ಬಿಗ್ ನ್ಯೂಸ್
Bangalore-ಬೆಂಗಳೂರು: ವದಂತಿಗಳಿಗೆ ಬ್ರೇಕ್: ನೀಟ್ ವಿದ್ಯಾರ್ಥಿನಿ ಪರೀಕ್ಷೆಗೆ ಲೇಟ್ ಆಗಿದ್ದಕ್ಕೆ ಅಸಲಿ ಕಾರಣ ಬಿಚ್ಚಿಟ್ಟ ಪೊಲೀಸರು
ಬೆಂಗಳೂರು ನಗರದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದ ಟ್ರಾಫಿಕ್‌ನಿಂದಾಗಿ ನೀಟ್ (NEET) ಅಭ್ಯರ್ಥಿಯೊಬ್ಬರು ಪರೀಕ್ಷಾ ಕೇಂದ್ರಕ್ಕೆ ತಡವಾಗಿ ತಲುಪಿದ್ದಾರೆ ಎಂಬ ವದಂತಿಗಳಿಗೆ ಬೆಂಗಳೂರು ನಗರ ಪೊಲೀಸ್ (BCP) ಹಾಗೂ ಸಂಚಾರ ಪೊಲೀಸ್ (BTP) ಜಂಟಿಯಾಗಿ ತೆರೆ ಎಳೆದಿವೆ. ಸಿಸಿಟಿವಿ ದೃಶ್ಯಾವಳಿ ಹಾಗೂ ತಾಂತ್ರಿಕ ವಿಶ್ಲೇಷಣೆಯೊಂದಿಗೆ ಪೊಲೀಸರು ಅಧಿಕೃತ ‘ಫ್ಯಾಕ್ಟ್ ಚೆಕ್’ ವರದಿಯನ್ನು ಬಿಡುಗಡೆ ಮಾಡಿದ್ದಾರೆ.
ಬೆಂಗಳೂರು: ನಗರದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದ ಟ್ರಾಫಿಕ್‌ನಿಂದಾಗಿ ನೀಟ್ (NEET) ಅಭ್ಯರ್ಥಿಯೊಬ್ಬರು ಪರೀಕ್ಷಾ ಕೇಂದ್ರಕ್ಕೆ ತಡವಾಗಿ ತಲುಪಿದ್ದಾರೆ ಎಂಬ ವದಂತಿಗಳಿಗೆ ಬೆಂಗಳೂರು ನಗರ ಪೊಲೀಸ್ (BCP) ಹಾಗೂ ಸಂಚಾರ ಪೊಲೀಸ್ (BTP) ಜಂಟಿಯಾಗಿ ತೆರೆ ಎಳೆದಿವೆ. ಸಿಸಿಟಿವಿ ದೃಶ್ಯಾವಳಿ ಹಾಗೂ ತಾಂತ್ರಿಕ ವಿಶ್ಲೇಷಣೆಯೊಂದಿಗೆ ಪೊಲೀಸರು ಅಧಿಕೃತ ‘ಫ್ಯಾಕ್ಟ್ ಚೆಕ್’ ವರದಿಯನ್ನು ಬಿಡುಗಡೆ ಮಾಡಿದ್ದಾರೆ.
ಪೊಲೀಸ್ ತನಿಖೆಯಲ್ಲಿ ಬಹಿರಂಗವಾದ ಸತ್ಯಾಂಶಗಳು:
ತಡವಾಗಿ ಹೊರಟ ಅಭ್ಯರ್ಥಿ: ಅಭ್ಯರ್ಥಿಯು ಆರ್.ಟಿ. ನಗರದಲ್ಲಿರುವ ತಮ್ಮ ನಿವಾಸದಿಂದ ಮಧ್ಯಾಹ್ನ 12:57ಕ್ಕೆ ಹೊರಟಿದ್ದಾರೆ. ಪರೀಕ್ಷಾ ಕೇಂದ್ರ ಪ್ರವೇಶಿಸಲು ಮಧ್ಯಾಹ್ನ 1:30 ಕೊನೆಯ ಸಮಯವಾಗಿತ್ತು. ಅಂದರೆ ಕೈಯಲ್ಲಿ ಕೇವಲ 33 ನಿಮಿಷಗಳಿರುವಾಗ ಅಭ್ಯರ್ಥಿ ಮನೆಯಿಂದ ಹೊರಟಿದ್ದರು.
