Connect with us

ಶಿಕ್ಷಣ

Vivekananda-ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಲಯನ್ಸ್ ಕ್ವೆಸ್ಟ್ S. F. A ತರಗತಿಗಳ ಉದ್ಘಾಟನಾ ಕಾರ್ಯಕ್ರಮ

Published

on

Ad Widget

Ad Widget

Ad Widget

Ad Widget

ಪುತ್ತೂರು ಲಯನ್ ಇಂಟರ್ನ್ಯಾಷನಲ್, ಜಿಲ್ಲೆ 317D ಇದರ ಲಯನ್ಸ್ ಕ್ಲಬ್ ಪುತ್ತೂರು, ಕಾವು ಪ್ರಾಯೋಜಕತ್ವದಲ್ಲಿ ವಿದ್ಯಾರ್ಥಿಗಳಿಗಾಗಿ ಲಯನ್ಸ್ ಕ್ವೆಸ್ಟ್ S.F.A (Skills For Adolescence) ತರಗತಿಗಳ ಉದ್ಘಾಟನಾ ಕಾರ್ಯಕ್ರಮವು ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜರಗಿತು.

Ad Widget

Ad Widget

Ad Widget

Ad Widget

ಪುತ್ತೂರು ಲಯನ್ ಇಂಟರ್ನ್ಯಾಷನಲ್, ಜಿಲ್ಲೆ 317D ಇದರ ಲಯನ್ಸ್ ಕ್ಲಬ್ ಪುತ್ತೂರು, ಕಾವು ಪ್ರಾಯೋಜಕತ್ವದಲ್ಲಿ ವಿದ್ಯಾರ್ಥಿಗಳಿಗಾಗಿ ಲಯನ್ಸ್ ಕ್ವೆಸ್ಟ್ S.F.A (Skills For Adolescence) ತರಗತಿಗಳ ಉದ್ಘಾಟನಾ ಕಾರ್ಯಕ್ರಮವು ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜರಗಿತು.

Ad Widget

Ad Widget alt="Ad Widget"/>

Ad Widget

ಈ ಕಾರ್ಯಕ್ರಮದ ಉದ್ಘಾಟನಾ ಸಭೆಯಲ್ಲಿ ಕಾರ್ಯಕ್ರಮದ ಅಧ್ಯಕ್ಷರಾದ ಸತೀಶ್ ಕುಮಾರ್ ರೈ – ಮುಖ್ಯ ಗುರುಗಳು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ಉದ್ಘಾಟಕರಾದ ಶ್ರೀಮತಿ ಮಂದಾಕಿನಿ ಉಪಾಧ್ಯಾಯ- ಜಿಲ್ಲಾ ಮುಖ್ಯ ಸಂಯೋಜಕರು ಲಯನ್ಸ್ ಕ್ವೆಸ್ಟ್, ಅತಿಥಿಗಳಾಗಿ ಇಬ್ರಾಹಿಂ ಹಾಜಿ ಅಧ್ಯಕ್ಷರು ಲಯನ್ಸ್ ಕ್ಲಬ್ ಪುತ್ತೂರು ಕಾವು, ಶ್ರೀಮತಿ ರೂಪ ಶ್ರೀ ಜೆ ರೈ- ಜಿಲ್ಲಾಧ್ಯಕ್ಷರು ಲಯನ್ಸ್ ಕ್ವೆಸ್ಟ್ ದಕ್ಷಿಣ ಕನ್ನಡ ಜಿಲ್ಲೆ, ಕಾರ್ಯಕ್ರಮದ ಸಂಯೋಜಕರಾದ ಪಾವನರಾಮ- ಸದಸ್ಯರು ಲಯನ್ಸ್ ಕ್ಲಬ್ ಪುತ್ತೂರು, ಲಯನ್ ಮೋಹನದಾಸ ಶೆಟ್ಟಿ ಹಾಗೂ ಲಯನ್ ರಮೇಶ್ ರೈ ಉಪಸ್ಥಿತರಿದ್ದರು.

