ಅಪರಾಧ
Mangalore-ಮಂಗಳೂರು: ಪರಿಶೀಲನೆ ನಡೆಸದೆ 31 ಜನರಿಗೆ PCC ವಿತರಣೆ; ಬಜಪೆ ಠಾಣೆಯ ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು..!
ಯಾವುದೇ ರೀತಿಯ ಪೂರ್ವಾಪರ ಪರಿಶೀಲನೆ ನಡೆಸದೆ ರಹಸ್ಯವಾಗಿ 31 ಜನರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್ (PCC) ನೀಡಿದ ಗಂಭೀರ ಆರೋಪದ ಮೇಲೆ ಮಂಗಳೂರಿನ ಬಜಪೆ ಪೊಲೀಸ್ ಠಾಣೆಯ ಇಬ್ಬರು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.
ಮಂಗಳೂರು: ಯಾವುದೇ ರೀತಿಯ ಪೂರ್ವಾಪರ ಪರಿಶೀಲನೆ ನಡೆಸದೆ ರಹಸ್ಯವಾಗಿ 31 ಜನರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್ (PCC) ನೀಡಿದ ಗಂಭೀರ ಆರೋಪದ ಮೇಲೆ ಮಂಗಳೂರಿನ ಬಜಪೆ ಪೊಲೀಸ್ ಠಾಣೆಯ ಇಬ್ಬರು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.
ಮಂಗಳೂರು ಹೊರವಲಯದ ಬಜಪೆ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಸಿಬ್ಬಂದಿ ಆಶಾ ಹಾಗೂ ಮಂಜುನಾಥ್ ಎಂಬುವವರೇ ಅಮಾನತುಗೊಂಡವರು.
ಇವರು ಎಂ.ಆರ್.ಪಿ.ಎಲ್ (MRPL) ಸಂಸ್ಥೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸಕ್ಕೆ ಸೇರಿದ್ದ ಅಸ್ಸಾಂ ಮತ್ತು ಬಿಹಾರ್ ಮೂಲದ ಸುಮಾರು 31 ವ್ಯಕ್ತಿಗಳಿಗೆ ಯಾವುದೇ ಕ್ರಾಸ್ ವೆರಿಫಿಕೇಶನ್ ಮಾಡದೆ PCC ನೀಡಿದ್ದಾರೆ ಎನ್ನಲಾಗಿದೆ.
ಗಂಭೀರ ಕರ್ತವ್ಯ ಲೋಪ:
ನಿಯಮದ ಪ್ರಕಾರ, PCC ನೀಡುವ ಮುನ್ನ ಐಸಿಜೆಎಸ್ (ICJS) ಮತ್ತು ಸಿಸಿಐಎಸ್ (CCIS) ತಂತ್ರಾಂಶಗಳ ಮೂಲಕ ವ್ಯಕ್ತಿಯ ಹಿನ್ನೆಲೆಯನ್ನು ಪರಿಶೀಲಿಸಬೇಕು. ಆದರೆ, ಈ ಸಿಬ್ಬಂದಿಗಳು ಠಾಣಾಧಿಕಾರಿಯ ಪಾಸ್‌ವರ್ಡ್ ಅನ್ನು ದುರುಪಯೋಗಪಡಿಸಿಕೊಂಡು ಈ ತಂತ್ರಾಂಶಗಳನ್ನು ಪರಿಶೀಲಿಸದೆಯೇ ಸರ್ಟಿಫಿಕೇಟ್ ವಿತರಿಸಿದ್ದಾರೆ. ಇದರಿಂದಾಗಿ ಕ್ರಿಮಿನಲ್ ಹಿನ್ನೆಲೆ ಹೊಂದಿರುವ ಅಥವಾ ದೇಶವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾದವರಿಗೂ ಪಿಸಿಸಿ ಸಿಕ್ಕಿರಬಹುದು ಎಂಬ ಆತಂಕ ವ್ಯಕ್ತವಾಗಿದೆ.
