ಶಿಕ್ಷಣ
Vivekananda-ಭಾರತೀಯ ಜ್ಞಾನ ಶಾಖೆಗಳನ್ನು ಅಳವಡಿಸಿಕೊಂಡ ವಿದ್ಯಾಸಂಸ್ಥೆ ವಿವೇಕಾನಂದ ಸ್ವಾಯತ್ತ ಮಹಾವಿದ್ಯಾಲಯ
ಪುತ್ತೂರಿನಂತಹ ಗ್ರಾಮೀಣ ಪ್ರದೇಶದಲ್ಲಿ ಉನ್ನತ ಶಿಕ್ಷಣ ನೀಡಬೇಕೆಂಬ ಮಹದಾಸೆಯಿಂದ ಸ್ವಾತಂತ್ರ್ಯ ಪೂರ್ವದಲ್ಲಿಯೇ ಹುಟ್ಟಿಕೊಂಡ ಶಿಕ್ಷಣ ಸಂಸ್ಥೆ ಪುತ್ತೂರು ಎಜುಕೇಶನ್ ಸೊಸೈಟಿ. 1915ರಲ್ಲಿ ಸ್ಥಾಪನೆಯಾದ ಈ ಸಂಸ್ಥೆ, ರಾಷ್ಟ್ರೀಯ ಚಿಂತನೆಗಳನ್ನು ಬಲಪಡಿಸುವ ಉದ್ದೇಶವನ್ನೇ ಇಟ್ಟುಕೊಂಡು ಬೆಳೆಯಿತು. 2009ರಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಎಂದು ಮರುನಾಮಕರಣಗೊಂಡಿತು. ಪ್ರಸ್ತುತ ಶಿಶು ಶಿಕ್ಷಣದಿಂದ ಪ್ರಾರಂಭಿಸಿ ಉನ್ನತ ಶಿಕ್ಷಣದವರಗೆ ಭಾರತೀಯ ಜ್ಞಾನ ಶಾಖೆಗಳನ್ನು ಒಳಗೂಡಿಸಿಕೊಳ್ಳುತ್ತಾ ಸುಮಾರು 81 ಸಂಸ್ಥೆಗಳನ್ನು ಮುನ್ನಡೆಸುತ್ತಿದೆ.
1960ರ ದಶಕದಲ್ಲಿ ಪುತ್ತೂರಿನಲ್ಲಿ ನಡೆದ ಕೆಲವು ವಿದ್ಯಮಾನಗಳಿಂದಾಗಿ ಭಾರತೀಯ ವಿಚಾರಧಾರೆಗೆ ಒತ್ತು ಕೊಡುವ ಕಾಲೇಜಿನ ಅನಿವಾರ್ಯತೆಯನ್ನು ಮನಗಂಡು 1965ರಲ್ಲಿ ಸ್ಥಾಪನೆಯಾದ ಸಂಸ್ಥೆಯೇ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ. ಶಿಕ್ಷಣದಲ್ಲಿ ರಾಷ್ಟ್ರೀಯತೆ, ಶಿಕ್ಷಣದಲ್ಲಿ ಆಧ್ಯಾತ್ಮಿಕತೆ, ಶಿಕ್ಷಣದಲ್ಲಿ ಸಾಂಸ್ಕೃತಿಕತೆ ಎನ್ನುವ ಧ್ಯೇಯವನ್ನು ಆಳವಡಿಸಿಕೊಂಡಿದೆ. ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವವನ್ನು ನಿರ್ಮಾಣ ಮಾಡಿ ಅವರನ್ನು ದೇಶದ ಆಸ್ತಿಯನ್ನಾಗಿ ರೂಪಿಸುವ ಜವಬ್ದಾರಿಯ ಜೊತೆಗೆ ಗುಣಮಟ್ಟದ ಪರಿಣಾಮಕಾರಿ ಶಿಕ್ಷಣವನ್ನು ನೀಡುವ ಮಹತ್ತರವಾದ ಉದ್ದೇಶವನ್ನು ಇಟ್ಟುಕೊಂಡ ಸಂಸ್ಥೆಯಿದು. ಪ್ರಸ್ತುತ ಸ್ವಾಯತ್ತ ಸಂಸ್ಥೆಯಾಗಿ ರೂಪುಗೊಂಡು ತಮ್ಮ ನೆಲದ ಸಂಸ್ಕೃತಿ, ಸ್ಥಳೀಯ ಜ್ಞಾನಪರಂಪರೆ, ಜೊತೆಗೆ ಭಾರತೀಯ ಜ್ಞಾನಪರಂಪರೆಯನ್ನು ತಿಳಿಸುವ ತ್ರಿವಳಿ ಸೂತ್ರದೊಂದಿಗೆ ಉನ್ನತ ಶಿಕ್ಷಣ ನೀಡುವ ಕೆಲಸವನ್ನು ನಿರ್ವಹಿಸುತ್ತಿದೆ.

ಒಡಂಬಡಿಕೆ ಮತ್ತು ವಿಚಾರಗೋಷ್ಠಿ:
ಶಿಕ್ಷಣ, ಸಂಶೋಧನೆ ಮತ್ತು ಉದ್ಯೋಗ ಎನ್ನುವ ತ್ರಿವಳಿ ಸೂತ್ರವನ್ನು ಸಮಾಜಮುಖಿಯಾಗಿ ವಿಸ್ತರಿಸುವ ದೃಷ್ಟಿಯಿಂದ ಇಪ್ಪತ್ತೈದಕ್ಕಿಂತ ಹೆಚ್ಚು ಸಂಸ್ಥೆಗಳೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡಿದೆ. ಪ್ರತಿ ವರ್ಷವೂ ರಾಷ್ಟ್ರ ರಾಜ್ಯಮಟ್ಟದ ಹಾಗೂ ವಿದ್ಯಾರ್ಥಿ ವಿಚಾರಗೋಷ್ಠಿಗಳು ನಡೆಯುತ್ತವೆ.
