ಶಿಕ್ಷಣ
Vidyamata-ಪ್ರತಿಷ್ಠಿತ ವಿದ್ಯಾಮಾತಾದ “ಮಾಥ್ಸ್ ಕ್ಲಬ್” ತರಬೇತಿಗೆ ಅಂತರಾಷ್ಟ್ರೀಯ ಚಾಂಪಿಯನ್ ಮಾನ್ಯತೆ; ಅಂತರಾಷ್ಟ್ರೀಯ ಚಾಂಪಿಯನ್ ಆಗಿ ಹೊರ ಹೊಮ್ಮಿದ ವಿದ್ಯಾರ್ಥಿಗಳು: Champion Of Champion ಆದ ಶಾರ್ಜಾದಲ್ಲಿ ನೆಲೆಸಿರುವ ಸುಳ್ಯದ ಐಶಾ ಬಶೀರ್ ಇಸ್ರ
ಕರಾವಳಿ ಭಾಗದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಮತ್ತು ಉದ್ಯೋಗ ಹಾಗೂ ಶಿಕ್ಷಣ ಕೌಶಲ್ಯಗಳ ಪ್ರತಿಷ್ಠಿತ ಸಂಸ್ಥೆಯಾಗಿರುವ ವಿದ್ಯಾಮಾತಾ ಅಕಾಡೆಮಿಯು ಮಕ್ಕಳಲ್ಲಿರುವ ಮಾಥ್ಸ್ ಭಯವನ್ನು ಹೋಗಲಾಡಿಸಲು “Maths ಸಮಸ್ಯೆಗೆ ಬೇಕಾಗಿರುವುದು ಟ್ಯೂಷನ್ ಅಲ್ಲ ಸೊಲ್ಯೂಷನ್° ಎಂಬ ಘೋಷ ವಾಕ್ಯದಡಿಯಲ್ಲಿ 7 ವರ್ಷದಿಂದ 15 ವರ್ಷದ ವಿದ್ಯಾರ್ಥಿಗಳಿಗೆ Maths(ಗಣಿತ) ಅಂದರೆ ಭಯಗೊಳ್ಳುವವರಿಗೋಸ್ಕರ ಅತೀ ಸುಲಭದಲ್ಲಿ ಮಾಥ್ಸ್ ಟ್ರಿಕ್ಸ್ ಗಳನ್ನು Mind Game ಗಳ ಮೂಲಕ ಗಣಿತವನ್ನು ವಿವಿಧ ಚಟುವಟಿಕೆಗಳ ಮೂಲಕ ಆಸಕ್ತಿಯಿಂದ ಕಲಿಯಲು ಪ್ರೆರೇಪಿಸುವ “Maths Club”ನ್ನು ಪರಿಚಯಿಸಲಾಗಿತ್ತು.
7 ರಿಂದ 15 ವರ್ಷದ ತನಕದ ಮಕ್ಕಳಿಗೆ ವಾರದಲ್ಲಿ 2 ದಿನ ಸಂಜೆ 6 ರಿಂದ 7 ರವರೆಗೆ Online Live Class ಗಳ ಮೂಲಕ ತರಬೇತಿ ನೀಡಲಾಗುತ್ತಿದೆ. ಪುತ್ತೂರು, ಸುಳ್ಯದಿಂದ ಹಿಡಿದು ಬೆಂಗಳೂರು ಅಲ್ಲದೇ ವಿದೇಶದಲ್ಲಿ ನೆಲೆಸಿರುವ ಅನಿವಾಸಿ ಭಾರತೀಯ ವಿದ್ಯಾರ್ಥಿಗಳು ಸೇರಿದಂತೆ ಹಲವಾರು ವಿದ್ಯಾರ್ಥಿಗಳು ಭಾಗವಹಿಸುತ್ತಿದ್ದು, ಅಂತಾರಾಷ್ಟ್ರೀಯ ಒಲಿಂಪಿಯಾಡ್ ನಲ್ಲಿ ವಿದ್ಯಾಮಾತಾದ ಈ ವಿಭಿನ್ನ ಪ್ರಯತ್ನದ “Maths Club” ಗೆ ಅಂತಾರಾಷ್ಟ್ರೀಯ ಮಾನ್ಯತೆ ಲಭಿಸಿದ್ದು, ಮಾಥ್ಸ್ ಕ್ಲಬ್ ನ ತರಬೇತುದಾರೆ ವಿದ್ಯಾಮಾತಾ ಅಕಾಡೆಮಿಯ ನಿರ್ದೇಶಕಿ ಶ್ರೀಮತಿ ರಮ್ಯಾ ಭಾಗ್ಯೇಶ್ ರೈ ರವರಿಗೆ ಅತ್ಯುತ್ತಮ ತರಬೇತುದಾರೆ ಪ್ರಶಸ್ತಿ ಲಭಿಸಿದ್ದು, ಮಾಥ್ಸ್ ಕ್ಲಬ್ ನಲ್ಲಿ ತರಬೇತಿ ಪಡೆದುಕೊಂಡ 15 ವಿದ್ಯಾರ್ಥಿಗಳು ಅಂತಾರಾಷ್ಟ್ರೀಯ ಚಾಂಪಿಯನ್ ಆಗಿ ಹೊರ ಹೊಮ್ಮಿದ್ದಾರೆ.