ಲಂಚದ ಆರೋಪ ಮತ್ತು ಬಂಧನ:
ಮಧ್ಯವರ್ತಿಗಳಾದ ಭರತ್ ಎಕ್ಕಾರ್ ಮತ್ತು ಮಮತಾ ಎಂಬುವವರ ಮೂಲಕ ಹಣ ಪಡೆದು ಈ ಅಕ್ರಮ ಎಸಗಿರುವುದು ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಭರತ್ ಮತ್ತು ಮಮತಾರನ್ನು ಈಗಾಗಲೇ ವಶಕ್ಕೆ ಪಡೆದಿದ್ದಾರೆ.
ಎಸಿಪಿ ಶ್ರೀಕಾಂತ್ ಅವರ ನೇತೃತ್ವದಲ್ಲಿ ಪ್ರಕರಣದ ಸಮಗ್ರ ತನಿಖೆ ನಡೆಯುತ್ತಿದೆ. ಈ ಸಿಬ್ಬಂದಿಗಳು ಈ ಹಿಂದೆಯೂ ಇದೇ ರೀತಿ ಹಲವಾರು ಜನರಿಗೆ ಅಕ್ರಮವಾಗಿ PCC ನೀಡಿರುವ ಶಂಕೆ ವ್ಯಕ್ತವಾಗಿದೆ. ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 336(2), (3), 340(2), 316(5), ಮತ್ತು 318(4) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಅಂತರ ರಾಜ್ಯ
Blackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್‌ಮೇಲ್..!
ಮುಂಬೈನ ಬೊರಿವಲಿ ಪ್ರದೇಶದ ಹೋಟೆಲ್‌ವೊಂದರಲ್ಲಿ ಮೈಸೂರು ಮಸಾಲೆ ದೋಸೆಯಲ್ಲಿ ಸತ್ತ ಇಲಿ ಪತ್ತೆಯಾದ ಪ್ರಕರಣಕ್ಕೆ ಇದೀಗ ಅಚ್ಚರಿಯ ತಿರುವು ಸಿಕ್ಕಿದೆ. ಘಟನೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಮತ್ತಷ್ಟು ವೈರಲ್ ಮಾಡುವುದಾಗಿ ಬೆದರಿಸಿ ಹೋಟೆಲ್ ಮಾಲೀಕರಿಂದ ₹25 ಲಕ್ಷಕ್ಕೆ ಬೇಡಿಕೆ ಇಟ್ಟ ಆರೋಪದಲ್ಲಿ, ದೂರು ನೀಡಿದ್ದ ಮಹಿಳೆಯನ್ನೇ ಪೊಲೀಸರು ಬಂಧಿಸಿದ್ದಾರೆ.
ಮುಂಬೈ: ಮುಂಬೈನ ಬೊರಿವಲಿ ಪ್ರದೇಶದ ಹೋಟೆಲ್‌ವೊಂದರಲ್ಲಿ ಮೈಸೂರು ಮಸಾಲೆ ದೋಸೆಯಲ್ಲಿ ಸತ್ತ ಇಲಿ ಪತ್ತೆಯಾದ ಪ್ರಕರಣಕ್ಕೆ ಇದೀಗ ಅಚ್ಚರಿಯ ತಿರುವು ಸಿಕ್ಕಿದೆ. ಘಟನೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಮತ್ತಷ್ಟು ವೈರಲ್ ಮಾಡುವುದಾಗಿ ಬೆದರಿಸಿ ಹೋಟೆಲ್ ಮಾಲೀಕರಿಂದ ₹25 ಲಕ್ಷಕ್ಕೆ ಬೇಡಿಕೆ ಇಟ್ಟ ಆರೋಪದಲ್ಲಿ, ದೂರು ನೀಡಿದ್ದ ಮಹಿಳೆಯನ್ನೇ ಪೊಲೀಸರು ಬಂಧಿಸಿದ್ದಾರೆ.