Ad Widget

Ad Widget <> Ad Widget

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶ್ರೀಮತಿ ಮಂದಾಕಿನಿ ಉಪಾಧ್ಯಾಯ ಅವರು ಹದಿಹರೆಯದ ವಯಸ್ಸಿನಲ್ಲಾಗುವ ಮಾನಸಿಕ ತೊಳಲಾಟವನ್ನು ನಿಭಾಯಿಸಿಕೊಳ್ಳಲು ಬೇಕಾದ ಸಾಮರ್ಥ್ಯ, ಸಾಮಾಜಿಕ ಒತ್ತಡ ನಿರ್ವಹಣೆ, ಸ್ನೇಹಿತರ ನಕಾರಾತ್ಮಕ ಪ್ರಭಾವ ಮುಂತಾದ ಸವಾಲುಗಳನ್ನು ಎದುರಿಸುವ ಆತ್ಮಸ್ಥೈರ್ಯವನ್ನು ಬೆಳೆಸಿಕೊಳ್ಳುವ ಹಾದಿಯನ್ನು S.F.A ತರಗತಿಗಳು ನೀಡಲು ಶಕ್ತವಾಗಿವೆ ಎಂದು ತಮ್ಮ ಉದ್ಘಾಟನಾ ನುಡಿಯಲ್ಲಿ ಹೇಳಿದರು. ವಿದ್ಯಾರ್ಥಿ ಜೀವನದ ಪ್ರೌಢ ಹಂತದಲ್ಲಿ ಮೈಗೂಡಿಸಿಕೊಳ್ಳುವ ಸದ್ವಿಚಾರವು ಸ್ವಾಸ್ಥ್ಯ ಸಮಾಜದ ತಳಹದಿ ಎಂದು ಇಬ್ರಾಹಿಂ ಹಾಜಿ ಅವರು ವಿದ್ಯಾರ್ಥಿಗಳಿಗೆ ಸಂದೇಶ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸತೀಶ್ ಕುಮಾರ್ ರೈ ಅವರು ತಮ್ಮ ಅಧ್ಯಕ್ಷೀಯ ನುಡಿಯಲ್ಲಿ ಮುಂಬರುವ ದಿನಗಳಲ್ಲಿ ಎಸ್ಎಫ್ಎ ತರಗತಿಗಳು ಅತ್ಯಂತ ಪರಿಣಾಮಕಾರಿಯಾಗಿ ಮೂಡಿಬರಲಿ ಹಾಗೂ ವಿದ್ಯಾರ್ಥಿಗಳು ಇದರ ಹೆಚ್ಚಿನ ಪ್ರಯೋಜನವನ್ನು ಪಡೆಯುವಂತಾಗಲಿ ಎಂದು ಶುಭ ಹಾರೈಸಿದರು.

Ad Widget

Ad Widget

ಕಾರ್ಯಕ್ರಮದ ಕೊನೆಯಲ್ಲಿ ಲಯನ್ಸ್ ಕ್ವೆಸ್ಟ್ ವತಿಯಿಂದ ನೀಡಲ್ಪಡುವ ಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ಹಸ್ತಾಂತರಿಸಲಾಯಿತು.

ಉದ್ಘಾಟನಾ ಕಾರ್ಯಕ್ರಮವು ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡು ಶ್ರೀಮತಿ ರೇಖಾ ಆಚಾರ್ಯ ಅವರು ಸ್ವಾಗತಿಸಿ, ಶ್ರೀಮತಿ ದೀಪ್ತಿ ಆರ್ ಭಟ್ ವಂದಿಸಿ, ಶ್ರೀಮತಿ ಲತಾ ಕುಮಾರಿ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.

Ad Widget
Click to comment

Leave a Reply

ಶಿಕ್ಷಣ

Narendra-ನರೇಂದ್ರ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಇಚ್ಚಿಕ ಜೈನ್ ಇವರು ಕರಾಟೆ ಸ್ಪರ್ಧೆಯಲ್ಲಿ ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ (SGFI)ಗೆ ಆಯ್ಕೆ

Published

on

Ad Widget

Ad Widget

Ad Widget

Ad Widget

ಮಧ್ಯಪ್ರದೇಶದಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನರೇಂದ್ರ ಪ. ಪೂ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಇಚ್ಚಿಕ ಜೈನ್ ಇವರು ಭಾಗವಹಿಸಿ, ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ (SGFI) ಗೆ ಆಯ್ಕೆಯಾಗಿರುತ್ತಾರೆ.

Ad Widget

Ad Widget

Ad Widget

Ad Widget

ಮಧ್ಯಪ್ರದೇಶದಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನರೇಂದ್ರ ಪ. ಪೂ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಇಚ್ಚಿಕ ಜೈನ್ ಇವರು ಭಾಗವಹಿಸಿ, ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ (SGFI) ಗೆ ಆಯ್ಕೆಯಾಗಿರುತ್ತಾರೆ.