ತಲುಪಿದ ಸಮಯ: ನಿಗದಿತ ಸಮಯಕ್ಕಿಂತ 3 ನಿಮಿಷ ತಡವಾಗಿ, ಅಂದರೆ ಮಧ್ಯಾಹ್ನ 1:33ಕ್ಕೆ ಅಭ್ಯರ್ಥಿ ಕೇಂದ್ರಕ್ಕೆ ತಲುಪಿದ್ದಾರೆ.
ದೀರ್ಘ ಮಾರ್ಗದ ಆಯ್ಕೆ: ಕೇಂದ್ರವನ್ನು ತಲುಪಲು ಸುಲಭ ಹಾಗೂ ಹತ್ತಿರದ ರಸ್ತೆಗಳು ಲಭ್ಯವಿದ್ದರೂ, ಅಭ್ಯರ್ಥಿಯು ಹೆಚ್ಚು ಸಮಯ ತೆಗೆದುಕೊಳ್ಳುವ ಸುದೀರ್ಘ ಮಾರ್ಗವನ್ನು ಆಯ್ಕೆ ಮಾಡಿಕೊಂಡಿರುವುದು ಸಿಸಿಟಿವಿ ವಿಶ್ಲೇಷಣೆಯಿಂದ ದೃಢಪಟ್ಟಿದೆ.
ಸಾಮಾನ್ಯವಾಗಿದ್ದ ಸಂಚಾರ: ಅಂದು ರಸ್ತೆಗಳಲ್ಲಿ ಯಾವುದೇ ಅಸಹಜ ಸಂಚಾರ ದಟ್ಟಣೆ ಇರಲಿಲ್ಲ. ಪೊಲೀಸರು ಅಭ್ಯರ್ಥಿಯ ವಾಹನ ಸುಲಭವಾಗಿ ಚಲಿಸಲು ನೆರವು ನೀಡಿರುವುದು ಕೂಡ ಸಾಬೀತಾಗಿದೆ.
ರಾಜಕೀಯ ಆರೋಪ ಮತ್ತು ವಾಸ್ತವ:
ಜೂನ್ 21ರಂದು ಅರಮನೆ ಮೈದಾನದಲ್ಲಿ ನಡೆದ ಬಿ.ಕೆ. ಹರಿಪ್ರಸಾದ್ ಅವರ ಪದಗ್ರಹಣ ಕಾರ್ಯಕ್ರಮದಿಂದಾಗಿ ಟ್ರಾಫಿಕ್ ಜಾಮ್ ಉಂಟಾಗಿ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ ಎಂದು ಬಿಜೆಪಿ ಆರೋಪಿಸಿತ್ತು. ಆದರೆ, ಲಭ್ಯವಿರುವ ತಾಂತ್ರಿಕ ಸಾಕ್ಷ್ಯಗಳ ಪ್ರಕಾರ, ಅಭ್ಯರ್ಥಿ ತಡವಾಗಿ ಬರಲು ಸಾರ್ವಜನಿಕ ಕಾರ್ಯಕ್ರಮ ಕಾರಣವಲ್ಲ. ಬದಲಾಗಿ, ಮನೆಯಿಂದ ತಡವಾಗಿ ಹೊರಟಿದ್ದು ಮತ್ತು ತಪ್ಪು ಮಾರ್ಗದ ಆಯ್ಕೆಯೇ ಮುಖ್ಯ ಕಾರಣ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಪೊಲೀಸ್ ಇಲಾಖೆಯ ಈ ವಿವರವಾದ ವರದಿಯು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ತಪ್ಪು ಮಾಹಿತಿಗೆ ಪೂರ್ಣವಿರಾಮ ಹಾಕಿದೆ.
