ಮಂಗಳೂರು
Mangalore-ಮಂಗಳೂರು: ಜೂನ್ 21ಕ್ಕೆ ‘ನೀಟ್’ ಪರೀಕ್ಷೆ: 12 ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ
ಮಂಗಳೂರು ನಗರದಲ್ಲಿ ಜೂನ್ 21ರಂದು ನಡೆಯಲಿರುವ ನೀಟ್ (NEET-UG 2026) ಪರೀಕ್ಷೆಯನ್ನು ಸುಗಮವಾಗಿ ಮತ್ತು ದೋಷರಹಿತವಾಗಿ ನಡೆಸಲು ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ 12 ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಮಂಗಳೂರು: ನಗರದಲ್ಲಿ ಜೂನ್ 21ರಂದು ನಡೆಯಲಿರುವ ನೀಟ್ (NEET-UG 2026) ಪರೀಕ್ಷೆಯನ್ನು ಸುಗಮವಾಗಿ ಮತ್ತು ದೋಷರಹಿತವಾಗಿ ನಡೆಸಲು ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ 12 ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಮಂಗಳೂರು ನಗರದ ಉಪ ಪೊಲೀಸ್ ಆಯುಕ್ತರು (ಅಪರಾಧ ಮತ್ತು ಸಂಚಾರ) ಹಾಗೂ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿಗಳಾದ ಕೆ. ರವಿಶಂಕರ್ ಅವರು ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದಾರೆ. ಪರೀಕ್ಷಾ ದಿನದಂದು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮತ್ತು ನಕಲು ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ.
ಆದೇಶದ ಪ್ರಮುಖ ಮುಖ್ಯಾಂಶಗಳು:
ನಿಷೇಧಿತ ವಲಯ: ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ.
ಗುಂಪು ಸೇರುವುದು ನಿಷೇಧ: ಪರೀಕ್ಷಾ ಅಭ್ಯರ್ಥಿಗಳನ್ನು ಹೊರತುಪಡಿಸಿ, ಸಾರ್ವಜನಿಕರು 5 ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರುವುದು ಅಥವಾ ತಿರುಗಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.
ಜೆರಾಕ್ಸ್ ಅಂಗಡಿಗಳ ಬಂದ್: ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಮತ್ತು ಪರೀಕ್ಷೆ ಮುಗಿಯುವವರೆಗೆ ಕೇಂದ್ರದ ಸುತ್ತಲಿನ ಎಲ್ಲಾ ಜೆರಾಕ್ಸ್ ಹಾಗೂ ಕಂಪ್ಯೂಟರ್ ಅಂಗಡಿಗಳನ್ನು ಮುಚ್ಚಲು ಆದೇಶಿಸಲಾಗಿದೆ.
ಎಲೆಕ್ಟ್ರಾನಿಕ್ ಉಪಕರಣಗಳಿಗೆ ತಡೆ: ಪರೀಕ್ಷಾ ಕೇಂದ್ರದ ಆವರಣದಲ್ಲಿ ಮೊಬೈಲ್ ಫೋನ್, ಬ್ಲೂಟೂತ್, ಪೇಜರ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ಸಂವಹನ ಸಾಧನಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಕಠಿಣ ಕ್ರಮ:
ಪರೀಕ್ಷೆಯಲ್ಲಿ ನಕಲು ಮಾಡಲು ಸಹಾಯ ಮಾಡುವುದು, ಉತ್ತರಗಳನ್ನು ಚೀಟಿ ಮೂಲಕ ರವಾನಿಸುವುದು ಅಥವಾ ಮಾರಕ ಆಯುಧಗಳನ್ನು ಹೊಂದುವುದು ಶಿಕ್ಷಾರ್ಹ ಅಪರಾಧ ಎಂದು ಪರಿಗಣಿಸಲಾಗುತ್ತದೆ.