Ad Widget

Ad Widget alt="Ad Widget"/>

Ad Widget

ಇವರು ಪುತ್ತೂರಿನ ನಿವಾಸಿಗಳಾದ ಪ್ರದೀಪ್ ಜೈನ್ ಮತ್ತು ಪ್ರೇಕ್ಷ ದಂಪತಿಗಳ ಪುತ್ರಿ.

Ad Widget

Ad Widget <> Ad Widget

ಇವರು ಜಪಾನ್ ಶೊಟೊಕಾನ್ ಕರಾಟೆ ಮತ್ತು ಮಾರ್ಷಲ್ ಆರ್ಟ್ ತರಬೇತಿ ಸಂಸ್ಥೆಯ ತರಬೇತುದಾರರಾದ ಶಿವಪ್ರಸಾದ್ ಡಿ. ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆಯುತ್ತಿದ್ದಾರೆ.

ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ರಕ್ಷಕ-ಶಿಕ್ಷಕ ಸಂಘ, ಉಪನ್ಯಾಸಕರು ಮತ್ತು ಸಿಬ್ಬಂದಿವರ್ಗದವರು ಈ ವಿದ್ಯಾರ್ಥಿಯ ಉಜ್ವಲ ಭವಿಷ್ಯಕ್ಕೆ ಶುಭಹಾರೈಸಿದ್ದಾರೆ.

Continue Reading

ಶಿಕ್ಷಣ

Vivekananda-ದ.ಕ ಜಿಲ್ಲಾಮಟ್ಟದ ಶಾಂತಿವನ ಟ್ರಸ್ಟ್ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಚಿಂತನ ಎಂ. ಚಿತ್ರಕಲೆಯಲ್ಲಿ ಪ್ರಥಮ

Published

on

Ad Widget

Ad Widget

Ad Widget

Ad Widget

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಜ್ಞಾನಚಂದನ/ ಜ್ಞಾನನಂದನ ಎಂಬ ನೈತಿಕ ಮೌಲ್ಯಾಧಾರಿತ ಪುಸ್ತಕದ ಅಧ್ಯಯನ ಆಧಾರಿತ ಜಿಲ್ಲಾಮಟ್ಟದ ವಿವಿಧ ಸ್ಪರ್ಧೆಗಳು ಕೆ.ಪಿ.ಎಸ್, ಪುಂಜಾಲಕಟ್ಟೆಯಲ್ಲಿ ದಿನಾಂಕ ನ.23ರಂದು ನಡೆಯಿತು.

Ad Widget

Ad Widget

Ad Widget

Ad Widget

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಜ್ಞಾನಚಂದನ/ ಜ್ಞಾನನಂದನ ಎಂಬ ನೈತಿಕ ಮೌಲ್ಯಾಧಾರಿತ ಪುಸ್ತಕದ ಅಧ್ಯಯನ ಆಧಾರಿತ ಜಿಲ್ಲಾಮಟ್ಟದ ವಿವಿಧ ಸ್ಪರ್ಧೆಗಳು ಕೆ.ಪಿ.ಎಸ್, ಪುಂಜಾಲಕಟ್ಟೆಯಲ್ಲಿ ದಿನಾಂಕ ನ.23ರಂದು ನಡೆಯಿತು.

Ad Widget

Ad Widget alt="Ad Widget"/>

Ad Widget

ಪೌಢ ಶಾಲಾ ವಿಭಾಗದಲ್ಲಿ ಚಿಂತನ. ಎಂ (ದಿ.ಸೀತಾರಾಮ ಮೇಲ್ಪಾಡಿ ಹಾಗೂ ಸರೋಜ ಮೇಲ್ಪಾಡಿಯವರ ಪುತ್ರಿ)ಚಿತ್ರಕಲೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Ad Widget

Ad Widget <> Ad Widget

ರಾಜ್ಯಮಟ್ಟದ ಸ್ಪರ್ಧೆಗಳು ಮುಂಬರುವ ಜನವರಿ ತಿಂಗಳಿನಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯಲಿದೆ.

Ad Widget
Continue Reading

ಶಿಕ್ಷಣ

Narendra-ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ-ಉದ್ಘಾಟನೆ

Published

on

Ad Widget

Ad Widget

Ad Widget

Ad Widget

ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ 2026-27 ನೇ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ, ಸರಕಾರಿ ಪ್ರೌಢಶಾಲೆ ಇರ್ದೆ ಉಪ್ಪಳಿಗೆ ಇದರ ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್ 1 ಆದ ರಾಮಕೃಷ್ಣ ಪಡುಮಲೆ ಅವರು ಮಾತನಾಡಿದರು.