ಮಂಗಳೂರು
MRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.
ಮಂಗಳೂರು : MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.
ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO) ವತಿಯಿಂದ ಕುಟುಂಬಕ್ಕೆ ಪಾವತಿಸಬೇಕಾದ ಉದ್ಯೋಗಿಗಳ ಭವಿಷ್ಯ ನಿಧಿ ಹಾಗೂ ಉದ್ಯೋಗಿಗಳ ಠೇವಣಿ ಆಧಾರಿತ ವಿಮಾ ಸೌಲಭ್ಯಗಳ ಕ್ಷೇಮುಗಳನ್ನು ಇತ್ಯರ್ಥಪಡಿಸಲಾಗಿದೆ.
ಇದರೊಂದಿಗೆ ಉದ್ಯೋಗಿಗಳ ಪಿಂಚಣಿ ಯೋಜನೆ 2026ರ ಅಡಿಯಲ್ಲಿ, ಮಾಸಿಕ ಪಿಂಚಣಿಯನ್ನೂ ಮಂಜೂರು ಮಾಡಿ ಪಾವತಿ ಪ್ರಾರಂಭಿಸಲಾಗಿದೆ. ಈ ಎಲ್ಲಾ ಸೌಲಭ್ಯಗಳನ್ನು 08.10.2026 ರಂದು ಇತ್ಯರ್ಥಪಡಿಸಿ ಜಾರಿಗೊಳಿಸಲಾಗಿದೆ ಹಾಗೂ ಮೊತ್ತವನ್ನು ಪಾವತಿಸಲಾಗಿದೆ.
ದುಃಖತಪ್ತ ಕುಟುಂಬಕ್ಕೆ ಸಂತಾಪ ಹಾಗೂ ಸಾಂತ್ವನ ಸಲ್ಲಿಸುವ ಉದ್ದೇಶದಿಂದ, ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರಾದ ಸಂದೀಪ್ ಬಿಸ್ವಾಸ್ ಅವರು, ಸಹಾಯಕ ಭವಿಷ್ಯ ನಿಧಿ ಆಯುಕ್ತರಾದ ಅಂಕಿತ್ ಸಿಂಗ್ ಹಾಗೂ ಪ್ರವರ್ತನಾಧಿಕಾರಿಯಾದ ಶ್ರೀಮತಿ ಅನಿತಾ ಆರ್ ಅವರೊಂದಿಗೆ 09.10.2026 ರಂದು ದಿವಂಗತ ಶ್ರೀ ಮನೀಶ್ ಕರ್ಕಡ ಅವರ ನಿವಾಸಕ್ಕೆ ಭೇಟಿ ನೀಡಿ, ಫಲಾನುಭವಿಗೆ ಪಿಂಚಣಿ ಪಾವತಿ ಆದೇಶವನ್ನು (PPO) ಹಸ್ತಾಂತರಿಸಿದರು. ಈ ಭೇಟಿಯು ಸಂಕಷ್ಟದ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳೊಂದಿಗೆ ನಿಲ್ಲುವ EPFO ಸಂಸ್ಥೆಯ ಮಾನವೀಯ ಕಾಳಜಿ ಮತ್ತು ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.
ಅನಿರೀಕ್ಷಿತ ದುರಂತಗಳ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳಿಗೆ ಸಲ್ಲಬೇಕಾದ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸುವುದು EPFO ಸಂಸ್ಥೆಯ ಬದ್ಧತೆಯಾಗಿದೆ ಎಂಬುದನ್ನು ಈ ತ್ವರಿತ ಇತ್ಯರ್ಥವು ಮತ್ತೊಮ್ಮೆ ದೃಢಪಡಿಸಿದೆ.
EPFO ಸಂಸ್ಥೆಯು ಮೃತ ಸದಸ್ಯರ ಕುಟುಂಬಕ್ಕೆ ತನ್ನ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತಿದ್ದು, ಈ ಕಷ್ಟದ ಸಮಯದಲ್ಲಿ ಅಗತ್ಯವಿರುವ ಎಲ್ಲಾ ರೀತಿಯ ನೆರವು ನೀಡಲು ಬದ್ಧವಾಗಿದೆ.
