿನಲ್ಲಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ಸಿರಿ ಸಿಬ್ಬಂದಿಗಳಿಗೆ ಹಾಗೂ ಸಂಸ್ಥೆಗೆ ಹೊಸದಾಗಿ ಸೇರ್ಪಡೆಗೊಂಡ ಸಿಬ್ಬಂದಿಗಳಿಗೆ ಶುಭ ಹಾರೈಸಿದರು. ನಂತರ ಅವರು ಮಾತನಾಡಿ ಹೆಗ್ಗಡೆಯವರು ಹಾಗೂ ಹೇಮಾವತಿ ಅಮ್ಮನವರು ಮಹಿಳಾ ಸಬಲೀಕರಣದ ಧ್ಯೇಯೋದ್ದೇಶದಿಂದ ಪ್ರಾರಂಭಿಸಿರುವ ಸಿರಿ ಸಂಸ್ಥೆಯಲ್ಲಿ ಎಲ್ಲಾ ಸಿರಿ ಸಿಬ್ಬಂದಿಗಳು ಅತ್ಯಂತ ಶ್ರದ್ಧೆ, ಪ್ರಾಮಾಣಿಕತೆಯಿಂದ ದುಡಿಯುವ ಮೂಲಕ ಸಿರಿ ಬ್ರಾಂಡ್‌ ಅನ್ನು ರಾಷ್ಟ್ರ-ಅಂತಾರಾಷ್ಟ್ರೀಯ ಮಟ್ಟದಲ್ಲಿ ಎತ್ತಿ ಹಿಡಿಯುವ ಮೂಲಕ ದಂಪತಿಗಳ ಕನಸನ್ನು ನನಸಾಗಿಸಬೇಕೆಂದು ಪ್ರೇರಣಾತ್ಮಕ ನುಡಿಗಳನ್ನಾಡಿದರು.

Ad Widget

Ad Widget <> Ad Widget

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎನ್ ಜನಾರ್ಧನರವರು ಎ,ವಿ, ಶೆಟ್ಟಿ ಮತ್ತು ಅವರ ಧರ್ಮಪತ್ನಿ ಶ್ರೀಮತಿ ಅರುಣ ವಿ ಶೆಟ್ಟಿಯವರನ್ನು ಅತ್ಯಂತ ಪ್ರೀತಿಪೂರ್ವಕವಾಗಿ ಸ್ವಾಗತಿಸಿದರು, ಪ್ರಾಸ್ತಾವಿಕವಾಗಿ ಮಾತನಾಡಿ, ಸಿರಿ ಸಂಸ್ಥೆಯ ಸಮಗ್ರ ಏಳಿಗೆಗಾಗಿ ಶ್ರಮವಹಿಸಿ, ಸಂಪೂರ್ಣ ಸಹಕಾರ ನೀಡುತ್ತಾ ಬಂದಿರುವ ಎ,ವಿ, ಶೆಟ್ಟಿ ದಂಪತಿಗಳಿಗೆ ಎಲ್ಲಾ ಸಿರಿ ಸಿಬ್ಬಂದಿಗಳ ಪರವಾಗಿ ಗೌರವಾರ್ಪಣೆ ಸಲ್ಲಿಸಿದರು.

ವಿಶೇಷ ಆಹ್ವಾನಿತರಾಗಿ ಭಾಗವಹಿಸಿದ್ದ ಉಜಿರೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕರಾದ ಎಂ. ಜನಾರ್ಧನರವರು ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿ, ಸಿರಿ ಸಿಬ್ಬಂದಿಗಳಿಗೆ ಶುಭಕೋರಿದರು.

Ad Widget

Ad Widget

ಇದೇ ಸಂದರ್ಭದಲ್ಲಿ ಧರ್ಮಸ್ಥಳದ ಪರಮಪೂಜ್ಯ ಖಾವಂದರು ಲೋಕಕಲ್ಯಾಣಾರ್ಥವಾಗಿ ನಡೆಸುತ್ತಿರುವ ವಿವಿಧ ಕಾರ್ಯಚಟುವಟಿಕೆಗಳ ಕುರಿತು ವಿಡಿಯೋ ಪ್ರದರ್ಶಿಸಲಾಯಿತು. ಕಾರ್ಯಕ್ರಮದಲ್ಲಿ ಸಿರಿ ಕ್ಲಬ್ ಅಧ್ಯಕ್ಷೆ ಶ್ರೀಮತಿ ಉಷಾ, ಎಸ್.ಡಿ.ಎಂ ಆಸ್ಪತ್ರೆಯ ಸಿಬ್ಬಂದಿಗಳು ಹಾಗೂ ಸಿರಿ ಸಿಬ್ಬಂದಿಗಳು ಭಾಗವಹಿಸಿದ್ದರು.

