Connect with us

Uncategorized

ಹರ ಸಾಹಸದ ಬಳಿಕ ದಡ ಸೇರಿದ ಬೈತಡ್ಕದಲ್ಲಿ ಮಧ್ಯರಾತ್ರಿ ಗೌರಿ ಹೊಳೆಗೆ ಹಾರಿದ ಕಾರು – ನೀರು ಪಾಲಾದ ಒಂದೇ ಕುಟುಂಬದ ಇಬ್ಬರಿಗಾಗಿ ಮುಂದುವರಿದ ಶೋಧ | ಇಡೀ ಘಟನೆಯ ಇವರೆಗಿನ ಕಂಪ್ಲಿಟ್‌ Update   

Published

on

Ad Widget

Ad Widget

Ad Widget

Ad Widget

ಜು 9 ರ ತಡರಾತ್ರಿ ಕಡಬ ತಾಲೂಕಿನ ಕಾಣಿಯೂರು ಸಮೀಪದ ಬೈತಡ್ಕ ಮಸೀದಿ ಬಳಿ ಗೌರಿ ಹೊಳೆಗೆ ಬಿದ್ದ  ಮಾರುತಿ 800 ಕಾರನ್ನು ಇಂದು ( ಜು10) ಮಧ್ಯಾಹ್ನ 12.30ರ ಸುಮಾರಿಗೆ ಮೇಲಕ್ಕೆತ್ತಲಾಯಿತ್ತು.ಆದರೇ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರಿಗಾಗಿ ಶೋಧ ಕಾರು ಮುಂದುವರಿದಿದೆ

Ad Widget

Ad Widget

Ad Widget

Ad Widget

ಮೂಲಗಳ ಪ್ರಕಾರ ನಿನ್ನೆ  ರಾತ್ರಿ ಎಂಟು ಗಂಟೆಗೆ ಸುಮಾರಿಗೆ  ವಿಟ್ಲ ಸಮೀಪದ ಕುಂಡಡ್ಕ ಎಂಬಲ್ಲಿಂದ ಗುತ್ತಿಗಾರಿನತ್ತ ಹೊರಟ್ಟಿದ್ದ ಈ ಕಾರು ರಾತ್ರಿ 12.30ರ ಸುಮಾರಿಗೆ ಪುತ್ತೂರು – ಸುಬ್ರಹ್ಮಣ್ಯ ರಸ್ತೆಯ  ಬೈತಡ್ಕ  ಮಸೀದಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಹೊಳೆಗೆ ಹಾರಿದೆ. ಈ ಕಾರು ಹೊಳೆಗೆ ಹಾರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಕಾರು ಅತೀ ವೇಗವಾಗಿ ಪ್ರಯಾಣಿಸುತ್ತಿತ್ತು ಎಂದು ಹೇಳಲಾಗುತ್ತಿದ್ದು , ಸಿಸಿಟಿವಿ ದೃಶ್ಯಗಳು ಇದಕ್ಕೆ ಪುಷ್ಟಿ ನೀಡುತ್ತಿವೆ.

Ad Widget

Ad Widget alt="Ad Widget"/>

Ad Widget

ಮಾಹಿತಿ ತಿಳಿಯುತ್ತಲೇ ಸ್ಥಳೀಯ ಪೊಲೀಸರು, ಸ್ಥಳೀಯ ಸಾರ್ವಜನಿಕರು, ಅಗ್ನಿಶಾಮಕ ದಳ ಹಾಗೂ ಸವಣೂರಿನ ನಾಲ್ವರು  ಈಜುಪಟುಗಳಿಂದ  ಶೋಧ ಕಾರ್ಯ ನಡೆಯಿತು. ಈ ವೇಳೆ ಸ್ಥಳದಲ್ಲಿ 2000 ಕ್ಕೂ ಮಿಕ್ಕಿ ಕುತೂಹಲಿಗಳು ಸೇರಿದ್ದು ಇವರನ್ನು ಪೊಲೀಸರು ಹರಸಾಹಸ ಪಡಬೇಕಾಯಿತ್ತು. ಬಳಿಕ ಗುಂಪನ್ನು ಚದುರಿಸಲು ಪೊಲೀಸರು ಲಾಠಿಯನ್ನು ಬಳಸಬೇಕಾಯಿತು.