ಸೌಲಭ್ಯಗಳು:
ಬೋಧನೆಗೆ ಪೂರಕವಾಗಿರುವ ಪವರ್ ಪೊಯಿಂಟ್, ಸ್ಮಾರ್ಟ್ ತರಗತಿಗಳು ಎನ್ನುವ ತಂತ್ರಜ್ಞಾನ ಆಧಾರಿತ ಕೊಠಡಿಗಳು, 80 ಸಾವಿರಕ್ಕಿಂತ ಹೆಚ್ಚು ಗ್ರಂಥಗಳಿರುವ ಗ್ರಂಥಾಲಯ, ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಪೂರಕವಾದ ಆಧುನಿಕ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡಿರುವ ಸುಧಾರಿತ ಪ್ರಯೋಗಾಲಯಗಳಿವೆ. ಸುಸಜ್ಜಿತವಾದ ಹವಾನಿಯಂತ್ರಿತ ಸಭಾಭವನ, ಪ್ರಾರ್ಥನಾ ಮಂದಿರ, ಧ್ಯಾನಮಂದಿರಗಳನ್ನು ಒಳಗೊಂಡಿದೆ. ಕಾಲೇಜಿನಲ್ಲಿ ಆಧುನಿಕ ಕಾಲದ ಅಗತ್ಯಗಳಾದ ಬ್ಯಾಂಕ್, ಎಟಿಎಂ, ಸಹಕಾರಿ ಸಂಘ, ಸ್ಟೇಷನರಿ ವ್ಯವಸ್ಥೆ, ಹುಡುಗರಿಗೆ ಮತ್ತು ಹುಡುಗಿಯರಿಗೆ ಪ್ರತ್ಯೇಕವಾದ ಹಾಸ್ಟೆಲ್, ಕ್ಯಾಂಟೀನ್, ಆರೋಗ್ಯ ಮಂದಿರ, ಆಪ್ತಸಲಹಾ ಕೇಂದ್ರ ಮುಂತಾದ ಸೌಲಭ್ಯಗಳಿವೆ.
ಉಚಿತ ಮಧ್ಯಾಹ್ನದ ಭೋಜನದ ವ್ಯವಸ್ಥೆ :
ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ “ಅನ್ನಪೂರ್ಣ” ಎನ್ನುವ ಉಚಿತ ಮಧ್ಯಾಹ್ನದ ಭೋಜನ ವ್ಯವಸ್ಥೆಯನ್ನು ಅತ್ಯಂತ ವ್ಯವಸ್ಥಿತವಾಗಿ ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದ್ದೇವೆ. ಪ್ರತೀವರ್ಷ ನೂರಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳು ಈ ಯೋಜನೆಯ ಪ್ರಯೋಜನವನ್ನು ಪಡೆಯುತ್ತಿದ್ದಾರೆ. ಯಾವುದೇ ವಿದ್ಯಾರ್ಥಿ ಹಸಿದ ಹೊಟ್ಟೆಯಲ್ಲಿರಬಾರದು ಎನ್ನುವ ಕಾಳಜಿಯಿಂದ ಹಿರಿಯರು ಈ ಯೋಜನೆಯನ್ನು ಪ್ರಾರಂಭಿಸಿದ್ದಾರೆ. ಜ್ಞಾನದಾಸೋಹದ ಜೊತೆಗೆ ಅನ್ನದಾಸೋಹವನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದ್ದೇವೆ.

ವಿದ್ಯಾರ್ಥಿವೇತನ :
ಕಳೆದ ಶೈಕ್ಷಣಿಕ (2025-26) ವರ್ಷದಲ್ಲಿ ಸುಮಾರು ೯೦೦ ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸುಮಾರು ಎಂಭತ್ತು ಲಕ್ಷ ರೂಪಾಯಿಗಳಿಗಿಂತಲೂ ಹೆಚ್ಚು ವಿದ್ಯಾರ್ಥಿವೇತನವನ್ನು ವಿತರಿಸಲಾಗಿದೆ. ಇದರಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಒಬಿಸಿ, ಬೀಡಿಕಾರ್ಮಿಕ, ಮಾತೃ ಸಂಸ್ಥೆಯಾದ ವಿವೇಕಾನಂದ ವಿದ್ಯಾವರ್ಧಕ ಸಂಘ ಕೊಡಮಾಡುವ ದತ್ತಿ ನಿಧಿ, ವಿದ್ಯಾ ನಿಧಿ, ಪ್ರಧಾನ ಮಂತ್ರಿ ಆರ್ಮಿ ವಿದ್ಯಾರ್ಥಿವೇತನದಂತಹ ಸುಮಾರು 35 ವಿಭಾಗಗಳಲ್ಲಿ ವಿದ್ಯಾರ್ಥಿವೇತನ ಪಡೆಯುವ ಅವಕಾಶಗಳಿವೆ ಮತ್ತು ಪಡೆದುಕೊಂಡಿದ್ದಾರೆ. ಇದರ ಸದುಪಯೋಗವನ್ನು ನಮ್ಮ ಸಂಸ್ಥೆಗೆ ಪ್ರವೇಶಾತಿಯನ್ನು ಪಡೆಯುವ ವಿದ್ಯಾರ್ಥಿಗಳು ಪಡೆದುಕೊಳ್ಳಬಹುದು.