ಸಿರಿ ಸಂಸ್ಥೆಯ ಜೀವನ್ ಕುಮಾರ್ ಕಾರ್ಯಕ್ರಮ ನಿರೂಪಿಸಿ, ಮುಖ್ಯ ನಿರ್ವಹಣಾಧಿಕಾರಿ ಪ್ರಸನ್ನರವರು ವಂದಿಸಿದರು.

Ad Widget
Click to comment

Leave a Reply

ಅಪರಾಧ

Punacha-ಪುಣಚ: ಅಕ್ರಮ ಮರಳುಗಾರಿಕೆ ಪತ್ತೆ; ಪಿಕಪ್ ವಾಹನ ಜಪ್ತಿ- ನಾಲ್ವರು ವಶಕ್ಕೆ

Published

on

Ad Widget

Ad Widget

Ad Widget

Ad Widget

ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ದಂಬೆ ಎಂಬಲ್ಲಿ ಸಾರ್ವಜನಿಕ ತೋಡಿನಿಂದ ಅಕ್ರಮವಾಗಿ ಮರಳು ತೆಗೆದು ಸಾಗಾಟಕ್ಕೆ ಸಿದ್ಧಪಡಿಸುತ್ತಿದ್ದ ನಾಲ್ವರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಮರಳು ತುಂಬಿದ್ದ ಪಿಕಪ್ ವಾಹನವನ್ನು ಜಪ್ತಿ ಮಾಡಿದ್ದಾರೆ.

Ad Widget

Ad Widget

Ad Widget

Ad Widget

ವಿಟ್ಲ, ನ.20: ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ದಂಬೆ ಎಂಬಲ್ಲಿ ಸಾರ್ವಜನಿಕ ತೋಡಿನಿಂದ ಅಕ್ರಮವಾಗಿ ಮರಳು ತೆಗೆದು ಸಾಗಾಟಕ್ಕೆ ಸಿದ್ಧಪಡಿಸುತ್ತಿದ್ದ ನಾಲ್ವರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಮರಳು ತುಂಬಿದ್ದ ಪಿಕಪ್ ವಾಹನವನ್ನು ಜಪ್ತಿ ಮಾಡಿದ್ದಾರೆ.

Ad Widget

Ad Widget alt="Ad Widget"/>

Ad Widget

ಆರೋಪಿಗಳನ್ನು ಪುಣಚ ಗ್ರಾಮದ ವಿಶ್ವಾಸ್ ಹೆಚ್. (27), ಶಶಿಧರ (45), ಹರೀಶ್ ಅಜ್ಜಿನಡ್ಕ (35) ಹಾಗೂ ಕೇಪು ಗ್ರಾಮದ ಪುಷ್ಪರಾಜ್ ಎನ್. (32) ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ನ.19ರಂದು ಬೆಳಿಗ್ಗೆ ಪುಣಚ ಗ್ರಾಮದ ದಂಬೆ ಎಂಬಲ್ಲಿನ ಸಾರ್ವಜನಿಕ ತೋಡಿನಿಂದ ಮಾರಾಟ ಮಾಡುವ ಉದ್ದೇಶದಿಂದ ಅಕ್ರಮವಾಗಿ ಮರಳು ತೆಗೆದು ಪಿಕಪ್ ವಾಹನಕ್ಕೆ ತುಂಬಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ವಿಟ್ಲ ಪೊಲೀಸ್ ಠಾಣೆಯ ತನಿಖಾ ವಿಭಾಗದ ಪಿಎಸ್‌ಐ ರತ್ನಕುಮಾರ್ ಅವರಿಗೆ ಲಭಿಸಿತ್ತು.

