Uncategorized
ಜು.14ರಂದು ‘ಮುತ್ತಿನ ನಗರಿಯ ಹಿಂದು ಹೃದಯ ಸಾಮ್ರಾಟ್’ ಡಾ.ಎಂ.ಕೆ.ಪ್ರಸಾದ್ ಅಭಿವಂದನಾ, ನಾಗರಿಕ ಸನ್ಮಾನ – ಅಭಿನಂದನಾ ಸಮಿತಿ ಅಧ್ಯಕ್ಷರಾಗಿ ಡಾ.ಸುರೇಶ್ ಪುತ್ತೂರಾಯ

ಜು.14ರಂದು ಪುತ್ತೂರಿನಲ್ಲಿ ನಡೆಯಲಿರುವ ‘ಮುತ್ತಿನ ನಗರಿಯ ಹಿಂದು ಹೃದಯ ಸಾಮ್ರಾಟ್’ ಡಾ.ಎಂ.ಕೆ.ಪ್ರಸಾದ್ ಅಭಿವಂದನಾ, ನಾಗರಿಕ ಸನ್ಮಾನ ಕಾರ್ಯಕ್ರಮದ ಆಯೋಜನ ಸಮಿತಿ ʼಡಾ.ಎಂ.ಕೆ.ಪ್ರಸಾದ್ ಅಭಿನಂದನಾ ಸಮಿತಿʼಯ ಅಧ್ಯಕ್ಷರನ್ನಾಗಿ ಖ್ಯಾತ ವೈದ್ಯರಾದ ಡಾ.ಸುರೇಶ್ ಪುತ್ತೂರಾಯ ಆಯ್ಕೆ ಮಾಡಲಾಗಿದೆ
ಜು .9 ರಂದು ಸಂಜೆ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ಸಭಾಭವನದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದ್ದು ಉಳಿದ ಪದಾಧಿಕಾರಿಗಳ ಆಯ್ಕೆಯೂ ನಡೆಯಿತು. ಪುತ್ತೂರಿನ ಜನಪ್ರಿಯ ವೈದ್ಯರಾದ ಡಾ.ಎಂ.ಕೆ.ಪ್ರಸಾದ್ ಅವರಿಗೆ ಈ ಸಾಲಿನ ಕರ್ನಾಟಕ ಭಾರತೀಯ ವೈದ್ಯಕೀಯ ಸಂಘದ ಪ್ರತಿಷ್ಠಿತ ಕೆ.ಎಸ್.ಇ ಡಾಕ್ಟರ್ ಡೇ ಪ್ರಶಸ್ತಿ ದೊರೆತ ಹಿನ್ನಲೆಯಲ್ಲಿ ಜು.14ರಂದು ಸಾಲ್ಮರದ ಕೊಟೇಚಾ ಹಾಲ್‌ನಲ್ಲಿ ಅಭಿವಂದನಾ, ನಾಗರಿಕ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ .
ಪೂರ್ವಭಾವಿ ಸಭೆಯಲ್ಲಿ ಪ್ರಾಸ್ತವಿಕವಾಗಿ ಮಾತನಾಡಿದ ಪುತ್ತೂರು ಪುರಸಭೆಯ ಮಾಜಿ ಅಧ್ಯಕ್ಷ ರಾಜೇಶ್ ಬನ್ನೂರು :ಡಾ. ಎಂ.ಕೆ ಪ್ರಸಾದ್ ಅವರು ಪುತ್ತೂರಿಗೆ ನೀಢಿದ ಕೂಡುಗೆ ಅಪಾರ. ಅವರು ಇಲ್ಲಿನ ಸಂಘ ಪರಿವಾರಗಳ ಪ್ರಶ್ನಾತೀತ ನಾಯಕರು. ಅವರ ಮಾರ್ಗದರ್ಶನದಲ್ಲಿ ಇಲ್ಲಿ ಸಂಘಟನೆಗಳ ಪ್ರಭಲವಾಗಿ ಬೆಳೆದಿದೆ. ಹಾಗಾಗಿ ಇವರ ಅಭಿನಂದನಾ ಕಾರ್ಯಕ್ರಮವು ಅಭೂತಪೂರ್ವವಾಗಿ ನಡೆಯಬೇಕು ಎಂದರು.