ಮಂಗಳೂರು
Mangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು
ಎರಡು ತಿಂಗಳ ಹಿಂದೆ ಮೃತಪಟ್ಟ ವ್ಯಕ್ತಿಯ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದ್ದು, ಇದೀಗ ಹೂತು ಹಾಕಿದ್ದ ಶವವನ್ನೇ ಹೊರತೆಗೆದು ಪರೀಕ್ಷೆ ನಡೆಸಲು ಪೊಲೀಸರು ಮುಂದಾಗಿದ್ದಾರೆ ಎಂಬ ಮಾಹಿತಿ ಎಲ್ಲೆಡೆ ಹರಡಿದೆ. ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಮಗಳೇ ತಂದೆಯ ಕೊಲೆಗೆ ಸಂಚು ರೂಪಿಸಿದ್ದಾರೆ ಎಂಬ ಆರೋಪ ಕೇಳಿಬಂದಿರುವ ಈ ಪ್ರಕರಣ ಮಂಗಳೂರಿನಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ಮಂಗಳೂರು, ಅ 9: ಎರಡು ತಿಂಗಳ ಹಿಂದೆ ಮೃತಪಟ್ಟ ವ್ಯಕ್ತಿಯ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದ್ದು, ಇದೀಗ ಹೂತು ಹಾಕಿದ್ದ ಶವವನ್ನೇ ಹೊರತೆಗೆದು ಪರೀಕ್ಷೆ ನಡೆಸಲು ಪೊಲೀಸರು ಮುಂದಾಗಿದ್ದಾರೆ ಎಂಬ ಮಾಹಿತಿ ಎಲ್ಲೆಡೆ ಹರಡಿದೆ. ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಮಗಳೇ ತಂದೆಯ ಕೊಲೆಗೆ ಸಂಚು ರೂಪಿಸಿದ್ದಾರೆ ಎಂಬ ಆರೋಪ ಕೇಳಿಬಂದಿರುವ ಈ ಪ್ರಕರಣ ಮಂಗಳೂರಿನಲ್ಲಿ ತೀವ್ರ ಕುತೂಹಲ ಮೂಡಿಸಿದೆ.
ಮಂಗಳೂರಿನ ಕೊಟ್ಟಾರ ಫಸ್ಟ್ ಕ್ರಾಸ್ ನಿವಾಸಿ ಆಲ್ಬರ್ಟ್ ರೇಗೋ (Albert Rego) ಅವರು ಕಳೆದ ಜುಲೈ 19ರಂದು ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದರು. ಅವರ ಸಾವಿನ ಬಳಿಕ ಮರಣೋತ್ತರ ಪರೀಕ್ಷೆ ನಡೆಸದೆ ಅಂತ್ಯಕ್ರಿಯೆ ನೆರವೇರಿಸಲಾಗಿದೆ ಎಂಬ ಆರೋಪ ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಇದೀಗ ಕುಂಟಿಕಾನ ಸಮೀಪದ ದೇರೆಬೈಲ್ ಚರ್ಚ್ ಆವರಣದ ದಫನ ಭೂಮಿಯಲ್ಲಿ ಹೂತು ಹಾಕಿರುವ ಅವರ ಶವವನ್ನು ಹೊರತೆಗೆದು ವಿಧಿವಿಜ್ಞಾನ ಪ್ರಯೋಗಾಲಯದ (ಎಫ್‌ಎಸ್‌ಎಲ್) ತಜ್ಞರ ನೆರವಿನಿಂದ ಪರಿಶೀಲಿಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.