ಪರೀಕ್ಷಾ ಕೇಂದ್ರಗಳು:
ಮಂಗಳೂರಿನ ಸರ್ಕಾರಿ ಮಹಿಳಾ ಪದವಿ ಪೂರ್ವ ಕಾಲೇಜು (ಬಲ್ಮಟ), ಸರಕಾರಿ ಕಾಲೇಜು ಬಲ್ಮಟ, ಸೇಂಟ್ ಆಗ್ನೆಸ್ ಕಾಲೇಜು, ಸೇಂಟ್ ಅಲೋಶಿಯಸ್ ಕಾಲೇಜು(ವಿವಿಧ ಬ್ಲಾಕ್‌ಗಳು), ಡಾ. ದಯಾನಂದ ಪೈ-ಸತೀಶ್ ಪೈ ಗವರ್ನ್ಮೆಂಟ್ 1ನೇ ಗ್ರೇಡ್ ಕಾಲೇಜ್ ಕಾರ್ ಸ್ಟ್ರೀಟ್ ಮಂಗಳೂರು, ವಿದ್ಯಾದಾಯಿನಿ ಶಾಲೆ ಸುರತ್ಕಲ್, ಪಿಎಂ ಶ್ರೀ ಕೇಂದ್ರೀಯ ವಿದ್ಯಾಲಯ ನಂ-2 ಯೇಕ್ಕೂರು, ಯೂನಿವರ್ಸಿಟಿ ಕಾಲೇಜ್ UP ಮಾಲ್ಯ ರಸ್ತೆ ಹಂಪನಕಟ್ಟಾ, ಪಿಎಂ ಶ್ರೀ ಕೇಂದ್ರೀಯ ವಿದ್ಯಾಲಯ ನಂ-1 ಪಣಂಬೂರು, ಪಿಎಂ ಶ್ರೀ ಜವಾಹರ ನವೋದಯ ವಿದ್ಯಾಲಯ ಮುಡಿಪು ಸೇರಿದಂತೆ ಒಟ್ಟು 12 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಈ ಎಲ್ಲಾ ಕಡೆಗಳಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 163 ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ.
ಈ ಆದೇಶವು ಸರ್ಕಾರಿ ಕಾರ್ಯಕ್ರಮಗಳು ಮತ್ತು ಭದ್ರತಾ ಸಿಬ್ಬಂದಿಯ ಕರ್ತವ್ಯ ನಿರ್ವಹಣೆಗೆ ಅನ್ವಯಿಸುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಮಂಗಳೂರು
Mangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ
ಸುಲ್ತಾನ್ ಗೋಲ್ಡ್ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಸರ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಮರೆತುಹೋದ ಮಹಿಳೆಗೆ, ರಿಕ್ಷಾ ಚಾಲಕರೊಬ್ಬರು ಅದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.
ಮಂಗಳೂರು: ಸುಲ್ತಾನ್ ಗೋಲ್ಡ್ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಸರ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಮರೆತುಹೋದ ಮಹಿಳೆಗೆ, ರಿಕ್ಷಾ ಚಾಲಕರೊಬ್ಬರು ಅದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.
ಅಫ್ಜಿಲಾ ಎಂಬವರು ಸುಲ್ತಾನ್ ಗೋಲ್ಡ್ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಸರವನ್ನು ಖರೀದಿಸಿದ್ದರು. ಬಳಿಕ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನದ ಸರವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಬಿಟ್ಟು ಇಳಿದಿದ್ದರು.
ರಿಕ್ಷಾ ಚಾಲಕ ಬಸವರಾಜ ಅವರಿಗೆ ಬ್ಯಾಗ್ ಪತ್ತೆಯಾಗಿದ್ದು, ಅದರಲ್ಲಿ ಚಿನ್ನದ ನೆಕ್ಲೇಸ್ ಇರುವುದನ್ನು ಗಮನಿಸಿದ್ದಾರೆ. ಬಳಿಕ ಯಾವುದೇ ಆಸೆ, ಆಮಿಷಕ್ಕೆ ಒಳಗಾಗದೆ ಬ್ಯಾಗನ್ನು ಸುರಕ್ಷಿತವಾಗಿ ವಾರಸುದಾರರಿಗೆ ಮರಳಿಸಿದ್ದಾರೆ.
ಚಿನ್ನದ ಸರವನ್ನು ಮರಳಿ ಪಡೆದ ಅಫ್ಜಿಲಾ ಅವರು ರಿಕ್ಷಾ ಚಾಲಕ ಬಸವರಾಜ ಅವರ ಪ್ರಾಮಾಣಿಕತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಚಾಲಕನ ಈ ನಡೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.