ಚಾಂಪಿಯನ್ ಆಗಿ ಹೊರ ಹೊಮ್ಮಿದ ವಿದ್ಯಾಮಾತಾದ ಹೆಮ್ಮೆಯ ವಿದ್ಯಾರ್ಥಿಗಳ ವಿವರ:
ಸುಳ್ಯ , ಆಲೆಟ್ಟಿ ನಿವಾಸಿ ಮಹಮ್ಮದ್ ಬಶೀರ್ ಮತ್ತು ಹಸೀನಾ ದಂಪತಿಗಳ ಪುತ್ರಿ ಸದ್ಯ ಜೆಮ್ಸ್ ಮಿಲೇನಿಯಂ ಶಾಲೆ ಶಾರ್ಜಾ 4ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಐಶಾ ಬಶೀರ್ ಇಸ್ರ
ಸುಳ್ಯ , ಗಾಂಧಿನಗರ ನಿವಾಸಿ ಅಬ್ದುಲ್ ರಶೀದ್ ಮತ್ತು ಅಸೀದ ದಂಪತಿಗಳ ಪುತ್ರಿ ಸದ್ಯ ಇಂಡಿಯನ್

ಸ್ಕೂಲ್ ಎ ಐ ವಾಡಿ ಇಲ್ಲಿ 4 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಫಿಯ ಆಯಿಷಾ,
ಸುಳ್ಯ, ಗಾಂಧಿನಗರ ನಿವಾಸಿ ಅಬ್ದುಲ್ ರಶೀದ್ ಮತ್ತು ಅಸೀದ ದಂಪತಿಗಳ ಪುತ್ರಿ ಸದ್ಯ ಇಂಡಿಯನ್ ಸ್ಕೂಲ್ ಎ ಐ ವಾಡಿ ಇಲ್ಲಿ 4 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ನಫಿಯಾ ನಫೀಸ
ಸುಳ್ಯ , ಆಲೆಟ್ಟಿ ನಿವಾಸಿ ಮಹಮ್ಮದ್ ಬಶೀರ್ ಮತ್ತು ಹಸೀನಾ ದಂಪತಿಗಳ ಪುತ್ರಿ ಸದ್ಯ ಜೆಮ್ಸ್ ಮಿಲೇನಿಯಂ ಶಾಲೆ ಶಾರ್ಜಾ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಇವ ಫಾತಿಮಾ ಬಶೀರ್,
ಮಂಗಳೂರಿನ, ಕೊಡಿಕಲ್ ನಿವಾಸಿ ಕಿರಣ್ ಕುಮಾರ್ ಮತ್ತು ಮಲ್ಲಿಕಾ ದಂಪತಿಗಳ ಪುತ್ರ ಕೇಂದ್ರೀಯ ವಿದ್ಯಾಲಯ ಪಣಂಬೂರಿನಲ್ಲಿ 6ನೇ ತರಗತಿಯಲ್ಲಿ ಓದುತ್ತಿರುವ ಕೃತಿಕ್ ಕೆ ಕುಮಾರ್