ಸ್ನೇಹಿತನ ದೂರಿನಿಂದ ಬಯಲಿಗೆ ಬಂದ ಅನುಮಾನ
ಆಲ್ಬರ್ಟ್ ರೇಗೋ ಅವರ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿದ ಅವರ ಸ್ನೇಹಿತ ಹೆರಾಲ್ಡ್ ಪಿರೇರಾ ಅವರು ಉರ್ವಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಸಾವಿನ ಬಗ್ಗೆ ಸ್ಥಳೀಯರಿಗೆ ಹಾಗೂ ಕುಟುಂಬದ ಇತರ ಸದಸ್ಯರಿಗೆ ಮಾಹಿತಿ ನೀಡದೆ, ಆಪ್ತರ ಮೂಲಕ ಮಗಳು ಮಾಯಾ ರೇಗೋ ಅಂತ್ಯಕ್ರಿಯೆ ನಡೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮಾಯಾ ರೇಗೋ ಸೇರಿದಂತೆ ಇತರರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.
ಆಸ್ತಿಗಾಗಿ ಕಿರುಕುಳ ನೀಡಿದ್ದ ಆರೋಪ
ಆಲ್ಬರ್ಟ್ ರೇಗೋ ಅವರು ಹಿಂದೆ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ಸಾಕಷ್ಟು ಆಸ್ತಿ ಸಂಪಾದಿಸಿದ್ದರು ಎನ್ನಲಾಗಿದೆ. ಅವರ ಇಬ್ಬರು ಮಕ್ಕಳು ಬೇರೆ ಬೇರೆ ಕಡೆ ನೆಲೆಸಿದ್ದರೆ, ಮಾಯಾ ರೇಗೋ ಮಾತ್ರ ಅವರೊಂದಿಗೆ ವಾಸವಾಗಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಮಗಳು ನಿರಂತರವಾಗಿ ಕಿರುಕುಳ ನೀಡುತ್ತಿದ್ದು, ಬಲವಂತವಾಗಿ ಆಸ್ತಿಯನ್ನು ತನ್ನ ಹೆಸರಿಗೆ ವರ್ಗಾಯಿಸಿಕೊಳ್ಳಲು ಯತ್ನಿಸಿದ್ದಾಳೆ ಎಂಬುದು ದೂರುದಾರರ ಆರೋಪ. ತನಗೆ ಹಲ್ಲೆ ನಡೆಸಿ ಕಿರುಕುಳ ನೀಡುತ್ತಿರುವ ಬಗ್ಗೆ ಆಲ್ಬರ್ಟ್ ಅವರು ಸ್ನೇಹಿತರ ಬಳಿ ಹೇಳಿಕೊಂಡಿದ್ದರು. ತನಗೇನಾದರೂ ಅನಾಹುತ ಸಂಭವಿಸಿದರೆ ಅದಕ್ಕೆ ಮಗಳ ಕಿರುಕುಳವೇ ಕಾರಣವಾಗಬಹುದು ಎಂಬ ಆತಂಕವನ್ನೂ ವ್ಯಕ್ತಪಡಿಸಿದ್ದರು ಎಂದು ಹೆರಾಲ್ಡ್ ಪಿರೇರಾ ದೂರಿನಲ್ಲಿ ತಿಳಿಸಿದ್ದಾರೆ.
ಮಾದಕ ವ್ಯಸನದ ಆರೋಪವನ್ನೂ ಮಾಯಾ ರೇಗೋ ವಿರುದ್ಧ ಮಾಡಲಾಗಿದ್ದು, ಹಣ ಮತ್ತು ಆಸ್ತಿಯ ವಿಚಾರವಾಗಿ ಇತರರ ನೆರವಿನಿಂದ ತಂದೆಯನ್ನು ಕೊಲೆ ಮಾಡಲಾಗಿದೆ ಎಂಬ ಗಂಭೀರ ಆರೋಪವನ್ನು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಕೃತ್ಯಕ್ಕೆ ಬೋಂದೆಲ್‌ನ ವೈದ್ಯರೊಬ್ಬರು ಹಾಗೂ ಪೊಲೀಸ್ ಪೇದೆಯೊಬ್ಬರು ಸಹಕರಿಸಿದ್ದಾರೆ ಎಂದೂ ಆರೋಪಿಸಲಾಗಿದೆ. ಆದರೆ, ಈ ಆರೋಪಗಳು ತನಿಖೆಯಿಂದ ದೃಢಪಡಬೇಕಿದೆ.