Ad Widget

Ad Widget

Ad Widget

Ad Widget

ಕ್ರೀಡೆಯು ಜೀವನದ ಒಂದು ಭಾಗವಾಗಿದ್ದು,ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ವೃದ್ಧಿಸುವುದರ ಜೊತೆಗೆ ಶಿಸ್ತು, ಆತ್ಮವಿಶ್ವಾಸ ಮತ್ತು ಸಾಮಾಜಿಕ ಕೌಶಲ್ಯಗಳನ್ನು ಬೆಳೆಸುತ್ತದೆ.ನಾಯಕತ್ವ, ತಾಳ್ಮೆ, ಪ್ರಾಮಾಣಿಕತೆ ಮತ್ತು ಕಠಿಣ ಪರಿಶ್ರಮದ ಮೌಲ್ಯಗಳನ್ನು ಕಲಿಸುತ್ತದೆ.ಮನಸ್ಸಿನ ಸ್ಥಿತಿಯನ್ನು ಸುಧಾರಿಸುತ್ತದೆ.ಸೋಲು ಮತ್ತು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವವನ್ನು ಬೆಳೆಸುತ್ತದೆ.ತಂಡದ ಕೆಲಸ, ಒಗ್ಗಟ್ಟು ಮತ್ತು ಪರಸ್ಪರ ಸಹಕಾರವನ್ನು ಹೆಚ್ಚಿಸುತ್ತದೆ.ಯಶಸ್ಸಿನ ಶಿಖರವನ್ನು ಸಾಧಿಸಲು ವರ್ಷಗಳ ಕಠಿಣ ತರಬೇತಿಯನ್ನು ನಿಗದಿಪಡಿಸುತ್ತದೆ ಎಂಬುದನ್ನು ಗುರುತಿಸುತ್ತದೆ ಎಂದು ಸರಕಾರಿ ಪ್ರೌಢಶಾಲೆ ಇರ್ದೆ ಉಪ್ಪಳಿಗೆ ಇದರ ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್ 1ಆದ ರಾಮಕೃಷ್ಣ ಪಡುಮಲೆ ಇವರು ಹೇಳಿದರು.

Ad Widget

Ad Widget alt="Ad Widget"/>

Ad Widget

ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ 2026-27 ನೇ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ, ಅವರು ಮಾತನಾಡಿದರು.

Ad Widget

Ad Widget <> Ad Widget

ಕ್ರೀಡಾಕೂಟದಲ್ಲಿ ಧ್ವಜಾರೋಹಣ ಮತ್ತು ಗೌರವ ವಂದನೆಯನ್ನು ಸ್ವೀಕರಿಸಿದ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಶ್ರೀಮತಿ ಶುಭಾ ಅಡಿಗ ಇವರು ಮಾತನಾಡುತ್ತಾ“ಇಂದಿನ ಯುವಜನತೆಯಲ್ಲಿ ಕ್ರೀಡಾಮನೋಭಾವ ಬೆಳೆದರೆ ಜೀವನದ ಪ್ರತಿಕೂಲ ಪರಿಸ್ಥಿತಿಯಲ್ಲೂ ಅವರು ಛಲಬಿಡದೆ ಸಾಧನೆ ಮಾಡಿ ಜೀವನವನ್ನು ರೂಪಿಸಿಕೊಳ್ಳುತ್ತಾರೆ.ಇಂತಹ ದೃಢ ಮನಸ್ಸಿನ ನಾಗರಿಕರೇ ಸ್ವಸ್ಥ ಸಮಾಜದ ರೂವಾರಿಗಳು.ಅದಕ್ಕಾಗಿ ಕ್ರೀಡೆಗಳು ಶಿಕ್ಷಣದ ಅವಿಭಾಜ್ಯ ಅಂಗವಾಗಿರಬೇಕು. “ಎಂದು ಹೇಳಿದರು.
ಕರ‍್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಸತ್ಯನಾರಾಯಣ ಬಿ. ಇವರು ಮಾತನಾಡುತ್ತಾ“ಕ್ರೀಡೆ ಸಹಶಿಕ್ಷಣದ ಒಂದು ಭಾಗ.ಮನಸ್ಸಿನ ಸಮತೋಲಿತ ಬೆಳವಣಿಗೆಗೆ ಮುಖ್ಯಕಾರಣ ಕ್ರೀಡೆ.ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸಿ ಸೋಲು ಗೆಲುವಿನ ಅರ್ಥವನ್ನು ತಿಳಿದುಕೊಳ್ಳಬೇಕು.ಈ ಮೂಲಕ ಜಿವನದಲ್ಲಿ ಸಮಚಿತ್ತವನ್ನು ಸಾಧಿಸಿಕೊಳ್ಳಬಹುದು.ಉತ್ತಮ ಕ್ರೀಡಾಪಟು ಉತ್ತಮ ವಿದ್ಯಾರ್ಥಿಯಾಗುತ್ತಾನೆ.ಉತ್ತಮ ವಿದ್ಯಾರ್ಥಿಉತ್ತಮ ನಾಗರಿಕನಾಗುತ್ತಾನೆ.ನಮ್ಮ ಹಾದಿಯ ಪ್ರಗತಿಯನ್ನು ಖಾತ್ರಿಪಡಿಸಿಕೊಳ್ಳುವ ಮೂಲಕ ಯಶಸ್ವಿ ಜೀವನವನ್ನುರೂಪಿಸಲು ಕ್ರೀಡೆಯು ಸಹಾಯಮಾಡುತ್ತದೆ.” ಎಂದು ಹೇಳಿದರು.