ಬೆಂಗಳೂರಿನ ,ಹೊರಮಾವು ಇಲ್ಲಿ ವಾಸಿಸುತ್ತಿರುವ ಮಿಥುನ್ ಕೆ ಎಸ್ ಮತ್ತು ಅಶ್ವಿತಾ ದಂಪತಿಗಳ ಪುತ್ರಿ ಸದ್ಯ ಇಂಟರ್ನ್ಯಾಷನಲ್ ಅಕಾಡೆಮಿ ಇಲ್ಲಿ ನಾಲ್ಕನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮಿಶ ಎಂ ಆಳ್ವ ಬಂಟ್ವಾಳ, ಕಸಬ ಗ್ರಾಮದ ನಿವಾಸಿ ಕ್ಲಿಫರ್ಡ್ ವೇಗಸ್ ಮತ್ತು ಫ್ಲವಿಟ ಶೈನಿ ಪರ್ನಾಂಡೀಸ್ ದಂಪತಿಗಳ ಪುತ್ರಿ ಸದ್ಯ ಸುದಾನ ವಸತಿಯುತ ಶಾಲೆ, ಪುತ್ತೂರು ಇಲ್ಲಿ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಚ್ರಿಶಾ ವೇಗಸ್. ಮೂಡುಬಿದ್ರೆ, ಬೆಲ್ವಾಯಿ ಗ್ರಾಮದ ಡಾಕ್ಟರ್ ಈಶ್ವರ್ ಭಟ್ ಎಂ ಮತ್ತು ಗೌರಿ ಎನ್ ಜಿ ದಂಪತಿಗಳ ಪುತ್ರ ಸದ್ಯ ಎಕ್ಸಲೆಂಟ್ CBSE ಶಾಲೆ ಮೂಡುಬಿದ್ರೆ ಇಲ್ಲಿ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಸಾತ್ವಿಕ್ ಶರ್ಮಾ ಪುತ್ತೂರು , ತೆಂಕಿಲ ಗ್ರಾಮದ ಅರುಣ್ ಕುಮಾರ್ ಮತ್ತು ಜ್ಯೋತಿ ಲಕ್ಷ್ಮಿ ದಂಪತಿಗಳ ಪುತ್ರಿ ಸದ್ಯ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ ಪುತ್ತೂರು ಇಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ದಿವ್ಯ ಅರುಣ್ ಕುಮಾರ್, ಪುತ್ತೂರಿನ ಬನ್ನೂರು ಕಟ್ಟೆ ನಿವಾಸಿ ರಾಧಾಕೃಷ್ಣ ಗೌಡ ಮತ್ತು ಸುಲೋಚನಿ ದಂಪತಿಗಳ ಪುತ್ರಿ ಸದ್ಯ GMUP ಶಾಲೆ ಹಾರಾಡಿ ಪುತ್ತೂರು ಇಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಜೀವಿತ ಆರ್ ಕಡಬ ತಾಲೂಕು, ಏನೇಕಲ್ಲು ಗ್ರಾಮದ ಚಂದ್ರಶೇಖರ ನಾಯರ್ ಮತ್ತು ಶ್ರೀಜಿಶಾ ದಂಪತಿಗಳ ಪುತ್ರಿ ಸದ್ಯ ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಇಲ್ಲಿ ಎಂಟನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಆಧ್ಯಾ ಸಿ ಸುಳ್ಯದ ರಾಮಚಂದ್ರ ಕೆ ಮತ್ತು ಶ್ರೀಮತಿ ವನಿತಾ ಎಸ್ ದಂಪತಿಗಳ ಪುತ್ರ ಸದ್ಯ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆ, ಸುಳ್ಯ ಇಲ್ಲಿ 9 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಖುಷಿಕ್ ವಿ ಆರ್,