Ad Widget

Ad Widget <> Ad Widget

ಬೆಳಿಗ್ಗೆ 10.30ರ ಸುಮಾರಿಗೆ ಕಾರು ಪತ್ತೆಯಾಯಿತಾದರೂ ಅದನ್ನು ಮೇಲಕ್ಕೆ ಎತ್ತುವ ವೇಳೆ ನೀರಿನ ಸೆಳೆತಕ್ಕೆ ಅದು ಕಾರ್ಯಚರಣೆ ನಡೆಸಿದವರ ಕೈಯಿಂದ ಜಾರಿ ವಾಪಸ್ಸು ಹೊಳಗೆ ಬಿದ್ದಿದೆ. ಇದೇ ವೇಳೆ ಕಾರನ್ನು ಮೇಲಕ್ಕೆ ಎತ್ತಲು ಪುತ್ತೂರಿನಿಂದ ಬರುತ್ತಿದ್ದ ಕ್ರೇನ್‌ ಮಾರ್ಗ ಮಧ್ಯೆ ಪುತ್ತೂರಿನಿಂದ ಸುಮಾರು 6  ಕೀಮಿ ದೂರದ ಬೆದ್ರಾಳ ಎಂಬಲ್ಲಿ ಹೊಂಡಕ್ಕೆ ಬಿದ್ದಿದೆ. ವಾಹನಕ್ಕೆ ಸೈಡ್‌ ಕೊಡುವ ವೇಳೆ ಈ ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ.

ಕಾರ್ಯಚರಣೆ ನಡೆಸುತ್ತಿದ್ದವರ ಕೈ ಜಾರಿದ ಕಾರು ಸುಮಾರು 100 ಮೀ ದೂರದಲ್ಲಿ  11 ಗಂಟೆ ಸುಮಾರಿಗೆ ಮುಳುಗು ತಜ್ಙರಿಗೆ  ನೀರಿನ ಆಳದಲ್ಲಿ ಪತ್ತೆಯಾಗಿದೆ. ಬಳಿಕ ಸುಮಾರು ಒಂದೂವರೆ ಗಂಟೆ ಕಾರ್ಯಾಚರಣೆ ನಡೆಸಿ ಅದನ್ನು ಹಗ್ಗದ ಸಹಾಯದಿಂದ  ಮೇಲಕ್ಕೆ ಎತ್ತಲಾಯಿತು.

Ad Widget

Ad Widget

ಜಿಲ್ಲಾ ಎಸ್ಪಿ ಹೇಳಿದ್ದೇನು ?

ಘಟನೆಯ ಬಗ್ಗೆ ಜಿಲ್ಲಾ ಪೊಲೀಸ್‌ ಅಧೀಕ್ಷಕ ಋಷಿಕೇಷ್‌ ಸೋನಾವಣೆಯವರು ಮಾಹಿತಿ ನೀಡಿದ್ದು “ ಜುಲೈ 10 ರಂದು 00.30 ರ ಸುಮಾರಿಗೆ ಬೈತಡ್ಕ ಮಸೀದಿ ಬಳಿ ಮಾರುತಿ 800 ಕಾರು ಆಕಸ್ಮಿಕವಾಗಿ ಹಳ್ಳಕ್ಕೆ ಬಿದ್ದಿದ್ದು, ಇದನ್ನು  ಸಿಸಿಟಿವಿ ದೃಶ್ಯಾವಳಿಗಳನ್ನು  ವೀಕ್ಷಿಸಿ ಮತ್ತಷ್ಟು ದೃಢಪಡಿಸಲಾಯಿತು.  ಅದರಂತೆ ಸ್ಥಳೀಯ ಪೊಲೀಸರು, ಸ್ಥಳೀಯ ಸಾರ್ವಜನಿಕರು, ಅಗ್ನಿಶಾಮಕ ದಳ ಹಾಗೂ ಸವಣೂರಿನ ನಾಲ್ವರು  ಮುಳುಗು ತಜ್ಙರು ಶೋಧ ಕಾರ್ಯ ನಡೆಸಿದರು.