ಅಸ್ಥಿಪಂಜರದ ಪರೀಕ್ಷೆಯಿಂದ ಸಿಗಲಿದೆಯೇ ಸುಳಿವು?
ಪ್ರಕರಣದ ತನಿಖೆಯಲ್ಲಿ ವಿವಿಧ ಸಾಕ್ಷ್ಯಗಳನ್ನು ಸಂಗ್ರಹಿಸಿರುವ ಪೊಲೀಸರು, ಇದೀಗ ಸಾವಿನ ನೈಜ ಕಾರಣ ಪತ್ತೆಹಚ್ಚಲು ಹೂತು ಹಾಕಿರುವ ಶವವನ್ನು ಹೊರತೆಗೆಯುವ ನಿರ್ಧಾರ ಕೈಗೊಂಡಿದ್ದಾರೆ. ದೇರೆಬೈಲ್ ಚರ್ಚ್ ಆವರಣದ ದಫನ ಭೂಮಿಯಲ್ಲಿ ಪೊಲೀಸರು ಹಾಗೂ ಎಫ್‌ಎಸ್‌ಎಲ್ ತಜ್ಞರು ಸ್ಥಳಕ್ಕೆ ಆಗಮಿಸಿ ಪ್ರಕ್ರಿಯೆಗೆ ಮುಂದಾಗಿದ್ದಾರೆ.
ಮಾಯಾ ರೇಗೋ ಹಾಗೂ ದೂರುದಾರರ ಸಮ್ಮುಖದಲ್ಲಿ ಅಸ್ಥಿಪಂಜರವನ್ನು ಹೊರತೆಗೆದು ವಿಧಿವಿಜ್ಞಾನ ಪರೀಕ್ಷೆಗೆ ಒಳಪಡಿಸುವ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ.
ಎರಡು ತಿಂಗಳ ಹಿಂದೆ ನಡೆದ ಸಾವು ಕೊಲೆ ಕೃತ್ಯವೇ? ಸಾವಿನ ಹಿಂದಿದೆಯಾ ಆಸ್ತಿ ವಿವಾದ ? ಎಂಬ ಪ್ರಶ್ನೆಗಳಿಗೆ ವಿಧಿವಿಜ್ಞಾನ ಪರೀಕ್ಷೆ ಮತ್ತು ಪೊಲೀಸ್ ತನಿಖೆಯಿಂದ ಉತ್ತರ ಸಿಗಬೇಕಿದೆ. ಸದ್ಯ ಪ್ರಕರಣದ ಆರೋಪಗಳು ತನಿಖಾ ಹಂತದಲ್ಲಿದ್ದು, ಪರೀಕ್ಷೆಯ ವರದಿ ಹಾಗೂ ಮುಂದಿನ ತನಿಖೆ ನಿರ್ಣಾಯಕವಾಗಲಿವೆ.
ಬಿಗ್ ನ್ಯೂಸ್
Green card-ಇನ್ಫೋಸಿಸ್, ಟಿಸಿಎಸ್ ಸೇರಿ 8 ಐಟಿ ಕಂಪನಿಗಳಿಗೆ ಅಮೆರಿಕದ ಗ್ರೀನ್ ಕಾರ್ಡ್ ಪ್ರಕ್ರಿಯೆ ಸ್ಥಗಿತ
ಭಾರತದ ಪ್ರಮುಖ ಐಟಿ ಕಂಪನಿಗಳಾದ ಇನ್ಫೋಸಿಸ್, ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್), ವಿಪ್ರೋ ಮತ್ತು ಎಚ್‌ಸಿಎಲ್ ಸೇರಿದಂತೆ ಎಂಟು ಕಂಪನಿಗಳಿಗೆ ಸಂಬಂಧಿಸಿದ ಶಾಶ್ವತ ಕಾರ್ಮಿಕ ಪ್ರಮಾಣಪತ್ರಗಳ ಪ್ರಕ್ರಿಯೆಯನ್ನು ಅಮೆರಿಕ ಅಮಾನತುಗೊಳಿಸಿದೆ ಎಂಬ ವರದಿ ಹೊರಬಿದ್ದಿದೆ.