ಬಳಿಕ ಮಾತನಾಡಿದ ಅರುಣ್ ಪುತ್ತಿಲರವರು “ ಡಾಕ್ಟರ್ ಗೆ ಸಂದ ಗೌರವಕ್ಕೆ ಪುತ್ತೂರಿನ ಜನತೆ ಅದು ತಮಗೆ ಸಿಕ್ಕ ಗೌರವ ಎನ್ನವ ರೀತಿಯಲ್ಲಿ ಸಂಭ್ರಮಿಸುತ್ತಿದ್ದಾರೆ. ಹಿಂದು ಸಮಾಜಕ್ಕೆ ಅವರ ಕೊಡುಗೆ ಅಪಾರ. ಹಾಗಾಗಿ ಅವರ ಅಭಿನಂದನ ಕಾರ್ಯಕ್ರಮವು ದೊಡ್ಡ ರೀತಿಯಲ್ಲಿಯೇ ನಡೆಯಬೇಕು ಎಂದರು
ಬಳಿಕ ಜು.14 ರಂದು ನಡೆಯಲಿರುವ ಕಾರ್ಯಕ್ರಮದ ರೂಪು ರೇಶೆಯ ಬಗ್ಗೆ ಚರ್ಚೆ ನಡೆಯಿತು. ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖಾರನಂದ ಸ್ವಾಮೀಜಿ, ಬ್ರಹ್ಮಶ್ರೀ ಕುಂಟಾರ್ ರವೀಶ್ ತಂತ್ರಿ, ಸಂಸದ ನಳೀನ್ ಕುಮಾರ್ ಕಟೀಲ್, ಸಚಿವರಾದ ಎಸ್ ಅಂಗಾರ ಹಾಗೂ ಶಾಶಕರಾದ ಸಂಜೀವ ಮಠಂದೂರು ಅವರನ್ನು ಕಾರ್ಯಕ್ರಮಕ್ಕೆ ಆಮಂತ್ರಿಸಲು ನಿರ್ಧರಿಸಲಾಯಿತು.ಬಳಿಕ ಅಭಿನಂದನಾ ಸಮಿತಿ ರಚಿಸಲಾಯಿತು.
ಅಭಿನಂದನಾ ಸಮಿತಿ ಅಧ್ಯಕ್ಷರಾಗಿ ಮಹಾವೀರ ಆಸ್ಪತ್ರೆಯ ಡಾ.ಸುರೇಶ್ ಪುತ್ತೂರಾಯ, ಸಂಚಾಲಕರಾಗಿ ನಗರಸಭಾ ಸದಸ್ಯಪಿ.ಜಿ.ಜಗನ್ನಿವಾಸ ರಾವ್, ವಿಹಿಂಪ ಮುಖಂಡ ಮುರಳೀಕೃಷ್ಣ ಹಸಂತಡ್ಕ, ಅರುಣ್ ಕುಮಾರ್ ಪುತ್ತಿಲ, ಸಂತೋಷ್ ರೈ ಕೈಕಾರ, ನವೀನ್ ರೈ ಪಂಜಳ, ಪ್ರವೀಣ್ ಶೆಟ್ಟಿ ತಿಂಗಳಾಡಿ,ರವಿ ಆಚಾರ್ಯ ಕೃಷ್ಣನಗರ, ದಿನೇಶ್ ಮೆದು, ಭಾಲಕೃಷ್ಣ ಅವರನ್ನು ಆಯ್ಕೆ ಮಾಡಲಾಯಿತು.
ಪ್ರಧಾನ ಕಾರ್ಯದರ್ಶಿಯಾಗಿ ಅಜಿತ್ ರೈ ಹೊಸಮನೆ, ಕಾರ್ಯದರ್ಶಿಯಾಗಿ ರಾಜೇಶ್ ರೈ ಪರ್ಪುಂಜ, ಕೋಶಾಧಿಕಾರಿಯಾಗಿ ಚಿನ್ಮಯ್ ರೈಈಶ್ವರಮಂಗಲ, ಪ್ರಚಾರ ಮತ್ತು ಮಾಧ್ಯಮ ಪ್ರಮುಖ ಆಗಿ ರಾಜೇಶ್ ಬನ್ನೂರು, ಅವರನ್ನು ಆಯ್ಕೆ ಮಾಡಲಾಯಿತು.