ಮಾಹಿತಿ ಮೇರೆಗೆ ಪೊಲೀಸ್ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ, ನಾಲ್ವರು ವ್ಯಕ್ತಿಗಳು ತೋಡಿನಿಂದ ಮರಳು ತೆಗೆದು ಪಿಕಪ್ ವಾಹನಕ್ಕೆ ತುಂಬಿಸುತ್ತಿರುವುದು ಕಂಡುಬಂದಿದೆ. ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮರಳು ತೆಗೆಯುತ್ತಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ, ಸ್ಥಳದಲ್ಲಿದ್ದ ಮರಳು ತುಂಬಿದ KA-70-8785 ನೋಂದಣಿಯ ಪಿಕಪ್ ವಾಹನ ಸೇರಿದಂತೆ ಇತರ ಸೊತ್ತುಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.

Ad Widget

Ad Widget

ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 236/2026ರಂತೆ ಪ್ರಕರಣ ದಾಖಲಿಸಿಕೊಂಡಿದ್ದು, ಕರ್ನಾಟಕ ಕಿರು ಖನಿಜ ರಿಯಾಯಿತಿ ನಿಯಮಗಳು, MMDR ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಕಲಂಗಳಡಿ ತನಿಖೆ ಮುಂದುವರಿದಿದೆ.

Ad Widget
Continue Reading

ಅಪರಾಧ

Vitla-ವಿಟ್ಲ: ಪರವಾನಿಗೆ ಇಲ್ಲದೆ ಕೆಂಪು ಕಲ್ಲು ಸಾಗಾಟ; ಲಾರಿ ವಶ, ಚಾಲಕ–ಮಾಲೀಕನ ವಿರುದ್ಧ ಪ್ರಕರಣ

Published

on

Ad Widget

Ad Widget

Ad Widget

Ad Widget

ಯಾವುದೇ ಪರವಾನಿಗೆ ಅಥವಾ ಸೂಕ್ತ ದಾಖಲೆಗಳಿಲ್ಲದೆ ಲಾರಿಯಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿಯನ್ನು ವಿಟ್ಲ ಪೊಲೀಸರು ವಶಪಡಿಸಿಕೊಂಡಿದ್ದು, ಚಾಲಕ ಹಾಗೂ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

Ad Widget

Ad Widget

Ad Widget

Ad Widget

ವಿಟ್ಲ,ನ.20: ಯಾವುದೇ ಪರವಾನಿಗೆ ಅಥವಾ ಸೂಕ್ತ ದಾಖಲೆಗಳಿಲ್ಲದೆ ಲಾರಿಯಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿಯನ್ನು ವಿಟ್ಲ ಪೊಲೀಸರು ವಶಪಡಿಸಿಕೊಂಡಿದ್ದು, ಚಾಲಕ ಹಾಗೂ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ನ.19ರಂದು ಮಧ್ಯಾಹ್ನ ಕೇರಳ ಕಡೆಯಿಂದ ಮಂಚಿ ಮಾರ್ಗವಾಗಿ ವೀರಕಂಭ ಕಡೆಗೆ ಲಾರಿಯಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ವಿಟ್ಲ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಉಪ ನಿರೀಕ್ಷಕ ಜಯರಾಮ ಕೆ. ಅವರಿಗೆ ಲಭಿಸಿತ್ತು.

Ad Widget

Ad Widget <> Ad Widget

ಮಾಹಿತಿಯ ಮೇರೆಗೆ ಪೊಲೀಸ್ ಸಿಬ್ಬಂದಿಗಳೊಂದಿಗೆ ಬಂಟ್ವಾಳ ತಾಲೂಕಿನ ಬೊಳಂತೂರು ಗ್ರಾಮದ ಕೊಕ್ಕಪುನಿ ಎಂಬಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, KA-19-AA-0601 ನೋಂದಣಿಯ ಲಾರಿಯನ್ನು ತಡೆದು ಪರಿಶೀಲಿಸಿದರು. ಈ ವೇಳೆ ಯಾವುದೇ ಪರವಾನಿಗೆ ಅಥವಾ ಸೂಕ್ತ ದಾಖಲೆಗಳಿಲ್ಲದೆ ಕೆಂಪು ಕಲ್ಲು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.