ವಿಟ್ಲ ಸೇರಾಜೆಯಲ್ಲಿರುವ ಹರೀಶ ಎಸ್ ಮತ್ತು ಶರ್ಮಿಳಾ ಎಂ ದಂಪತಿಗಳ ಪುತ್ರ ಸದ್ಯ ವಿಟ್ಲ ಜೆಸಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಶಶಾಂಕ್ ಎಚ್ ಎಸ್, ಮಂಗಳೂರಿನ ಪೆರ್ಮನ್ನೂರು ಗ್ರಾಮದ ಪ್ರಶಾಂತ್ ರೈ ಮತ್ತು ಶ್ರೀಮತಿ ಶೋಭಾ ರೈ ದಂಪತಿಗಳ ಪುತ್ರಿ ಸದ್ಯ ನಿತ್ಯಾದರ ಆಂಗ್ಲ ಮಾಧ್ಯಮ ಶಾಲೆ ಇಲ್ಲಿ 5 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಯುಕ್ತ ಪಿ ರೈ, ಪುತ್ತೂರು ,ಆರ್ಯಾಪು ಗ್ರಾಮದ ಪ್ರಕಾಶ್ ಶೆಟ್ಟಿ ಮತ್ತು ಪ್ರಿಯಾ ದಂಪತಿಗಳ ಪುತ್ರಿ ಸದ್ಯ ಸುದಾನ ಆಂಗ್ಲ ಮಾಧ್ಯಮ ಶಾಲೆ ಪುತ್ತೂರು ಇಲ್ಲಿ ಆರನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಸನ್ನಿಧಿ ಪಿ ಶೆಟ್ಟಿ.

2026-27ನೇ ಸಾಲಿನ ಮಾಥ್ಸ್ ಕ್ಲಬ್ ಗೆ ಜುಲೈ ತಿಂಗಳಿಂದ ತರಬೇತಿ ಪ್ರಾರಂಭವಾಗಲಿದ್ದು, ಆಸಕ್ತಿಯುಳ್ಳವರು ಹೆಚ್ಚಿನ ಮಾಹಿತಿಗಾಗಿ APMC ರಸ್ತೆ ಪುತ್ತೂರು ಇಲ್ಲಿರುವ ವಿದ್ಯಾಮಾತಾ ಅಕಾಡೆಮಿಯ ಕಛೇರಿ ಸಂಖ್ಯೆ 99451 82516ನ್ನು ಸಂಪರ್ಕಿಸಲು ಸಂಸ್ಥೆ ತಿಳಿಸಿದೆ.

ಅಂತರಾಷ್ಟ್ರೀಯ ಮಟ್ಟದಲ್ಲಿ ವಿಶೇಷ ತರಬೇತುದಾರರಾಗಿ ಮಾನ್ಯತೆ ಪಡೆಯುತ್ತಿರುವ ಶ್ರೀಮತಿ ರಮ್ಯಾ ಭಾಗ್ಯೇಶ್ ರೈ ರವರು ವಿದ್ಯಾಮಾತಾ ಅಕಾಡೆಮಿಯ ಯಶಸ್ಸಿನ ಹಿಂದೆ ಎಳೆ ಮರೆಯ ಕಾಯಿಯಂತೆ ಕೆಲಸ ಮಾಡುತ್ತಿರುವವರು, ಇವರು ವಿದ್ಯಾಮಾತಾ ಅಕಾಡೆಮಿಯ ಸ್ಥಾಪಕ ಭಾಗ್ಯೇಶ್ ರೈ ರವರ ಧರ್ಮಪತ್ನಿ ಇವರು ತನಗೆ ಒದಗಿ ಬಂದ ಸರಕಾರಿ ಹುದ್ದೆಯನ್ನು ತ್ಯಜಿಸಿ ಸಾವಿರಾರು ವಿದ್ಯಾರ್ಥಿಗಳ ಬಾಳಿಗೆ ಬೆಳಕಾದವರು. ಇವರಿಗೆ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ 115 ವಿವಿಧ ಮನ್ನಣಾ ಪತ್ರ ದೊರಕಿದೆ.