ಕೃಷ್ಣಪ್ರಸಾದ್ ಶೆಟ್ಟಿ, ದಿನೇಶ್ ಪಂಜಿಗ, ಮಹೇಶ್ ಕೇರಿ, ವಿಶ್ವನಾಥ್ ಗೌಡ ಬನ್ನೂರು, ಅಶೋಕ್ ಕುಂಬ್ಳೆ, ಧರೇಶ್ ಹೊಳ್ಳ, ರಾಮಚಂದ್ರ ಕಾಮತ್, ಮನ್ಮಥ್ ಶೆಟ್ಟಿ, ಚಂದ್ರಶೇಖರ್, ರಾಜು, ಸುಬ್ರಹ್ಮಣ್ಯ ಅವರನ್ನು ಸದಸ್ಯರನ್ನಾಗಿ ಆಯ್ಕೆ ಮಾಡಲಾಯಿತು.ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷಶರಾಂಕ ಕೊಟೇಚಾ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು
Uncategorized
Philomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ವಂದನ ಶಂಕರ್ ಮಾತನಾಡಿ, ಪಿ ಯು ಸಿ ನಂತರದ ಅವಕಾಶಗಳು, ಇಂಜಿನಿಯರಿಂಗ್ ವಿಭಾಗಗಳಲ್ಲಿ ಇರುವ ಉದ್ಯೋಗಾವಕಾಶಗಳ ಬಗ್ಗೆ ತಿಳಿಸಿದರು.
ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಚೇತನ್ ಮಾತನಾಡಿ, ಮಾದಕ ವಸ್ತುಗಳು ಹಾಗೂ ದೂಮಪಾನದ ವ್ಯಸನ ನಮ್ಮ ನೆನಪಿನ ಶಕ್ತಿಯನ್ನು ಕುಗ್ಗಿಸುತ್ತದೆ ಮತ್ತು ಕ್ಯಾನ್ಸರ್ ನಂತಹ ಮಾರಕ ರೋಗಗಳಿಗೆ ದಾರಿ ಮಾಡಿಕೊಡುತ್ತದೆ. ಹಾಗೆಯೇ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ನಮ್ಮ ಏಕಾಗ್ರತೆಯನ್ನು ಭಂಗ ಗೊಳಿಸುತ್ತದೆ ಎಂದು ಹೇಳಿದರು.

ವೃತ್ತಿ ಮಾರ್ಗದರ್ಶನ ವಿಭಾಗದ ನಿರ್ದೇಶಕರಾದ ರವಿಪ್ರಸಾದ್ ಬಿ. ಜಿ ನಿರಂಜನ್ ಜಿ. ಯು, ಕವಿತಾ ಕೆ ಹಾಗೂ ಕಾಲೇಜಿನ ಬೋಧಕ /ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
Uncategorized
ಹಿರಿಯ ಸಹಕಾರಿ ಧುರೀಣ ಕೆ.ಕೆ. ನಾರಾಯಣ ಚಳ್ಳಂಗಾರು ನಿಧನ

ಕಲ್ಮಡ್ಕ: ತಾಲೂಕಿನ ಹಿರಿಯ ಸಹಕಾರಿ ಧುರೀಣ, ಸಾಮಾಜಿಕ ಮುಖಂಡ, ಬಹುಮುಖ ಚಿಂತಕ ಕಲ್ಮಡ್ಕ ಗ್ರಾಮದ ಚಳ್ಳಂಗಾರು ಕೆ.ಕೆ. ನಾರಾಯಣ (88) ಅವರು ವಯೋಸಹಜ ಅನಾರೋಗ್ಯದಿಂದ ಗುರುವಾರ ಸಂಜೆ ನಿಧನರಾದರು.