ಸೆ.24ರಂದು ಮಾನ್ಸಿ ಎಂಬ ಮಹಿಳೆ ತನ್ನ ಮಗುವಿನೊಂದಿಗೆ ಇಬ್ಬರು ಪುರುಷರ ಜತೆ ಬೊರಿವಲಿಯ ಹೋಟೆಲ್‌ಗೆ ತೆರಳಿದ್ದರು. ಈ ವೇಳೆ ಮೈಸೂರು ಮಸಾಲೆ ದೋಸೆ ಆರ್ಡರ್ ಮಾಡಿದ್ದರು. ದೋಸೆ ತಿನ್ನುವ ಸಂದರ್ಭದಲ್ಲಿ ಅದರೊಳಗೆ ಸತ್ತ ಸಣ್ಣ ಇಲಿ ಪತ್ತೆಯಾಗಿದೆ ಎಂದು ಅವರು ಆರೋಪಿಸಿದ್ದರು.
ಮಾನ್ಸಿ ಅವರ ಹೇಳಿಕೆಯಂತೆ, ಅವರ ಸಹೋದರ ದೋಸೆಯ ಕೆಲವು ಭಾಗಗಳನ್ನು ಸೇವಿಸಿದ ಬಳಿಕ ಅದರೊಳಗೆ ಸತ್ತ ಇಲಿ ಇರುವುದನ್ನು ಗಮನಿಸಿದ್ದರು. ಇದರಿಂದ ಆಘಾತಗೊಂಡ ಅವರು ವಾಂತಿ ಮಾಡಿಕೊಂಡಿದ್ದರು. ಬಳಿಕ ಮಾನ್ಸಿ ಬೊರಿವಲಿ ಪೊಲೀಸ್ ಠಾಣೆಗೆ ಕರೆ ಮಾಡಿ ಘಟನೆ ಕುರಿತು ದೂರು ನೀಡಿದ್ದರು.
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ, ಆಹಾರ ಮತ್ತು ಔಷಧ ಆಡಳಿತ (FDA) ಇಲಾಖೆ ಸೆ.28ರಂದು ಹೋಟೆಲ್‌ನ ಪರವಾನಗಿಯನ್ನು ಅಮಾನತುಗೊಳಿಸಿತ್ತು. ಇದರಿಂದ ಹೋಟೆಲ್ ಮುಚ್ಚುವ ಪರಿಸ್ಥಿತಿ ಎದುರಾಗಿತ್ತು.
₹25 ಲಕ್ಷಕ್ಕೆ ಬ್ಲ್ಯಾಕ್‌ಮೇಲ್
ವಿಡಿಯೋ ವೈರಲ್ ಆದ ಬಳಿಕ ಹೋಟೆಲ್ ಮಾಲೀಕರಿಗೆ ಬೆದರಿಕೆ ಕರೆಗಳು ಬರಲಾರಂಭಿಸಿದ್ದವು. ವಿಡಿಯೋವನ್ನು ಮತ್ತಷ್ಟು ವೈರಲ್ ಮಾಡುವುದಾಗಿ ಹಾಗೂ ಸಂಬಂಧಿಕರಿಗೆ ಕಳುಹಿಸುವುದಾಗಿ ಬೆದರಿಸಿ ₹25 ಲಕ್ಷ ನೀಡುವಂತೆ ಒತ್ತಾಯಿಸಲಾಗಿತ್ತು ಎನ್ನಲಾಗಿದೆ.
ನಿರಂತರ ಬೆದರಿಕೆ ಮತ್ತು ಮಾನಸಿಕ ಕಿರುಕುಳದಿಂದಾಗಿ ಹೋಟೆಲ್ ಮಾಲೀಕರು ₹6 ಲಕ್ಷಕ್ಕೆ ಒಪ್ಪಂದ ಮಾಡಿಕೊಂಡಿದ್ದರು. ಅದರಂತೆ ₹1 ಲಕ್ಷವನ್ನು ಮುಂಗಡವಾಗಿ ನಗದು ರೂಪದಲ್ಲಿ ನೀಡಿದ್ದರು.