ಕ್ರೀಡಾ ವಿಭಾಗ:
ವಿದ್ಯಾರ್ಥಿಗಳಲ್ಲಿ ಕ್ರೀಡೆಗೆ ಸಂಬಂಧಿಸಿದ ಚಟುವಟಿಕೆಗಳನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಪ್ರತ್ಯೇಕ ಕ್ರೀಡಾ ವಿಭಾಗವಿದೆ. ಕ್ರೀಡಾ ವಿಭಾಗಗಳಲ್ಲಿ ವಿಶ್ವವಿದ್ಯಾನಿಲಯ ಮಟ್ಟದಲ್ಲಿ, ಅಂತರ್ ವಿಶ್ವವಿದ್ಯಾನಿಲಯ ಮಟ್ಟದಲ್ಲಿ, ದಸರಾ ಕ್ರೀಡಾಕೂಟದಲ್ಲಿ, ರಾಜ್ಯ ಮಟ್ಟದಲ್ಲಿ, ರಾಷ್ಟ್ರಮಟ್ಟದಲ್ಲಿ ಬಹುಮಾನ ಪಡೆಯುವ ಸಾಮರ್ಥ್ಯದ ಕ್ರೀಡಾಪಟುಗಳನ್ನು ನಮ್ಮ ಸಂಸ್ಥೆ ರೂಪಿಸುತ್ತಿದೆ. ಇದಕ್ಕೆ ಪೂರಕವಾಗಿ 400 ಮೀಟರ್ ಓಟದ ಸ್ಪರ್ಧೆಗೆ ಅನುವಾಗುವಂತಿರುವ ವಿಶಾಲವಾದ ಕ್ರೀಡಾಂಗಣವಿದೆ. ವಾಲಿಬಾಲ್, ಫುಟ್ಬಾಲ್, ಕಬ್ಬಡ್ಡಿ, ತ್ರೊಬಾಲ್, ಶಟಲ್ ಬ್ಯಾಡ್ಮಿಂಟನ್, ಟೆನ್ನಿಸ್, ಕ್ರಿಕೇಟ್, ಕೊಕ್ಕೊ, ಚೆಸ್, ವೇಟ್ಲಿಫ್ಟಿಂಗ್ ಮುಂತಾದ ಕ್ರೀಡೆಗಳ ತರಬೇತಿಗಳು ನಿರಂತವಾಗಿ ನಡೆಯುತ್ತಿದೆ. ಇದರ ಜೊತೆಗೆ ಗ್ರಾಮೀಣ ಕ್ರೀಡೆಗಳಾದ ಲಗೋರಿ, ಹಗ್ಗಜಗ್ಗಾಟ ಮುಂತಾದವುಗಳಿಗೂ ಪ್ರೋತ್ಸಾಹ ನೀಡುತ್ತಿದ್ದೇವೆ. ವಿದ್ಯಾರ್ಥಿಗಳಿಗೆ ತರಬೇತಿಯನ್ನು ನೀಡಲು ಪೂರ್ಣಾವಧಿ ದೈಹಿಕ ಶಿಕ್ಷಣ ನಿರ್ದೇಶಕರ ತಂಡ ಕೆಲಸ ನಿರ್ವಹಿಸುತ್ತಿದೆ.
ಪಾಠ್ಯೇತರ ಚಟುವಟಿಕೆಗಳು:
ಪಾಠ್ಯೇತರ ವಿಭಾಗದಲ್ಲಿ ಇಪ್ಪತ್ತಕ್ಕಿಂತ ಹೆಚ್ಚು ಸಂಘ ಸಂಸ್ಥೆಗಳು ಕೆಲಸ ಮಾಡುತ್ತಾ, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಅಗತ್ಯವಿರುವ ಕಾರ್ಯಕ್ರಮಗಳನ್ನು ರೂಪಿಸುತ್ತಿವೆ. ಎನ್.ಸಿ.ಸಿ., ಎನ್.ಎಸ್.ಎಸ್., ರೆಡ್ಕ್ರಾಸ್, ರೋರ್ಸ್ ಮತ್ತು ರೇಂರ್ಸ್ ವಿಭಾಗಗಳು ಸಮಾಜಮುಖಿಯಾಗಿ ಕೆಲಸ ಮಾಡುತ್ತಿವೆ. ಕಳೆದ ಮೂರು ವರ್ಷಗಳಿಂದ ಸತತವಾಗಿ ಕಾಲೇಜಿನ ಎನ್ಸಿಸಿ ವಿದ್ಯಾರ್ಥಿಗಳು ನವದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗವಹಿಸುತ್ತಿರುವುದು ಸಂಸ್ಥೆಗೆ ಹೆಮ್ಮೆಯ ವಿಷಯವಾಗಿದೆ. ಇದರೊಂದಿಗೆ ಲಲಿತಕಲಾ ಸಂಘ, ಯಕ್ಷರಂಜಿನಿ ಮೊದಲಾದ ಸಂಘಗಳು ವಿದ್ಯಾರ್ಥಿಗಳಿಗೆ ಉಪಯುಕ್ತ ತರಬೇತಿಗಳನ್ನು ನೀಡುತ್ತಿವೆ.
ಉದ್ಯೋಗ ಮತ್ತು ತರಬೇತಿ:
ವಿದ್ಯಾರ್ಥಿಗಳಿಗೆ ಅವರ ಉದ್ಯೋಗದ ಆಸಕ್ತಿ ಹಾಗೂ ಅವಶ್ಯಕತೆಗೆ ಅನುಸಾರವಾಗಿ ಹಾಗೂ ಅವಶ್ಯವಿರುವ ವಿವಿಧ ಕೌಶಲ್ಯಕ್ಕೆ ಸಂಬಂಧಿಸಿ ನಿರಂತರವಾಗಿ ತರಬೇತಿಯನ್ನು ನೀಡಲಾಗುತ್ತಿದೆ. ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ, ಸಂದರ್ಶನ ಎದುರಿಸುವ ಕೌಶಲ್ಯ, ಸ್ವಪರಿಚಯವನ್ನು ಸಿದ್ಧಪಡಿಸುವ ವಿಧಾನ, ವ್ಯಕ್ತಿತ್ವ ರೂಪಿಸುವ ವಿಧಾನ ಮುಂತಾದವುಗಳ ಕುರಿತು ನಿರಂತರ ತರಬೇತಿಗಳು ನಡೆಯುತ್ತವೆ. ಕಳೆದ ಶೈಕ್ಷಣಿಕ ವರ್ಷದಲ್ಲಿ ಸುಮಾರು 200ಕ್ಕಿಂತಲೂ ಹೆಚ್ಚು ವಿದ್ಯಾರ್ಥಿಗಳಿಗೆ ಬೇರೆ ಬೇರೆ ಕಂಪೆನಿಗಳಲ್ಲಿ ಉದ್ಯೋಗದ ಅವಕಾಶಗಳು ದೊರೆತಿವೆ.