ಅಪರಾಧ
Mangalore-ಮಂಗಳೂರು: ನಕಲಿ ಪಾಸ್‌ಪೋರ್ಟ್ ಪ್ರಕರಣ; 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ನಕಲಿ ಪಾಸ್‌ಪೋರ್ಟ್ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಬಂಧಿಸಿದೆ. ಬಂಧಿತನನ್ನು ಕಾಸರಗೋಡು ಜಿಲ್ಲೆಯ ವೇಲಾಯುಧನ್ (54) ಎಂದು ಗುರುತಿಸಲಾಗಿದೆ.
ಮಂಗಳೂರು: ನಕಲಿ ಪಾಸ್‌ಪೋರ್ಟ್ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಬಂಧಿಸಿದೆ.
ಬಂಧಿತನನ್ನು ಕಾಸರಗೋಡು ಜಿಲ್ಲೆಯ ವೇಲಾಯುಧನ್ (54) ಎಂದು ಗುರುತಿಸಲಾಗಿದೆ.
2010ರ ಜೂನ್ 22ರಂದು ನಕಲಿ ಪಾಸ್‌ಪೋರ್ಟ್ ಪಡೆದು ಬಜಪೆ ವಿಮಾನ ನಿಲ್ದಾಣದ ಮೂಲಕ ವಿದೇಶಕ್ಕೆ ತೆರಳಲು ಯತ್ನಿಸುತ್ತಿದ್ದ ವೇಳೆ ಇಮಿಗ್ರೇಷನ್ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದು ಬಜಪೆ ಪೊಲೀಸರಿಗೆ ಒಪ್ಪಿಸಿದ್ದರು.
ಈ ಸಂಬಂಧ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 419, 420, 468 ಹಾಗೂ 34 ಮತ್ತು ಪಾಸ್‌ಪೋರ್ಟ್ ಕಾಯ್ದೆ-1967ರ ಕಲಂ 12(1)(b), (d), (e) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಸೇಷನ್ಸ್ ನ್ಯಾಯಾಲಯವು 2020ರ ಡಿಸೆಂಬರ್ 1ರಂದು ಆರೋಪಿಗೆ ಒಂದು ವರ್ಷ ಆರು ತಿಂಗಳ ಶಿಕ್ಷೆ ವಿಧಿಸಿತ್ತು.
ಇದನ್ನು ಪ್ರಶ್ನಿಸಿ ವೇಲಾಯುಧನ್ ಕರ್ನಾಟಕ ಹೈಕೋರ್ಟ್‌ನಲ್ಲಿ ಕ್ರಿಮಿನಲ್ ರಿವಿಷನ್ ಪಿಟಿಷನ್ ಸಂಖ್ಯೆ 104/2021 ಸಲ್ಲಿಸಿದ್ದ. ಆದರೆ ಹೈಕೋರ್ಟ್ ಆತನ ಅರ್ಜಿಯನ್ನು ತಿರಸ್ಕರಿಸಿತ್ತು. ಬಳಿಕ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಬಂಧನಕ್ಕೆ ಒಳಗಾಗದೆ ವೇಲಾಯುಧನ್ ತಲೆಮರೆಸಿಕೊಂಡಿದ್ದ.
ಸುಮಾರು ಆರು ವರ್ಷಗಳಿಂದ ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿದ್ದ ಆತನನ್ನು ಅಕ್ಟೋಬರ್ 8ರಂದು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ವಶಕ್ಕೆ ಪಡೆದುಕೊಂಡಿದೆ. ಬಳಿಕ ಮುಂದಿನ ಕಾನೂನು ಕ್ರಮಕ್ಕಾಗಿ ಆತನನ್ನು ಬಜಪೆ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.
ಮಂಗಳೂರು
Auto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೊರಿಕ್ಷಾ ಪ್ರಯಾಣ ದರವನ್ನು ಮತ್ತೊಮ್ಮೆ ಪರಿಷ್ಕರಿಸಲಾಗಿದ್ದು, ನವೆಂಬರ್ 1ರಿಂದ ಮೊದಲ 1.5 ಕಿ.ಮೀಗೆ ಕನಿಷ್ಠ ₹40 ಹಾಗೂ ಬಳಿಕ ಪ್ರತಿ ಕಿ.ಮೀಗೆ ₹23 ದರ ನಿಗದಿಪಡಿಸಲಾಗಿದೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೊರಿಕ್ಷಾ ಪ್ರಯಾಣ ದರವನ್ನು ಮತ್ತೊಮ್ಮೆ ಪರಿಷ್ಕರಿಸಲಾಗಿದ್ದು, ನವೆಂಬರ್ 1ರಿಂದ ಮೊದಲ 1.5 ಕಿ.ಮೀಗೆ ಕನಿಷ್ಠ ₹40 ಹಾಗೂ ಬಳಿಕ ಪ್ರತಿ ಕಿ.ಮೀಗೆ ₹23 ದರ ನಿಗದಿಪಡಿಸಲಾಗಿದೆ.