ಹಣ ಪಡೆಯುವ ವೇಳೆ ರೆಡ್‌ಹ್ಯಾಂಡ್ ಆಗಿ ಬಂಧನ
ಸೆ.29ರಂದು ಹೋಟೆಲ್ ಮಾಲೀಕರು ಬೊರಿವಲಿ ಪೊಲೀಸರಿಗೆ ದೂರು ನೀಡಿದ್ದರು. ಬಳಿಕ ಪೊಲೀಸರು ಬಲೆ ಬೀಸಿ, ಮತ್ತಷ್ಟು ಹಣ ಪಡೆಯಲು ಮಹಿಳೆಯನ್ನು ಕರೆಸಿಕೊಂಡಿದ್ದರು. ಹಣ ಸ್ವೀಕರಿಸುತ್ತಿದ್ದ ವೇಳೆ ಪೊಲೀಸರು ಆಕೆಯನ್ನು ರೆಡ್‌ಹ್ಯಾಂಡ್ ಆಗಿ ಬಂಧಿಸಿದ್ದಾರೆ.
ತನಿಖೆ ವೇಳೆ ಬಂಧಿತ ಮಹಿಳೆ ಬೇರೆ ಯಾರೂ ಅಲ್ಲ, ದೋಸೆಯಲ್ಲಿ ಸತ್ತ ಇಲಿ ಪತ್ತೆಯಾಗಿದೆ ಎಂದು ದೂರು ನೀಡಿದ್ದ ಮಾನ್ಸಿ ಅಮಿತ್ ಎಂಬುದು ಬೆಳಕಿಗೆ ಬಂದಿದೆ. ಅವರು ಬೊರಿವಲಿಯ ಗೋರೆಗಾಂವ್ ಪ್ರದೇಶದ ನಿವಾಸಿ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಕಾನೂನು ಕ್ರಮ ಕೈಗೊಂಡಿದ್ದು, ಬ್ಲ್ಯಾಕ್‌ಮೇಲ್‌ನಲ್ಲಿ ಭಾಗಿಯಾಗಿರುವ ಇತರ ಆರೋಪಿಗಳ ಪಾತ್ರದ ಬಗ್ಗೆಯೂ ತನಿಖೆ ಮುಂದುವರಿಸಿದ್ದಾರೆ.
ಅಂತರ ರಾಜ್ಯ
Premananda Ashram-ಪ್ರೇಮಾನಂದ ಆಶ್ರಮದ ಶಿಷ್ಯನ ಸಾವು ಪ್ರಕರಣಕ್ಕೆ ಟ್ವಿಸ್ಟ್: ರಕ್ತದ ಕಲೆ, ಸಿಸಿಟಿವಿ ದೃಶ್ಯಗಳ ಪರಿಶೀಲನೆ
ಪ್ರೇಮಾನಂದ ಮಹಾರಾಜರ ಆಶ್ರಮದಲ್ಲಿ ಶಿಷ್ಯ ರಸಿಕ್ ದುಲಾರಿ ನಾಲ್ಕನೇ ಮಹಡಿಯಿಂದ ಬಿದ್ದು ಮೃತಪಟ್ಟ ಪ್ರಕರಣದ ತನಿಖೆಯನ್ನು ಮಥುರಾ ಪೊಲೀಸರು ಚುರುಕುಗೊಳಿಸಿದ್ದಾರೆ. ಸೆ.25ರಂದು ನಡೆದ ಈ ಘಟನೆ ಆರಂಭದಲ್ಲಿ ಆತ್ಮಹತ್ಯೆ ಎಂದು ಪೊಲೀಸರು ಪರಿಗಣಿಸಿದ್ದರು. ಆದರೆ, ಸಿಸಿಟಿವಿ ದೃಶ್ಯಗಳು ಹಾಗೂ ತನಿಖೆಯಲ್ಲಿ ಸಿಕ್ಕಿರುವ ಕೆಲವು ಮಾಹಿತಿಗಳಿಂದ ಪ್ರಕರಣವು ಅನೂಹ್ಯ ತಿರುವು ಪಡೆದಿದೆ.