ಶಿಕ್ಷಣ
Puttur-ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರ
ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಕಲ್ಕೂರ ಪ್ರತಿಷ್ಠಾನ(ರಿ) ಕನ್ನಡ ರಾಜ್ಯೋತ್ಸವದ ಅಂಗವಾಗಿ ನ 20 ರಂದು ಮಂಗಳೂರಿನ ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯ ಸಭಾಭವನದಲ್ಲಿ ನಡೆದ ರಾಜ್ಯೋತ್ಸವ ಸಂದೇಶ – ಗೌರವ ಪುರಸ್ಕಾರ ಕಾರ್ಯಕ್ರಮದಲ್ಲಿ ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.
ಪುತ್ತೂರು: ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಕಲ್ಕೂರ ಪ್ರತಿಷ್ಠಾನ(ರಿ) ಕನ್ನಡ ರಾಜ್ಯೋತ್ಸವದ ಅಂಗವಾಗಿ ನ 20 ರಂದು ಮಂಗಳೂರಿನ ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯ ಸಭಾಭವನದಲ್ಲಿ ನಡೆದ ರಾಜ್ಯೋತ್ಸವ ಸಂದೇಶ – ಗೌರವ ಪುರಸ್ಕಾರ ಕಾರ್ಯಕ್ರಮದಲ್ಲಿ ಪುತ್ತೂರಿನ ಸುಪ್ರಜಾ ರಾವ್ ಗೆ
ರಾಜ್ಯೋತ್ಸವ ಸಾಧಕ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.
ಇವರು ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜ್ ನ ಪ್ರಾಧ್ಯಾಪಕರಾದ ಡಾ.ಪ್ರಶಾಂತ್ ರಾವ್ ಹಾಗೂ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಸುಮನಾ ರಾವ್ ದಂಪತಿಗಳ ಪುತ್ರಿಯಾಗಿದ್ದು, ಪ್ರಸಕ್ತ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾರೆ.
ಶಿಕ್ಷಣ
Ambika-ಅಂಬಿಕಾ ಸಿಬಿಎಸ್‌ಇ ಸಂಸ್ಥೆಯ ವಿದ್ಯಾರ್ಥಿಗಳಿಗೆ ಬಹುಮಾನ
ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ವಿದ್ಯಾರ್ಥಿಗಳು ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ (ರಿ) ವತಿಯಿಂದ ‘ಜ್ಞಾನ ಚಂದನ’ ಹಾಗೂ ‘ಜ್ಞಾನ ನಂದನ’ ಪುಸ್ತಕಗಳ ಆಧಾರಿತವಾಗಿ ನಡೆದ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಬಹುಮಾನ ಗಳಿಸಿದ್ದಾರೆ.
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ವಿದ್ಯಾರ್ಥಿಗಳು ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ (ರಿ) ವತಿಯಿಂದ ‘ಜ್ಞಾನ ಚಂದನ’ ಹಾಗೂ ‘ಜ್ಞಾನ ನಂದನ’ ಪುಸ್ತಕಗಳ ಆಧಾರಿತವಾಗಿ ನಡೆದ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಬಹುಮಾನ ಗಳಿಸಿದ್ದಾರೆ.
ಹಿರಿಯ ಪ್ರಾಥಮಿಕ ವಿಭಾಗದ ಭಾಷಣ ಸ್ಪರ್ಧೆಯಲ್ಲಿ ನರಿಮೊಗರು ನಿವಾಸಿ ಎಮ್ ಅರ್ಜುನ್ ಕಾಮತ್ ಮತ್ತು ನೀತಾ ಕಾಮತ್ ಎನ್ ದಂಪತಿಯ ಪುತ್ರ 5ನೇ ತರಗತಿಯ ಎಮ್ ಅನ್ಶ್ ಕಾಮತ್ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.