ಸರ್ಟಿಫಿಕೆಟ್ ಕೋರ್ಸುಗಳು:
ಹೊಸ ಕಾಲದಲ್ಲಿ ಅಂಕ, ವಿಷಯ ತಜ್ಞತೆಯ ಜೊತೆಗೆ ಕೌಶಲ್ಯವೂ ಆದ್ಯತೆಯ ವಿಷಯವಾಗುತ್ತಿದೆ. ಈ ದೃಷ್ಟಿಯಿಂದ ವಿಶೇಷವಾಗಿ ಉದ್ಯೋಗದ ಅವಕಾಶವನ್ನು ಹೆಚ್ಚಿಸುವ ಮತ್ತು ಸಂಶೋಧನ ಪ್ರವೃತ್ತಿಯನ್ನು ಬೆಳೆಸುವ ದೃಷ್ಟಿಯಿಂದ ಕಾಲೇಜಿನಲ್ಲಿ ಪದವಿ ಪೂರೈಸುವ ವಿದ್ಯಾರ್ಥಿಗಳಿಗೆ ಆಸಕ್ತಿಯಿರುವ ವಿಷಯದಲ್ಲಿ ಸರ್ಟಿಫಿಕೇಟ್ ಕೋರ್ಸುಗಳನ್ನು ಪೂರೈಸಲು ಅವಕಾಶ ನೀಡಿದೆ.
ಸೃಜನಶೀಲ ಮತ್ತು ಸಂಶೋಧನ ಬರವಣಿಗೆ:
ವಿದ್ಯಾರ್ಥಿಗಳಲ್ಲಿ ಬರವಣಿಗೆಯ ಆಸಕ್ತಿಯನ್ನು ಬೆಳೆಸುವ ದೃಷ್ಟಿಯಿಂದ ಪ್ರತೀವರ್ಷ ಜಾಗೃತಿ ಸಂಚಿಕೆಯನ್ನು ಪ್ರಕಟಿಸಲಾಗುವುದು. ಪತ್ರಿಕೋದ್ಯಮದಲ್ಲಿ ಆಸಕ್ತಿಯುಳ್ಳ ವಿದ್ಯಾರ್ಥಿಗಳಿಗೆ ವಿಕಸನ, ವಿಕಾಸ, ವಿನೂತನ ಪತ್ರಿಕೆಗಳು ಮತ್ತು ಮಲ್ಟಿಮೀಡಿಯ ಸ್ಟುಡಿಯೋ ಉಪಯುಕ್ತವಾಗಿವೆ. ಇದರ ಜೊತೆಗೆ ರೇಡಿಯೋ ಪಾಂಚಜನ್ಯ ಮತ್ತು ವಿಕಸನ ಯುಟ್ಯೂಬ್ ಚಾನಲ್ಗಳು ನಿರಂತರವಾಗಿ ಕಾರ್ಯಕ್ರಮಗಳನ್ನು ಬಿತ್ತರಿಸುತ್ತಿವೆ.
ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ:
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಆಸಕ್ತಿಯುಳ್ಳ ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಐಎಎಸ್, ಐಪಿಎಸ್, ಕೆಎಎಸ್ ಇತ್ಯಾದಿ ಪರೀಕ್ಷೆಗಳಿಗೆ ‘ಯಶಸ್’, ಸಿ.ಎ.ನಲ್ಲಿ ಆಸಕ್ತಿಯುಳ್ಳವರಿಗೆ ‘ವಿಕಾಸ್’ ಮತ್ತು ಶಿಕ್ಷಕ ವೃತ್ತಿಯಲ್ಲಿ ಮುಂದುವರಿಯಲು ಬಯಸುವವರಿಗೆ ‘ಭವಿಷ್’ ಘಟಕಗಳು ಕೆಲಸ ಮಾಡುತ್ತಿವೆ.
ವಿವೇಕಾನಂದ ಸಂಶೋಧನ ಕೇಂದ್ರ:
ಸಂಶೋಧನೆಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ವಿವೇಕಾನಂದ ಸಂಶೋಧನಾ ಕೇಂದ್ರವು ಕೆಲಸ ನಿರ್ವಹಿಸುತ್ತದೆ. ವಿವೇಕಾನಂದ ಸಂಶೋಧನ ಕೇಂದ್ರದ ಅಡಿಯಲ್ಲಿ ಶಿವರಾಮಕಾರಂತ ಅಧ್ಯಯನ ಕೇಂದ್ರ, ದೇರಾಜೆ ಸೀತಾರಾಮಯ್ಯ ಯಕ್ಷಗಾನ ಅಧ್ಯಯನ ಕೇಂದ್ರ, ಭಾರತೀಯ ಸಂಸ್ಕೃತಿ ಮತ್ತು ಲಲಿತಕಲೆಗಳ ಅಧ್ಯಯನ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಇವುಗಳನ್ನು ಬಳಸಿಕೊಂಡು ಸ್ಥಳೀಯ ವಿಷಯಗಳ ಕುರಿತು ಆಳವಾದ ಅಧ್ಯಯನ ಮಾಡುವ ಅವಕಾಶವಿದೆ.
ಪ್ರಶಸ್ತಿಗಳು: ವಿಶೇಷವಾಗಿ ಸೃಜನಶೀಲ ಬರವಣಿಗೆಯಲ್ಲಿ ತೊಡಗಿಸಿಕೊಂಡವರನ್ನು ಗುರುತಿಸಿ ನಿರಂಜನ ಪ್ರಶಸ್ತಿಯನ್ನು ಹಾಗೂ ವಿದ್ವತ್ತಿನ ಕ್ಷೇತ್ರದಲ್ಲಿ ಕೆಲಸ ಮಾಡಿದ ವಿದ್ವಾಂಸರನ್ನು ಗುರುತಿಸಿ ಶಂಕರ ಸಾಹಿತ್ಯ ಪ್ರಶಸ್ತಿಯನ್ನು ಪ್ರತಿ ವರ್ಷ ನೀಡಿ ಗೌರವಿಸುತ್ತಿದ್ದೇವೆ. ಒಂದು ಶಿಕ್ಷಣ ಸಂಸ್ಥೆಯಾಗಿ ಸಾಹಿತ್ಯ ಕ್ಷೇತ್ರದ ಸಾಧಕರನ್ನು ಗುರುತಿಸಿ ಪ್ರಶಸ್ತಿಯನ್ನು ನೀಡುವ ಅಪರೂಪದ ವಿದ್ಯಾಸಂಸ್ಥೆಯಿದು.