ಆಗಸ್ಟ್ 28ರಂದು ಹೊರಡಿಸಿದ್ದ ಅಧಿಸೂಚನೆಯಲ್ಲಿ ಮೊದಲ 1.5 ಕಿ.ಮೀಗೆ ಕನಿಷ್ಠ ದರವನ್ನು ₹35ರಿಂದ ₹40ಕ್ಕೆ ಹೆಚ್ಚಿಸಲಾಗಿತ್ತು. ಆದರೆ, ಪ್ರತಿ ಕಿ.ಮೀಗೆ ₹20ರಂತೆ ಇದ್ದ ದರವನ್ನು ಅದೇ ರೀತಿ ಮುಂದುವರಿಸಲಾಗಿತ್ತು. 2022ರ ನವೆಂಬರ್ 23ರಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರ (ಆರ್‌ಟಿಎ) ನಿಗದಿಪಡಿಸಿದ್ದ ಪ್ರತಿ ಕಿ.ಮೀಗೆ ₹20ರ ದರವನ್ನು ಆಗಸ್ಟ್ 28ರ ಅಧಿಸೂಚನೆಯಲ್ಲಿ ಪರಿಗಣಿಸಲಾಗಿರಲಿಲ್ಲ ಎಂದು ಅ.1ರಂದು ಹೊರಡಿಸಿರುವ ಪರಿಷ್ಕೃತ ಅಧಿಸೂಚನೆಯಲ್ಲಿ ಆರ್‌ಟಿಎ ಸದಸ್ಯ ಕಾರ್ಯದರ್ಶಿ ತಿಳಿಸಿದ್ದಾರೆ.
ಆಟೊ ಚಾಲಕರು ಹಾಗೂ ಮಾಲೀಕರ ಪ್ರತಿನಿಧಿಗಳು ಕನಿಷ್ಠ ದರವನ್ನು ₹35ರಿಂದ ₹50ಕ್ಕೆ ಹಾಗೂ ಪ್ರತಿ ಕಿ.ಮೀ. ದರವನ್ನು ₹30ಕ್ಕೆ ಹೆಚ್ಚಿಸುವಂತೆ ಮನವಿ ಮಾಡಿದ್ದರು. ಇಂಧನ, ಬಿಡಿಭಾಗ ಸೇರಿದಂತೆ ನಿರ್ವಹಣಾ ವೆಚ್ಚಗಳು ಗಣನೀಯವಾಗಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ದರ ಹೆಚ್ಚಳ ಅಗತ್ಯ ಎಂದು ಅವರು ಕೋರಿದ್ದರು.
ಆದರೆ, ₹50 ಕನಿಷ್ಠ ದರ ಹಾಗೂ ಕಿ.ಮೀಗೆ ₹30ಕ್ಕೆ ದರ ಏರಿಸಿದರೆ ಸಾರ್ವಜನಿಕರು ಆಟೊರಿಕ್ಷಾ ಬಳಕೆಯಿಂದ ದೂರ ಸರಿದು ಪರ್ಯಾಯ ಸಾರಿಗೆ ವ್ಯವಸ್ಥೆಗಳತ್ತ ಮುಖ ಮಾಡುವ ಸಾಧ್ಯತೆಯಿದೆ. ಇದರಿಂದ ಆಟೊರಿಕ್ಷಾ ಚಾಲಕರು ಮತ್ತು ಮಾಲೀಕರಿಗೂ ತೊಂದರೆಯಾಗಬಹುದು ಎಂದು ಆರ್‌ಟಿಎ ಅಭಿಪ್ರಾಯಪಟ್ಟಿದೆ.