 ಮಧ್ಯಾಹ್ನ 12 ಗಂಟೆ ಸುಮಾರಿಗೆ ಕಾರನ್ನು ಪತ್ತೆ ಮಾಡಿ  ಮಾಡಿ 12.30ಕ್ಕೆ ಹೊರ ತೆಗೆಯಲಾಯಿತು. ವಿಚಾರಣೆ ವೇಳೆ ಕಾರು ಧನುಷ್ ಎಂಬವರದು ತಿಳಿದುಬಂದಿದೆ., 26 ವರ್ಷ ಪ್ರಾಯ- ವಿಟ್ಲ ಸಮೀಪದ  ಕುಂಡಡ್ಕ ನಿವಾಸಿ ಧನುಷ್ ಕಾರು ಚಾಲನೆ ಮಾಡುತ್ತಿದ್ದರು ಆ ಕಾರಿನಲ್ಲಿ ಮಂಜೇಶ್ವರದ  ಧನುಷ್( 21 ವರ್ಷ,)  ಸಹ ಪ್ರಯಾಣಿಕರಾಗಿದ್ದರು. ಇವರಿಗೆ  ವಾಹನ ಚಲಾಯಿಸುತ್ತಿದ್ದ ಧನುಷ್ ಅವರು ಸಂಬಂಧದಲ್ಲಿ  ಭಾವನಾಗಬೇಕು .ಇವರು  ರಾತ್ರಿ 8 ಗಂಟೆಗೆ ಮನೆಯಿಂದ ಹೊರಟ್ಟಿದ್ದರು. ಅವರಿಬ್ಬರ ಮೃತದೇಹಗಳು ಇನ್ನೂ ಪತ್ತೆಯಾಗಿಲ್ಲ. ಕೆಳಗೆ  ತೇಲಿ ಹೋಗಿರುವ  ಶಂಕೆ ವ್ಯಕ್ತವಾಗಿದೆ.

Ad Widget
Click to comment

Leave a Reply

Uncategorized

Vivekananda-ವಿವೇಕಾನಂದ ವಸತಿನಿಲಯದಲ್ಲಿ ತುಳಸಿಪೂಜೆ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಸಂಸ್ಕಾರಯುತ ಜೀವನದಿಂದ ನಿತ್ಯ ಸಂಭ್ರಮ:ವಿಜಯನಾರಾಯಣ ಕೆ.ಎಂ.