ಹಿರಿಯ ಪ್ರಾಥಮಿಕ ವಿಭಾಗದ ಶ್ಲೋಕ ಕಂಠಪಾಠ ಸ್ಪರ್ಧೆಯಲ್ಲಿ ಕೆಮ್ಮಾಯಿ ನಿವಾಸಿ ಪ್ರಸನ್ನ ಹೆಚ್ ಎಸ್ ಮತ್ತು ಗೀತಾ ಡಿ ದಂಪತಿಯ ಪುತ್ರಿ 5ನೇ ತರಗತಿಯ ಅಕ್ಷರ ಹೆಚ್ ಪಿ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ.
ಇವರಿಬ್ಬರೂ ಮುಂದೆ ಪುಂಜಾಲಕಟ್ಟೆಯಲ್ಲಿ ನಡೆಯಲಿರುವ ಜಿಲ್ಲಾಮಟ್ಟದ ಭಾಷಣ ಹಾಗೂ ಶ್ಲೋಕ ಕಂಠಪಾಠ ಸ್ಪರ್ಧೆಗೆ ಆಯ್ಕೆಗೊಂಡಿರುತ್ತಾರೆ.
ಶಿಕ್ಷಣ
Philomena-ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆ
ನ.20 ರಂದು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಸಭಾಂಗಣದಲ್ಲಿ ನಡೆದ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿ ಸಮಾಜ ಸೇವಕರು ಮತ್ತು ಉದ್ಯಮಿಗಳಾದ ಮೈಕಲ್ ಡಿ’ ಸೋಜಾ ಮಾತನಾಡಿದರು.
ಪುತ್ತೂರು: ಸಂತ ಫಿಲೋಮಿನಾ ಕಾಲೇಜು ಸಾವಿರಾರು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು
ನೀಡಿದ್ದು, ದೇಶದ ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆಯಲ್ಲಿ ತನ್ನದೇ ಕೊಡುಗೆಯನ್ನು ನೀಡಿದೆ ಎಂದು ಸಮಾಜ ಸೇವಕರು ಮತ್ತು ಉದ್ಯಮಿಗಳಾದ ಮೈಕಲ್ ಡಿ’ ಸೋಜಾ ಹೇಳಿದರು.

ಅವರು ನವೆಂಬರ್ 20 ರಂದು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಸಭಾಂಗಣದಲ್ಲಿ ನಡೆದ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡುತ್ತ,
ರೆ. ಫಾ. ಪತ್ರವೋ ಇವರ ದೂರದರ್ಶಿ ಚಿಂತನೆಯ ಫಲವಾಗಿ ಈ ಕಾಲೇಜು ಜನ್ಮತಾಳಿದ್ದು, ಇಂದು ಮತ್ತಷ್ಟು ಮೂಲ ಸೌಕರ್ಯಗಳ ವಿಸ್ತರಣೆಯೊಂದಿಗೆ ಸಂಸ್ಥೆಯು ಇನ್ನಷ್ಟು ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನು ನೀಡಲು ಅಣಿಯಾಗಿದೆ. ಸುಸಜ್ಜಿತ ಮೂಲ ಸೌಕರ್ಯಗಳ ವಿಸ್ತರಣೆಗೆ ಕಾರಣೀಕರ್ತರಾದ ಎಲ್ಲರನ್ನೂ ಅಭಿನಂದಿಸಿ, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯಬೇಕೆಂದು ತಿಳಿಸಿದರು.