ಹೊಸ ದರ ಹೀಗಿದೆ
ಗರಿಷ್ಠ ಮೂರು ಪ್ರಯಾಣಿಕರನ್ನು ಕರೆದೊಯ್ಯುವ ಆಟೊರಿಕ್ಷಾಗಳಿಗೆ ಮೊದಲ 1.5 ಕಿ.ಮೀಗೆ ₹40 ಹಾಗೂ ನಂತರ ಪ್ರತಿ ಕಿ.ಮೀಗೆ ₹23 ದರ ನಿಗದಿಯಾಗಿದೆ.
- ಮೊದಲ 10 ನಿಮಿಷ ಕಾಯುವಿಕೆಗೆ ಶುಲ್ಕವಿಲ್ಲ.
- ನಂತರದ 15 ನಿಮಿಷ ಅಥವಾ ಅದರ ಭಾಗಕ್ಕೆ ₹5 ಶುಲ್ಕ.
- 20 ಕೆ.ಜಿ.ವರೆಗೆ ಸಾಮಾನುಗಳಿಗೆ ಶುಲ್ಕವಿಲ್ಲ.
- ಮುಂದಿನ 20 ಕೆ.ಜಿ. ಅಥವಾ ಅದರ ಭಾಗಕ್ಕೆ ₹25 ಶುಲ್ಕ.
- ರಾತ್ರಿ 10ರಿಂದ ಬೆಳಗ್ಗೆ 5ರವರೆಗೆ ಸಾಮಾನ್ಯ ದರದ ಒಂದೂವರೆ ಪಟ್ಟು ಶುಲ್ಕ ವಿಧಿಸಬಹುದು.
ಪರಿಷ್ಕೃತ ದರದ ಪಟ್ಟಿಯನ್ನು ಪ್ರತಿಯೊಂದು ಆಟೊರಿಕ್ಷಾದಲ್ಲೂ ಕಡ್ಡಾಯವಾಗಿ ಪ್ರದರ್ಶಿಸುವಂತೆ ಆರ್‌ಟಿಎ ಸೂಚಿಸಿದೆ. ಅಲ್ಲದೆ, ಮೀಟರ್‌ಗಳನ್ನು ಪರಿಷ್ಕೃತ ದರಕ್ಕೆ ಮರುಹೊಂದಿಸಿ, ಶೀಘ್ರದಲ್ಲೇ ಸೀಲ್ ಮಾಡಿಸಿಕೊಳ್ಳುವಂತೆ ಸೂಚಿಸಲಾಗಿದೆ.
ಮೀಟರ್‌ಗಳ ಮರುಹೊಂದಿಕೆ ಪೂರ್ಣಗೊಳ್ಳುವವರೆಗೆ ಚಾಲಕರಿಗೆ ಪ್ರದರ್ಶಿಸಲು ಅಗತ್ಯವಿರುವ ಹೋಲಿಕೆ ದರಪಟ್ಟಿಯನ್ನು ಚಾಲಕರ ಸಂಘಗಳಿಗೆ ನೀಡಲಾಗುವುದು. ಸಂಘಗಳು ಅದನ್ನು ಚಾಲಕರಿಗೆ ವಿತರಿಸಲಿವೆ ಎಂದು ಆರ್‌ಟಿಎ ತಿಳಿಸಿದೆ.
-
Uncategorized14 hours ago
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು
-
Uncategorized17 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
ಮಂಗಳೂರು19 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
-
ಅಂತರ ರಾಜ್ಯ18 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!
-
ಉದ್ಯೋಗ20 hours agoPuttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
-
ಸ್ಥಳೀಯ24 hours agoBeltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು
-
ಬಿಗ್ ನ್ಯೂಸ್19 hours agoPuttur-ಪುತ್ತೂರು : ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ಕೆ. ಭಾಸ್ಕರ ಶೆಟ್ಟಿ ಬಜನಿಗುತ್ತು ಪದೋನ್ನತಿ
-
ಅಂತರ ರಾಜ್ಯ19 hours agoPremananda Ashram-ಪ್ರೇಮಾನಂದ ಆಶ್ರಮದ ಶಿಷ್ಯನ ಸಾವು ಪ್ರಕರಣಕ್ಕೆ ಟ್ವಿಸ್ಟ್: ರಕ್ತದ ಕಲೆ, ಸಿಸಿಟಿವಿ ದೃಶ್ಯಗಳ ಪರಿಶೀಲನೆ


