Published

on

Ad Widget

Ad Widget

Ad Widget

Ad Widget

ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಗಳ ವಸತಿನಿಲಯದ ವತಿಯಿಂದ ನಡೆದ ತುಳಸಿಪೂಜೆ ಹಾಗೂ ವಸತಿ ನಿಲಯದ ಪಾಕಶಾಲಾ ಸಿಬ್ಬಂದಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯನಾರಾಯಣ ಕೆ.ಎಂ. ಮಾತನಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು, ನ.21: ಪ್ರತಿಯೊಂದು ಪರ್ವಾಚರಣೆಗಳಿಗೂ ಅವುಗಳದ್ದಾದ ಹಿನ್ನೆಲೆಗಳಿದ್ದು ಹಿರಿಯರು ಅವುಗಳನ್ನು ಅರ್ಥಪೂರ್ಣವಾಗಿ ಆಚರಿಸಿ ನಮ್ಮ ತಲೆಮಾರಿಗೆ ಹಸ್ತಾಂತರಿಸಿದ್ದಾರೆ. ಯುವಕರಿಗೆ ವಿದ್ಯಾಭ್ಯಾಸ ಹಾಗೂ ಉದ್ಯೋಗ ಗಳಿಕೆ ಅತ್ಯಂತ ಮುಖ್ಯ ಹೌದು, ಆದರೆ ಬದುಕನ್ನು ಆ ಚೌಕಟ್ಟಿಗೆ ಮಾತ್ರ ಸೀಮಿತವಾಗಿಸದೇ ಅದರಿಂದಾಚೆಗಿನ ಅನೇಕ ಮೌಲ್ಯಯುತ ವಿಚಾರಗಳನ್ನು ಅಳವಡಿಸಿಕೊಳ್ಳುವುದು ಅವಶ್ಯಕ. ನಾವು ನಮ್ಮ ಹಿರಿಯರ ಜೀವನೋತ್ಸಾಹದಿಂದ ಪ್ರೇರಣೆ ಪಡೆದು ಅನುದಿನದ ಪ್ರತೀಕ್ಷಣವನ್ನು ಹಬ್ಬದಂತೆ ಕಾಣಬೇಕಲ್ಲದೇ ನಮ್ಮ ಉತ್ತಮ ಸಂಸ್ಕೃತಿಯನ್ನು ಮುಂದಿನ ತಲೆಮಾರಿಗೆ ಹಸ್ತಾಂತರಿಸಬೇಕು ಎಂದು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯನಾರಾಯಣ ಕೆ.ಎಂ ನುಡಿದರು.

Ad Widget

Ad Widget alt="Ad Widget"/>

Ad Widget

ಇವರು ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಗಳ ವಸತಿನಿಲಯದ ವತಿಯಿಂದ ನಡೆದ ತುಳಸಿಪೂಜೆ ಹಾಗೂ ವಸತಿ ನಿಲಯದ ಪಾಕಶಾಲಾ ಸಿಬ್ಬಂದಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

Ad Widget

Ad Widget <> Ad Widget

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಮಾತನಾಡಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ದೇವಿಚರಣ್ ರೈ, ದೀಪಾವಳಿಗೆ ಬಲಿ ಚಕ್ರವರ್ತಿ ಭೂಮಿಗೆ ಬರುತ್ತಾನೆ ಎನ್ನುವ ಹಿನ್ನೆಲೆಯಿದ್ದು ಮೂರು ದಿನಗಳ ಕಾಲ ಆಚರಿಸಲಾಗುತ್ತದೆ. ನಮ್ಮ ಹಬ್ಬಗಳು ಮತ್ತು ಪಾಲಿಸುವ ಸಂಸ್ಕೃತಿಯಿಂದ ಜೀವನುದ್ದಕ್ಕೂ ನಾವು ಅನೇಕ ವಿಷಯಗಳನ್ನು ಕಲಿಯುತ್ತೇವೆ. ಯುವಕರು ಜೀವನದ ನಿಜಾರ್ಥ ಏನೆಂಬುದನ್ನು ತಿಳಿಯುವ ಮೊದಲೇ ಅನಗತ್ಯ ಯೋಚನೆಗಳನ್ನು ಮೈಗೂಡಿಸಿಕೊಳ್ಳುವುದರ ಬದಲಾಗಿ ವಿದ್ಯಾಭ್ಯಾಸ ಹಾಗೂ ಉನ್ನತ ಸಂಸ್ಕಾರಗಳನ್ನು ಪಡೆದು ಸತ್ಪçಜೆಗಳಾಗಬೇಕು. ಹಬ್ಬದ ಒಳ್ಳೆಯ ವಾತಾವರಣ ಜೀವನದ ಉನ್ನತಿಗೆ ಸ್ಫೂರ್ತಿಯಾಗಲಿ ಎಂದರು.