ಪ್ರಸಾರಾಂಗ : ವಿವೇಕಾನಂದ ಮಹಾವಿದ್ಯಾಲಯ ಸ್ವಾಯತ್ತ ಸಂಸ್ಥೆಯಾದ ಬಳಿಕ ಜ್ಞಾನವನ್ನು ಸಮಾಜಕ್ಕೆ ಪಸರಿಸುವ ದೃಷ್ಟಿಯಿಂದ ‘ಸೌರಭ’ ಎನ್ನುವ ಜ್ಞಾನ ಪ್ರಸಾರಾಂಗ ವಿಭಾಗವನ್ನು ಆರಂಭಿಸಿದೆ. ಇಲ್ಲಿ ವಿದ್ಯಾರ್ಥಿಗಳು ಬೇರೆ ಬೇರೆ ವಿಷಯಗಳ ಕುರಿತು ಸಂಶೋಧನೆ ಮಾಡಿದಾಗ, ಅದನ್ನು ಪ್ರಕಟಿಸುವ ಅವಕಾಶಗಳಿವೆ. ಬರವಣಿಗೆ, ಸಂಶೋಧನೆಯಲ್ಲಿ ತೊಡಗಿಸಿಕೊಂಡ ವಿದ್ಯಾರ್ಥಿಗೆ ಇದೊಂದು ಸುವರ್ಣಾವಕಾಶವಾಗಿದೆ.
ಹಿರಿಯ ವಿದ್ಯಾರ್ಥಿ ಮತ್ತು ರಕ್ಷಕ-ಶಿಕ್ಷಕ ಸಂಘ: ವಿವೇಕಾನಂದ ಸ್ವಾಯತ್ತ ಮಹಾವಿದ್ಯಾಲಯದ ಹಿರಿಯ ವಿದ್ಯಾರ್ಥಿ ಸಂಘ ಮತ್ತು ರಕ್ಷಕ ಶಿಕ್ಷಕ ಸಂಘಗಳು ಅತ್ಯಂತ ಕ್ರಿಯಾಶೀಲವಾಗಿ ಕೆಲಸ ಮಾಡುತ್ತಿವೆ.
ಅಧ್ಯಯನದ ಅವಕಾಶಗಳು
ಸ್ನಾತಕ ಪದವಿಯಲ್ಲಿ
B.A – HEP, HEK, HES, HEE
B.A. Journalism with HJE, HJK combinations
B.A. Psychology with Sociology and English (Optional)
B.Sc. – PMC, PMCs, BZC
B.Sc. Psychology with Botany and Zoology
B.Com
B.Com (Business Data Analytics)
B.Com Integrated CA/CS
BBA
BBA (Logistics)
BCA
BCA in Artificial Intelligence and Machine Learning
BCA in Cyber Security
BCA Data Science
ಸ್ನಾತಕೋತ್ತರ ಪದವಿಯಲ್ಲಿ
M.Com. Master of Commerce
M.Sc. Chemistry
M.Sc. Mathematics
M.Sc. Industrial Chemistry
M.A. in Journalism and Mass Communications
ಉದ್ದೇಶಿತ ಕೋರ್ಸುಗಳ ಅಧ್ಯಯನದ ಅವಕಾಶಗಳು
M.Sc. Corporate Psychology
B.A. Public Administration/Public Policy
ಉಚಿತ ಶಿಕ್ಷಣ: 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಪ್ರಥಮ ಕಲಾ ಮತ್ತು ಪ್ರಥಮ ವಿಜ್ಞಾನ ವಿಭಾಗಕ್ಕೆ ಸೇರುವ ಆರ್ಥಿಕವಾಗಿ ಹಿಂದುಳಿದ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗೆ ಉಚಿತ ಶಿಕ್ಷಣದ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ.
ಶಿಕ್ಷಣ
Philomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ‘ಫುಡೀಪ್ರಿನಿಯರ್’: ಆಹಾರದಿಂದ ಉದ್ಯಮದತ್ತ ವಿದ್ಯಾರ್ಥಿಗಳ ಹೆಜ್ಜೆ; ‘ಟೇಸ್ಟ್ ದಿ ಫ್ಯೂಚರ್’ ಮೂಲಕ ಸೃಜನಶೀಲತೆ, ರುಚಿ ಮತ್ತು ಉದ್ಯಮಶೀಲತೆಯ ಸಂಗಮ
ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ ಬಿಸಿನೆಸ್ ಅಡ್ಮಿನಿಸ್ಟ್ರೇಷನ್ ಮತ್ತು ಪ್ರೊಫೆಷನಲ್ ಸ್ಟಡೀಸ್ ವಿಭಾಗ ಹಾಗೂ ಮ್ಯಾನೇಜ್ಮೆಂಟ್ ಅಸೋಸಿಯೇಷನ್ ವತಿಯಿಂದ ‘ಫುಡೀಪ್ರಿನಿಯರ್–ಟೇಸ್ಟ್ ದಿ ಫ್ಯೂಚರ್’ ಎಂಬ ವಿಶಿಷ್ಟ ಉದ್ಯಮಶೀಲತಾ ಕಾರ್ಯಕ್ರಮವನ್ನು ಅ. 6 ರಂದು ಎಸ್ಜೆಎಂ ಸಭಾಂಗಣದಲ್ಲಿ ಆಯೋಜಿಸಲಾಯಿತು.

ಪುತ್ತೂರು: ಆಹಾರವನ್ನು ಕೇವಲ ರುಚಿಯ ಅನುಭವಕ್ಕೆ ಸೀಮಿತಗೊಳಿಸದೆ, ಸೃಜನಶೀಲತೆ, ನವೀನತೆ ಹಾಗೂ ಉದ್ಯಮಶೀಲತೆಯ ಅವಕಾಶವಾಗಿ ಪರಿವರ್ತಿಸುವ ಉದ್ದೇಶದಿಂದ ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ ಬಿಸಿನೆಸ್ ಅಡ್ಮಿನಿಸ್ಟ್ರೇಷನ್ ಮತ್ತು ಪ್ರೊಫೆಷನಲ್ ಸ್ಟಡೀಸ್ ವಿಭಾಗ ಹಾಗೂ ಮ್ಯಾನೇಜ್ಮೆಂಟ್ ಅಸೋಸಿಯೇಷನ್ ವತಿಯಿಂದ ‘ಫುಡೀಪ್ರಿನಿಯರ್–ಟೇಸ್ಟ್ ದಿ ಫ್ಯೂಚರ್’ ಎಂಬ ವಿಶಿಷ್ಟ ಉದ್ಯಮಶೀಲತಾ ಕಾರ್ಯಕ್ರಮವನ್ನು ಅ. 6 ರಂದು ಎಸ್ಜೆಎಂ ಸಭಾಂಗಣದಲ್ಲಿ ಆಯೋಜಿಸಲಾಯಿತು.