ವಿದ್ಯಾರ್ಥಿಗಳ ವಿವಿಧ ತಂಡಗಳ ಶಿಸ್ತುಬದ್ಧ ಪಥಸಂಚಲನ ನಡೆಯಿತು.ಅತಿಥಿಗಳು ಗೌರವ ವಂದನೆ ಸ್ವೀಕರಿಸಿದರು.

Ad Widget

Ad Widget

ಜಿಲ್ಲಾ ,ರಾಜ್ಯ ಮತ್ತು ರಾಷ್ಟçಮಟ್ಟದ ವಿವಿಧಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳು ಕ್ರೀಡಾ ಜ್ಯೋತಿಯನ್ನುತರುವುದರ ಮೂಲಕ ಕರ‍್ಯಕ್ರಮಕ್ಕೆ ಚಾಲನೆ ನೀಡಿದರು. ಕಾಲೇಜಿನ ವಿದ್ಯಾರ್ಥಿಗಳ ಆಕರ್ಷಕ ಬ್ಯಾಂಡ್ ಸೆಟ್ ಪಥಸಂಚಲನ ಕರ‍್ಯಕ್ರಮಕ್ಕೆ ವಿಶೇಷ ಮೆರುಗನ್ನು ನೀಡಿತು.

ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ ಸ್ವಾಗತಿಸಿ,ಮಾತನಾಡುತ್ತಾ“ಕ್ರೀಡೆಯು, ಆತ್ಮವಿಶ್ವಾಸ ಮತ್ತು ದೈಹಿಕ ಕ್ಷಮತೆಯನ್ನು ಹೆಚ್ಚಿಸಲು ಸಹಕಾರಿ.ದೈಹಿಕ ಮತ್ತು ಮಾನಸಿಕ ಅಭಿವೃದ್ಧಿಯ ಮೂಲವಾಗಿದೆ.ವ್ಯಾಯಾಮದ ಅತ್ಯುತ್ತಮ ಸಾಧನವೆಂದು ಪರಿಗಣಿಸಲಾಗಿದೆ.ಹಾಗಾಗಿ ಈ ಎಲ್ಲಾ ಅವಕಾಶಗಳನ್ನು ಬಳಸಿಕೊಂಡು ಸದೃಢ ಪ್ರಜೆಗಳಾಗಿ ಮುನ್ನಡೆಯಿರಿ ”ಎಂದು ಹೇಳಿದರು.
ವೇದಿಕೆಯಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಕೋಶಾಧಿಕಾರಿಗಳಾದ ಅರುಣ್ ಬಿ.ಕೆ. ಇವರು ಉಪಸ್ಥಿತರಿದ್ದರು.

ಈ ಕ್ರೀಡಾಕೂಟದಲ್ಲಿ ತೆಂಕಿಲದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ದಾಮೋದರ್, ನಮಿತಾ, ಮತ್ತು ಕಾಲೇಜಿನ ಕ್ರೀಡಾ ತರಬೇತುದಾರರಾದ ಮನೋಹರ್ ಎನ್. ರವರು ಸಹಕರಿಸಿದರು.

ಕಾರ್ಯಕ್ರಮದಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾದ ಲೋಚನಾ ವಂದಿಸಿದರು. ಉಪನ್ಯಾಸಕರಾದ ಮಮತಾ ಮತ್ತು ಅಪೂರ್ವ ಕಾರ‍್ಯಕ್ರಮವನ್ನು ನಿರೂಪಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!