ಕಾರ್ಯಕ್ರಮದಲ್ಲಿ ಅಧ್ಯಕ್ಷೀಯ ನುಡಿಗಳನ್ನಾಡಿದ ವಿವೇಕಾನಂದ ವಸತಿನಿಲಯದ ಅಧ್ಯಕ್ಷ ರಮೇಶ್ ಪ್ರಭು ಪಾಕಶಾಸ್ತ್ರ ಎನ್ನುವುದು ಅತ್ಯುನ್ನತವಾದ ಸೇವೆ. ಬಾಣಸಿಗರು, ನಿಲಯಪಾಲಕರು ಮೊದಲಾದ ಸಿಬ್ಬಂದಿಗಳು ತಮ್ಮ ಸಮರ್ಪಣಾಭಾವದಿಂದ ವಸತಿನಿಲಯದ ವಿದ್ಯಾರ್ಥಿಗಳ ಕ್ಷೇಮಕ್ಕೋಸ್ಕರ ಕೆಲಸ ನಿರ್ವಹಿಸುತ್ತಾರೆ. ಅವರಿಗೆ ಗೌರವ ಸಮರ್ಪಿಸುವ ಕಾರ್ಯ ಶ್ಲಾಘನೀಯವಾದುದು ಎಂದು ತಿಳಿಸಿದರು.

Ad Widget

Ad Widget

ವಿವೇಕಾನಂದ ವಸತಿನಿಲಯದಲ್ಲಿ ಸೇವೆ ಸಲ್ಲಿಸುವ ಪಾಕಶಾಲಾ, ಸಿಬ್ಬಂದಿಗಳನ್ನು ಗೌರವಿಸಲಾಯಿತು.
ಕಾರ್ಯಕ್ರಮವನ್ನು ವಿವೇಕಾನಂದ ವಸತಿನಿಲಯದ ಆಡಳಿತಾಧಿಕಾರಿ ಗೋವಿಂದ ರಾಜ ಶರ್ಮ ಸ್ವಾಗತಿಸಿ, ಕಾರ್ಯದರ್ಶಿ ಸಚಿನ್ ಶೆಣೈ ವಂದಿಸಿದರು. ವಸತಿನಿಲಯದ ವಿದ್ಯಾರ್ಥಿನಿ ದೀಪಿಕಾ ನಿರೂಪಿಸಿದರು.

ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾಸಂಸ್ಥೆಗಳ ಆವರಣದಲ್ಲಿರುವ ವಿವಿಧ ವಸತಿನಿಲಯಗಳಲ್ಲಿ ತುಳಸಿಪೂಜೆ ನೆರವೇರಿತು.

ವಸತಿನಿಲಯದ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಸಿಡಿಮದ್ದು ಪ್ರದರ್ಶನ ಜರುಗಿದವು.

Ad Widget
Continue Reading

Uncategorized

Philomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ

Published

on

Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು  ಕಾಲೇಜು ಸಭಾಂಗಣದಲ್ಲಿ  ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು  ಕಾಲೇಜು ಸಭಾಂಗಣದಲ್ಲಿ  ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.

Ad Widget

Ad Widget alt="Ad Widget"/>

Ad Widget

ಸಂಪನ್ಮೂಲ ವ್ಯಕ್ತಿಗಳಾಗಿ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ವಂದನ ಶಂಕರ್ ಮಾತನಾಡಿ, ಪಿ ಯು ಸಿ ನಂತರದ ಅವಕಾಶಗಳು, ಇಂಜಿನಿಯರಿಂಗ್ ವಿಭಾಗಗಳಲ್ಲಿ ಇರುವ ಉದ್ಯೋಗಾವಕಾಶಗಳ ಬಗ್ಗೆ ತಿಳಿಸಿದರು.

Ad Widget

Ad Widget <> Ad Widget

ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಚೇತನ್ ಮಾತನಾಡಿ, ಮಾದಕ ವಸ್ತುಗಳು ಹಾಗೂ ದೂಮಪಾನದ ವ್ಯಸನ ನಮ್ಮ ನೆನಪಿನ ಶಕ್ತಿಯನ್ನು ಕುಗ್ಗಿಸುತ್ತದೆ ಮತ್ತು ಕ್ಯಾನ್ಸರ್ ನಂತಹ ಮಾರಕ ರೋಗಗಳಿಗೆ ದಾರಿ ಮಾಡಿಕೊಡುತ್ತದೆ. ಹಾಗೆಯೇ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ನಮ್ಮ ಏಕಾಗ್ರತೆಯನ್ನು ಭಂಗ ಗೊಳಿಸುತ್ತದೆ ಎಂದು ಹೇಳಿದರು.