ಇನ್ನೋರ್ವ ಮುಖ್ಯ ಅತಿಥಿಗಳಾದ ಕ್ಯಾಥೋಲಿಕ್ ಬೋರ್ಡ್ ಆಫ್ ಎಜುಕೇಷನ್(CBE) ನ ಕಾರ್ಯದರ್ಶಿಗಳಾದ ರೆ. ಡಾ. ಪ್ರವೀಣ್ ಲಿಯೋ ಲಸ್ರದೋ ಮಾತನಾಡಿ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಕಳೆದ ಹಲವಾರು ದಶಕಗಳಿಂದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನು ನೀಡಿದೆ. ಇಂದು ಬದಲಾದ ಪರಿಸ್ಥಿತಿಯಲ್ಲಿ ಮೂಲ ಸೌಕರ್ಯಗಳ ವಿಸ್ತರಣೆಯನ್ನು ಮನಗಂಡು ದಾನಿಗಳ ಸಹಾಯದಿಂದ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರಿಗೆ ಉತ್ತಮ ಸೌಕರ್ಯಗಳನ್ನು ನಿರ್ಮಿಸಿದ್ದೇವೆ. ಎಲ್ಲರೂ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕ್ಯಾಥೋಲಿಕ್ ಬೋರ್ಡ್ ಆಫ್ ಎಜುಕೇಷನ್(CBE) ನ ಉಪಾಧ್ಯಕ್ಷರಾದ ಮೊನ್ಸಿಂಜೋರ್ ಮ್ಯಾಕ್ಸಿಮ್ ಎಲ್ ನೋರೋನ್ಹ ಮಾತನಾಡಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಬೆಳವಣಿಗೆಗಳು ತುಂಬಾ ಸಂತೋಷವನ್ನು ನೀಡುತ್ತಿದ್ದು, ಇಂದು ವಿದ್ಯಾರ್ಥಿಗಳಿಗೆ ನೀಡಿದ ಹೆಚ್ಚುವರಿ ಸೌಲಭ್ಯಗಳು ಸಂಸ್ಥೆಯ ಬೆಳವಣಿಗೆಗೆ ಹಿಡಿದ ಕನ್ನಡಿಯಾಗಿದೆ. ಕಾಲೇಜಿನ ಪ್ರಾಂಶುಪಾಲರು ಮತ್ತು ಆಡಳಿತ ಮಂಡಳಿಯನ್ನು ಅಭಿನಂದಿಸಿ, ಮುಂದಿನ ದಿನಗಳಲ್ಲೂ ಕಾಲೇಜು ಉತ್ತಮ ವಿದ್ಯಾರ್ಥಿಗಳನ್ನು ಸಮಾಜಕ್ಕೆ ನೀಡಲಿ ಎಂದು ಆಶಿಸಿದರು.
ಮಾಯಿದೆ ದೇವುಸ್ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ರೆ. ಡಾ. ಜಾನ್ ಬ್ಯಾಪ್ಟಿಸ್ಟ್ ಸಲ್ದಾನ್ಹಾ ಪ್ರಾಸ್ತಾವಿಕವಾಗಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಕಟ್ಟಡ ಕಾಮಗಾರಿಯ ಮೇಲ್ವಿಚಾರಣೆಯನ್ನು ನಿರ್ವಹಿಸಿದ ಓಸ್ವಾಡ್ಡ್ ಲೂಯಿಸ್ ಹಾಗೂ ಜೋಸೆಫ್ ಸೆರವೋರನ್ನು ಸನ್ಮಾನಿಸಲಾಯಿತು.