ಮಥುರಾ: ಪ್ರೇಮಾನಂದ ಮಹಾರಾಜರ ಆಶ್ರಮದಲ್ಲಿ ಶಿಷ್ಯ ರಸಿಕ್ ದುಲಾರಿ ನಾಲ್ಕನೇ ಮಹಡಿಯಿಂದ ಬಿದ್ದು ಮೃತಪಟ್ಟ ಪ್ರಕರಣದ ತನಿಖೆಯನ್ನು ಮಥುರಾ ಪೊಲೀಸರು ಚುರುಕುಗೊಳಿಸಿದ್ದಾರೆ. ಸೆ.25ರಂದು ನಡೆದ ಈ ಘಟನೆ ಆರಂಭದಲ್ಲಿ ಆತ್ಮಹತ್ಯೆ ಎಂದು ಪೊಲೀಸರು ಪರಿಗಣಿಸಿದ್ದರು. ಆದರೆ, ಸಿಸಿಟಿವಿ ದೃಶ್ಯಗಳು ಹಾಗೂ ತನಿಖೆಯಲ್ಲಿ ಸಿಕ್ಕಿರುವ ಕೆಲವು ಮಾಹಿತಿಗಳಿಂದ ಪ್ರಕರಣವು ಅನೂಹ್ಯ ತಿರುವು ಪಡೆದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 85 ಮಂದಿಯನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ರಸಿಕ್ ಅವರ ಕುಟುಂಬಸ್ಥರು, ಸ್ನೇಹಿತರು ಹಾಗೂ ಹಳೆಯ ಪರಿಚಯಸ್ಥರಿಂದಲೂ ಮಾಹಿತಿ ಪಡೆಯಲಾಗುತ್ತಿದೆ. ಆಶ್ರಮಕ್ಕೆ ಸೇರುವ ಮುನ್ನ ಅವರ ಜೀವನ ಹೇಗಿತ್ತು, ಬಳಿಕ ಅವರ ನಡೆ-ನುಡಿಯಲ್ಲಿ ಯಾವುದೇ ಬದಲಾವಣೆಯಾಗಿತ್ತೇ ಎಂಬುದನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.
ಆಶ್ರಮಕ್ಕೆ ಸೇರುವವರ ವೈಯಕ್ತಿಕ ಮೊಬೈಲ್‌ಗಳನ್ನು ಪಡೆದುಕೊಂಡು, ಬದಲಿಗೆ ಆಶ್ರಮದ ವ್ಯವಸ್ಥೆಯಲ್ಲಿರುವ ಮೊಬೈಲ್ ಮತ್ತು ಸಿಮ್ ನೀಡಲಾಗುತ್ತಿತ್ತು ಎನ್ನಲಾಗಿದೆ. ಹೀಗೆ ಮೊಬೈಲ್ ಬದಲಾಯಿಸುವ ಅಗತ್ಯ ಏನಿತ್ತು, ಆ ಮೊಬೈಲ್‌ಗಳ ಬಳಕೆಯ ಮೇಲೆ ಯಾರಾದರೂ ನಿಗಾ ಇಡುತ್ತಿದ್ದರೇ ಎಂಬುದನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.
ಆಶ್ರಮದಲ್ಲಿದ್ದವರು ಕುಟುಂಬದವರು ಹಾಗೂ ಸ್ನೇಹಿತರನ್ನು ಎಷ್ಟು ಬಾರಿ ಸಂಪರ್ಕಿಸುತ್ತಿದ್ದರು ಎಂಬುದನ್ನೂ ತನಿಖೆ ನಡೆಸಲಾಗುತ್ತಿದೆ. ರಸಿಕ್ ಅವರ ಹಳೆಯ ಮೊಬೈಲ್, ಹೊಸ ಸಿಮ್, ಕರೆಗಳ ವಿವರ ಹಾಗೂ ಸಂದೇಶಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.