ಪೊಲೀಸರು ಲಾರಿಯನ್ನು ವಶಪಡಿಸಿಕೊಂಡಿದ್ದು, ಚಾಲಕ ಮೊಹಮ್ಮದ್ ರಫೀಕ್ (62) ಹಾಗೂ ಲಾರಿ ಮಾಲೀಕ ಮೊಹಮ್ಮದ್ ಅಶ್ರಫ್ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 237/2026ರಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Ad Widget

Ad Widget

ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2), MMDR ಕಾಯ್ದೆ 1957ರ ಕಲಂ 4(1), 21 ಹಾಗೂ ಕರ್ನಾಟಕ ಕಿರು ಖನಿಜ ನಿಯಮಾವಳಿ 1994ರ ಕಲಂ 3, 44ರಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ad Widget
Continue Reading

ರಾಜಕೀಯ

BJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ

Published

on

Ad Widget

Ad Widget

Ad Widget

Ad Widget

ಗಡಿಪಾರಿಗೊಳಗಾದ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಅವರ ನಿವಾಸಕ್ಕೆ ಬಿಜೆಪಿ ಮುಖಂಡರಾದ ಸಹಜ್ ರೈ ಬಳಜ್ಜ, ಪ್ರಸನ್ನ ದರ್ಬೆ ಹಾಗೂ ಅಜಿತ್ ರೈ ಹೊಸಮನೆ ಭೇಟಿ ನೀಡಿ ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿದರು.

Ad Widget

Ad Widget

Ad Widget

Ad Widget

ಪುತ್ತೂರು: ಗಡಿಪಾರಿಗೊಳಗಾದ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಅವರ ನಿವಾಸಕ್ಕೆ ಬಿಜೆಪಿ ಮುಖಂಡರಾದ ಸಹಜ್ ರೈ ಬಳಜ್ಜ, ಪ್ರಸನ್ನ ದರ್ಬೆ ಹಾಗೂ ಅಜಿತ್ ರೈ ಹೊಸಮನೆ ಭೇಟಿ ನೀಡಿ ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿದರು.

Ad Widget

Ad Widget alt="Ad Widget"/>

Ad Widget

ನರಸಿಂಹ ಮಾಣಿ ಅವರು ಎದುರಿಸುತ್ತಿರುವ ಪ್ರಸಕ್ತ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕುಟುಂಬದ ಸದಸ್ಯರಿಗೆ ಧೈರ್ಯ ಹಾಗೂ ಆತ್ಮಸ್ಥೈರ್ಯ ತುಂಬುವ ಉದ್ದೇಶದಿಂದ ಈ ಭೇಟಿ ನಡೆಯಿತು. ಈ ಸಂದರ್ಭದಲ್ಲಿ ಅವರ ತಾಯಿಯ ಯೋಗಕ್ಷೇಮ ವಿಚಾರಿಸಿದ ಮುಖಂಡರು, ಧೈರ್ಯ ಕಳೆದುಕೊಳ್ಳದೆ ಆತ್ಮವಿಶ್ವಾಸದಿಂದ ಇರುವಂತೆ ಪ್ರೇರಣೆ ನೀಡಿದರು.

Ad Widget

Ad Widget <> Ad Widget

ಸಾಮಾಜಿಕ ಹಾಗೂ ಸಂಘಟನಾತ್ಮಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಕಾರ್ಯಕರ್ತರ ಕುಟುಂಬದೊಂದಿಗೆ ಸಮಾಜ ನಿಲ್ಲಬೇಕು ಎಂಬ ಆಶಯವನ್ನು ಈ ಸಂದರ್ಭದಲ್ಲಿ ವ್ಯಕ್ತಪಡಿಸಲಾಯಿತು.

ಭೇಟಿಯ ವೇಳೆ ಬಿಜೆಪಿ ಪುತ್ತೂರು ಮಂಡಲ ಉಪಾಧ್ಯಕ್ಷ ರತನ್ ರೈ ಕುಂಬ್ರ, ಪುತ್ತೂರು ಯುವಮೋರ್ಚಾ ನಗರ ಮಂಡಲ ಅಧ್ಯಕ್ಷ ನಿತೇಶ್ ನೆಲಪ್ಪಾಲು, ಯುವಮೋರ್ಚಾದ ಪವನ್ ಶೆಟ್ಟಿ ಕಂಬಳತ್ತಡ್ಡ, ಪ್ರೀತಮ್ ಶೆಟ್ಟಿ ಪೆರ್ನೆ, ಆದೇಶ್ ಶೆಟ್ಟಿ ಉಪ್ಪಿನಂಗಡಿ, ವಿಶ್ವನಾಥ ಕುಲಾಲ್ ಹಾಗೂ ಹಿಂದೂ ಜಾಗರಣ ವೇದಿಕೆಯ ರಾಜೇಶ್ ಉಪಸ್ಥಿತರಿದ್ದರು.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!