ಆಹಾರ ಕ್ಷೇತ್ರದಲ್ಲಿ ಹೆಚ್ಚುತ್ತಿರುವ ಉದ್ಯಮಾವಕಾಶಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವುದರೊಂದಿಗೆ, ಸಣ್ಣ ಆಲೋಚನೆಯನ್ನು ಉತ್ಪನ್ನವಾಗಿ, ಉತ್ಪನ್ನವನ್ನು ಬ್ರ್ಯಾಂಡ್ ಆಗಿ ಹಾಗೂ ಬ್ರ್ಯಾಂಡ್ ಅನ್ನು ಯಶಸ್ವಿ ಉದ್ಯಮವಾಗಿ ರೂಪಿಸುವ ಚಿಂತನೆ ಬೆಳೆಸುವ ಉದ್ದೇಶದಿಂದ. ಆಹಾರ ತಯಾರಿಕೆ, ಪ್ರಸ್ತುತಿ, ಗ್ರಾಹಕರ ಆಕರ್ಷಣೆ, ಮಾರುಕಟ್ಟೆ ಹಾಗೂ ಉದ್ಯಮದ ಸಾಧ್ಯತೆಗಳ ಕುರಿತು ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಅನುಭವವನ್ನು ಒದಗಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ರೆ. ಡಾ. ಆಂಟನಿ ಪ್ರಕಾಶ್ ಮೊಂತೆರೊ ಮಾತನಾಡಿ, ವಿದ್ಯಾರ್ಥಿಗಳು ಕೇವಲ ಉದ್ಯೋಗಕ್ಕಾಗಿ ಕಾಯದೆ, ತಮ್ಮ ಜ್ಞಾನ ಮತ್ತು ಸೃಜನಶೀಲತೆಯನ್ನು ಬಳಸಿಕೊಂಡು ಉದ್ಯೋಗ ಸೃಷ್ಟಿಸುವ ಉದ್ಯಮಿಗಳಾಗಬೇಕು ಎಂದು ಕರೆ ನೀಡಿ, ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ನಾಯಕತ್ವ ಗುಣ ಹಾಗೂ ಉದ್ಯಮಶೀಲ ಮನೋಭಾವ ಬೆಳೆಸಲು ಸಹಕಾರಿಯಾಗುತ್ತವೆ ಎಂದರು.
ಮುಖ್ಯ ಅತಿಥಿಯಾಗಿದ್ದ ದಕ್ಷಿಣ ಕನ್ನಡ ಮ್ಯೂಚುವಲ್ ಬೆನಿಫಿಟ್ ನಿಧಿ ಲಿಮಿಟೆಡ್ನ ಅಧ್ಯಕ್ಷ ಹಾಗೂ ಪುತ್ತೂರಿನ ಹೋಟೆಲ್ ವಿಶ್ವ ರಂಜಿನಿಯ ವ್ಯವಸ್ಥಾಪಕ ಪಾಲುದಾರ ವಿ.ಜೆ. ಪುನೀತ್ ಮಾತನಾಡಿ, ಆಹಾರ ಮತ್ತು ಆತಿಥ್ಯ ಕ್ಷೇತ್ರದಲ್ಲಿ ಯುವಜನರಿಗೆ ಲಭ್ಯವಿರುವ ವಿವಿಧ ಉದ್ಯಮಾವಕಾಶಗಳ ಕುರಿತು ಮಾಹಿತಿ ನೀಡಿದರು. ಸ್ಥಳೀಯ ಸಂಪನ್ಮೂಲಗಳು, ಹೊಸ ಆಲೋಚನೆಗಳು ಹಾಗೂ ಗುಣಮಟ್ಟದ ಉತ್ಪನ್ನಗಳನ್ನು ಸಮರ್ಪಕವಾಗಿ ಬಳಸಿಕೊಂಡರೆ ಸಣ್ಣ ಪ್ರಯತ್ನವನ್ನೂ ಯಶಸ್ವಿ ಉದ್ಯಮವನ್ನಾಗಿ ಬೆಳೆಸಬಹುದು ಎಂದು ವಿದ್ಯಾರ್ಥಿಗಳನ್ನು ಪ್ರೇರೇಪಿಸಿದರು.

‘ಫುಡೀಪ್ರಿನಿಯರ್’ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ತಮ್ಮ ಸೃಜನಶೀಲತೆ, ತಂಡಕಾರ್ಯ, ವ್ಯವಹಾರಿಕ ಚಿಂತನೆ, ಸಂವಹನ ಕೌಶಲ ಹಾಗೂ ಮಾರುಕಟ್ಟೆ ಅರಿವನ್ನು ಪ್ರದರ್ಶಿಸಲು ಅವಕಾಶ ಪಡೆದು ,ಆಹಾರವನ್ನು ಕೇಂದ್ರವಾಗಿಟ್ಟುಕೊಂಡು ಹೊಸ ಆಲೋಚನೆಗಳನ್ನು ರೂಪಿಸುವ ಮೂಲಕ ಭವಿಷ್ಯದಲ್ಲಿ ಸ್ವಂತ ಉದ್ಯಮ ಆರಂಭಿಸುವ ಸಾಧ್ಯತೆಗಳ ಬಗ್ಗೆಯೂ ಅರಿವು ಪಡೆದರು.