ವೃತ್ತಿ ಮಾರ್ಗದರ್ಶನ ವಿಭಾಗದ ನಿರ್ದೇಶಕರಾದ ರವಿಪ್ರಸಾದ್ ಬಿ. ಜಿ ನಿರಂಜನ್ ಜಿ. ಯು, ಕವಿತಾ ಕೆ ಹಾಗೂ ಕಾಲೇಜಿನ ಬೋಧಕ /ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Ad Widget

Ad Widget

ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ವಿದ್ಯಾರ್ಥಿ ಮೊಹಮ್ಮದ್ ಶಯಾನ್ ಅಬ್ಬಾಸ್ ಸ್ವಾಗತಿಸಿ, ವಂದಿಸಿ,
ಕಾರ್ಯಕ್ರಮವನ್ನು ನಿರೂಪಿಸಿದರು.

Ad Widget
Continue Reading

Uncategorized

ಹಿರಿಯ ಸಹಕಾರಿ ಧುರೀಣ ಕೆ.ಕೆ. ನಾರಾಯಣ ಚಳ್ಳಂಗಾರು ನಿಧನ

Published

on

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

ಕಲ್ಮಡ್ಕ: ತಾಲೂಕಿನ ಹಿರಿಯ ಸಹಕಾರಿ ಧುರೀಣ, ಸಾಮಾಜಿಕ ಮುಖಂಡ, ಬಹುಮುಖ ಚಿಂತಕ ಕಲ್ಮಡ್ಕ ಗ್ರಾಮದ ಚಳ್ಳಂಗಾರು ಕೆ.ಕೆ. ನಾರಾಯಣ (88) ಅವರು ವಯೋಸಹಜ ಅನಾರೋಗ್ಯದಿಂದ ಗುರುವಾರ ಸಂಜೆ ನಿಧನರಾದರು.

Ad Widget

Ad Widget alt="Ad Widget"/>

Ad Widget

ಮಂಡಲ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ತಮ್ಮ ಅವಧಿಯಲ್ಲಿ ಗ್ರಾಮದಲ್ಲಿ ಅಭಿವೃದ್ಧಿಯ ಹೊಸ ಶಕೆಗೆ ನಾಂದಿ ಹಾಡಿದ್ದರು. ಕಲ್ಮಡ್ಕ ಸಹಕಾರಿ ಸಂಘದ ನಿರ್ದೇಶಕರಾಗಿ ಸಂಸ್ಥೆಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದ ಅವರು, ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದರು. ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು.

Ad Widget

Ad Widget <> Ad Widget

ಕಲ್ಮಡ್ಕ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ವಿಶೇಷ ಶ್ರಮ ವಹಿಸಿದ್ದ ಅವರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಯಕ್ಷಗಾನದ ಅರ್ಥಧಾರಿಯಾಗಿ ಕಲಾ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದ ನಾರಾಯಣ ಅವರು, ಸಂಗಮ ಕಲಾ ಸಂಘದ ನಿರ್ದೇಶಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಉತ್ತಮ ಓದುಗ ಹಾಗೂ ವಿಮರ್ಶಕರಾಗಿದ್ದ ಅವರು ಸಾಹಿತ್ಯ, ಕಲೆ, ಸಹಕಾರ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.

ಮೃತರು ಪತ್ನಿ ಸುಬ್ಬಮ್ಮ, ಪುತ್ರಿಯರಾದ ವಿದ್ಯಾ, ಜಯಶ್ರೀ, ದೀಪಿಕಾ, ಪುತ್ರ, ಕ್ಯಾಂಪ್ಕೋ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ನ್ಯಾಯವಾದಿ ಮುರಳಿಕೃಷ್ಣ ಚಳ್ಳಂಗಾರು, ಸೊಸೆ ರಮ್ಯಾ ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!