ಸಾವಿಗೂ ಮುನ್ನ ಏನಾಗಿತ್ತು?
ರಸಿಕ್ ಕೊಠಡಿಯಿಂದ ಹೊರಬಂದಾಗಲೇ ಅವರ ಬಟ್ಟೆಯಲ್ಲಿ ರಕ್ತದ ಕಲೆಗಳು ಕಾಣಿಸಿಕೊಂಡಿದ್ದವು ಎಂದು ಸಿಸಿಟಿವಿ ದೃಶ್ಯಗಳಿಂದ ತಿಳಿದುಬಂದಿದೆ ಎನ್ನಲಾಗಿದೆ. ನಂತರ ಅವರು ನಾಲ್ಕನೇ ಮಹಡಿಯ ಮೇಲ್ಛಾವಣಿಗೆ ತೆರಳಿದ್ದಾರೆ. ಅಲ್ಲಿ ಕೆಲಕಾಲ ಕುಳಿತುಕೊಂಡು, ಬಳಿಕ ಮಲಗಿದ್ದರು. ನಂತರ ಎದ್ದು ನಿಂತ ಕೆಲವೇ ಕ್ಷಣಗಳಲ್ಲಿ ಮೇಲಿನಿಂದ ಕೆಳಗೆ ಬಿದ್ದಿದ್ದಾರೆ.
ರಸಿಕ್ ಅವರ ದೇಹದಲ್ಲಿ, ವಿಶೇಷವಾಗಿ ತೊಡೆಸಂಧಿ ಭಾಗದಲ್ಲಿ ಗಂಭೀರ ಗಾಯವಾಗಿರುವುದು ತನಿಖೆಯಲ್ಲಿ ಗಮನಕ್ಕೆ ಬಂದಿದೆ. ಈ ಗಾಯ ಹೇಗೆ ಉಂಟಾಯಿತು ಎಂಬುದನ್ನೂ ಪೊಲೀಸರು ಪರಿಶೀಲಿಸುತ್ತಿದ್ದಾರೆ.
ಅವರು ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಯಾವುದೇ ಮಾನಸಿಕ ಒತ್ತಡ ಅಥವಾ ಖಿನ್ನತೆಯಿಂದ ಬಳಲುತ್ತಿದ್ದರೇ ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದೆ. ಈ ಕುರಿತು ಅವರು ಕುಟುಂಬದವರು ಅಥವಾ ಸ್ನೇಹಿತರ ಬಳಿ ಏನಾದರೂ ಹೇಳಿಕೊಂಡಿದ್ದರೇ ಎಂಬುದನ್ನು ಪೊಲೀಸರು ತಿಳಿದುಕೊಳ್ಳುತ್ತಿದ್ದಾರೆ.
ಇದಲ್ಲದೆ, ಸಾವಿಗೂ ಮುನ್ನ ಅವರು ಮದ್ಯ, ಮಾದಕ ವಸ್ತು ಅಥವಾ ಇತರ ಯಾವುದೇ ಮನಸ್ಸಿನ ಮೇಲೆ ಪರಿಣಾಮ ಬೀರುವ ವಸ್ತು ಸೇವಿಸಿದ್ದರೇ ಎಂಬುದನ್ನು ತಿಳಿಯಲು ಅವರ ರಕ್ತದ ಮಾದರಿಯನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
ಸಿಸಿಟಿವಿ ದೃಶ್ಯಗಳು, ಮೊಬೈಲ್ ದಾಖಲೆ, ವೈದ್ಯಕೀಯ ವರದಿ ಹಾಗೂ ವಿಚಾರಣೆ ವೇಳೆ ಸಿಕ್ಕ ಮಾಹಿತಿಗಳನ್ನು ಆಧರಿಸಿ ರಸಿಕ್ ಅವರ ಸಾವಿಗೆ ನಿಖರ ಕಾರಣವೇನು ಎಂಬುದನ್ನು ಪೊಲೀಸರು ಪತ್ತೆಹಚ್ಚಲು ಮುಂದಾಗಿದ್ದಾರೆ.