ಕಾರ್ಯಕ್ರಮದ ಪ್ರಸ್ತಾವಿಕ ಮಾತುಗಳನ್ನು ಪ್ರಶಾಂತ್ ರೈ ಪಿ. ನೆರವೇರಿಸಿ, ಮ್ಯಾನೇಜ್ಮೆಂಟ್ ಅಸೋಸಿಯೇಷನ್ ಅಧ್ಯಕ್ಷ ಹಾಗೂ ತೃತೀಯ ಬಿಬಿಎ ವಿದ್ಯಾರ್ಥಿ ಪ್ರಕೃತ್ ಜಿ.ಕೆ. ಅತಿಥಿಗಳನ್ನು ಸ್ವಾಗತಿಸಿ, ತೃತೀಯ ಬಿಬಿಎ ವಿದ್ಯಾರ್ಥಿ ಭವತ್ ಬಿ.ಎಲ್. ವಂದನಾರ್ಪಣೆ ಸಲ್ಲಿಸಿ, ದ್ವಿತೀಯ ಬಿಬಿಎ (ಬಿಸಿನೆಸ್ ಅನಾಲಿಟಿಕ್ಸ್) ವಿದ್ಯಾರ್ಥಿನಿ ಸಮೃದ್ಧಿ ಚೌಟಾ ಕಾರ್ಯಕ್ರಮ ನಿರೂಪಿಸಿದರು.ಬಿಸಿನೆಸ್ ಅಡ್ಮಿನಿಸ್ಟ್ರೇಷನ್ ಮತ್ತು ಪ್ರೊಫೆಷನಲ್ ಸ್ಟಡೀಸ್ ವಿಭಾಗದ ಡೀನ್ ಹಾಗೂ ಮುಖ್ಯಸ್ಥ ಡಾ. ರಾಧಾಕೃಷ್ಣ ಗೌಡ ವಿ. ಉಪಸ್ಥಿತರಿದ್ದರು.
‘ಟೇಸ್ಟ್ ದಿ ಫ್ಯೂಚರ್’ ಆಶಯದೊಂದಿಗೆ ನಡೆದ ‘ಫುಡೀಪ್ರಿನಿಯರ್’ ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ಆಹಾರದ ರುಚಿಯೊಂದಿಗೆ ಉದ್ಯಮದ ರುಚಿಯನ್ನೂ ಪರಿಚಯಿಸಿ, “ಒಂದು ಆಲೋಚನೆ, ಒಂದು ಪ್ರಯತ್ನ, ಒಂದು ಉದ್ಯಮ” ಎಂಬ ಮನೋಭಾವವನ್ನು ವಿದ್ಯಾರ್ಥಿಗಳಲ್ಲಿ ಮೂಡಿಸುವಲ್ಲಿ ಯಶಸ್ವಿಯಾಯಿತು.
ಶಿಕ್ಷಣ
Vivekananda-ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟ -ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯು ಪದವಿಪೂರ್ವ ಕಾಲೇಜು, ತುಂಬೆ ಇಲ್ಲಿ ನಡೆಯಿತು. ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಪದಕಗಳನ್ನು ಪಡೆದುಕೊಂಡಿರುತ್ತಾರೆ.
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯು ಪದವಿಪೂರ್ವ ಕಾಲೇಜು, ತುಂಬೆ ಇಲ್ಲಿ ನಡೆಯಿತು. ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಪದಕಗಳನ್ನು ಪಡೆದುಕೊಂಡಿರುತ್ತಾರೆ.
ಬಾಲಕಿಯರ ತಂಡದಲ್ಲಿ ಪ್ರಥಮ ವಿಜ್ಞಾನ ವಿಭಾಗದ ಖುಷಿ ೪೪ ಕೆ.ಜಿ, ದ್ರಿಶ್ಯ 68 ಕೆ .ಜಿ ವಿಭಾಗ ಬೆಳ್ಳಿ ಪದಕ, ಪ್ರಥಮ ವಾಣಿಜ್ಯ ವಿಭಾಗದ ಸಾನ್ವಿ 64 ಕೆ. ಜಿ ವಿಭಾಗ ಕಂಚಿನ ಪದಕ. ಬಾಲಕರ ವಿಭಾಗದಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಘನಶ್ಯಾಮ್ ೫೦ ಕೆ.ಜಿ ವಿಭಾಗ ಬೆಳ್ಳಿ ಪದಕ ಪಡೆದಿರುತ್ತಾರೆ.
ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ ,ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
ಶಿಕ್ಷಣ
Vivekananda-ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಇಬ್ಬರು ಉಪನ್ಯಾಸಕರಿಗೆ ಡಾಕ್ಟರೇಟ್ ಪದವಿ
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಇಬ್ಬರು ಸಹಾಯಕ ಪ್ರಾಧ್ಯಾಪಕರು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿಯನ್ನು ಪಡೆದುಕೊಂಡಿದ್ದಾರೆ.
ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಇಬ್ಬರು ಸಹಾಯಕ ಪ್ರಾಧ್ಯಾಪಕರು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿಯನ್ನು ಪಡೆದುಕೊಂಡಿದ್ದಾರೆ.
ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ 14 ವರ್ಷಗಳ ಬೋಧನಾನುಭವ ಹೊಂದಿರುವ ಸಹಾಯಕ ಪ್ರಾಧ್ಯಾಪಕ ಪ್ರಮೋದ್ ಕುಮಾರ್.ಪಿ.ಎಮ್ ಅರೇಕಾ ಪ್ಲಾಂಟ್ ಡಿಸೀಸ್ ಐಡೆಂಟಿಫಿಕೇಶನ್ ಎಂಡ್ ಕ್ಲಾಸಿಫಿಕೇಶನ್ ಯೂಸಿಂಗ್ ಡೀಪ್ ಲರ್ನಿಂಗ್ ಟೆಕ್ನಿಕ್ಸ್(Areca Plant Disease identification and classification using deep learning techniques) ಎನ್ನುವ ವಿಷಯದ ಬಗ್ಗೆ ತಿಪಟೂರಿನ ಕಲ್ಪತರು ಇನ್ಸಿ÷್ಟಟ್ಯೂಟ್ ಆಫ್ ಟೆಕ್ನಾಲಜಿಯ ಡಾ.ರವಿಪ್ರಕಾಶ್.ಎಮ್.ಎಲ್ ಅವರ ಮಾರ್ಗದರ್ಶನದಲ್ಲಿ ಡಾಕ್ಟರೇಟ್ ಪದವಿಯನ್ನು ಪಡೆದುಕೊಂಡಿದ್ದಾರೆ.