ಮಂಡಲ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ತಮ್ಮ ಅವಧಿಯಲ್ಲಿ ಗ್ರಾಮದಲ್ಲಿ ಅಭಿವೃದ್ಧಿಯ ಹೊಸ ಶಕೆಗೆ ನಾಂದಿ ಹಾಡಿದ್ದರು. ಕಲ್ಮಡ್ಕ ಸಹಕಾರಿ ಸಂಘದ ನಿರ್ದೇಶಕರಾಗಿ ಸಂಸ್ಥೆಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದ ಅವರು, ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದರು. ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು.
ಕಲ್ಮಡ್ಕ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ವಿಶೇಷ ಶ್ರಮ ವಹಿಸಿದ್ದ ಅವರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಯಕ್ಷಗಾನದ ಅರ್ಥಧಾರಿಯಾಗಿ ಕಲಾ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದ ನಾರಾಯಣ ಅವರು, ಸಂಗಮ ಕಲಾ ಸಂಘದ ನಿರ್ದೇಶಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಉತ್ತಮ ಓದುಗ ಹಾಗೂ ವಿಮರ್ಶಕರಾಗಿದ್ದ ಅವರು ಸಾಹಿತ್ಯ, ಕಲೆ, ಸಹಕಾರ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.
ಮೃತರು ಪತ್ನಿ ಸುಬ್ಬಮ್ಮ, ಪುತ್ರಿಯರಾದ ವಿದ್ಯಾ, ಜಯಶ್ರೀ, ದೀಪಿಕಾ, ಪುತ್ರ, ಕ್ಯಾಂಪ್ಕೋ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ನ್ಯಾಯವಾದಿ ಮುರಳಿಕೃಷ್ಣ ಚಳ್ಳಂಗಾರು, ಸೊಸೆ ರಮ್ಯಾ ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
Uncategorized
ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ- ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಚಾಲನೆ

ಪುತ್ತೂರು: ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ನಡೆಯಲಿರುವ ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಧಾನಸಭೆಯ ವಿರೋಧಪಕ್ಷದ ನಾಯಕ ಆರ್.ಅಶೋಕ್ ಅವರು ಚಾಲನೆ ನೀಡಿದರು.
ನ.19ರಂದು ಪುತ್ತೂರಿನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ವೀರಾಂಜನೇಯ ಕ್ಷೇತ್ರದಲ್ಲಿ ನಡೆಯುವ ಪಂಚಮುಖಿ ಆಂಜನೇಯ ಹವನದ ಸ್ಟಿಕ್ಕರ್ ಅನ್ನು ಆಟೋ ರಿಕ್ಷಾಗಳಿಗೆ ಅಂಟಿಸುವ ಮೂಲಕ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಯಶಸ್ಸು ಕೋರಿದರು.
ಆಟೋ ರಿಕ್ಷಾಗಳ ಎದುರಿನ ಮತ್ತು ಹಿಂಬದಿಯ ಭಾಗಕ್ಕೆ ತಾವೆ ಸ್ವತಃ ಸ್ಟಿಕ್ಕರ್ ಅಂಟಿಸಿ ಎಲ್ಲರೂ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು, ಪಂಚಮುಖಿ ಆಂಜನೇಯ ಯಾಗ ಸಮಿತಿ ಪ್ರಧಾನ ಕಾರ್ಯದರ್ಶಿ ಮುರಳಿಕೃಷ್ಣ ಹಸಂತಡ್ಕ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಪ್ರಧಾನ ಕಾರ್ಯದರ್ಶಿ ಸುನಿಲ್ ದಡ್ಡು, ಯಾಗ ಸಮಿತಿಯ ಪ್ರಮುಖರಾದ ಶ್ಯಾಮ ಸುದರ್ಶನ್ ಹೊಸಮೂಲೆ, ಜಯಂತ ಶೆಟ್ಟಿ ಕಂಬಳತ್ತಡ್ಕ, ಶ್ರೀಧರ್ ತೆಂಕಿಲ ಸಹಿತ ಆಟೋ ರಿಕ್ಷಾ ಚಾಲಕರು ಮತ್ತು ಮಾಲಕರು ಉಪಸ್ಥಿತರಿದ್ದರು.