ಅಂತರ ರಾಜ್ಯ
Fire truck-ಬಿಜೆಪಿ ಶಾಸಕನ ಬಂಗಲೆ ತೊಳೆಯಲು ಅಗ್ನಿಶಾಮಕ ವಾಹನ ಬಳಕೆ; ವಿಡಿಯೋ ವೈರಲ್ ಬಳಿಕ ₹2,700 ದಂಡ
ಗುಜರಾತ್‌ನ ದಾಹೋದ್ ಜಿಲ್ಲೆಯಲ್ಲಿ ಬಿಜೆಪಿ ಶಾಸಕರೊಬ್ಬರ ಬಂಗಲೆಯನ್ನು ಸ್ವಚ್ಛಗೊಳಿಸಲು ಅಗ್ನಿಶಾಮಕ ದಳದ ವಾಹನ ಬಳಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸಾರ್ವಜನಿಕರಿಂದಲೂ ಆಕ್ಷೇಪ ವ್ಯಕ್ತವಾಗಿದೆ.
ದಾಹೋದ್: ಗುಜರಾತ್‌ನ ದಾಹೋದ್ ಜಿಲ್ಲೆಯಲ್ಲಿ ಬಿಜೆಪಿ ಶಾಸಕರೊಬ್ಬರ ಬಂಗಲೆಯನ್ನು ಸ್ವಚ್ಛಗೊಳಿಸಲು ಅಗ್ನಿಶಾಮಕ ದಳದ ವಾಹನ ಬಳಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸಾರ್ವಜನಿಕರಿಂದಲೂ ಆಕ್ಷೇಪ ವ್ಯಕ್ತವಾಗಿದೆ.
ದೇವಗಢ್ ಬಾರಿಯಾ ಪುರಸಭೆಯ ಅಗ್ನಿಶಾಮಕ ವಾಹನವು ಧನ್‌ಪುರ್ ತಾಲೂಕಿನಲ್ಲಿರುವ ಬಿಜೆಪಿ ಶಾಸಕ ಬಚುಭಾಯ್ ಖಬಾದ್ ಅವರ ನಿವಾಸದ ಬಳಿ ನಿಂತಿದ್ದು, ಸಿಬ್ಬಂದಿ ಬಂಗಲೆಯ ಆವರಣ ಹಾಗೂ ಗೋಡೆಗಳಿಗೆ ಪೈಪ್ ಮೂಲಕ ನೀರು ಸಿಂಪಡಿಸುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ.
ವಿಡಿಯೋ ವೈರಲ್ ಆದ ಬಳಿಕ ತುರ್ತು ಸೇವೆಗೆ ಮೀಸಲಾಗಿರುವ ಅಗ್ನಿಶಾಮಕ ವಾಹನವನ್ನು ವೈಯಕ್ತಿಕ ಬಳಕೆಗೆ ಬಳಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಶಾಸಕ ಖಬಾದ್ ಅವರಿಂದ ₹2,700 ದಂಡ ವಸೂಲಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಕುರಿತು ಎಎನ್‌ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ದೇವಗಢ್ ಬಾರಿಯಾ ಪುರಸಭೆ ಅಧ್ಯಕ್ಷ ಘಮೇಶ್ ಕಲಾಲ್, ಅಗ್ನಿಶಾಮಕ ವಾಹನ ಕಳುಹಿಸುವಂತೆ ಶಾಸಕರು ಕರೆ ಮಾಡಿದ್ದರು. ಯಾವುದಾದರೂ ಗಂಭೀರ ಘಟನೆ ಸಂಭವಿಸಿರಬಹುದು ಎಂದು ಭಾವಿಸಿ ತಕ್ಷಣ ಅಗ್ನಿಶಾಮಕ ದಳವನ್ನು ಸಂಪರ್ಕಿಸಿ ವಾಹನ ಕಳುಹಿಸಿದ್ದಾಗಿ ತಿಳಿಸಿದ್ದಾರೆ.