ಶ್ರೀಮತಿ ಅಕ್ಷಯ.ಡಿ.ಶೆಟ್ಟಿ ಇವರು ಡಿಸೈನ್ ಎಂಡ್ ವ್ಯಾಲಿಡೇಶನ್ ಆಫ್ ಗ್ಯಾಲ್ವೇನಿಕ್ ಸ್ಕಿನ್ ರೆಸ್ಪೊನ್ಸ್ ಡಿವೈಸ್ ಫಾರ್ ಟ್ರೀಟ್ಮೆಂಟ್ ಆಫ್ ನ್ಯೂರೋಲಾಜಿಕಲ್ ಎಂಡ್ ಸೈಕಿಯಾಟ್ರಿಕ್ ಡಿಸಾರ್ಡರ್ಸ್ (Design and Validation of galvanic skin response (GSR) device for treatment of neurological and psychiatric disorders) ಎನ್ನುವ ವಿಷಯದ ಬಗ್ಗೆ ಎಸ್.ಇ.ಎ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಪ್ರೊಫೆಸರ್ ಹಾಗೂ ಡೀನ್(ಆರ್&ಡಿ) ಆಗಿರುವ ಡಾ.ಉಷಾ ದೇಸಾಯಿ ಮತ್ತು ಸೆಂಟ್ರಲ್ ಯುನಿವರ್ಸಿಟಿ ಹರ್ಯಾಣದ ಇಲೆಕ್ಟ್ರಿಕಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಹಾಗೂ ಪ್ರೊಫೆಸರ್ ಡಾ. ಆಕಾಶ್ ಸಕ್ಸೇನ ಅವರ ಮಾರ್ಗದರ್ಶನದಲ್ಲಿ ಪಿಎಚ್ಡಿ ಪದವಿಯನ್ನು ಪಡೆದುಕೊಂಡಿದ್ದಾರೆ.
ಇವರು ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಎಂಡ್ ಮೆಶಿನ್ ಲರ್ನಿಂಗ್ ವಿಭಾಗದಲ್ಲಿ 9 ವರ್ಷಗಳಿಂದ ಸಹಾಯಕ ಪ್ರಾಧ್ಯಾಪಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಇವರ ಸಾಧನೆಗೆ ಆಡಳಿತ ಮಂಡಳಿ, ಉಪನ್ಯಾಸಕರು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ ಎಂದು ಪ್ರಭಾರ ಪ್ರಾಂಶುಪಾಲ ಡಾ.ಶ್ರೀಕಾಂತ್ ರಾವ್.ಎಸ್.ಕೆ ತಿಳಿಸಿದ್ದಾರೆ.
-
ನಿಧನ ವಾರ್ತೆ22 hours agoSullia-Big Breaking: ಸುಳ್ಯ: ವಿದ್ಯುತ್ ಶಾಕ್ಗೆ ಇಬ್ಬರು ಯುವಕರು ಬಲಿ; ಬಾಲಕನಿಗೆ ಗಾಯ
-
ನಿಧನ ವಾರ್ತೆ16 hours agoKalmadka-ಸುಳ್ಯ ಕಲ್ಮಡ್ಕದಲ್ಲಿ ದುರಂತ: ವಿದ್ಯುತ್ ಸ್ಪರ್ಶಿಸಿ ಮೀನು ಹಿಡಿಯಲು ಹೋದ ಬಾವ–ಬಾಮೈದ ಸಾವು
-
ಸ್ಥಳೀಯ21 hours agoArrested-1,000 ಅಡಿ ಆಳದ ಪ್ರಪಾತದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಶವ ಪತ್ತೆ; ಆತ್ಮಹತ್ಯೆ ಕತೆ ಕಟ್ಟಿದ ಪ್ರಿಯಕರ ಅರೆಸ್ಟ್..!
-
ಮಂಗಳೂರು19 hours agoSoujanya Case-BIG BREAKING NEWS: ಸೌಜನ್ಯ ಪ್ರಕರಣ: ಮಂಗಳೂರಿನಲ್ಲಿ ಎಸ್ಐಟಿ ಮಹತ್ವದ ಸಭೆ; ಸೌಜನ್ಯ ದೇಹ ಸಿಕ್ಕ ಸ್ಥಳಕ್ಕೆ ಭೇಟಿ ಸಾಧ್ಯತೆ
-
ಸ್ಥಳೀಯ21 hours agoSatish Patri-ಚಿಕ್ಕಮಗಳೂರು: ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾರ ಆರೋಪ; ತಲೆಮರೆಸಿಕೊಂಡಿದ್ದ ಅರ್ಚಕ ಸತೀಶ್ ಪಾತ್ರಿ ಅರೆಸ್ಟ್..!
-
Uncategorized14 hours agoLawyer Amrutesh-ಸೌಜನ್ಯ ಪ್ರಕರಣ ಮರುತನಿಖೆ : ಸಂತೋಷ್ ರಾವ್ ವಿರುದ್ಧ ಬಲವಾದ ಸಾಕ್ಷ್ಯಗಳಿವೆ: ಧಾರ್ಮಿಕ ಕ್ಷೇತ್ರದ ಮೇಲೆ ಷಡ್ಯಂತ್ರ ನಡೆಯುತ್ತಿದೆ : ಹೈಕೋರ್ಟ್ ವಕೀಲ ಅಮೃತೇಶ್
-
ಶಿಕ್ಷಣ16 hours agoVivekananda-ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಇಬ್ಬರು ಉಪನ್ಯಾಸಕರಿಗೆ ಡಾಕ್ಟರೇಟ್ ಪದವಿ
-
ಬಿಗ್ ನ್ಯೂಸ್16 hours agoVitla-ವಿಟ್ಲ: ಕಾರು–ಆಕ್ಟಿವಾ ಡಿಕ್ಕಿ; ಸವಾರನಿಗೆ ಗಂಭೀರ ಗಾಯ


