ವಾಷಿಂಗ್ಟನ್: ಭಾರತದ ಪ್ರಮುಖ ಐಟಿ ಕಂಪನಿಗಳಾದ ಇನ್ಫೋಸಿಸ್, ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್), ವಿಪ್ರೋ ಮತ್ತು ಎಚ್‌ಸಿಎಲ್ ಸೇರಿದಂತೆ ಎಂಟು ಕಂಪನಿಗಳಿಗೆ ಸಂಬಂಧಿಸಿದ ಶಾಶ್ವತ ಕಾರ್ಮಿಕ ಪ್ರಮಾಣಪತ್ರಗಳ ಪ್ರಕ್ರಿಯೆಯನ್ನು ಅಮೆರಿಕ ಅಮಾನತುಗೊಳಿಸಿದೆ ಎಂಬ ವರದಿ ಹೊರಬಿದ್ದಿದೆ. ಈ ಕ್ರಮವು ಸಂಬಂಧಿತ ಕಂಪನಿಗಳ ಮೂಲಕ ಉದ್ಯೋಗ ಆಧಾರಿತ ಗ್ರೀನ್ ಕಾರ್ಡ್ ಪಡೆಯಲು ಕಾಯುತ್ತಿರುವ ವಿದೇಶಿ ಉದ್ಯೋಗಿಗಳ ಮೇಲೆ ಪರಿಣಾಮ ಬೀರಬಹುದಾಗಿದೆ.
ಅಮೆರಿಕದ ಕಾರ್ಮಿಕ ಸಚಿವ ಕೀತ್ ಸೋಂಡರ್ಲಿಂಗ್ ಹಾಗೂ ಉಪಾಧ್ಯಕ್ಷ ಜೆ.ಡಿ. ವಾನ್ಸ್ ಈ ಕುರಿತು ಘೋಷಣೆ ಮಾಡಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಕಾಗ್ನಿಜೆಂಟ್, ಇನ್ಫೋಸಿಸ್, ಟಾಟಾ, ವಿಪ್ರೋ, ಎಚ್‌ಸಿಎಲ್, ಕ್ಯಾಪ್‌ಜೆಮಿನಿ, ಮೈಕ್ರೋಸಾಫ್ಟ್ ಮತ್ತು ಅಡೋಬ್ ಕಂಪನಿಗಳಿಗೆ ಸಂಬಂಧಿಸಿದ ಶಾಶ್ವತ ಕಾರ್ಮಿಕ ಪ್ರಮಾಣಪತ್ರಗಳ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಹೇಳಲಾಗಿದೆ.
ಈ ಕಂಪನಿಗಳಿಗೆ ಸಂಬಂಧಿಸಿದ ಹೊಸ ಅರ್ಜಿಗಳು ಹಾಗೂ ಬಾಕಿ ಉಳಿದಿರುವ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ ಅಥವಾ ಪ್ರಕ್ರಿಯೆಗೊಳಿಸುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎನ್ನಲಾಗಿದೆ.