ಆದರೆ, ಬಂಗಲೆ ಸ್ವಚ್ಛಗೊಳಿಸುವ ಉದ್ದೇಶಕ್ಕಾಗಿ ಅಗ್ನಿಶಾಮಕ ವಾಹನವನ್ನು ಬಳಸಲಾಗುತ್ತಿದೆ ಎಂಬುದು ತಮಗೆ ತಿಳಿದಿರಲಿಲ್ಲ ಎಂದು ಅಗ್ನಿಶಾಮಕ ಅಧಿಕಾರಿ ಸ್ಪಷ್ಟಪಡಿಸಿದ್ದಾರೆ.
ಬಂಗಲೆ ತೊಳೆಯಲು ವಾಹನ ಬಳಸಲಾಗುತ್ತದೆ ಎಂಬ ಮಾಹಿತಿ ಮುಂಚಿತವಾಗಿ ನೀಡಲಾಗಿರಲಿಲ್ಲ. ಈ ಕಾರಣದಿಂದ ಅಚಾತುರ್ಯ ಸಂಭವಿಸಿದೆ. ಇದೀಗ ತಪ್ಪಿತಸ್ಥರಿಂದ ದಂಡ ವಸೂಲಿ ಮಾಡಲಾಗಿದೆ ಎಂದು ಅಗ್ನಿಶಾಮಕ ಇಲಾಖೆ ತಿಳಿಸಿದೆ.
ವಿಡಿಯೋದಲ್ಲಿ ಏನಿದೆ?
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಬೃಹತ್ ಬಂಗಲೆಯೊಂದರ ಮುಂಭಾಗ ಅಗ್ನಿಶಾಮಕ ವಾಹನ ನಿಂತಿರುವುದು ಕಾಣಿಸುತ್ತದೆ. ಅಗ್ನಿಶಾಮಕ ಸಿಬ್ಬಂದಿ ಪೈಪ್‌ಗಳ ಮೂಲಕ ಬಂಗಲೆಯ ಕಂಪೌಂಡ್ ಹಾಗೂ ಗೋಡೆಗಳಿಗೆ ನೀರು ಸಿಂಪಡಿಸಿ ಸ್ವಚ್ಛಗೊಳಿಸುತ್ತಿರುವ ದೃಶ್ಯಗಳು ವಿಡಿಯೋದಲ್ಲಿವೆ.
-
ಮಂಗಳೂರು17 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
-
Uncategorized14 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
Uncategorized12 hours ago
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು
-
ಅಂತರ ರಾಜ್ಯ22 hours agoಕಾಸರಗೋಡು: ಆರ್ಎಸ್ಎಸ್ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ
-
ಸ್ಥಳೀಯ21 hours agoBeltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು
-
ಮಂಗಳೂರು24 hours agoChouta-ಫಾರಂ 7 ಕೊಟ್ಟ ಮಾತ್ರಕ್ಕೆ ಮತ ಡಿಲೀಟ್ ಆಗಲ್ಲ; ಅಕ್ರಮ ಡಿಲೀಷನ್ಗೆ ದಾಖಲೆ ತೋರಿಸಿ: ಕಾಂಗ್ರೆಸ್ಗೆ ಚೌಟ ಸವಾಲು
-
ಉದ್ಯೋಗ18 hours agoPuttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
-
ಅಂತರ ರಾಜ್ಯ16 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್‌ಮೇಲ್..!


