ಮಾಯಿದೆ ದೇವುಸ್ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ರೋಷನ್ ಲಾಸ್ರಾದೋ, ಕಾಲೇಜಿನ ರಕ್ಷಕ – ಶಿಕ್ಷಕ ಸಂಘದ ಉಪಾಧ್ಯಕ್ಷ ಅ್ಯಂಟೋನಿ ಒಲಿವೆರಾ, ಪ ಪೂ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಡಾ. ಶ್ರೀ ಪ್ರಕಾಶ್ ಬಿ, ಸಂತ ಫಿಲೋಮಿನಾ ಪ್ರೌಢ ಶಾಲೆಯ ಮುಖ್ಯೋಪಾಧ್ಯಯರಾದ ರೆ. ಫಾ. ಮ್ಯಾಕ್ಸಿಮ್ ಡಿ’ ಸೋಜಾ, ಮಾಯಿದೆ ದೇವುಸ್ ಚರ್ಚ್ ನ ಸಹಾಯಕ ಪ್ಯಾರಿಸ್ ಧರ್ಮ ಗುರುಗಳಾದ ರೆ.ಫಾ ಮಾರ್ವಿನ್ ಪ್ರವೀಣ್ ಲೋಬೋ ಹಾಗೂ ಚ್ಯಾರಿಟಿ ಟೀಮ್ ನ ಸದಸ್ಯರಾದ ಸ್ಟೀಫನ್ ಪಿಂಟೋ, ಓಸ್ವಾಲ್ಡ್ ರೋಡ್ರಿಗಸ್ ವೇದಿಕೆಯಲ್ಲಿ ಉಪಸ್ಥಿತರಿದ್ದು, ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ವಿವಿಧ ಸಂಸ್ಥೆಗಳ ಮುಖ್ಯಸ್ಥರು, ದಾನಿಗಳು, ಗಣ್ಯರು, ಬೋಧಕ ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಈ ನೂತನ ಕಟ್ಟಡದಲ್ಲಿ ವಿಸ್ತೃತ ಸಭಾಂಗಣ, ವಿಜ್ಞಾನ ಪ್ರಯೋಗಾಲಯಗಳು, ಉಪನ್ಯಾಸಕರ ಕೊಠಡಿಗಳು, ತರಗತಿ ಕೋಣೆಗಳು ಹಾಗೂ ಸುಸಜ್ಜಿತ ಶೌಚಾಲಯಗಳು ವಿಧ್ಯಾರ್ಥಿಗಳ ಉಪಯೋಗಕ್ಕೆ ಲಭ್ಯವಿದೆ.
ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಸ್ವಾಗತಿಸಿ, ಉಪನ್ಯಾಸಕರಾದ ಸುಮಾ ಡಿ ವಂದಿಸಿ, ಡಾ. ಆಶಾ ಸಾವಿತ್ರಿ ಕಾರ್ಯಕ್ರಮವನ್ನು ನಿರೂಪಿಸಿದರು.
-
ಮಂಗಳೂರು14 hours agoMangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
-
ಬಿಗ್ ನ್ಯೂಸ್21 hours agoBail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ
-
ಅಂತರ ರಾಜ್ಯ19 hours agoFormer CBI officer-ಅಧಿಕಾರ, ಹಣ, ಐಷಾರಾಮಿ ಬದುಕಿಗೆ ಗುಡ್ಬೈ; ಗುಹೆಯಲ್ಲಿ ಧ್ಯಾನ ಮಾಡುತ್ತಿರುವ ಮಾಜಿ ಸಿಬಿಐ ಅಧಿಕಾರಿ..!
-
ನಿಧನ ವಾರ್ತೆ20 hours agoHeart attack-ಸಾಲಿಗ್ರಾಮ: ಕಚೇರಿಯಲ್ಲೇ ಹೃದಯಾಘಾತ; ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ನಿಧನ
-
ಸಿನೆಮಾ19 hours agoDawood-‘ಧುರಂಧರ್ ‘ ನಲ್ಲಿ ದಾವೂದ್ ನ ತೋರಿಸಿದ ರೀತಿ ವಾಸ್ತವವಲ್ಲ…! ಮೋಸ್ಟ್ ವಾಂಟೆಡ್ ಪಾತಕಿ ಈಗ ಹೇಗಿದ್ದಾನೆ ಗೊತ್ತೇ..? ಮಾಜಿ FBI ಅಧಿಕಾರಿ ಹೇಳಿದ್ದೇನೂ..?
-
ಅಂತರ ರಾಜ್ಯ13 hours agoArrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!
-
ನಿಧನ ವಾರ್ತೆ20 hours agoMudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು
-
ನಿಧನ ವಾರ್ತೆ19 hours agoOne-sided love-ಇನ್ಸ್ಟಾಗ್ರಾಮ್ ಇನ್ಫ್ಲುಯೆನ್ಸರ್ ಮೇಲಿನ ಒನ್ಸೈಡೆಡ್ ಲವ್; ಹಲ್ಲೆಗೊಳಗಾದ ಯುವಕ ಸಾವು