ಸೋಂಡರ್ಲಿಂಗ್ ಅವರ ಹೇಳಿಕೆಯ ಪ್ರಕಾರ, 2009ರಿಂದ ಈ ಕಂಪನಿಗಳು ಸುಮಾರು 30 ಲಕ್ಷ ವಿದೇಶಿ ಉದ್ಯೋಗಿಗಳಿಗಾಗಿ ಮನವಿ ಸಲ್ಲಿಸಿವೆ. ಈ ಪೈಕಿ 2.3 ಲಕ್ಷಕ್ಕೂ ಹೆಚ್ಚು ಎಚ್-1ಬಿ ವೀಸಾ ಅನುಮೋದನೆಗಳು ಹಾಗೂ ಒಂದು ಲಕ್ಷಕ್ಕೂ ಹೆಚ್ಚು ಶಾಶ್ವತ ಕಾರ್ಮಿಕ ಪ್ರಮಾಣಪತ್ರಗಳನ್ನು ಪಡೆದಿವೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
-
ಅಂತರ ರಾಜ್ಯ24 hours agoNana Patekar-ಕಾರ್ಗಿಲ್ ಯುದ್ಧದ ವೇಳೆ ಸೈನಿಕನಾಗಿಯೂ ದೇಶ ಸೇವೆ ಮಾಡಿದ್ದ ನಾನಾ ಪಾಟೇಕರ್
-
ಸ್ಥಳೀಯ6 hours agoGanja-ಸಾಗರದ ಲಾಡ್ಜ್ನಲ್ಲಿ ಗಾಂಜಾ ಸೇವನೆ: ಯುವತಿ ಸೇರಿ ನಾಲ್ವರು ವಶಕ್ಕೆ – ಗಾಂಜಾ ಸಾಗಾಟಗಾರನ ಮಾಹಿತಿ ಬಿಚ್ಚಿಟ್ಟ ಯುವತಿ..!
-
ಅಂತರ ರಾಜ್ಯ24 hours agoDK Shivakumar-‘ಸ್ಟಿಂಗ್ ಆಪರೇಷನ್’ ಬಗ್ಗೆ ಎಲ್ಲಾ ಮಾಹಿತಿ ಇದೆ..! ಚರ್ಚೆಗೆಂದು ಬಂದು ಏನೇನು ಮಾಡಿದ್ದಾರೆ ಎಂದು ಗೊತ್ತಿದೆ : ಇದರ ಪಿತಾಮಹ ಯಾರೆಂದೂ ತಿಳಿದಿದೆ : ಡಿಕೆಶಿ ಸ್ಫೋಟಕ ಹೇಳಿಕೆ
-
ಬಿಗ್ ನ್ಯೂಸ್6 hours agoAYUSH Federation-ಡಾ. ಪ್ರದೀಪ್ ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಬೆಂಕಿ : ಆಯುಷ್ ಫೆಡರೇಶನ್ ತೀವ್ರ ಖಂಡನೆ
-
ಅಪರಾಧ6 hours agoUdupi-ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಬೆದರಿಕೆ ಕರೆ : ಉಡುಪಿ, ಮೂಲ್ಕಿಯಲ್ಲಿ 4 ಪ್ರಕರಣ ದಾಖಲು
-
ಸಿನೆಮಾ5 hours agoNana Patekar-ನಾನಾ ಪಾಟೇಕರ್ ಸಾವಿಗೆ ನಿಖರ ಕಾರಣವೇನು? ಗೋವಾ ಪೊಲೀಸರಿಂದ ಅಸಹಜ ಸಾವು ಪ್ರಕರಣ ದಾಖಲು
-
ಅಪರಾಧ5 hours agoRaid-ರಾಜ್ಯದ 45 ಐಸ್ಕ್ರೀಂ ಘಟಕಗಳ ಮೇಲೆ ದಾಳಿ: 4 ಕಡೆ ನಿಯಮ ಉಲ್ಲಂಘನೆ, ಅವಧಿ ಮೀರಿದ ಪದಾರ್ಥ ಪತ್ತೆ..!
-
ಮಂಗಳೂರು23 hours agoMangaluru-ಬೆಳೆ ವಿಮೆ ಅನ್ಯಾಯ ಆರೋಪ: ಅ.9ರಂದು ಮಂಗಳೂರಿನಲ್ಲಿ ರೈತರ ಬೃಹತ್ ಹಕ್ಕೊತ್ತಾಯ | ಸಹಕಾರ ಭಾರತಿ – ಬಿಜೆಪಿ ಬೆಂಬಲ


















